Lei
A lei de Deus é expressão do seu caráter e amor. Do Sinai ao Sermão do Monte, a lei orienta, protege e revela o padrão santo de Deus para a vida humana.
O propósito da lei
A lei de Deus revela o pecado e nos conduz a Cristo. Pela lei é que temos consciência do que é justo e do que é errado.
ಯಾಕೆಂದರೆ ಯಾವ ಮನುಷ್ಯನಾದರೂ ನೇಮನಿಷ್ಠೆಗಳನ್ನು ಅನುಸರಿಸಿ ದೇವರ ಸನ್ನಿಧಿಯಲ್ಲಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ. ಧರ್ಮಶಾಸ್ತ್ರದಿಂದ ಪಾಪದ ಅರಿವು ಉಂಟಾಗುತ್ತದಷ್ಟೆ.
ಹಾಗಾದರೇನು? ನಾವು ಧರ್ಮಶಾಸ್ತ್ರಾಧೀನರಲ್ಲ, ಕೃಪೆಗೆ ಅಧೀನರಾಗಿದ್ದೇವೆಂದು ಪಾಪವನ್ನು ಮಾಡಬಹುದೋ? ಎಂದಿಗೂ ಮಾಡಬಾರದು.
ವಿಗ್ರಹಕ್ಕೆ ಅರ್ಪಿತವಾದದ್ದನ್ನು ತಿನ್ನಬಹುದೋ ಬಾರದೋ ಎಂಬ ವಿಚಾರದಲ್ಲಿ ಪರರ ಹಿತವನ್ನು ಲಕ್ಷಿಸುವುದೇ ಮುಖ್ಯವಾದದ್ದು
"ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಅಧಿಕಾರವುಂಟು." ಆದರೆ ಎಲ್ಲವೂ ಪ್ರಯೋಜನಕರವಾಗಿರುವುದಿಲ್ಲ. "ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ಅಧಿಕಾರವುಂಟು" ಆದರೆ ಎಲ್ಲವೂ ಜನರನ್ನು ಭಕ್ತಿಯಲ್ಲಿ ಬೆಳೆಸುವುದಿಲ್ಲ.
"ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು" ಎಂಬ ಒಂದೇ ಮಾತಿನಲ್ಲಿ ಧರ್ಮಶಾಸ್ತ್ರವೆಲ್ಲಾ ಅಡಗಿದೆ.
ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ, ಸಾಧುತ್ವ, ಶಮೆದಮೆ ಇಂಥವುಗಳೇ. ಇವುಗಳಿಗೆ ವಿರುದ್ಧವಾಗಿ ಯಾವ ಧರ್ಮಶಾಸ್ತ್ರವೂ ಇಲ್ಲ.
ಒಬ್ಬರು ಮತ್ತೊಬ್ಬರ ಭಾರವನ್ನು ಹೊತ್ತುಕೊಳ್ಳಲಿ, ಹೀಗೆ ಕ್ರಿಸ್ತನ ನೀತಿನಿಯಮಗಳನ್ನು ನೆರವೇರಿಸಿರಿ.
Amar e obedecer
O maior mandamento é amar a Deus e ao próximo. Toda a lei se resume nestes dois mandamentos, que são o fundamento de tudo.
‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂಬುದೇ ಎರಡನೆಯ ಆಜ್ಞೆ. ಇವುಗಳಿಗಿಂತ ಹೆಚ್ಚಿನ ಆಜ್ಞೆ ಮತ್ತೊಂದಿಲ್ಲ" ಎಂದು ಉತ್ತರ ಕೊಟ್ಟನು.
ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ನನ್ನ ಆಜ್ಞೆಯಾಗಿದೆ.
ಅಂತು ಜನರು ನಿಮಗೆ ಏನೇನು ಮಾಡಬೇಕೆಂದು ಅಪೇಕ್ಷಿಸುತ್ತೀರೋ ಅದನ್ನೇ ನೀವು ಅವರಿಗೆ ಮಾಡಿರಿ. ಧರ್ಮಶಾಸ್ತ್ರದ ಮತ್ತು ಪ್ರವಾದಿಗಳ ತಾತ್ಪರ್ಯ ಇದೇ ಆಗಿದೆ.
ಧರ್ಮಶಾಸ್ತ್ರವೆಲ್ಲಾ ಪ್ರೀತಿಯಿಂದಲೇ ನೆರವೇರುವುದು ಎಂಬ ಬೋಧನೆ
ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ಸಾಲವೂ ನಿಮ್ಮ ಮೇಲೆ ಇರಬಾರದು. ತನ್ನ ನೆರೆಹೊರೆಯವರನ್ನು ಪ್ರೀತಿಸುವವನು ಧರ್ಮಶಾಸ್ತ್ರವನ್ನೆಲ್ಲಾ ನೆರವೇರಿಸಿದ್ದಾನೆ.
ದೇವರನ್ನು ಪ್ರೀತಿಸುವವನು, ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬ ಆಜ್ಞೆಯನ್ನು ನಾವು ಆತನಿಂದ ಹೊಂದಿದ್ದೇವೆ.
ಪ್ರಿಯರೇ, ನಮ್ಮ ಹೃದಯವು ನಮ್ಮನ್ನು ದೋಷಿಗಳೆಂದು ಖಂಡಿಸಿ ನಡೆದರೆ ದೇವರ ಸನ್ನಿಧಿಯಲ್ಲಿ ನಮಗೆ ಭರವಸೆ ದೊರೆಯುತ್ತದೆ. ಆತನ ಆಜ್ಞೆಗಳನ್ನು ಕೈಕೊಂಡು ಆತನಿಗೆ ಮೆಚ್ಚಿಕೆಯಾಗುವ ಕಾರ್ಯಗಳನ್ನು ಮಾಡುವವರಾದರೆ ನಾವು ಏನು ಬೇಡಿಕೊಂಡರೂ ಆತನಿಂದ ಹೊಂದುವೆವು.
Bênçãos da obediência à lei
Se andardes nos meus mandamentos, vivereis. A obediência à lei de Deus traz vida, paz e prosperidade espiritual.
ವಿಧೇಯತೆಯಿಂದ ಸಿಕ್ಕುವ ಆಶೀರ್ವಾದಗಳು
ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆದರೆ, ಆತನು ಭೂಮಿಯ ಮೇಲಿರುವ ಎಲ್ಲಾ ಜನಾಂಗಗಳಿಗಿಂತಲೂ ನಿಮ್ಮನ್ನು ಉನ್ನತಸ್ಥಿತಿಗೆ ತರುವನು.
ನಾನು ಈಗ ನಿಮಗೆ ಬೋಧಿಸುವ ಪ್ರಕಾರ ನೀವು ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಆತನು ಹೇಳಿದ ಮಾರ್ಗದಲ್ಲಿ ನಡೆದು, ಆತನ ಆಜ್ಞಾವಿಧಿ ನಿಯಮಗಳನ್ನು ಅನುಸರಿಸಿದರೆ ನೀವು ಬದುಕಿಕೊಂಡು ಹೆಚ್ಚುವಿರಿ; ಮತ್ತು ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಭಿವೃದ್ಧಿಪಡಿಸುವನು.
ಯೆಹೋವನ ಭಯಭಕ್ತಿ
ಆದುದರಿಂದ ಇಸ್ರಾಯೇಲರೇ, ನೀವು ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ, ಎಲ್ಲಾ ವಿಷಯಗಳಲ್ಲಿಯೂ ಆತನು ಹೇಳುವ ಮಾರ್ಗದಲ್ಲೇ ನಡೆಯುತ್ತಾ, ಆತನನ್ನು ಪ್ರೀತಿಸುತ್ತಾ, ಸಂಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಸೇವೆ ಮಾಡುತ್ತಾ, ನಾನು ನಿಮ್ಮ ಮೇಲಿಗಾಗಿ ಈಗ ಬೋಧಿಸುವ ಆತನ ಆಜ್ಞಾವಿಧಿಗಳನ್ನು ಅನುಸರಿಸುತ್ತಾ ಇರುವುದನ್ನೇ ಹೊರತು ನಿಮ್ಮ ದೇವರಾದ ಯೆಹೋವನು
ನಾನು ಈಗ ನಿಮಗೆ ತಿಳಿಸುವ ಮಾತುಗಳು ನಿಮ್ಮ ಹೃದಯದಲ್ಲಿರಬೇಕು. ಇವುಗಳನ್ನು ನಿಮ್ಮ ಮಕ್ಕಳಿಗೆ ಅಭ್ಯಾಸಮಾಡಿಸಿ, ಮನೆಯಲ್ಲಿ ಕುಳಿತಿರುವಾಗಲೂ, ದಾರಿಯಲ್ಲಿ ನಡೆಯುವಾಗಲೂ, ಮಲಗುವಾಗಲೂ ಮತ್ತು ಏಳುವಾಗಲೂ ಇವುಗಳ ವಿಷಯದಲ್ಲಿ ಮಾತನಾಡಬೇಕು.
ಈ ಧರ್ಮಶಾಸ್ತ್ರವು ಯಾವಾಗಲೂ ನಿನ್ನ ಬಾಯಲ್ಲಿರಲಿ; ಹಗಲಿರುಳು ಅದನ್ನು ಧ್ಯಾನಿಸುತ್ತಾ ಅದರಲ್ಲಿ ಬರೆದಿರುವುದನ್ನೆಲ್ಲಾ ಕೈಕೊಂಡು ನಡೆ. ಆಗ ನಿನ್ನ ಕಾರ್ಯವೆಲ್ಲವೂ, ನೀನು ಹೋಗುವ ಮಾರ್ಗಗಳು ಸಫಲವಾಗುವುದು. ನೀನು ಚುರುಕು ಬುದ್ಧಿಯ ವ್ಯಕ್ತಿಯಾಗಿ ರೂಪಾಂತರ ಹೊಂದುವಿ.
ಆದರೆ ಯೆಹೋವನ ಸೇವಕನಾದ ಮೋಶೆಯು ನಿಮಗೆ ಕೊಟ್ಟ ಧರ್ಮೋಪದೇಶದ ವಿಧಿಗಳನ್ನು ಜಾಗರೂಕತೆಯಿಂದ ಪಾಲಿಸಿರಿ; ಹಾಗೆಯೇ ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ ಆತನ ಮಾರ್ಗದಲ್ಲೇ ನಡೆದು, ಆತನ ಆಜ್ಞೆಗಳನ್ನು ಕೈಕೊಂಡು ಆತನೊಂದಿಗೆ ಸೇರಿಕೊಂಡು ಪೂರ್ಣಮನಸ್ಸಿನಿಂದಲೂ, ಪೂರ್ಣಹೃದಯದಿಂದಲೂ ಆತನನ್ನು ಸೇವಿಸಿರಿ," ಎಂದು ಹೇಳಿ
ನಾನು ಪೂರ್ಣಮನಸ್ಸಿನಿಂದ ನಿನ್ನನ್ನು ಹುಡುಕುತ್ತೇನೆ,
ನಿನ್ನ ಆಜ್ಞೆಗಳಿಗೆ ತಪ್ಪಿಹೋಗದಂತೆ ನನ್ನನ್ನು ಕಾಪಾಡು.
ಭಕ್ತಿಮಾರ್ಗವನ್ನು ಆರಿಸಿಕೊಂಡಿದ್ದೇನೆ,
ನಿನ್ನ ವಿಧಿಗಳನ್ನು ನನ್ನ ಮುಂದೆಯೇ ಇಟ್ಟುಕೊಂಡಿದ್ದೇನೆ.
ಆದರೆ ಯೆಹೋವನಲ್ಲಿ ಭಯಭಕ್ತಿಯುಳ್ಳವರ ಮೇಲೆ,
ಆತನ ದಯೆಯು ಯುಗಯುಗಾಂತರಗಳವರೆಗೂ ಇರುತ್ತದೆ.
ಆತನ ನಿಬಂಧನೆಗಳನ್ನು ಕೈಕೊಂಡು,
ಆತನ ವಿಧಿಗಳನ್ನು ನೆನಪಿನಲ್ಲಿಟ್ಟುಕೊಂಡು ನಡೆಯುವವರ
ಮಕ್ಕಳು ಮೊಮ್ಮಕ್ಕಳವರೆಗೂ ಆತನು ತನ್ನ ನೀತಿಯನ್ನು ಸಾಧಿಸುವನು.
Lei e graça
A lei veio para nos guiar; a graça veio para nos salvar. Em Cristo, cumprimos a lei pelo amor — o fruto do Espírito não tem lei contra si.
ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ, ಕರ್ತನಿಗೆ ಮೆಚ್ಚಿಗೆಯಾಗುವ ರೀತಿಯಲ್ಲಿ ಅವರನ್ನು ಶಿಸ್ತಿನಲ್ಲಿಯೂ ಉಪದೇಶದಲ್ಲಿಯೂ ಸಾಕಿ ಸಲಹಿರಿ.
ಮನುಷ್ಯನೇ, ಒಳ್ಳೆಯದು ಇಂಥದ್ದೇ ಎಂದು ಯೆಹೋವನು ನಿನಗೆ ತೋರಿಸಿದ್ದಾನಲ್ಲವೇ.
ನ್ಯಾಯವನ್ನು ಆಚರಿಸುವುದು, ಕರುಣೆಯಲ್ಲಿ ಆಸಕ್ತನಾಗಿರುವುದು,
ನಿನ್ನ ದೇವರಿಗೆ ನಮ್ರವಾಗಿ ನಡೆದುಕೊಳ್ಳುವುದು ಇಷ್ಟನ್ನೇ ಹೊರತು
ಯೆಹೋವನು ನಿನ್ನಿಂದ ಇನ್ನೇನು ಅಪೇಕ್ಷಿಸುವನು?
ಅದರ ಬದಲಾಗಿ ನ್ಯಾಯವು ಹೊಳೆಯ ಹಾಗೆ ಹರಿಯಲಿ,
ಧರ್ಮವು ಮಹಾನದಿಯಂತೆ ಹರಿಯಲಿ.
ಕ್ರೈಸ್ತರು ಅನ್ಯಜನಗಳ ಅನ್ಯೋನ್ಯತೆಯಲ್ಲಿ ಕೆಡಬಾರದು
ನೀವು ಕ್ರಿಸ್ತ ನಂಬಿಕೆಯಿಲ್ಲದವರೊಂದಿಗೆ ಸೇರಿ ಇಜ್ಜೋಡಿಯಾಗಬೇಡಿರಿ. ಧರ್ಮಕ್ಕೂ, ಅಧರ್ಮಕ್ಕೂ ಸಹವಾಸವೇನು?