Língua
A língua tem poder de vida e de morte. A Bíblia compara a língua ao leme de um navio e à faísca que incendeia uma floresta. Dominar a língua é prova de maturidade espiritual.
O poder da língua
A morte e a vida estão no poder da língua. Quem a domina é varão perfeito, capaz de controlar todo o corpo.
ನಾಲಿಗೆಗೆ ಮರಣ ಮತ್ತು ಜೀವದ ಶಕ್ತಿಯಿದೆ;
ಅದನ್ನು ಪ್ರೀತಿಸುವವರು ಅದರ ಫಲವನ್ನು ತಿನ್ನುವರು.
ಏಕೆಂದರೆ ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವುದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ, ಅವನು ಪರಿಪೂರ್ಣನೂ ತನ್ನ ಇಡೀ ದೇಹವನ್ನೇ ಸ್ವಾಧೀನದಲ್ಲಿಟ್ಟುಕೊಳ್ಳುವುದಕ್ಕೆ ಸಮರ್ಥನೂ ಆಗಿದ್ದಾನೆ.
ಕುದುರೆಗಳು ನಮಗೆ ವಿಧೇಯವಾಗುವ ಹಾಗೆ ಅವುಗಳ ಬಾಯಿಗೆ ಕಡಿವಾಣ ಹಾಕುತ್ತೇವಲ್ಲಾ, ಆಗ ಅವುಗಳ ದೇಹವನ್ನೆಲ್ಲಾ ತಿರುಗಿಸುವುದಕ್ಕೆ ಆಗುತ್ತದೆ. ಹಡಗುಗಳ ಉದಾಹರಣೆಯೂ ಅದರಂತೆ ಇದೆ. ಅವು ಬಹು ದೊಡ್ಡವಾಗಿದ್ದರೂ ಬಲವಾದ ಗಾಳಿಯಿಂದ ಬಡಿಸಿಕೊಂಡು ಹೋಗುತ್ತವೆ. ಆದರೂ ಬಹು ಸಣ್ಣ ಚುಕ್ಕಾಣಿಯಿಂದ ಅವುಗಳನ್ನು ನಡೆಸುವವನು ತನ್ನ ಮನಸ್ಸಿಗೆ ಬಂದ ಕಡೆಗೆ ಅವುಗಳನ್ನು ತಿರುಗಿಸುತ್ತಾನೆ. ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ ದೊಡ್ಡ ಕಾರ್ಯಗಳನ್ನು ಕೊಚ್ಚಿಕೊಳ್ಳುತ್ತದೆ. ಒಂದು ಸಣ್ಣ ಬೆಂಕಿ ಕಿಡಿಯು ದೊಡ್ಡಕಾಡನ್ನೇ ಸುಟ್ಟುಬಿಡುತ್ತದೆ ನೋಡಿರಿ. ನಮ್ಮ ದೇಹದ ಅಂಗಗಳಲ್ಲಿ ನಾಲಿಗೆಯು ಸಹ ಬೆಂಕಿಯೂ ದುಷ್ಟ ಲೋಕವೂ ಆಗಿದೆ. ಹೀಗೆ ನಾಲಿಗೆಯು ನಮ್ಮ ಅಂಗಗಳಲ್ಲಿ ಇದ್ದು, ಇಡೀ ದೇಹವನ್ನೆಲ್ಲಾ ಮಲಿನಗೊಳಿಸುತ್ತದೆ. ಅದು ನರಕದ ಬೆಂಕಿಯಿಂದ ಹೊತ್ತಿಕೊಂಡು, ಮಾನವರ ಇಡೀ ಜೀವನಕ್ಕೆ ಬೆಂಕಿ ಹಚ್ಚುವದಾಗಿದೆ.
ಸಕಲ ವಿಧವಾದ ಮೃಗ, ಪಕ್ಷಿ, ಸರ್ಪ, ಜಲಚರಗಳನ್ನು ಮಾನವರು ಹತೋಟಿಗೆ ತರುತ್ತಾರೆ ಮತ್ತು ತಂದಿದ್ದಾರೆ. ಆದರೆ ನಾಲಿಗೆಯನ್ನು ಯಾವ ಮಾನವನೂ ಹತೋಟಿಗೆ ತರಲಾರನು. ಅದು ಸ್ವಾಧೀನವಾಗದ ಕೆಡುಕಾಗಿದೆ. ಮರಣಕರವಾದ ವಿಷದಿಂದ ತುಂಬಿಕೊಂಡಿದೆ.
ಅದೇ ನಾಲಿಗೆಯಿಂದ ನಮ್ಮ ತಂದೆಯಾದ ಕರ್ತದೇವರನ್ನು ಕೊಂಡಾಡುತ್ತೇವೆ, ಅದರಿಂದಲೇ ದೇವರ ಹೋಲಿಕೆಗೆ ಸರಿಯಾಗಿ ಸೃಷ್ಟಿಸಲಾದ ಮನುಷ್ಯರನ್ನು ನಾವು ಶಪಿಸುತ್ತೇವೆ. ಅದೇ ಬಾಯಿಂದ ಸ್ತುತಿ ಮತ್ತು ಶಾಪ ಬರುತ್ತವೆ. ನನ್ನ ಪ್ರಿಯರೇ, ಇವುಗಳು ಹೀಗಿರಬಾರದು. ಒಂದೇ ಬುಗ್ಗೆಯಿಂದ ಸಿಹಿನೀರನ್ನೂ ಉಪ್ಪುನೀರನ್ನೂ ಒಂದೇ ಸ್ಥಳದಿಂದ ಹೊರಡಿಸುವುದುಂಟೇ? ನನ್ನ ಪ್ರಿಯರೇ, ಅಂಜೂರದ ಮರವು ಎಣ್ಣೇಮರದ ಕಾಯನ್ನು ಬಿಡುವುದೋ? ದ್ರಾಕ್ಷೇ ಬಳ್ಳಿಯಲ್ಲಿ ಅಂಜೂರದ ಹಣ್ಣಾಗುವದೋ? ಉಪ್ಪುನೀರಿನ ಬುಗ್ಗೆಯು ಸಿಹಿನೀರನ್ನು ಕೊಡಲು ಎಂದಿಗೂ ಸಾಧ್ಯವಿಲ್ಲ.
Palavras sábias
A língua branda quebra até ossos. A palavra certa no tempo certo é como maçãs de ouro em salvas de prata.
ತಾಳ್ಮೆಯ ಮೂಲಕ ಪ್ರಭುವನ್ನು ಒಲಿಸಿಕೊಳ್ಳಬಹುದು;
ಮೃದುವಾದ ಮಾತು ಎಲುಬನ್ನು ಮುರಿಯುತ್ತದೆ.
ಅಜಾಗರೂಕತೆಯ ಮಾತುಗಳು ಖಡ್ಗಗಳಂತೆ ಚುಚ್ಚುತ್ತವೆ,
ಆದರೆ ಜ್ಞಾನವಂತರ ನಾಲಿಗೆಯು ಸ್ವಸ್ಥತೆಯನ್ನು ತರುವುದು.
ಸತ್ಯದ ತುಟಿಯು ಸದಾ ಸ್ಥಿರಗೊಳ್ಳುವುದು,
ಸುಳ್ಳಾಡುವ ನಾಲಿಗೆಯು ಕ್ಷಣಿಕ.
ಅತಿಯಾದ ಮಾತುಗಳಿಂದ ಪಾಪವು ಕೊನೆಗೊಳ್ಳುವುದಿಲ್ಲ.
ಆದರೆ ಜ್ಞಾನವಂತನು ತನ್ನ ನಾಲಿಗೆಯನ್ನು ತಡೆಯುವನು.
ಬುದ್ಧಿಹೀನನು ಮೌನವಾಗಿದ್ದರೆ ಜ್ಞಾನಿಯೆನಿಸಿಕೊಳ್ಳುವನು;
ತನ್ನ ತುಟಿಗಳನ್ನು ಬಿಗಿ ಹಿಡಿಯುವವನು ವಿವೇಕಿ ಎನಿಸಿಕೊಳ್ಳುವನು.
Disciplinar a fala
Quem guarda a boca e a língua guarda a sua alma de angústias. A religião sem controle da língua é vã.
ನಿಮ್ಮಲ್ಲಿ ಭಕ್ತನೆಂದೆಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆ ತನ್ನ ಹೃದಯವನ್ನು ಮೋಸಗೊಳಿಸುವವನಾದರೆ ಅವನ ಭಕ್ತಿ ನಿಷ್ಪ್ರಯೋಜಕವಾಗಿದೆ.
"ನನ್ನ ನಾಲಿಗೆಯಿಂದ ಪಾಪಮಾಡದಂತೆ ಜಾಗರೂಕನಾಗಿರುವೆನು,
ನನ್ನ ಮಾರ್ಗಗಳನ್ನು ಕಾಪಾಡಿಕೊಳ್ಳುವೆನು.
ದುಷ್ಟರು ನನ್ನ ಮುಂದೆ ಇರುವಾಗ
ನನ್ನ ಬಾಯಿಗೆ ಕಡಿವಾಣ ಹಾಕಿಕೊಳ್ಳುವೆನು,"
ಎಂದು ತೀರ್ಮಾನಿಸಿಕೊಂಡೆನು.
ನಿಮ್ಮಲ್ಲಿ ಜೀವನವನ್ನು ಪ್ರೀತಿಸುವವನು
ಮತ್ತು ಬಹಳ ದಿನಗಳವರೆಗೆ ಬದುಕಬೇಕೆ?
ನೀನು ಕೇಡಿನಿಂದ ನಿನ್ನ ನಾಲಿಗೆಯನ್ನು,
ಮೋಸವನ್ನು ನುಡಿಯದ ಹಾಗೆ ನಿನ್ನ ತುಟಿಗಳನ್ನೂ ನಿಯಂತ್ರಿಸಿಕೋ.
ನೀತಿವಂತನ ಬಾಯಿ ಜ್ಞಾನವನ್ನು ನುಡಿಯುವುದು;
ಅವನ ನಾಲಿಗೆ ನ್ಯಾಯವನ್ನು ಮಾತನಾಡುವುದು.
ಅವನ ದೇವರ ನಿಯಮವೂ ಅವನ ಹೃದಯದಲ್ಲಿ ಇದೆ;
ಅವನ ಹೆಜ್ಜೆ ಕದಲುವುದಿಲ್ಲ.
ಆಗ ನನ್ನ ನಾಲಿಗೆಯು ನಿಮ್ಮ ನೀತಿಯನ್ನೂ
ದಿನವೆಲ್ಲಾ ನಿಮ್ಮ ಸ್ತೋತ್ರವನ್ನೂ ವರ್ಣಿಸುವುದು.
ನನ್ನ ನಾಲಿಗೆಯಲ್ಲಿ ಒಂದು ಮಾತು ಆರಂಭಿಸುವುದಕ್ಕಿಂತ ಮುಂಚೆಯೇ
ಯೆಹೋವ ದೇವರೇ, ಅದು ನಿಮಗೆ ಪೂರ್ಣವಾಗಿ ತಿಳಿದಿರುತ್ತದೆ.
ಯೆಹೋವ ದೇವರೇ, ನನ್ನ ಪ್ರಾಣವನ್ನು
ಸುಳ್ಳು ತುಟಿಯಿಂದಲೂ,
ಮೋಸದ ನಾಲಿಗೆಯಿಂದಲೂ ಬಿಡಿಸಿರಿ.
ಹೊಗಳಿಕೆಯ ಎಲ್ಲಾ ತುಟಿಗಳನ್ನೂ
ಗರ್ವ ಮಾತನಾಡುವ ಎಲ್ಲಾ ನಾಲಿಗೆಯನ್ನೂ ಯೆಹೋವ ದೇವರು ಮೌನವಾಗಿರಿಸಲಿ.
ಅವರು ಹೀಗೆನ್ನುತ್ತಾರೆ, "ನಾವು ನಮ್ಮ ನಾಲಿಗೆಯಿಂದ ಜಯಿಸುವೆವು;
ನಮ್ಮ ತುಟಿಗಳೇ ನಮಗೆ ಸಂರಕ್ಷಣೆ
ನಮ್ಮ ಮೇಲೆ ಒಡೆಯನು ಯಾರು?"
ಯೆಹೋವ ದೇವರೇ, ದುಷ್ಟರನ್ನು ಕಳವಳಗೊಳಿಸಿರಿ, ಅವರ ಮಾತುಗಳನ್ನು ನಿಲ್ಲಿಸಿಬಿಡಿರಿ.
ಬಲಾತ್ಕಾರವನ್ನೂ ವಿವಾದವನ್ನೂ ಪಟ್ಟಣದಲ್ಲಿ ನಾನು ಕಾಣುತ್ತಿದ್ದೇನೆ.
Toda língua confessará
Ao nome de Jesus todo joelho se dobrará e toda língua confessará que Jesus Cristo é Senhor, para glória de Deus Pai.
ಈ ಕಾರಣದಿಂದಲೇ ದೇವರು ಅವರನ್ನು ಅತ್ಯುನ್ನತ ಸ್ಥಾನಕ್ಕೆ ಏರಿಸಿ
ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಅವರಿಗೆ ದಯಪಾಲಿಸಿದ್ದಾರೆ.
ಆದ್ದರಿಂದ ಪರಲೋಕ, ಭೂಲೋಕ, ಭೂಮಿಯ ಕೆಳಗಿರುವವರೆಲ್ಲರೂ
ಯೇಸುವಿನ ಹೆಸರಿನಲ್ಲಿ ಮೊಣಕಾಲೂರಿ,
ತಂದೆಯಾದ ದೇವರ ಮಹಿಮೆಗಾಗಿ
ಯೇಸು ಕ್ರಿಸ್ತನು ಕರ್ತದೇವರು ಎಂಬುದಾಗಿ ಪ್ರತಿಯೊಂದು ನಾಲಿಗೆಯೂ ಅರಿಕೆ ಮಾಡುವುದು.
ನಾನು ಮನುಷ್ಯರ ಭಾಷೆಗಳನ್ನೂ, ದೇವದೂತರ ಭಾಷೆಗಳನ್ನೂ ಮಾತನಾಡುವವನಾದರೂ ನನಗೆ ಪ್ರೀತಿಯಿಲ್ಲದಿದ್ದರೆ, ನಾದ ಕೊಡುವ ಕಂಚೂ ಗಣಗಣಿಸುವ ತಾಳವೂ ಆಗಿದ್ದೇನೆ.
ನಾನು ನಿಮಗೆ ಹೇಳುವುದೇನೆಂದರೆ, ಮನುಷ್ಯರು ಆಡುವ ಪ್ರತಿಯೊಂದು ವ್ಯರ್ಥ ಮಾತಿಗಾಗಿ ನ್ಯಾಯವಿಚಾರಣೆಯ ದಿನದಲ್ಲಿ ಅವರು ಲೆಕ್ಕಕೊಡಬೇಕು. ನೀನು ನಿನ್ನ ಮಾತುಗಳಿಂದಲೇ ನೀತಿವಂತನೆಂದು ನಿರ್ಣಯಿಸಲಾಗುವುದು ಮತ್ತು ನಿನ್ನ ಮಾತುಗಳಿಂದಲೇ ನೀನು ಅಪರಾಧಿಯೆಂದು ನಿರ್ಣಯಿಸಲಾಗುವುದು," ಎಂದು ಹೇಳಿದರು.
ಜನರು ಕಟ್ಟುತ್ತಿದ್ದ ಪಟ್ಟಣವನ್ನೂ ಗೋಪುರವನ್ನೂ ನೋಡುವುದಕ್ಕೆ ಯೆಹೋವ ದೇವರು ಇಳಿದು ಬಂದರು. ಯೆಹೋವ ದೇವರು, "ಇವರಿಗೆ ಒಂದೇ ಜನಾಂಗವೂ ಒಂದೇ ಭಾಷೆಯೂ ಇದೆ. ಇವರು ಇದನ್ನು ಮಾಡಲಾರಂಭಿಸಿದ್ದಾರೆ. ಈಗ ಇನ್ನು ಮುಂದೆ ಇವರು ಮಾಡುವುದಕ್ಕೆ ಉದ್ದೇಶಿಸುವುದು ಇವರಿಗೆ ಅಸಾಧ್ಯವಾಗುವುದಿಲ್ಲ. ನಾವು ಇಳಿದು ಹೋಗಿ, ಇವರು ಒಬ್ಬರ ಮಾತನ್ನು ಒಬ್ಬರು ತಿಳಿಯದಂತೆ, ಇವರ ಭಾಷೆಯನ್ನು ಗಲಿಬಿಲಿ ಮಾಡೋಣ," ಎಂದರು.
ಆದ್ದರಿಂದ ಯೆಹೋವ ದೇವರು ಅವರನ್ನು ಅಲ್ಲಿಂದ ಭೂಮಿಯ ಮೇಲೆಲ್ಲಾ ಚದರಿಸಿದರು. ಆಗ ಅವರು ಆ ಪಟ್ಟಣ ಕಟ್ಟುವುದನ್ನು ನಿಲ್ಲಿಸಿಬಿಟ್ಟರು. ಆದಕಾರಣ ಅದಕ್ಕೆ, ಬಾಬೆಲ್ ಎಂದು ಹೆಸರಾಯಿತು. ಏಕೆಂದರೆ ಅಲ್ಲಿ ಯೆಹೋವ ದೇವರು ಇಡೀ ಜಗತ್ತಿನ ಭಾಷೆಗಳನ್ನು ಗಲಿಬಿಲಿ ಮಾಡಿದರು. ಅಲ್ಲಿಂದ ಯೆಹೋವ ದೇವರು ಅವರನ್ನು ಭೂಲೋಕದಲ್ಲೆಲ್ಲಾ ಚದರಿಸಿಬಿಟ್ಟರು.
Este artigo te tocou? Faça uma oração!
+581 estão orando agora.
Junte-se à corrente de oração.