Guardar o coração
Guardar o coração é o mandamento mais urgente de Provérbios. Sobre tudo o que se deve guardar, guarda o teu coração, porque dele procedem as fontes da vida.
Sobre tudo, guarda o coração
O coração é a nascente de tudo — pensamentos, desejos, decisões. Guardá-lo é proteger toda a vida espiritual e emocional.
ಬಹು ಜಾಗ್ರತೆಯಿಂದ ನಿನ್ನ ಹೃದಯವನ್ನು ಕಾಪಾಡಿಕೋ;
ಏಕೆಂದರೆ ಅದರೊಳಗಿಂದ ನಿನ್ನ ಕೃತ್ಯಗಳು ಜೀವಧಾರೆಯಾಗಿ ಹೊರಡುತ್ತವೆ.
ಹದಿನೆಂಟನೆಯ ಹೇಳಿಕೆ
ಮಗನೇ, ನಿನ್ನ ಮನಸ್ಸನ್ನು ನನಗೆ ಕೊಡು;
ನನ್ನ ಮಾರ್ಗಗಳನ್ನು ಅನುಸರಿಸುವಲ್ಲಿ ನಿಮ್ಮ ಕಣ್ಣುಗಳು ಆನಂದಿಸಲಿ.
ಜ್ಞಾನದಿಂದ ಇನ್ನಷ್ಟು ಲಾಭಗಳು
ಮಗನೇ, ನನ್ನ ಉಪದೇಶವನ್ನು ಮರೆಯಬೇಡ;
ನನ್ನ ಆಜ್ಞೆಗಳನ್ನು ನಿನ್ನ ಹೃದಯದಲ್ಲಿ ಇಟ್ಟುಕೋ.
ಏಕೆಂದರೆ ಅವು ನಿನ್ನ ದಿನಗಳನ್ನು ಹೆಚ್ಚಿಸಿ ದೀರ್ಘಾಯುಷ್ಯವನ್ನು ನೀಡುವುದು,
ಸಮಾಧಾನವನ್ನೂ ಸಮೃದ್ಧಿಯನ್ನೂ ನಿನಗೆ ಕೊಡುವುದು.
ಒಳ್ಳೆಯವನು ತನ್ನ ಹೃದಯದ ಒಳ್ಳೆಯ ಬೊಕ್ಕಸದಿಂದ ಒಳ್ಳೆಯದನ್ನೇ ಹೊರತರುತ್ತಾನೆ. ಆದರೆ ಕೆಟ್ಟವನು ತನ್ನ ಹೃದಯದ ಕೆಟ್ಟ ಬೊಕ್ಕಸದಿಂದ ಕೆಟ್ಟದ್ದನ್ನೇ ಹೊರತರುತ್ತಾನೆ. ಹೃದಯದಲ್ಲಿ ತುಂಬಿರುವದನ್ನೇ ಅವನ ಬಾಯಿ ಮಾತನಾಡುತ್ತದೆ.
Coração puro e renovado
Cria em mim um coração puro, ó Deus. Os puros de coração verão a Deus — e o Espírito renova nosso interior.
ಓ ದೇವರೇ, ಶುದ್ಧ ಹೃದಯವನ್ನು ನನ್ನಲ್ಲಿ ಸೃಷ್ಟಿಮಾಡಿರಿ,
ಸ್ಥಿರವಾದ ಆತ್ಮವನ್ನು ನನ್ನಲ್ಲಿ ನವೀಕರಿಸಿರಿ.
ಹೃದಯದಲ್ಲಿ ಶುದ್ಧರಾಗಿರುವವರು ಧನ್ಯರು,
ಅವರು ದೇವರನ್ನು ಕಾಣುವರು.
ದೇವರೇ, ನನ್ನನ್ನು ಪರಿಶೋಧಿಸಿ, ನನ್ನ ಹೃದಯವನ್ನು ತಿಳಿದುಕೊಳ್ಳಿರಿ;
ನನ್ನನ್ನು ಪರೀಕ್ಷಿಸಿ, ನನ್ನ ಚಿಂತಾಲೋಚನೆಗಳನ್ನು ತಿಳಿದುಕೊಳ್ಳಿರಿ.
ನನ್ನಲ್ಲಿ ಕೇಡಿನ ಮಾರ್ಗವಿದೆಯೋ ಎಂದು ನೋಡಿರಿ,
ನನ್ನನ್ನು ನಿತ್ಯ ಮಾರ್ಗದಲ್ಲಿ ನಡೆಸಿರಿ.
ಯೆಹೋವ ದೇವರೇ, ನನ್ನನ್ನು ಶೋಧಿಸಿ, ಪರೀಕ್ಷಿಸಿರಿ;
ನನ್ನ ಅಂತರಿಂದ್ರಿಯಗಳನ್ನೂ ನನ್ನ ಹೃದಯವನ್ನೂ ಶೋಧಿಸಿರಿ.
ನಿಮ್ಮ ಒಡಂಬಡಿಕೆಯ ಪ್ರೀತಿಯು ಯಾವಾಗಲೂ ನನ್ನ ಮನಸ್ಸು ತುಂಬ ಇದೆ;
ನಿಮ್ಮ ನಂಬಿಗಸ್ತಿಕೆಯಲ್ಲಿ ನಾನು ಬಾಳುತ್ತಿದ್ದೇನೆ.
ನೀವು ನನ್ನ ಹೃದಯವನ್ನು ಶೋಧಿಸಿದರೂ,
ನೀವು ರಾತ್ರಿಯಲ್ಲಿ ನನ್ನನ್ನು ಪರೀಕ್ಷಿಸಿ ವಿಚಾರಿಸಿದರೂ,
ನಾನು ಕೆಟ್ಟಯೋಜನೆ ಮಾಡಿಕೊಳ್ಳಲಿಲ್ಲವೆಂದು ನೀವು ಕಂಡುಕೊಳ್ಳುವಿರಿ;
ನನ್ನ ಬಾಯಿಯೂ ಅತಿಕ್ರಮಿಸುವುದಿಲ್ಲವೆಂದು ನಾನು ತೀರ್ಮಾನಿಸಿಕೊಂಡಿದ್ದೇನೆ.
ಮನುಷ್ಯರು ನನಗೆ ಲಂಚ ನೀಡಲು ಪ್ರಯತ್ನಿಸಿದರೂ,
ನಿಮ್ಮ ತುಟಿಗಳ ಆಜ್ಞಾನುಸಾರ
ನಾನು ಹಿಂಸಕರ ಮಾರ್ಗಗಳಿಂದ ನನ್ನನ್ನು ದೂರವಾಗಿಟ್ಟುಕೊಂಡಿದ್ದೇನೆ.
ನನ್ನ ಹೆಜ್ಜೆಗಳು ಜಾರದ ಹಾಗೆ ನನ್ನ ನಡೆಗಳನ್ನು
ನಿಮ್ಮ ದಾರಿಯಲ್ಲಿ ಸ್ಥಿರಪಡಿಸಿಕೊಂಡಿದ್ದೇನೆ.
ದೇವರೇ, ನನ್ನ ಹೃದಯವು ಸ್ಥಿರವಾಗಿದೆ.
ಹೌದು, ನನ್ನ ಹೃದಯವು ಸ್ಥಿರವಾಗಿದೆ.
ನಾನು ಸಂಗೀತದೊಡನೆ ಹಾಡುವೆನು.
Guardar com a Palavra
Não vos conformeis com este mundo. A Palavra de Deus guardada no coração nos protege do pecado e nos direciona.
ಈ ಲೋಕದ ನಡುವಳಿಕೆಯನ್ನು ಹೊಂದಿಕೊಳ್ಳದೇ, ನಿಮ್ಮ ಮನಸ್ಸನ್ನು ರೂಪಾಂತರಿಸಿಕೊಂಡು ನವೀಕರಿಸಿಕೊಳ್ಳಿರಿ. ಆಗ ನೀವು ಉತ್ತಮವಾದ, ಮೆಚ್ಚುಗೆಯಾಗಿರುವಂಥ ಮತ್ತು ಪರಿಪೂರ್ಣವಾದ ದೇವರ ಚಿತ್ತ ಯಾವುದು ಎಂಬುದನ್ನು ತಿಳಿದುಕೊಳ್ಳುವಿರಿ.
ಈ ದೇವರ ನಿಯಮವು ನಿನ್ನ ಬಾಯಿಂದ ತೊಲಗಬಾರದು, ಅದರಲ್ಲಿ ಬರೆದಿರುವ ಪ್ರಕಾರವೇ ಕೈಗೊಂಡು ನಡೆಯುವ ಹಾಗೆ ಹಗಲುರಾತ್ರಿ ಅದನ್ನು ಧ್ಯಾನಿಸಬೇಕು. ಆಗ ನಿನ್ನ ಮಾರ್ಗವು ಸಮೃದ್ಧಿಯಾಗಿ ನೀನು ಜಯಶಾಲಿಯಾಗುವೆ.
ನನ್ನ ಪೂರ್ಣಹೃದಯದಿಂದ ನಿಮ್ಮನ್ನು ಹುಡುಕಿದ್ದೇನೆ;
ನಿಮ್ಮ ಆಜ್ಞೆಗಳಿಂದ ನಾನು ತಪ್ಪಿಹೋಗದಂತೆ ಮಾಡಿರಿ.
ನಿಮಗೆ ವಿರೋಧವಾಗಿ ಪಾಪಮಾಡದ ಹಾಗೆ
ನನ್ನ ಹೃದಯದಲ್ಲಿ ನಿಮ್ಮ ವಾಕ್ಯವನ್ನು ಬಚ್ಚಿಟ್ಟುಕೊಂಡಿದ್ದೇನೆ.
ನೀವು ನಿಮ್ಮ ದೇವರಾದ ಯೆಹೋವ ದೇವರನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ, ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು. ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಈ ಮಾತುಗಳು ನಿಮ್ಮ ಹೃದಯದಲ್ಲಿ ಇರಬೇಕು.
"ನಾನು ಈ ಹೊತ್ತು ನಿಮಗೆ ಸಾಕ್ಷಿಯಾಗಿ ಹೇಳುವ ಮಾತುಗಳನ್ನೆಲ್ಲಾ ಮನಸ್ಸಿನಲ್ಲಿಟ್ಟುಕೊಳ್ಳಿರಿ. ಈ ನಿಯಮದ ಮಾತುಗಳನ್ನು ಅನುಸರಿಸಬೇಕೆಂದು ನೀವು ನಿಮ್ಮ ಮಕ್ಕಳಿಗೆ ಆಜ್ಞಾಪಿಸಿರಿ.
Vigilância e paz
A paz de Deus guarda nossos corações em Cristo Jesus. Chegai-vos a Deus, purificai os corações — e Ele estará convosco.
ಯಾವ ವಿಷಯವಾಗಿಯೂ ಚಿಂತೆ ಮಾಡದೆ, ಸರ್ವ ವಿಷಯದಲ್ಲಿ ಕೃತಜ್ಞತಾಸ್ತುತಿಯೊಡನೆ ಪ್ರಾರ್ಥನೆ ವಿಜ್ಞಾಪನೆಗಳನ್ನು ಮಾಡುತ್ತಾ ನಿಮ್ಮ ಬೇಡಿಕೆಯನ್ನು ದೇವರಿಗೆ ಸಮರ್ಪಿಸಿರಿ. ಆಗ ಎಲ್ಲಾ ಗ್ರಹಿಕೆಯನ್ನೂ ಮೀರುವ ದೇವರ ಸಮಾಧಾನವು ನಿಮ್ಮ ಹೃದಯಗಳನ್ನೂ ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಯುವುದು.
ದೇವರ ಸಮೀಪಕ್ಕೆ ಬನ್ನಿರಿ. ಆಗ ನಿಮ್ಮ ಸಮೀಪಕ್ಕೆ ದೇವರು ಬರುವರು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ. ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲ ಮಾಡಿಕೊಳ್ಳಿರಿ.
ನೀವೂ ದೀರ್ಘಶಾಂತಿಯಿಂದಿರಿ. ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಿರಿ. ಏಕೆಂದರೆ ಕರ್ತ ಯೇಸುವಿನ ಪುನರಾಗಮನ ಹತ್ತಿರವಾಯಿತು.
ಕ್ರಿಸ್ತನೊಂದಿಗೆ ಜೀವನ
ನೀವು ಕ್ರಿಸ್ತನೊಂದಿಗೆ ಜೀವಂತವಾಗಿ ಎದ್ದವರಾಗಿದ್ದರೆ, ಮೇಲಿರುವವುಗಳನ್ನೇ ಹುಡುಕಿರಿ. ಅಲ್ಲಿ ಕ್ರಿಸ್ತ ಯೇಸು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾರೆ.