Irmãos
A comunhão entre irmãos é marca da igreja verdadeira. A Bíblia nos chama a amar uns aos outros como Cristo nos amou — com perdão, encorajamento e cuidado mútuo.
Amor fraternal
Um novo mandamento vos dou: que vos ameis uns aos outros. Nisto conhecerão que sois meus discípulos — pelo amor entre vós.
ನಾನು ನಿಮಗೆ ಒಂದು ಹೊಸ ಆಜ್ಞೆಯನ್ನು ಕೊಡುತ್ತೇನೆ: ಏನೆಂದರೆ, ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಸಹ ಒಬ್ಬರನ್ನೊಬ್ಬರು ಪ್ರೀತಿಸಬೇಕು, ಎಂಬುದೇ. ನಿಮ್ಮೊಳಗೆ ಪರಸ್ಪರ ಪ್ರೀತಿಯಿರುವುದಾದರೆ ಎಲ್ಲರೂ ನಿಮ್ಮನ್ನು ನನ್ನ ಶಿಷ್ಯರೆಂದು ತಿಳಿದುಕೊಳ್ಳುವರು" ಎಂದನು.
ದೇವರಿಂದ ಹುಟ್ಟಿದವರಲ್ಲಿ ಪ್ರೀತಿಸ್ವಭಾವವೇ ವಿಶೇಷ
ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಏಕೆಂದರೆ ಪ್ರೀತಿಯು ದೇವರಿಂದ ಬಂದದ್ದಾಗಿದೆ ಮತ್ತು ಪ್ರೀತಿ ಮಾಡುವ ಪ್ರತಿಯೊಬ್ಬನು ದೇವರಿಂದ ಹುಟ್ಟಿದವನೂ ದೇವರನ್ನು ಬಲ್ಲವನೂ ಆಗಿದ್ದಾನೆ.
ಒಬ್ಬನು, "ತಾನು ದೇವರನ್ನು ಪ್ರೀತಿಸುತ್ತೇನೆ" ಎಂದು ಹೇಳಿ ತನ್ನ ಸಹೋದರನನ್ನು ದ್ವೇಷಿಸಿದರೆ ಅವನು ಸುಳ್ಳುಗಾರನಾಗಿದ್ದಾನೆ. ಏಕೆಂದರೆ ತನ್ನೊಂದಿಗೆ ಇರುವ ಸಹೋದರನನ್ನು ಪ್ರೀತಿಸದವನು, ತಾನು ಕಾಣದಿರುವ ದೇವರನ್ನು ಹೇಗೆ ಪ್ರೀತಿಸಬಲ್ಲನು?
ತನ್ನ ಸಹೋದರನನ್ನು ಪ್ರೀತಿಸುವವನು ಬೆಳಕಿನಲ್ಲಿ ನೆಲೆಗೊಂಡಿದ್ದಾನೆ ಮತ್ತು ಪಾಪದಲ್ಲಿ ಎಡವಿಬೀಳುವಂಥದ್ದು ಯಾವುದೂ ಅವನಲ್ಲಿ ಇಲ್ಲ.
ಕ್ರಿಸ್ತನಲ್ಲಿ ನಂಬಿಕೆಯಿಟ್ಟವರು ಲೋಕವನ್ನು ಜಯಿಸುತ್ತಾರೆ
ಯೇಸುವೇ ಕ್ರಿಸ್ತನೆಂದು ನಂಬುವ ಪ್ರತಿಯೊಬ್ಬನೂ ದೇವರಿಂದ ಹುಟ್ಟಿದವನಾಗಿದ್ದಾನೆ. ಯಾವನು ತನ್ನನ್ನು ಹುಟ್ಟಿಸಿದ ತಂದೆಯನ್ನು ಪ್ರೀತಿಸುತ್ತಾನೋ, ಅವನು ತಂದೆಯಿಂದ ಹುಟ್ಟಿದವರೆಲ್ಲರನ್ನೂ ಪ್ರೀತಿಸುತ್ತಾನೆ.
ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಿಮಾಡಿಕೊಂಡದ್ದರಿಂದ ನಿಷ್ಕಪಟವಾದ ಸಹೋದರ ಪ್ರೀತಿಯುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನೊಬ್ಬರು ಶುದ್ಧಹೃದಯದಿಂದಲೂ, ಯಥಾರ್ಥವಾಗಿಯೂ ಪ್ರೀತಿಸಿರಿ.
Comunhão e edificação
Não abandoneis a congregação. Encorajem-se mutuamente, cantem juntos e instruam-se na Palavra de Cristo.
ಸಭೆಯಾಗಿ ಸೇರುವ ರೂಢಿಯನ್ನು ಕೆಲವರು ಬಿಟ್ಟಂತೆ ನಾವು ಬಿಟ್ಟು ಬಿಡದೆ, ಆ ದಿನವು ಸಮೀಪಿಸುತ್ತಾ ಬರುತ್ತದೆಂದು ನೀವು ತಿಳಿದುಕೊಂಡಿರುವುದರಿಂದ ಒಬ್ಬರನ್ನೊಬ್ಬರು ಮತ್ತಷ್ಟು ಹೆಚ್ಚಾಗಿಯೇ ಪ್ರೋತ್ಸಾಹಿಸುತ್ತಿರೋಣ.
ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಸಕಲಜ್ಞಾನದಿಂದ ಒಬ್ಬರಿಗೊಬ್ಬರು ಉಪದೇಶಮಾಡಿಕೊಂಡು ಬುದ್ಧಿಹೇಳಿಕೊಳ್ಳಿರಿ. ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ ಮತ್ತು ಆತ್ಮೀಕವಾದ ಗೀತೆಗಳಿಂದಲೂ ಹಾಗೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಕೃತಜ್ಞತೆಯಿಂದಲೂ ಹಾಡಿರಿ.
ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ, ಆತ್ಮೀಕ ಹಾಡುಗಳಿಂದಲೂ ಒಬ್ಬರಿಗೊಬ್ಬರು ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯಗಳಲ್ಲಿ ಕರ್ತನನ್ನು ಹಾಡಿ ಕೊಂಡಾಡಿರಿ.
ಕಬ್ಬಿಣವು ಕಬ್ಬಿಣವನ್ನು ಹೇಗೆ ಹರಿತಮಾಡುವುದೋ,
ಮಿತ್ರನು ಮಿತ್ರನ ಬುದ್ಧಿಯನ್ನು ಹಾಗೆಯೇ ಹರಿತಮಾಡುವನು.
ಮಿತ್ರನ ಪ್ರೀತಿಯು ನಿರಂತರ,
ಸಹೋದರನ ಜನ್ಮವು ಆಪತ್ತಿನಲ್ಲಿ ಸಾರ್ಥಕ.
ಬಹಳ ಗೆಳೆಯರನ್ನು ಸೇರಿಸಿಕೊಂಡವನಿಗೆ ನಾಶನ,
ಸಹೋದರನಿಗಿಂತಲೂ ಹತ್ತಿರ ಹೊಂದಿಕೊಳ್ಳುವ ಮಿತ್ರನುಂಟು.
ನಿನಗೂ, ನಿನ್ನ ತಂದೆಗೂ ಮಿತ್ರನಾದವನನ್ನು ಬಿಡಬೇಡ,
ನಿನ್ನ ಇಕ್ಕಟ್ಟಿನ ದಿನದಲ್ಲಿ ಅಣ್ಣನ ಮನೆಯನ್ನು ಆಶ್ರಯಿಸದಿರು,
ದೂರವಾಗಿರುವ ಅಣ್ಣನಿಗಿಂತ ಹತ್ತಿರವಾಗಿರುವ ನೆರೆಯವನು ಲೇಸು.
Perdão e reconciliação
Se o teu irmão pecar contra ti, vai e repreende-o a sós. O perdão e a reconciliação preservam a unidade do corpo de Cristo.
ತಪ್ಪು ಮಾಡಿದ ಸಹೋದರನನ್ನು ಸರಿಪಡಿಸಿದ್ದು
"ನಿನ್ನ ಸಹೋದರನು ನಿನ್ನ ವಿರುದ್ಧ ತಪ್ಪು ಮಾಡಿದರೆ, ನೀನು ಹೋಗಿ ಅವನು ಒಬ್ಬನೇ ಇರುವಾಗ ಅವನ ತಪ್ಪನ್ನು ಅವನಿಗೆ ಅರಿವಾಗುವಂತೆ ತಿಳಿಸು. ಅವನು ನಿನ್ನ ಮಾತನ್ನು ಕೇಳಿದರೆ ನಿನ್ನ ಸಹೋದರನನ್ನು ನೀನು ಸಂಪಾದಿಸಿಕೊಂಡಿರುವಿ. ಆದರೆ ಅವನು ನಿನ್ನ ಮಾತು ಕೇಳದೇ ಹೋದರೆ ಎರಡು ಮೂರು ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತು ಸ್ಥಿರಪಡುವ ಹಾಗೆ ಒಬ್ಬನನ್ನು ಅಥವಾ ಇಬ್ಬರನ್ನು ನಿನ್ನ ಸಂಗಡ ಕರೆದುಕೊಂಡು ಹೋಗು.
ತಪ್ಪು ಮಾಡಿದ ಸಹೋದರನನ್ನು ಸರಿಪಡಿಸಿದ್ದು
"ನಿನ್ನ ಸಹೋದರನು ನಿನ್ನ ವಿರುದ್ಧ ತಪ್ಪು ಮಾಡಿದರೆ, ನೀನು ಹೋಗಿ ಅವನು ಒಬ್ಬನೇ ಇರುವಾಗ ಅವನ ತಪ್ಪನ್ನು ಅವನಿಗೆ ಅರಿವಾಗುವಂತೆ ತಿಳಿಸು. ಅವನು ನಿನ್ನ ಮಾತನ್ನು ಕೇಳಿದರೆ ನಿನ್ನ ಸಹೋದರನನ್ನು ನೀನು ಸಂಪಾದಿಸಿಕೊಂಡಿರುವಿ. ಆದರೆ ಅವನು ನಿನ್ನ ಮಾತು ಕೇಳದೇ ಹೋದರೆ ಎರಡು ಮೂರು ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತು ಸ್ಥಿರಪಡುವ ಹಾಗೆ ಒಬ್ಬನನ್ನು ಅಥವಾ ಇಬ್ಬರನ್ನು ನಿನ್ನ ಸಂಗಡ ಕರೆದುಕೊಂಡು ಹೋಗು. ಅವನು ಅವರ ಮಾತನ್ನು ಕೇಳದೆ ಹೋದರೆ ಅದನ್ನು ಸಭೆಗೆ ಹೇಳು. ಅವನು ಸಭೆಯ ಮಾತನ್ನು ಕೇಳದೆ ಹೋದರೆ ಅವನು ನಿನಗೆ ಅನ್ಯನಂತೆಯೂ ಸುಂಕದವನಂತೆಯೂ ಇರಲಿ.
"ಭೂಲೋಕದಲ್ಲಿ ನೀವು ಏನೇನು ಕಟ್ಟುತ್ತೀರೋ ಅದು ಪರಲೋಕದಲ್ಲಿಯೂ ಕಟ್ಟಲ್ಪಡುವುದು. ಮತ್ತು ಭೂಲೋಕದಲ್ಲಿ ಏನೇನು ಬಿಚ್ಚುತ್ತೀರೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಡುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಇದಲ್ಲದೆ ನಿಮ್ಮಲ್ಲಿ ಇಬ್ಬರು ಬೇಡಿಕೊಳ್ಳತಕ್ಕ ಯಾವುದಾದರು ಒಂದು ವಿಷಯವಾಗಿ ಭೂಲೋಕದಲ್ಲಿ ಒಂದೇ ಮನಸ್ಸುಳ್ಳವರಾಗಿದ್ದರೆ ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವುದೆಂದು ನಿಮಗೆ ಹೇಳುತ್ತೇನೆ. ಏಕೆಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿ ಬರುತ್ತಾರೋ ಅಲ್ಲಿ ಅವರ ಮಧ್ಯದಲ್ಲಿ ನಾನು ಇದ್ದೇನೆ" ಅಂದನು.
ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸಹೋದರನಿಗೆ ಹೃದಯಪೂರ್ವಕವಾಗಿ ಕ್ಷಮಿಸದೇ ಹೋದರೆ ಪರಲೋಕದಲ್ಲಿರುವ ನನ್ನ ತಂದೆಯು ನಿಮಗೂ ಹಾಗೆಯೇ ಮಾಡುವನು" ಅಂದನು.
ಅದಕ್ಕೆ ಉತ್ತರವಾಗಿ ಅರಸನು, ‘ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.
ದೇವರ ಚಿತ್ತದಂತೆ ನಡೆಯುವವನೇ ನನಗೆ ತಮ್ಮನೂ, ತಂಗಿಯೂ, ತಾಯಿಯೂ ಆಗಿದ್ದಾರೆ" ಅಂದನು.
"‘ಸಹೋದರನ ವಿಷಯವಾಗಿ ಮನಸ್ಸಿನಲ್ಲಿ ದ್ವೇಷವನ್ನು ಇಟ್ಟುಕೊಳ್ಳಬಾರದು. ನೆರೆಯವನ ದೋಷಕ್ಕೆ ನೀವು ಒಳಗಾಗದಂತೆ ಅವನ ತಪ್ಪನ್ನು ಅವನಿಗೆ ತಿಳಿಸಲೇಬೇಕು.
ವಿಶ್ವಾಸಿಗಳೊಂದಿಗಿನ ಕರ್ತವ್ಯಗಳು
ವೃದ್ಧರನ್ನು ಗದರಿಸದೆ ತಂದೆಯೆಂದು ಭಾವಿಸಿ ಬುದ್ಧಿಹೇಳು. ಯೌವನಸ್ಥರನ್ನು ಅಣ್ಣತಮ್ಮಂದಿರೆಂದೂ, ವೃದ್ಧಸ್ತ್ರೀಯರನ್ನು ತಾಯಿಯಂತೆಯೂ, ಯೌವನಸ್ತ್ರೀಯರನ್ನು ಪೂರ್ಣ ಶುದ್ಧಭಾವದಿಂದ ಅಕ್ಕತಂಗಿಯರೆಂದೂ ಎಣಿಸಿ ಅವರವರಿಗೆ ತಕ್ಕ ಹಾಗೆ ಬುದ್ಧಿಹೇಳು.
ಯಾವನಾದರೂ ಸ್ವಂತ ಜನರನ್ನು, ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ಕ್ರಿಸ್ತ ನಂಬಿಕೆಯನ್ನು ತಿರಸ್ಕರಿಸಿದವನೂ ನಂಬದವನಿಗಿಂತ ಕೀಳಾದವನೂ ಆಗಿದ್ದಾನೆ.