Jesus te ama
Jesus te ama — esta é a mensagem mais poderosa do universo. O amor de Cristo excede todo entendimento e nos alcança onde quer que estejamos, como somos.
O amor de Jesus
Ninguém tem maior amor do que aquele que dá a vida pelos amigos. Jesus demonstrou o amor supremo na cruz do Calvário.
ತನ್ನ ಪ್ರಾಣವನ್ನೇ ಸ್ನೇಹಿತರಿಗೋಸ್ಕರ ಕೊಡುವ ಪ್ರೀತಿಗಿಂತ ಹೆಚ್ಚಿನ ಪ್ರೀತಿಯು ಯಾವುದೂ ಇಲ್ಲ.
ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ನನ್ನ ಆಜ್ಞೆಯಾಗಿದೆ.
"ತಂದೆ ನನ್ನನ್ನು ಪ್ರೀತಿಸಿದ ಹಾಗೆಯೇ ನಾನೂ ನಿಮ್ಮನ್ನು ಪ್ರೀತಿಸಿದ್ದೇನೆ. ನೀವು ನನ್ನ ಪ್ರೀತಿಯಲ್ಲಿ ನೆಲೆಗೊಂಡಿರಿ.
ಯೇಸು ಅವನಿಗೆ, "ಯಾವನಾದರೂ ನನ್ನನ್ನು ಪ್ರೀತಿಸುವುದಾದರೆ ನನ್ನ ಮಾತಿನಂತೆ ನಡೆಯುವನು. ಅವನನ್ನು ನನ್ನ ತಂದೆಯು ಪ್ರೀತಿಸುವನು ಮತ್ತು ನಾವಿಬ್ಬರೂ ಅವನ ಬಳಿಗೆ ಬಂದು, ಅವನೊಂದಿಗೆ ನೆಲೆಸುವೆವು.
ನಾನು ನಿಮಗೆ ಒಂದು ಹೊಸ ಆಜ್ಞೆಯನ್ನು ಕೊಡುತ್ತೇನೆ: ಏನೆಂದರೆ, ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಸಹ ಒಬ್ಬರನ್ನೊಬ್ಬರು ಪ್ರೀತಿಸಬೇಕು, ಎಂಬುದೇ.
Amados por Ele
Deus prova seu amor em que Cristo morreu por nós quando ainda éramos pecadores. O amor de Jesus é incondicional e eterno.
ಆದರೆ ನಾವು ಪಾಪಿಗಳಾಗಿದ್ದಾಗಲೇ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ದೃಢಪಡಿಸಿದ್ದಾನೆ.
ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುವಾಸನೆಯಾದ ಕಾಣಿಕೆಯಾಗಿಯೂ, ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.
ನೀವು ದೇವರಾತ್ಮನ ಮೂಲಕ ಆಂತರ್ಯದಲ್ಲಿ ವಿಶೇಷಬಲವನ್ನು ಹೊಂದುವಂತೆಯೂ, ಕ್ರಿಸ್ತನು ನಿಮ್ಮ ನಂಬಿಕೆಯ ಮೂಲಕ ನಿಮ್ಮ ಹೃದಯಗಳಲ್ಲಿ ವಾಸಮಾಡುವಂತೆಯೂ, ಆತನು ತನ್ನ ಮಹಿಮಾತಿಶಯದ ಪ್ರಕಾರ ಅನುಗ್ರಹಿಸಲಿ. ನೀವು ದೇವರ ಪ್ರೀತಿಯಲ್ಲಿ ನೆಲೆಯಾಗಿ ನಿಂತು, ದೇವಜನರೆಲ್ಲರೊಂದಿಗೆ ಅದರ ಅಗಲ, ಉದ್ದ, ಎತ್ತರ, ಆಳ ಎಷ್ಟೆಂಬುದನ್ನು ಗ್ರಹಿಸುವುದಕ್ಕೆ ಶಕ್ತರಾಗುವಂತೆಯೂ, ಬುದ್ಧಿಗಿಂತಲೂ ಮಿಗಿಲಾಗಿರುವ ಕ್ರಿಸ್ತನ ಪ್ರೀತಿಯನ್ನು ತಿಳಿದುಕೊಂಡು, ದೇವರ ಸಂಪೂರ್ಣತೆಯ ಮಟ್ಟಿಗೂ ಪರಿಪೂರ್ಣರಾಗುವ ಹಾಗೆ ದೇವರು ನಿಮಗೆ ದಯಪಾಲಿಸಲಿ ಎಂದು ಆತನನ್ನು ಬೇಡಿಕೊಳ್ಳುತ್ತೇನೆ.
ದೇವರು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ಆತನನ್ನು ಪ್ರೀತಿಸುತ್ತೇವೆ.
ಆದರೆ ನಮ್ಮ ಕರ್ತನ ಕೃಪೆಯು ಅತ್ಯಧಿಕವಾಗಿದ್ದು ಕ್ರಿಸ್ತಯೇಸುವಿನಲ್ಲಿರುವ ನಂಬಿಕೆಯನ್ನೂ ಪ್ರೀತಿಯನ್ನೂ ನನ್ನಲ್ಲಿ ಉಕ್ಕಿಸಿತ್ತು.