Ídolos
A Bíblia condena a idolatria com veemência. Um ídolo é qualquer coisa que ocupa o lugar de Deus no coração. Os cristãos são chamados a guardar-se dos ídolos e servir ao Deus vivo.
Guardai-vos dos ídolos
Filhinhos, guardai-vos dos ídolos. A cobiça é idolatria. Tudo que ocupa o trono de Deus no coração é um ídolo.
ಪ್ರಿಯಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ.
ಆದುದರಿಂದ ನಿಮ್ಮಲ್ಲಿರುವ ಲೌಕಿಕ ಆಸೆಗಳು ಅಂದರೆ, ಜಾರತ್ವ, ಅಶುದ್ಧತ್ವ, ಕಾಮಾಭಿಲಾಷೆ, ಕೆಟ್ಟ ಅಭಿಲಾಷೆ ಮತ್ತು ವಿಗ್ರಹಾರಾಧನೆಗೆ ಸಮವಾಗಿರುವ ದುರಾಶೆ ಇಂಥವುಗಳನ್ನು ಸಾಯಿಸಿರಿ.
ಹಣದಾಸೆಯು ಸಕಲವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು, ಅದರಿಂದ ಕ್ರಿಸ್ತ ನಂಬಿಕೆಯನ್ನು ಬಿಟ್ಟು, ಅಲೆದಾಡಿ ಅನೇಕ ವೇದನೆಗಳಿಂದ ತಮ್ಮನ್ನು ತಿವಿಸಿಕೊಳ್ಳುತ್ತಾರೆ.
ನೀವು ಬೆಳ್ಳಿ ಬಂಗಾರಗಳ ದೇವರುಗಳನ್ನು ಮಾಡಿಕೊಳ್ಳಬೇಡಿರಿ.
ನಾನಾದರೋ ನೀನು ಐಗುಪ್ತ ದೇಶದಲ್ಲಿದ್ದ ಕಾಲದಿಂದ ಯೆಹೋವನೆಂಬ ನಿನ್ನ ದೇವರಾಗಿದ್ದೇನೆ;
ನನ್ನ ಹೊರತು ಯಾವ ದೇವರೂ ನಿನಗೆ ಗೊತ್ತಿಲ್ಲ, ನನ್ನ ಹೊರತು ಯಾವ ರಕ್ಷಕನೂ ಇಲ್ಲ.
O único Deus verdadeiro
O Senhor é Deus nos céus e na terra — não há outro. Escolham hoje a quem servir, mas eu e a minha casa serviremos ao Senhor.
ನೀವು ಇದನ್ನೆಲ್ಲಾ ಆಲೋಚಿಸಿ ಆಕಾಶದಲ್ಲಿಯೂ ಮತ್ತು ಭೂಮಿಯಲ್ಲಿಯೂ ಯೆಹೋವನೊಬ್ಬನೇ ದೇವರು, ಬೇರೆ ಯಾವ ದೇವರೂ ಇಲ್ಲವೆಂಬುವುದನ್ನು ಈಗ ಗ್ರಹಿಸಿಕೊಂಡು ಜ್ಞಾಪಕದಲ್ಲಿಡಬೇಕು.
ಆತನು ಹೇಳುವ ಮಾರ್ಗದಲ್ಲೇ ನೀವು ನಡೆದು, ಆತನಲ್ಲಿಯೇ ಭಯಭಕ್ತಿಯುಳ್ಳವರಾಗಿ, ಆತನ ಆಜ್ಞೆಗಳನ್ನೇ ಅನುಸರಿಸಿ, ಆತನಿಗೇ ವಿಧೇಯರಾಗಿ, ಆತನನ್ನೇ ಸೇವಿಸುತ್ತಾ ಹೊಂದಿಕೊಂಡಿರಬೇಕು.
ಯೆಹೋವನನ್ನು ಆರಾಧಿಸುವುದು ನಿಮಗೆ ಸರಿಕಾಣದಿದ್ದರೆ ಯಾರನ್ನು ಸೇವಿಸಬೇಕೆಂದಿದ್ದೀರೆಂಬುದನ್ನು? ಈ ಹೊತ್ತೇ ಆರಿಸಿಕೊಳ್ಳಿರಿ: ನಿಮ್ಮ ಪೂರ್ವಿಕರು ಯೂಫ್ರೆಟಿಸ್ ನದಿಯ ಆಚೆಯಲ್ಲಿ ಸೇವಿಸುತ್ತಿದ್ದ ದೇವತೆಗಳೋ ಈ ದೇಶದ ಮೂಲ ನಿವಾಸಿಗಳಾದ ಅಮೋರಿಯರ ದೇವತೆಗಳೋ ಹೇಳಿರಿ. ನಾನೂ, ನನ್ನ ಮನೆಯವರೂ ಯೆಹೋವನನ್ನೇ ಸೇವಿಸುವೆವು" ಎಂದನು.
ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲವೆಂಬುದು ನಿಮಗೆ ತಿಳಿಯದೋ? ಸುಳ್ಳನ್ನು ನಂಬಬೇಡಿರಿ. ಜಾರರು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಪುರುಷಗಾಮಿಗಳು, ಕಳ್ಳರು, ಲೋಭಿಗಳು, ಕುಡುಕರು, ಜಗಳಮಾಡುವವರು, ಸುಲುಕೊಳ್ಳುವವರು ಇವರೊಳಗೆ ಒಬ್ಬರಾದರೂ ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲ.
Vencer a idolatria
Não tenhas comunhão com as obras das trevas. Revesti-vos da armadura de Deus para resistir às ciladas do diabo.
ನಿಷ್ಪ್ರಯೋಜಕವಾದ ಕತ್ತಲೆಯ ಕೃತ್ಯಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಬಯಲಿಗೆಳೆದು ಖಂಡಿಸಿರಿ. ಆ ಜನರು ರಹಸ್ಯವಾಗಿ ನಡಿಸುವ ಕೆಲಸಗಳನ್ನು ಕುರಿತು ಹೇಳುವುದಕ್ಕೂ ಅವಮಾನಕರವಾಗಿದೆ.
ಸೈತಾನನ ತಂತ್ರೋಪಾಯಗಳನ್ನು ನೀವು ಎದುರಿಸಿ ನಿಲ್ಲುವುದಕ್ಕೆ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.
ಇವರನ್ನು ಲೋಕದಿಂದ ತೆಗೆಯಬೇಕೆಂದು ನಾನು ಬೇಡಿಕೊಳ್ಳುವುದಿಲ್ಲ, ಆದರೆ ಇವರನ್ನು ಕೆಡುಕನಿಂದ ಕಾಪಾಡಬೇಕೆಂದು ನಾನು ಬೇಡಿಕೊಳ್ಳುತ್ತೇನೆ.
ನಿನ್ನನ್ನು ಎದುರಿಸಲು ಕಲ್ಪಿಸಿದ ಯಾವ ಆಯುಧವೂ ಜಯಿಸದು; ನ್ಯಾಯವಿಚಾರಣೆಯಲ್ಲಿ ನಿನಗೆ ವಿರುದ್ಧವಾಗಿ ಏಳುವ ಪ್ರತಿಯೊಂದು ನಾಲಿಗೆಯನ್ನು ದೋಷಿಯೆಂದು ನೀನು ಖಂಡಿಸುವಿ.
ಈ ಸ್ಥಿತಿಯೇ ಯೆಹೋವನ ಸೇವಕರ ಸ್ವಾಸ್ತ್ಯವೂ, ನಾನು ದಯಪಾಲಿಸುವ ಸದ್ಧರ್ಮಫಲವೂ ಆಗಿದೆ" ಎಂದು ಯೆಹೋವನು ಅನ್ನುತ್ತಾನೆ.
ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೆತನದಿಂದ ಕೆಟ್ಟತನವನ್ನು ಸೋಲಿಸಿರಿ.
ಕೆಟ್ಟದ್ದನ್ನು ಬಿಟ್ಟು ಒಳ್ಳೆಯದನ್ನೇ ಮಾಡು;
ಸಮಾಧಾನವನ್ನು ಹಾರೈಸಿ ಅದಕ್ಕಾಗಿ ಪ್ರಯತ್ನಪಡು.
ಸಾವಿನ ವಿಷಕೊಂಡಿ ಪಾಪವೇ; ಪಾಪದ ಶಕ್ತಿಯ ಆಧಾರವು ಧರ್ಮಶಾಸ್ತ್ರವಿಧಿಗಳೇ.