Gentileza
A gentileza é fruto do Espírito e marca do cristão maduro. Palavras suaves, gestos de bondade e amor ao próximo — a Bíblia nos chama a tratar todos com graça e compaixão.
Seja gentil
A vossa gentileza seja conhecida de todos. A palavra branda desvia a ira, e a boa conduta atrai os que estão distantes.
ನಿಮ್ಮ ಸೈರಣೆಯು ಎಲ್ಲಾ ಮನುಷ್ಯರಿಗೆ ಗೊತ್ತಾಗಲಿ, ಕರ್ತನು ಹತ್ತಿರವಾಗಿದ್ದಾನೆ.
ಮೃದುವಾದ ಪ್ರತ್ಯುತ್ತರವು ಸಿಟ್ಟನ್ನಾರಿಸುವುದು,
ಬಿರುನುಡಿಯು ಸಿಟ್ಟನ್ನೇರಿಸುವುದು.
ಸವಿನುಡಿಯು ಜೇನುಕೊಡ,
ಅದು ಆತ್ಮಕ್ಕೆ ಸಿಹಿ, ಎಲುಬಿಗೆ ಕ್ಷೇಮ.
ಸಮಯವನ್ನು ಸದುಪಯೋಗಿಸಿಕೊಂಡು ಹೊರಗಿನವರೊಂದಿಗೆ ಜ್ಞಾನವುಳ್ಳವರಾಗಿ ನಡೆದುಕೊಳ್ಳಿರಿ. ನಿಮ್ಮ ಸಂಭಾಷಣೆಯು ಯಾವಾಗಲೂ ಕೃಪೆಯುಳ್ಳದ್ದಾಗಿಯೂ, ಉಪ್ಪಿನಂತೆ ರುಚಿಕರವಾಗಿಯೂ ಇರಲಿ. ಹೀಗೆ ನೀವು ಪ್ರತಿಯೊಬ್ಬರಿಗೂ ಯಾವಾವ ರೀತಿಯಲ್ಲಿ ಉತ್ತರಹೇಳಬೇಕು ಎಂಬುದನ್ನು ತಿಳಿದುಕೊಳ್ಳುವಿರಿ.
ಹೀಗಿರಲಾಗಿ ದೇವರಿಂದ ಆರಿಸಿಕೊಂಡವರಾಗಿ, ಪರಿಶುದ್ಧರೂ ಹಾಗೂ ಪ್ರಿಯರೂ ಆಗಿರುವುದರಿಂದ ಕನಿಕರ, ದಯೆ, ದೀನತೆ, ಸಾತ್ವಿಕತ್ವ ಮತ್ತು ಸಹನೆ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.
Gentileza como fruto
O fruto do Espírito inclui bondade e amabilidade. Amem uns aos outros com afeição fraternal e tratem bem a todos.
ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ, ಸಾಧುತ್ವ, ಶಮೆದಮೆ ಇಂಥವುಗಳೇ. ಇವುಗಳಿಗೆ ವಿರುದ್ಧವಾಗಿ ಯಾವ ಧರ್ಮಶಾಸ್ತ್ರವೂ ಇಲ್ಲ.
ಆದ್ದರಿಂದ ಅವಕಾಶ ಸಿಕ್ಕಿದಾಗಲೆಲ್ಲಾ ಎಲ್ಲರಿಗೂ ಒಳ್ಳೆಯದನ್ನು ಮಾಡೋಣ, ವಿಶೇಷವಾಗಿ ಒಂದೇ ಮನೆಯವರಂತಿರುವ ಕ್ರೈಸ್ತ ವಿಶ್ವಾಸಿಗಳಿಗೆ ಮಾಡೋಣ.
ದೇವರನ್ನು ಮೆಚ್ಚಿಸುವುದು ಹೇಗೆ
ಸಹೋದರ ಪ್ರೀತಿಯನ್ನು ಸತತವಾಗಿ ತೋರಿಸಿರಿ. ಅತಿಥಿ ಸತ್ಕಾರಮಾಡುವುದನ್ನು ಅಲಕ್ಷ್ಯಮಾಡಬೇಡಿರಿ. ಏಕೆಂದರೆ ಅದನ್ನು ಮಾಡುವುದರಲ್ಲಿ ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ.
ಆದಕಾರಣ, ಇನ್ನು ಮೇಲೆ ಒಬ್ಬರ ವಿಷಯದಲ್ಲೊಬ್ಬರು ತೀರ್ಪುಮಾಡದೆ ಇರೋಣ. ಅದಕ್ಕೆ ಬದಲಾಗಿ ಸಹೋದರನ ಎದುರಿಗೆ ಅಡ್ಡಿಯನ್ನಾಗಲಿ, ಅಡೆತಡೆಯನ್ನಾಗಲಿ ಹಾಕಬಾರದೆಂದು ತೀರ್ಮಾನಿಸಿಕೊಳ್ಳಿರಿ.
"‘ಸಹೋದರನ ವಿಷಯವಾಗಿ ಮನಸ್ಸಿನಲ್ಲಿ ದ್ವೇಷವನ್ನು ಇಟ್ಟುಕೊಳ್ಳಬಾರದು. ನೆರೆಯವನ ದೋಷಕ್ಕೆ ನೀವು ಒಳಗಾಗದಂತೆ ಅವನ ತಪ್ಪನ್ನು ಅವನಿಗೆ ತಿಳಿಸಲೇಬೇಕು.
"‘ನಿಮ್ಮ ಸ್ವಜನರಲ್ಲಿ ಯಾರಿಗೂ ಕೇಡಿಗೆ ಕೇಡನ್ನು ಮಾಡದೆ, ಮನಸ್ಸಿನಲ್ಲಿ ಮತ್ಸರವನ್ನು ಇಟ್ಟುಕೊಳ್ಳದೆ, ನಿಮ್ಮ ನೆರೆಯವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ನಾನು ಯೆಹೋವನು.
"ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನಿಷ್ಠೆಯಿಂದ ನ್ಯಾಯತೀರಿಸಿರಿ,
ಒಬ್ಬರಿಗೊಬ್ಬರು ಪ್ರೀತಿ, ಕರುಣೆಗಳನ್ನು ತೋರಿಸಿರಿ; ವಿಧವೆ, ಅನಾಥ, ವಿದೇಶಿ, ದರಿದ್ರರಿಗೂ ಅನ್ಯಾಯಮಾಡಬೇಡಿರಿ;
ನಿಮ್ಮಲ್ಲಿ ಯಾವನೂ ತನ್ನ ಸಹೋದರನಿಗೆ ಕೇಡನ್ನು ಬಗೆಯದಿರಲಿ.’
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ; ನಾನು ಕಳುಹಿಸಿದಾತನನ್ನು ಸ್ವೀಕರಿಸುವವನು ನನ್ನನ್ನು ಸ್ವೀಕರಿಸುತ್ತಾನೆ; ನನ್ನನ್ನು ಸ್ವೀಕರಿಸುವವನು ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸುತ್ತಾನೆ."