Julgamento
O julgamento pertence a Deus. A Bíblia adverte contra o juízo precipitado entre irmãos e revela que Cristo é o juiz justo que julgará vivos e mortos com perfeita equidade.
Não julgueis
Jesus disse: não julgueis para que não sejais julgados. Com o juízo com que julgais, sereis julgados.
"ತೀರ್ಪುಮಾಡಬೇಡಿರಿ, ಆಗ ನಿಮಗೂ ಸಹ ತೀರ್ಪಾಗುವುದಿಲ್ಲ.
"ತೀರ್ಪುಮಾಡಬೇಡಿರಿ, ಆಗ ನಿಮಗೂ ಸಹ ತೀರ್ಪಾಗುವುದಿಲ್ಲ. ನೀವು ಇತರರ ಬಗ್ಗೆ ಕೊಡುವ ತೀರ್ಪಿನ ಪ್ರಕಾರವೇ ನಿಮಗೂ ತೀರ್ಪಾಗುವುದು, ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡಲಾಗುವುದು.
"ತೀರ್ಪುಮಾಡಬೇಡಿರಿ, ಆಗ ನಿಮಗೂ ಸಹ ತೀರ್ಪಾಗುವುದಿಲ್ಲ. ನೀವು ಇತರರ ಬಗ್ಗೆ ಕೊಡುವ ತೀರ್ಪಿನ ಪ್ರಕಾರವೇ ನಿಮಗೂ ತೀರ್ಪಾಗುವುದು, ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡಲಾಗುವುದು.
"ನೀನು ನಿನ್ನ ಕಣ್ಣಿನಲ್ಲಿರುವ ಮರದ ದಿಮ್ಮಿಯನ್ನು ನೋಡದೆ, ನಿನ್ನ ಸಹೋದರನ ಕಣ್ಣಿನಲ್ಲಿರುವ ಮರದ ಚೂರನ್ನು ನೋಡುವುದೇಕೆ? ನಿನ್ನ ಕಣ್ಣಿನಲ್ಲಿಯೇ ಮರದ ದಿಮ್ಮಿ ಇರುವಾಗ, ನಿನ್ನ ಸಹೋದರನಿಗೆ, ‘ನಾನು ನಿನ್ನ ಕಣ್ಣಿನಲ್ಲಿರುವ ಮರದ ಚೂರನ್ನು ತೆಗೆದುಬಿಡುತ್ತೇನೆ,’ ಎಂದು ನೀನು ಹೇಳುವುದು ಹೇಗೆ? ಕಪಟಿಯೇ, ಮೊದಲು ನಿನ್ನ ಸ್ವಂತ ಕಣ್ಣಿನಲ್ಲಿರುವ ಮರದ ದಿಮ್ಮಿಯನ್ನು ತೆಗೆದುಹಾಕು. ಆಮೇಲೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಮರದ ಚೂರನ್ನು ತೆಗೆಯಲು, ನಿನ್ನ ಕಣ್ಣು ಸ್ಪಷ್ಟವಾಗಿ ಕಾಣುವುದು.
"ನೀನು ನಿನ್ನ ಕಣ್ಣಿನಲ್ಲಿರುವ ಮರದ ದಿಮ್ಮಿಯನ್ನು ನೋಡದೆ, ನಿನ್ನ ಸಹೋದರನ ಕಣ್ಣಿನಲ್ಲಿರುವ ಮರದ ಚೂರನ್ನು ನೋಡುವುದೇಕೆ?
"ತೀರ್ಪುಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವುದಿಲ್ಲ. ಇತರರನ್ನು ಅಪರಾಧಿಯೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವುದಿಲ್ಲ. ಕ್ಷಮಿಸಿರಿ, ಆಗ ನಿಮ್ಮನ್ನೂ ಕ್ಷಮಿಸುವರು.
"ತೀರ್ಪುಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವುದಿಲ್ಲ. ಇತರರನ್ನು ಅಪರಾಧಿಯೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವುದಿಲ್ಲ. ಕ್ಷಮಿಸಿರಿ, ಆಗ ನಿಮ್ಮನ್ನೂ ಕ್ಷಮಿಸುವರು.
"ತೀರ್ಪುಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವುದಿಲ್ಲ. ಇತರರನ್ನು ಅಪರಾಧಿಯೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವುದಿಲ್ಲ. ಕ್ಷಮಿಸಿರಿ, ಆಗ ನಿಮ್ಮನ್ನೂ ಕ್ಷಮಿಸುವರು. ಕೊಡಿರಿ, ಆಗ ನಿಮಗೂ ಕೊಡುವರು. ಒಳ್ಳೆಯ ಅಳತೆಯಲ್ಲಿ ಒತ್ತಿ, ಕುಲುಕಿ, ಚೆಲ್ಲುವಂತೆ ಮನುಷ್ಯರು ನಿಮ್ಮ ಮಡಿಲಿಗೆ ಹಾಕುವರು. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡಲಾಗುವುದು," ಎಂದರು.
Julgar com justiça
Quando precisar avaliar, julgue segundo a justa aparência. Não julgue pela carne, mas pelo Espírito e pela verdade.
ತೋರಿಕೆಗೆ ಅನುಸಾರವಾಗಿ ತೀರ್ಪುಮಾಡಬೇಡಿರಿ. ಆದರೆ ನೀತಿಯ ತೀರ್ಪನ್ನು ಮಾಡಿರಿ," ಎಂದರು.
ನೀವು ಮಾನವ ರೀತಿಯಲ್ಲಿ ತೀರ್ಪು ಮಾಡುತ್ತೀರಿ. ನಾನು ಯಾರಿಗೂ ತೀರ್ಪು ಮಾಡುವುದಿಲ್ಲ. ನಾನು ತೀರ್ಪು ಮಾಡಿದರೂ ನನ್ನ ತೀರ್ಪು ಸತ್ಯವಾದದ್ದೇ. ಏಕೆಂದರೆ ನಾನು ಒಂಟಿಗನಲ್ಲ. ನಾನೂ ನನ್ನನ್ನು ಕಳುಹಿಸಿದ ತಂದೆಯೂ ಇದ್ದೇವೆ.
ದೇವರು ಲೋಕಕ್ಕೆ ತೀರ್ಪು ಮಾಡುವುದಕ್ಕಾಗಿ ಅಲ್ಲ, ತಮ್ಮ ಪುತ್ರನ ಮುಖಾಂತರ ಲೋಕದ ಜನರನ್ನು ರಕ್ಷಿಸುವುದಕ್ಕಾಗಿಯೇ ಅವರನ್ನು ಲೋಕಕ್ಕೆ ಕಳುಹಿಸಿದರು.
ಮಗನನ್ನು ನಂಬುವವನಿಗೆ ತೀರ್ಪು ಆಗುವುದಿಲ್ಲ. ನಂಬದವನಿಗೆ ಆಗಲೇ ತೀರ್ಪಾಯಿತು. ಏಕೆಂದರೆ ಅವನು ದೇವರ ಒಬ್ಬನೇ ಪುತ್ರನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ.
ಮಗನನ್ನು ನಂಬುವವನಿಗೆ ತೀರ್ಪು ಆಗುವುದಿಲ್ಲ. ನಂಬದವನಿಗೆ ಆಗಲೇ ತೀರ್ಪಾಯಿತು. ಏಕೆಂದರೆ ಅವನು ದೇವರ ಒಬ್ಬನೇ ಪುತ್ರನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ. ಆ ತೀರ್ಪು ಏನೆಂದರೆ: ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವುದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು.
ಆ ನ್ಯಾಯಾಧಿಪತಿಗಳಿಗೆ ಆ ಕಾಲದಲ್ಲಿ ನಾನು, "ನಿಮ್ಮ ಸಹೋದರರು ತಮ್ಮಲ್ಲಿ ಮಾಡುವ ವ್ಯಾಜ್ಯಗಳನ್ನು ವಿಚಾರಿಸಬೇಕು. ಅದು ಇಸ್ರಾಯೇಲರ ವ್ಯಾಜ್ಯವಾಗಿರಬಹುದು. ಇಸ್ರಾಯೇಲರಲ್ಲದವರ ವ್ಯಾಜ್ಯವಾಗಿರಬಹುದು. ಎಲ್ಲವನ್ನು ನೀವು ನ್ಯಾಯದ ಪ್ರಕಾರವೇ ತೀರ್ಮಾನಿಸಬೇಕು. ನ್ಯಾಯದಲ್ಲಿ ನೀವು ಮುಖದಾಕ್ಷಿಣ್ಯ ಮಾಡಬೇಡಿರಿ. ಹಿರಿಯನನ್ನು ಹೇಗೋ ಹಾಗೆಯೇ ಕಿರಿಯನನ್ನು ಕೇಳಬೇಕು. ಯಾವ ಮನುಷ್ಯನಿಗೂ ಹೆದರಬೇಡಿರಿ. ಆದರೆ ನ್ಯಾಯ ತೀರ್ವಿಕೆಯು ದೇವರದೇ. ನಿಮಗೆ ಕಠಿಣವಾದ ವ್ಯಾಜ್ಯಗಳನ್ನು ನನ್ನ ಮುಂದೆ ತನ್ನಿರಿ, ನಾನು ಅದನ್ನು ತೀರಿಸುವೆನು," ಎಂದು ಹೇಳಿದೆ.
ಸುಳ್ಳಿನ ವಿಷಯಗಳಿಂದ ನೀವು ದೂರವಿರಬೇಕು. ನಿರಪರಾಧಿ, ನೀತಿವಂತ ಆದ ವ್ಯಕ್ತಿಗೆ ಮರಣದಂಡನೆ ವಿಧಿಸಬಾರದು. ಅಂಥ ದುಷ್ಕೃತ್ಯ ಮಾಡಿದವನಿಗೆ ನಾನು ಶಿಕ್ಷೆ ವಿಧಿಸದೆ ಬಿಡುವುದಿಲ್ಲ.
O tribunal de Cristo
Todos compareceremos diante do tribunal de Cristo para prestar contas. Cada um dará conta de si mesmo a Deus.
ಏಕೆಂದರೆ, ನಾವೆಲ್ಲರೂ ನಮ್ಮ ದೇಹದ ಮೂಲಕ ನಡೆಸಿದ ಒಳ್ಳೆಯದಕ್ಕಾಗಲಿ, ಕೆಟ್ಟದ್ದಕ್ಕಾಗಲಿ ಸಿಗಬೇಕಾದ ಪ್ರತಿಫಲವನ್ನು ಹೊಂದುವುದಕ್ಕೋಸ್ಕರ ಕ್ರಿಸ್ತನ ನ್ಯಾಯಾಸನದ ಮುಂದೆ ಕಾಣಿಸಿಕೊಳ್ಳಲೇಬೇಕು.
ಹೀಗಿರುವಾಗ, ನೀನು ಏಕೆ ನಿನ್ನ ಸಹೋದರರಿಗೆ ತೀರ್ಪುಮಾಡುತ್ತೀ? ಅಥವಾ ನಿನ್ನ ಸಹೋದರರನ್ನು ಏಕೆ ಹೀನಾಯವಾಗಿ ಕಾಣುತ್ತೀ? ನಾವೆಲ್ಲರೂ ದೇವರ ನ್ಯಾಯಾಸನದ ಮುಂದೆ ನಿಲ್ಲುವೆವು. ಪವಿತ್ರ ವೇದದಲ್ಲಿ ಹೀಗೆ ಬರೆದಿದೆ:
" ‘ನಾನು ಜೀವಿಸುವುದರಿಂದ,
ಪ್ರತಿಯೊಬ್ಬರೂ ನನ್ನ ಮುಂದೆ ಮೊಣಕಾಲೂರುವರು.
ಪ್ರತಿಯೊಂದು ನಾಲಿಗೆಯೂ ನನ್ನನ್ನು ದೇವರೆಂದು ಅರಿಕೆ ಮಾಡುವುದು,’
ಎಂದು ಕರ್ತನು ಹೇಳುತ್ತಾರೆ."
ಹೀಗಿರುವಾಗ ನಮ್ಮಲ್ಲಿ ಪ್ರತಿಯೊಬ್ಬರೂ ತಮ್ಮ ಬಗ್ಗೆ ದೇವರಿಗೆ ಲೆಕ್ಕ ಒಪ್ಪಿಸಬೇಕು.
ಆದ್ದರಿಂದ ನಾವು ಒಬ್ಬರ ಮೇಲೊಬ್ಬರು ತೀರ್ಪುಮಾಡದಿರೋಣ. ಇದಲ್ಲದೆ ಸಹೋದರರಿಗೆ ಅಡೆತಡೆಯನ್ನಾಗಲಿ, ಅಡ್ಡಿಯನ್ನಾಗಲಿ, ಹಾಕದಿರೋಣ.
ಆದ್ದರಿಂದ ನಾವು ಒಬ್ಬರ ಮೇಲೊಬ್ಬರು ತೀರ್ಪುಮಾಡದಿರೋಣ. ಇದಲ್ಲದೆ ಸಹೋದರರಿಗೆ ಅಡೆತಡೆಯನ್ನಾಗಲಿ, ಅಡ್ಡಿಯನ್ನಾಗಲಿ, ಹಾಕದಿರೋಣ.
ಬೇರೊಬ್ಬನ ಮನೆಗೆಲಸದವನನ್ನು ತೀರ್ಪುಮಾಡಲು ನೀನು ಯಾರು? ಅವನು ನಿಂತರೂ ಬಿದ್ದರೂ ಅದು ಅವನ ಯಜಮಾನನಿಗೆ ಸೇರಿದ್ದು. ಅವನನ್ನು ನಿಲ್ಲುವಂತೆ ಮಾಡಲು ಕರ್ತನು ಶಕ್ತನಾಗಿರುವುದರಿಂದ ಅವನು ಎದ್ದು ನಿಲ್ಲುವನು.
ಮಾಂಸಾಹಾರಿಯು ಸಸ್ಯಾಹಾರಿಯನ್ನು ಹೀನೈಸದಿರಲಿ. ಸಸ್ಯಾಹಾರಿಯು ಮಾಂಸಾಹಾರಿಯನ್ನು ತೀರ್ಪು ಮಾಡದಿರಲಿ. ಏಕೆಂದರೆ ದೇವರು ಇಬ್ಬರನ್ನು ಸ್ವೀಕಾರ ಮಾಡಿರುತ್ತಾರೆ.
ಆದ್ದರಿಂದ, ಯಾವ ಕಾರಣಕ್ಕಾಗಿ ನೀನು ಇತರರಿಗೆ ತೀರ್ಪು ಮಾಡುತ್ತಿರುವೆಯೋ ಅದನ್ನೇ ನೀನೂ ಮಾಡುತ್ತಿರುವುದರಿಂದ ನಿನ್ನನ್ನು ನೀನೇ ತೀರ್ಪು ಮಾಡಿಕೊಂಡ ಹಾಗಾಯಿತು. ಇತರರ ಮೇಲೆ ತೀರ್ಪುಮಾಡುವ ನಿನಗೆ ಹೇಳುವುದಕ್ಕೆ ನೆಪವಿಲ್ಲ.
ಆದ್ದರಿಂದ, ಯಾವ ಕಾರಣಕ್ಕಾಗಿ ನೀನು ಇತರರಿಗೆ ತೀರ್ಪು ಮಾಡುತ್ತಿರುವೆಯೋ ಅದನ್ನೇ ನೀನೂ ಮಾಡುತ್ತಿರುವುದರಿಂದ ನಿನ್ನನ್ನು ನೀನೇ ತೀರ್ಪು ಮಾಡಿಕೊಂಡ ಹಾಗಾಯಿತು. ಇತರರ ಮೇಲೆ ತೀರ್ಪುಮಾಡುವ ನಿನಗೆ ಹೇಳುವುದಕ್ಕೆ ನೆಪವಿಲ್ಲ. ಆದರೆ ಅಂಥಾ ಅಪರಾಧಗಳನ್ನು ಮಾಡುವವರ ವಿಷಯದಲ್ಲಿ ದೇವರು ಮಾಡುವ ತೀರ್ಪು ಸತ್ಯಕ್ಕನುಸಾರವಾಗಿಯೇ ಇರುವುದೆಂದು ನಾವು ಬಲ್ಲೆವು. ಮನುಷ್ಯನೇ, ಅಂಥವುಗಳನ್ನು ನಡೆಸುವವರ ಮೇಲೆ ತೀರ್ಪುಮಾಡುತ್ತಿರುವ ನೀನು ದೇವರ ತೀರ್ಪಿನಿಂದ ತಪ್ಪಿಸಿಕೊಂಡೇನೆಂದು ನೆನಸುತ್ತೀಯೋ?
ನಿಯಮವಿಲ್ಲದವರಾಗಿ ಪಾಪಮಾಡಿದವರು ನಿಯಮವಿಲ್ಲದೆಯೇ ನಾಶಹೊಂದುವರು. ನಿಯಮಕ್ಕೆ ಅಧೀನರಾಗಿದ್ದು ಪಾಪಮಾಡಿದವರು ನಿಯಮದ ಮೂಲಕವಾಗಿ ತೀರ್ಪನ್ನು ಹೊಂದುವರು.
ನಾನು ಸಾರುವ ಸುವಾರ್ತೆಯ ಪ್ರಕಾರ ದೇವರು ಕ್ರಿಸ್ತ ಯೇಸುವಿನ ಮೂಲಕವಾಗಿ ಮನುಷ್ಯರ ಗುಟ್ಟುಗಳನ್ನು ವಿಚಾರಿಸುವ ದಿನದಲ್ಲಿ ಇವೆಲ್ಲಾ ಸಂಭವಿಸುವುದು.
ಆದ್ದರಿಂದ, ಈಗ ಕ್ರಿಸ್ತ ಯೇಸುವಿನಲ್ಲಿ ಇರುವವರಿಗೆ ದಂಡನಾತೀರ್ಪು ಇರುವುದಿಲ್ಲ. ಏಕೆಂದರೆ ಕ್ರಿಸ್ತ ಯೇಸುವಿನ ಮೂಲಕ ಪವಿತ್ರಾತ್ಮರ ಜೀವದ ನಿಯಮವು ನಿನ್ನನ್ನು ಪಾಪದ ನಿಯಮದಿಂದಲೂ ಮರಣದ ನಿಯಮದಿಂದಲೂ ಬಿಡುಗಡೆ ಮಾಡಿದೆ.
ಏಕೆಂದರೆ ಪಾಪವು ಕೊಡುವ ಸಂಬಳ ಮರಣ, ದೇವರ ಉಚಿತ ವರವಾದರೋ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವ ನಿತ್ಯಜೀವ.
Deus é o juiz
O Senhor julgará o mundo com justiça. O juízo de Deus é verdadeiro e justo — Ele conhece todos os segredos do coração humano.
ಯೆಹೋವ ದೇವರು ಸದಾ ಆಳುವವರು;
ಅವರು ನ್ಯಾಯಕ್ಕಾಗಿ ತಮ್ಮ ಸಿಂಹಾಸನವನ್ನು ಸ್ಥಾಪಿಸಿದ್ದಾರೆ.
ಯೆಹೋವ ದೇವರು ಸದಾ ಆಳುವವರು;
ಅವರು ನ್ಯಾಯಕ್ಕಾಗಿ ತಮ್ಮ ಸಿಂಹಾಸನವನ್ನು ಸ್ಥಾಪಿಸಿದ್ದಾರೆ.
ಅವರು ನೀತಿಯಿಂದ ಲೋಕಕ್ಕೆ ನ್ಯಾಯತೀರಿಸುವರು;
ಪ್ರಜೆಗಳಿಗೆ ಯಥಾರ್ಥವಾದ ತೀರ್ಪು ನೀಡುವರು.
ಏಕೆಂದರೆ ಒಳ್ಳೆಯದಾಗಿರಲಿ, ಕೆಟ್ಟದ್ದಾಗಿರಲಿ,
ದೇವರು ಆ ಎಲ್ಲಾ ಕಾರ್ಯಗಳನ್ನೂ
ಪ್ರತಿಯೊಂದು ರಹಸ್ಯವನ್ನೂ ನ್ಯಾಯವಿಚಾರಣೆಗೆ ತರುವರು.
"ನಾನು ನೋಡುತ್ತಿದ್ದ ಹಾಗೆಯೇ,
"ಸಿಂಹಾಸನಗಳನ್ನು ಜೋಡಿಸಿದರು.
ಅದರ ಮೇಲೆ ಪುರಾತನ ಮನುಷ್ಯನು ಕುಳಿತುಕೊಂಡನು.
ಆತನ ವಸ್ತ್ರವು ಹಿಮದಂತೆ ಬಿಳುಪಾಗಿಯೂ,
ಆತನ ತಲೆಕೂದಲು ಶುದ್ಧ ಉಣ್ಣೆಯಂತೆಯೂ,
ಆತನ ಸಿಂಹಾಸನವು ಅಗ್ನಿ ಜ್ವಾಲೆಯಂತೆಯೂ,
ಆತನ ಚಕ್ರಗಳು ಉರಿಯುವ ಬೆಂಕಿಯಂತೆಯೂ ಇದ್ದವು.
ಆತನ ಸನ್ನಿಧಾನದಿಂದ ಅಗ್ನಿಪ್ರವಾಹವು ಹೊರಟುಬಂದು,
ಸಹಸ್ರ ಸಹಸ್ರವಾಗಿ ಆತನಿಗೆ ಸೇವೆ ಮಾಡಿದವು.
ಲಕ್ಷೋಪಲಕ್ಷ ಆತನ ಮುಂದೆ ನಿಂತಿದ್ದವು.
ನ್ಯಾಯ ಸಭೆಯು ಕುಳಿತಿತ್ತು ಮತ್ತು ಪುಸ್ತಕಗಳು ತೆರೆದಿದ್ದವು.
ಇದಲ್ಲದೆ ಸತ್ತವರಾದ ಹಿರಿಯರೂ ಕಿರಿಯರೂ ಸಿಂಹಾಸನದ ಎದುರಿಗೆ ನಿಂತಿರುವುದನ್ನೂ ಕಂಡೆನು. ಆಗ ಪುಸ್ತಕಗಳನ್ನು ತೆರೆಯಲಾಯಿತು. ನಿತ್ಯಜೀವ ಪುಸ್ತಕವೆಂಬ ಇನ್ನೊಂದು ಪುಸ್ತಕವನ್ನು ತೆರೆಯಲಾಯಿತು. ಆ ಪುಸ್ತಕಗಳಲ್ಲಿ ಬರೆದಿದ್ದರ ಪ್ರಕಾರ, ಅವರವರ ಕ್ರಿಯೆಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು.
ಇದಲ್ಲದೆ ಸತ್ತವರಾದ ಹಿರಿಯರೂ ಕಿರಿಯರೂ ಸಿಂಹಾಸನದ ಎದುರಿಗೆ ನಿಂತಿರುವುದನ್ನೂ ಕಂಡೆನು. ಆಗ ಪುಸ್ತಕಗಳನ್ನು ತೆರೆಯಲಾಯಿತು. ನಿತ್ಯಜೀವ ಪುಸ್ತಕವೆಂಬ ಇನ್ನೊಂದು ಪುಸ್ತಕವನ್ನು ತೆರೆಯಲಾಯಿತು. ಆ ಪುಸ್ತಕಗಳಲ್ಲಿ ಬರೆದಿದ್ದರ ಪ್ರಕಾರ, ಅವರವರ ಕ್ರಿಯೆಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು. ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು. ಮೃತ್ಯುವು, ಪಾತಾಳವು ತಮ್ಮಲ್ಲಿದ್ದ ಸತ್ತವರನ್ನು ಒಪ್ಪಿಸಿದವು. ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕ್ರಿಯೆಗಳ ಪ್ರಕಾರ ನ್ಯಾಯತೀರ್ಪಾಯಿತು.
Discernimento e graça
Temos um advogado junto ao Pai — Jesus Cristo. Não há condenação para os que estão em Cristo. Prove os espíritos.
ನನ್ನ ಪ್ರಿಯ ಮಕ್ಕಳೇ, ನೀವು ಪಾಪಮಾಡದಂತೆ ಇವುಗಳನ್ನು ನಾನು ನಿಮಗೆ ಬರೆಯುತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತರಾದ ಕ್ರಿಸ್ತ ಯೇಸುವು ನಮ್ಮ ಪರವಾಗಿ ವಾದಿಸುವ ವಕೀಲರಾಗಿದ್ದಾರೆ.
ಪ್ರಿಯ ಸ್ನೇಹಿತರೇ, ಅನೇಕ ಸುಳ್ಳು ಪ್ರವಾದಿಗಳು ಲೋಕದೊಳಗೆ ಹೋಗಿರುವುದರಿಂದ ನೀವು ಎಲ್ಲಾ ಆತ್ಮಗಳನ್ನು ನಂಬದೆ ಆಯಾ ಆತ್ಮಗಳು ದೇವರಿಗೆ ಸಂಬಂಧವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.
ಆದುದರಿಂದ ನೀವು ಕಾಲಕ್ಕೆ ಮೊದಲು ಯಾವುದನ್ನು ಕುರಿತೂ ತೀರ್ಪುಮಾಡದೆ, ಕರ್ತದೇವರ ಬರುವಿಕೆಗಾಗಿ ಕಾಯಿರಿ. ಅವರು ಕತ್ತಲಲ್ಲಿರುವ ಗುಪ್ತ ಕಾರ್ಯಗಳನ್ನು ಬೆಳಕಿಗೆ ತಂದು ಮನುಷ್ಯನ ಹೃದಯದ ಉದ್ದೇಶಗಳನ್ನು ಪ್ರತ್ಯಕ್ಷಪಡಿಸುವರು. ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ಬರುವುದು.
ನಿಮ್ಮಲ್ಲಿ ಯಾವನಿಗಾದರೂ ಮತ್ತೊಬ್ಬನ ಮೇಲೆ ವ್ಯಾಜ್ಯವಿದ್ದರೆ, ನ್ಯಾಯವಿಚಾರಣೆಗಾಗಿ ಕರ್ತದೇವರ ಜನರ ಮುಂದೆ ಹೋಗದೆ, ಭಕ್ತಿಹೀನರ ಮುಂದೆ ಹೋಗುವುದಕ್ಕೆ ಧೈರ್ಯವಿದೆಯೋ? ಕರ್ತದೇವರ ಜನರು ಲೋಕಕ್ಕೆ ತೀರ್ಪುಮಾಡುವರೆಂಬುದು ನಿಮಗೆ ತಿಳಿಯದೋ? ನೀವೇ ಲೋಕವನ್ನು ನ್ಯಾಯತೀರ್ಪು ಮಾಡಬೇಕಾಗಿರುವಲ್ಲಿ, ಅತ್ಯಲ್ಪ ಸಂಗತಿಗಳನ್ನು ಕುರಿತು ತೀರ್ಪುಮಾಡುವುದಕ್ಕೆ ನೀವು ಅಯೋಗ್ಯರಾಗಿದ್ದೀರೋ? ನಾವು ದೇವದೂತರಿಗೂ ತೀರ್ಪುಮಾಡುವೆವೆಂಬುದು ನಿಮಗೆ ತಿಳಿಯದೋ? ಈ ಜೀವನದ ವ್ಯಾಜ್ಯಗಳನ್ನು ಕುರಿತು ತೀರ್ಪು ಮಾಡುವುದು ಎಷ್ಟು ಸುಲಭವಲ್ಲವೇ? ಆದ್ದರಿಂದ ಇಂಥ ವ್ಯಾಜ್ಯಗಳ ಬಗ್ಗೆ ವ್ಯಾಜ್ಯಗಳಿದ್ದರೂ ಸಭೆಯಲ್ಲಿ ಮರ್ಯಾದೆ ಇಲ್ಲದವರನ್ನು ನ್ಯಾಯಾಧೀಶರಾಗಿ ನೇಮಿಸುವಿರೋ? ನಿಮ್ಮಲ್ಲಿ ನಾಚಿಕೆ ಹುಟ್ಟಿಸುವುದಕ್ಕೆ ಇದನ್ನು ಹೇಳುತ್ತೇನೆ. ತನ್ನ ಸಹೋದರನ ನ್ಯಾಯವನ್ನು ವಿವೇಚಿಸಿ ತೀರ್ಮಾನ ಕೊಡುವ ಜ್ಞಾನಿಯು ನಿಮ್ಮಲ್ಲಿ ಒಬ್ಬನಾದರೂ ಇಲ್ಲವೋ?
ಕರ್ತದೇವರ ಜನರು ಲೋಕಕ್ಕೆ ತೀರ್ಪುಮಾಡುವರೆಂಬುದು ನಿಮಗೆ ತಿಳಿಯದೋ? ನೀವೇ ಲೋಕವನ್ನು ನ್ಯಾಯತೀರ್ಪು ಮಾಡಬೇಕಾಗಿರುವಲ್ಲಿ, ಅತ್ಯಲ್ಪ ಸಂಗತಿಗಳನ್ನು ಕುರಿತು ತೀರ್ಪುಮಾಡುವುದಕ್ಕೆ ನೀವು ಅಯೋಗ್ಯರಾಗಿದ್ದೀರೋ? ನಾವು ದೇವದೂತರಿಗೂ ತೀರ್ಪುಮಾಡುವೆವೆಂಬುದು ನಿಮಗೆ ತಿಳಿಯದೋ? ಈ ಜೀವನದ ವ್ಯಾಜ್ಯಗಳನ್ನು ಕುರಿತು ತೀರ್ಪು ಮಾಡುವುದು ಎಷ್ಟು ಸುಲಭವಲ್ಲವೇ?
ನಾನು ಇತರರಿಗೆ ಸುವಾರ್ತೆ ಸಾರಿದ ಮೇಲೆ, ನಾನೇ ಬಹುಮಾನ ಹೊಂದಲು ಅಯೋಗ್ಯನಾಗದಂತೆ ನನ್ನ ದೇಹವನ್ನು ದಂಡಿಸಿ, ನನ್ನ ಸ್ವಾಧೀನದಲ್ಲಿಟ್ಟುಕೊಳ್ಳುತ್ತೇನೆ.
ನಾನು ಒಳ್ಳೆಯ ಹೋರಾಟವನ್ನು ಮಾಡಿದ್ದೇನೆ. ನಾನು ಓಟವನ್ನು ಮುಗಿಸಿದ್ದೇನೆ. ನಾನು ವಿಶ್ವಾಸವನ್ನು ಕಾಪಾಡಿಕೊಂಡಿದ್ದೇನೆ. ಈಗ ನನಗೋಸ್ಕರ ನೀತಿಯ ಕಿರೀಟವು ಇಡಲಾಗಿದೆ. ಅದನ್ನು ನೀತಿಯುಳ್ಳ ನ್ಯಾಯಾಧಿಪತಿಯಾದ ಕರ್ತದೇವರು ಆ ದಿನದಲ್ಲಿ ನನಗೆ ಕೊಡುವರು. ನನಗೆ ಮಾತ್ರವಲ್ಲದೆ ಅವರ ಪುನರಾಗಮನಕ್ಕಾಗಿ ಆಸಕ್ತಿಯಿಂದ ಕಾದಿರುವವರೆಲ್ಲರಿಗೂ ಕೊಡುವರು.
ಕರ್ತದೇವರು ಭಕ್ತರನ್ನು ಸಂಕಟದೊಳಗಿಂದ ತಪ್ಪಿಸುವುದಕ್ಕೂ ಅನೀತಿವಂತರನ್ನು ಶಿಕ್ಷಿಸುವುದಕ್ಕಾಗಿ ನ್ಯಾಯತೀರ್ಪಿನ ದಿನದ ತನಕ ಇಡುವುದಕ್ಕೂ ಬಲ್ಲವರಾಗಿದ್ದಾರೆ.
ಪ್ರಿಯರೇ, ಒಬ್ಬರ ವಿಷಯದಲ್ಲಿ ಒಬ್ಬರು ಕೆಟ್ಟದ್ದನ್ನು ಮಾತನಾಡಬೇಡಿರಿ. ಯಾವನಾದರೂ ತನ್ನ ಸಹೋದರನ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿದರೆ ಅಥವಾ ತೀರ್ಪುಮಾಡಿದರೆ ಅವನು ದೇವರ ನಿಯಮದ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿ, ನಿಯಮವನ್ನೇ ತೀರ್ಪುಮಾಡಿದ ಹಾಗಾಗುವುದು. ಆದರೆ ನೀನು ದೇವರ ನಿಯಮವನ್ನೇ ತೀರ್ಪುಮಾಡಿದರೆ ನೀನು ಅನುಸರಿಸುವವನಾಗಿರದೆ ನ್ಯಾಯಾಧಿಪತಿಯೆನಿಸಿಕೊಳ್ಳುವಿ. ನಿಯಮವನ್ನು ಕೊಟ್ಟವರೂ ನ್ಯಾಯಾಧಿಪತಿಯೂ ದೇವರೊಬ್ಬರೇ ಆಗಿರುತ್ತಾರೆ. ಅವರು ಉಳಿಸುವುದಕ್ಕೂ ನಾಶಮಾಡುವುದಕ್ಕೂ ಶಕ್ತರಾಗಿದ್ದಾರೆ. ಹೀಗಿರುವಾಗ ನೆರೆಯವನ ವಿಷಯದಲ್ಲಿ ತೀರ್ಪುಮಾಡುವುದಕ್ಕೆ ನೀನು ಯಾರು?
ಮುಖ್ಯವಾಗಿ ನನ್ನ ಪ್ರಿಯರೇ, ಆಕಾಶದ ಮೇಲಾಗಲಿ, ಭೂಮಿಯ ಮೇಲಾಗಲಿ, ಇನ್ನಾವುದರ ಮೇಲಾಗಲಿ ಆಣೆ ಇಡಬೇಡಿರಿ. ಹೌದೆಂದು ಹೇಳಬೇಕಾದರೆ "ಹೌದು" ಎನ್ನಿರಿ. ಇಲ್ಲವಾದರೆ "ಇಲ್ಲ" ಎನ್ನಿರಿ. ಹೀಗಾದರೆ ನೀವು ನ್ಯಾಯವಿಚಾರಣೆಗೆ ಗುರಿಯಾಗುವುದಿಲ್ಲ.
ಏಕೆಂದರೆ ಯಾವನಾದರೂ ಇಡೀ ಮೋಶೆಯ ನಿಯಮದಲ್ಲಿ ಒಂದೇ ಒಂದನ್ನು ಕೈಕೊಂಡು ನಡೆಯದೇ ಹೋದರೆ, ಅವನು ಇಡೀ ನಿಯಮವನ್ನೇ ಕೈಕೊಳ್ಳದ ಅಪರಾಧಿಯಾಗುತ್ತಾನೆ. ಏಕೆಂದರೆ, "ವ್ಯಭಿಚಾರ ಮಾಡಬಾರದು," ಎಂದು ಹೇಳಿದ ದೇವರೇ, "ನರಹತ್ಯೆ ಮಾಡಬಾರದು," ಎಂತಲೂ ಹೇಳಿದರು. ಆದಕಾರಣ ನೀನು ವ್ಯಭಿಚಾರ ಮಾಡದೆ ಇದ್ದರೂ ನರಹತ್ಯೆ ಮಾಡಿದರೆ ನಿಯಮವನ್ನು ಮೀರಿದವನಾದೆ.
ಸ್ವಾತಂತ್ರ್ಯವನ್ನು ಉಂಟುಮಾಡುವ ನಿಯಮದಿಂದ ನಾವು ತೀರ್ಪುಹೊಂದುವೆವು ಎಂದು ತಿಳಿದು, ನಮ್ಮ ಮಾತುಗಳೂ ಕೃತ್ಯಗಳೂ ಅದಕ್ಕೆ ಅನುಸಾರವಾಗಿರಲಿ.
ಹೀಗಿರಲಾಗಿ, ಅನ್ನಪಾನಗಳ ವಿಷಯದಲ್ಲಿಯೂ ಹಬ್ಬ ಅಮಾವಾಸ್ಯೆ ಸಬ್ಬತ್ ದಿನ ಮುಂತಾದವುಗಳ ವಿಷಯದಲ್ಲಿಯೂ ಯಾರೂ ನಿಮ್ಮನ್ನು ತೀರ್ಪು ಮಾಡದಿರಲಿ.
ಹೀಗಿರಲಾಗಿ, ಅನ್ನಪಾನಗಳ ವಿಷಯದಲ್ಲಿಯೂ ಹಬ್ಬ ಅಮಾವಾಸ್ಯೆ ಸಬ್ಬತ್ ದಿನ ಮುಂತಾದವುಗಳ ವಿಷಯದಲ್ಲಿಯೂ ಯಾರೂ ನಿಮ್ಮನ್ನು ತೀರ್ಪು ಮಾಡದಿರಲಿ. ಇವು ಬರಬೇಕಾಗಿದ್ದವುಗಳ ಛಾಯೆಯಾಗಿವೆ, ಆದರೆ ನಿಜಸ್ವರೂಪವು ಕ್ರಿಸ್ತ ಯೇಸುವೇ.
ಆಗ ನೀವು ನೀತಿವಂತನಿಗೂ, ದುಷ್ಟನಿಗೂ, ದೇವರ ಸೇವೆ ಮಾಡುವವನಿಗೂ, ಮಾಡದವನಿಗೂ ಇರುವ ವ್ಯತ್ಯಾಸವನ್ನು ಪುನಃ ನೋಡುವಿರಿ.
ನಿನಗೆ ವಿರೋಧವಾಗಿ ನಿರ್ಮಿಸಿದ ಆಯುಧಗಳು ಸಫಲವಾಗುವುದಿಲ್ಲ.
ನಿನಗೆ ವಿರೋಧವಾಗಿ ನಿಂತುಕೊಳ್ಳುವ ಪ್ರತಿಯೊಂದು
ನಾಲಿಗೆಯನ್ನು ನ್ಯಾಯತೀರ್ಪಿನಲ್ಲಿ ನೀನು ಖಂಡಿಸುವೆ.
ಇದೇ ಯೆಹೋವ ದೇವರ ಸೇವಕರ ಬಾಧ್ಯತೆಯು,
ಇದು ನನ್ನಿಂದ ಅವರಿಗೆ ದೊರೆಯುವ ಸಮರ್ಥನೆ,"
ಎಂದು ಯೆಹೋವ ದೇವರು ಹೇಳುತ್ತಾರೆ.
ರಾತ್ರಿಯಲ್ಲಿ ನಿಮ್ಮನ್ನು ಮನಃಪೂರ್ವಕವಾಗಿ ಬಯಸಿದ್ದೇನೆ.
ನನ್ನಲ್ಲಿರುವ ನನ್ನ ಆತ್ಮದೊಂದಿಗೆ ನಿಮ್ಮನ್ನು ಮುಂಜಾನೆಯಲ್ಲಿ ಹುಡುಕುತ್ತಿದ್ದೇನೆ.
ಏಕೆಂದರೆ ಭೂಮಿಗೆ ನಿಮ್ಮ ನ್ಯಾಯತೀರ್ಪುಗಳು ನಡೆಯುವಾಗಲೇ
ಭೂಲೋಕದ ನಿವಾಸಿಗಳು ನೀತಿಯನ್ನು ಕಲಿಯುತ್ತಾರೆ.
ಎಲ್ಲರೂ ವಿವಾಹವನ್ನು ಗೌರವಿಸಬೇಕು ಮತ್ತು ದಾಂಪತ್ಯ ಜೀವನವು ಪರಿಶುದ್ಧವಾದದ್ದಾಗಿರಬೇಕು. ಏಕೆಂದರೆ ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವರು.
ಮನುಷ್ಯನ ಪ್ರತಿಯೊಂದು ಮಾರ್ಗವು ಅವನ ದೃಷ್ಟಿಯಲ್ಲಿ ಸರಿಯಾಗಿದೆ;
ಆದರೆ ಯೆಹೋವ ದೇವರು ಹೃದಯಗಳನ್ನು ಪರೀಕ್ಷಿಸುತ್ತಾರೆ.
ಯಜ್ಞಕ್ಕಿಂತ ನೀತಿ ನ್ಯಾಯಗಳನ್ನು ನಡೆಸುವುದು
ಯೆಹೋವ ದೇವರಿಗೆ ಎಷ್ಟೋ ಮೆಚ್ಚಿಗೆಯಾಗಿದೆ.
ನಾನು ನಿಮಗೆ ಹೇಳುವುದೇನೆಂದರೆ, ಮನುಷ್ಯರು ಆಡುವ ಪ್ರತಿಯೊಂದು ವ್ಯರ್ಥ ಮಾತಿಗಾಗಿ ನ್ಯಾಯವಿಚಾರಣೆಯ ದಿನದಲ್ಲಿ ಅವರು ಲೆಕ್ಕಕೊಡಬೇಕು.
ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆಹೊಂದುವನು. ಆದರೆ ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.
ಯುವಕನೇ, ನಿನ್ನ ಯೌವನದಲ್ಲಿ ಸಂತೋಷಪಡು.
ಯೌವನದ ದಿನಗಳಲ್ಲಿ ನಿನ್ನ ಹೃದಯವು ನಿನ್ನನ್ನು ಆನಂದಪಡಿಸಲಿ.
ನೀನು ನಿನ್ನ ಮನಸ್ಸಿಗೆ ಬಂದಂತೆಯೂ
ನಿನ್ನ ಕಣ್ಣಿನ ನೋಟದಂತೆಯೂ ನಡೆ.
ಆದರೆ ಈ ಎಲ್ಲಾ ಸಂಗತಿಗಳಿಗಾಗಿ
ದೇವರು ನಿನ್ನನ್ನು ನ್ಯಾಯವಿಚಾರಿಸುವರು ಎಂದು ತಿಳಿದುಕೋ.
ತಂದೆಯು ಸ್ವತಃ ಜೀವವುಳ್ಳವರಾಗಿರುವಂತೆಯೇ ಪುತ್ರನೂ ಸಹ ಸ್ವತಃ ಜೀವವುಳ್ಳವನಾಗಿರುವಂತೆ ಅನುಗ್ರಹ ಮಾಡಿದ್ದಾರೆ. ನಾನು ಮನುಷ್ಯಪುತ್ರನಾಗಿರುವುದರಿಂದ ನ್ಯಾಯತೀರಿಸುವ ಅಧಿಕಾರವನ್ನು ತಂದೆ ನನಗೆ ಕೊಟ್ಟಿದ್ದಾರೆ.
"ತೀರ್ಪುಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವುದಿಲ್ಲ. ಇತರರನ್ನು ಅಪರಾಧಿಯೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವುದಿಲ್ಲ. ಕ್ಷಮಿಸಿರಿ, ಆಗ ನಿಮ್ಮನ್ನೂ ಕ್ಷಮಿಸುವರು.