Irrepreensível
Ser irrepreensível não é ser perfeito — é viver com integridade diante de Deus e dos homens. A Bíblia nos chama a buscar uma vida reta, pura e sem manchas visíveis de hipocrisia.
O padrão divino
Deus é perfeito e chama seus filhos à integridade. A palavra de Deus é purificada e Ele é escudo dos que caminham na retidão.
"ದೇವರ ಮಾರ್ಗವು ಪರಿಪೂರ್ಣವಾದದ್ದು;
ಯೆಹೋವ ದೇವರ ವಾಕ್ಯವು ದೋಷವಿಲ್ಲದ್ದು;
ತಮ್ಮಲ್ಲಿ ಆಶ್ರಯ ಹೊಂದಿದ ಎಲ್ಲರಿಗೂ ಅವರು ಗುರಾಣಿಯಾಗಿದ್ದಾರೆ.
ದೇವರ ಮಾರ್ಗವು ಪರಿಪೂರ್ಣವಾದದ್ದು,
ಯೆಹೋವ ದೇವರ ವಾಕ್ಯವು ದೋಷವಿಲ್ಲದ್ದು;
ತಮ್ಮಲ್ಲಿ ಆಶ್ರಯ ಹೊಂದಿದ ಎಲ್ಲರಿಗೂ ಅವರು ಗುರಾಣಿಯಾಗಿದ್ದಾರೆ.
ಯೆಹೋವ ದೇವರ ನಿಯಮಕ್ಕೆ ಅನುಸಾರವಾಗಿದ್ದು,
ದೋಷರಹಿತ ಮಾರ್ಗದಲ್ಲಿ ನಡೆದುಕೊಳ್ಳುವವರೂ ಧನ್ಯರು.
ದೋಷವಿಲ್ಲದವರಾಗಿ ಜೀವಿಸಿ,
ನೀತಿಯನ್ನು ನಡೆಸಿ,
ತಮ್ಮ ಹೃದಯದಿಂದ ಸತ್ಯವನ್ನಾಡುವವರೇ;
ಅವರ ನಾಲಿಗೆಯು ಚಾಡಿ ಹೇಳುವುದಿಲ್ಲ,
ತಮ್ಮ ನೆರೆಯವರಿಗೆ ಕೇಡುಮಾಡುವುದಿಲ್ಲ,
ಇತರರನ್ನು ನಿಂದಿಸುವುದೂ ಇಲ್ಲ;
ನೀತಿವಂತರಿಗೋಸ್ಕರ ದೇವರು ಸುಜ್ಞಾನವನ್ನು ಕೂಡಿಸಿಡುವರು,
ನಿರ್ದೋಷಿಯಾಗಿ ನಡೆದುಕೊಳ್ಳುವವರಿಗೆ ದೇವರು ಗುರಾಣಿಯಾಗಿದ್ದಾರೆ.
Buscar a perfeição em Cristo
Todos tropeçamos em muitas coisas, mas o alvo é a maturidade. Cristo é a fonte da salvação eterna para todos os que lhe obedecem.
ಏಕೆಂದರೆ ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವುದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ, ಅವನು ಪರಿಪೂರ್ಣನೂ ತನ್ನ ಇಡೀ ದೇಹವನ್ನೇ ಸ್ವಾಧೀನದಲ್ಲಿಟ್ಟುಕೊಳ್ಳುವುದಕ್ಕೆ ಸಮರ್ಥನೂ ಆಗಿದ್ದಾನೆ.
ದಿಕ್ಕಿಲ್ಲದವರನ್ನೂ ವಿಧವೆಯರನ್ನೂ ಅವರ ಸಂಕಟದಲ್ಲಿ ಪರಾಮರಿಸಿ, ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವುದೇ ತಂದೆ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ದೋಷವೂ ಆಗಿರುವ ಭಕ್ತಿ.
ಎಲ್ಲಾ ಉತ್ತಮ ಮತ್ತು ಪೂರ್ಣವಾದ ವರಗಳೂ ಮೇಲಿನಿಂದ ಬಂದವುಗಳೇ, ಅವು ಪರಲೋಕದ ಬೆಳಕಿನ ತಂದೆಯಿಂದ ಇಳಿದು ಬರುತ್ತವೆ. ಆ ತಂದೆಯು ಬದಲಾಗುವ ನೆರಳಿನಂತೆ ಬದಲಾಗುವವರಲ್ಲ.
ಹೀಗೆ ಯೇಸು ಪರಿಪೂರ್ಣರಾಗಿ ತಮಗೆ ವಿಧೇಯರಾಗುವ ಎಲ್ಲರಿಗೂ ನಿರಂತರವಾಗಿ ರಕ್ಷಣೆಗೆ ಕಾರಣರಾದರು.
ಯೇಸು ಅವನಿಗೆ, "ನೀನು ಸಂಪೂರ್ಣನಾಗಲು ಅಪೇಕ್ಷಿಸಿದರೆ, ಹೋಗಿ ನಿನ್ನ ಆಸ್ತಿಯನ್ನೆಲ್ಲಾ ಮಾರಿ ಬಡವರಿಗೆ ಕೊಡು; ನಿನಗೆ ಪರಲೋಕದಲ್ಲಿ ಸಂಪತ್ತಿರುವುದು. ನೀನು ಬಂದು ನನ್ನನ್ನು ಹಿಂಬಾಲಿಸು," ಎಂದು ಹೇಳಿದರು.
Vida íntegra
Que a vossa alegria seja completa! Vivam em harmonia, sejam irrepreensíveis — transformados pela renovação da mente.
ನನ್ನ ಆನಂದವು ನಿಮ್ಮಲ್ಲಿ ಇರುವಂತೆಯೂ ಆ ನಿಮ್ಮ ಆನಂದವು ಪರಿಪೂರ್ಣವಾಗುವಂತೆಯೂ ನಾನು ಇವುಗಳನ್ನು ನಿಮಗೆ ಹೇಳಿದ್ದೇನೆ.
ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೂ ಕೇಳಿಕೊಳ್ಳಲಿಲ್ಲ. ಕೇಳಿರಿ, ನೀವು ಪಡೆದುಕೊಳ್ಳುವಿರಿ. ಆಗ ನಿಮ್ಮ ಆನಂದವು ಪರಿಪೂರ್ಣವಾಗಿರುವುದು.
ಈ ಲೋಕದ ನಡುವಳಿಕೆಯನ್ನು ಹೊಂದಿಕೊಳ್ಳದೇ, ನಿಮ್ಮ ಮನಸ್ಸನ್ನು ರೂಪಾಂತರಿಸಿಕೊಂಡು ನವೀಕರಿಸಿಕೊಳ್ಳಿರಿ. ಆಗ ನೀವು ಉತ್ತಮವಾದ, ಮೆಚ್ಚುಗೆಯಾಗಿರುವಂಥ ಮತ್ತು ಪರಿಪೂರ್ಣವಾದ ದೇವರ ಚಿತ್ತ ಯಾವುದು ಎಂಬುದನ್ನು ತಿಳಿದುಕೊಳ್ಳುವಿರಿ.
ಪ್ರಿಯರೇ, ನೀವೆಲ್ಲರೂ ಒಂದೇ ಅಭಿಪ್ರಾಯವುಳ್ಳವರಾಗಿದ್ದು, ನಿಮ್ಮೊಳಗೆ ಗುಂಪುಗಾರಿಕೆ, ಪಕ್ಷಬೇಧಗಳಿರದೆ, ಒಂದೇ ಮನಸ್ಸು ಮತ್ತು ಒಂದೇ ಆಲೋಚನೆಗಳಲ್ಲಿ ಪರಿಪೂರ್ಣವಾದ ಅನ್ಯೋನ್ಯತೆಯಲ್ಲಿರಬೇಕೆಂದು ನಾನು ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇನೆ.
ಎಲ್ಲದಕ್ಕಿಂತ ಮಿಗಿಲಾಗಿ, ಎಲ್ಲವನ್ನೂ ಪರಿಪೂರ್ಣವಾದ ಐಕ್ಯತೆಯಲ್ಲಿ ಬಂಧಿಸುವ ಪ್ರೀತಿಯನ್ನು ಧರಿಸಿಕೊಳ್ಳಿರಿ.
ನೀವು ಕ್ರಿಸ್ತನೊಂದಿಗೆ ಐಕ್ಯವಾಗಿರುವುದರಿಂದ ಉತ್ತೇಜನ, ಅವರ ಪ್ರೀತಿಯಿಂದ ಸಂತೈಸುವಿಕೆ, ಆತ್ಮನಲ್ಲಿ ಅನ್ಯೋನ್ಯತೆ, ಕನಿಕರದ ವಾತ್ಸಲ್ಯಗಳು ಇರುವುದಾದರೆ, ನೀವು ಒಂದೇ ಮನಸ್ಸು, ಒಂದೇ ಪ್ರೀತಿ, ಆತ್ಮ, ಹಾಗೂ ಒಂದೇ ಗುರಿಯುಳ್ಳವರಾಗಿ, ನನ್ನ ಸಂತೋಷವನ್ನು ಪರಿಪೂರ್ಣಗೊಳಿಸಿರಿ. ಸ್ವಾರ್ಥ ಉದ್ದೇಶದಿಂದಾಗಲಿ, ವ್ಯರ್ಥ ಹೆಮ್ಮೆಯಿಂದಾಗಲಿ ಯಾವುದನ್ನೂ ಮಾಡದೆ ಪ್ರತಿಯೊಬ್ಬನೂ ದೀನತ್ವದಿಂದ ಮತ್ತೊಬ್ಬನನ್ನು ತನಗಿಂತಲೂ ಶ್ರೇಷ್ಠನೆಂದು ಎಣಿಸಲಿ. ಪ್ರತಿಯೊಬ್ಬನೂ ಸ್ವಹಿತವನ್ನು ನೋಡದೆ ಪರಹಿತವನ್ನು ಸಹ ನೋಡಲಿ.
ಕ್ರಿಸ್ತ ಯೇಸುವಿನಲ್ಲಿದ್ದ ಮನಸ್ಸೇ ನಿಮ್ಮಲ್ಲಿಯೂ ಇರಲಿ:
ಅವರು ದೇವರ ಸ್ವರೂಪವಾಗಿದ್ದರೂ,
ದೇವರಿಗೆ ಸಮಾನರಾಗಿರುವುದನ್ನು ಬಿಡಲೊಲ್ಲೆನೆಂದು ಎಣಿಸದೆ,
ತಮ್ಮನ್ನು ತಾವೇ ಬರಿದುಮಾಡಿಕೊಂಡು
ಗುಲಾಮನ ರೂಪವನ್ನು ಧರಿಸಿಕೊಂಡು
ಮನುಷ್ಯರಿಗೆ ಸಮನಾದರು.
ಹೀಗೆ ಅವರು ಆಕಾರದಲ್ಲಿ ಮನುಷ್ಯರಾಗಿ ಕಾಣಿಸಿಕೊಂಡಾಗ
ತಮ್ಮನ್ನು ತಾವೇ ತಗ್ಗಿಸಿಕೊಂಡು
ಮರಣವನ್ನು ಎಂದರೆ ಶಿಲುಬೆಯ
ಮರಣವನ್ನೂ ಹೊಂದುವಷ್ಟು ವಿಧೇಯರಾದರು.
ಈ ಕಾರಣದಿಂದಲೇ ದೇವರು ಅವರನ್ನು ಅತ್ಯುನ್ನತ ಸ್ಥಾನಕ್ಕೆ ಏರಿಸಿ
ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಅವರಿಗೆ ದಯಪಾಲಿಸಿದ್ದಾರೆ.
ಆದ್ದರಿಂದ ಪರಲೋಕ, ಭೂಲೋಕ, ಭೂಮಿಯ ಕೆಳಗಿರುವವರೆಲ್ಲರೂ
ಯೇಸುವಿನ ಹೆಸರಿನಲ್ಲಿ ಮೊಣಕಾಲೂರಿ,
ತಂದೆಯಾದ ದೇವರ ಮಹಿಮೆಗಾಗಿ
ಯೇಸು ಕ್ರಿಸ್ತನು ಕರ್ತದೇವರು ಎಂಬುದಾಗಿ ಪ್ರತಿಯೊಂದು ನಾಲಿಗೆಯೂ ಅರಿಕೆ ಮಾಡುವುದು.
ಹೀಗಿರುವಲ್ಲಿ ನನ್ನ ಪ್ರಿಯ ಸ್ನೇಹಿತರೇ, ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರುವಾಗಲೂ ನೀವು ಯಾವಾಗಲೂ ನನಗೆ ವಿಧೇಯರಾದಂತೆ ಈಗಲೂ ವಿಧೇಯರಾಗಿ, ಬಹು ಹೆಚ್ಚಾಗಿ ಭಯದಿಂದ ನಡುಗುತ್ತಾ ನಿಮ್ಮ ರಕ್ಷಣೆಯನ್ನು ಕಾರ್ಯರೂಪಕ್ಕೆ ತನ್ನಿರಿ. ಏಕೆಂದರೆ, ತಮ್ಮ ಸದುದ್ದೇಶವನ್ನು ನೆರವೇರಿಸುವಂತೆ ನಿಮ್ಮಲ್ಲಿ ಬಯಕೆಯನ್ನೂ ಕಾರ್ಯಸಾಧನೆಯನ್ನೂ ನಿರ್ಮಿಸುವವರು ದೇವರೇ.
ಗೊಣಗುಟ್ಟದೆಯೂ ವಿವಾದವಿಲ್ಲದೆಯೂ ಎಲ್ಲವನ್ನೂ ಮಾಡಿರಿ. ಹೀಗೆ ನೀವು ನಿಂದಾರಹಿತರೂ ದೋಷವಿಲ್ಲದವರೂ, "ನಿಷ್ಕಳಂಕರಾದ ದೇವರ ಮಕ್ಕಳಾಗಿ, ವಕ್ರವಾದ ದುಷ್ಟ ಜನಾಂಗದ ಮಧ್ಯದಲ್ಲಿ," ಜೀವವಾಕ್ಯವನ್ನು ಹಿಡಿದುಕೊಂಡು, ಲೋಕದಲ್ಲಿ ನಕ್ಷತ್ರಗಳಂತೆ ಹೊಳೆಯುವವರಾಗಿರುವಿರಿ. ನೀವು ಜೀವವಾಕ್ಯವನ್ನು ಹಿಡಿದವರಾಗಿದ್ದರೆ, ಹೀಗೆ ನಾನು ಓಡಿದ ಓಟವೂ ಪ್ರಯಾಸವೂ ವ್ಯರ್ಥವಾಗಲಿಲ್ಲವೆಂದು ತಿಳಿದು ಕ್ರಿಸ್ತನ ಪುನರಾಗಮನ ದಿನದಲ್ಲಿ ಅಭಿಮಾನ ಪಡುವೆನು. ನಿಮ್ಮ ವಿಶ್ವಾಸದಿಂದ ಬರುವ ಯಜ್ಞದ ಮೇಲೆಯೂ ಸೇವೆಯ ಮೇಲೆಯೂ ನಾನು ಪಾನಸಮರ್ಪಣೆಯಾದರೂ ಸಹ ಹರ್ಷದಿಂದ ನಿಮ್ಮೆಲ್ಲರೊಡನೆ ಆನಂದಿಸುವೆನು. ಇದಕ್ಕಾಗಿಯೇ ನೀವೂ ಹರ್ಷಿಸಿರಿ. ನನ್ನೊಡನೆ ಆನಂದಿಸಿರಿ.
ನಾನು ತಿಮೊಥೆಯನನ್ನು ಬೇಗನೆ ನಿಮ್ಮ ಬಳಿಗೆ ಕಳುಹಿಸುವುದಕ್ಕೆ ಕರ್ತ ಯೇಸುವಿನಲ್ಲಿ ನಿರೀಕ್ಷಿಸುತ್ತೇನೆ. ಹೀಗೆ ಅವನ ಮುಖಾಂತರ ನಿಮ್ಮ ವಿಷಯವನ್ನು ತಿಳಿದು ನಾನು ಸಹ ಉತ್ತೇಜನಗೊಳ್ಳುವೆನು. ಅವನ ಹಾಗೆ ನಿಮ್ಮ ಯೋಗಕ್ಷೇಮವನ್ನು ಕುರಿತು ಯಥಾರ್ಥವಾಗಿ ಚಿಂತಿಸುವವರು, ನನ್ನ ಬಳಿ ಬೇರೆ ಯಾರೂ ಇಲ್ಲ. ಎಲ್ಲರೂ ಸ್ವಕಾರ್ಯಗಳನ್ನೇ ಹುಡುಕುತ್ತಾರೆಯೇ ಹೊರತು ಕ್ರಿಸ್ತ ಯೇಸುವಿನ ಕಾರ್ಯಗಳನ್ನು ಹುಡುಕುವುದಿಲ್ಲ. ಆದರೆ ತಿಮೊಥೆಯನ ಗುಣಸ್ವಭಾವವನ್ನು ನೀವು ಬಲ್ಲಿರಿ. ಮಗನು ತಂದೆಗೆ ಹೇಗೋ ಹಾಗೆಯೇ ಅವನು ಸುವಾರ್ತೆಯಲ್ಲಿ ನನ್ನೊಂದಿಗೆ ಶ್ರಮಿಸಿದ್ದಾನೆ. ಆದ್ದರಿಂದ ನನಗೆ ಏನು ಸಂಭವಿಸುವುದು ಎಂದು ತಿಳಿದ ಕೂಡಲೇ ಅವನನ್ನು ಕಳುಹಿಸುವ ನಿರೀಕ್ಷೆಯಿದೆ. ಇದಲ್ಲದೆ ನಾನು ಸಹ ಬೇಗನೆ ಬರುವೆನೆಂದು ಕರ್ತ ದೇವರಲ್ಲಿ ಭರವಸೆಯುಳ್ಳವನಾಗಿದ್ದೇನೆ.
ಆದರೂ ನನ್ನ ಸಹೋದರನೂ ಜೊತೆ ಕೆಲಸದವನೂ ಸಹಸೈನಿಕನೂ ಆಗಿರುವ ಎಪಫ್ರೊದೀತನನ್ನು ನಿಮ್ಮ ಬಳಿಗೆ ಕಳುಹಿಸುವುದು ಅವಶ್ಯವೆಂದು ನಾನು ನೆನೆಸಿದ್ದೇನೆ. ಅವನು ನನ್ನ ಕೊರತೆಯಲ್ಲಿ ಸೇವೆ ಮಾಡುವಂತೆ ನೀವು ಕಳುಹಿಸಿದ ನಿಮ್ಮ ಸಂದೇಶಕನೂ ಆಗಿದ್ದಾನೆ. ಏಕೆಂದರೆ ಅವನು ನಿಮ್ಮೆಲ್ಲರನ್ನು ಕುರಿತು ಹಂಬಲಿಸುತ್ತಿದ್ದಾನೆ. ತಾನು ಅಸ್ವಸ್ಥನಾದ ಸುದ್ದಿಯು ನಿಮಗೆ ಮುಟ್ಟಿತೆಂದು ತಿಳಿದು ತುಂಬಾ ವ್ಯಸನಪಡುತ್ತಿದ್ದಾನೆ. ಅವನು ಅಸ್ವಸ್ಥನಾಗಿ ಸಾಯುವ ಹಾಗೆ ಇದ್ದದ್ದು ನಿಜವೇ. ಆದರೆ ದೇವರು ಅವನನ್ನು ಕರುಣಿಸಿದರು. ಅವನನ್ನು ಮಾತ್ರವಲ್ಲದೆ ನನಗೆ ದುಃಖದ ಮೇಲೆ ದುಃಖ ಬಾರದಂತೆ ನನ್ನನ್ನು ಕರುಣಿಸಿದರು. ಆದ್ದರಿಂದ ನೀವು ಅವನನ್ನು ನೋಡಿ ಪುನಃ ಆನಂದಿಸುವಂತೆಯೂ ನನಗೆ ದುಃಖ ಕಡಿಮೆಯಾಗುವಂತೆಯೂ ನಾನು ಅವನನ್ನು ಅತ್ಯಾಸಕ್ತಿಯಿಂದ ಕಳುಹಿಸಿದ್ದೇನೆ. ನೀವು ಅವನನ್ನು ಪೂರ್ಣ ಆನಂದದಿಂದ ಕರ್ತನಲ್ಲಿ ಸೇರಿಸಿಕೊಳ್ಳಿರಿ ಮತ್ತು ಅಂಥವರನ್ನು ಸನ್ಮಾನಿಸಿರಿ. ಅವನು ಕ್ರಿಸ್ತನ ಸೇವೆಯ ನಿಮಿತ್ತ ಸಾಯುವ ಹಾಗಿದ್ದನು. ನೀವು ನನಗೆ ಮಾಡಲು ಸಾಧ್ಯವಾಗದೆ ಹೋದ ಸಹಾಯವನ್ನು ತಾನೇ ಪೂರ್ತಿ ಮಾಡುವುದಕ್ಕಾಗಿ, ಅವನು ತನ್ನ ಪ್ರಾಣವನ್ನೇ ಅಪಾಯಕ್ಕೆ ಗುರಿಪಡಿಸಿಕೊಂಡನು.
ಯಾರೂ ಅಪಕಾರಕ್ಕೆ ಅಪಕಾರ ಮಾಡದಂತೆ ನೋಡಿಕೊಳ್ಳಿರಿ. ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಳ್ಳುವುದಲ್ಲದೆ ಎಲ್ಲರಿಗೂ ಹಿತವನ್ನು ಮಾಡುವವರಾಗಿರಿ.
ಆದರೆ ದೇವರು ನಾನು ಹೋಗುವ ಮಾರ್ಗವನ್ನು ತಿಳಿದಿದ್ದಾರೆ;
ದೇವರು ನನ್ನನ್ನು ಪರೀಕ್ಷಿಸಿದಾಗ, ನಾನು ಚೊಕ್ಕ ಬಂಗಾರವಾಗಿ ಹೊರಗೆ ಬರುವೆನು.
ನನ್ನ ಪಾದಗಳು ದೇವರ ಹೆಜ್ಜೆಯ ಜಾಡಿನಲ್ಲಿ ನಿಕಟವಾಗಿ ಅನುಸರಿಸಿವೆ;
ದೇವರ ಮಾರ್ಗವನ್ನು ಬಿಟ್ಟು ನಾನು ತೊಲಗದಂತೆ ನೋಡಿಕೊಂಡೆನು.