Juízo
O juízo de Deus é manifestação de sua justiça e soberania. Ele julga o mundo, julga as nações e julga cada coração com perfeita equidade e misericórdia.
O juízo de Deus
Deus é juiz justo que prova os corações. Seu juízo é verdadeiro e alcança toda obra, secreta ou pública.
ಏಕೆಂದರೆ ಒಳ್ಳೆಯದಾಗಿರಲಿ, ಕೆಟ್ಟದ್ದಾಗಿರಲಿ,
ದೇವರು ಆ ಎಲ್ಲಾ ಕಾರ್ಯಗಳನ್ನೂ
ಪ್ರತಿಯೊಂದು ರಹಸ್ಯವನ್ನೂ ನ್ಯಾಯವಿಚಾರಣೆಗೆ ತರುವರು.
ತಂದೆ ಸತ್ತವರನ್ನು ಎಬ್ಬಿಸಿ ಬದುಕಿಸುವಂತೆಯೇ ಪುತ್ರನೂ ತನಗಿಷ್ಟ ಬಂದವರನ್ನು ಬದುಕಿಸುತ್ತಾರೆ. ತಂದೆ ಯಾರಿಗೂ ತೀರ್ಪು ಮಾಡುವುದಿಲ್ಲ. ಆದರೆ ತೀರ್ಪು ಮಾಡುವುದನ್ನೆಲ್ಲಾ ಪುತ್ರನಿಗೆ ಒಪ್ಪಿಸಿದ್ದಾರೆ. ಎಲ್ಲರೂ ತಂದೆಯನ್ನು ಸನ್ಮಾನಿಸುವಂತೆಯೇ ಪುತ್ರನನ್ನೂ ಸನ್ಮಾನಿಸಬೇಕು. ಪುತ್ರನನ್ನು ಸನ್ಮಾನಿಸದವನು ಆತನನ್ನು ಕಳುಹಿಸಿದ ತಂದೆಯನ್ನೂ ಸನ್ಮಾನಿಸುವುದಿಲ್ಲ.
"ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದ ತಂದೆಯನ್ನು ನಂಬುವವರು ನಿತ್ಯಜೀವವನ್ನು ಹೊಂದಿದ್ದಾರೆ. ಅವರು ನ್ಯಾಯತೀರ್ಪಿಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವವನ್ನು ಹೊಂದಿದ್ದಾರೆ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಪುತ್ರನ ಸ್ವರವನ್ನು ಕೇಳುವ ಕಾಲ ಬರುತ್ತದೆ. ಈಗಾಗಲೇ ಬಂದಿದೆ. ಈ ಸ್ವರವನ್ನು ಕೇಳುವವರು ಬದುಕುವರು. ತಂದೆಯು ಸ್ವತಃ ಜೀವವುಳ್ಳವರಾಗಿರುವಂತೆಯೇ ಪುತ್ರನೂ ಸಹ ಸ್ವತಃ ಜೀವವುಳ್ಳವನಾಗಿರುವಂತೆ ಅನುಗ್ರಹ ಮಾಡಿದ್ದಾರೆ. ನಾನು ಮನುಷ್ಯಪುತ್ರನಾಗಿರುವುದರಿಂದ ನ್ಯಾಯತೀರಿಸುವ ಅಧಿಕಾರವನ್ನು ತಂದೆ ನನಗೆ ಕೊಟ್ಟಿದ್ದಾರೆ.
"ಇದಕ್ಕೆ ಆಶ್ಚರ್ಯಪಡಬೇಡಿರಿ, ಆಗ ಸಮಾಧಿಗಳಲ್ಲಿ ಇರುವವರೆಲ್ಲರೂ ನನ್ನ ಸ್ವರವನ್ನು ಕೇಳಿ ಹೊರಗೆ ಬರುವ ಒಂದುಕಾಲ ಬರುತ್ತದೆ. ಒಳ್ಳೆಯದನ್ನು ಮಾಡಿದವರು ಜೀವಕ್ಕಾಗಿ ಪುನರುತ್ಥಾನವನ್ನೂ ಕೆಟ್ಟದ್ದನ್ನು ಮಾಡಿದವರು ನ್ಯಾಯತೀರ್ಪಿಗಾಗಿ ಪುನರುತ್ಥಾನವನ್ನೂ ಹೊಂದುವರು. ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು. ನಾನು ಕೇಳಿರುವಂತೆಯೇ ತೀರ್ಪು ಮಾಡುತ್ತೇನೆ. ನನ್ನ ತೀರ್ಪು ನ್ಯಾಯವಾದದ್ದು. ಏಕೆಂದರೆ ನಾನು ನನ್ನ ಚಿತ್ತವನ್ನಲ್ಲ, ನನ್ನನ್ನು ಕಳುಹಿಸಿದ ತಂದೆಯ ಚಿತ್ತವನ್ನೇ ನೆರವೇರಿಸಲು ಅಪೇಕ್ಷಿಸುತ್ತೇನೆ.
"ನನ್ನನ್ನು ಕುರಿತು ನಾನೇ ಸಾಕ್ಷಿಹೇಳಿಕೊಂಡರೆ ನನ್ನ ಸಾಕ್ಷಿಯು ಸತ್ಯವಾದದ್ದಲ್ಲ.
ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ, ನಾನು ಹೋಗುವುದು ನಿಮ್ಮ ಹಿತಕ್ಕಾಗಿಯೇ. ನಾನು ಹೋಗದಿದ್ದರೆ ಸಹಾಯಕರು ನಿಮ್ಮ ಬಳಿಗೆ ಬರುವುದಿಲ್ಲ. ನಾನು ಹೋದರೆ ಅವರನ್ನು ನಿಮ್ಮ ಬಳಿಗೆ ಕಳುಹಿಸುವೆನು. ಆ ಸಹಾಯಕರು ಬಂದಾಗ ಪಾಪ, ನೀತಿ ಮತ್ತು ನ್ಯಾಯತೀರ್ಪಿನ ವಿಷಯಗಳಲ್ಲಿ ಲೋಕದವರಿಗೆ ಮನವರಿಕೆಯನ್ನು ಮಾಡುವರು. ಜನರು ನನ್ನನ್ನು ನಂಬದೆ ಇರುವ ಕಾರಣದಿಂದ, ಪಾಪದ ವಿಷಯವಾಗಿಯೂ
ಯೇಸು, "ಈ ಸ್ವರವು ನನಗಾಗಿ ಅಲ್ಲ, ನಿಮಗಾಗಿಯೇ ಬಂದಿದೆ. ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ. ಇಹಲೋಕದ ಅಧಿಪತಿಯನ್ನು ಈಗ ಹೊರಗೆ ಹಾಕಲಾಗುವುದು. ಆದರೆ ನನ್ನನ್ನು ಭೂಮಿಯಿಂದ ಮೇಲೇರಿಸಿದಾಗ ಎಲ್ಲರನ್ನೂ ನನ್ನ ಬಳಿಗೆ ಸೆಳೆದುಕೊಳ್ಳುತ್ತೇನೆ," ಎಂದರು.
ಆಗ ಅವನು, "ಸ್ವಾಮೀ, ನಾನು ನಂಬುತ್ತೇನೆ," ಎಂದು ಹೇಳಿ ಯೇಸುವಿಗೆ ಅಡ್ಡಬಿದ್ದನು.
ಯೇಸು, "ಕುರುಡರು ನೋಡುವಂತೆಯೂ ನೋಡುವವರು ಕುರುಡರಾಗುವಂತೆಯೂ ನಾನು ನ್ಯಾಯತೀರ್ಪು ಮಾಡುವುದಕ್ಕಾಗಿ ಈ ಲೋಕಕ್ಕೆ ಬಂದಿದ್ದೇನೆ," ಎಂದರು.
Prestando contas
Cada um prestará contas de si mesmo a Deus. O juízo começa pela casa de Deus e depois alcança os que não obedecem ao evangelho.
ಅಂಥವನ ಅಭಿಪ್ರಾಯಗಳ ಬಗ್ಗೆ ವಾಗ್ವಾದ ಮಾಡಬೇಡಿರಿ. ವಿಶ್ವಾಸದಲ್ಲಿ ಬಲಹೀನನಾಗಿರುವವನನ್ನು ಸ್ವೀಕರಿಸಿಕೊಳ್ಳಿರಿ. ಒಬ್ಬನ ವಿಶ್ವಾಸವು ಎಲ್ಲವನ್ನೂ ತಿನ್ನುವಂತೆ ಮಾಡುತ್ತದೆ. ಆದರೆ ವಿಶ್ವಾಸದಲ್ಲಿ ಬಲಹೀನನಾಗಿರುವವನು ಸಸ್ಯಾಹಾರಿಯಾಗಿಯೇ ಇರುತ್ತಾನೆ. ಮಾಂಸಾಹಾರಿಯು ಸಸ್ಯಾಹಾರಿಯನ್ನು ಹೀನೈಸದಿರಲಿ. ಸಸ್ಯಾಹಾರಿಯು ಮಾಂಸಾಹಾರಿಯನ್ನು ತೀರ್ಪು ಮಾಡದಿರಲಿ. ಏಕೆಂದರೆ ದೇವರು ಇಬ್ಬರನ್ನು ಸ್ವೀಕಾರ ಮಾಡಿರುತ್ತಾರೆ. ಬೇರೊಬ್ಬನ ಮನೆಗೆಲಸದವನನ್ನು ತೀರ್ಪುಮಾಡಲು ನೀನು ಯಾರು? ಅವನು ನಿಂತರೂ ಬಿದ್ದರೂ ಅದು ಅವನ ಯಜಮಾನನಿಗೆ ಸೇರಿದ್ದು. ಅವನನ್ನು ನಿಲ್ಲುವಂತೆ ಮಾಡಲು ಕರ್ತನು ಶಕ್ತನಾಗಿರುವುದರಿಂದ ಅವನು ಎದ್ದು ನಿಲ್ಲುವನು.
ಹೀಗಿರುವಾಗ ನಮ್ಮಲ್ಲಿ ಪ್ರತಿಯೊಬ್ಬರೂ ತಮ್ಮ ಬಗ್ಗೆ ದೇವರಿಗೆ ಲೆಕ್ಕ ಒಪ್ಪಿಸಬೇಕು.
ಆದ್ದರಿಂದ ನಾವು ಒಬ್ಬರ ಮೇಲೊಬ್ಬರು ತೀರ್ಪುಮಾಡದಿರೋಣ. ಇದಲ್ಲದೆ ಸಹೋದರರಿಗೆ ಅಡೆತಡೆಯನ್ನಾಗಲಿ, ಅಡ್ಡಿಯನ್ನಾಗಲಿ, ಹಾಕದಿರೋಣ. ಯಾವುದೇ ಪದಾರ್ಥವು ತನ್ನಷ್ಟಕ್ಕೆ ಅಶುದ್ಧವಲ್ಲ ಎಂದು ನಾನು ಕರ್ತ ಆಗಿರುವ ಯೇಸುವಿನಲ್ಲಿ ನಿಶ್ಚಯವಾಗಿ ಬಲ್ಲೆನು. ಆದರೆ ಯಾರಾದರೂ ಅಶುದ್ಧವೆಂದು ಪರಿಗಣಿಸಿದರೆ ಅದು ಅವರಿಗೆ ಅಶುದ್ಧವಾಗಿರುವುದು.
ಏಕೆಂದರೆ ದೇವರ ಮನೆಯಲ್ಲಿ ಪ್ರಾರಂಭವಾಗತಕ್ಕ ನ್ಯಾಯತೀರ್ಪಿನ ಸಮಯವು ಬಂದಿದೆ. ಅದು ಮೊದಲು ನಮ್ಮಲ್ಲಿ ಪ್ರಾರಂಭವಾದರೆ ದೇವರ ಸುವಾರ್ತೆಗೆ ಅವಿಧೇಯರಾದವರ ಅಂತ್ಯವು ಏನಾಗಿರಬಹುದು?
ಆದುದರಿಂದ ನೀವು ಕಾಲಕ್ಕೆ ಮೊದಲು ಯಾವುದನ್ನು ಕುರಿತೂ ತೀರ್ಪುಮಾಡದೆ, ಕರ್ತದೇವರ ಬರುವಿಕೆಗಾಗಿ ಕಾಯಿರಿ. ಅವರು ಕತ್ತಲಲ್ಲಿರುವ ಗುಪ್ತ ಕಾರ್ಯಗಳನ್ನು ಬೆಳಕಿಗೆ ತಂದು ಮನುಷ್ಯನ ಹೃದಯದ ಉದ್ದೇಶಗಳನ್ನು ಪ್ರತ್ಯಕ್ಷಪಡಿಸುವರು. ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ಬರುವುದು.
ನೀವು ಇತರರ ಬಗ್ಗೆ ಕೊಡುವ ತೀರ್ಪಿನ ಪ್ರಕಾರವೇ ನಿಮಗೂ ತೀರ್ಪಾಗುವುದು, ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡಲಾಗುವುದು.
"ನೀನು ನಿನ್ನ ಕಣ್ಣಿನಲ್ಲಿರುವ ಮರದ ದಿಮ್ಮಿಯನ್ನು ನೋಡದೆ, ನಿನ್ನ ಸಹೋದರನ ಕಣ್ಣಿನಲ್ಲಿರುವ ಮರದ ಚೂರನ್ನು ನೋಡುವುದೇಕೆ? ನಿನ್ನ ಕಣ್ಣಿನಲ್ಲಿಯೇ ಮರದ ದಿಮ್ಮಿ ಇರುವಾಗ, ನಿನ್ನ ಸಹೋದರನಿಗೆ, ‘ನಾನು ನಿನ್ನ ಕಣ್ಣಿನಲ್ಲಿರುವ ಮರದ ಚೂರನ್ನು ತೆಗೆದುಬಿಡುತ್ತೇನೆ,’ ಎಂದು ನೀನು ಹೇಳುವುದು ಹೇಗೆ?
Justiça e redenção
O juízo de Deus é também redenção. Ele livrou Israel do Egito com juízos e salva os arrependidos pela cruz de Cristo.
"ಆದ್ದರಿಂದ ಇಸ್ರಾಯೇಲರಿಗೆ, ‘ನಾನೇ ಯೆಹೋವ ದೇವರು. ನಾನು ನಿಮ್ಮನ್ನು ಈಜಿಪ್ಟಿನ ಬಿಟ್ಟಿಕೆಲಸದಿಂದ ಅವರಿಗೆ ದಾಸತ್ವದಲ್ಲಿರುವುದರಿಂದ, ನಾನು ಚಾಚಿದ ಬಾಹುವಿನಿಂದಲೂ ಬಲವಾದ ನ್ಯಾಯತೀರ್ಪುಗಳಿಂದಲೂ ನಿಮ್ಮನ್ನು ಬಿಡಿಸುವೆನು.
"ಏಕೆಂದರೆ ನಾನು ಈ ರಾತ್ರಿ ಈಜಿಪ್ಟ್ ದೇಶದಲ್ಲಿರುವ ಎಲ್ಲಾ ಮನುಷ್ಯರಲ್ಲಿಯೂ, ಪಶುಗಳಲ್ಲಿಯೂ ಇರುವ ಚೊಚ್ಚಲಾದವುಗಳನ್ನು ಸಂಹರಿಸುವೆನು. ಈಜಿಪ್ಟಿನ ದೇವರುಗಳಿಗೆಲ್ಲಾ ನಾನು ನ್ಯಾಯತೀರಿಸುವೆನು. ನಾನೇ ಯೆಹೋವ ದೇವರು.
ನಿಮಗೇ ನಿಮಗೊಬ್ಬರಿಗೆ ಮಾತ್ರ ವಿರೋಧವಾಗಿ ನಾನು ಪಾಪಮಾಡಿ,
ನಿಮ್ಮ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದ್ದನ್ನೇ ಮಾಡಿದ್ದೇನೆ.
ಹೀಗೆ ನೀವು ನ್ಯಾಯತೀರಿಸುವಾಗ ನೀತಿವಂತರಾಗಿಯೂ
ನೀವು ತೀರ್ಪು ನಿರ್ಣಯಿಸುವಾಗ ನ್ಯಾಯವಂತರಾಗಿಯೂ ಇರುವಿರಿ.
ಯೆಹೋವ ದೇವರೇ, ನಿಮ್ಮ ನ್ಯಾಯಗಳನ್ನು
ಚೀಯೋನ್ ಪಟ್ಟಣವು ಕೇಳಿ ಸಂತೋಷಿಸಿತು;
ಯೆಹೂದದ ಪುತ್ರಿಯರು ಸಹ ಉಲ್ಲಾಸಿಸುತ್ತಾರೆ.
ಈಗ ಚಿತ್ರ ಕೆಲಸಗಳನ್ನು ತಕ್ಷಣ ಕೊಡಲಿಯಿಂದಲೂ
ಸುತ್ತಿಗೆಯಿಂದಲೂ ಅವರು ಹೊಡೆದು ಹಾಕುತ್ತಿದ್ದಾರೆ.
ನಿಮ್ಮ ಪರಿಶುದ್ಧ ಸ್ಥಳಕ್ಕೆ ಬೆಂಕಿಹಚ್ಚಿದ್ದಾರೆ.
ನಿಮ್ಮ ಹೆಸರಿನ ನಿವಾಸವನ್ನು ಭೂಮಿಗೆ ಕೆಡವಿ ಅಪವಿತ್ರಗೊಳಿಸಿದ್ದಾರೆ.
ಇವುಗಳಾದ ಮೇಲೆ ಪರಲೋಕದಲ್ಲಿ ದೊಡ್ಡ ಸಮೂಹದ ಮಹಾಸ್ವರವನ್ನು ಕೇಳಿದೆನು. ಅವರು:
"ಹಲ್ಲೆಲೂಯಾ!
ರಕ್ಷಣೆಯೂ ಮಹಿಮೆಯೂ ಶಕ್ತಿಯೂ ನಮ್ಮ ದೇವರದಾಗಿವೆ!
ಏಕೆಂದರೆ ದೇವರ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ.
ಏಕೆಂದರೆ ತನ್ನ ಅನೈತಿಕತೆಯಿಂದ ಭೂಲೋಕವನ್ನು ಕೆಡಿಸುತ್ತಿದ್ದ
ಆ ಮಹಾ ಜಾರಸ್ತ್ರೀಗೆ ದೇವರು ನ್ಯಾಯತೀರಿಸಿ,
ಆಕೆಯು ದೇವರ ದಾಸರನ್ನು ಹಿಂಸಿಸಿ,
ಚೆಲ್ಲಿಸಿದ ರಕ್ತಕ್ಕಾಗಿ ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾರೆ."
ಎಂದೂ ದ್ವಿತೀಯ ಬಾರಿ:
"ಹಲ್ಲೆಲೂಯಾ!
ಅವಳ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರಿಹೋಗುತ್ತದೆ!"
ಎಂದು ಘೋಷಿಸಿದರು.