Juízo
O juízo de Deus é manifestação de sua justiça e soberania. Ele julga o mundo, julga as nações e julga cada coração com perfeita equidade e misericórdia.
O juízo de Deus
Deus é juiz justo que prova os corações. Seu juízo é verdadeiro e alcança toda obra, secreta ou pública.
ಒಳ್ಳೆಯದಾಗಲೀ ಅಥವಾ ಕೆಟ್ಟದ್ದಾಗಲೀ,
ಸಕಲ ರಹಸ್ಯ ಸಂಗತಿಗಳನ್ನು ವಿಮರ್ಶಿಸಿ,
ನ್ಯಾಯವಿಚಾರಣೆಗೆ ದೇವರು ಪ್ರತಿಯೊಂದು ಕಾರ್ಯವನ್ನು ಗುರಿಮಾಡುವನು.
ತಂದೆಯು ಹೇಗೆ ಸತ್ತವರನ್ನು ಎಬ್ಬಿಸಿ ಬದುಕಿಸುತ್ತಾನೋ ಹಾಗೆಯೇ ಮಗನು ಸಹ ತನಗೆ ಬೇಕಾದವರನ್ನು ಬದುಕಿಸುತ್ತಾನೆ. ಇದಲ್ಲದೆ ತಂದೆಯು ಯಾರಿಗೂ ತೀರ್ಪುಮಾಡುವುದಿಲ್ಲ, ಆದರೆ ಎಲ್ಲಾ ತೀರ್ಪನ್ನು ಮಗನಿಗೆ ಕೊಟ್ಟಿದ್ದಾನೆ. ಎಲ್ಲರೂ ತಂದೆಯನ್ನು ಯಾವ ರೀತಿಯಲ್ಲಿ ಗೌರವಿಸುವರೋ ಅದೇ ರೀತಿಯಲ್ಲಿ ಮಗನನ್ನೂ ಗೌರವಿಸಬೇಕೆಂದು ಹಾಗೆ ಮಾಡಿದ್ದಾನೆ. ಮಗನನ್ನು ಗೌರವಿಸದವನು ಆತನನ್ನು ಕಳುಹಿಸಿದ ತಂದೆಯನ್ನು ಗೌರವಿಸಲಾರನು. ನಿಮಗೆ ನಿಜನಿಜವಾಗಿ ಹೇಳುತ್ತೇನೆ ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯ ಜೀವವನ್ನು ಹೊಂದಿದ್ದಾನೆ, ಅವನು ಖಂಡನೆಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದಾನೆ. ನಿಮಗೆ ನಿಜನಿಜವಾಗಿ ಹೇಳುತ್ತೇನೆ ಸತ್ತವರು ದೇವಕುಮಾರನ ಸ್ವರವನ್ನು ಕೇಳುವ ಕಾಲ ಬರುತ್ತದೆ, ಅದು ಈಗಾಗಲೇ ಬಂದಿದೆ, ಕೇಳಿದವರು ಬದುಕುವರು. ತಂದೆಯು ತಾನು ಹೇಗೆ ಸ್ವತಃ ಜೀವವುಳ್ಳವನಾಗಿದ್ದಾನೋ, ಹಾಗೆಯೇ ಮಗನೂ ಸ್ವತಃ ಜೀವವುಳ್ಳವನಾಗಿರುವಂತೆ ಮಾಡಿದ್ದಾನೆ. ಮಗನು ಮನುಷ್ಯಕುಮಾರನಾಗಿರುವುದರಿಂದ ನ್ಯಾಯತೀರ್ಪು ಮಾಡುವ ಅಧಿಕಾರವನ್ನೂ ತಂದೆ ಆತನಿಗೆ ಕೊಟ್ಟಿದ್ದಾನೆ. ಅದಕ್ಕೆ ಆಶ್ಚರ್ಯಪಡಬೇಡಿರಿ. ಒಂದು ಕಾಲ ಬರುತ್ತದೆ, ಆಗ ಸಮಾಧಿಗಳಲ್ಲಿರುವವರೆಲ್ಲಾ ಆತನ ಸ್ವರವನ್ನು ಕೇಳಿ, ಎದ್ದು ಹೊರಗೆ ಬರುವರು. ಒಳ್ಳೆಯದನ್ನು ಮಾಡಿದವರಿಗೆ ನಿತ್ಯಜೀವಕ್ಕಾಗಿ ಪುನರುತ್ಥಾನವಾಗುವುದು. ಕೆಟ್ಟದ್ದನ್ನು ಮಾಡಿದವರು ಖಂಡನೆಗಾಗಿ ಪುನರುತ್ಥಾನವನ್ನೂ ಹೊಂದುವರು.
"ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು ತಂದೆಯು ಹೇಳಿದ್ದನ್ನು ನಾನು ಕೇಳಿ ನ್ಯಾಯತೀರಿಸುತ್ತೇನೆ ಮತ್ತು ಸ್ವಂತ ಚಿತ್ತ ನೆರವೇರಬೇಕೆಂದು ಅಪೇಕ್ಷಿಸದೆ ನನ್ನನ್ನು ಕಳುಹಿಸಿದಾತನ ಚಿತ್ತ ನೆರವೇರಬೇಕೆಂದು ನಾನು ಬಯಸುವುದರಿಂದ ನಾನು ಮಾಡುವ ತೀರ್ಪು ನ್ಯಾಯವಾಗಿದೆ. ನನ್ನ ವಿಷಯವಾಗಿ ನಾನೇ ಸಾಕ್ಷಿ ಹೇಳಿಕೊಂಡರೆ ನನ್ನ ಸಾಕ್ಷಿಯು ಸತ್ಯವಾದದ್ದಲ್ಲ.
ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ, ನಾನು ಹೋಗುವುದು ನಿಮಗೆ ಒಳ್ಳೆಯದು, ಹೇಗೆಂದರೆ ನಾನು ಹೋಗದಿದ್ದರೆ ಆ ಸಹಾಯಕನು ನಿಮ್ಮ ಬಳಿಗೆ ಬರುವುದಿಲ್ಲ. ನಾನು ಹೋದರೆ ಆತನನ್ನು ನಿಮ್ಮ ಬಳಿಗೆ ಕಳುಹಿಸಿಕೊಡುತ್ತೇನೆ. ಆತನು ಬಂದಾಗ ಪಾಪ, ನೀತಿ ಮತ್ತು ನ್ಯಾಯತೀರ್ಪಿನ ಕುರಿತು ಲೋಕಕ್ಕೆ ಮನವರಿಕೆಯನ್ನು ಉಂಟುಮಾಡುವನು. ಅವರು ನನ್ನನ್ನು ನಂಬದೇ ಇರುವುದರಿಂದ ಪಾಪದ ಕುರಿತಾಗಿಯೂ
ಯೇಸು ಅವರಿಗೆ, "ಈ ಶಬ್ದವು ನನಗಾಗಿ ಆಗಲಿಲ್ಲ, ನಿಮಗಾಗಿಯೇ ಆಯಿತು. ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ. ಈಗ ಇಹಲೋಕಾಧಿಪತಿಯು ಹೊರಗೆ ನೂಕಲ್ಪಡುವನು ಆದರೆ ನಾನು ಭೂಮಿಯಿಂದ ಮೇಲಕ್ಕೆ ಎಬ್ಬಿಸಲ್ಪಟ್ಟ ನಂತರ ಎಲ್ಲರನ್ನೂ ನನ್ನ ಬಳಿಗೆ ಸೆಳೆದುಕೊಳ್ಳುವೆನು" ಎಂದು ಹೇಳಿದನು.
ಅವನು, "ಕರ್ತನೇ, ನಾನು ನಂಬುತ್ತೇನೆ" ಎಂದು ಹೇಳಿ ಆತನಿಗೆ ಅಡ್ಡಬಿದ್ದನು.
ಆಗ ಯೇಸುವು, "ನಾನು ನ್ಯಾಯತೀರ್ಪಿಗಾಗಿ ಈ ಲೋಕಕ್ಕೆ ಬಂದಿದ್ದೇನೆ. ಆ ತೀರ್ಪು ಏನೆಂದರೆ ಕುರುಡರು ನೋಡುವರು, ದೃಷ್ಟಿ ಇರುವವರು ಕುರುಡರಾಗುವರು" ಎಂದನು.
Prestando contas
Cada um prestará contas de si mesmo a Deus. O juízo começa pela casa de Deus e depois alcança os que não obedecem ao evangelho.
ನಂಬಿಕೆಯಲ್ಲಿ ದೃಢವಿಲ್ಲದವರನ್ನು ಸೇರಿಸಿಕೊಳ್ಳಿರಿ, ಆದರೆ ಸಂದೇಹಾಸ್ಪದವಾದ ವಿಷಯಗಳ ಬಗ್ಗೆ ವಾಗ್ವಾದ ಮಾಡಬೇಡಿರಿ. ಒಬ್ಬನು ಯಾವುದನ್ನಾದರೂ ತಿನ್ನಬಹುದೆಂದು ನಂಬುತ್ತಾನೆ; ನಂಬಿಕೆಯಲ್ಲಿ ದೃಢವಿಲ್ಲದವನು ಕಾಯಿಪಲ್ಯಗಳನ್ನು ಮಾತ್ರ ತಿನ್ನುತ್ತಾನೆ. ತಿನ್ನುವವನು ತಿನ್ನದವನನ್ನು ಹೀನೈಸಬಾರದು; ತಿನ್ನದವನು ತಿನ್ನುವವನನ್ನು ದೋಷಿಯೆಂದು ಎಣಿಸಬಾರದು. ದೇವರು ಇಬ್ಬರನ್ನೂ ಸೇರಿಸಿಕೊಂಡಿದ್ದಾನಲ್ಲಾ? ಮತ್ತೊಬ್ಬನ ಸೇವಕನ ವಿಷಯವಾಗಿ ತೀರ್ಪುಮಾಡುವುದಕ್ಕೆ ನೀನು ಯಾರು? ಅವನು ನಿರ್ದೋಷಿಯಾಗಿ ನಿಂತರೂ, ದೋಷಿಯಾಗಿ ಬಿದ್ದರೂ ಅದು ಅವನ ಯಜಮಾನನಿಗೇ ಸೇರಿದ್ದು. ಅವನು ನಿರ್ದೊಷಿಯಾಗಿ ನಿಲ್ಲಿಸಲ್ಪಡುವನು; ಅವನನ್ನು ನಿಲ್ಲಿಸುವುದಕ್ಕೆ ಕರ್ತನು ಶಕ್ತನಾಗಿದ್ದಾನೆ.
ಹೀಗಿರಲಾಗಿ ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ವಿಷಯವಾಗಿ ದೇವರ ಮುಂದೆ ಉತ್ತರಕೊಡಬೇಕು. ಆದಕಾರಣ, ಇನ್ನು ಮೇಲೆ ಒಬ್ಬರ ವಿಷಯದಲ್ಲೊಬ್ಬರು ತೀರ್ಪುಮಾಡದೆ ಇರೋಣ. ಅದಕ್ಕೆ ಬದಲಾಗಿ ಸಹೋದರನ ಎದುರಿಗೆ ಅಡ್ಡಿಯನ್ನಾಗಲಿ, ಅಡೆತಡೆಯನ್ನಾಗಲಿ ಹಾಕಬಾರದೆಂದು ತೀರ್ಮಾನಿಸಿಕೊಳ್ಳಿರಿ. ಯಾವ ಪದಾರ್ಥವೂ ಸ್ವತಃ ಅಶುದ್ಧವಾದದ್ದಲ್ಲವೆಂದು ಕರ್ತನಾದ ಯೇಸುವಿನಲ್ಲಿದ್ದುಕೊಂಡು ದೃಢವಾಗಿ ನಂಬಿದ್ದೇನೆ; ಆದರೆ ಯಾವುದಾದರೂ ಒಂದು ಪದಾರ್ಥವನ್ನು ಅಶುದ್ಧವೆಂದು ಒಬ್ಬನು ಭಾವಿಸಿದರೆ ಅವನಿಗೆ ಅದು ಅಶುದ್ಧವಾಗಿರಲಿ.
ನ್ಯಾಯವಿಚಾರಣೆಯ ಸಮಯ ಬಂದಿದೆ. ಆ ವಿಚಾರಣೆಯು ದೇವರ ಮನೆಯಲ್ಲಿಯೇ ಪ್ರಾರಂಭವಾಗಿದೆಯಲ್ಲಾ. ಅದು ನಮ್ಮಲ್ಲಿ ಪ್ರಾರಂಭವಾಗುವುದಾದರೆ, ದೇವರ ಸುವಾರ್ತೆಯನ್ನು ನಂಬಲೊಲ್ಲದವರ ಅಂತ್ಯ ಹೇಗಿರಬಹುದು?
ಆದ್ದರಿಂದ ಕರ್ತನು ಬರುವ ಕಾಲಕ್ಕಿಂತ ಮುಂಚೆ ಯಾವುದನ್ನು ಕುರಿತು ನ್ಯಾಯತೀರ್ಪುಮಾಡಬೇಡಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು. ಹೃದಯದ ಆಲೋಚನೆಗಳನ್ನು ಪ್ರಕಟಪಡಿಸುವನು. ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ದೊರಕುವುದು.
ನೀವು ಮಾಡುವ ತೀರ್ಪಿಗೆ ಸರಿಯಾಗಿ ನಿಮಗೂ ತೀರ್ಪಾಗುವುದು; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು.
"ನೀನು ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಧೂಳನ್ನು ಏಕೆ ಯೋಚಿಸುವೇ? ನೀನು ನಿನ್ನ ಸಹೋದರನಿಗೆ, ‘ನಿನ್ನ ಕಣ್ಣಿನೊಳಗಿನಿಂದ ಧೂಳನ್ನು ತೆಗೆಯುತ್ತೇನೆ ಬಾ’ ಎಂದು ಏಕೆ ಹೇಳುವೇ? ನಿನ್ನ ಕಣ್ಣಿನಲ್ಲೇ ತೊಲೆ ಇದೆಯಲ್ಲಾ.
Justiça e redenção
O juízo de Deus é também redenção. Ele livrou Israel do Egito com juízos e salva os arrependidos pela cruz de Cristo.
ಆದುದರಿಂದ, ನೀನು ಇಸ್ರಾಯೇಲರಿಗೆ ನನ್ನ ಹೆಸರಿನಲ್ಲಿ ಹೇಳಬೇಕಾದದ್ದೇನೆಂದರೆ, ‘ನಾನೇ ಯೆಹೋವನು ಐಗುಪ್ತರು ನಿಮ್ಮಿಂದ ಮಾಡಿಸುವ ಬಿಟ್ಟೀ ಕೆಲಸಗಳನ್ನು ತಪ್ಪಿಸಿ, ಅವರ ದಾಸತ್ವದಿಂದ ನಿಮ್ಮನ್ನು ಬಿಡಿಸಿ, ನನ್ನ ಕೈಚಾಚಿ ಅವರಿಗೆ ಮಹಾ ಶಿಕ್ಷೆಗಳನ್ನು ವಿಧಿಸಿ ನಿಮ್ಮನ್ನು ರಕ್ಷಿಸುವೆನು.
ಆ ರಾತ್ರಿ ನಾನು ಐಗುಪ್ತದೇಶದ ಮೇಲೆ ಹಾದುಹೋಗಿ ಮನುಷ್ಯರಲ್ಲಾಗಲಿ, ಪಶುಗಳಲ್ಲಾಗಲಿ, ಚೊಚ್ಚಲಾಗಿರುವುದನ್ನೆಲ್ಲಾ ಸಂಹರಿಸುವೆನು. ಐಗುಪ್ತ ದೇಶದ ಸಮಸ್ತ ದೇವತೆಗಳಿಗೂ ನ್ಯಾಯತೀರಿಸುವೆನು. ನಾನೇ ಯೆಹೋವನು.
ನಿನಗೇ, ಕೇವಲ ನಿನಗೇ ತಪ್ಪುಮಾಡಿದ್ದೇನೆ;
ನಿನ್ನ ದೃಷ್ಟಿಗೆ ಕೆಟ್ಟದ್ದಾಗಿರುವುದನ್ನೇ ಮಾಡಿದ್ದೇನೆ.
ನಿನ್ನ ನಿರ್ಣಯ ನ್ಯಾಯವಾಗಿಯೂ, ನಿನ್ನ ತೀರ್ಪು ನಿಷ್ಕಳಂಕವಾಗಿಯೂ ಇರುತ್ತದೆ.
ಯೆಹೋವನೇ, ನೀನು ನ್ಯಾಯಸ್ಥಾಪಿಸಿದ ವಾರ್ತೆಯನ್ನು ಕೇಳಿ
ಚೀಯೋನ್ ಪಟ್ಟಣವು ಹರ್ಷಿಸಿತು;
ಯೆಹೂದ ಪ್ರಾಂತ್ಯದ ಊರುಗಳು ಸಂತೋಷಿಸಿದವು.
ನೋಡು, ಅವರು ಈಗ ಕೈಕೊಡಲಿ ಮತ್ತು ಸುತ್ತಿಗೆಗಳಿಂದ,
ದೇವಾಲಯದ ಕೆತ್ತನೆಯ ಕೆಲಸವನ್ನೆಲ್ಲಾ ಹೊಡೆದುಹಾಕುತ್ತಿದ್ದಾರೆ.
ಅವರು ನಿನ್ನ ಪವಿತ್ರಾಲಯಕ್ಕೆ ಬೆಂಕಿ ಹಚ್ಚಿ,
ನಿನ್ನ ನಾಮಕ್ಕೆ ಪ್ರತಿಷ್ಠಿತವಾದ ಮಂದಿರವನ್ನು ಹೊಲೆಮಾಡಿ, ನೆಲಸಮಗೊಳಿಸಿದ್ದಾರೆ.
ಇದಾದ ಮೇಲೆ ಪರಲೋಕದಲ್ಲಿ ದೊಡ್ಡ ಗುಂಪಿನ ಮಹಾ ಶಬ್ದವೋ ಎಂಬಂತೆ ಒಂದು ಧ್ವನಿಯನ್ನು ಕೇಳಿದೆನು. ಅವರು, "ಹಲ್ಲೆಲೂಯಾ. ರಕ್ಷಣೆಯೂ, ಮಹಿಮೆಯೂ, ಶಕ್ತಿಯೂ ನಮ್ಮ ದೇವರಿಗೆ ಸೇರಿದ್ದಾಗಿವೆ. ಆತನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ, ತನ್ನ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾ ಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಅವಳು ಆತನ ಸೇವಕರನ್ನು ಕೊಂದದ್ದಕ್ಕಾಗಿ ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ." ಎಂದು ಹೇಳಿ, ಎರಡನೆಯ ಸಾರಿ, "ಹಲ್ಲೆಲೂಯಾ ಎಂದು ಆರ್ಭಟಿಸಿ, ಅವಳ ದಹನದಿಂದುಂಟಾದ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರಿಹೋಗುತ್ತಿರುತ್ತದೆ" ಎಂದು ಹೇಳಿದರು.