Honrar os pais
Honrar pai e mãe é mandamento de Deus com promessa de vida longa e feliz. A Bíblia ensina que respeitar, obedecer e cuidar dos pais é dever sagrado dos filhos.
O mandamento com promessa
Honra a teu pai e a tua mãe para que vá bem contigo e vivas muito tempo sobre a terra. É o primeiro mandamento com promessa.
ನಿನ್ನ ದೇವರಾದ ಯೆಹೋವ ದೇವರು ನಿನಗೆ ಕೊಡುವ ದೇಶದಲ್ಲಿ ನೀನು ಬಹುಕಾಲ ಬಾಳುವಂತೆ ನಿನ್ನ ತಂದೆತಾಯಿಗಳನ್ನು ಗೌರವಿಸು.
ನಿನ್ನ ದಿವಸಗಳು ಹೆಚ್ಚಾಗುವ ಹಾಗೆಯೂ, ನಿನ್ನ ದೇವರಾದ ಯೆಹೋವ ದೇವರು ನಿನಗೆ ಕೊಡುವ ದೇಶದಲ್ಲಿ ನಿನಗೆ ಒಳ್ಳೆಯದಾಗುವ ಹಾಗೆಯೂ, ನಿನ್ನ ದೇವರಾದ ಯೆಹೋವ ದೇವರು ಆಜ್ಞಾಪಿಸಿದಂತೆ ನಿನ್ನ ತಂದೆಯನ್ನೂ, ನಿನ್ನ ತಾಯಿಯನ್ನೂ ಗೌರವಿಸು.
"ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು," ಎಂಬುದು ವಾಗ್ದಾನ ಸಹಿತವಾದ ಮೊದಲನೆಯ ಆಜ್ಞೆಯಾಗಿದೆ. "ಸನ್ಮಾನಿಸಿದರೆ ನಿನಗೆ ಶುಭವಾಗುವುದು. ನೀನು ಭೂಮಿಯ ಮೇಲೆ ಬಹುಕಾಲ ಬದುಕುವೆ."
ಮಕ್ಕಳೇ, ನೀವು ಕರ್ತನಲ್ಲಿ ನಿಮ್ಮ ತಂದೆತಾಯಿಗಳಿಗೆ ವಿಧೇಯರಾಗಿರಿ, ಇದು ಸೂಕ್ತವಾದದ್ದು. "ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು," ಎಂಬುದು ವಾಗ್ದಾನ ಸಹಿತವಾದ ಮೊದಲನೆಯ ಆಜ್ಞೆಯಾಗಿದೆ. "ಸನ್ಮಾನಿಸಿದರೆ ನಿನಗೆ ಶುಭವಾಗುವುದು. ನೀನು ಭೂಮಿಯ ಮೇಲೆ ಬಹುಕಾಲ ಬದುಕುವೆ."
ತಂದೆಗಳೇ, ನಿಮ್ಮ ಮಕ್ಕಳನ್ನು ಸಿಟ್ಟಿಗೆಬ್ಬಿಸಬೇಡಿರಿ; ಕರ್ತನ ಶಿಸ್ತಿನಲ್ಲಿಯೂ ಉಪದೇಶದಲ್ಲಿಯೂ ಮಕ್ಕಳನ್ನು ಬೆಳೆಸಿರಿ.
ಮಕ್ಕಳೇ, ಎಲ್ಲಾ ವಿಧಗಳಲ್ಲಿ ನಿಮ್ಮ ತಂದೆತಾಯಿಗಳಿಗೆ ವಿಧೇಯರಾಗಿರಿ. ಏಕೆಂದರೆ ಇದು ಕರ್ತ ಯೇಸುವಿಗೆ ಬಹು ಮೆಚ್ಚಿಕೆಯಾಗಿದೆ.
Obedecer e respeitar
Filhos, obedecei a vossos pais no Senhor. Ouvir a instrução do pai e não desprezar o ensino da mãe traz sabedoria.
ಪಾಪ ಸಂಬಧಿತ ಎಚ್ಚರಿಕೆ
ಮಗನೇ, ನಿನ್ನ ತಂದೆಯ ಶಿಕ್ಷಣಗಳನ್ನು ಕೇಳು,
ನಿನ್ನ ತಾಯಿಯ ಉಪದೇಶವನ್ನು ತೊರೆಯಬೇಡ.
ಪಾಪ ಸಂಬಧಿತ ಎಚ್ಚರಿಕೆ
ಮಗನೇ, ನಿನ್ನ ತಂದೆಯ ಶಿಕ್ಷಣಗಳನ್ನು ಕೇಳು,
ನಿನ್ನ ತಾಯಿಯ ಉಪದೇಶವನ್ನು ತೊರೆಯಬೇಡ.
ಅವು ನಿನ್ನ ತಲೆಗೆ ಸುಂದರ ಕಿರೀಟ
ನಿನ್ನ ಕೊರಳನ್ನು ಅಲಂಕರಿಸುವ ಹಾರ.
ಹೇಗಾದರೂ ಜ್ಞಾನವನ್ನು ಪಡೆಯಿರಿ
ಮಕ್ಕಳೇ, ತಂದೆಯ ಶಿಕ್ಷಣವನ್ನು ಕೇಳಿರಿ;
ತಿಳುವಳಿಕೆಯನ್ನು ಗ್ರಹಿಸಲಿಕ್ಕೆ ಗಮನಕೊಡಿರಿ.
ಜ್ಞಾನಿಯಾದ ಮಗನು ತನ್ನ ತಂದೆಯ ಉಪದೇಶವನ್ನು ಸ್ವೀಕರಿಸುತ್ತಾನೆ;
ಆದರೆ ಅಪಹಾಸ್ಯ ಮಾಡುವವನು ಗದರಿಕೆಯನ್ನು ಕೇಳುವುದಿಲ್ಲ.
ಹದಿನೇಳನೆಯ ಹೇಳಿಕೆ
ನಿನ್ನನ್ನು ಹೆತ್ತ ತಂದೆಯ ಮಾತಿಗೆ ಕಿವಿಗೊಡು,
ನಿನ್ನ ತಾಯಿ ಮುಪ್ಪಿನವಳಾದಾಗ ಆಕೆಯನ್ನು ಅಸಡ್ಡೆ ಮಾಡಬೇಡ.
ಅದಕ್ಕೆ ಯೇಸು ಪ್ರತ್ಯುತ್ತರವಾಗಿ, "ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ನೀವು ದೇವರ ಆಜ್ಞೆಯನ್ನು ಏಕೆ ಮೀರುತ್ತೀರಿ? ‘ನಿಮ್ಮ ತಂದೆತಾಯಿಗಳನ್ನು ಸನ್ಮಾನಿಸಬೇಕು,’ ಎಂದೂ ‘ತಂದೆತಾಯಿಗಳನ್ನು ದೂಷಿಸುವವನಿಗೆ ಮರಣದಂಡನೆ ಆಗಬೇಕು,’ ಎಂದು ದೇವರು ಹೇಳಿದ್ದಾರೆ.
ಅದಕ್ಕೆ ಯೇಸು ಪ್ರತ್ಯುತ್ತರವಾಗಿ, "ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ನೀವು ದೇವರ ಆಜ್ಞೆಯನ್ನು ಏಕೆ ಮೀರುತ್ತೀರಿ? ‘ನಿಮ್ಮ ತಂದೆತಾಯಿಗಳನ್ನು ಸನ್ಮಾನಿಸಬೇಕು,’ ಎಂದೂ ‘ತಂದೆತಾಯಿಗಳನ್ನು ದೂಷಿಸುವವನಿಗೆ ಮರಣದಂಡನೆ ಆಗಬೇಕು,’ ಎಂದು ದೇವರು ಹೇಳಿದ್ದಾರೆ. ಆದರೆ ನೀವು, ಯಾರಾದರೂ ತನ್ನ ತಂದೆಗೆ ಇಲ್ಲವೆ ತಾಯಿಗೆ, ನಾನು ನಿಮ್ಮ ಸಹಾಯಕ್ಕಾಗಿ ಇಟ್ಟಿದ್ದನ್ನು, ‘ದೇವರಿಗೆ ಕೊಟ್ಟಿದ್ದೇನೆ’ ಎಂದು ಹೇಳುವುದಾದರೆ, ‘ಅವನು ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಗೌರವಿಸಬೇಕಾಗಿಲ್ಲ’ ಎಂದು ಹೇಳುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ವಾಕ್ಯವನ್ನು ನಿರರ್ಥಕಮಾಡುತ್ತೀರಿ.
Consequências da desonra
A Bíblia adverte severamente contra a desonra aos pais. Quem amaldiçoa ou agride os pais enfrenta consequências sérias.
ಯಾರು ತಂದೆಯನ್ನು ದೋಚಿಕೊಂಡು ತಾಯಿಯನ್ನು ಓಡಿಸುವರೋ
ನಾಚಿಕೆಯನ್ನುಂಟುಮಾಡಿ, ನಿಂದೆಯನ್ನು ತರುತ್ತಾರೆ.
ತನ್ನ ತಂದೆಯನ್ನಾಗಲಿ, ತನ್ನ ತಾಯಿಯನ್ನಾಗಲಿ ಶಪಿಸುವವನ
ದೀಪವು ಮಧ್ಯರಾತ್ರಿಯ ಕತ್ತಲೆಯಲ್ಲಿ ಆರಿಹೋಗುವುದು.
"ತನ್ನ ತಂದೆಯನ್ನು ಹಾಸ್ಯಮಾಡಿ,
ತನ್ನ ತಾಯಿಯನ್ನು ಧಿಕ್ಕರಿಸುವ ಕಣ್ಣನ್ನು,
ಕಣಿವೆಯ ಕಾಗೆಗಳು ಕಿತ್ತು ಕಕ್ಕುವವು.
ರಣಹದ್ದುಗಳು ಅದನ್ನು ತಿಂದುಬಿಡುವವು.
"ತಂದೆಗಾದರೂ ತಾಯಿಗಾದರೂ ಶಾಪಕೊಟ್ಟವನು ಖಂಡಿತವಾಗಿ ಸಾಯಬೇಕು.
ಆದರೆ ಕಡೆಯ ದಿವಸಗಳಲ್ಲಿ ಕಷ್ಟಕರವಾದ ಕಾಲಗಳು ಬರುವುವೆಂಬುದನ್ನು ಸಹ ತಿಳಿದುಕೋ. ಮನುಷ್ಯರು ತಮ್ಮನ್ನು ತಾವೇ ಪ್ರೀತಿಸಿಕೊಳ್ಳುವವರೂ ಹಣದಾಶೆಯುಳ್ಳವರೂ ಬಡಾಯಿ ಕೊಚ್ಚುವವರೂ ಅಹಂಕಾರಿಗಳೂ ದೇವದೂಷಕರೂ ತಂದೆತಾಯಿಗಳಿಗೆ ಅವಿಧೇಯರೂ ಕೃತಜ್ಞತೆಯಿಲ್ಲದವರೂ ಅಶುದ್ಧರೂ ಮಾನವತ್ವವಿಲ್ಲದವರೂ ಸಮಾಧಾನವಾಗದವರೂ ಚಾಡಿಕೋರರೂ ಸಂಯಮವಿಲ್ಲದವರೂ ಉಗ್ರತೆಯುಳ್ಳವರೂ ಒಳ್ಳೆಯದನ್ನು ಪ್ರೀತಿಸದವರೂ
Cuidar dos pais
Quem não cuida dos seus, principalmente de sua família, negou a fé. Honrar os pais inclui respeitar os idosos.
ಆದರೆ ಯಾವ ವಿಧವೆಗಾದರೂ ಮಕ್ಕಳಾಗಲಿ, ಮೊಮ್ಮಕ್ಕಳಾಗಲಿ ಇದ್ದರೆ ಅವರೇ ಮೊದಲು ತಮ್ಮ ಮನೆಯಲ್ಲಿ ಭಕ್ತಿಯಿಂದಿರುವುದಕ್ಕೂ ತಂದೆತಾಯಿಗಳಿಗೆ ಪ್ರತ್ಯುಪಕಾರ ಮಾಡುವುದಕ್ಕೂ ಕಲಿತುಕೊಳ್ಳಲಿ. ಇದು ದೇವರ ದೃಷ್ಟಿಯಲ್ಲಿ ಮೆಚ್ಚಿಕೆಯಾದದ್ದು.
ಯಾವನಾದರೂ ಸ್ವಂತದವರನ್ನು ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ನಂಬಿಕೆಯನ್ನು ಅಲ್ಲಗಳೆದವನೂ ಅವಿಶ್ವಾಸಿಗಿಂತ ನೀಚನೂ ಆಗಿದ್ದಾನೆ.
" ‘ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತಾಯಿಗೂ ತನ್ನ ತಂದೆಗೂ ಭಯಪಟ್ಟು, ನನ್ನ ವಿಶ್ರಾಂತಿಯ ದಿನಗಳನ್ನು ಕೈಗೊಳ್ಳಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.
" ‘ತಲೆ ನೆರೆತ ವೃದ್ಧರ ಮುಂದೆ ಎದ್ದು ನಿಂತುಕೊಳ್ಳಬೇಕು, ಅವರ ಸಮ್ಮುಖವನ್ನು ಗೌರವಿಸು. ನಿನ್ನ ದೇವರಿಗೆ ಭಯಪಡಬೇಕು. ನಾನೇ ಯೆಹೋವ ದೇವರು.