Jesus me ama
Jesus me ama — essa certeza transforma vidas. O amor de Cristo não depende do nosso merecimento, mas da sua natureza. Ele nos amou primeiro, e nada pode nos separar desse amor.
Ele me amou primeiro
Nós amamos porque Ele nos amou primeiro. O amor de Deus se manifestou em nos enviar seu Filho como propiciação pelos nossos pecados.
ದೇವರು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ಆತನನ್ನು ಪ್ರೀತಿಸುತ್ತೇವೆ.
ನಾವು ದೇವರನ್ನು ಪ್ರೀತಿಸಿಲ್ಲ, ಆದರೂ ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತ ಬಲಿಯಾಗಿ ತನ್ನ ಮಗನನ್ನು ಕಳುಹಿಸಿಕೊಟ್ಟಿದ್ದರಲ್ಲಿಯೇ ಆತನ ನಿಜವಾದ ಪ್ರೀತಿಯು ತೋರಿಬರುತ್ತದೆ.
ದೇವರ ಮಕ್ಕಳೂ ಮತ್ತು ಸೈತಾನನ ಮಕ್ಕಳನ್ನು ಕುರಿತದ್ದು
ಇಗೋ, ನಾವು ದೇವರ ಮಕ್ಕಳೆಂದು ಕರೆಯಲ್ಪಡುವುದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ! ನಾವು ಆತನ ಮಕ್ಕಳಾಗಿದ್ದೇವೆ. ಲೋಕವು ಆತನನ್ನು ಅರ್ಥಮಾಡಿಕೊಳ್ಳದೆ ಇರುವುದರಿಂದ ನಮ್ಮನ್ನೂ ಅರ್ಥಮಾಡಿಕೊಳ್ಳುವುದಿಲ್ಲ.
ಕ್ರಿಸ್ತನು ನಮಗೋಸ್ಕರ ತನ್ನ ಪ್ರಾಣವನ್ನು ಅರ್ಪಿಸಿದ್ದರಿಂದ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ.
"ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.
ಆದರೆ ನಾವು ಪಾಪಿಗಳಾಗಿದ್ದಾಗಲೇ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ದೃಢಪಡಿಸಿದ್ದಾನೆ.
Amor inseparável
Nem a morte, nem a vida, nem qualquer outra criatura poderá nos separar do amor de Deus em Cristo Jesus nosso Senhor.
ಹೇಗೆಂದರೆ ಮರಣವಾಗಲಿ, ಜೀವವಾಗಲಿ, ದೇವದೂತರಾಗಲಿ, ದುರಾತ್ಮಗಳಾಗಲಿ, ಈಗಿನ ಸಂಗತಿಗಳಾಗಲಿ, ಮುಂದಣ ಸಂಗತಿಗಳಾಗಲಿ, ಮಹತ್ವಗಳಾಗಲಿ, ಮೇಲಣ ಲೋಕವಾಗಲಿ, ಕೆಳಗಣ ಲೋಕವಾಗಲಿ, ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿ ತೋರಿಬಂದ ದೇವರ ಪ್ರೀತಿಯಿಂದ ಅಗಲಿಸಲು ಸಾಧ್ಯವಿಲ್ಲವೆಂದು ನಾವು ಬಲ್ಲವರಾಗಿದ್ದೇವೆ.
ಈ ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ? ಸಂಕಟವೋ? ಹಿಂಸೆಯೋ? ಹಸಿವೋ? ವಸ್ತ್ರವಿಲ್ಲದಿರುವುದೋ? ಗಂಡಾಂತರವೋ? ಖಡ್ಗವೋ? "ದೇವರೇ ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗುತ್ತಿದ್ದೇವೆ. ವಧ್ಯಸ್ಥಾನಕ್ಕೆ ಒಯ್ದ ಕುರಿಗಳಂತೆ ಎಣಿಸಿದರು." ಎಂಬುದಾಗಿ ಬರೆದಿರುವಂತೆ ಆಗುತ್ತದಲ್ಲಾ. ಆದರೆ ನಮ್ಮನ್ನು ಪ್ರೀತಿಸಿದಾತನ ಮೂಲಕವಾಗಿ ನಾವು ಎಲ್ಲಾ ವಿಷಯಗಳಲ್ಲಿಯೂ ಪೂರ್ಣ ಜಯಶಾಲಿಗಳಾಗಿದ್ದೇವೆ.
ಮತ್ತು ನಂಬಿಗಸ್ತ ಸಾಕ್ಷಿಯೂ, ಸತ್ತವರೊಳಗಿಂದ ಮೊದಲು ಎದ್ದುಬಂದಾತನೂ ಮತ್ತು ಭೂರಾಜರ ಅಧಿಪತಿಯೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವಾತನೂ ತನ್ನ ಪವಿತ್ರವಾದ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದಾತನೂ, ನಮ್ಮನ್ನು ದೇವರ ರಾಜ್ಯವನ್ನಾಗಿಯೂ ತನ್ನ ತಂದೆಯಾದ ದೇವರಿಗೆ ಯಾಜಕರನ್ನಾಗಿಯೂ ಮಾಡಿದಾತನಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯು ಬಲವು ಉಂಟಾಗಲಿ. ಆಮೆನ್.
ಪ್ರೀತಿಯಲ್ಲಿ ನಡೆಯಿರಿ
ಆದುದರಿಂದ ದೇವರ ಪ್ರಿಯರಾದ ಮಕ್ಕಳಿಗೆ ತಕ್ಕ ಹಾಗೆ ಆತನನ್ನು ಅನುಸರಿಸುವವರಾಗಿರಿ. ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುವಾಸನೆಯಾದ ಕಾಣಿಕೆಯಾಗಿಯೂ, ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.
Celebrar o amor de Jesus
O amor de Jesus é motivo de cântico e louvor. De manhã cantarei teu amor e à noite proclamarei tua misericórdia.
ನನ್ನ ಬಲವೇ, ನಿನ್ನನ್ನು ಹಾಡಿಹರಸುವೆನು,
ನನ್ನ ಆಶ್ರಯದುರ್ಗವೂ ಕೃಪಾನಿಧಿಯೂ ದೇವರೇ.
ಯೆಹೋವನು ಕನಿಕರವೂ, ದಯೆಯೂ,
ದೀರ್ಘಶಾಂತಿಯೂ, ಪೂರ್ಣಪ್ರೀತಿಯೂ ಉಳ್ಳವನು.
ಆತನು ಯಾವಾಗಲೂ ತಪ್ಪು ಹುಡುಕುವವನಲ್ಲ;
ನಿತ್ಯವೂ ಕೋಪಿಸುವವನಲ್ಲ.
ಆತನು ನಮ್ಮ ಪಾಪಗಳಿಗೆ ಸರಿಯಾಗಿ ನಮ್ಮನ್ನು ಶಿಕ್ಷಿಸಲಿಲ್ಲ;
ನಮ್ಮ ಅಪರಾಧಗಳಿಗೆ ತಕ್ಕಂತೆ ದಂಡಿಸಲಿಲ್ಲ.
ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ,
ಆತನಲ್ಲಿ ಭಯಭಕ್ತಿಯುಳ್ಳವರ ಮೇಲೆ ಆತನ ಕೃಪೆಯು ಅಷ್ಟು ಅಪಾರವಾಗಿದೆ.
ಪೂರ್ವಕ್ಕೂ, ಪಶ್ಚಿಮಕ್ಕೂ ಎಷ್ಟು ದೂರವೋ,
ನಮ್ಮ ದ್ರೋಹಗಳನ್ನು ನಮ್ಮಿಂದ ತೆಗೆದು ಅಷ್ಟು ದೂರ ಮಾಡಿದ್ದಾನೆ.
ತನ್ನ ಪ್ರಾಣವನ್ನೇ ಸ್ನೇಹಿತರಿಗೋಸ್ಕರ ಕೊಡುವ ಪ್ರೀತಿಗಿಂತ ಹೆಚ್ಚಿನ ಪ್ರೀತಿಯು ಯಾವುದೂ ಇಲ್ಲ.
ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಾಗಿದೆಯಲ್ಲಾ; ಆತನು ಐಶ್ವರ್ಯವಂತನಾಗಿದ್ದರೂ ತನ್ನ ಬಡತನದ ಮುಖಾಂತರ ನೀವು ಐಶ್ವರ್ಯವಂತರಾಗಬೇಕೆಂದು ನಿಮಗೋಸ್ಕರ ಆತನು ಬಡವನಾದನು.