Honrar os pais
Honrar pai e mãe é mandamento de Deus com promessa de vida longa e feliz. A Bíblia ensina que respeitar, obedecer e cuidar dos pais é dever sagrado dos filhos.
O mandamento com promessa
Honra a teu pai e a tua mãe para que vá bem contigo e vivas muito tempo sobre a terra. É o primeiro mandamento com promessa.
"ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು, ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಬದುಕುವಿ.
"ನಿನ್ನ ದೇವರಾದ ಯೆಹೋವನು ಆಜ್ಞಾಪಿಸಿದಂತೆ ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು; ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಕ್ಷೇಮವಾಗಿ ಇರುವಿ, ಮತ್ತು ನಿನಗೆ ಒಳ್ಳೆಯದಾಗುವುದು.
ವಾಗ್ದಾನಸಹಿತವಾದ ಮೊದಲನೆಯ ಆಜ್ಞೆಯನ್ನು ಕೇಳಿರಿ, "ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು, ಗೌರವಿಸಿದರೆ ನಿನಗೆ ಶುಭವಾಗುವುದು, ನೀನು ಭೂಮಿಯ ಮೇಲೆ ಬಹುಕಾಲ ಬದುಕುವಿ."
ತಂದೆತಾಯಿಗಳೂ ಮಕ್ಕಳೂ
ಮಕ್ಕಳೇ, ನೀವು ಕರ್ತನಲ್ಲಿರುವವರಿಗೆ ತಕ್ಕ ಹಾಗೆ ನಿಮ್ಮ ತಂದೆತಾಯಿಗಳ ವಿಧೇಯರಾಗಿರಿ. ಇದು ನ್ಯಾಯವಾದದ್ದು. ವಾಗ್ದಾನಸಹಿತವಾದ ಮೊದಲನೆಯ ಆಜ್ಞೆಯನ್ನು ಕೇಳಿರಿ, "ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು, ಗೌರವಿಸಿದರೆ ನಿನಗೆ ಶುಭವಾಗುವುದು, ನೀನು ಭೂಮಿಯ ಮೇಲೆ ಬಹುಕಾಲ ಬದುಕುವಿ."
ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ, ಕರ್ತನಿಗೆ ಮೆಚ್ಚಿಗೆಯಾಗುವ ರೀತಿಯಲ್ಲಿ ಅವರನ್ನು ಶಿಸ್ತಿನಲ್ಲಿಯೂ ಉಪದೇಶದಲ್ಲಿಯೂ ಸಾಕಿ ಸಲಹಿರಿ.
ಮಕ್ಕಳೇ, ಎಲ್ಲಾ ವಿಷಯಗಳಲ್ಲಿ ನಿಮ್ಮ ತಂದೆತಾಯಿಗಳಿಗೆ ವಿಧೇಯರಾಗಿರಿ, ಯಾಕೆಂದರೆ ಇದು ಕರ್ತನ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿದೆ.
Obedecer e respeitar
Filhos, obedecei a vossos pais no Senhor. Ouvir a instrução do pai e não desprezar o ensino da mãe traz sabedoria.
ಪಾಪಿಗಳ ಕುರಿತು ಎಚ್ಚರಿಕೆಗಳು
ಮಗನೇ, ನಿನ್ನ ತಂದೆಯ ಉಪದೇಶವನ್ನು ಕೇಳು,
ನಿನ್ನ ತಾಯಿಯ ಬೋಧನೆಯನ್ನು ತೊರೆಯಬೇಡ.
ಪಾಪಿಗಳ ಕುರಿತು ಎಚ್ಚರಿಕೆಗಳು
ಮಗನೇ, ನಿನ್ನ ತಂದೆಯ ಉಪದೇಶವನ್ನು ಕೇಳು,
ನಿನ್ನ ತಾಯಿಯ ಬೋಧನೆಯನ್ನು ತೊರೆಯಬೇಡ.
ಅವು ನಿನ್ನ ತಲೆಗೆ ಸುಂದರವಾದ ಪುಷ್ಪಕಿರೀಟ,
ಕೊರಳಿಗೆ ಹಾರದಂತಿರುವುದು.
ಜ್ಞಾನವು ಪರಮೋನ್ನತವಾದದ್ದು
ಮಕ್ಕಳೇ, ತಂದೆಯ ಉಪದೇಶವನ್ನು ಕೇಳಿರಿ,
ವಿವೇಕವನ್ನು ಗ್ರಹಿಸುವಂತೆ ಕಿವಿಗೊಡಿರಿ.
ಜ್ಞಾನಿಯಾದ ಮಗನು ತಂದೆಯ ನೀತಿ ಶಿಕ್ಷಣವನ್ನು ಕೇಳುವನು,
ಧರ್ಮನಿಂದಕನೋ ಗದರಿಕೆಯನ್ನು ಕೇಳನು.
ಹೆತ್ತ ತಂದೆಯ ಮಾತಿಗೆ ಕಿವಿಗೊಡು,
ಮುಪ್ಪಿನಲ್ಲಿಯೂ ತಾಯಿಯನ್ನು ಅಸಡ್ಡೆಮಾಡಬೇಡ.
ಅದಕ್ಕೆ ಆತನು ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, "ನೀವು ಸಹ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ಏಕೆ ಉಲ್ಲಂಘಿಸುತ್ತೀರಿ? ಹೇಗೆಂದರೆ ‘ತಂದೆತಾಯಿಗಳನ್ನು ಸನ್ಮಾನಿಸಬೇಕೆಂತಲೂ ತಂದೆಯನ್ನಾಗಲಿ ತಾಯಿಯನ್ನಾಗಲಿ ದೂಷಿಸುವವನು ಸಾಯಲೇಬೇಕೆಂತಲೂ’ ದೇವರು ಹೇಳಿದ್ದಾನೆ.
ಅದಕ್ಕೆ ಆತನು ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, "ನೀವು ಸಹ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ಏಕೆ ಉಲ್ಲಂಘಿಸುತ್ತೀರಿ? ಹೇಗೆಂದರೆ ‘ತಂದೆತಾಯಿಗಳನ್ನು ಸನ್ಮಾನಿಸಬೇಕೆಂತಲೂ ತಂದೆಯನ್ನಾಗಲಿ ತಾಯಿಯನ್ನಾಗಲಿ ದೂಷಿಸುವವನು ಸಾಯಲೇಬೇಕೆಂತಲೂ’ ದೇವರು ಹೇಳಿದ್ದಾನೆ. ನೀವೋ, ‘ಯಾವನಾದರೂ ತನ್ನ ತಂದೆಯನಾಗಲಿ, ತಾಯಿಯನ್ನಾಗಲಿ, ನೋಡಿ ನಾನು ನಿಮ್ಮ ಸಂರಕ್ಷಣೆಗಾಗಿ ಕೊಡತಕ್ಕದ್ದನ್ನು ದೇವರಿಗೆ ಮುಡಿಪುಮಾಡಿದ್ದೇನೆ’ ಎಂದು ಹೇಳಿದರೆ, ಅವನು ‘ತನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕಾಗಿಲ್ಲ’ ಅನ್ನುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ಸಲುವಾಗಿ ದೇವರ ವಾಕ್ಯವನ್ನು ನಿರರ್ಥಕ ಮಾಡಿದ್ದೀರಿ.
Consequências da desonra
A Bíblia adverte severamente contra a desonra aos pais. Quem amaldiçoa ou agride os pais enfrenta consequências sérias.
ತಂದೆಯನ್ನು ಹೊಡೆದು, ತಾಯಿಯನ್ನು ಓಡಿಸುವ ಮಗನು,
ನಾಚಿಕೆಯನ್ನು ಮತ್ತು ಅವಮಾನವನ್ನು ಉಂಟುಮಾಡುವನು.
ತಂದೆಯನ್ನಾಗಲಿ ಅಥವಾ ತಾಯಿಯನ್ನಾಗಲಿ ಶಪಿಸುವವನ ದೀಪವು,
ಮಧ್ಯರಾತ್ರಿಯ ಅಂಧಕಾರದಲ್ಲಿ ಆರಿಹೋಗುವುದು.
ತಂದೆಯನ್ನು ಹಾಸ್ಯಮಾಡಿ ತಾಯಿಯ ಅಪ್ಪಣೆಯನ್ನು,
ಧಿಕ್ಕರಿಸುವವನ ಕಣ್ಣನ್ನು,
ಹಳ್ಳಕೊಳ್ಳದ ಕಾಗೆಗಳು ಕುಕ್ಕುವವು, ರಣಹದ್ದುಗಳು ತಿಂದುಬಿಡುವವು.
ತಂದೆಯನ್ನಾಗಲಿ ತಾಯಿಯನ್ನಾಗಲಿ ಶಪಿಸುವವನಿಗೆ ಮರಣಶಿಕ್ಷೆಯಾಗಬೇಕು.
ಅಂತ್ಯ ದಿನಗಳು
ಆದರೆ ಕಡೆ ದಿನಗಳಲ್ಲಿ ಕಠಿಣಕಾಲಗಳು ಬರುವವೆಂಬುದನ್ನು ತಿಳಿದುಕೋ. ಮನುಷ್ಯರು ಸ್ವಾರ್ಥಚಿಂತಕರೂ, ಹಣದಾಸೆಯವರೂ, ಬಡಾಯಿಕೊಚ್ಚುವವರೂ, ಅಹಂಕಾರಿಗಳೂ, ದೂಷಕರೂ, ತಂದೆತಾಯಿಗಳಿಗೆ ಅವಿಧೇಯರೂ, ಉಪಕಾರ ನೆನಸದವರೂ, ದೇವಭಯವಿಲ್ಲದವರೂ, ಮಮತೆಯಿಲ್ಲದವರೂ, ಸಮಾಧಾನಹೊಂದದವರೂ, ಚಾಡಿಹೇಳುವವರೂ, ದಮೆಯಿಲ್ಲದವರೂ, ಕ್ರೂರರೂ, ಒಳ್ಳೆಯದನ್ನು ದ್ವೇಷಿಸುವವರೂ,
Cuidar dos pais
Quem não cuida dos seus, principalmente de sua família, negou a fé. Honrar os pais inclui respeitar os idosos.
ದಿಕ್ಕಿಲ್ಲದ ವಿಧವೆಯರನ್ನು ಸಂರಕ್ಷಿಸು. ಆದರೆ ಒಬ್ಬ ವಿಧವೆಗೆ ಮಕ್ಕಳಾಗಲಿ ಮೊಮ್ಮಕ್ಕಳಾಗಲಿ ಇದ್ದರೆ ಅವರೇ ಮೊದಲು ತಮ್ಮ ಮನೆಯವರಿಗೆ ಭಕ್ತಿತೋರಿಸುವುದಕ್ಕೂ ತಂದೆತಾಯಿಗಳಿಗೆ ಪ್ರತ್ಯುಪಕಾರ ಮಾಡುವುದಕ್ಕೂ ಕಲಿತುಕೊಳ್ಳಲಿ. ಇದು ದೇವರ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿದೆ.
ಯಾವನಾದರೂ ಸ್ವಂತ ಜನರನ್ನು, ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ಕ್ರಿಸ್ತ ನಂಬಿಕೆಯನ್ನು ತಿರಸ್ಕರಿಸಿದವನೂ ನಂಬದವನಿಗಿಂತ ಕೀಳಾದವನೂ ಆಗಿದ್ದಾನೆ.
"‘ಪ್ರತಿಯೊಬ್ಬನು ತನ್ನ ತಾಯಿತಂದೆಗಳ ವಿಷಯದಲ್ಲಿ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ಆಚರಿಸಬೇಕು. ನಾನು ನಿಮ್ಮ ದೇವರಾದ ಯೆಹೋವನು.
"‘ವಯೋ ವೃದ್ಧರ ಮುಂದೆ ಎದ್ದು ನಿಂತು ಅವರನ್ನು ಸನ್ಮಾನಿಸಬೇಕು. ನಿಮ್ಮ ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು; ನಾನು ಯೆಹೋವನು.