Livramento
Deus é o grande Libertador. Através da Bíblia, vemos Deus livrando seu povo de inimigos, de perigos e da morte. Quem clama ao Senhor, Ele ouve e liberta.
Deus ouve e livra
Clamaram ao Senhor na sua tribulação, e Ele os livrou das suas angústias. O Senhor é refúgio e a salvação dos que nele confiam.
ನೀತಿವಂತರ ಕೂಗನ್ನು ಯೆಹೋವ ದೇವರು ಕೇಳಿ,
ಅವರನ್ನು ಎಲ್ಲಾ ಇಕ್ಕಟ್ಟುಗಳೊಳಗಿಂದ ಬಿಡಿಸುತ್ತಾರೆ.
ಆತನು ನನ್ನನ್ನು ಕರೆಯುವನು ನಾನು ಆತನಿಗೆ ಉತ್ತರಕೊಡುವೆನು.
ಇಕ್ಕಟ್ಟಿನಲ್ಲಿ ನಾನು ಆತನ ಸಂಗಡ ಇದ್ದು,
ಆತನನ್ನು ಘನಪಡಿಸುವೆನು.
"ನನ್ನ ಆಶ್ರಯವೂ, ನನ್ನ ಕೋಟೆಯೂ,
ನಾನು ಭರವಸೆ ಇಡುವ ನನ್ನ ದೇವರೂ ಎಂದು ನಾನು ಯೆಹೋವ ದೇವರಿಗೆ ಹೇಳುವೆನು."
ನಿಶ್ಚಯವಾಗಿ ದೇವರು ನಿಮ್ಮನ್ನು
ಬೇಡನ ಉರುಲಿನಿಂದ ರಕ್ಷಿಸುವರು.
ಮರಣಾಂತಿಕವಾದ ಸಾಂಕ್ರಾಮಿಕ ರೋಗದಿಂದಲೂ ಬಿಡಿಸುವರು.
ನಮ್ಮ ದೇವರು ರಕ್ಷಣೆಯ ದೇವರಾಗಿದ್ದಾರೆ.
ಸಾರ್ವಭೌಮ ಯೆಹೋವ ದೇವರು ಮರಣದಿಂದ ಬಿಡುಗಡೆ ಮಾಡುತ್ತಾರೆ.
ಏಕೆಂದರೆ ನೀವು ನನ್ನ ಪ್ರಾಣವನ್ನು ಮರಣದಿಂದ ಬಿಡಿಸಿದ್ದೀರಿ.
ನಾನು ಜೀವದ ಬೆಳಕಿನಲ್ಲಿ
ನಿಮ್ಮ ಮುಂದೆ ನಡೆದುಕೊಳ್ಳುವ
ಹಾಗೆ ನೀವು ನನ್ನ ಪಾದಗಳನ್ನು ಎಡವದಂತೆ ಕಾಪಾಡಿದ್ದೀರಿ.
ದರಿದ್ರನನ್ನೂ, ಬಡವನನ್ನೂ ತಪ್ಪಿಸಿರಿ.
ಅವರನ್ನು ದುಷ್ಟರ ಕೈಯೊಳಗಿಂದ ಬಿಡಿಸಿರಿ.
ಯೆಹೋವ ದೇವರೇ, ನನ್ನನ್ನು ಬಿಡಿಸುವುದಕ್ಕೆ ತ್ವರೆಮಾಡಿರಿ.
ಯೆಹೋವ ದೇವರೇ, ನನಗೆ ಸಹಾಯಮಾಡಲು ಬೇಗನೆ ಬನ್ನಿರಿ.
ಆದುದರಿಂದ ಭಕ್ತರೆಲ್ಲರು ನೀವು
ಸಿಕ್ಕುವ ಕಾಲದಲ್ಲಿ ನಿಮಗೆ ಪ್ರಾರ್ಥನೆ ಮಾಡಲಿ;
ನಿಶ್ಚಯವಾಗಿ ನೀರಿನ ಮಹಾಪ್ರವಾಹಗಳು
ಅವರ ಸಮೀಪಕ್ಕೆ ಬರುವುದಿಲ್ಲ.
Livramento poderoso
Deus livrou Daniel dos leões, os jovens hebreus do fogo e Israel do Egito. Seu braço não é curto para salvar.
ಒಂದು ವೇಳೆ ಹಾಗೆ ಇದ್ದರೆ, ನಿಶ್ಚಯವಾಗಿ ನಾವು ಆರಾಧಿಸುವ ನಮ್ಮ ದೇವರು ಉರಿಯುವ ಬೆಂಕಿಯ ಕುಲುಮೆಯೊಳಗಿಂದ ನಮ್ಮನ್ನು ತಪ್ಪಿಸಲು ಸಮರ್ಥರಾಗಿದ್ದಾರೆ. ಅರಸನೇ, ನಿನ್ನ ಕೈಯಿಂದಲೂ ನಮ್ಮನ್ನು ತಪ್ಪಿಸುವರು. ಆದರೆ ಒಂದು ವೇಳೆ ಅವರು ತಪ್ಪಿಸದಿದ್ದರೂ, ಅರಸನೇ ನಾವು ನಿನ್ನ ದೇವರುಗಳನ್ನು ಸೇವಿಸುವುದಿಲ್ಲವೆಂದೂ, ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಆರಾಧಿಸುವುದಿಲ್ಲವೆಂದೂ ನಿನಗೆ ತಿಳಿದಿರಲಿ," ಎಂದರು.
ಅವರು ನನಗಿಂತ ಶಕ್ತಿಶಾಲಿಯಾದ ಶತ್ರುಗಳಿಂದ,
ದ್ವೇಷಿಸುತ್ತಿದ್ದ ವೈರಿಗಳಿಂದ ನನ್ನನ್ನು ಬಿಡಿಸಿ ರಕ್ಷಿಸಿದರು.
ಆಗ ಇವನು ಆ ಹೊಲದ ಮಧ್ಯದಲ್ಲಿ ನಿಂತುಕೊಂಡು, ಫಿಲಿಷ್ಟಿಯರನ್ನು ಕೊಂದುಹಾಕಿ ಹೊಲವನ್ನು ಕಾಪಾಡಿದನು. ಹೀಗೆ ಯೆಹೋವ ದೇವರು ಮಹಾಜಯವನ್ನು ಉಂಟುಮಾಡಿದರು.
ನೀವು ಯಾವ ರೀತಿಯಲ್ಲಿ ಅವರನ್ನು ಬಾಧಿಸಿದರೂ ಅವರು ಕೂಗಿದರೆ ನಾನು ನಿಶ್ಚಯವಾಗಿ ಅವರ ಕೂಗನ್ನು ಕೇಳುವೆನು.
ಹೌದು, ಅಂದಿನಿಂದಲೇ ನಾನಿದ್ದೇನೆ.
ನನ್ನ ಕೈಯಿಂದ ಬಿಡಿಸುವವರು ಯಾರೂ ಇಲ್ಲ.
ನನ್ನ ಕೆಲಸಕ್ಕೆ ಅಡ್ಡಿ ಬರುವವನಾರು?"
Redenção e restauração
Todo aquele que invocar o nome do Senhor será salvo. Deus livra do pecado, da morte e de todo mal aqueles que se humilham diante dele.
ಏಕೆಂದರೆ, "ಕರ್ತನ ಹೆಸರನ್ನು ಕರೆಯುವವರೆಲ್ಲರಿಗೆ ರಕ್ಷಣೆ ಆಗುವುದು."
ಈಗ ನೀನು ತಡಮಾಡುವುದೇಕೆ? ಎದ್ದೇಳು, ಅವರ ಹೆಸರನ್ನು ಕರೆದು, ದೀಕ್ಷಾಸ್ನಾನವನ್ನು ಹೊಂದಿ ನಿನ್ನ ಪಾಪಗಳನ್ನು ತೊಳೆದುಕೋ,’ ಎಂದನು.
ಇದಲ್ಲದೆ, ದೇವರು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ ತಮ್ಮ ಪುತ್ರರಾಗಿರುವ ಯೇಸು ಮುಂದೆ ಬರುವ ಕೋಪದಿಂದ ನಮ್ಮನ್ನು ಬಿಡಿಸುವವರೂ ಆಗಿದ್ದಾರೆ. ಈ ಯೇಸುವನ್ನೇ ಪರಲೋಕದಿಂದ ಬರುವುದನ್ನು ನೀವು ಎದುರು ನೋಡುತ್ತಿದ್ದೀರಿ ಎಂಬುದನ್ನೂ ಅವರು ನಮಗೆ ವಿವರಿಸಿದರು.
ನನ್ನ ಹೆಸರಿನಿಂದ ಕರೆಯಲಾದ ನನ್ನ ಜನರು ತಮ್ಮನ್ನು ತಗ್ಗಿಸಿಕೊಂಡು ಪ್ರಾರ್ಥನೆಮಾಡಿ, ನನ್ನನ್ನು ಹುಡುಕಿ ತಮ್ಮ ದುರ್ಮಾರ್ಗಗಳಿಂದ ತಿರುಗಿದರೆ, ಆಗ ನಾನು ಪರಲೋಕದಿಂದ ಕೇಳಿ ಅವರ ಪಾಪವನ್ನು ಮನ್ನಿಸಿ, ಅವರ ದೇಶವನ್ನು ಗುಣ ಮಾಡುವೆನು.
ನನ್ನ ಹೆಸರಿನಲ್ಲಿ ನೀವು ಏನೇನು ಕೇಳಿಕೊಳ್ಳುವಿರೋ ಅದನ್ನು ನಾನು ಮಾಡುವೆನು. ಹೀಗೆ ತಂದೆಗೆ ಪುತ್ರನಲ್ಲಿ ಮಹಿಮೆ ಉಂಟಾಗುವುದು. ನೀವು ನನ್ನ ಹೆಸರಿನಲ್ಲಿ ನನ್ನನ್ನು ಏನಾದರೂ ಕೇಳಿಕೊಂಡರೆ ನಾನು ಅದನ್ನು ಮಾಡುವೆನು.
ಪರಿಶುದ್ಧಾತ್ಮರನ್ನು ಕುರಿತು ಯೇಸು ವಾಗ್ದಾನ ಮಾಡಿದ್ದು
"ನೀವು ನನ್ನನ್ನು ಪ್ರೀತಿಸುವವರಾದರೆ ನನ್ನ ಆಜ್ಞೆಗಳನ್ನು ಅನುಸರಿಸುವಿರಿ. ನಾನು ತಂದೆಯನ್ನು ಕೇಳಿಕೊಳ್ಳುವೆನು. ಆಗ ತಂದೆ ನಿಮಗೆ ಬೇರೊಬ್ಬ ಸಹಾಯಕರನ್ನು ಸದಾಕಾಲವೂ ನಿಮ್ಮೊಂದಿಗೆ ಇರುವುದಕ್ಕೆ ಕೊಡುವರು.
ದೇವರು ಪಾಪಿಗಳಿಗೆ ಕಿವಿಗೊಡುವುದಿಲ್ಲ; ಆದರೆ ಯಾರು ದೇವರಿಗೆ ಭಯಪಡುವವರಾಗಿದ್ದು ಅವರ ಚಿತ್ತದಂತೆ ನಡೆಯುತ್ತಾರೋ, ಅಂಥವರಿಗೆ ಕಿವಿಗೊಡುತ್ತಾರೆಂದು ನಾವು ಬಲ್ಲೆವು.
ದೇವರ ಸಮೀಪಕ್ಕೆ ಬನ್ನಿರಿ. ಆಗ ನಿಮ್ಮ ಸಮೀಪಕ್ಕೆ ದೇವರು ಬರುವರು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ. ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲ ಮಾಡಿಕೊಳ್ಳಿರಿ.
ಕೆಟ್ಟವರಾದ ನೀವೇ ನಿಮ್ಮ ಮಕ್ಕಳಿಗೆ ಒಳ್ಳೆಯವುಗಳನ್ನು ಕೊಡಬಲ್ಲವರಾದರೆ, ಪರಲೋಕದಲ್ಲಿರುವ ನಿಮ್ಮ ತಂದೆಯು ತಮ್ಮಲ್ಲಿ ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯವುಗಳನ್ನು ಕೊಡುವರಲ್ಲವೇ!
ಆಗ ಆ ಮನುಷ್ಯನು ದೇವರಿಗೆ ಪ್ರಾರ್ಥನೆಮಾಡುವನು;
ದೇವರು ಅವನಿಗೆ ತಮ್ಮ ಮೆಚ್ಚುಗೆಯನ್ನು ನೀಡುವರು;
ಅವನು ಆನಂದ ಧ್ವನಿಯಿಂದ ದೇವರ ಮುಖವನ್ನು ನೋಡುವನು;
ದೇವರು ಅವನನ್ನು ನೀತಿವಂತನೆಂದು ಪುನಃಸ್ಥಾಪಿಸುವರು.
Este artigo te tocou? Faça uma oração!
+581 estão orando agora.
Junte-se à corrente de oração.