Língua
A língua tem poder de vida e de morte. A Bíblia compara a língua ao leme de um navio e à faísca que incendeia uma floresta. Dominar a língua é prova de maturidade espiritual.
O poder da língua
A morte e a vida estão no poder da língua. Quem a domina é varão perfeito, capaz de controlar todo o corpo.
ಜೀವ ಮತ್ತು ಮರಣಗಳು ನಾಲಿಗೆಯ ವಶ,
ವಚನಪ್ರಿಯರು ಅದರ ಫಲವನ್ನು ಅನುಭವಿಸುವರು,
ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುಮಾಡುವವರಾಗಿದ್ದಾರೆ. ಒಬ್ಬನು ಮಾತಿನಲ್ಲಿ ತಪ್ಪಿ ನಡೆಯದಿದ್ದರೆ ಅವನು ಸರ್ವಸುಗುಣವುಳ್ಳವನೂ ತನ್ನ ಇಡೀ ದೇಹವನ್ನೆಲ್ಲಾ ಸ್ವಾಧೀನಪಡಿಸಿಕೊಳ್ಳುವುದಕ್ಕೆ ಸಮರ್ಥನೂ ಆಗಿದ್ದಾನೆ.
ಕುದುರೆಗಳು ನಮ್ಮ ಇಚ್ಚೆಯಂತೆ ನಡೆಯುವ ಹಾಗೆ ಅವುಗಳ ಬಾಯಿಗೆ ಕಡಿವಾಣ ಹಾಕುತ್ತೇವೆ. ಆಗ ಅವುಗಳ ದೇಹವನ್ನೆಲ್ಲಾ ನಮಗೆ ಬೇಕಾದ ಕಡೆಗೆ ತಿರುಗಿಸುವುದಕ್ಕೆ ಆಗುತ್ತದೆ. ಹಡಗುಗಳನ್ನು ಸಹ ಗಮನಿಸಿರಿ. ಅವು ಬಹು ದೊಡ್ಡವುಗಳಾಗಿದ್ದರೂ ಬಲವಾದ ಗಾಳಿಯಿಂದ ದಿಕ್ಕು ತಪ್ಪುತ್ತದೆ. ಆದರೂ ನಾವಿಕನು ಬಹಳ ಸಣ್ಣ ಚುಕ್ಕಾಣಿಯಿಂದ ಅವುಗಳನ್ನು ತಾನು ಹೋಗ ಬೇಕಾದ ಕಡೆಗೆ ತಿರುಗಿಸಿಕೊಳ್ಳುತ್ತಾನೆ. ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ ದೊಡ್ಡ ಕಾರ್ಯಗಳನ್ನು ಮಾಡುವ ಬಗ್ಗೆ ಕೊಚ್ಚಿಕೊಳ್ಳುತ್ತದೆ. ಬೆಂಕಿಯ ಸಣ್ಣ ಕಿಡಿ ದೊಡ್ಡ ಕಾಡನ್ನೂ ಸುಡುತ್ತದೆ. ನಾಲಿಗೆಯೂ ಸಹ ಬೆಂಕಿಯೇ. ನಾಲಿಗೆಯೂ ಅಧರ್ಮ ಲೋಕರೂಪವಾಗಿ ನಮ್ಮ ಅಂಗಗಳ ನಡುವೆ ಇಡಲ್ಪಟ್ಟಿದೆ. ಅದು ದೇಹವನ್ನೆಲ್ಲಾ ಕೆಡಿಸುತ್ತದೆ. ತಾನೇ ನರಕವೆಂಬ ಬೆಂಕಿ ಹೊತ್ತಿಸಿಕೊಳ್ಳುತ್ತಾ ಇಡೀ ಬಾಳಿಗೆ ಬೆಂಕಿ ಹಚ್ಚುತ್ತದೆ.
ಸಕಲ ಜಾತಿಯ ಮೃಗ, ಪಕ್ಷಿ, ಹರಿದಾಡುವ ಜಂತು, ಜಲಚರಗಳನ್ನೂ ಮನುಷ್ಯರು ಹತೋಟಿಗೆ ತರುವುದುಂಟು ಮತ್ತು ತಂದದ್ದುಂಟು. ಆದರೆ ನಾಲಿಗೆಯನ್ನು ಯಾವ ಮಾನವನೂ ಹತೋಟಿಗೆ ತರಲಾರನು. ಅದು ಸುಮ್ಮನಿರಲಾರದ ಕೆಡುಕಾಗಿದೆ. ಮರಣಕರವಾದ ವಿಷದಿಂದ ತುಂಬಿದೆ.
ಅದೇ ನಾಲಿಗೆಯಿಂದ ನಮ್ಮ ಕರ್ತನಾದ ತಂದೆಯನ್ನು ಕೊಂಡಾಡುತ್ತೇವೆ, ಅದುದರಿಂದಲೇ ದೇವರ ಹೋಲಿಕೆಗೆ ಸಮಾನವಾಗಿ ಸೃಷ್ಟಿಸಲ್ಪಟ್ಟ ಮನುಷ್ಯರನ್ನು ನಾವು ಶಪಿಸುತ್ತೇವೆ. ಅದೇ ಬಾಯಿಂದ ಸ್ತುತಿ ಮತ್ತು ಶಾಪ ಎರಡೂ ಬರುತ್ತವೆ. ನನ್ನ ಸಹೋದರರೇ, ಒಂದೇ ಬುಗ್ಗೆಯಿಂದ ಸಿಹಿ ನೀರು ಮತ್ತು ಕಹಿ ನೀರು ಎರಡು ಹೊರಡುವುದುಂಟೇ? ನನ್ನ ಸಹೋದರರೇ, ಅಂಜೂರದ ಮರವು ಎಣ್ಣೆ ಮರದ ಕಾಯಿ ಬಿಡುವುದೋ? ದ್ರಾಕ್ಷಿ ಬಳ್ಳಿಯಲ್ಲಿ ಅಂಜೂರದ ಹಣ್ಣು ಬಿಡುವುದೋ? ಹಾಗೆಯೇ ಉಪ್ಪುನೀರಿನ ಬುಗ್ಗೆಯಿಂದ ಸಿಹಿ ನೀರು ಬರುವುದಿಲ್ಲ.
Palavras sábias
A língua branda quebra até ossos. A palavra certa no tempo certo é como maçãs de ouro em salvas de prata.
ದೀರ್ಘಶಾಂತಿಯಿಂದ ಪ್ರಭುವನ್ನೂ ಸಮ್ಮತಿಪಡಿಸಬಹುದು,
ಮೃದುವಚನವು ಎಲುಬನ್ನು ಮುರಿಯುವುದು.
ಕತ್ತಿ ತಿವಿದ ಹಾಗೆ ದುಡುಕಿ ಮಾತನಾಡುವವರುಂಟು,
ಜ್ಞಾನವಂತರ ಮಾತು ಸ್ವಸ್ಥತೆಯನ್ನು ತರುವುದು.
ಸತ್ಯದ ತುಟಿ ಶಾಶ್ವತ,
ಸುಳ್ಳಿನ ನಾಲಿಗೆ ಕ್ಷಣಿಕ.
ಮಾತಾಳಿಗೆ ಪಾಪ ತಪ್ಪದು,
ಮೌನಿಯು ವಿವೇಕಿ.
ಮೂಢನು ಕೂಡ ಸುಮ್ಮನಿದ್ದರೆ ಜ್ಞಾನಿಯೆಂತಲೂ,
ತುಟಿಗಳನ್ನು ಬಿಗಿಹಿಡಿದರೆ ವಿವೇಕಿಯೆಂತಲೂ ಅನ್ನಿಸಿಕೊಳ್ಳುವನು.
Disciplinar a fala
Quem guarda a boca e a língua guarda a sua alma de angústias. A religião sem controle da língua é vã.
ತನ್ನನ್ನು ಸದ್ಭಕ್ತನೆಂದೆಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಯನ್ನು ಹತೋಟಿಯಲ್ಲಿ ಇಟ್ಟುಕೊಳ್ಳದೆ ತನ್ನ ಹೃದಯವನ್ನು ಮೋಸಗೊಳಿಸುವವನಾದರೆ ಅವನ ಭಕ್ತಿಯು ವ್ಯರ್ಥವಾಗಿದೆ.
ಮನುಷ್ಯನ ಅಸ್ಥಿರತೆಯನ್ನು ದೇವರ ಮುಂದೆ ಅರಿಕೆಮಾಡುವುದು
"ನನ್ನ ನಾಲಿಗೆ ಪಾಪಕ್ಕೆ ಹೋಗದಂತೆ ಜಾಗರೂಕನಾಗಿರುವೆನು,
ದುಷ್ಟರು ನನ್ನ ಮುಂದೆ ಇರುವಾಗ ಬಾಯಿಗೆ ಕಡಿವಾಣ ಹಾಕಿಕೊಂಡಿರುವೆನು" ಅಂದುಕೊಂಡೆನು.
ದೀರ್ಘಾಯುಷ್ಯವು ಬೇಕೋ?
ಬಹುದಿನ ಬದುಕಿ ಸುಖವನ್ನು ಅನುಭವಿಸಬೇಕೋ?
ಹಾಗಾದರೆ ಕೆಟ್ಟದ್ದಕ್ಕೆ ಹೋಗದಂತೆ ನಾಲಿಗೆಯನ್ನು ಕಾದುಕೋ;
ವಂಚನೆಯ ಮಾತುಗಳಿಗೆ ಬಿಡದೆ ತುಟಿಗಳನ್ನು ಇಟ್ಟುಕೋ.
ನೀತಿವಂತನ ಬಾಯಿಯು ಸುಜ್ಞಾನವನ್ನು ನುಡಿಯುತ್ತದೆ,
ಅವನ ನಾಲಿಗೆ ನ್ಯಾಯವನ್ನೇ ಹೇಳುತ್ತದೆ.
ದೇವರ ಧರ್ಮೋಪದೇಶವು ಅವನ ಹೃದಯದಲ್ಲಿರುವುದು;
ಅವನು ಜಾರುವುದೇ ಇಲ್ಲ.
ನನ್ನ ನಾಲಿಗೆಯು ನಿನ್ನ ನೀತಿಯನ್ನೂ ಮಹಿಮೆಯನ್ನೂ ದಿನವೆಲ್ಲಾ ವರ್ಣಿಸುವುದು.
ಯೆಹೋವನೇ, ನನ್ನ ನಾಲಿಗೆಯ ಮಾತುಗಳಲ್ಲಿ,
ನೀನು ಅರಿಯದೆ ಇರುವಂಥದು ಒಂದೂ ಇಲ್ಲ.
ಯೆಹೋವನೇ, ಸುಳ್ಳು ಬಾಯಿಯೂ,
ವಂಚಿಸುವ ನಾಲಿಗೆ ಉಳ್ಳವರಿಂದ ನನ್ನನ್ನು ಬಿಡಿಸು.
ಯೆಹೋವನು ವಂಚನೆಯ ತುಟಿಗಳನ್ನೂ, ಬಡಾಯಿ ನಾಲಿಗೆಯನ್ನೂ ಕಡಿದುಬಿಡಲಿ.
ಅವರು, "ನಮ್ಮ ಮಾತುಗಳಿಗೆ ತಡೆಯಿಲ್ಲವಲ್ಲಾ;
ನಮ್ಮ ತುಟಿಗಳು ನಮ್ಮವೇ; ನಮಗೆ ಒಡೆಯನು ಯಾರು?" ಎಂದು ಹೇಳಿಕೊಳ್ಳುತ್ತಾರಲ್ಲಾ.
ಕರ್ತನೇ, ಅವರ ಭಾಷೆಯನ್ನು ತಾರುಮಾರುಮಾಡಿ ಅವರನ್ನು ಭ್ರಾಂತಿಗೊಳಿಸು.
ಪಟ್ಟಣದಲ್ಲಿ ಕಲಹ, ಬಲಾತ್ಕಾರಗಳು ಕಾಣಬರುತ್ತವೆ.
Toda língua confessará
Ao nome de Jesus todo joelho se dobrará e toda língua confessará que Jesus Cristo é Senhor, para glória de Deus Pai.
ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತ ಸ್ಥಾನಕ್ಕೆ ಏರಿಸಿ,
ಎಲ್ಲಾ ಹೆಸರುಗಳಿಗಿಂತ ಶ್ರೇಷ್ಠವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ.
ಆದ್ದರಿಂದ ಸ್ವರ್ಗ ಮರ್ತ್ಯ ಪಾತಾಳಗಳಲ್ಲಿರುವವರೆಲ್ಲರೂ
ಯೇಸುವಿನ ಹೆಸರಿನಲ್ಲಿ ಮೊಣಕಾಲೂರಿ ಅಡ್ಡಬಿದ್ದು,
ತಂದೆಯಾದ ದೇವರ ಮಹಿಮೆಗಾಗಿ ಪ್ರತಿಯೊಂದು ನಾಲಿಗೆಯು
ಯೇಸು ಕ್ರಿಸ್ತನನ್ನು ಕರ್ತನೆಂದು ಅರಿಕೆಮಾಡುವುದು.
ಪ್ರೀತಿಯ ಶ್ರೇಷ್ಠತೆ
ನಾನು ಮನುಷ್ಯರ ಭಾಷೆಗಳನ್ನೂ, ದೇವದೂತರ ಭಾಷೆಗಳನ್ನೂ ಮಾತನಾಡುವವನಾದರೂ ಪ್ರೀತಿಯಿಲ್ಲದವನಾಗಿದ್ದರೆ ನಾದಕೊಡುವ ಕಂಚಿನ ಜಾಗಟೆ, ಗಣಗಣಿಸುವ ಘಂಟೆ ಆಗಿದ್ದೇನೆ.
ಇದಲ್ಲದೆ ನಾನು ನಿಮಗೆ ಹೇಳುವುದೇನಂದರೆ, ಮನುಷ್ಯರು ವ್ಯರ್ಥವಾಗಿ ಆಡುವ ಪ್ರತಿಯೊಂದು ಮಾತಿನ ವಿಷಯವಾಗಿಯೂ ನ್ಯಾಯವಿಚಾರಣೆಯ ದಿನದಲ್ಲಿ ಲೆಕ್ಕ ಕೊಡಬೇಕು. ನಿನ್ನ ಮಾತುಗಳಿಂದಲೇ ನೀನು ನೀತಿವಂತನೆಂದು ತೀರ್ಪು ಹೊಂದುವಿ. ನಿನ್ನ ಮಾತುಗಳಿಂದಲೇ ನೀನು ಅಪರಾಧಿಯೆಂದು ತೀರ್ಪು ಹೊಂದುವಿ" ಅಂದನು.
ಮನುಷ್ಯರು ಕಟ್ಟುತ್ತಿದ್ದ ಆ ಪಟ್ಟಣವನ್ನೂ, ಗೋಪುರವನ್ನೂ ನೋಡುವುದಕ್ಕೆ ಯೆಹೋವನು ಇಳಿದು ಬಂದನು. ನೋಡಿದ ಮೇಲೆ ಯೆಹೋವನು, "ಇವರು ಒಂದೇ ಜನಾಂಗ; ಇವರೆಲ್ಲರಿಗೂ ಒಂದೇ ಭಾಷೆ. ಪ್ರಾರಂಭದಲ್ಲೇ ಇವರು ಇಷ್ಟು ದೊಡ್ಡ ಯೋಜನೆಯೊಂದಿಗೆ ಒಟ್ಟಾಗಿ ಕೆಲಸ ಮಾಡಲಾರಂಭಿಸಿದ್ದಾರೆ. ಇನ್ನು ಮುಂದೆ ಇವರು ಏನು ಮಾಡಲು ಉದ್ದೇಶಿಸಿದರೂ ಇವರಿಗೆ ಯಾವುದೂ ಅಸಾಧ್ಯವಾಗುವುದಿಲ್ಲ. ಇವರಲ್ಲಿ ಒಬ್ಬರ ಮಾತು ಒಬ್ಬರಿಗೆ ತಿಳಿಯದಂತೆ ಇವರ ಭಾಷೆಯನ್ನು ಗಲಿಬಿಲಿ ಮಾಡೋಣ ಬನ್ನಿ" ಎಂದನು.
ಯೆಹೋವನು ಅದೇ ಪ್ರಕಾರ ಅವರನ್ನು ಭೂಲೋಕದಲ್ಲೆಲ್ಲಾ ಚದರಿಸಿ ಬಿಟ್ಟನು. ಅವರು ಆ ಪಟ್ಟಣ ಕಟ್ಟುವುದನ್ನು ನಿಲ್ಲಿಸಿಬಿಟ್ಟರು. ಸಮಸ್ತ ಲೋಕದ ಭಾಷೆಯನ್ನು ಯೆಹೋವನು ಅಲ್ಲಿ ಗಲಿಬಿಲಿ ಮಾಡಿ, ಅವರನ್ನು ಭೂಲೋಕದಲ್ಲೆಲ್ಲಾ ಚದರಿಸಿದ್ದರಿಂದ ಆ ಪಟ್ಟಣಕ್ಕೆ ಬಾಬೆಲ್ (ದೇವರ ಬಾಗಿಲು) ಎಂಬ ಹೆಸರಾಯಿತು.
Este artigo te tocou? Faça uma oração!
+581 estão orando agora.
Junte-se à corrente de oração.