Jejum e oração
Jejum e oração são disciplinas espirituais que andam juntas. Jesus jejuou, os apóstolos jejuaram, e a Bíblia ensina que o jejum fortalece a oração e nos aproxima do coração de Deus.
O exemplo de Jesus
Jesus jejuou quarenta dias no deserto antes de iniciar seu ministério. Ele ensinou que certas coisas só acontecem com oração e jejum.
ಯೇಸುವಿನ ಶೋಧನೆ
ಆಮೇಲೆ ಸೈತಾನನಿಂದ ಶೋಧಿತರಾಗಲೆಂದು ಪವಿತ್ರಾತ್ಮರು ಯೇಸುವನ್ನು ಅರಣ್ಯಕ್ಕೆ ನಡೆಸಿದರು. ನಲವತ್ತು ದಿನ ಹಗಲೂ ರಾತ್ರಿ ಉಪವಾಸವಿದ್ದ ಮೇಲೆ ಯೇಸುವಿಗೆ ಹಸಿವಾಯಿತು.
ಯೇಸು ಅವರಿಗೆ, "ನಿಮ್ಮ ಅಪೂರ್ಣನಂಬಿಕೆಯೇ ಇದಕ್ಕೆ ಕಾರಣ. ಸಾಸಿವೆ ಕಾಳಿನಷ್ಟು ನಂಬಿಕೆ ನಿಮಗಿರುವುದಾದರೆ ನೀವು ಈ ಬೆಟ್ಟಕ್ಕೆ, ‘ಇಲ್ಲಿಂದ ಆ ಸ್ಥಳಕ್ಕೆ ಹೋಗು’ ಎಂದು ಹೇಳಿದರೆ ಅದು ಹೋಗುವುದು. ಯಾವುದೂ ನಿಮಗೆ ಅಸಾಧ್ಯವಾಗಿರುವುದಿಲ್ಲ. ಆದರೂ ದೇವರ ಪ್ರಾರ್ಥನೆ ಉಪವಾಸಗಳಿಂದ ಹೊರತು ಬೇರೆ ಯಾವುದರಿಂದಲೂ ಈ ರೀತಿಯಾದ ದೆವ್ವ ಹೊರಟು ಹೋಗುವುದಿಲ್ಲ," ಎಂದರು.
ಉಪವಾಸ
"ನೀವು ಉಪವಾಸ ಮಾಡುವಾಗ ಕಪಟಿಗಳಂತೆ ಮುಖ ಸಪ್ಪಗೆ ಮಾಡಿಕೊಳ್ಳಬೇಡಿರಿ, ತಾವು ಉಪವಾಸ ಮಾಡುತ್ತಿದ್ದೇವೆಂದು ಜನರಿಗೆ ತೋರ್ಪಡಿಸಿಕೊಳ್ಳುವುದಕ್ಕಾಗಿ ಅವರು ತಮ್ಮ ಮುಖವನ್ನು ಬಾಡಿಸಿಕೊಂಡಿರುತ್ತಾರೆ. ಅವರು ತಮಗೆ ಬರತಕ್ಕ ಪ್ರತಿಫಲವನ್ನು ಪೂರ್ತಿಯಾಗಿ ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಆದರೆ ನೀನು ಉಪವಾಸ ಮಾಡುವಾಗ, ತಲೆಗೆ ಎಣ್ಣೆ ಹಚ್ಚಿಕೊಂಡು, ಮುಖ ತೊಳೆದುಕೋ. ಹೀಗೆ ಮಾಡಿದರೆ, ಕಾಣದಿರುವ ನಿನ್ನ ತಂದೆಯ ಹೊರತು ಬೇರೆ ಯಾರಿಗೂ ನೀನು ಉಪವಾಸದಿಂದಿರುವುದು ತಿಳಿಯುವುದಿಲ್ಲ ಮತ್ತು ಗುಟ್ಟಾಗಿ ಮಾಡುವುದನ್ನು ಕಾಣುವ ನಿನ್ನ ತಂದೆ, ನಿನಗೆ ಪ್ರತಿಫಲ ಕೊಡುವರು.
ಉಪವಾಸ
"ನೀವು ಉಪವಾಸ ಮಾಡುವಾಗ ಕಪಟಿಗಳಂತೆ ಮುಖ ಸಪ್ಪಗೆ ಮಾಡಿಕೊಳ್ಳಬೇಡಿರಿ, ತಾವು ಉಪವಾಸ ಮಾಡುತ್ತಿದ್ದೇವೆಂದು ಜನರಿಗೆ ತೋರ್ಪಡಿಸಿಕೊಳ್ಳುವುದಕ್ಕಾಗಿ ಅವರು ತಮ್ಮ ಮುಖವನ್ನು ಬಾಡಿಸಿಕೊಂಡಿರುತ್ತಾರೆ. ಅವರು ತಮಗೆ ಬರತಕ್ಕ ಪ್ರತಿಫಲವನ್ನು ಪೂರ್ತಿಯಾಗಿ ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
ಆದರೆ ನೀನು ಉಪವಾಸ ಮಾಡುವಾಗ, ತಲೆಗೆ ಎಣ್ಣೆ ಹಚ್ಚಿಕೊಂಡು, ಮುಖ ತೊಳೆದುಕೋ. ಹೀಗೆ ಮಾಡಿದರೆ, ಕಾಣದಿರುವ ನಿನ್ನ ತಂದೆಯ ಹೊರತು ಬೇರೆ ಯಾರಿಗೂ ನೀನು ಉಪವಾಸದಿಂದಿರುವುದು ತಿಳಿಯುವುದಿಲ್ಲ ಮತ್ತು ಗುಟ್ಟಾಗಿ ಮಾಡುವುದನ್ನು ಕಾಣುವ ನಿನ್ನ ತಂದೆ, ನಿನಗೆ ಪ್ರತಿಫಲ ಕೊಡುವರು.
ನಲವತ್ತು ದಿನಗಳು ಸೈತಾನನಿಂದ ಶೋಧನೆಯನ್ನು ಎದುರಿಸಿದರು. ಆ ದಿನಗಳಲ್ಲಿ ಯೇಸು ಏನೂ ತಿನ್ನಲಿಲ್ಲ. ಆ ದಿನಗಳು ಮುಗಿದ ಮೇಲೆ ಯೇಸುವಿಗೆ ಹಸಿವಾಯಿತು.
O jejum nas Escrituras
Ao longo da Bíblia, grandes homens e mulheres de fé jejuaram em momentos decisivos — buscando a Deus com urgência e devoção.
ಮೋಶೆಯು ಹಗಲಿರುಳು ನಲವತ್ತು ದಿವಸ ರೊಟ್ಟಿಯನ್ನು ತಿನ್ನದೇ, ನೀರನ್ನು ಕುಡಿಯದೇ ಅಲ್ಲಿ ಯೆಹೋವ ದೇವರ ಸಂಗಡ ಇದ್ದನು. ದೇವರು ಒಡಂಬಡಿಕೆಯ ವಾಕ್ಯಗಳಾದ ಹತ್ತು ಆಜ್ಞೆಗಳನ್ನು ಹಲಗೆಗಳ ಮೇಲೆ ಬರೆದರು.
ಆದ್ದರಿಂದ ನಾನು ಉಪವಾಸದಿಂದ ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯನ್ನು ಬಳಿದುಕೊಂಡು, ಪ್ರಾರ್ಥನೆಗಳಿಂದ ಮತ್ತು ವಿಜ್ಞಾಪನೆಗಳಿಂದ ಕರ್ತರಾದ ದೇವರ ಕಡೆಗೆ ನನ್ನ ಮುಖವನ್ನು ತಿರುಗಿಸಿದೆನು.
ಆ ಮೂರು ವಾರಗಳು ಕಳೆಯುವವರೆಗೂ, ನಾನು ರುಚಿಕರವಾದ ರೊಟ್ಟಿಯನ್ನು ತಿನ್ನಲಿಲ್ಲ. ಮಾಂಸವನ್ನಾದರೂ, ದ್ರಾಕ್ಷಾರಸವನ್ನಾದರೂ ನನ್ನ ಬಾಯಿಗೆ ಮುಟ್ಟಿಸಲಿಲ್ಲ. ನಾನು ಎಣ್ಣೆಯನ್ನು ಹಚ್ಚಿಕೊಳ್ಳಲೇ ಇಲ್ಲ.
ಆ ಮೂರು ವಾರಗಳು ಕಳೆಯುವವರೆಗೂ, ನಾನು ರುಚಿಕರವಾದ ರೊಟ್ಟಿಯನ್ನು ತಿನ್ನಲಿಲ್ಲ. ಮಾಂಸವನ್ನಾದರೂ, ದ್ರಾಕ್ಷಾರಸವನ್ನಾದರೂ ನನ್ನ ಬಾಯಿಗೆ ಮುಟ್ಟಿಸಲಿಲ್ಲ. ನಾನು ಎಣ್ಣೆಯನ್ನು ಹಚ್ಚಿಕೊಳ್ಳಲೇ ಇಲ್ಲ.
"ನೀನು ಹೋಗಿ ಶೂಷನಿನಲ್ಲಿರುವ ಎಲ್ಲಾ ಯೆಹೂದ್ಯರನ್ನು ಕೂಡಿಸು; ನೀವು ರಾತ್ರಿ ಹಗಲೂ ಮೂರು ದಿನ ಅನ್ನಪಾನಗಳನ್ನು ಬಿಟ್ಟು ನನಗೋಸ್ಕರ ಉಪವಾಸಮಾಡಿರಿ. ಹಾಗೆಯೇ ನಾನೂ ನನ್ನ ದಾಸಿಯರೊಡನೆ ಉಪವಾಸ ಮಾಡುವೆನು. ಅನಂತರ ನಾನು ರಾಜಾಜ್ಞೆಯನ್ನು ಮೀರಿ ಅರಸನ ಬಳಿಗೆ ಹೋಗುವೆನು. ನಾನು ಸತ್ತರೂ ಸಾಯುವೆನು," ಎಂದು ಹೇಳಿಕಳುಸಿದಳು.
ನಾನು ಈ ಸಮಾಚಾರವನ್ನು ಕೇಳಿದಾಗ, ನೆಲದ ಮೇಲೆ ಕೂತುಕೊಂಡು ಅತ್ತೆನು. ಹಲವಾರು ದಿನಗಳವರೆಗೆ ಶೋಕಿಸಿದೆ, ಉಪವಾಸವಿದ್ದೆ, ಪರಲೋಕ ದೇವರ ಮುಂದೆ ಪ್ರಾರ್ಥನೆ ಮಾಡುತ್ತಾ ಇದ್ದೆ.
ಆಗ ನಾವು ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸಿಕೊಳ್ಳುವುದಕ್ಕೂ, ನಮಗೂ ನಮ್ಮ ಮಕ್ಕಳಿಗೂ, ನಮ್ಮ ಎಲ್ಲಾ ಸ್ಥಿತಿಗೂ ಅವರಿಂದ ಸರಿಯಾದ ಮಾರ್ಗವನ್ನು ಹುಡುಕುವುದಕ್ಕೂ, ನಾನು ಅಲ್ಲಿ ಅಹಾವ ನದಿಯ ಬಳಿಯಲ್ಲಿ ಉಪವಾಸವನ್ನು ಮಾಡಲು ಪ್ರಕಟಿಸಿದೆನು.
ಆದ್ದರಿಂದ ನಾವು ಉಪವಾಸ ಮಾಡಿ ಇದಕ್ಕೋಸ್ಕರ ನಮ್ಮ ದೇವರನ್ನು ಬೇಡಿಕೊಂಡೆವು. ದೇವರು ನಮ್ಮ ವಿಜ್ಞಾಪನೆಯನ್ನು ಕೇಳಿದರು.
ಆದ್ದರಿಂದ ನಾವು ಉಪವಾಸ ಮಾಡಿ ಇದಕ್ಕೋಸ್ಕರ ನಮ್ಮ ದೇವರನ್ನು ಬೇಡಿಕೊಂಡೆವು. ದೇವರು ನಮ್ಮ ವಿಜ್ಞಾಪನೆಯನ್ನು ಕೇಳಿದರು.
ದಾವೀದನು ಕೂಸಿಗೋಸ್ಕರ ದೇವರನ್ನು ಬೇಡಿಕೊಂಡನು. ಇದಲ್ಲದೆ ದಾವೀದನು ಉಪವಾಸ ಮಾಡಿ, ಒಳಗಿನ ಕೋಣೆಯಲ್ಲಿ ನೆಲದ ಮೇಲೆಯೇ ರಾತ್ರಿ ಕಳೆಯುತ್ತಿದ್ದನು.
ನಿನೆವೆಯ ಮನುಷ್ಯರು, ದೇವರನ್ನು ನಂಬಿ, ಉಪವಾಸವನ್ನು ಸಾರಿ, ಅವರಲ್ಲಿ ದೊಡ್ಡವನು ಮೊದಲುಗೊಂಡು ಚಿಕ್ಕವನವರೆಗೂ ಗೋಣಿತಟ್ಟನ್ನು ಉಟ್ಟುಕೊಂಡರು.
ಆ ಮಾತು ನಿನೆವೆಯ ಅರಸನಿಗೆ ಮುಟ್ಟಿದಾಗ, ಅವನು ತನ್ನ ಸಿಂಹಾಸನದಿಂದ ಎದ್ದು, ತನ್ನ ನಿಲುವಂಗಿಯನ್ನು ತೆಗೆದಿಟ್ಟು, ಗೋಣಿತಟ್ಟನ್ನು ಉಟ್ಟುಕೊಂಡು, ಬೂದಿಯಲ್ಲಿ ಕುಳಿತುಕೊಂಡನು. ಅವನು ನಿನೆವೆಯಲ್ಲಿ ಈ ಘೋಷಣೆಯನ್ನು ಮಾಡಿದನು:
"ಅರಸನ ಮತ್ತು ಶ್ರೇಷ್ಠರ ತೀರ್ಪಿನ ಪ್ರಕಾರ:
"ಮನುಷ್ಯರಾಗಲಿ, ಮೃಗಗಳಾಗಲಿ, ದನಗಳಾಗಲಿ, ಕುರಿಗಳಾಗಲಿ, ಏನನ್ನೂ ರುಚಿ ನೋಡದಿರಲಿ, ಮೇಯದಿರಲಿ, ನೀರನ್ನು ಕುಡಿಯದಿರಲಿ. ಆದರೆ ಮನುಷ್ಯರೂ ಮೃಗಗಳೂ ಗೋಣಿತಟ್ಟು ಹಾಕಿಕೊಂಡು, ಜೋರಾದ ಧ್ವನಿಯಿಂದ ದೇವರಿಗೆ ಮೊರೆಯಿಡಲಿ. ಎಲ್ಲರೂ ತಮ್ಮ ತಮ್ಮ ದುರ್ಮಾರ್ಗಗಳನ್ನೂ, ತಮ್ಮ ತಮ್ಮ ಕೈಗಳಲ್ಲಿರುವ ಹಿಂಸಾಚಾರವನ್ನೂ ಬಿಟ್ಟು ತಿರುಗಲಿ. ಹೀಗೆ ಮಾಡಿದರೆ, ದೇವರು ಒಂದು ವೇಳೆ ತಮ್ಮ ಮನಸ್ಸನ್ನು ಬದಲಾಯಿಸಿ, ಅನುಕಂಪದಿಂದ ತಮ್ಮ ಉಗ್ರಕೋಪವನ್ನು ತಡೆದು, ನಾವು ನಾಶವಾಗದೆ ಉಳಿಸುವರೇನೋ, ಯಾರು ಬಲ್ಲರು?"
ಆಗ ದೇವರು, ನಿನೆವೆಯವರು ತಮ್ಮ ದುರ್ಮಾರ್ಗವನ್ನು ಬಿಟ್ಟು ತಿರುಗಿಕೊಂಡರೆಂದು ಕಂಡು, ತಾವು ವಿಧಿಸುವುದಾಗಿ ನುಡಿದ ವಿನಾಶವನ್ನು ಅವರ ಮೇಲೆ ಬರಮಾಡದೆ, ಅವರನ್ನು ಕನಿಕರಿಸಿದರು.
O jejum que Deus escolheu
Isaías revela o jejum que agrada a Deus: soltar as cadeias da injustiça, libertar os oprimidos e repartir o pão com o faminto.
‘ನಾವು ಉಪವಾಸ ಮಾಡಿದ್ದೇವೆ,
ನೀನು ಏಕೆ ಕಟಾಕ್ಷಿಸಲಿಲ್ಲ?’
‘ನಮ್ಮ ಪ್ರಾಣವನ್ನು ಕುಂದಿಸಿಕೊಂಡಿದ್ದೇವೆ, ನೀನು ಗಮನಿಸದಿರುವುದೇಕೆ?’
ಎಂದು ಅವರು ಅಂದುಕೊಳ್ಳುತ್ತಾರೆ.
"ನಿಮ್ಮ ಉಪವಾಸದ ದಿನದಲ್ಲಿಯೂ ನಿಮ್ಮ ಇಷ್ಟದ ಕೆಲಸವನ್ನು ನಡೆಸಿ
ಮತ್ತು ನಿಮ್ಮ ಕೆಲಸದವರನ್ನು ದುಡಿತಕ್ಕೆ ಎಳೆಯುತ್ತೀರಿ.
ನಿಮ್ಮ ಉಪವಾಸದ ಪರಿಣಾಮಗಳು ಇಷ್ಟೆ:
ವ್ಯಾಜ್ಯ, ಕಲಹ, ಹೊಡೆದಾಟ.
ಇಲ್ಲಿಯವರೆಗೆ ನೀವು ಮಾಡಿದಂತೆ ಉಪವಾಸ ಮಾಡಿದರೆ,
ನಿಮ್ಮ ಪ್ರಾರ್ಥನೆ ಪರಲೋಕವನ್ನು ಮುಟ್ಟುವುದಿಲ್ಲ.
ನಾನು ಆಯ್ದುಕೊಂಡದ್ದು ಇಂಥಾ ಉಪವಾಸವೋ?
ಒಬ್ಬನು ಜೊಂಡಿನಂತೆ ತಲೆಯನ್ನು ಬಗ್ಗಿಸಿಕೊಳ್ಳುವುದು,
ಗೋಣಿತಟ್ಟನ್ನು ಉಟ್ಟುಕೊಳ್ಳುವುದು,
ಬೂದಿಯ ಗುಂಡಿಯಲ್ಲಿ ಕುಳಿತುಕೊಳ್ಳುವುದು,
ಇವು ಯೆಹೋವ ದೇವರಿಗೆ ಮೆಚ್ಚಿಗೆಯಾಗುವ
ಉಪವಾಸ ಎನ್ನುತ್ತೀರೋ?
"ನಾನು ಆಯ್ದುಕೊಳ್ಳುವ ಉಪವಾಸವು
ಅನ್ಯಾಯದ ಸರಪಣಿಯನ್ನು ಬಿಚ್ಚುವುದೂ,
ಭಾರವಾದ ಹೊರೆಯನ್ನು ಬಿಚ್ಚುವುದೂ,
ದಬ್ಬಾಳಿಕೆಯಾದವರನ್ನು ಬಿಡಿಸುವುದೂ,
ನೊಗಗಳನ್ನೆಲ್ಲಾ ಮುರಿದುಹಾಕುವುದೂ, ಇವೇ ಅಲ್ಲವೋ?
"ನಾನು ಆಯ್ದುಕೊಳ್ಳುವ ಉಪವಾಸವು
ಅನ್ಯಾಯದ ಸರಪಣಿಯನ್ನು ಬಿಚ್ಚುವುದೂ,
ಭಾರವಾದ ಹೊರೆಯನ್ನು ಬಿಚ್ಚುವುದೂ,
ದಬ್ಬಾಳಿಕೆಯಾದವರನ್ನು ಬಿಡಿಸುವುದೂ,
ನೊಗಗಳನ್ನೆಲ್ಲಾ ಮುರಿದುಹಾಕುವುದೂ, ಇವೇ ಅಲ್ಲವೋ?
ನಿಮ್ಮ ಹೃದಯಗಳನ್ನು ಹರಿದುಕೊಳ್ಳಿರಿ
ಯೆಹೋವ ದೇವರು ಹೀಗೆ ಘೋಷಿಸುತ್ತಾರೆ, "ಈಗಲಾದರೂ
ಉಪವಾಸದಿಂದಲೂ ಅಳುವಿಕೆಯಿಂದಲೂ ಗೋಳಾಟದಿಂದಲೂ
ನಿಮ್ಮ ಪೂರ್ಣಹೃದಯದಿಂದ ನನ್ನ ಕಡೆಗೆ ತಿರುಗಿಕೊಳ್ಳಿರಿ."
ನಿಮ್ಮ ಹೃದಯಗಳನ್ನು ಹರಿದುಕೊಳ್ಳಿರಿ
ಯೆಹೋವ ದೇವರು ಹೀಗೆ ಘೋಷಿಸುತ್ತಾರೆ, "ಈಗಲಾದರೂ
ಉಪವಾಸದಿಂದಲೂ ಅಳುವಿಕೆಯಿಂದಲೂ ಗೋಳಾಟದಿಂದಲೂ
ನಿಮ್ಮ ಪೂರ್ಣಹೃದಯದಿಂದ ನನ್ನ ಕಡೆಗೆ ತಿರುಗಿಕೊಳ್ಳಿರಿ."
ಪವಿತ್ರ ಉಪವಾಸವನ್ನು ಘೋಷಿಸಿರಿ.
ಪವಿತ್ರ ಸಭೆಯನ್ನು ಕರೆಯಿರಿ.
ಹಿರಿಯರನ್ನೂ ದೇಶದ ನಿವಾಸಿಗಳೆಲ್ಲರನ್ನೂ
ನಿಮ್ಮ ಯೆಹೋವ ದೇವರ ಆಲಯದಲ್ಲಿ ಕೂಡಿಸಿ,
ಯೆಹೋವ ದೇವರಿಗೆ ಮೊರೆಯಿಡಿರಿ.
A igreja primitiva
Os apóstolos jejuavam antes de decisões importantes. O jejum acompanhava a consagração de líderes e o envio de missionários.
ಇವರೆಲ್ಲರೂ ಕರ್ತದೇವರನ್ನು ಆರಾಧಿಸಿ, ಉಪವಾಸಮಾಡುತ್ತಿದ್ದರು. ಆಗ ಪವಿತ್ರಾತ್ಮ ದೇವರು, "ಬಾರ್ನಬನನ್ನೂ ಸೌಲನನ್ನೂ ನಾನು ಕರೆದಿರುವ ಕಾರ್ಯಕ್ಕಾಗಿ ಅವರನ್ನು ನನಗಾಗಿ ಪ್ರತ್ಯೇಕಿಸಿರಿ," ಎಂದರು.
ಇವರೆಲ್ಲರೂ ಕರ್ತದೇವರನ್ನು ಆರಾಧಿಸಿ, ಉಪವಾಸಮಾಡುತ್ತಿದ್ದರು. ಆಗ ಪವಿತ್ರಾತ್ಮ ದೇವರು, "ಬಾರ್ನಬನನ್ನೂ ಸೌಲನನ್ನೂ ನಾನು ಕರೆದಿರುವ ಕಾರ್ಯಕ್ಕಾಗಿ ಅವರನ್ನು ನನಗಾಗಿ ಪ್ರತ್ಯೇಕಿಸಿರಿ," ಎಂದರು.
ಇವರೆಲ್ಲರೂ ಕರ್ತದೇವರನ್ನು ಆರಾಧಿಸಿ, ಉಪವಾಸಮಾಡುತ್ತಿದ್ದರು. ಆಗ ಪವಿತ್ರಾತ್ಮ ದೇವರು, "ಬಾರ್ನಬನನ್ನೂ ಸೌಲನನ್ನೂ ನಾನು ಕರೆದಿರುವ ಕಾರ್ಯಕ್ಕಾಗಿ ಅವರನ್ನು ನನಗಾಗಿ ಪ್ರತ್ಯೇಕಿಸಿರಿ," ಎಂದರು. ಆಗ ಅವರು ಉಪವಾಸವಿದ್ದು ಪ್ರಾರ್ಥನೆಮಾಡಿ, ಅವರಿಬ್ಬರ ಮೇಲೆ ಕೈಗಳನ್ನಿಟ್ಟು ಕಳುಹಿಸಿಬಿಟ್ಟರು.
ಆಗ ಅವರು ಉಪವಾಸವಿದ್ದು ಪ್ರಾರ್ಥನೆಮಾಡಿ, ಅವರಿಬ್ಬರ ಮೇಲೆ ಕೈಗಳನ್ನಿಟ್ಟು ಕಳುಹಿಸಿಬಿಟ್ಟರು.
ಆಗ ಅವರು ಉಪವಾಸವಿದ್ದು ಪ್ರಾರ್ಥನೆಮಾಡಿ, ಅವರಿಬ್ಬರ ಮೇಲೆ ಕೈಗಳನ್ನಿಟ್ಟು ಕಳುಹಿಸಿಬಿಟ್ಟರು.
ಪ್ರತಿಯೊಂದು ಸಭೆಯಲ್ಲಿ ಪೌಲ, ಬಾರ್ನಬರು ಸಭಾ ಹಿರಿಯರನ್ನು ನೇಮಿಸಿ, ಉಪವಾಸ ಪ್ರಾರ್ಥನೆಯನ್ನು ಮಾಡಿ ಅವರು ನಂಬಿದ್ದ ಕರ್ತ ಯೇಸುವಿಗೆ ಅವರನ್ನು ಒಪ್ಪಿಸಿಕೊಟ್ಟರು.
Praticando o jejum
Quando jejuares, unge a cabeça e lava o rosto. O jejum é entre você e Deus — não para impressionar os homens, mas para buscar ao Senhor.
ಅವಳು ಎಂಬತ್ತನಾಲ್ಕು ವರ್ಷ ವಿಧವೆಯಾಗಿದ್ದು, ದೇವಾಲಯವನ್ನು ಬಿಟ್ಟುಹೋಗದೆ ಉಪವಾಸಗಳಿಂದಲೂ ಪ್ರಾರ್ಥನೆಗಳಿಂದಲೂ ರಾತ್ರಿ ಹಗಲೂ ಆರಾಧನೆ ಮಾಡುತ್ತಿದ್ದಳು.
ಉಪವಾಸದ ಕುರಿತು ಯೇಸುವನ್ನು ಪ್ರಶ್ನಿಸಿದ್ದು
ಕೆಲವರು ಯೇಸುವಿಗೆ, "ಯೋಹಾನನ ಶಿಷ್ಯರು ಪದೇಪದೇ ಉಪವಾಸವಿದ್ದು ಪ್ರಾರ್ಥನೆಗಳನ್ನು ಮಾಡುತ್ತಾರೆ, ಅದರಂತೆಯೇ ಫರಿಸಾಯರ ಶಿಷ್ಯರೂ ಮಾಡುತ್ತಾರೆ, ಆದರೆ ನಿಮ್ಮ ಶಿಷ್ಯರು ಏಕೆ ತಿಂದು ಕುಡಿಯುತ್ತಾರೆ?" ಎಂದು ಕೇಳಿದರು.
ಅದಕ್ಕೆ ಯೇಸು, "ಮದುಮಗನು ಮದುವೆ ಅತಿಥಿಗಳ ಸಂಗಡವಿರುವಾಗ ಅವರನ್ನು ಉಪವಾಸವಿರಿಸಲಾದೀತೆ? ಆದರೆ ಮದುಮಗನನ್ನು ಅವರಿಂದ ತೆಗೆದುಕೊಂಡು ಹೋಗುವ ದಿವಸಗಳು ಬರುವುವು; ಆಗ ಆ ದಿವಸಗಳಲ್ಲಿ ಅವರು ಉಪವಾಸ ಮಾಡುವರು," ಎಂದು ಹೇಳಿದರು.
ಯೇಸು ಮನೆಯೊಳಕ್ಕೆ ಬಂದಾಗ, ಅವರ ಶಿಷ್ಯರು ಅವರಿಗೆ ಪ್ರತ್ಯೇಕವಾಗಿ, "ಆ ಅಶುದ್ಧಾತ್ಮವನ್ನು ಹೊರಗೆ ಹಾಕುವುದಕ್ಕೆ ನಮ್ಮಿಂದ ಏಕೆ ಆಗಲಿಲ್ಲ?" ಎಂದು ಕೇಳಿದರು.
ಯೇಸು ಅವರಿಗೆ, "ಈ ತರವಾದದ್ದು ದೇವರ ಪ್ರಾರ್ಥನೆ ಉಪವಾಸಗಳಿಂದ ಹೊರತು ಬೇರೆ ಯಾವುದರಿಂದಲೂ ಹೋಗಲಾರದು," ಎಂದರು.
ಯೇಸು ಅವರಿಗೆ, "ಈ ತರವಾದದ್ದು ದೇವರ ಪ್ರಾರ್ಥನೆ ಉಪವಾಸಗಳಿಂದ ಹೊರತು ಬೇರೆ ಯಾವುದರಿಂದಲೂ ಹೋಗಲಾರದು," ಎಂದರು.
ನಾನು ಪ್ರಯಾಸಪಟ್ಟು ಮೈಮುರಿದು ಕೆಲಸ ಮಾಡಿದೆನು. ಎಷ್ಟೋ ಬಾರಿ ನಿದ್ರೆಗೆಟ್ಟೆನು. ಹಸಿವೆ ಬಾಯಾರಿಕೆಗಳೇನೆಂಬುದನ್ನು ಅರಿತೆನು. ಊಟವಿಲ್ಲದೆ ಎಷ್ಟೋ ಬಾರಿ ಉಪವಾಸ ಬಿದ್ದೆನು. ಸರಿಯಾದ ಬಟ್ಟೆ ಇಲ್ಲದೆ ಚಳಿಯಲ್ಲಿ ಬಹಳವಾಗಿ ಸಂಕಟಪಟ್ಟೆನು.
ನಾನಾದರೋ ಅವರು ಅಸ್ವಸ್ಥರಾದಾಗ ಗೋಣಿತಟ್ಟು ಹೊದ್ದುಕೊಂಡು
ಉಪವಾಸದಿಂದ ತಗ್ಗಿಸಿಕೊಂಡೆನು;
ನನ್ನ ಪ್ರಾರ್ಥನೆಗಳಿಗೆ ಉತ್ತರ ದೊರೆಯಲಿಲ್ಲ.