Graça
A graça de Deus é favor imerecido. Pela graça somos salvos, pela graça vivemos, pela graça somos sustentados. É o dom mais precioso de Deus — dado a quem não merece.
Salvos pela graça
Pela graça sois salvos, mediante a fé, e isto não vem de vós — é dom de Deus. Não por obras, para que ninguém se glorie.
ನಂಬಿಕೆಯ ಮೂಲಕ ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಈ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ. ಈ ರಕ್ಷಣೆಯೂ ಪುಣ್ಯಕ್ರಿಯೆಗಳಿಂದ ಉಂಟಾದದ್ದಲ್ಲ, ಆದ್ದರಿಂದ ಹೊಗಳಿಕೊಳ್ಳುವುದಕ್ಕೆ ಯಾರಿಗೂ ಆಸ್ಪದವಿಲ್ಲ.
ಆದರೆ ಕರುಣಾನಿಧಿಯಾಗಿರುವ ದೇವರು ನಮ್ಮನ್ನು ಪ್ರೀತಿಸಿದ ಮಹಾ ಪ್ರೀತಿಯ ನಿಮಿತ್ತ, ಅಪರಾಧಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ.
ಎಲ್ಲರೂ ಪಾಪ ಮಾಡಿ ದೇವರ ಮಹಿಮೆಯನ್ನು ಹೊಂದದೇ ಹೋಗಿದ್ದಾರೆ. ಅವರು ನೀತಿವಂತರೆಂದು ನಿರ್ಣಯ ಹೊಂದುವುದು ದೇವರ ಉಚಿತಾರ್ಥವಾದ ಕೃಪೆಯಿಂದಲೇ ಅದು ಕ್ರಿಸ್ತ ಯೇಸುವಿನಿಂದಾದ ಪಾಪ ವಿಮೋಚನೆಯ ಮೂಲಕವಾಗಿ ಆಗುವುದು.
ಆದರೆ ಆ ಅಪರಾಧದ ಸಂಗತಿಗೂ ದೇವರ ಕೃಪಾದಾನದ ಸಂಗತಿಗೂ ಬಹಳ ವ್ಯತ್ಯಾಸವುಂಟು. ಹೇಗೆಂದರೆ ಆ ಒಬ್ಬನ ಅಪರಾಧದಿಂದ ಬಹುಮಂದಿ ಸತ್ತರು ಹೀಗಿರಲಾಗಿ ದೇವರ ಕೃಪೆಯು ಯೇಸು ಕ್ರಿಸ್ತನೆಂಬ ಈ ಒಬ್ಬ ಪುರುಷನ ಕೃಪೆಯಿಂದ ಸಿಕ್ಕುವ ವರವೂ ಅನೇಕರಿಗೆ ಹೇರಳವಾಗಿ ಸಿದ್ಧವಾಗಿರುವುದು ನಿಶ್ಚಯವಲ್ಲವೇ.
ಹೀಗೆ ಪಾಪವು ಮರಣವನ್ನುಂಟು ಮಾಡುತ್ತಾ ಅಧಿಕಾರವನ್ನು ನಡಿಸಿದ ಹಾಗೆಯೇ ದೇವರ ಕೃಪೆಯು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನೀತಿಯಿಂದ ನಿತ್ಯಜೀವವನ್ನುಂಟುಮಾಡುತ್ತಾ ಆಳುವಂತಾಯಿತು.
Graça que capacita
A graça me basta, pois o poder se aperfeiçoa na fraqueza. Na graça, não estamos mais sob a lei, mas sob o favor de Deus.
ಯಾಕೆಂದರೆ ಪಾಪವು ನಿಮ್ಮ ಮೇಲೆ ಅಧಿಕಾರ ನಡೆಸದು; ನೀವು ಧರ್ಮಶಾಸ್ತ್ರಕ್ಕೆ ಅಧೀನರಲ್ಲ, ಕೃಪೆಗೆ ಅಧೀನರಾಗಿದ್ದೀರಿ.
ಹಾಗಾದರೇನು? ನಾವು ಧರ್ಮಶಾಸ್ತ್ರಾಧೀನರಲ್ಲ, ಕೃಪೆಗೆ ಅಧೀನರಾಗಿದ್ದೇವೆಂದು ಪಾಪವನ್ನು ಮಾಡಬಹುದೋ? ಎಂದಿಗೂ ಮಾಡಬಾರದು.
ಆತನು ನಮ್ಮಲ್ಲಿರುವ ಸುಕೃತ್ಯಗಳನ್ನು ನೋಡಿದ್ದರಿಂದಲ್ಲ, ತನ್ನ ಸಂಕಲ್ಪವನ್ನು ಅನುಸರಿಸಿ ಕೃಪೆಯಿಂದಲೇ ನಮ್ಮನ್ನು ರಕ್ಷಿಸಿ ಪರಿಶುದ್ಧರಾಗುವುದಕ್ಕೆ ಕರೆದನು. ಆತನು ಅನಾದಿಕಾಲದಲ್ಲಿ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿ,
ಏಕೆಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟುಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು; ಅದು ಭಕ್ತಿಹೀನತೆಯನ್ನೂ, ಲೋಕದ ಆಸೆಗಳನ್ನೂ ತ್ಯಜಿಸಿ ಭಾಗ್ಯಕರವಾದ ನಿರೀಕ್ಷೆಯನ್ನು,
ಪರಿಶುದ್ಧ ಜೀವಿತಕ್ಕೆ ಆಹ್ವಾನ
ಆದ್ದರಿಂದ ನೀವು ನಿಮ್ಮ ಮನಸ್ಸನ್ನು ದೃಢಪಡಿಸಿಕೊಂಡು, ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನಿರೀಕ್ಷೆಯನ್ನು ಸಂಪೂರ್ಣವಾಗಿ ಇಡಿರಿ.
ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯ ಮಹಿಮೆಗೆ ಕರೆದ ಕೃಪಾಪೂರ್ಣನಾದ ದೇವರು ತಾನೇ, ನೀವು ಸ್ವಲ್ಪ ಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯಥಾಸ್ಥಿತಿಗೆ ತಂದು ಸ್ಥಿರಪಡಿಸಿ ಬಲಪಡಿಸುವನು.
A graça de Deus
O Senhor é compassivo e gracioso, tardio em irar-se e grande em amor. Sua graça é nova a cada manhã.
ಯೆಹೋವನು ಕನಿಕರವೂ, ದಯೆಯೂ,
ದೀರ್ಘಶಾಂತಿಯೂ, ಪೂರ್ಣಪ್ರೀತಿಯೂ ಉಳ್ಳವನು.
ನಿಶ್ಚಯವಾಗಿ ನನ್ನ ಜೀವಮಾನದಲ್ಲೆಲ್ಲಾ ಶುಭವೂ ಮತ್ತು ಕೃಪೆಯೂ ನನ್ನನ್ನು ಹಿಂಬಾಲಿಸುವವು.
ನಾನು ಸದಾಕಾಲವೂ ಯೆಹೋವನ ಮಂದಿರದಲ್ಲಿ ವಾಸಿಸುವೆನು.
ನಮ್ಮ ಯೆಹೋವ ದೇವರ ಪ್ರಸನ್ನತೆಯು ನಮ್ಮ ಮೇಲೆ ಇರಲಿ.
ನಾವು ಕೈ ಹಾಕಿದ ಕೆಲಸವನ್ನು ನಮಗೆ ಸಫಲಪಡಿಸು;
ನಾವು ಕೈಹಾಕಿದ ಕೆಲಸವನ್ನು ಸಫಲ ವಾಗುವಂತೆ ಮಾಡು.
ಪಾಪಪರಿಹಾರಕ್ಕಾಗಿ ಪ್ರಾರ್ಥನೆ
ಯೆಹೋವನೇ, ಪಾತಾಳದಲ್ಲಿದ್ದು ನಿನ್ನನ್ನು ಕೂಗಿಕೊಳ್ಳುತ್ತೇನೆ.
ಕರ್ತನೇ, ನನ್ನ ಮೊರೆಯನ್ನು ಕೇಳು;
ನನ್ನ ವಿಜ್ಞಾಪನೆಯ ಶಬ್ದಕ್ಕೆ ಕಿವಿದೆರೆ.
ಯೆಹೋವನು ನಿಮ್ಮನ್ನು ಆಶೀರ್ವದಿಸಿ ಕಾಪಾಡಲಿ; ಯೆಹೋವನು ಪ್ರಸನ್ನಮುಖದಿಂದ ನಿಮ್ಮನ್ನು ನೋಡಿ ನಿಮ್ಮ ಮೇಲೆ ದಯವಿಡಲಿ; ಯೆಹೋವನು ನಿಮ್ಮ ಮೇಲೆ ಕೃಪಾಕಟಾಕ್ಷವಿಟ್ಟು ಶಾಂತಿಯನ್ನು ಅನುಗ್ರಹಿಸಲಿ’ ಎಂಬುದೇ.
ಯೆಹೂದ್ಯರ ಮುಂದಿನ ವಿಧೇಯತೆ ಮತ್ತು ಸುಸ್ಥಿತಿಯೂ
ಹೀಗಿರಲು ಯೆಹೋವನು ನಿಮಗೆ ಕೃಪೆತೋರಿಸಬೇಕೆಂದು ಕಾದಿರುವನು; ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತವಾಗಿ ಕಾಣಿಸಿಕೊಳ್ಳುವನು;
ಯೆಹೋವನು ನ್ಯಾಯಸ್ವರೂಪನಾದ ದೇವರು; ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.
Viver pela graça
A graça de nosso Senhor Jesus Cristo esteja convosco. Perdoando e confessando, experimentamos a graça restauradora.
ಕರ್ತನಾದ ಯೇಸುವಿನ ಕೃಪೆಯು ಎಲ್ಲರೊಂದಿಗೆ ಇರಲಿ. ಆಮೆನ್!
ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗಿರಲಿ. ಆಮೆನ್.
ಆದುದರಿಂದ ನಾವು ತಕ್ಕ ಸಮಯದಲ್ಲಿ ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಆತನ ಕೃಪಾಸನದ ಮುಂದೆ ಬರೋಣ.
ಆದರೆ ಪ್ರಾಣವನ್ನು ಉಳಿಸಿಕೊಳ್ಳುವುದೇ ಶ್ರೇಷ್ಠವೆಂದು ನಾನು ಎಣಿಸುವುದಿಲ್ಲ; ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಸಾಕ್ಷ್ಯಪೂರಕವಾಗಿ ಸಾರುವ ನಿಯೋಗವನ್ನು ಕರ್ತನಾದ ಯೇಸುವಿನಿಂದ ನಾನು ಹೊಂದಿದ್ದೇನೆ ಈ ನಿಯೋಗವನ್ನು ಪೂರ್ಣಗೊಳಿಸುವುದೊಂದೇ ನನ್ನ ಅಪೇಕ್ಷೆಯಾಗಿದೆ.
"ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.
ನೀವು ಜನರ ತಪ್ಪುಗಳನ್ನು ಕ್ಷಮಿಸಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ನಿಮ್ಮ ತಪ್ಪುಗಳನ್ನೂ ಕ್ಷಮಿಸುವನು.
ದೋಷಗಳನ್ನು ಮುಚ್ಚಿಕೊಳ್ಳುವವನಿಗೆ ಶುಭವಾಗದು,
ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರೆಯುವುದು.
ಪಸ್ಕಾಚರಣೆಗೆ ಸಿದ್ಧತೆ
ತರುವಾಯ ಹಿಜ್ಕೀಯನು, ಇಸ್ರಾಯೇಲ್ ದೇವರಾದ ಯೆಹೋವನ ಪಸ್ಕಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿನಲ್ಲಿರುವ ಯೆಹೋವನ ಆಲಯಕ್ಕೆ ಬರಬೇಕೆಂದು, ಎಲ್ಲಾ ಇಸ್ರಾಯೇಲರಿಗೂ, ಯೆಹೂದ್ಯರಿಗೂ, ಎಫ್ರಾಯೀಮ್ಯರಿಗೂ, ಮನಸ್ಸೆಯವರಿಗೂ ದೂತರ ಮುಖಾಂತರವಾಗಿ ಮತ್ತು ಪತ್ರಗಳ ಮೂಲಕವಾಗಿ ತಿಳಿಯಪಡಿಸಿದನು. ಎರಡನೆಯ ತಿಂಗಳಿನಲ್ಲಿ ಪಸ್ಕಹಬ್ಬವನ್ನು ಯೆರೂಸಲೇಮಿನಲ್ಲಿ ಆಚರಿಸಬೇಕೆಂದು ಅರಸನು, ಪದಾಧಿಕಾರಿಗಳು ಅಭಿಪ್ರಾಯಪಟ್ಟರು. ಯಾಕೆಂದರೆ ಯಾಜಕರಲ್ಲಿ ಸಾಕಷ್ಟು ಮಂದಿ ತಮ್ಮನ್ನು ಶುದ್ಧಿಪಡಿಸಿಕೊಂಡಿರಲಿಲ್ಲ. ಜನರು ಯೆರೂಸಲೇಮಿನಲ್ಲಿ ಇನ್ನೂ ಒಟ್ಟಾಗಿ ಸೇರಿ ಬಂದಿರಲಿಲ್ಲವಾದುದರಿಂದ ಕೂಡಲೆ ಪಸ್ಕಹಬ್ಬವನ್ನು ಆಚರಿಸಲು ಸಾಧ್ಯವಾಗುವುದಿಲ್ಲವೆಂದು ಅರಸನಿಗೂ ಅವನ ಸರದಾರರಿಗೂ ಯೆರೂಸಲೇಮಿನ ಸರ್ವಸಂಘದವರಿಗೂ ತಿಳಿದುಕೊಂಡರು. ಈ ಅಭಿಪ್ರಾಯವು ಅರಸನಿಗೂ ಸರ್ವಸಮೂಹಕ್ಕೂ ಸರಿಕಂಡದ್ದರಿಂದ ಅವರು, "ಸರ್ವಜನರು ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಪಸ್ಕಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿಗೆ ಬರಬೇಕು" ಎಂಬುದಾಗಿ ಬೇರ್ಷೆಬದಿಂದ ದಾನ್ ವರೆಗೂ ವಾಸಮಾಡುತ್ತಿದ್ದ ಇಸ್ರಾಯೇಲರೊಳಗೆ ಡಂಗುರ ಹೊಡಿಸಬೇಕೆಂದು ನಿರ್ಣಯಿಸಿದರು. ಜನರಲ್ಲಿ ಹೆಚ್ಚು ಮಂದಿ ಆ ವರೆಗೂ ಧರ್ಮಶಾಸ್ತ್ರವಿಧಿಯ ಪ್ರಕಾರ ಪಸ್ಕಹಬ್ಬವನ್ನು ಆಚರಿಸಿರಲಿಲ್ಲ.
ಅರಸನ ಮತ್ತು ಅವನ ಪದಾಧಿಕಾರಿಗಳಿಂದ ಪತ್ರಗಳನ್ನು ತೆಗೆದುಕೊಂಡು ಹೋದ ದೂತರು ಇಸ್ರಾಯೇಲ್ ಮತ್ತು ಯೆಹೂದ ದೇಶಗಳಲ್ಲೆಲ್ಲಾ ಸಂಚರಿಸಿ ರಾಜಾಜ್ಞೆಯಂತೆ ಹೀಗೆಂದು ಪ್ರಕಟಿಸಿದರು: "ಇಸ್ರಾಯೇಲರೇ, ಅಬ್ರಹಾಮ್, ಇಸಾಕ್ ಮತ್ತು ಇಸ್ರಾಯೇಲರ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಿರಿ. ಆಗ ಆತನು ನಿಮ್ಮಲ್ಲಿ ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿಕೊಂಡು ಉಳಿದಿರುವ ನಿಮ್ಮ ಕಡೆಗೆ ತಿರುಗಿಕೊಳ್ಳುವನು. ನಿಮ್ಮ ಪೂರ್ವಿಕರು ಸಹೋದರರೂ ನಡೆದಂತೆ ನೀವೂ ನಡೆಯಬೇಡಿರಿ. ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ವಿರೋಧವಾಗಿ ದ್ರೋಹಿಗಳಾಗಿದ್ದುದರಿಂದ ಆತನು ಅವರನ್ನು ನಾಶನಕ್ಕೆ ಒಪ್ಪಿಸಿದನು. ಅದಕ್ಕೆ ನೀವೇ ಸಾಕ್ಷಿಗಳು. ಈಗ ನೀವು ನಿಮ್ಮ ಪೂರ್ವಿಕರಂತೆ ರಾಜಾಜ್ಞೆಗೆ ಮಣಿಯದವರಾಗಿರಬೇಡಿರಿ, ಯೆಹೋವನಿಗೆ ಅಧೀನರಾಗಿರಿ. ನಿಮ್ಮ ದೇವರಾದ ಯೆಹೋವನು ಸದಾಕಾಲಕ್ಕೂ ಪ್ರತಿಷ್ಠಿಸಿಕೊಂಡಿರುವ ಪವಿತ್ರಾಲಯಕ್ಕೆ ಬಂದು ಆತನನ್ನು ಆರಾಧಿಸಿರಿ. ಆಗ ನಿಮ್ಮ ಮೇಲಿರುವ ಆತನ ಉಗ್ರಕೋಪವು ತೊಲಗಿಹೋಗುವುದು. ನೀವು ಯೆಹೋವನ ಕಡೆಗೆ ತಿರುಗಿಕೊಳ್ಳವುದಾದರೆ ನಿಮ್ಮ ಸಹೋದರರೂ, ಮಕ್ಕಳೂ ತಮ್ಮನ್ನು ಸೆರೆ ಒಯ್ದವರ ದೃಷ್ಟಿಯಲ್ಲಿ ದಯೆಗೆ ಪಾತ್ರರಾಗಿ, ತಿರುಗಿ ಸ್ವದೇಶಕ್ಕೆ ಬರುವರು. ನಿಮ್ಮ ದೇವರಾದ ಯೆಹೋವನು ದಯೆಯೂ, ಕನಿಕರವೂ ಉಳ್ಳವನಾಗಿದ್ದಾನೆ. ಆತನು ತನ್ನ ಕಡೆಗೆ ತಿರುಗಿಕೊಳ್ಳುವ ನಿಮ್ಮನ್ನು ಕಟಾಕ್ಷಿಸದೆ ಇರುವುದಿಲ್ಲ."
ಪಸ್ಕ ಆಚರಣೆ
ದೂತರು ಎಫ್ರಾಯೀಮ್, ಮನಸ್ಸೆ, ಜೆಬುಲೂನ್ ಪ್ರಾಂತ್ಯಗಳಲ್ಲಿ, ಪಟ್ಟಣದಿಂದ ಪಟ್ಟಣಕ್ಕೆ ಹೋದರು. ಜನರು ಅವರನ್ನು ಕಂಡು ನಕ್ಕು ಗೇಲಿಮಾಡಿದರು. ಕೆಲವು ಮಂದಿ ಆಶೇರ್ಯರೂ, ಮನಸ್ಸೆಯವರೂ, ಜೆಬುಲೂನ್ಯರೂ ಮಾತ್ರ ತಮ್ಮನ್ನು ತಗ್ಗಿಸಿಕೊಂಡು ಯೆರೂಸಲೇಮಿಗೆ ಬಂದರು. ಯೆಹೂದ್ಯರಾದರೋ ದೇವರ ಕೃಪಾಹಸ್ತದಿಂದ ಪ್ರೇರಣೆಹೊಂದಿ ಏಕ ಮನಸ್ಸುಳ್ಳವರಾಗಿ, ಯೆಹೋವನ ವಾಕ್ಯಕ್ಕೆ ಅನುಸಾರವಾಗಿ ಅರಸನಿಂದಲೂ, ಪದಾಧಿಕಾರಿಗಳಿಂದಲೂ ಹೊರಟ ಆಜ್ಞೆಯನ್ನು ಕೈಕೊಂಡರು. ಹೀಗೆ, ಅನೇಕಾನೇಕ ಜನರು ಎರಡನೆಯ ತಿಂಗಳಿನಲ್ಲಿ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿನಲ್ಲಿ ಸೇರಿಬಂದರು; ಆ ಜನಸಮೂಹವು ಮಹಾಸಮೂಹವಾಗಿತ್ತು. ಅವರು ಯೆರೂಸಲೇಮಿನಲ್ಲಿದ್ದ ಯಜ್ಞವೇದಿಗಳನ್ನೂ ಎಲ್ಲಾ ಧೂಪವೇದಿಗಳನ್ನೂ ತೆಗೆದುಕೊಂಡು ಹೋಗಿ ಕಿದ್ರೋನ್ ಹಳ್ಳದಲ್ಲಿ ಬಿಸಾಡಿಬಿಟ್ಟರು. ನಂತರ ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಸ್ಕಹಬ್ಬಕ್ಕಾಗಿ ಕುರಿಮರಿಗಳನ್ನು ಕೊಯ್ದರು.ಆಗ ಯಾಜಕರೂ, ಲೇವಿಯರೂ ನಾಚಿಕೆಪಟ್ಟು, ತಮ್ಮನ್ನು ಶುದ್ಧಿಪಡಿಸಿಕೊಂಡು ಯೆಹೋವನ ಆಲಯದಲ್ಲಿ ಸರ್ವಾಂಗಹೋಮಗಳನ್ನ ಸಮರ್ಪಿಸಿದರು. ಅವರು ತಮ್ಮ ತಮ್ಮ ಸ್ಥಳಗಳಲ್ಲಿ ನಿಂತು, ದೇವರ ಮನುಷ್ಯನಾದ ಮೋಶೆಯ ಧರ್ಮಶಾಸ್ತ್ರದಿಂದ ತಮಗೆ ನೇಮಕವಾದ ಸೇವೆಯನ್ನು ಮಾಡುತ್ತಿದ್ದರು. ಯಾಜಕರೂ ಲೇವಿಯರ ಕೈಯಿಂದ ರಕ್ತವನ್ನು ತೆಗೆದುಕೊಂಡು ಅದನ್ನು ಪ್ರೋಕ್ಷಿಸಿದರು. ಸಮೂಹದಲ್ಲಿ ಅನೇಕರು ತಮ್ಮನ್ನು ಶುದ್ಧಿಪಡಿಸಿಕೊಳ್ಳದೆ ಇದ್ದುದರಿಂದ ಅಶುದ್ಧರಾದವರೆಲ್ಲರ, ಪಸ್ಕಹಬ್ಬದ ಯಜ್ಞಪಶುಗಳು ಯೆಹೋವನಿಗೆ ಮೀಸಲಾಗುವಂತೆ ಅವುಗಳನ್ನು ಲೇವಿಯರೇ ವಧಿಸಿದರು. ಜನರಲ್ಲಿ ಅನೇಕರು ಅಂದರೆ, ಹೆಚ್ಚಾಗಿ ಎಫ್ರಾಯೀಮ್, ಮನಸ್ಸೆ, ಇಸ್ಸಾಕಾರ್, ಹಾಗು ಜೆಬುಲೂನ್ ಪ್ರಾಂತ್ಯಗಳವರು ತಮ್ಮನ್ನು ಶುದ್ಧಿಪಡಿಸಿಕೊಳ್ಳದೆ ಧರ್ಮಶಾಸ್ತ್ರಕ್ಕೆ ವಿರುದ್ಧವಾದ ರೀತಿಯಿಂದ ಪಸ್ಕದ (ಹಬ್ಬ) ಭೋಜನವನ್ನು ಮಾಡಿದರು. ಆದರೆ ಹಿಜ್ಕೀಯನು, "ಯೆಹೋವನೇ, ದಯಾಪರನಾದ ದೇವರೇ, ಅವರೆಲ್ಲರಿಗೆ ಕ್ಷಮೆಯನ್ನು ಅನುಗ್ರಹಿಸು" ಎಂದು ವಿಜ್ಞಾಪನೆ ಮಾಡಿದನು. ದೇವಾಲಯಕ್ಕೆ ಯಾತ್ರಿಕರಾಗಿ ಬಂದಿರುವವರಲ್ಲಿ ಇರಬೇಕಾದ ಪರಿಶುದ್ಧತ್ವವು ಅನೇಕರಲ್ಲಿ ಇಲ್ಲದಿದ್ದರೂ ಪೂರ್ವಿಕರ ದೇವರಾದ ಯೆಹೋವನನ್ನು ಹುಡುಕಬೇಕೆಂದು ಮನಸ್ಸುಮಾಡಿರುವವರಿಗೆಲ್ಲರಿಗೂ ಕ್ಷಮೆಯನ್ನು ಅನುಗ್ರಹಿಸು ಎಂದು ವಿಜ್ಞಾಪನೆ ಮಾಡಿದನು. ಯೆಹೋವನು ಹಿಜ್ಕೀಯನ ಪ್ರಾರ್ಥನೆಯನ್ನು ಲಾಲಿಸಿ ಜನರನ್ನು ಸ್ವಸ್ಥಗೊಳಿಸಿದನು. ಯೆರೂಸಲೇಮಿನಲ್ಲಿ ಸೇರಿಬಂದಿದ್ದ ಇಸ್ರಾಯೇಲರು ಏಳು ದಿನಗಳವರೆಗೂ ಮಹಾ ಸಂತೋಷದಿಂದ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುತ್ತಾ ಇದ್ದರು. ಲೇವಿಯರೂ, ಯಾಜಕರೂ ಮಹಾವಾದ್ಯಗಳೊಡನೆ ಯೆಹೋವನನ್ನು ಪ್ರತಿದಿನವೂ ಸ್ತುತಿ ಕೀರ್ತಿಸುತ್ತಾ ಇದ್ದರು. ಹಿಜ್ಕೀಯನು ಯೆಹೋವನ ಸೇವೆಯಲ್ಲಿ ನಿಪುಣರಾದ ಎಲ್ಲಾ ಲೇವಿಯರೊಡನೆ ಪ್ರೀತಿಯಿಂದ ಮಾತನಾಡಿದನು. ನೇಮಕವಾದ ಏಳು ದಿನಗಳ ಹಬ್ಬದವರೆಗೂ ಜನರು ಸಮಾಧಾನ ಯಜ್ಞಗಳನ್ನು ಅರ್ಪಿಸುತ್ತಾ ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ತಮ್ಮ ದೇವರೆಂದು ಅರಿಕೆಮಾಡಿಕೊಳ್ಳುತ್ತಾ ಔತಣಮಾಡಿದರು. ಅಲ್ಲದೆ ಸಮೂಹದವರು ಇನ್ನೂ ಏಳು ದಿನಗಳ ಕಾಲ ಹಬ್ಬವನ್ನು ಆ ಆಚರಿಸಬೇಕೆಂದು ತೀರ್ಮಾನಿಸಿ ಇನ್ನೂ ಏಳು ದಿನಗಳ ಕಾಲ ಬಹಳ ಸಂತೋಷದಿಂದ ಹಬ್ಬವನ್ನು ಆಚರಿಸಿದರು ಹೂದದ ಅರಸನಾದ ಹಿಜ್ಕೀಯನು ಹಿಂಡುಗಳಿಂದ ಸಾವಿರ ಹೋರಿಗಳನ್ನೂ, ಏಳು ಸಾವಿರ ಕುರಿಗಳನ್ನೂ, ಪದಾಧಿಕಾರಿಗಳು ಸಾವಿರ ಹೋರಿಗಳನ್ನೂ, ಹತ್ತು ಸಾವಿರ ಕುರಿಗಳನ್ನೂ ಯಜ್ಞಕ್ಕಾಗಿ ದಾನಮಾಡಿದರು. ಯಾಜಕರಲ್ಲಿ ಬಹು ಮಂದಿ ತಮ್ಮನ್ನು ಶುದ್ಧಿಪಡಿಸಿಕೊಂಡರು. ಯೆಹೂದ್ಯರ ಸರ್ವಸಮೂಹದವರೂ, ಯಾಜಕರು, ಲೇವಿಯರೂ, ಇಸ್ರಾಯೇಲ್ ಪ್ರಾಂತ್ಯಗಳಿಂದ ಸೇರಿಬಂದವರೆಲ್ಲರೂ ಹಾಗು ಇಸ್ರಾಯೇಲ್ ಯೆಹೂದ ಪ್ರಾಂತ್ಯಗಳಲ್ಲಿದ್ದ ಪ್ರವಾಸಿಗಳು ಈ ಉತ್ಸವದಲ್ಲಿ ಪಾಲುಗೊಂಡಿದ್ದರು. ದಾವೀದನ ಮಗನೂ ಇಸ್ರಾಯೇಲರ ಅರಸನೂ ಆದ ಸೊಲೊಮೋನನ ಕಾಲದಿಂದ ಯೆರೂಸಲೇಮಿನಲ್ಲಿ ಅಂಥ ಉತ್ಸವವು ನಡೆದಿರಲಿಲ್ಲವಾದುದರಿಂದ ಯೆರೂಸಲೇಮಿನಲ್ಲಿ ಮಹಾಸಂತೋಷವುಂಟಾಯಿತು. ಆಮೇಲೆ ಯಾಜಕರಾಗಿದ್ದ ಲೇವಿಯರು ಎದ್ದು ನಿಂತು ಜನರನ್ನು ಆಶೀರ್ವದಿಸಿದರು. ಅವರ ಪ್ರಾರ್ಥನೆಯ ಸ್ವರವು ದೇವರಿಗೆ ಕೇಳಿಸಿತು; ಅವರ ಪ್ರಾರ್ಥನೆಯು ಪರಲೋಕದಲ್ಲಿರುವ ಆತನ ಪರಿಶುದ್ಧ ನಿವಾಸಕ್ಕೆ ತಲುಪಿತು.