Livro da vida
O Livro da Vida é o registro celestial dos nomes daqueles que pertencem a Deus. Estar escrito no Livro da Vida é a garantia da salvação eterna e da entrada na Nova Jerusalém.
Registrados no céu
Alegrai-vos por terem vossos nomes escritos nos céus. O Livro da Vida pertence ao Cordeiro de Deus desde a fundação do mundo.
ಆದರೂ ದೆವ್ವಗಳು ನಮಗೆ ಅಧೀನವಾಗಿವೆ ಎಂದು ಸಂತೋಷಪಡದೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿವೆ ಎಂದು ಸಂತೋಷಪಡಿರಿ" ಎಂದು ಹೇಳಿದನು.
ನನ್ನ ನಿಜವಾದ ಜೊತೆ ಸೇವಕನೇ, ಆ ಸ್ತ್ರೀಯರಿಗೆ ಸಹಾಯಕನಾಗಿರಬೇಕೆಂದು ನಿನ್ನನ್ನೂ ಕೇಳಿಕೊಳ್ಳುತ್ತೇನೆ. ಅವರು ಕ್ಲೇಮೆನ್ಸ್ ಮುಂತಾದ ನನ್ನ ಜೊತೆಕೆಲಸದವರ ಸಹಿತವಾಗಿ ನನ್ನ ಜೊತೆ ಸುವಾರ್ತೆಗೋಸ್ಕರ ಪ್ರಯಾಸಪಟ್ಟವರು. ಅವರವರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಬರೆದಿವೆ.
ಜಗದುತ್ಪತ್ತಿಗೆ ಮೊದಲೇ ಕೊಯ್ಯಲ್ಪಟ್ಟ ಕುರಿಮರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆದಿರುವುದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಅದಕ್ಕೆ ಆರಾಧನೆ ಮಾಡುವರು.
ನೀನು ಕಂಡ ಆ ಮೃಗವು ಮೊದಲು ಇದದ್ದೂ, ಈಗ ಇಲ್ಲದ್ದೂ, ಮತ್ತು ಅಧೋಲೋಕದೊಳಗಿನಿಂದ ಏರಿ ಬಂದು ವಿನಾಶಕ್ಕೆ ಹೋಗುವುದಕ್ಕಾಗಿರುವುದೂ ಆಗಿದೆ. ಈ ಲೋಕವು ಸೃಷ್ಟಿಯಾದಂದಿನಿಂದ ಯಾರ ಹೆಸರುಗಳು ಜೀವಬಾಧ್ಯರ ಪುಸ್ತಕದಲ್ಲಿ ಬರೆದಿರುವುದಿಲ್ಲವೋ, ಅವರು ಈ ಮೃಗವನ್ನು ನೋಡಿ ಇದು ಮೊದಲು ಇದ್ದಿತ್ತು, ಈಗ ಇಲ್ಲ, ಆದರೆ ಇನ್ನು ಮುಂದೆ ಬರಲಿದೆ ಎಂದು ಆಶ್ಚರ್ಯಪಡುವರು.
O juízo final
No dia do julgamento, os livros serão abertos. Quem não for encontrado no Livro da Vida será lançado no lago de fogo.
ಕಡೇ ನ್ಯಾಯತೀರ್ಪನ್ನು ಕುರಿತದ್ದು
ಆ ಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕುಳಿತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋದವು, ಆದರೆ ಹೋಗುವುದಕ್ಕೆ ಅವುಗಳಿಗೆ ಸ್ಥಳವಿರಲಿಲ್ಲ. ಇದಲ್ಲದೆ ಸತ್ತವರಾದ, ಶ್ರೇಷ್ಠರು ಮತ್ತು ಕನಿಷ್ಠರೆಲ್ಲರು ಸಿಂಹಾಸನದ ಮುಂದೆ ನಿಂತಿರುವುದನ್ನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು. ಜೀವಬಾಧ್ಯರ ಪಟ್ಟಿ ಎಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು. ಆ ಪುಸ್ತಕಗಳಲ್ಲಿ ಬರೆದಿರುವ ಪ್ರಕಾರ, ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು. ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು. ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು. ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು. ಆ ಮೇಲೆ ಮೃತ್ಯುವೂ ಪಾತಾಳವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು. ಆ ಬೆಂಕಿಯ ಕೆರೆಯೇ ಎರಡನೆಯ ಮರಣವು. ಯಾರ ಹೆಸರು ಜೀವಬಾಧ್ಯರ ಪುಸ್ತಕದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.
ಅದರಲ್ಲಿ ಅಶುದ್ಧವಾದದ್ದೊಂದು ಸೇರುವುದಿಲ್ಲ. ಅವಮಾನವಾದದ್ದಾಗಲಿ ವಂಚನೆಯಾಗಲಿ ಮಾಡುವವನು ಅದರೊಳಗೆ ಪ್ರವೇಶಿಸಲಾರನು. ಆದರೆ ಯಜ್ಞದ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆಯಲ್ಪಟ್ಟಿವೆಯೋ ಅವರು ಮಾತ್ರ ಸೇರುವರು.
ಯುಗದ ಸಮಾಪ್ತಿ
"ನಿನ್ನ ಜನರ ಪಕ್ಷವನ್ನು ಹಿಡಿದಿರುವ ಮಹಾಪಾಲಕನಾದ ದೇವದೂತ ಮೀಕಾಯೇಲನು ಆ ಕಾಲದಲ್ಲಿ ಏಳುವನು. ಮೊಟ್ಟಮೊದಲು ಜನಾಂಗವು ಉಂಟಾದ ದಿನದಿಂದ ಇಂದಿನವರೆಗೂ ಸಂಭವಿಸದಂಥ ಸಂಕಟವು ಸಂಭವಿಸುವುದು. ಆಗ ನಿನ್ನ ಜನರೊಳಗೆ ಯಾರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಸಿಕ್ಕುವವೋ ಅವರೆಲ್ಲರೂ ರಕ್ಷಿಸಲ್ಪಡುವರು. ಸತ್ತು ಧೂಳಿನ ನೆಲದೊಳಗೆ ದೀರ್ಘ ನಿದ್ರೆಮಾಡುವವರಲ್ಲಿ ಅನೇಕರು ಎಚ್ಚೆತ್ತು ಕೆಲವರು ನಿತ್ಯಜೀವವನ್ನು, ಕೆಲವರು ನಿಂದನೆ ಮತ್ತು ನಿತ್ಯತಿರಸ್ಕಾರಗಳನ್ನು ಅನುಭವಿಸುವರು.
ಜಯಹೊಂದುವವನು ಶುಭ್ರವಸ್ತ್ರಗಳನ್ನು ಧರಿಸುವನು. ಜೀವಬಾಧ್ಯರ ಪುಸ್ತಕದಿಂದ ಅವನ ಹೆಸರನ್ನು ನಾನು ಅಳಿಸದೆ, ಅವನು ನನ್ನವನೆಂದು ನನ್ನ ತಂದೆಯ ಎದುರಿನಲ್ಲಿಯೂ ಆತನ ದೂತರ ಮುಂದೆಯೂ ಒಪ್ಪಿಕೊಳ್ಳುವೆನು.
O registro divino
Deus registra cada vida, cada lágrima e cada momento. Nada passa despercebido diante daquele que tudo vê e tudo guarda.
ನಾನು ಇನ್ನೂ ಕೇವಲ ಪಿಂಡವಾಗಿರುವಾಗ,
ನಿನ್ನ ಕಣ್ಣುಗಳು ನನ್ನನ್ನು ನೋಡಿದವು,
ನನ್ನ ಆಯುಷ್ಕಾಲದ ಪ್ರಥಮದಿನವು ಪ್ರಾರಂಭವಾಗುವ ಮೊದಲೇ,
ಅದರ ಎಲ್ಲಾ ದಿನಗಳು ನಿನ್ನ ಪುಸ್ತಕದಲ್ಲಿ ಬರೆಯಲ್ಪಟ್ಟವು.
ನಾನು ದೇಶಭ್ರಷ್ಟನಾಗಿ ಅಲೆದಾಡಿದ್ದನ್ನು ನೀನೇ ಬಲ್ಲೆ.
ನನ್ನ ಕಣ್ಣೀರು ನಿನ್ನ ಬುದ್ದಲಿಯಲ್ಲಿ ತುಂಬಿದೆಯಲ್ಲಾ;
ಅದರ ವಿಷಯವಾಗಿ ನಿನ್ನ ಪುಸ್ತಕದಲ್ಲಿ ಬರೆದದೆಯಲ್ಲಾ.
ನೀನು ಹೊಡೆದವನನ್ನು ಅವರು ಹಿಂಸಿಸುತ್ತಾರೆ;
ನೀನು ಗಾಯಮಾಡಿದವರ ನೋವು ಅವರ ಪರಿಹಾಸ್ಯಕ್ಕೆ ಕಾರಣವಾಗಿದೆ.
ಅವರ ಅಪರಾಧಗಳು ಒಂದೊಂದಾಗಿ ಹೆಚ್ಚುತ್ತಾ ಬರಲಿ.
ನಿನ್ನ ನೀತಿಯಲ್ಲಿ ಅವರಿಗೆ ಪಾಲುಕೊಡಬೇಡ.
ಜೀವಿತರ ಪಟ್ಟಿಯಿಂದ ಅವರ ಹೆಸರು ತೆಗೆದು ಹಾಕು,
ಸದ್ಭಕ್ತರ ಹೆಸರಿನ ಸಂಗಡ ಅವರ ಹೆಸರು ಬರೆಯಲ್ಪಡದಿರಲಿ.
ಇಂಥಾ ಮಾತುಗಳನ್ನು ಕೇಳಿ ಯೆಹೋವನ ಭಕ್ತರು ಒಬ್ಬರಿಗೊಬ್ಬರು ಮಾತನಾಡಿಕೊಳ್ಳಲು, ಯೆಹೋವನು ಕಿವಿಗೊಟ್ಟು ಆಲಿಸಿ ಭಯಭಕ್ತಿಯಿಂದ ತನ್ನ ನಾಮ ಸ್ಮರಣೆ ಮಾಡುವವರ ಹೆಸರುಗಳನ್ನು ತನ್ನ ಮುಂದೆ ಜ್ಞಾಪಕದ ಪುಸ್ತಕದಲ್ಲಿ ಬರೆಯಿಸಿದನು.
ಆದರೂ ನೀನು ಕರುಣೆಯಿಟ್ಟು ಅವರ ಪಾಪವನ್ನು ಕ್ಷಮಿಸಬೇಕು. ಇಲ್ಲವಾದರೆ ನೀನು ಬರೆದಿರುವ ಜೀವಿತರ ಪುಸ್ತಕದಿಂದ ನನ್ನ ಹೆಸರನ್ನೂ ಅಳಿಸಿಬಿಡಬೇಕೆಂದು ಕೇಳಿಕೊಳ್ಳುತ್ತೇನೆ" ಎಂದು ಪ್ರಾರ್ಥಿಸಿದನು.
ಅದಕ್ಕೆ ಯೆಹೋವನು ಮೋಶೆಗೆ, "ಯಾರು ನನ್ನ ಮಾತನ್ನು ಮೀರಿ ಪಾಪಮಾಡಿದರೋ ಅವರ ಹೆಸರುಗಳನ್ನೇ ನನ್ನ ಬಳಿಯಲ್ಲಿರುವ ಪುಸ್ತಕದಿಂದ ನಾನು ಅಳಿಸಿಬಿಡುವೆನು.
Este artigo te tocou? Faça uma oração!
+581 estão orando agora.
Junte-se à corrente de oração.