Jovens
Deus tem planos maravilhosos para os jovens. A Bíblia os convida a consagrar a juventude ao Senhor, crescer em sabedoria e ser exemplo para todos em fé, palavra, conduta e amor.
Ninguém despreze a tua mocidade
Paulo exortou Timóteo: sê exemplo dos fiéis na palavra, no procedimento, no amor, no espírito, na fé e na pureza.
ನಿನ್ನ ಯೌವನವನ್ನೂ ಯಾರೂ ತಾತ್ಸಾರ ಮಾಡದಿರಲಿ. ಆದರೆ ನಂಬುವವರಿಗೆ ನುಡಿಯಲ್ಲಿ, ನಡೆಯಲ್ಲಿ, ಪ್ರೀತಿಯಲ್ಲಿ, ವಿಶ್ವಾಸದಲ್ಲಿ, ಶುದ್ಧತ್ವದಲ್ಲಿ ನೀನೇ ಆದರ್ಶನಾಗಿರು.
ಹಾಗೆಯೇ, ಯೌವನಸ್ಥರು ಆತ್ಮ ಸ್ವಶಿಸ್ತನ್ನು ಹೊಂದಿದವರಾಗಿರಬೇಕೆಂದು ಅವರನ್ನು ಪ್ರೋತ್ಸಾಹಿಸು.
ಮಕ್ಕಳೇ, ನೀವು ಕರ್ತನಲ್ಲಿ ನಿಮ್ಮ ತಂದೆತಾಯಿಗಳಿಗೆ ವಿಧೇಯರಾಗಿರಿ, ಇದು ಸೂಕ್ತವಾದದ್ದು. "ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು," ಎಂಬುದು ವಾಗ್ದಾನ ಸಹಿತವಾದ ಮೊದಲನೆಯ ಆಜ್ಞೆಯಾಗಿದೆ. "ಸನ್ಮಾನಿಸಿದರೆ ನಿನಗೆ ಶುಭವಾಗುವುದು. ನೀನು ಭೂಮಿಯ ಮೇಲೆ ಬಹುಕಾಲ ಬದುಕುವೆ."
ಮಕ್ಕಳೇ, ನೀವು ಕರ್ತನಲ್ಲಿ ನಿಮ್ಮ ತಂದೆತಾಯಿಗಳಿಗೆ ವಿಧೇಯರಾಗಿರಿ, ಇದು ಸೂಕ್ತವಾದದ್ದು. "ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು," ಎಂಬುದು ವಾಗ್ದಾನ ಸಹಿತವಾದ ಮೊದಲನೆಯ ಆಜ್ಞೆಯಾಗಿದೆ.
Lembrar do Criador na juventude
Lembra-te do teu Criador nos dias da tua mocidade. A sabedoria ganha cedo produz frutos duradouros na vida inteira.
ಕಷ್ಟದ ದಿನಗಳು ಬರುವುದಕ್ಕೆ ಮೊದಲು,
"ಇವುಗಳಲ್ಲಿ ನನಗೆ ಸಂತೋಷವಿಲ್ಲ,"
ಎಂದು ನೀನು ಹೇಳುವ ವರ್ಷಗಳು
ಸಮೀಪಿಸುವುದಕ್ಕೆ ಮೊದಲು,
ನಿನ್ನ ಯೌವನದ ದಿನಗಳಲ್ಲಿ ಸೃಷ್ಟಿಕರ್ತ ದೇವರನ್ನು ಸ್ಮರಿಸು.
ಕಷ್ಟದ ದಿನಗಳು ಬರುವುದಕ್ಕೆ ಮೊದಲು,
"ಇವುಗಳಲ್ಲಿ ನನಗೆ ಸಂತೋಷವಿಲ್ಲ,"
ಎಂದು ನೀನು ಹೇಳುವ ವರ್ಷಗಳು
ಸಮೀಪಿಸುವುದಕ್ಕೆ ಮೊದಲು,
ನಿನ್ನ ಯೌವನದ ದಿನಗಳಲ್ಲಿ ಸೃಷ್ಟಿಕರ್ತ ದೇವರನ್ನು ಸ್ಮರಿಸು.
ಸೂರ್ಯ ಚಂದ್ರ
ನಕ್ಷತ್ರಗಳೂ ನಿನಗೆ ಮೊಬ್ಬಾಗಿ,
ಮಳೆಯ ಮೋಡಗಳು ಮತ್ತೆ ಬರುವುದಕ್ಕಿಂತ ಮೊದಲು ದೇವರನ್ನು ಸ್ಮರಿಸು.
ಆ ದಿನದಲ್ಲಿ ಮನೆ ಕಾಯುವವರು ನಡುಗುವರು.
ಬಲವಾದ ಮನುಷ್ಯರು ಸಹ ತಾವಾಗಿಯೇ ಬಗ್ಗುವರು.
ಅರೆಯುವವರು ಕೆಲವರೇ ಉಳಿದಿರುವುದರಿಂದ ಸುಮ್ಮನಿರುವರು.
ಕಿಟಕಿಗಳಿಂದ ಹೊರಗೆ ನೋಡುವವರು ಮಂಕಾಗುವರು.
ಯುವಕನೇ, ನಿನ್ನ ಯೌವನದಲ್ಲಿ ಸಂತೋಷಪಡು.
ಯೌವನದ ದಿನಗಳಲ್ಲಿ ನಿನ್ನ ಹೃದಯವು ನಿನ್ನನ್ನು ಆನಂದಪಡಿಸಲಿ.
ನೀನು ನಿನ್ನ ಮನಸ್ಸಿಗೆ ಬಂದಂತೆಯೂ
ನಿನ್ನ ಕಣ್ಣಿನ ನೋಟದಂತೆಯೂ ನಡೆ.
ಆದರೆ ಈ ಎಲ್ಲಾ ಸಂಗತಿಗಳಿಗಾಗಿ
ದೇವರು ನಿನ್ನನ್ನು ನ್ಯಾಯವಿಚಾರಿಸುವರು ಎಂದು ತಿಳಿದುಕೋ.
ಆದ್ದರಿಂದ ನಿನ್ನ ಹೃದಯದಿಂದ ಚಿಂತೆಯನ್ನು ತೆಗೆದುಹಾಕು.
ನಿನ್ನ ಶರೀರದಿಂದ ಕೆಟ್ಟದ್ದನ್ನು ದೂರಮಾಡು.
ಯೌವನವೂ ಅದರ ಚೈತನ್ಯವೂ ಅಲ್ಪಕಾಲವೇ.
ಬುದ್ಧಿಯ ಹೇಳಿಕೆಗೆ ಕಿವಿಗೊಡದ ಮೂಢ ಮುದಿ ಅರಸನಿಗಿಂತ ಬಡವನಾದರೂ ಜ್ಞಾನಿಯಾದ ಒಬ್ಬ ಯುವಕನೇ ಮೇಲು.
Força e promessa
Os jovens renovam suas forças quando esperam no Senhor. Deus levanta jovens com visões e sonhos para transformar o mundo.
ಯೌವನಸ್ಥರೋ ದಣಿದು ಬಳಲುವರು
ಮತ್ತು ತರುಣರು ಸಂಪೂರ್ಣವಾಗಿ ಬೀಳುವರು.
ಆದರೆ ಯೆಹೋವ ದೇವರನ್ನು ನಿರೀಕ್ಷಿಸುವವರೋ
ಹೊಸ ಬಲವನ್ನು ಹೊಂದುವರು.
ಅವರು ಹದ್ದುಗಳಂತೆ
ರೆಕ್ಕೆಗಳಿಂದ ಬೆಟ್ಟವನ್ನು ಏರುವರು.
ಅವರು ಓಡಿ ದಣಿಯರು. ನಡೆದು ಬಳಲರು.
"ಆಮೇಲೆ ನಾನು,
ನನ್ನ ಆತ್ಮನನ್ನು ಎಲ್ಲಾ ಮನುಷ್ಯರ ಮೇಲೆ ಸುರಿಸುವೆನು,
ನಿಮ್ಮ ಗಂಡು ಹೆಣ್ಣುಮಕ್ಕಳು ಪ್ರವಾದಿಸುವರು.
ನಿಮ್ಮ ಹಿರಿಯರಿಗೆ ಕನಸುಗಳು ಬೀಳುವುವು.
ನಿಮ್ಮ ಯುವಜನರಿಗೆ ದರ್ಶನಗಳಾಗುವವು.
ಆ ದಿನಗಳಲ್ಲಿ, ನನ್ನ ದಾಸ ದಾಸಿಯರ ಮೇಲೆ,
ನನ್ನ ಆತ್ಮವನ್ನು ಸುರಿಸುವೆನು.
ಈ ನಾಲ್ಕು ಯೌವನಸ್ಥರಿಗೆ ದೇವರು ಎಲ್ಲಾ ವಿದ್ಯೆಯಲ್ಲಿಯೂ, ಜ್ಞಾನದಲ್ಲಿಯೂ, ತಿಳುವಳಿಕೆಯನ್ನೂ, ವಿವೇಕವನ್ನೂ ಕೊಟ್ಟರು. ದಾನಿಯೇಲನು ಸಕಲ ದರ್ಶನಗಳಲ್ಲಿಯೂ, ಕನಸುಗಳಲ್ಲಿಯೂ ತಿಳುವಳಿಕೆಯುಳ್ಳವನಾಗಿದ್ದನು.
ಅರಸನು ಅವರನ್ನು ಕರೆತರಬೇಕೆಂದು ನೇಮಿಸಿದ ದಿವಸಗಳ ಕೊನೆಯಲ್ಲಿ ಕಂಚುಕಿಯರ ಯಜಮಾನನು ಅವರನ್ನು ನೆಬೂಕದ್ನೆಚ್ಚರನ ಮುಂದೆ ತಂದನು. ಅರಸನು ಅವರ ಸಂಗಡ ಮಾತನಾಡಿದನು. ಅವರೆಲ್ಲರಲ್ಲಿ ದಾನಿಯೇಲ, ಹನನ್ಯ, ಮೀಶಾಯೇಲ್ ಮತ್ತು ಅಜರ್ಯ ಇವರ ಹಾಗೆ ಒಬ್ಬನೂ ಸಿಗಲಿಲ್ಲ. ಆದ್ದರಿಂದಲೇ ಇವರು ಅರಸನ ಸನ್ನಿಧಿಯ ಸೇವಕರಾದರು.
ಯೌವನಸ್ಥರ ಮಹಿಮೆ ಅವರ ಬಲವೇ;
ಮುದುಕರ ವೈಭವ ನರೆತ ತಲೆಯೇ.
ಚಿಕ್ಕ ಮಕ್ಕಳಾದರೋ ತಮ್ಮ ಕ್ರಿಯೆಗಳಿಂದಲೇ,
ತಾವು ಶುದ್ಧರೋ ಯಥಾರ್ಥರೋ ಎಂಬುದನ್ನು ತೋರ್ಪಡಿಸಿಕೊಳ್ಳುತ್ತಾರೆ.
Guardar o caminho
Como purificará o jovem seu caminho? Guardando-o segundo a tua Palavra. A Escritura na juventude guarda do pecado a vida inteira.
ಯೌವನಸ್ಥನು ಯಾವುದರಿಂದ ತನ್ನ ನಡತೆಯನ್ನು ಶುದ್ಧವಾಗಿಟ್ಟುಕೊಳ್ಳುವನು?
ನಿಮ್ಮ ವಾಕ್ಯದ ಪ್ರಕಾರ ಜೀವಿಸುವುದರಿಂದಲೇ.
ನಿಮಗೆ ವಿರೋಧವಾಗಿ ಪಾಪಮಾಡದ ಹಾಗೆ
ನನ್ನ ಹೃದಯದಲ್ಲಿ ನಿಮ್ಮ ವಾಕ್ಯವನ್ನು ಬಚ್ಚಿಟ್ಟುಕೊಂಡಿದ್ದೇನೆ.
ಸಾರ್ವಭೌಮ ಯೆಹೋವ ದೇವರೇ, ನೀವು ನನ್ನ ನಿರೀಕ್ಷೆ ಆಗಿದ್ದೀರಿ.
ನನ್ನ ಯೌವನದಿಂದ ನನ್ನ ಭರವಸೆಯೂ ಆಗಿದ್ದೀರಿ.
ಪ್ರಾಯಸ್ಥರೇ, ಕನ್ಯೆಯರೇ,
ಮಕ್ಕಳೇ, ವೃದ್ಧರೇ.
ಯೆಹೋವ ದೇವರ ಹೆಸರನ್ನು ಸ್ತುತಿಸಿರಿ;
ಅವರ ಹೆಸರು ಮಾತ್ರ ಶ್ರೇಷ್ಠವಾಗಿದೆ;
ಅವರ ಮಹಿಮೆಯು ಭೂಮ್ಯಾಕಾಶಗಳನ್ನು ಆವರಿಸಿದೆ.
ಇಸ್ರಾಯೇಲರ ಅರಸನೂ ದಾವೀದನ ಮಗನೂ ಆದ ಸೊಲೊಮೋನನ ಜ್ಞಾನೋಕ್ತಿಗಳು:
ಜನರು ಜ್ಞಾನವನ್ನೂ ಶಿಸ್ತನ್ನೂ ಪಡೆದುಕೊಳ್ಳುವುದಕ್ಕೆ;
ವಿವೇಕದ ಮಾತುಗಳನ್ನು ಗ್ರಹಿಸುವುದಕ್ಕೆ;
ಅಂದರೆ, ಶಿಕ್ಷಣ, ವಿವೇಕ ನಡವಳಿ, ಸರಿಯಾದದ್ದನ್ನು ಮಾಡುವುದು
ನ್ಯಾಯ ಮತ್ತು ಯುಕ್ತವಾದವುಗಳನ್ನು ನಡೆಸುವ ಜ್ಞಾನೋಕ್ತಿಗಳು;
ಮುಗ್ಧರಿಗೆ ವಿವೇಕವನ್ನೂ ಯೌವನಸ್ಥರಿಗೆ ತಿಳುವಳಿಕೆ ಹಾಗೂ
ಸ್ವವಿವೇಚನೆಯನ್ನೂ ಕೊಡುವುದಕ್ಕಾಗಿ ಈ ಜ್ಞಾನೋಕ್ತಿಗಳಿವೆ.
ಮಗನೇ, ಕೇಳಿ ಜ್ಞಾನವಂತನಾಗು;
ನೀತಿ ಮಾರ್ಗದಲ್ಲಿ ನಿನ್ನ ಹೃದಯವನ್ನು ನಡೆಸು.
ಅತಿ ಮದ್ಯಪಾನ ಮಾಡುವವರಲ್ಲಿ
ಅತಿ ಮಾಂಸಭಕ್ಷರಲ್ಲಿಯೂ ಸೇರಬೇಡ.
ಏಕೆಂದರೆ ಕುಡುಕರೂ ಹೊಟ್ಟೆಬಾಕರೂ ದುರ್ಗತಿಗೆ ಬರುವರು;
ತೂಕಡಿಕೆಯು ಹರಕು ಬಟ್ಟೆಗಳನ್ನು ಹೊದಿಸುವದು.
ನಿನ್ನನ್ನು ಹೆತ್ತ ತಂದೆಯ ಮಾತಿಗೆ ಕಿವಿಗೊಡು,
ನಿನ್ನ ತಾಯಿ ಮುಪ್ಪಿನವಳಾದಾಗ ಆಕೆಯನ್ನು ಅಸಡ್ಡೆ ಮಾಡಬೇಡ.
Coragem e vocação
Deus chamou jovens como Jeremias e Josué para grandes missões. A juventude não é desculpa — é oportunidade de servir poderosamente.
ಆಗ ನಾನು, "ಹಾ, ಸಾರ್ವಭೌಮ ಯೆಹೋವ ದೇವರೇ, ಇಗೋ ನಾನು ಮಾತು ಬಲ್ಲವನಲ್ಲ, ನಾನು ಚಿಕ್ಕವನು," ಎಂದೆನು.
ಆಗ ಯೆಹೋವ ದೇವರು ನನಗೆ, " ‘ನಾನು ಚಿಕ್ಕವನೆಂದು ಹೇಳಬೇಡ.’ ಏಕೆಂದರೆ ನಾನು ನಿನ್ನನ್ನು ಕಳುಹಿಸುವವರೆಲ್ಲರ ಬಳಿಗೆ ನೀನು ಹೋಗಬೇಕು. ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲಾ ಮಾತನಾಡಬೇಕು. ಅವರಿಗೆ ಭಯಪಡಬೇಡ. ಏಕೆಂದರೆ ನಿನ್ನನ್ನು ತಪ್ಪಿಸುವುದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ," ಎಂದು ಯೆಹೋವ ದೇವರಾದ ನಾನು ಹೇಳುತ್ತೇನೆ.
ನಾನು ನಿಮ್ಮನ್ನು ಕುರಿತು ಮಾಡುವ ಯೋಜನೆಗಳನ್ನು ಬಲ್ಲೆನು. ಅವು ಕೇಡಿಗಲ್ಲ, ಹಿತಕ್ಕಾಗಿರುವ ಯೋಜನೆಗಳು. ನಿಮಗೆ ಭವಿಷ್ಯವನ್ನೂ, ನಿರೀಕ್ಷೆಯನ್ನೂ ಕೊಡುವುದಕ್ಕಿವೆ. ಆಗ ನನ್ನನ್ನು ಕರೆಯುವಿರಿ. ಹೋಗಿ ನನಗೆ ಪ್ರಾರ್ಥನೆ ಮಾಡುವಿರಿ. ನಾನು ನಿಮಗೆ ಕಿವಿಗೊಡುವೆನು. ನನ್ನನ್ನು ಹುಡುಕುವಿರಿ. ಪೂರ್ಣಹೃದಯದಿಂದ ನನ್ನನ್ನು ಹುಡುಕುವಾಗ, ನನ್ನನ್ನು ಕಂಡುಕೊಳ್ಳುವಿರಿ. ನಿಮಗೆ ದೊರೆಯುವೆನು. ನಿಮ್ಮ ಸೆರೆಯನ್ನು ತಿರುಗಿಸಿ ನಾನು ನಿಮ್ಮನ್ನು ಓಡಿಸಿಬಿಟ್ಟ ಎಲ್ಲಾ ಜನಾಂಗಗಳಿಂದಲೂ, ಎಲ್ಲಾ ಸ್ಥಳಗಳಿಂದಲೂ ನಿಮ್ಮನ್ನು ಕೂಡಿಸುವೆನು. ನಾನು ಯಾವ ಸ್ಥಳದಿಂದ ನಿಮ್ಮನ್ನು ಸೆರೆಯಾಗಿ ಕಳುಹಿಸಿದೆನೋ, ಆ ಸ್ಥಳಕ್ಕೆ ನಿಮ್ಮನ್ನು ತಿರುಗಿ ಬರಮಾಡುವೆನು."
"ನನ್ನ ಸೇವಕನಾದ ಮೋಶೆಯು ನಿನಗೆ ಆಜ್ಞಾಪಿಸಿದ ದೇವರ ನಿಯಮದ ಪ್ರಕಾರ ನೀನು ಕೈಗೊಂಡು ನಡೆಯುವ ಹಾಗೆ ಬಲಿಷ್ಠನಾಗಿರು, ಧೈರ್ಯದಿಂದಿರು. ನೀನು ಹೋಗುವ ಸ್ಥಳದಲ್ಲೆಲ್ಲಾ ಸಫಲವಾಗುವ ಹಾಗೆ, ಅದನ್ನು ಬಿಟ್ಟು ಬಲಕ್ಕಾದರೂ, ಎಡಕ್ಕಾದರೂ ತಿರುಗಬೇಡ. ಈ ದೇವರ ನಿಯಮವು ನಿನ್ನ ಬಾಯಿಂದ ತೊಲಗಬಾರದು, ಅದರಲ್ಲಿ ಬರೆದಿರುವ ಪ್ರಕಾರವೇ ಕೈಗೊಂಡು ನಡೆಯುವ ಹಾಗೆ ಹಗಲುರಾತ್ರಿ ಅದನ್ನು ಧ್ಯಾನಿಸಬೇಕು. ಆಗ ನಿನ್ನ ಮಾರ್ಗವು ಸಮೃದ್ಧಿಯಾಗಿ ನೀನು ಜಯಶಾಲಿಯಾಗುವೆ. ನಾನು ನಿನಗೆ ಆಜ್ಞಾಪಿಸಿದ್ದೇನಲ್ಲಾ, ಬಲಿಷ್ಠನಾಗಿರು. ಧೈರ್ಯದಿಂದಿರು, ಭಯಪಡಬೇಡ, ನಿರುತ್ಸಾಹಗೊಳ್ಳಬೇಡ. ಏಕೆಂದರೆ ನೀನು ಹೋಗುವ ಕಡೆಯೆಲ್ಲಾ ನಿನ್ನ ದೇವರಾದ ಯೆಹೋವ ದೇವರು ನಿನ್ನ ಸಂಗಡ ಇದ್ದಾರೆ," ಎಂದು ಹೇಳಿದರು.
ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರಿ. ಏಕೆಂದರೆ,
"ದೇವರು ಅಹಂಕಾರಿಗಳನ್ನು ಎದುರಿಸುತ್ತಾರೆ,
ದೀನರಿಗಾದರೋ ಕೃಪೆಯನ್ನು ಕೊಡುತ್ತಾರೆ!"
ಹೀಗಿರುವುದರಿಂದ ದೇವರ ಪರಾಕ್ರಮವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ, ಆಗ ದೇವರು ಸಕಾಲದಲ್ಲಿ ನಿಮ್ಮನ್ನು ಮೇಲಕ್ಕೆತ್ತುವರು.
ಮಕ್ಕಳೇ, ನೀವು ತಂದೆಯನ್ನು ತಿಳಿದುಕೊಂಡಿರುವುದರಿಂದ
ನಿಮಗೆ ಬರೆಯುತ್ತೇನೆ.
ತಂದೆಗಳೇ, ಆದಿಯಿಂದ ಇರುವ ದೇವರನ್ನು
ನೀವು ಬಲ್ಲವರಾಗಿರುವುದರಿಂದ ನಿಮಗೆ ಬರೆದಿದ್ದೇನೆ.
ಯೌವನಸ್ಥರೇ, ನೀವು ಬಲ ಹೊಂದಿರುವುದರಿಂದಲೂ
ದೇವರ ವಾಕ್ಯವು ನಿಮ್ಮಲ್ಲಿ ನೆಲೆಗೊಂಡಿರುವುದರಿಂದಲೂ
ನೀವು ಕೆಡುಕನನ್ನು ಜಯಿಸಿರುವುದರಿಂದಲೂ
ನಿಮಗೆ ಬರೆದಿದ್ದೇನೆ.
ಪಕ್ಷತನ ಕುಡಿಕತನಗಳಲ್ಲಾಗಲಿ, ಕಾಮವಿಲಾಸ ನಿರ್ಲಜ್ಯ ಕೃತ್ಯಗಳಲ್ಲಾಗಲಿ, ಮತ್ಸರಗಳಲ್ಲಾಗಲಿ ನಿರತರಾಗಿರದೆ ಹಗಲಿನಲ್ಲಿರುವವರಂತೆ ಸಭ್ಯತೆಯಿಂದ ನಡೆದುಕೊಳ್ಳೋಣ.
ತನ್ನ ಯೌವನದಲ್ಲಿ
ನೊಗವನ್ನು ಹೊಂದಿರುವುದು ಮಾನವನಿಗೆ ಒಳ್ಳೆಯದು.