Jesus me ama
Jesus me ama — essa certeza transforma vidas. O amor de Cristo não depende do nosso merecimento, mas da sua natureza. Ele nos amou primeiro, e nada pode nos separar desse amor.
Ele me amou primeiro
Nós amamos porque Ele nos amou primeiro. O amor de Deus se manifestou em nos enviar seu Filho como propiciação pelos nossos pecados.
ದೇವರು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ದೇವರನ್ನು ಪ್ರೀತಿಸುತ್ತೇವೆ.
ಪ್ರೀತಿಯು ಇದಾಗಿರುತ್ತದೆ: ನಾವು ದೇವರನ್ನು ಪ್ರೀತಿಸಿದ್ದರಲ್ಲಿ ಅಲ್ಲ, ದೇವರೇ ನಮ್ಮನ್ನು ಪ್ರೀತಿಸಿ, ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತ ಬಲಿಯಾಗಿ ತಮ್ಮ ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಕಳುಹಿಸಿ ಕೊಟ್ಟಿದ್ದರಲ್ಲಿಯೇ ಅವರ ಸತ್ಯ ಪ್ರೀತಿಯು ತೋರಿಬರುತ್ತದೆ.
ಇಗೋ, ನಾವು ದೇವರ ಮಕ್ಕಳೆಂದು ಕರೆಯುವುದರಲ್ಲಿ ತಂದೆಯು ಎಂಥಾ ಮಹಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾರಲ್ಲಾ! ನಿಜಕ್ಕೂ ನಾವು ದೇವರ ಮಕ್ಕಳಾಗಿದ್ದೇವೆ. ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳುವುದಿಲ್ಲ, ಏಕೆಂದರೆ ಅದು ತಂದೆಯನ್ನು ತಿಳಿದುಕೊಳ್ಳಲಿಲ್ಲ.
ಕ್ರಿಸ್ತ ಯೇಸುವು ನಮಗೋಸ್ಕರ ತಮ್ಮ ಪ್ರಾಣವನ್ನು ಕೊಟ್ಟದ್ದರಲ್ಲಿಯೇ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರ ಸಹೋದರಿಯರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವವರಾಗಿದ್ದೇವೆ.
ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತಮ್ಮ ಏಕೈಕ ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಕೊಟ್ಟರು. ಅದಕ್ಕಾಗಿಯೇ ಅವರನ್ನು ನಂಬುವ ಪ್ರತಿಯೊಬ್ಬರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕು.
ಆದರೆ ಕ್ರಿಸ್ತ ಯೇಸು ನಾವು ಇನ್ನೂ ಪಾಪಿಗಳಾಗಿದ್ದಾಗಲೇ ನಮಗೋಸ್ಕರ ಪ್ರಾಣ ಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ಇಟ್ಟಿರುವ ತಮ್ಮ ಪ್ರೀತಿಯನ್ನು ತೋರಿಸಿದ್ದಾರೆ.
Amor inseparável
Nem a morte, nem a vida, nem qualquer outra criatura poderá nos separar do amor de Deus em Cristo Jesus nosso Senhor.
ಏಕೆಂದರೆ ಮರಣವಾಗಲಿ, ಜೀವವಾಗಲಿ, ದೇವದೂತರಾಗಲಿ, ದುರಾತ್ಮಗಳಾಗಲಿ, ವರ್ತಮಾನಕಾಲದ ಸಂಗತಿಗಳಾಗಲಿ, ಭವಿಷ್ಯತ್ಕಾಲದ ಸಂಗತಿಗಳಾಗಲಿ, ಯಾವುದೇ ಶಕ್ತಿಯಾಗಲಿ, ಎತ್ತರವಾಗಲಿ, ಆಳವಾಗಲಿ ಅಥವಾ ಸೃಷ್ಟಿಯಲ್ಲಿರುವ ಬೇರೆ ಯಾವುದೇ ಆಗಲಿ ನಮ್ಮ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿರುವ ದೇವರ ಪ್ರೀತಿಯಿಂದ ನಮ್ಮನ್ನು ಅಗಲಿಸಲಾಗದೆಂದು ನಮಗೆ ದೃಢ ನಿಶ್ಚಯವಿದೆ.
ಕ್ರಿಸ್ತ ಯೇಸುವಿನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ ಇಕ್ಕಟ್ಟೋ ಹಿಂಸೆಯೋ ಆಹಾರವಿಲ್ಲದಿರುವುದೋ ಬಟ್ಟೆ ಇಲ್ಲದಿರುವುದೋ ಅಪಾಯವೋ ಖಡ್ಗವೋ? ಇವೆಲ್ಲವೂ ನಮ್ಮನ್ನು ಅಗಲಿಸಲಾರವು. ಇವು ಪವಿತ್ರ ವೇದದಲ್ಲಿ ಬರೆದಿರುವಂತೆ ಇವೆ:
"ನಿನಗೋಸ್ಕರ ನಾವು ದಿನವೆಲ್ಲಾ ಮರಣಕ್ಕೆ ಗುರಿಯಾಗಿದ್ದೇವೆ;
ವಧಿಸಲಿಕ್ಕಾಗಿರುವ ಕುರಿಗಳಂತೆ ನಾವು ಭಾವಿಸಿರುತ್ತೇವೆ."
ಇವೆಲ್ಲವುಗಳಲ್ಲಿಯೂ ನಾವು ನಮ್ಮನ್ನು ಪ್ರೀತಿಸಿದಾತನ ಮೂಲಕ ಜಯ ಹೊಂದಿದವರಿಗಿಂತಲೂ ಹೆಚ್ಚಿನವರಾಗಿದ್ದೇವೆ.
ನಂಬಿಗಸ್ತ ಸಾಕ್ಷಿಯೂ ಸತ್ತವರೊಳಗಿಂದ ಪ್ರಥಮವಾಗಿ ಜೀವಂತವಾಗಿ ಎದ್ದು ಬಂದವರೂ ಭೂರಾಜರಿಗೆ ಒಡೆಯರೂ ಆಗಿರುವ ಕ್ರಿಸ್ತ ಯೇಸುವಿನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
ಅವರೇ ನಮ್ಮನ್ನು ಪ್ರೀತಿಸುವವರೂ ತಮ್ಮ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದವರೂ ಆಗಿದ್ದಾರೆ. ನಮ್ಮನ್ನು ಒಂದು ರಾಜ್ಯವನ್ನಾಗಿಯೂ ತಮ್ಮ ತಂದೆಯಾದ ದೇವರಿಗೆ ಸೇವೆ ಸಲ್ಲಿಸುವ ಯಾಜಕರನ್ನಾಗಿಯೂ ಮಾಡಿರುವ ಕ್ರಿಸ್ತ ಯೇಸುವಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯು, ಬಲವು ಇರಲಿ ಆಮೆನ್.
ಆದ್ದರಿಂದ ನೀವು ದೇವರ ಪ್ರಿಯರಾದ ಮಕ್ಕಳಂತೆ ದೇವರ ಮಾದರಿಯನ್ನು ಅನುಸರಿಸಿ ಬಾಳಿರಿ. ಕ್ರಿಸ್ತ ಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ದೇವರಿಗೆ ಸುಗಂಧ ಕಾಣಿಕೆಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಸಹ ಪ್ರೀತಿಯಿಂದ ಬಾಳಿರಿ.
Celebrar o amor de Jesus
O amor de Jesus é motivo de cântico e louvor. De manhã cantarei teu amor e à noite proclamarei tua misericórdia.
ನನ್ನ ಬಲವಾಗಿರುವವರೇ, ನಿಮ್ಮನ್ನು ಕೊಂಡಾಡುವೆನು.
ಏಕೆಂದರೆ ದೇವರೇ, ನೀವು ನನ್ನ ಭದ್ರಕೋಟೆ ಆಗಿದ್ದೀರಿ.
ನೀವು ನಾನು ಭರವಸೆ ಇಡುವ ಕರುಣೆಯುಳ್ಳ ದೇವರೂ ಆಗಿದ್ದೀರಿ.
ಯೆಹೋವ ದೇವರು, ಅನುಕಂಪವೂ ದಯೆಯೂ
ದೀರ್ಘಶಾಂತಿಯೂ ಪೂರ್ಣ ಪ್ರೀತಿಯೂ ಉಳ್ಳವರಾಗಿದ್ದಾರೆ.
ಅವರು ಯಾವಾಗಲೂ ತಪ್ಪುಹುಡುಕುವವರಲ್ಲ;
ದೇವರು ತಮ್ಮ ಕೋಪವನ್ನು ಎಂದೆಂದಿಗೂ ಕೂಡಿಟ್ಟುಕೊಳ್ಳುವವರು ಅಲ್ಲ;
ದೇವರು ನಮ್ಮ ಪಾಪಗಳಿಗೆ ಸರಿಯಾಗಿ ನಮ್ಮನ್ನು ಶಿಕ್ಷಿಸಲಿಲ್ಲ;
ನಮ್ಮ ಅಧರ್ಮಗಳ ಪ್ರಕಾರ ನಮಗೆ ಮುಯ್ಯಿತೀರಿಸಲಿಲ್ಲ.
ಏಕೆಂದರೆ, ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ,
ದೇವರ ಪ್ರೀತಿಯು ತಮಗೆ ಭಯಪಡುವವರ ಮೇಲೆ ಅಷ್ಟು ಮಹೋನ್ನತವಾಗಿದೆ;
ಪೂರ್ವಕ್ಕೂ ಪಶ್ಚಿಮಕ್ಕೂ ಎಷ್ಟು ದೂರವೋ,
ಅವರು ನಮ್ಮ ಅತಿಕ್ರಮಗಳನ್ನು ನಮ್ಮಿಂದ ಅಷ್ಟು ದೂರ ಮಾಡಿದ್ದಾರೆ.
ಒಬ್ಬನು ತನ್ನ ಸ್ನೇಹಿತರಿಗಾಗಿ ತನ್ನ ಪ್ರಾಣವನ್ನೇ ಕೊಡುವ ಪ್ರೀತಿಗಿಂತ ಮಹತ್ತಾದದ್ದು ಯಾರಲ್ಲೂ ಇಲ್ಲ.
ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯನ್ನು ನೀವು ಬಲ್ಲವರಾಗಿದ್ದೀರಿ. ಅವರು ಐಶ್ವರ್ಯವಂತರಾಗಿದ್ದರೂ ತಮ್ಮ ಬಡತನದ ಮೂಲಕ ನೀವು ಐಶ್ವರ್ಯವಂತರಾಗುವಂತೆ ಅವರು ನಿಮಗೋಸ್ಕರ ಬಡವರಾದರು.