Homem de Deus
O homem de Deus é aquele que busca a justiça, a piedade, a fé e o amor. A Bíblia apresenta modelos de homens íntegros que andaram com Deus e marcaram a história.
Características do homem de Deus
O homem de Deus foge das paixões e segue a justiça, a piedade, a fé, o amor, a perseverança e a mansidão.
ವೈಯುಕ್ತಿಕ ಸಲಹೆಗಳು
ಎಲೈ, ದೇವರ ಮನುಷ್ಯನೇ, ನೀನಾದರೋ ಇವುಗಳಿಗೆ ದೂರವಾಗಿರು. ನೀತಿ, ಭಕ್ತಿ, ನಂಬಿಕೆ, ಪ್ರೀತಿ, ಸ್ಥಿರಚಿತ್ತ ಹಾಗೂ ಸಾತ್ವಿಕತ್ವ ಇವುಗಳನ್ನು ಸಂಪಾದಿಸುವುದಕ್ಕೆ ಪ್ರಯಾಸಪಡು.
ನಿನ್ನ ಯೌವನವನ್ನು ಅಸಡ್ಡೆಮಾಡುವುದಕ್ಕೆ ಯಾರಿಗೂ ಆಸ್ಪದಮಾಡಿಕೊಡದೆ, ನಂಬುವವರಿಗೆ ನಡೆ, ನುಡಿ, ಪ್ರೀತಿ, ನಂಬಿಕೆ, ಶುದ್ಧತ್ವ ಇವುಗಳ ವಿಷಯದಲ್ಲಿ ನೀನೇ ಮಾದರಿಯಾಗಿರು.
ಕೊನೆಯ ಮಾತುಗಳು
ಎಚ್ಚರವಾಗಿರಿ, ಕ್ರಿಸ್ತ ನಂಬಿಕೆಯಲ್ಲಿ ದೃಢವಾಗಿ ನಿಲ್ಲಿರಿ. ಧೈರ್ಯವಂತರಾಗಿರಿ, ಬಲಗೊಳ್ಳಿರಿ. ನೀವು ಮಾಡುವುದನ್ನೆಲ್ಲಾ ಪ್ರೀತಿಯಿಂದ ಮಾಡಿರಿ.
ಮನುಷ್ಯನೇ, ಒಳ್ಳೆಯದು ಇಂಥದ್ದೇ ಎಂದು ಯೆಹೋವನು ನಿನಗೆ ತೋರಿಸಿದ್ದಾನಲ್ಲವೇ.
ನ್ಯಾಯವನ್ನು ಆಚರಿಸುವುದು, ಕರುಣೆಯಲ್ಲಿ ಆಸಕ್ತನಾಗಿರುವುದು,
ನಿನ್ನ ದೇವರಿಗೆ ನಮ್ರವಾಗಿ ನಡೆದುಕೊಳ್ಳುವುದು ಇಷ್ಟನ್ನೇ ಹೊರತು
ಯೆಹೋವನು ನಿನ್ನಿಂದ ಇನ್ನೇನು ಅಪೇಕ್ಷಿಸುವನು?
Exemplos bíblicos
Noé era justo e íntegro entre seus contemporâneos. Jó era homem reto que temia a Deus e se desviava do mal.
ನೋಹನ ಚರಿತ್ರೆ
ನೋಹನ ಚರಿತ್ರೆ: ನೋಹನು ಸತ್ಯವಂತನೂ ಎಲ್ಲಾ ಜನರಲ್ಲಿ ನೀತಿವಂತನು ಆಗಿದ್ದನು; ಅವನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಂಡನು.
ಯೋಬನು ಮತ್ತು ಅವನ ಕುಟುಂಬ
ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ, ನಿರ್ದೋಷಿಯೂ, ಯಥಾರ್ಥಚಿತ್ತನೂ ಆಗಿದ್ದನು.
ದೇವರು ಕಳುಹಿಸಿದ ಒಬ್ಬ ಮನುಷ್ಯನು ಬಂದನು. ಅವನ ಹೆಸರು ಯೋಹಾನನು. ಆ ಯೋಹಾನನು ಸಾಕ್ಷಿಗಾಗಿ ಬಂದನು. ತನ್ನ ಮೂಲಕವಾಗಿ ಎಲ್ಲರೂ ನಂಬುವಂತೆ ಅವನು ಬೆಳಕಿನ ವಿಷಯದಲ್ಲಿ ಸಾಕ್ಷಿಕೊಡಲು ಬಂದನು.
ವಿವೇಕಿಗೆ ಜ್ಞಾನವೇ ಗುರಿಯಾಗಿರುವುದು,
ಮೂಢನ ದೃಷ್ಟಿಯು ದಿಗಂತಗಳಲ್ಲಿಯೂ ಅಲೆಯುವುದು.
Viver como filho de Deus
Quem faz a vontade de Deus é eleito. Medite na Palavra e ande nos caminhos do Senhor como verdadeiro discípulo.
ಆದರೂ ಯಾರಾರು ಆತನನ್ನು ಸ್ವೀಕರಿಸಿದರೋ, ಅಂದರೆ ಆತನ ಹೆಸರಿನಲ್ಲಿ ನಂಬಿಕೆಯಿಟ್ಟರೋ ಅವರಿಗೆ ದೇವರ ಮಕ್ಕಳಾಗುವ ಅಧಿಕಾರವನ್ನು ಆತನು ಕೊಟ್ಟನು. ಇವರು ರಕ್ತಸಂಬಂಧದಿಂದಾಗಲಿ, ಶರೀರದ ಇಚ್ಛೆಯಿಂದಾಗಲಿ, ಪುರುಷ ಸಂಕಲ್ಪದಿಂದಾಗಲಿ ಹುಟ್ಟಿದವರಲ್ಲ; ದೇವರಿಂದಲೇ ಹುಟ್ಟಿದವರು.
ಪಾಪಿಷ್ಠರ ಪ್ರಾರ್ಥನೆಯನ್ನು ದೇವರು ಕೇಳುವುದಿಲ್ಲ, ಆದರೆ ಯಾರು ಭಕ್ತರಾಗಿದ್ದು ಆತನ ಚಿತ್ತದಂತೆ ನಡೆಯುತ್ತಾರೋ ಅವರ ಪ್ರಾರ್ಥನೆಯನ್ನು ಕೇಳುತ್ತಾನೆಂದು ಬಲ್ಲೆವು.
ಉಪದೇಶಯುಕ್ತವಾದ ಯೆಹೋವನ ಕಟ್ಟಳೆಗಳು
ಯೌವನಸ್ಥನು ತನ್ನ ನಡತೆಯನ್ನು ಶುದ್ಧಪಡಿಸಿಕೊಳ್ಳುವುದು ಯಾವುದರಿಂದ?
ನಿನ್ನ ವಾಕ್ಯವನ್ನು ಗಮನಿಸಿ ನಡೆಯುವುದರಿಂದಲೇ.
ನಾನು ಪೂರ್ಣಮನಸ್ಸಿನಿಂದ ನಿನ್ನನ್ನು ಹುಡುಕುತ್ತೇನೆ,
ನಿನ್ನ ಆಜ್ಞೆಗಳಿಗೆ ತಪ್ಪಿಹೋಗದಂತೆ ನನ್ನನ್ನು ಕಾಪಾಡು.
ನಿನಗೆ ವಿರುದ್ಧವಾಗಿ ಪಾಪಮಾಡದಂತೆ,
ನಿನ್ನ ನುಡಿಗಳನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡಿದ್ದೇನೆ.
ಸ್ತುತಿಪಾತ್ರನಾದ ಯೆಹೋವನೇ,
ನಿನ್ನ ನಿಬಂಧನೆಗಳನ್ನು ನನಗೆ ಕಲಿಸು.
ನಿನ್ನ ಎಲ್ಲಾ ಉಪದೇಶಾಜ್ಞೆಗಳನ್ನು,
ನನ್ನ ತುಟಿಗಳು ವರ್ಣಿಸುತ್ತವೆ.
ಸರ್ವಸಂಪತ್ತಿನಲ್ಲಿ ಹೇಗೋ,
ಹಾಗೆಯೇ ನಿನ್ನ ಕಟ್ಟಳೆಯ ಮಾರ್ಗದಲ್ಲಿ ಆನಂದಿಸುತ್ತೇನೆ.
ನಿನ್ನ ನಿಯಮಗಳನ್ನು ಧ್ಯಾನಿಸುತ್ತಾ,
ನಿನ್ನ ದಾರಿಯನ್ನು ಲಕ್ಷಿಸುವೆನು.
ನಿನ್ನ ನಿಬಂಧನೆಗಳಲ್ಲಿ ಉಲ್ಲಾಸಪಡುವೆನು,
ನಿನ್ನ ವಾಕ್ಯವನ್ನು ಮರೆಯುವುದಿಲ್ಲ.
ಗಿಮೆಲ್.
ಸನ್ಮಾರ್ಗಸ್ಥರು ಮತ್ತು ದುರ್ಮಾರ್ಗಸ್ಥರು
ಯಾರು ದುಷ್ಟರ ಆಲೋಚನೆಯಂತೆ ನಡೆಯದೆ,
ಪಾಪಾತ್ಮರ ಮಾರ್ಗದಲ್ಲಿ ನಿಂತುಕೊಳ್ಳದೆ,
ಧರ್ಮನಿಂದಕರೊಡನೆ ಕುಳಿತುಕೊಳ್ಳದೆ,
ಯೆಹೋವನ ಧರ್ಮಶಾಸ್ತ್ರದಲ್ಲಿ ಸಂತೋಷಿಸುತ್ತಾ,
ಅದನ್ನೇ ಹಗಲಿರುಳು ಧ್ಯಾನಿಸುತ್ತಿರುವವನು ಎಷ್ಟೋ ಧನ್ಯನು.
ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗೆ ಅವನಿರುವನು.
ಅಂಥ ಮರವು ಸೂಕ್ತಕಾಲದಲ್ಲಿ ಫಲಕೊಡುತ್ತದಲ್ಲಾ.
ಅದರ ಎಲೆ ಬಾಡುವುದೇ ಇಲ್ಲ.
ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವುದು.
ದುಷ್ಟರೋ ಹಾಗಲ್ಲ;
ಅವರು ಗಾಳಿ ಬಡಿದುಕೊಂಡು ಹೋಗುವ ಹೊಟ್ಟಿನಂತೆ ಇದ್ದಾರೆ.
ಆದುದರಿಂದ ದುಷ್ಟರು ನ್ಯಾಯವಿಚಾರಣೆಯಲ್ಲಿಯೂ,
ಪಾಪಾತ್ಮರು ನೀತಿವಂತರ ಸಭೆಯಲ್ಲಿಯೂ ನಿಲ್ಲುವುದಿಲ್ಲ.
ಯೆಹೋವನು ನೀತಿವಂತರ ಮಾರ್ಗವನ್ನು ಲಕ್ಷಿಸುವನು;
ದುಷ್ಟರ ಮಾರ್ಗವೋ ನಾಶವಾಗುವುದು.
ಯೇಸುವಿನಲ್ಲಿರುವ ಸತ್ಯೋಪದೇಶವು ಯಾವುದೆಂದರೆ ನೀವು ನಿಮ್ಮ ಹಿಂದಿನ ನಡತೆಯನ್ನು ಅನುಸರಿಸದೇ ಪೂರ್ವಸ್ವಭಾವವನ್ನು ತೆಗೆದುಹಾಕಿಬಿಡಬೇಕು. ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟುಹೋಗುವಂಥದ್ದು. ನೀವು ನಿಮ್ಮ ಹೃನ್ಮನಗಳನ್ನು ನವೀಕರಿಸಿ, ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ. ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ಸತ್ಯಕ್ಕನುಗುಣವಾಗಿ ನೀತಿಯುಳ್ಳದ್ದಾಗಿಯೂ, ಪರಿಶುದ್ಧತೆಯುಳ್ಳದ್ದಾಗಿಯೂ ನಿರ್ಮಿಸಲ್ಪಟ್ಟಿದೆ.