Gratidão a Deus
A gratidão a Deus é atitude que transforma a vida. Reconhecer que toda boa dádiva vem de Deus nos leva a louvar, servir e viver com alegria e propósito.
Tudo vem de Deus
Toda boa dádiva vem do alto. Agradecer a Deus é reconhecer que Ele é a fonte de toda bênção e sustento.
ದೇವರು ಉಂಟುಮಾಡಿದ್ದೆಲ್ಲವೂ ಒಳ್ಳೆಯದೇ, ನಾವು ಕೃತಜ್ಞತಾಸ್ತುತಿಮಾಡಿ ತೆಗೆದುಕೊಳ್ಳುವ ಯಾವ ಆಹಾರವನ್ನು ತಿರಸ್ಕರಿಸಬೇಕಾಗಿಲ್ಲ.
ದೇವರು ಉಂಟುಮಾಡಿದ್ದೆಲ್ಲವೂ ಒಳ್ಳೆಯದೇ, ನಾವು ಕೃತಜ್ಞತಾಸ್ತುತಿಮಾಡಿ ತೆಗೆದುಕೊಳ್ಳುವ ಯಾವ ಆಹಾರವನ್ನು ತಿರಸ್ಕರಿಸಬೇಕಾಗಿಲ್ಲ. ದೇವರ ವಾಕ್ಯದಿಂದಲೂ ಪ್ರಾರ್ಥನೆಯಿಂದಲೂ ಆ ಆಹಾರವು ಪವಿತ್ರವಾಗುತ್ತದಲ್ಲಾ.
ನನಗೆ ಬಲವನ್ನು ದಯಪಾಲಿಸಿದವನು ನಮ್ಮ ಕರ್ತನಾದ ಯೇಸು ಕ್ರಿಸ್ತನೇ. ಅದಕ್ಕಾಗಿ ನಾನು ಕೃತಜ್ಞತೆಯುಳ್ಳವನಾಗಿದ್ದೇನೆ. ಮೊದಲು ದೂಷಕನೂ, ಹಿಂಸಕನೂ, ಕೇಡುಮಾಡುವವನೂ ಆಗಿದ್ದ ನನ್ನನ್ನು ಆತನು ನಂಬಿಗಸ್ತನೆಂದು ಎಣಿಸಿ, ತನ್ನ ಸೇವೆಗೆ ನೇಮಿಸಿಕೊಂಡದ್ದಕ್ಕಾಗಿ ನಾನು ಆತನಿಗೆ ಸ್ತೋತ್ರಮಾಡುತ್ತೇನೆ. ನಾನು ಅಜ್ಞಾನಿಯಾಗಿ ತಿಳಿಯದೆ ಅಪನಂಬಿಕೆಯಲ್ಲಿ ಆ ರೀತಿ ನಡೆದುಕೊಂಡದ್ದರಿಂದ ನನ್ನ ಮೇಲೆ ಆತನಿಗೆ ಕರುಣೆ ಉಂಟಾಯಿತು;
ಸಭೆಯ ಪ್ರಾರ್ಥನೆ ಮತ್ತು ಆರಾಧನೆ
ಎಲ್ಲಾದಕ್ಕಿಂತ ಮೊದಲು ಎಲ್ಲಾ ಜನರಿಗೋಸ್ಕರ ದೇವರಿಗೆ ವಿಜ್ಞಾಪನೆಗಳನ್ನೂ, ಪ್ರಾರ್ಥನೆಗಳನ್ನೂ, ಮನವಿಗಳನ್ನೂ, ಕೃತಜ್ಞತಾಸ್ತುತಿಗಳನ್ನೂ ಮಾಡಬೇಕೆಂದು ಕೇಳಿಕೊಳ್ಳುತ್ತೇನೆ.
ದೇವಭಕ್ತರಿಗಾಗಿ ಬೆಳಕಿನಲ್ಲಿರುವ ಬಾಧ್ಯತೆಯಲ್ಲಿ ಪಾಲುಗಾರರಾಗುವುದಕ್ಕೆ ನಮ್ಮನ್ನು ಯೋಗ್ಯರನ್ನಾಗಿ ಮಾಡಿದ ತಂದೆಯಾದ ದೇವರಿಗೆ ಆನಂದಪೂರ್ವಕವಾಗಿ ಕೃತಜ್ಞತಾಸ್ತುತಿಯನ್ನು ಸಲ್ಲಿಸುವವರಾಗಬೇಕೆಂತಲೂ ದೇವರನ್ನು ಬೇಡಿಕೊಳ್ಳುತ್ತೇನೆ.
ಆತನಲ್ಲಿ ಬೇರೂರಿಕೊಂಡು, ಆತನಲ್ಲಿ ಕಟ್ಟಲ್ಪಟ್ಟು ಮತ್ತು ನಿಮಗೆ ಬೋಧಿಸಲ್ಪಟ್ಟ ಉಪದೇಶದ ಪ್ರಕಾರವೇ ಕ್ರಿಸ್ತ ನಂಬಿಕೆಯಲ್ಲಿ ನೆಲೆಗೊಂಡು ದೇವರಿಗೆ ಹೆಚ್ಚೆಚ್ಚಾಗಿ ಸ್ತೋತ್ರ ಸಲ್ಲಿಸುವವರಾಗಿರಿ.
ಕ್ರಿಸ್ತನ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ. ಇದೇ ಸಮಾಧಾನದಲ್ಲಿ ಏಕ ದೇಹವಾಗಿರುವಂತೆ ನೀವು ಕರೆಯಲ್ಪಟ್ಟಿರುವಿರಿ ಇದಲ್ಲದೆ ಕೃತಜ್ಞತೆಯುಳ್ಳವರಾಗಿರಿ.
Louvor e gratidão
Louvai ao Senhor e dai-lhe graças! Ele fez maravilhas e é digno de todo louvor e agradecimento.
ಯೆಹೋವನು ಮಾಡಿದ ನ್ಯಾಯವಾದ ತೀರ್ಪಿಗಾಗಿ,
ನಾನು ಆತನನ್ನು ಕೊಂಡಾಡುವೆನು.
ಪರಾತ್ಪರ ದೇವನಾದ ಯೆಹೋವನ ನಾಮವನ್ನು ಸಂಕೀರ್ತಿಸುವೆನು.
ಸ್ತುತಿಯಜ್ಞವನ್ನೇ ದೇವರಿಗೆ ಸಮರ್ಪಿಸಿರಿ;
ವಾಗ್ದಾನ ಮಾಡಿದ ಹರಕೆಗಳನ್ನು ಪರಾತ್ಪರನಾದ ದೇವರಿಗೆ ಸಲ್ಲಿಸಿರಿ.
ನಾನು ಸಂಕೀರ್ತಿಸುತ್ತಾ ದೇವರ ನಾಮವನ್ನು ಕೊಂಡಾಡುವೆನು;
ಕೃತಜ್ಞತಾಸ್ತುತಿಯಿಂದ ಘನಪಡಿಸುವೆನು.
ನಿನ್ನ ದರ್ಶನವನ್ನು ಕೋರುವವರೆಲ್ಲರು
ನಿನ್ನಲ್ಲಿ ಉಲ್ಲಾಸದಿಂದ ಸಂತೋಷಿಸಲಿ;
ನಿನ್ನ ಜಯದಲ್ಲಿ ಆನಂದಿಸುವವರು, "ದೇವರು ಮಹೋನ್ನತನು" ಎಂದು ಯಾವಾಗಲೂ ಹೇಳಲಿ.
ನ್ಯಾಯಾಧೀಶನಾದ ದೇವರಿಗೆ ಸ್ತುತಿ
ದೇವರೇ, ಕೊಂಡಾಡುತ್ತೇವೆ;
ನಿನ್ನನ್ನು ಕೊಂಡಾಡುತ್ತೇವೆ. ನಿನ್ನ ನಾಮ ಮಹತ್ವವನ್ನು ನೆನಪುಮಾಡಿಕೊಂಡು;
ನಿನ್ನ ಮಹತ್ಕಾರ್ಯಗಳನ್ನು ವರ್ಣಿಸುತ್ತೇವೆ.
ನಿನ್ನ ಪ್ರಜೆಯೂ, ನೀನು ಪಾಲಿಸುವ ಮಂದೆಯೂ ಆಗಿರುವ ನಾವಾದರೋ,
ಸದಾ ನಿನ್ನನ್ನು ಸ್ತುತಿಸುವವರಾಗಿ,
ಮುಂದಣ ಸಂತಾನದವರೆಲ್ಲರಿಗೂ ನಿನ್ನ ಮಹತ್ತನ್ನು ವರ್ಣಿಸುತ್ತಾ ಹೋಗುವೆವು.
ಕೃತಜ್ಞತಾ ಸ್ತುತಿಯೊಡನೆ ಆತನ ಮಂದಿರದ್ವಾರಗಳಿಗೂ,
ಸ್ತುತಿಸ್ತೋತ್ರದೊಡನೆ ಆತನ ಅಂಗಳಗಳಿಗೂ ಬನ್ನಿರಿ;
ಆತನ ಉಪಕಾರಗಳನ್ನು ಸ್ಮರಿಸಿರಿ;
ಆತನ ನಾಮವನ್ನು ಕೊಂಡಾಡಿರಿ.
ಆಗ ನೀನು ನನ್ನ ಗೋಳಾಟವನ್ನು ತಪ್ಪಿಸಿ, ಸಂತೋಷದಿಂದ ಕುಣಿದಾಡುವಂತೆ ಮಾಡಿದಿ;
ನಾನು ಕಟ್ಟಿಕೊಂಡಿದ್ದ ಗೋಣಿತಟ್ಟನ್ನು ತೆಗೆದುಬಿಟ್ಟು,
ಹರ್ಷವಸ್ತ್ರವನ್ನು ನನಗೆ ಧಾರಣೆಮಾಡಿಸಿದಿ.
ಇದರಿಂದ ಯೆಹೋವನೇ, ನನ್ನ ಮನಸ್ಸು ಎಡೆಬಿಡದೆ ನಿನ್ನನ್ನು ಕೀರ್ತಿಸುತ್ತಿರುವುದು;
ನನ್ನ ದೇವರೇ, ನಿನ್ನನ್ನು ಸದಾಕಾಲವೂ ಸ್ತುತಿಸುವೆನು.
"ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ. ಆತನ ನಾಮದ ಮಹತ್ವವನ್ನು ವರ್ಣಿಸಿರಿ. ಜನಾಂಗಗಳಲ್ಲಿ ಆತನ ಸತ್ಕಾರ್ಯಗಳನ್ನು ಪ್ರಸಿದ್ಧಪಡಿಸಿರಿ.
ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ; ಆತನು ಒಳ್ಳೆಯವನು; ಆತನ ಕೃಪೆಯು ಶಾಶ್ವತವಾಗಿರುವುದು.
Expressões de gratidão
Dar graças com oração e súplica. A gratidão se expressa em palavras, atos e atitudes que glorificam a Deus.
ಯಾವ ಸಂಬಂಧವಾಗಿಯೂ ಚಿಂತೆಮಾಡದೆ ಸರ್ವವಿಷಯಗಳಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ಕರ್ತನಿಗೆ ತಿಳಿಯಪಡಿಸಿರಿ.
ಯಾವಾಗಲೂ ಎಲ್ಲಾ ಕಾರ್ಯಗಳಿಗಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರವನ್ನು ಮಾಡಿರಿ.
ಹೊಲಸು ಮಾತು, ಹುಚ್ಚು ಮಾತು, ಕುಚೋದ್ಯ ಇವು ಬೇಡ. ಇವು ಅಯುಕ್ತವಾಗಿವೆ. ಆದರೆ ಇವುಗಳಿಗೆ ಪ್ರತಿಯಾಗಿ ದೇವರಿಗೆ ಕೃತಜ್ಞತಾಸ್ತುತಿಮಾಡಿರಿ.
ಹೀಗೆ ನೀವು ಎಲ್ಲಾ ವಿಷಯಗಳಲ್ಲಿ ಐಶ್ವರ್ಯವಂತರಾಗಿದ್ದು ಉದಾರವಾಗಿ ಕೊಡಲು ಶಕ್ತರಾಗುವಿರಿ; ಇದಲ್ಲದೆ ನಿಮ್ಮ ದಾನಗಳು ನಮ್ಮ ಕೈಯಿಂದ ಮತ್ತೊಬ್ಬರಿಗೆ ಸೇರಿದಾಗ ಅದು ದೇವರಿಗೆ ಕೃತಜ್ಞತಾಸ್ತುತಿಯನ್ನು ಉಂಟುಮಾಡುತ್ತದೆ.
ಆ ಬಾಧೆಗಳೆಲ್ಲಾ ನಿಮ್ಮ ಹಿತಕ್ಕಾಗಿಯೇ ನಮಗೆ ಸಂಭವಿಸುತ್ತವೆ. ಅವುಗಳಲ್ಲಿ ಅಧಿಕವಾಗಿ ದೊರಕುವ ದೈವಕೃಪೆಯು ಬಹು ಜನರೊಳಗೆ ಕೃತಜ್ಞತೆಯನ್ನು ಹುಟ್ಟಿಸುವುದರಿಂದ ದೇವರ ಮಹಿಮೆಗೆ ಅಧಿಕವಾದ ಸ್ತುತಿ ಸ್ತೋತ್ರಗಳು ಉಂಟಾಗುವುದು.
ಎಲ್ಲಾದರಲ್ಲಿಯೂ ಕೃತಜ್ಞತಾಸ್ತುತಿಮಾಡಿರಿ ಇದೇ ನಿಮ್ಮ ವಿಷಯವಾಗಿ ಕ್ರಿಸ್ತ ಯೇಸುವಿನಲ್ಲಿ ತೋರಿಬಂದ ದೇವರ ಚಿತ್ತವಾಗಿದೆ.
"ಕರ್ತನೇ, ಸರ್ವಶಕ್ತನಾದ ದೇವರೇ, ಇರುವಾತನೇ ಇದ್ದಾತನೇ,
ನೀನು ನಿನ್ನ ಮಹಾ ಅಧಿಕಾರವನ್ನು ವಹಿಸಿಕೊಂಡು ಆಳುತ್ತಿರುವುದರಿಂದ
ನಾವು ನಿನಗೆ ಕೃತಜ್ಞತಾಸುತ್ತಿ ಸಲ್ಲಿಸುತ್ತೇವೆ.
ಆದರೆ ನಾನು ಸ್ತೋತ್ರ ಧ್ವನಿಯಿಂದ ನಿನಗೆ ಯಜ್ಞವನ್ನರ್ಪಿಸುವೆನು,
ನಿನಗೆ ಮಾಡಿಕೊಂಡ ಹರಕೆಯನ್ನು ಸಲ್ಲಿಸುವೆನು.
ರಕ್ಷಣೆಯು ಯೆಹೋವನಿಂದಲೇ ಉಂಟಾಗುವುದು."