Irmãos
A comunhão entre irmãos é marca da igreja verdadeira. A Bíblia nos chama a amar uns aos outros como Cristo nos amou — com perdão, encorajamento e cuidado mútuo.
Amor fraternal
Um novo mandamento vos dou: que vos ameis uns aos outros. Nisto conhecerão que sois meus discípulos — pelo amor entre vós.
"ನಾನು ನಿಮಗೊಂದು ಹೊಸ ಆಜ್ಞೆಯನ್ನು ಕೊಡುತ್ತೇನೆ: ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಒಬ್ಬರನ್ನೊಬ್ಬರು ಪ್ರೀತಿಸಬೇಕು. ನಿಮಗೆ ಪರಸ್ಪರ ಪ್ರೀತಿಯಿದ್ದರೆ, ಎಲ್ಲರೂ ನಿಮ್ಮನ್ನು ನನ್ನ ಶಿಷ್ಯರೆಂದು ತಿಳಿದುಕೊಳ್ಳುವರು," ಎಂದು ಹೇಳಿದರು.
ದೇವರ ಪ್ರೀತಿ ಮತ್ತು ನಮ್ಮ ಪ್ರೀತಿ
ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಏಕೆಂದರೆ ಪ್ರೀತಿಯು ದೇವರಿಂದಾಗಿದೆ. ಪ್ರೀತಿ ಮಾಡುವ ಪ್ರತಿಯೊಬ್ಬರು ದೇವರಿಂದ ಹುಟ್ಟಿದವರೂ ದೇವರನ್ನು ಬಲ್ಲವರೂ ಆಗಿದ್ದಾರೆ.
ಒಬ್ಬನು, "ನಾನು ದೇವರನ್ನು ಪ್ರೀತಿಸುತ್ತೇನೆ," ಎಂದು ಹೇಳಿ ತನ್ನ ಸಹೋದರರನ್ನು ದ್ವೇಷ ಮಾಡಿದರೆ, ಅವನು ಸುಳ್ಳುಗಾರನಾಗಿದ್ದಾನೆ. ಏಕೆಂದರೆ ತಾನು ಕಾಣುವ ಸಹೋದರನನ್ನು ಪ್ರೀತಿಸದವನು, ಕಾಣದಿರುವ ದೇವರನ್ನು ಪ್ರೀತಿಸಲಾರನು.
ತನ್ನ ಸಹೋದರನನ್ನು ಪ್ರೀತಿಸುವವನು ಬೆಳಕಿನಲ್ಲಿ ನೆಲೆಗೊಂಡಿದ್ದಾನೆ ಮತ್ತು ಅವನಲ್ಲಿ ಆತಂಕವುಳ್ಳದ್ದು ಯಾವುದೂ ಇಲ್ಲ.
ಮಾನವರಾಗಿ ಬಂದ ದೇವ ಪುತ್ರರಲ್ಲಿ ವಿಶ್ವಾಸ
ಯೇಸುವೇ ಕ್ರಿಸ್ತ ಎಂದು ನಂಬುವ ಪ್ರತಿಯೊಬ್ಬರೂ ದೇವರಿಂದ ಹುಟ್ಟಿದವರಾಗಿದ್ದಾರೆ. ತಂದೆಯನ್ನು ಪ್ರೀತಿಸುವ ಪ್ರತಿಯೊಬ್ಬರು ದೇವರಿಂದ ಹುಟ್ಟಿದವರನ್ನು ಸಹ ಪ್ರೀತಿಸುತ್ತಾರೆ.
ನೀವು ಕ್ರಿಸ್ತ ಯೇಸುವಿನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡಿದ್ದರಿಂದ ನಿಷ್ಕಪಟವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ.
Comunhão e edificação
Não abandoneis a congregação. Encorajem-se mutuamente, cantem juntos e instruam-se na Palavra de Cristo.
ಸಭೆಯಾಗಿ ಸೇರುವುದನ್ನು ಕೆಲವರಿಗೆ ರೂಢಿಯಾಗಿ ಬಿಟ್ಟಂತೆ, ನಾವು ಹಾಗೆ ಮಾಡದಿರೋಣ. ಕರ್ತ ಯೇಸುವಿನ ಪ್ರತ್ಯಕ್ಷತೆಯ ದಿನವು ಸಮೀಪಿಸುತ್ತಾ ಬರುತ್ತದೆ ಎಂದು ನೀವು ತಿಳಿದಿರುವುದರಿಂದ ಒಬ್ಬರನ್ನೊಬ್ಬರು ಪ್ರೋತ್ಸಾಹಗೊಳಿಸುವುದನ್ನು ಇನ್ನೂ ಹೆಚ್ಚಾಗಿ ಮಾಡಿರಿ.
ಕ್ರಿಸ್ತ ಯೇಸುವಿನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಆ ವಾಕ್ಯದಿಂದಲೇ, ನೀವು ಸಕಲ ಜ್ಞಾನದಲ್ಲಿ ಕೃತಜ್ಞತೆಯೊಂದಿಗೆ ನಿಮ್ಮ ಹೃದಯಗಳಲ್ಲಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮಿಕ ಹಾಡುಗಳಿಂದಲೂ ಕರ್ತ ಯೇಸುವನ್ನು ಕೊಂಡಾಡುತ್ತಾ ಒಬ್ಬರಿಗೊಬ್ಬರು ಉಪದೇಶಿಸುತ್ತಾ, ಬುದ್ಧಿ ಹೇಳುತ್ತಾ ಇರಿ.
ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮನಿಂದಾದ ಹಾಡುಗಳಿಂದಲೂ ಪರಸ್ಪರ ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯಾಂತರಾಳದಿಂದ ಕರ್ತನಿಗೆ ಹಾಡಿ ಹರಸಿರಿ.
ಕಬ್ಬಿಣವು ಕಬ್ಬಿಣವನ್ನು ಹರಿತ ಮಾಡುವಂತೆ
ಒಬ್ಬನು ಮತ್ತೊಬ್ಬನನ್ನು ಹರಿತ ಮಾಡುವನು.
ಸ್ನೇಹಿತನು ಎಲ್ಲಾ ಸಮಯದಲ್ಲಿ ಪ್ರೀತಿಸುತ್ತಾನೆ;
ಆಪತ್ತಿನಲ್ಲಿ ಸಹಾಯಮಾಡುವಗೋಸ್ಕರ ಸಹೋದರನು ಹುಟ್ಟಿದ್ದಾನೆ.
ವಿಶ್ವಾಸಕ್ಕೆ ಅರ್ಹರಲ್ಲದ ಸ್ನೇಹಿತರನ್ನು ಹೊಂದಿರುವವನು ಶೀಘ್ರವೇ ನಾಶವಾಗುತ್ತಾನೆ;
ಸಹೋದರನಿಗಿಂತ ಹತ್ತಿರ ಹೊಂದಿಕೊಳ್ಳುವ ಸ್ನೇಹಿತನಿದ್ದಾನೆ.
ನಿನ್ನ ಸ್ನೇಹಿತನನ್ನೂ ನಿನ್ನ ತಂದೆಯ ಸ್ನೇಹಿತನನ್ನೂ ತ್ಯಜಿಸಬೇಡ;
ಅಲ್ಲದೆ ನಿನ್ನ ಇಕ್ಕಟ್ಟಿನ ದಿನದಲ್ಲಿ ನಿನ್ನ ಸಹೋದರನ ಮನೆಗೆ ಹೋಗಬೇಡ;
ಏಕೆಂದರೆ ದೂರವಾಗಿರುವ ಸಹೋದರನಿಗಿಂತ ಹತ್ತಿರವಾಗಿರುವ ನೆರೆಯವನೇ ಲೇಸು.
Perdão e reconciliação
Se o teu irmão pecar contra ti, vai e repreende-o a sós. O perdão e a reconciliação preservam a unidade do corpo de Cristo.
ಸಹೋದರನು ನಿಮಗೆ ವಿರುದ್ಧವಾಗಿ ಪಾಪಮಾಡಿದರೆ
"ನಿನ್ನ ಸಹೋದರ ಅಥವಾ ಸಹೋದರಿ ಪಾಪಮಾಡಿದರೆ, ನೀವಿಬ್ಬರೇ ಇರುವಾಗ ಹೋಗಿ ಅವರನ್ನು ಖಂಡಿಸು. ಅವರು ನಿನಗೆ ಕಿವಿಗೊಟ್ಟರೆ ನೀನು ನಿನ್ನ ಸಹೋದರ ಅಥವಾ ಸಹೋದರಿಯನ್ನು ಗೆದ್ದುಕೊಂಡಿರುವೆ. ಆದರೆ ಅವರು ನಿನಗೆ ಕಿವಿಗೊಡದೆ ಹೋದರೆ, ನಿನ್ನೊಂದಿಗೆ ಇಬ್ಬರನ್ನು ಕರೆದುಕೊಂಡು ಹೋಗು. ಹೀಗೆ, ‘ಇಬ್ಬರ ಇಲ್ಲವೆ ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತು ಸ್ಥಾಪಿತವಾಗಲಿ.’
ಸಹೋದರನು ನಿಮಗೆ ವಿರುದ್ಧವಾಗಿ ಪಾಪಮಾಡಿದರೆ
"ನಿನ್ನ ಸಹೋದರ ಅಥವಾ ಸಹೋದರಿ ಪಾಪಮಾಡಿದರೆ, ನೀವಿಬ್ಬರೇ ಇರುವಾಗ ಹೋಗಿ ಅವರನ್ನು ಖಂಡಿಸು. ಅವರು ನಿನಗೆ ಕಿವಿಗೊಟ್ಟರೆ ನೀನು ನಿನ್ನ ಸಹೋದರ ಅಥವಾ ಸಹೋದರಿಯನ್ನು ಗೆದ್ದುಕೊಂಡಿರುವೆ. ಆದರೆ ಅವರು ನಿನಗೆ ಕಿವಿಗೊಡದೆ ಹೋದರೆ, ನಿನ್ನೊಂದಿಗೆ ಇಬ್ಬರನ್ನು ಕರೆದುಕೊಂಡು ಹೋಗು. ಹೀಗೆ, ‘ಇಬ್ಬರ ಇಲ್ಲವೆ ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತು ಸ್ಥಾಪಿತವಾಗಲಿ.’ ಅವರು ಅವರಿಗೂ ಕಿವಿಗೊಡದೆ ಹೋದರೆ ಅದನ್ನು ಸಭೆಗೆ ತಿಳಿಸು. ಅವರು ಸಭೆಗೂ ಕಿವಿಗೊಡದೆ ಹೋದರೆ, ಅವನು ನಿನಗೆ ಅನ್ಯನಂತೆಯೂ ಸುಂಕದವನಂತೆಯೂ ಇರಲಿ.
"ನೀವು ಭೂಮಿಯಲ್ಲಿ ಯಾವುದನ್ನು ಬಂಧಿಸುತ್ತೀರೋ ಅದು ಪರಲೋಕದಲ್ಲಿಯೂ ಬಂಧಿತವಾಗುವುದು. ನೀವು ಭೂಮಿಯಲ್ಲಿ ಏನನ್ನು ಬಿಚ್ಚುತ್ತೀರೋ ಅದು ಪರಲೋಕದಲ್ಲಿಯೂ ಬಿಚ್ಚಲಾಗುವುದು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ.
"ಇನ್ನೂ ನಾನು ನಿಮಗೆ ನಿಜವಾಗಿ ಹೇಳುವುದೇನೆಂದರೆ: ನಿಮ್ಮಲ್ಲಿ ಇಬ್ಬರು ತಾವು ಬೇಡಿಕೊಳ್ಳುವ ಯಾವುದೇ ವಿಷಯಕ್ಕಾಗಿ ಭೂಮಿಯಲ್ಲಿ ಒಂದೇ ಮನಸ್ಸುಳ್ಳವರಾಗಿದ್ದರೆ, ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವುದು. ಏಕೆಂದರೆ ಇಬ್ಬರಾಗಲಿ ಮೂವರಾಗಲಿ ನನ್ನ ಹೆಸರಿನಲ್ಲಿ ಎಲ್ಲಿ ಸೇರಿ ಬರುತ್ತಾರೋ ಅವರ ಮಧ್ಯದಲ್ಲಿ ನಾನು ಇದ್ದೇನೆ," ಎಂದರು.
"ಅದರಂತೆಯೇ ನಿಮ್ಮಲ್ಲಿ ಪ್ರತಿಯೊಬ್ಬರು ಹೃದಯಪೂರ್ವಕವಾಗಿ ತನ್ನ ಸಹೋದರನನ್ನು ಕ್ಷಮಿಸದೆ ಹೋದರೆ ಪರಲೋಕದಲ್ಲಿರುವ ನನ್ನ ತಂದೆಯು ಸಹ ನಿಮಗೆ ಹಾಗೆಯೇ ಮಾಡುವರು," ಎಂದರು.
"ಅದಕ್ಕೆ ನಾನು ಉತ್ತರವಾಗಿ ಅವರಿಗೆ, ‘ನಾನು ನಿಮಗೆ ನಿಜವಾಗಿ ಹೇಳುತ್ತೇನೆ: ನೀವು ಈ ನನ್ನ ಸಹೋದರರಲ್ಲಿ ಅತ್ಯಲ್ಪನಾದವನೊಬ್ಬನಿಗೆ, ಮಾಡಿದ್ದು ನನಗೇ ಮಾಡಿದಂತಾಯಿತು,’ ಎನ್ನುವೆನು.
ದೇವರ ಚಿತ್ತದಂತೆ ಮಾಡುವವರೇ ನನ್ನ ಸಹೋದರ, ಸಹೋದರಿ ಮತ್ತು ತಾಯಿ ಆಗಿದ್ದಾರೆ," ಎಂದು ಹೇಳಿದರು.
" ‘ನಿನ್ನ ಹೃದಯದಲ್ಲಿ ನಿನ್ನ ಸಹೋದರನನ್ನು ದ್ವೇಷಿಸಬೇಡ, ನಿನ್ನ ನೆರೆಯವನ ಪಾಪವು ನಿನ್ನ ಮೇಲೆ ಬಾರದಂತೆ ಅವನನ್ನು ತಪ್ಪದೆ ಗದರಿಸು.
ವಿಧವೆಯರ, ಹಿರಿಯರ, ಗುಲಾಮರ ಬಗ್ಗೆ ಸಲಹೆಗಳು
ವೃದ್ಧನನ್ನು ಗದರಿಸದೆ ತಂದೆಯಂತೆಯೂ ಯೌವನಸ್ಥರನ್ನು ಸಹೋದರರಂತೆಯೂ ವೃದ್ಧ ಸ್ತ್ರೀಯರನ್ನು ತಾಯಿಯಂತೆಯೂ ಯೌವನ ಸ್ತ್ರೀಯರನ್ನು ಪೂರ್ಣ ಪವಿತ್ರತೆಯಿಂದ ಸಹೋದರಿಯರಂತೆಯೂ ಅವರವರಿಗೆ ಬುದ್ಧಿ ಹೇಳು.
ಯಾವನಾದರೂ ಸ್ವಂತದವರನ್ನು ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ನಂಬಿಕೆಯನ್ನು ಅಲ್ಲಗಳೆದವನೂ ಅವಿಶ್ವಾಸಿಗಿಂತ ನೀಚನೂ ಆಗಿದ್ದಾನೆ.