Gentileza
A gentileza é fruto do Espírito e marca do cristão maduro. Palavras suaves, gestos de bondade e amor ao próximo — a Bíblia nos chama a tratar todos com graça e compaixão.
Seja gentil
A vossa gentileza seja conhecida de todos. A palavra branda desvia a ira, e a boa conduta atrai os que estão distantes.
ನಿಮ್ಮ ಸಹನೆಯು ಎಲ್ಲರಿಗೂ ತಿಳಿದಿರಲಿ. ಕರ್ತದೇವರ ಬರುವಿಕೆಯು ಹತ್ತಿರವಾಗಿದೆ.
ಮೃದುವಾದ ಉತ್ತರವು ಕೋಪವನ್ನು ತಿರುಗಿಸಿಬಿಡುತ್ತದೆ.
ಆದರೆ ಬಿರುಸಾದ ಮಾತುಗಳು ಕೋಪವನ್ನು ಎಬ್ಬಿಸುತ್ತದೆ.
ವಿನಯದ ಮಾತುಗಳು ಜೇನುಗೂಡು ಪ್ರಾಣಕ್ಕೆ ಮಧುರವೂ,
ಎಲುಬುಗಳಿಗೆ ಕ್ಷೇಮವೂ ಆಗಿವೆ.
ಪ್ರತಿಯೊಂದು ಅವಕಾಶವನ್ನೂ ಸದುಪಯೋಗ ಮಾಡಿಕೊಂಡು ಹೊರಗಿನವರೊಂದಿಗೆ ಜಾಣತನದಿಂದ ನಡೆದುಕೊಳ್ಳಿರಿ. ನಿಮ್ಮ ಸಂಭಾಷಣೆ ಯಾವಾಗಲೂ ಪೂರ್ಣ ಕೃಪೆಯುಳ್ಳದ್ದೂ, ಉಪ್ಪಿನಿಂದ ಹದವುಳ್ಳದ್ದೂ ಆಗಿರಲಿ. ಹೀಗೆ ನೀವು ಪ್ರತಿಯೊಬ್ಬರಿಗೂ ಹೇಗೆ ಉತ್ತರಕೊಡಬೇಕು ಎಂಬುದನ್ನು ತಿಳಿದುಕೊಳ್ಳುವಿರಿ.
ಆದಕಾರಣ ದೇವರಿಂದ ಆಯ್ಕೆಯಾದವರೂ ಪರಿಶುದ್ಧರೂ ಪ್ರಿಯರೂ ಆಗಿರುವ ನೀವು ಕನಿಕರ, ದಯೆ, ದೀನತ್ವ, ಸಾತ್ವಿಕತ್ವ, ದೀರ್ಘಶಾಂತಿ ಇವುಗಳನ್ನು ಧರಿಸಿಕೊಳ್ಳಿರಿ.
Gentileza como fruto
O fruto do Espírito inclui bondade e amabilidade. Amem uns aos outros com afeição fraternal e tratem bem a todos.
ಪವಿತ್ರಾತ್ಮರ ಫಲವೇನೆಂದರೆ: ಪ್ರೀತಿ, ಆನಂದ, ಸಮಾಧಾನ, ಸಹನೆ, ದಯೆ, ಸದ್ಗುಣ, ನಂಬಿಗಸ್ತಿಕೆ, ಸಾತ್ವಿಕತೆ, ಸಂಯಮ ಇಂಥವುಗಳೇ. ಇವುಗಳಿಗೆ ವಿರೋಧವಾಗಿ ಯಾವ ನಿಯಮವೂ ಇಲ್ಲ.
ಆದ್ದರಿಂದ ನಮಗೆ ಸಮಯವಿರಲಾಗಿ ಎಲ್ಲರಿಗೂ ಒಳ್ಳೆಯದನ್ನು ಮಾಡೋಣ. ಮುಖ್ಯವಾಗಿ ವಿಶ್ವಾಸಿಗಳ ಕುಟುಂಬದವರಿಗೆ ಮಾಡೋಣ.
ಪ್ರಿಯರೇ, ಒಬ್ಬರಿಗೊಬ್ಬರು ಪ್ರೀತಿಯಲ್ಲಿ ಮುಂದುವರೆಯಿರಿ. ಪರಕೀಯರಿಗೆ ಸತ್ಕಾರ ಮಾಡುವುದನ್ನು ಅಲಕ್ಷ್ಯ ಮಾಡಬೇಡಿರಿ. ಏಕೆಂದರೆ ಅದನ್ನು ಮಾಡುವುದರ ಮೂಲಕ, ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ.
ಆದ್ದರಿಂದ ನಾವು ಒಬ್ಬರ ಮೇಲೊಬ್ಬರು ತೀರ್ಪುಮಾಡದಿರೋಣ. ಇದಲ್ಲದೆ ಸಹೋದರರಿಗೆ ಅಡೆತಡೆಯನ್ನಾಗಲಿ, ಅಡ್ಡಿಯನ್ನಾಗಲಿ, ಹಾಕದಿರೋಣ.
" ‘ನಿನ್ನ ಹೃದಯದಲ್ಲಿ ನಿನ್ನ ಸಹೋದರನನ್ನು ದ್ವೇಷಿಸಬೇಡ, ನಿನ್ನ ನೆರೆಯವನ ಪಾಪವು ನಿನ್ನ ಮೇಲೆ ಬಾರದಂತೆ ಅವನನ್ನು ತಪ್ಪದೆ ಗದರಿಸು.
" ‘ನಿನ್ನ ಜನರ ಮಕ್ಕಳ ಮೇಲೆ ಮುಯ್ಯಿಗೆ ಮುಯ್ಯಿ ತೀರಿಸದವನಾಗಿಯೂ, ಸೇಡು ತೀರಿಸದೆಯೂ ಇರು. ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು. ನಾನೇ ಯೆಹೋವ ದೇವರು.
"ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ನಿಜವಾದ ನ್ಯಾಯವನ್ನು ತೀರಿಸಿರಿ; ಒಬ್ಬರಿಗೊಬ್ಬರು ಪ್ರೀತಿಯನ್ನೂ, ಕನಿಕರವನ್ನೂ ತೋರಿಸಿರಿ; ವಿಧವೆಗೂ, ದಿಕ್ಕಿಲ್ಲದವನಿಗೂ, ಅನ್ಯನಿಗೂ, ಬಡವನಿಗೂ ಹಿಂಸಾಚಾರ ಮಾಡಬೇಡಿರಿ; ಯಾರೂ ತನ್ನ ಹೃದಯದಲ್ಲಿ ತನ್ನ ಸಹೋದರನ ಮೇಲೆ ಕೆಟ್ಟದ್ದನ್ನು ಕಲ್ಪಿಸದೆ ಇರಲಿ,’ " ಎಂಬುದು.
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನನ್ನು ಕಳುಹಿಸಿದ ತಂದೆಯನ್ನು ಸ್ವೀಕರಿಸುವವನು ನನ್ನನ್ನು ಸ್ವೀಕರಿಸುತ್ತಾನೆ; ನನ್ನನ್ನು ಸ್ವೀಕರಿಸುವವನು ನನ್ನನ್ನು ಕಳುಹಿಸಿದ ತಂದೆಯನ್ನೇ ಸ್ವೀಕರಿಸುತ್ತಾನೆ."