Gratidão a Deus
A gratidão a Deus é atitude que transforma a vida. Reconhecer que toda boa dádiva vem de Deus nos leva a louvar, servir e viver com alegria e propósito.
Tudo vem de Deus
Toda boa dádiva vem do alto. Agradecer a Deus é reconhecer que Ele é a fonte de toda bênção e sustento.
ದೇವರು ಸೃಷ್ಟಿಸಿದ್ದೆಲ್ಲವೂ ಒಳ್ಳೆಯದಾಗಿದೆ. ಕೃತಜ್ಞತೆ ಮಾಡಿ ಸ್ವೀಕರಿಸುವ ಯಾವುದನ್ನೂ ತಿರಸ್ಕರಿಸಬೇಕಾಗಿಲ್ಲ.
ದೇವರು ಸೃಷ್ಟಿಸಿದ್ದೆಲ್ಲವೂ ಒಳ್ಳೆಯದಾಗಿದೆ. ಕೃತಜ್ಞತೆ ಮಾಡಿ ಸ್ವೀಕರಿಸುವ ಯಾವುದನ್ನೂ ತಿರಸ್ಕರಿಸಬೇಕಾಗಿಲ್ಲ. ಅದು ದೇವರ ವಾಕ್ಯದಿಂದಲೂ ಪ್ರಾರ್ಥನೆಯಿಂದಲೂ ಪವಿತ್ರವಾಗುತ್ತದೆ.
ನನ್ನನ್ನು ಬಲಪಡಿಸುವ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವು ನನ್ನನ್ನು ನಂಬಿಗಸ್ತನೆಂದು ಎಣಿಸಿ ಸೇವೆಗೆ ನೇಮಿಸಿದ್ದಕ್ಕಾಗಿ ನಾನು ಅವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.
ಎಲ್ಲದಕ್ಕಿಂತ ಮೊದಲು ಮನುಷ್ಯರೆಲ್ಲರಿಗೋಸ್ಕರವೂ ಅರಸರುಗಳಿಗಾಗಿಯೂ ವಿಜ್ಞಾಪನೆಗಳನ್ನೂ ಪ್ರಾರ್ಥನೆಗಳನ್ನೂ ಬಿನ್ನಹಗಳನ್ನೂ ಕೃತಜ್ಞತಾಸ್ತುತಿಗಳನ್ನೂ ಮಾಡಬೇಕೆಂದು ಪ್ರಬೋಧಿಸುತ್ತೇನೆ.
ತಂದೆಯಾದ ದೇವರಿಗೆ ಹರ್ಷದಿಂದ ಕೃತಜ್ಞತೆಯನ್ನು ಸಲ್ಲಿಸುವಿರಿ. ಬೆಳಕಿನಲ್ಲಿರುವ ದೇವಭಕ್ತರ ಬಾಧ್ಯತೆಯಲ್ಲಿ ಪಾಲುಗಾರರಾಗುವುದಕ್ಕೆ ತಂದೆಯು ನಿಮ್ಮನ್ನು ಯೋಗ್ಯರನ್ನಾಗಿ ಮಾಡಿದ್ದಾರೆ.
ನೀವು ಕ್ರಿಸ್ತ ಯೇಸುವಿನಲ್ಲಿ ಬೇರೂರಿದವರಾಗಿಯೂ ಕಟ್ಟಲಾದವರಾಗಿಯೂ ಇದ್ದು, ನಿಮಗೆ ಬೋಧನೆ ನೀಡಿದ ಪ್ರಕಾರ ನಿಮ್ಮ ವಿಶ್ವಾಸದಲ್ಲಿ ಬಲಹೊಂದಿ ಕೃತಜ್ಞತೆಯಿಂದ ತುಂಬಿ ಪ್ರವಾಹಿಸುವವರಾಗಿರಿ.
ಕ್ರಿಸ್ತ ಯೇಸುವಿನ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ, ಆ ಸಮಾಧಾನಕ್ಕಾಗಿಯೇ ನೀವು ಸಹ ಒಂದೇ ದೇಹವಾಗಿರುವಂತೆ ಕರೆಯಲಾಗಿದ್ದೀರಿ. ನೀವು ಕೃತಜ್ಞತೆಯುಳ್ಳವರಾಗಿರಿ.
Louvor e gratidão
Louvai ao Senhor e dai-lhe graças! Ele fez maravilhas e é digno de todo louvor e agradecimento.
ನಾನು ಯೆಹೋವ ದೇವರನ್ನು ಕೊಂಡಾಡುವೆನು; ಏಕೆಂದರೆ, ಅವರು ನೀತಿಯುಳ್ಳವರು.
ಮಹೋನ್ನತರಾದ ಯೆಹೋವ ದೇವರ ಹೆಸರನ್ನು ಕೀರ್ತನೆ ಮಾಡುವೆನು.
"ದೇವರಾಗಿರುವ ನನಗೆ ಸ್ತೋತ್ರವನ್ನು ಬಲಿಯಾಗಿ ಅರ್ಪಿಸಿರಿ.
ಮಹೋನ್ನತನಾಗಿರುವ ನನಗೆ ಹರಕೆಗಳನ್ನು ಸಲ್ಲಿಸಿರಿ.
ನಾನು ದೇವರ ಹೆಸರನ್ನು ಹಾಡಿ ಸ್ತುತಿಸುವೆನು.
ಸ್ತೋತ್ರದಿಂದ ದೇವರನ್ನು ಸ್ತುತಿಸುವೆನು.
ಆದರೆ, ನಿಮ್ಮನ್ನು ಹುಡುಕುವವರೆಲ್ಲರೂ
ನಿಮ್ಮಲ್ಲಿ ಹರ್ಷಾನಂದಗೊಳ್ಳಲಿ.
ನಿಮ್ಮ ರಕ್ಷಣೆಯನ್ನು ಪ್ರೀತಿಸುವವರು,
"ದೇವರು ಮಹೋನ್ನತರು,"
ಎಂದು ಯಾವಾಗಲೂ ಹೇಳಲಿ.
ನಿಮ್ಮನ್ನು ಕೊಂಡಾಡುತ್ತೇವೆ; ದೇವರೇ,
ನಿಮ್ಮನ್ನು ಕೊಂಡಾಡುತ್ತೇವೆ; ಏಕೆಂದರೆ ಜನರು ನಿಮ್ಮ ನಾಮವನ್ನು ಜಪಿಸಿ,
ನಿಮ್ಮ ಅದ್ಭುತಗಳನ್ನು ಕುರಿತು ಹೇಳುತ್ತಾರೆ.
ಆಗ ನಿಮ್ಮ ಜನರೂ, ನಿಮ್ಮ ಹುಲ್ಲುಗಾವಲಿನ
ಕುರಿಗಳೂ ಆಗಿರುವ ನಾವು
ಎಂದೆಂದಿಗೂ ನಿಮ್ಮನ್ನು ಕೊಂಡಾಡಿ,
ತಲತಲಾಂತರಕ್ಕೂ ನಿಮ್ಮ ಸ್ತೋತ್ರವನ್ನು ಸಾರುವೆವು.
ಕೃತಜ್ಞತೆಯಿಂದ ಅವರ ಬಾಗಿಲುಗಳಿಗೂ,
ಕೃತಜ್ಞತಾ ಸ್ತೋತ್ರದಿಂದ ಅವರ ಅಂಗಳಗಳಿಗೂ ಬನ್ನಿರಿ;
ಅವರನ್ನು ಕೊಂಡಾಡಿರಿ, ಅವರ ಹೆಸರನ್ನು ಸ್ತುತಿಸಿರಿ.
ನೀವು ನನ್ನ ಗೋಳಾಟವನ್ನು ಕುಣಿದಾಟಕ್ಕೆ ತಿರುಗಿಸಿದ್ದೀರಿ;
ನೀವು ನನ್ನ ಗೋಣಿತಟ್ಟನ್ನು ತೆಗೆದುಹಾಕಿ ಹರ್ಷವಸ್ತ್ರವನ್ನು ನನಗೆ ಧರಿಸಿದ್ದೀರಿ.
ಆದ್ದರಿಂದ ನನ್ನ ಹೃದಯವು ಮೌನವಿರದೆ ನಿಮ್ಮನ್ನು ಯುಗಯುಗಕ್ಕೂ ಕೊಂಡಾಡುತ್ತಿರುವುದು.
ನನ್ನ ದೇವರಾದ ಯೆಹೋವ ದೇವರೇ, ನಾನು ನಿಮ್ಮನ್ನು ಸದಾಕಾಲವೂ ಸ್ತುತಿಸುವೆನು.
ಯೆಹೋವ ದೇವರಿಗೆ ಉಪಕಾರಸ್ತುತಿ ಮಾಡಿರಿ, ಅವರ ಹೆಸರನ್ನು ಸಾರಿ ಹೇಳಿರಿ,
ಜನರಲ್ಲಿ ದೇವರ ಕ್ರಿಯೆಗಳನ್ನು ತಿಳಿಯಪಡಿಸಿರಿ.
ಯೆಹೋವ ದೇವರಿಗೆ ಕೃತಜ್ಞತಾ ಸ್ತುತಿಮಾಡಿರಿ.
ಅವರು ಒಳ್ಳೆಯವರು; ಅವರ ಪ್ರೀತಿ ಶಾಶ್ವತವಾಗಿರುವುದು.
Expressões de gratidão
Dar graças com oração e súplica. A gratidão se expressa em palavras, atos e atitudes que glorificam a Deus.
ಯಾವ ವಿಷಯವಾಗಿಯೂ ಚಿಂತೆ ಮಾಡದೆ, ಸರ್ವ ವಿಷಯದಲ್ಲಿ ಕೃತಜ್ಞತಾಸ್ತುತಿಯೊಡನೆ ಪ್ರಾರ್ಥನೆ ವಿಜ್ಞಾಪನೆಗಳನ್ನು ಮಾಡುತ್ತಾ ನಿಮ್ಮ ಬೇಡಿಕೆಯನ್ನು ದೇವರಿಗೆ ಸಮರ್ಪಿಸಿರಿ.
ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿ ತಂದೆಯಾದ ದೇವರಿಗೆ, ಯಾವಾಗಲೂ ಎಲ್ಲಾ ಕಾರ್ಯಗಳಿಗೋಸ್ಕರ ಕೃತಜ್ಞತೆಯನ್ನು ಸಲ್ಲಿಸಿರಿ.
ಅಶ್ಲೀಲತೆ, ಬುದ್ಧಿಹೀನ ಮಾತು, ಅಸಭ್ಯ ಹರಟೆ ಇವು ಬೇಡ, ಇವು ಅಯುಕ್ತವಾಗಿವೆ, ಪ್ರತಿಯಾಗಿ ದೇವರಿಗೆ ಕೃತಜ್ಞತಾ ಸ್ತುತಿಮಾಡಿರಿ.
ನೀವು ಸದಾ ಉದಾರಿಗಳಾಗುವಂತೆ ನಿಮ್ಮನ್ನು ಎಲ್ಲಾ ವಿಷಯಗಳಲ್ಲಿಯೂ ಸಿರಿವಂತರನ್ನಾಗಿ ಮಾಡುವನು. ನಿಮ್ಮ ಕೊಡುಗೆಯು ನಮ್ಮ ಸೇವೆಯ ಮೂಲಕ ಬೇರೆಯವರಿಗೆ ಮುಟ್ಟಿ, ಅವರು ದೇವರನ್ನು ಕೃತಜ್ಞತೆಯಿಂದ ಸ್ಮರಿಸುವಂತೆ ನಡೆಸುವುದು.
ಇವೆಲ್ಲವೂ ನಿಮ್ಮ ಒಳ್ಳೆಯದಕ್ಕಾಗಿಯೇ. ಇದರಿಂದ ಹೆಚ್ಚಾದ ಜನರಿಗೆ ತಲುಪುತ್ತಿರುವ ಕೃಪೆಯು, ಕೃತಜ್ಞತೆಯಿಂದ ತುಂಬಿ ಹರಿಯುವುದು. ಆಗ ದೇವರ ಮಹಿಮೆಯು ಸ್ಪಷ್ಟವಾಗುವುದು.
ಎಲ್ಲವುಗಳಿಗಾಗಿ ಕೃತಜ್ಞತೆ ಸಲ್ಲಿಸಿರಿ. ಏಕೆಂದರೆ ಇದೇ ನಿಮ್ಮ ವಿಷಯವಾಗಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಚಿತ್ತವಾಗಿದೆ.
ಹೀಗೆ ಹೇಳಿದರು:
"ಕರ್ತ ಆಗಿರುವ, ಸರ್ವಶಕ್ತರಾದ ದೇವರೇ,
ಮೊದಲು ಇದ್ದು ಈಗಲೂ ಇರುವವರೂ,
ನೀವು ನಿಮ್ಮ ಮಹಾ ಅಧಿಕಾರವನ್ನು
ಪಡೆದು ಆಳಿದ್ದರಿಂದ ನಿಮಗೆ ಕೃತಜ್ಞತೆಗಳನ್ನು ಅರ್ಪಿಸುತ್ತೇವೆ.
ಆದರೆ ನಾನು ಸ್ತೋತ್ರದ ಗೀತೆಯಿಂದ ನಿಮಗೆ ಬಲಿ ಅರ್ಪಿಸುವೆನು.
ನಾನು ಮಾಡಿದ ಹರಕೆಯನ್ನು ತೀರಿಸುವೆನು.
ಆಗ ನಾನು, ‘ರಕ್ಷಣೆಯು ಯೆಹೋವ ದೇವರಿಂದಲೇ ಬರುವುದು,’ ಎಂದು ಹೇಳಿದನು."