Homem
A Bíblia fala sobre o homem como criação de Deus — feito à sua imagem e semelhança, mas também frágil, mortal e necessitado de redenção.
Criado à imagem de Deus
Deus criou o homem à sua imagem. Mas pelo pecado, o homem caiu e passou a depender da graça para ser restaurado.
ಆಮೇಲೆ ದೇವರು, ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯರನ್ನು ಉಂಟು ಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ, ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ, ಪ್ರಾಣಿಗಳ ಮೇಲೆಯೂ, ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಕೀಟಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ದೊರೆತನಮಾಡಲಿ ಅಂದನು. ಹೀಗೆ ದೇವರು;
"ಮನುಷ್ಯನನ್ನು ತನ್ನ ಸ್ವರೂಪದಲ್ಲಿ
ಉಂಟುಮಾಡಿದನು.
ದೇವರ ಸ್ವರೂಪದಲ್ಲಿ ಅವನನ್ನು
ಉಂಟುಮಾಡಿದನು.
ಅವರನ್ನು ಗಂಡುಹೆಣ್ಣಾಗಿ ಸೃಷ್ಟಿ ಮಾಡಿದನು."
ತರುವಾಯ ಯೆಹೋವನಾದ ದೇವರು ಸಂಜೆಯ ತಂಗಾಳಿಯಲ್ಲಿ ತೋಟದೊಳಗೆ ಸಂಚರಿಸುತ್ತಿರುವಾಗ ಆ ಮನುಷ್ಯನು ಮತ್ತು ಸ್ತ್ರೀಯು ಆತನ ಸಪ್ಪಳವನ್ನು ಕೇಳಿ ಆತನಿಗೆ ಕಾಣಿಸಬಾರದೆಂದು ತೋಟದ ಮರಗಳ ಹಿಂದೆ ಅಡಗಿಕೊಂಡರು.
ಆದಾಮನಿಂದ ಎಲ್ಲರಿಗೂ ಮರಣವಾದಂತೆ ಕ್ರಿಸ್ತನನ್ನು ನಂಬಿದವರೆಲ್ಲರಿಗೂ ರಕ್ಷಣೆಯಾಗುವುದು
ಈ ವಿಷಯ ಹೇಗೆಂದರೆ ಒಬ್ಬ ಮನುಷ್ಯನಾದ ಆದಾಮನಿಂದಲೇ ಪಾಪವೂ ಲೋಕದೊಳಗೆ ಪ್ರವೇಶಿಸಿತು ಮತ್ತು ಮರಣವು ಪಾಪದ ನಿಮಿತ್ತ, ಹಾಗು, ಮರಣವು ಎಲ್ಲರು ಪಾಪಮಾಡಿದ್ದರಿಂದ ಎಲ್ಲರಿಗೂ ಪ್ರಾಪ್ತಿಯಾಯಿತು.
"ಮೊದಲನೆಯ ಮನುಷ್ಯನಾದ ಆದಾಮನು ಜೀವ ಪಡೆದ ವ್ಯಕ್ತಿ" ಎಂಬುದಾಗಿ ಪವಿತ್ರ ಗ್ರಂಥದಲ್ಲಿ ಬರೆದದೆಯಲ್ಲಾ. ಕಡೆ ಆದಾಮನಾದರೋ ಜೀವ ಕೊಡುವ ಆತ್ಮನಾದನು. ಆತ್ಮೀಕವಾದದ್ದು ಮೊದಲು ಬಂದದ್ದಲ್ಲಾ, ಪ್ರಾಕೃತವಾದದ್ದು ಮೊದಲನೆಯದು; ಅನಂತರ ಆತ್ಮೀಕವಾದದ್ದು. ಮೊದಲನೆಯ ಮನುಷ್ಯನು ಮಣ್ಣಿನಿಂದ ಮಾಡಲ್ಪಟ್ಟವನು; ಭೂಮಿಗೆ ಸೇರಿದವನು, ಎರಡನೆಯ ಮನುಷ್ಯನು ಪರಲೋಕದಿಂದ ಬಂದವನು. ಮಣ್ಣಿನಿಂದ ಹುಟ್ಟಿದವನು ಎಂಥವನೋ ಮಣ್ಣಿಗೆ ಸಂಬಂಧಪಟ್ಟವರೂ ಅಂಥವರೇ ಆಗಿರುತ್ತಾರೆ; ಪರಲೋಕದಿಂದ ಬಂದಾತನು ಎಂಥವನೋ ಪರಲೋಕಕ್ಕೆ ಸಂಬಂಧಪಟ್ಟವರೂ ಅಂಥವರೇ. ನಾವು ಮಣ್ಣಿನಿಂದ ಹುಟ್ಟಿದವನ ಸಾರೂಪ್ಯವನ್ನು ಧರಿಸಿಕೊಂಡಿರುವ ಪ್ರಕಾರ ಪರಲೋಕದಿಂದ ಬಂದಾತನ ಸಾರೂಪ್ಯವನ್ನೂ ಧರಿಸಿಕೊಳ್ಳಬೇಕು.
Fragilidade humana
O homem nascido de mulher é de poucos dias e cheio de inquietação. Deus conhece nossa fragilidade e cuida de nós.
ಯೋಬನು ದೇವರೊಂದಿಗೆ ಪ್ರಾರ್ಥಿಸಿದ್ದು
"ಮಾನವ ಜನ್ಮ ಪಡೆದವನು,
ಅಲ್ಪಾಯುಷ್ಯನಾಗಿಯೂ, ಕಳವಳದಿಂದ ತುಂಬಿದವನಾಗಿಯೂ ಇರುವನು.
ಅದೇನೆಂದರೆ, "ಮನುಷ್ಯನು ದೇವರ ದೃಷ್ಟಿಯಲ್ಲಿ ನೀತಿವಂತನಾದಾನೇ?
ಮಾನವನು ಸೃಷ್ಟಿಕರ್ತನ ಸನ್ನಿಧಿಯಲ್ಲಿ ಪರಿಶುದ್ಧನಾಗಿರಬಹುದೇ?
ಮಾನವನು ಎಷ್ಟರವನು, ಅವನನ್ನು ನೀನು ಏಕೆ ಲಕ್ಷಿಸಬೇಕು?
ಅವನಲ್ಲಿ ಏಕೆ ಮನಸ್ಸಿಡಬೇಕು?
"ಮನುಷ್ಯನು ಎಷ್ಟು ಮಾತ್ರದವನು, ಅವನನ್ನು ನೀನು ಯಾಕೆ ನೆನಪಿಸಿಕೊಳ್ಳಬೇಕು?
ಮಾನವನು ಎಷ್ಟರವನು, ಅವನಲ್ಲಿ ಯಾಕೆ ಲಕ್ಷ್ಯವಿಡಬೇಕು?
ಮನುಷ್ಯನಿಗೆ ಗತಿಯನ್ನು ಏರ್ಪಡಿಸುವವನು ಯೆಹೋವನೇ ಆಗಿರುವಲ್ಲಿ,
ಮನುಷ್ಯನು ತನ್ನ ಮಾರ್ಗವನ್ನು ಹೇಗೆ ತಿಳಿದುಕೊಂಡಾನು?
Renovação e chamado
Despojados do velho homem e revestidos do novo, somos chamados a buscar a justiça, a piedade e o amor.
ಯೇಸುವಿನಲ್ಲಿರುವ ಸತ್ಯೋಪದೇಶವು ಯಾವುದೆಂದರೆ ನೀವು ನಿಮ್ಮ ಹಿಂದಿನ ನಡತೆಯನ್ನು ಅನುಸರಿಸದೇ ಪೂರ್ವಸ್ವಭಾವವನ್ನು ತೆಗೆದುಹಾಕಿಬಿಡಬೇಕು. ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟುಹೋಗುವಂಥದ್ದು. ನೀವು ನಿಮ್ಮ ಹೃನ್ಮನಗಳನ್ನು ನವೀಕರಿಸಿ, ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ. ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ಸತ್ಯಕ್ಕನುಗುಣವಾಗಿ ನೀತಿಯುಳ್ಳದ್ದಾಗಿಯೂ, ಪರಿಶುದ್ಧತೆಯುಳ್ಳದ್ದಾಗಿಯೂ ನಿರ್ಮಿಸಲ್ಪಟ್ಟಿದೆ.
ಆತನು ಸಮಾಧಾನವನ್ನುಂಟು ಮಾಡುವವನಾಗಿ, ಉಭಯರನ್ನೂ ತನ್ನಲ್ಲಿ ಒಂದುಗೂಡಿಸಿ ನೂತನ ಮಾನವನನ್ನಾಗಿ ನಿರ್ಮಿಸಿದ್ದಾನೆ.
ವೈಯುಕ್ತಿಕ ಸಲಹೆಗಳು
ಎಲೈ, ದೇವರ ಮನುಷ್ಯನೇ, ನೀನಾದರೋ ಇವುಗಳಿಗೆ ದೂರವಾಗಿರು. ನೀತಿ, ಭಕ್ತಿ, ನಂಬಿಕೆ, ಪ್ರೀತಿ, ಸ್ಥಿರಚಿತ್ತ ಹಾಗೂ ಸಾತ್ವಿಕತ್ವ ಇವುಗಳನ್ನು ಸಂಪಾದಿಸುವುದಕ್ಕೆ ಪ್ರಯಾಸಪಡು.
ನಾನು ಬಾಲಕನಾಗಿದ್ದಾಗ ಬಾಲಕನ ರೀತಿಯಲ್ಲಿ ಮಾತನಾಡಿದೆನು. ಬಾಲಕನ ಹಾಗೆ ಯೋಚಿಸಿದೆನು. ಬಾಲಕನಂತೆ ವಿವೇಚಿಸಿದೆನು. ಪ್ರಾಯಸ್ಥನಾದ ಮೇಲೆ ಬಾಲ್ಯದವುಗಳನ್ನು ಬಿಟ್ಟುಬಿಟ್ಟೆನು.
ಮನುಷ್ಯನ ಮಾರ್ಗಗಳು ಯೆಹೋವನಿಗೆ ಕಾಣುತ್ತಲೇ ಇವೆ,
ಆತನು ಮನುಷ್ಯನ ನಡತೆಯನ್ನೆಲ್ಲಾ ಪರೀಕ್ಷಿಸುವವನಾಗಿದ್ದಾನೆ.
ಹೃದಯದ ಸಂಕಲ್ಪವು ಮನುಷ್ಯನ ವಶವು,
ತಕ್ಕ ಉತ್ತರಕೊಡುವ ಶಕ್ತಿಯು ಯೆಹೋವನಿಂದಾಗುವುದು.
A confiança errada
Maldito o homem que confia no homem. O homem de duplo ânimo é instável em todos os seus caminhos.
ದೇವರನ್ನು ನಂಬುವವರಿಗೂ ಮನುಷ್ಯರನ್ನು ನಂಬುವವರಿಗೂ ಇರುವ ವ್ಯತ್ಯಾಸ
ಯೆಹೋವನು ಹೀಗೆನ್ನುತ್ತಾನೆ, "ಮಾನವ ಮಾತ್ರದವರಲ್ಲಿ ಭರವಸವಿಟ್ಟು, ನರಜನ್ಮದವರನ್ನು ತನ್ನ ಭುಜಬಲವೆಂದು ತಿಳಿದು,
ಯೆಹೋವನನ್ನು ತೊರೆಯುವ ಮನಸ್ಸುಳ್ಳವನು ಶಾಪಗ್ರಸ್ಥನು.
ಇಂಥವನು ತಾನು ಕರ್ತನಿಂದ ಬೇಡಿಕೊಂಡಿದ್ದೆಲ್ಲವನ್ನು ಹೊಂದುವೆನೆಂದು ಭಾವಿಸದೆ ಇರಲಿ. ಏಕೆಂದರೆ ಅವನು ಎರಡು ಮನಸ್ಸುಳ್ಳವನು, ತನ್ನ ನಡತೆಯಲ್ಲಿ ಚಂಚಲನಾಗಿದ್ದಾನೆ.
ವಿಶ್ವಾಸಿಗಳೊಂದಿಗಿನ ಕರ್ತವ್ಯಗಳು
ವೃದ್ಧರನ್ನು ಗದರಿಸದೆ ತಂದೆಯೆಂದು ಭಾವಿಸಿ ಬುದ್ಧಿಹೇಳು. ಯೌವನಸ್ಥರನ್ನು ಅಣ್ಣತಮ್ಮಂದಿರೆಂದೂ,