Louvor e adoração
O louvor e a adoração são o propósito supremo da vida cristã. A Bíblia está repleta de exortações a louvar o Senhor — com cânticos, instrumentos, danças e com todo o nosso ser.
Louvai ao Senhor!
Todo ser que respira louve ao Senhor! O louvor é o sacrifício agradável que oferecemos continuamente a Deus.
ಶ್ವಾಸವಿರುವ ಎಲ್ಲವೂ ಯೆಹೋವನನ್ನು ಸ್ತುತಿಸಲಿ;
ಯೆಹೋವನಿಗೆ ಸ್ತೋತ್ರ!
ಸಮಾಪ್ತಿಯ ಕೀರ್ತನೆ
ಯೆಹೋವನಿಗೆ ಸ್ತೋತ್ರ!
ದೇವರನ್ನು ಆತನ ಪರಿಶುದ್ಧ ಆಲಯದಲ್ಲಿ ಸ್ತುತಿಸಿರಿ;
ಆತನ ಶಕ್ತಿಪ್ರದರ್ಶಕವಾದ ಆಕಾಶಮಂಡಲದಲ್ಲಿ ಆತನನ್ನು ಸ್ತುತಿಸಿರಿ.
ಆತನ ಮಹತ್ಕಾರ್ಯಗಳಿಗಾಗಿ ಆತನನ್ನು ಸ್ತುತಿಸಿರಿ;
ಆತನ ಮಹಾಪ್ರಭಾವಕ್ಕೆ ಸರಿಯಾಗಿ ಆತನನ್ನು ಸ್ತುತಿಸಿರಿ.
ಕೊಂಬೂದುತ್ತಾ ಆತನನ್ನು ಸ್ತುತಿಸಿರಿ;
ಸ್ವರಮಂಡಲ, ಕಿನ್ನರಿಗಳಿಂದ ಆತನನ್ನು ಸ್ತುತಿಸಿರಿ.
ದಮ್ಮಡಿಯನ್ನು ಬಡಿಯುತ್ತಾ, ಕುಣಿಯುತ್ತಾ ಆತನನ್ನು ಸ್ತುತಿಸಿರಿ;
ತಂತಿವಾದ್ಯಗಳಿಂದಲೂ, ಕೊಳಲುಗಳಿಂದಲೂ ಆತನನ್ನು ಸ್ತುತಿಸಿರಿ.
ತಾಳದಿಂದ ಆತನನ್ನು ಸ್ತುತಿಸಿರಿ;
ಝಲ್ಲರಿಯಿಂದ ಆತನನ್ನು ಸ್ತುತಿಸಿರಿ.
ಶ್ವಾಸವಿರುವ ಎಲ್ಲವೂ ಯೆಹೋವನನ್ನು ಸ್ತುತಿಸಲಿ;
ಯೆಹೋವನಿಗೆ ಸ್ತೋತ್ರ!
ದಮ್ಮಡಿಯನ್ನು ಬಡಿಯುತ್ತಾ, ಕುಣಿಯುತ್ತಾ ಆತನನ್ನು ಸ್ತುತಿಸಿರಿ;
ತಂತಿವಾದ್ಯಗಳಿಂದಲೂ, ಕೊಳಲುಗಳಿಂದಲೂ ಆತನನ್ನು ಸ್ತುತಿಸಿರಿ.
ಕುಣಿಯುತ್ತಾ ಆತನ ನಾಮವನ್ನು ಕೀರ್ತಿಸಲಿ;
ದಮ್ಮಡಿ, ಕಿನ್ನರಿಗಳಿಂದ ಆತನನ್ನು ಭಜಿಸಲಿ.
ಜಯಗೀತೆ
ಯೆಹೋವನಿಗೆ ಸ್ತೋತ್ರ!
ಯೆಹೋವನಿಗೆ ನೂತನ ಕೀರ್ತನೆಯನ್ನು ಹಾಡಿರಿ;
ಭಕ್ತರ ಸಭೆಯಲ್ಲಿ ಆತನನ್ನು ಸ್ತುತಿಸಿರಿ.
ಕುಣಿಯುತ್ತಾ ಆತನ ನಾಮವನ್ನು ಕೀರ್ತಿಸಲಿ;
ದಮ್ಮಡಿ, ಕಿನ್ನರಿಗಳಿಂದ ಆತನನ್ನು ಭಜಿಸಲಿ.
ಯೆಹೋವನು ತನ್ನ ಪ್ರಜೆಗೆ ಪ್ರಸನ್ನನಾದನು;
ದೀನರನ್ನು ರಕ್ಷಣೆಯಿಂದ ಭೂಷಿಸುತ್ತಾನೆ.
ಭಕ್ತರು ತಮಗುಂಟಾದ ಮಹಿಮೆಯಲ್ಲಿ ಹಿಗ್ಗಲಿ;
ಹಾಸಿಗೆಯ ಮೇಲಿರುವಾಗಲೂ ಉತ್ಸಾಹಧ್ವನಿ ಮಾಡಲಿ.
ಭೂಮ್ಯಾಕಾಶಗಳು ಯೆಹೋವನನ್ನು ಕೊಂಡಾಡಲಿ
ಯೆಹೋವನಿಗೆ ಸ್ತೋತ್ರ!
ಆಕಾಶಮಂಡಲದಿಂದ ಯೆಹೋವನಿಗೆ ಸ್ತುತಿಯುಂಟಾಗಲಿ,
ಮಹೋನ್ನತದಲ್ಲಿ ಆತನ ಸ್ತೋತ್ರವು ಕೇಳಿಸಲಿ.
ಆತನ ಎಲ್ಲಾ ದೂತರೇ, ಆತನನ್ನು ಸ್ತುತಿಸಿರಿ,
ಆತನ ಎಲ್ಲಾ ಸೈನ್ಯಗಳೇ, ಆತನನ್ನು ಸ್ತುತಿಸಿರಿ.
ಸೂರ್ಯ ಮತ್ತು ಚಂದ್ರರೇ, ಆತನನ್ನು ಸ್ತುತಿಸಿರಿ,
ಹೊಳೆಯುವ ಎಲ್ಲಾ ನಕ್ಷತ್ರಗಳೇ, ಆತನನ್ನು ಸ್ತುತಿಸಿರಿ.
ಉನ್ನತೋನ್ನತವಾದ ಆಕಾಶವೇ,
ಅದರ ಮೇಲಿರುವ ಜಲರಾಶಿಗಳೇ,
ಆತನನ್ನು ಸ್ತುತಿಸಿರಿ.
ಅವು ಯೆಹೋವನ ನಾಮವನ್ನು ಸ್ತುತಿಸಲಿ,
ಆತನು ಅಪ್ಪಣೆಕೊಡಲು ಅವು ಉಂಟಾದವು.
ಆತನು ಅವುಗಳನ್ನು ಯುಗಯುಗಾಂತರಕ್ಕೂ ಸ್ಥಾಪಿಸಿದ್ದಾನೆ,
ಆತನು ಎಂದಿಗೂ ಮೀರಲಾಗದಂಥ ಕಟ್ಟಳೆಯನ್ನು ವಿಧಿಸಿದ್ದಾನೆ.
ಭೂಮಂಡಲದಿಂದ ಯೆಹೋವನಿಗೆ ಸ್ತುತಿಯುಂಟಾಗಲಿ.
ತಿಮಿಂಗಿಲಗಳು, ಆದಿಸಾಗರಗಳು
ಬೆಂಕಿ, ಕಲ್ಮಳೆ, ಹಿಮ, ಹಬೆ ಇವುಗಳು,
ಆತನ ಅಪ್ಪಣೆಯನ್ನು ನೆರವೇರಿಸುವ ಬಿರುಗಾಳಿಯು,
ಬೆಟ್ಟಗಳು, ಎಲ್ಲಾ ಗುಡ್ಡಗಳು, ಹಣ್ಣಿನ ಮರಗಳು,
ಎಲ್ಲಾ ತುರಾಯಿ ಮರಗಳು,
ಎಲ್ಲಾ ಮೃಗ, ಪಶು, ಪಕ್ಷಿ, ಕ್ರಿಮಿಕೀಟಗಳು,
ಭೂರಾಜರು, ಎಲ್ಲಾ ಜನಾಂಗಗಳು, ಪ್ರಭುಗಳು, ಸರ್ವದೇಶಾಧಿಪತಿಗಳು,
ಪ್ರಾಯಸ್ಥರಾದ ಸ್ತ್ರೀಪುರುಷರು, ಮುದುಕರು, ಹುಡುಗರು
ಯೆಹೋವನನ್ನು ಕೊಂಡಾಡಲಿ.
ಆತನ ನಾಮವೊಂದೇ ಮಹತ್ವವುಳ್ಳದ್ದು,
ಆತನ ಪ್ರಭಾವವು ಭೂಮ್ಯಾಕಾಶಗಳಲ್ಲಿ ಪ್ರಸರಿಸಿದೆ.
ಆದ್ದರಿಂದ ಯೇಸುವಿನ ಮೂಲಕವಾಗಿಯೇ ದೇವರಿಗೆ ಸ್ತೋತ್ರವೆಂಬ ಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ, ಆತನನ್ನು ನಾವು ಕರ್ತನೆಂದು ನಂಬಿ ಬಾಯಿಂದ ಅರಿಕೆ ಮಾಡುವುದೇ ನಾವು ಅರ್ಪಿಸುವ ಯಜ್ಞವಾಗಿದೆ.
ಆದ್ದರಿಂದ ಯೇಸುವಿನ ಮೂಲಕವಾಗಿಯೇ ದೇವರಿಗೆ ಸ್ತೋತ್ರವೆಂಬ ಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ, ಆತನನ್ನು ನಾವು ಕರ್ತನೆಂದು ನಂಬಿ ಬಾಯಿಂದ ಅರಿಕೆ ಮಾಡುವುದೇ ನಾವು ಅರ್ಪಿಸುವ ಯಜ್ಞವಾಗಿದೆ.
Louvor como estilo de vida
Bendirei ao Senhor em todo tempo; o seu louvor estará sempre nos meus lábios. O louvor não depende de circunstâncias.
ಯೆಹೋವನು ಸದಾ ಭಕ್ತಪಾಲಕನೆಂದು ವರ್ಣಿಸುವ ಇಬ್ರಿಯ ಅಕ್ಷರಕ್ರಮಾನುಸಾರವಾದ ಕೀರ್ತನೆ
ನಾನು ಯೆಹೋವನನ್ನು ಎಡೆಬಿಡದೆ ಕೊಂಡಾಡುವೆನು;
ಆತನ ಸ್ತೋತ್ರವು ಯಾವಾಗಲೂ ನನ್ನ ಬಾಯಲ್ಲಿ ಇರುವುದು.
ಯೆಹೋವನು ಸದಾ ಭಕ್ತಪಾಲಕನೆಂದು ವರ್ಣಿಸುವ ಇಬ್ರಿಯ ಅಕ್ಷರಕ್ರಮಾನುಸಾರವಾದ ಕೀರ್ತನೆ
ನಾನು ಯೆಹೋವನನ್ನು ಎಡೆಬಿಡದೆ ಕೊಂಡಾಡುವೆನು;
ಆತನ ಸ್ತೋತ್ರವು ಯಾವಾಗಲೂ ನನ್ನ ಬಾಯಲ್ಲಿ ಇರುವುದು.
ಯೆಹೋವನು ಸದಾ ಭಕ್ತಪಾಲಕನೆಂದು ವರ್ಣಿಸುವ ಇಬ್ರಿಯ ಅಕ್ಷರಕ್ರಮಾನುಸಾರವಾದ ಕೀರ್ತನೆ
ನಾನು ಯೆಹೋವನನ್ನು ಎಡೆಬಿಡದೆ ಕೊಂಡಾಡುವೆನು;
ಆತನ ಸ್ತೋತ್ರವು ಯಾವಾಗಲೂ ನನ್ನ ಬಾಯಲ್ಲಿ ಇರುವುದು.
ನನ್ನ ಮನಸ್ಸು ಯೆಹೋವನಲ್ಲಿ ಹಿಗ್ಗುತ್ತಿರುವುದು;
ಇದನ್ನು ದೀನರು ಕೇಳಿ ಸಂತೋಷಿಸುವರು.
ನನ್ನೊಡನೆ ಯೆಹೋವನನ್ನು ಕೊಂಡಾಡಿರಿ;
ನಾವು ಒಟ್ಟಾಗಿ ಆತನ ಹೆಸರನ್ನು ಘನಪಡಿಸೋಣ.
ನಾನಂತೂ ನಿರೀಕ್ಷಿಸಿಕೊಂಡೇ ಇರುವೆನು;
ನಿನ್ನನ್ನು ಅಧಿಕಾಧಿಕವಾಗಿ ಹೊಗಳುತ್ತಿರುವೆನು.
ನಾನು ಹುಟ್ಟಿದಂದಿನಿಂದ ನಿನ್ನನ್ನೇ ಅವಲಂಬಿಸಿಕೊಂಡಿದ್ದೇನೆ.
ತಾಯಿ ಹೆತ್ತಂದಿನಿಂದ ನನ್ನ ಉದ್ಧಾರಕನು ನೀನೇ.
ನಾನು ಯಾವಾಗಲೂ ಹಿಗ್ಗುತ್ತಿರುವುದು ನಿನ್ನಲ್ಲಿಯೇ.
ನನ್ನ ಬಾಯಲ್ಲಿ ನಿನ್ನ ಸ್ತೋತ್ರವಲ್ಲದೆ ಮತ್ತೊಂದಿಲ್ಲ;
ದಿನವೆಲ್ಲಾ ನಿನ್ನ ಘನತೆಯನ್ನು ವರ್ಣಿಸುತ್ತಿರುವೆನು.
ನನ್ನ ಬಾಯಲ್ಲಿ ನಿನ್ನ ಸ್ತೋತ್ರವಲ್ಲದೆ ಮತ್ತೊಂದಿಲ್ಲ;
ದಿನವೆಲ್ಲಾ ನಿನ್ನ ಘನತೆಯನ್ನು ವರ್ಣಿಸುತ್ತಿರುವೆನು.
ನನ್ನ ತುಟಿಗಳೂ ಮತ್ತು ನೀನು ರಕ್ಷಿಸಿದ ನನ್ನ ಪ್ರಾಣವೂ
ನಿನ್ನನ್ನು ಹಾಡಿಹರಸುವವು.
ಯೆಹೋವನ ನಾಮವು ಪೂರ್ವದಿಂದ,
ಪಶ್ಚಿಮದವರೆಗೂ ಸ್ತುತಿಹೊಂದಲಿ.
ಎಲ್ಲಾದರಲ್ಲಿಯೂ ಕೃತಜ್ಞತಾಸ್ತುತಿಮಾಡಿರಿ ಇದೇ ನಿಮ್ಮ ವಿಷಯವಾಗಿ ಕ್ರಿಸ್ತ ಯೇಸುವಿನಲ್ಲಿ ತೋರಿಬಂದ ದೇವರ ಚಿತ್ತವಾಗಿದೆ.
Adoração em espírito e verdade
Os verdadeiros adoradores adorarão ao Pai em espírito e em verdade. Deus busca os que o adoram com coração sincero.
ಅದಕ್ಕಿಂತ ಹೆಚ್ಚಾಗಿ, ನಿಜವಾದ ಆರಾಧಕರು ತಂದೆಯನ್ನು ಆತ್ಮನಿಂದಲೂ ಮತ್ತು ಸತ್ಯದಿಂದಲೂ ಆರಾಧಿಸುವ ಕಾಲ ಬರುತ್ತದೆ; ಅದು ಈಗಲೇ ಬಂದಿದೆ, ಅದುದರಿಂದ, ತಂದೆಯು ನಿಜವಾಗಿಯೂ ಈ ರೀತಿ ಆರಾಧಿಸುವವರನ್ನೇ ಹುಡುಕುತ್ತಾನೆ.
ದೇವರು ಆತ್ಮನಾಗಿದ್ದಾನೆ, ಮತ್ತು ಆತನನ್ನು ಆರಾಧಿಸುವವರು ಆತ್ಮನಿಂದಲೂ ಮತ್ತು ಸತ್ಯದಿಂದಲೂ ಆರಾಧಿಸಬೇಕಾಗಿದೆ" ಎಂದನು.
ದೇವರನ್ನು ವಿಶ್ವಾಸದಿಂದ ಆರಾಧಿಸುವುದು
ಬನ್ನಿರಿ, ಯೆಹೋವನಿಗೆ ಉತ್ಸಾಹದಿಂದ ಹಾಡೋಣ;
ನಮ್ಮ ರಕ್ಷಕನಾದ ಶರಣನಿಗೆ ಜಯಘೋಷ ಮಾಡೋಣ.
ಕೃತಜ್ಞತಾಸ್ತುತಿಯೊಡನೆ ಆತನ ಸನ್ನಿಧಿಗೆ ಸೇರೋಣ;
ಕೀರ್ತನೆಗಳಿಂದ ಆತನಿಗೆ ಜಯಘೋಷ ಮಾಡೋಣ.
ಯೆಹೋವನು ಮಹಾದೇವರೂ,
ಎಲ್ಲಾ ದೇವರುಗಳಲ್ಲಿ ಮಹಾರಾಜನೂ ಆಗಿದ್ದಾನೆ.
ಭೂಮಿಯ ಅಗಾಧವು ಆತನ ಕೈಯಲ್ಲಿರುತ್ತದೆ;
ಪರ್ವತಶಿಖರಗಳು ಆತನವೇ.
ಆತನೇ ಸಮುದ್ರವನ್ನು ನಿರ್ಮಿಸಿದವನು;
ಅದು ಆತನದೇ, ಒಣನೆಲವು ಆತನ ಕೈಕೆಲಸವೇ.
ಬನ್ನಿರಿ; ನಮ್ಮ ನಿರ್ಮಾಣಿಕನಾದ ಯೆಹೋವನಿಗೆ
ಸಾಷ್ಟಾಂಗವೆರಗಿ ಆರಾಧಿಸೋಣ.
ಲೋಕವೆಲ್ಲಾ ಇಸ್ರಾಯೇಲರ ದೇವರನ್ನು ಆರಾಧಿಸಬೇಕೆಂಬ ಬೋಧನೆ
ಸಮಸ್ತಭೂನಿವಾಸಿಗಳೇ, ಯೆಹೋವನಿಗೆ ಉತ್ಸಾಹಧ್ವನಿಮಾಡಿರಿ.
ಯೆಹೋವನನ್ನು ಸಂತೋಷದಿಂದ ಸೇವಿಸಿರಿ;
ಕೀರ್ತನೆ ಹಾಡುತ್ತಾ ಆತನ ಸನ್ನಿಧಿಗೆ ಬನ್ನಿರಿ.
ಯೆಹೋವನನ್ನು ಸಂತೋಷದಿಂದ ಸೇವಿಸಿರಿ;
ಕೀರ್ತನೆ ಹಾಡುತ್ತಾ ಆತನ ಸನ್ನಿಧಿಗೆ ಬನ್ನಿರಿ.
ಕೃತಜ್ಞತಾ ಸ್ತುತಿಯೊಡನೆ ಆತನ ಮಂದಿರದ್ವಾರಗಳಿಗೂ,
ಸ್ತುತಿಸ್ತೋತ್ರದೊಡನೆ ಆತನ ಅಂಗಳಗಳಿಗೂ ಬನ್ನಿರಿ;
ಆತನ ಉಪಕಾರಗಳನ್ನು ಸ್ಮರಿಸಿರಿ;
ಆತನ ನಾಮವನ್ನು ಕೊಂಡಾಡಿರಿ.
ರಾಜಾಧಿರಾಜನಾದ ಯೆಹೋವನ ಆಗಮನ
ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ;
ಎಲ್ಲಾ ಭೂನಿವಾಸಿಗಳೇ, ಯೆಹೋವನಿಗೆ ಹಾಡಿರಿ.
ಯೆಹೋವನಿಗೆ ಹಾಡಿರಿ; ಆತನ ನಾಮವನ್ನು ಕೊಂಡಾಡಿರಿ.
ಆತನ ರಕ್ಷಣೆಯನ್ನು ಪ್ರತಿನಿತ್ಯವೂ ಸಾರಿ ಹೇಳಿರಿ.
ಜನಾಂಗಗಳಲ್ಲಿ ಆತನ ಘನತೆಯನ್ನೂ,
ಎಲ್ಲಾ ಜನರಲ್ಲಿ ಆತನ ಅದ್ಭುತಕೃತ್ಯಗಳನ್ನೂ ಪ್ರಸಿದ್ಧಪಡಿಸಿರಿ.
ಯೆಹೋವನು ದೊಡ್ಡವನೂ, ಬಹು ಸ್ತುತ್ಯನೂ ಆಗಿದ್ದಾನೆ;
ಎಲ್ಲಾ ದೇವರುಗಳಲ್ಲಿ ಆತನೇ ಮಹಾದೇವರು.
ಜನಾಂಗಗಳ ದೇವತೆಗಳೆಲ್ಲಾ ಬೊಂಬೆಗಳೇ;
ಯೆಹೋವನಾದರೋ ಗಗನಮಂಡಲವನ್ನು ನಿರ್ಮಿಸಿದನು.
ಆತನ ಸಾನ್ನಿಧ್ಯದಲ್ಲಿ ಘನತೆ ಮತ್ತು ಮಹಿಮೆಗಳೂ,
ಆತನ ಪವಿತ್ರಾಲಯದಲ್ಲಿ ಬಲ ಮತ್ತು ಸೌಂದರ್ಯಗಳೂ ಇರುತ್ತವೆ.
ಭೂಜನಾಂಗಗಳೇ, ಬಲಪ್ರಭಾವಗಳು ಯೆಹೋವನವೇ, ಯೆಹೋವನವೇ,
ಎಂದು ಹೇಳಿ ಆತನನ್ನು ಘನಪಡಿಸಿರಿ.
ಯೆಹೋವನ ನಾಮಕ್ಕೆ ಯೋಗ್ಯವಾದ ಘನವನ್ನು ಸಲ್ಲಿಸಿರಿ;
ಕಾಣಿಕೆಯೊಡನೆ ಆತನ ಅಂಗಳಗಳಿಗೆ ಬನ್ನಿರಿ.
ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ನಮಸ್ಕರಿಸಿರಿ;
ಎಲ್ಲಾ ಭೂನಿವಾಸಿಗಳೇ, ಆತನ ಮುಂದೆ ಭಯಭಕ್ತಿಯಿಂದಿರಿ.
A grandeza de Deus
Grande é o Senhor e mui digno de louvor! Sua grandeza é insondável. Os céus declaram sua glória e toda a criação o adora.
ಯೆಹೋವನು ಮಹೋನ್ನತನೂ, ಮಹಾಸ್ತುತಿಪಾತ್ರನೂ ಆಗಿದ್ದಾನೆ,
ಆತನ ಮಹತ್ತು ಅಪಾರವಾದದ್ದು.
ಇಸ್ರಾಯೇಲರ ಸ್ತೋತ್ರಸಿಂಹಾಸನದಲ್ಲಿ ಇರುವಾತನೇ,
ನೀನು ಪವಿತ್ರಸ್ವರೂಪನು.
ನಿನ್ನ ನಾಮ ಮಹಿಮೆಯನ್ನು ನನ್ನ ಸಹೋದರರಿಗೆ ತಿಳಿಸುವೆನು;
ಸಭಾಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು.
ಯೆಹೋವನ ಭಕ್ತರೇ, ಆತನನ್ನು ಸ್ತುತಿಸಿರಿ;
ಯಾಕೋಬ ವಂಶದವರೇ, ನೀವೆಲ್ಲರೂ ಆತನನ್ನು ಕೊಂಡಾಡಿರಿ.
ಇಸ್ರಾಯೇಲ್ ವಂಶಸ್ಥರೇ, ನೀವೆಲ್ಲರೂ ಆತನಲ್ಲಿ ಭಯಭಕ್ತಿಯುಳ್ಳವರಾಗಿರಿ.
ಆತನು ಕುಗ್ಗಿಹೋದವನ ದುರವಸ್ಥೆಯನ್ನು ತಿರಸ್ಕರಿಸಲಿಲ್ಲ,
ಅದಕ್ಕೆ ಅಸಹ್ಯಪಡಲಿಲ್ಲ;
ತನ್ನ ಮುಖವನ್ನು ಅವನಿಗೆ ಮರೆಮಾಡದೆ,
ಅವನ ಪ್ರಾರ್ಥನೆಗೆ ಕಿವಿಗೊಟ್ಟನು.
ಸ್ವಪ್ರಜಾರಕ್ಷಕನಾಗಿರುವ ಸೃಷ್ಟಿಪಾಲಕನಿಗೆ ಸ್ತೋತ್ರ
ಯೆಹೋವನಿಗೆ ಸ್ತೋತ್ರ!
ನಮ್ಮ ದೇವರನ್ನು ಸ್ತುತಿಸುವುದು ಒಳ್ಳೆಯದೂ, ಸಂತೋಷಕರವೂ ಆಗಿದೆ,
ಆತನನ್ನು ಕೀರ್ತಿಸುವುದು ಯುಕ್ತವಾಗಿದೆ.
ಯೆಹೋವನಿಗೆ ಸ್ತೋತ್ರ!
ಯೆಹೋವನು ಒಳ್ಳೆಯವನು.
ಆತನ ನಾಮವನ್ನು ಕೊಂಡಾಡಿರಿ;
ಆತನು ಕೃಪಾಪೂರ್ಣನು.
ಸಾರ್ವಭೌಮನಾದ ಯೆಹೋವನನ್ನು ಸ್ತುತಿಸುವುದು
ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ;
ಭೂಲೋಕವು ಸಂತೋಷಿಸಲಿ;
ಸಮುದ್ರದ ತೀರಪ್ರದೇಶಗಳೆಲ್ಲಾ ಹರ್ಷಿಸಲಿ.
ನೀತಿವಂತರೇ, ಯೆಹೋವನಲ್ಲಿ ಆನಂದಿಸಿರಿ;
ಆತನ ಪರಿಶುದ್ಧನಾಮವನ್ನು ಕೊಂಡಾಡಿರಿ.
ನಾನೇ ಯೆಹೋವನು; ಇದೇ ನನ್ನ ನಾಮವು;
ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಸಲ್ಲಗೊಡಿಸೆನು, ನನ್ನ ಸ್ತೋತ್ರವನ್ನು ವಿಗ್ರಹಗಳ ಪಾಲು ಮಾಡೆನು.
Cânticos e instrumentos
Cantai ao Senhor um cântico novo! Louvai com salmos, hinos e cânticos espirituais, fazendo melodia no coração ao Senhor.
ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಸಕಲಜ್ಞಾನದಿಂದ ಒಬ್ಬರಿಗೊಬ್ಬರು ಉಪದೇಶಮಾಡಿಕೊಂಡು ಬುದ್ಧಿಹೇಳಿಕೊಳ್ಳಿರಿ. ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ ಮತ್ತು ಆತ್ಮೀಕವಾದ ಗೀತೆಗಳಿಂದಲೂ ಹಾಗೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಕೃತಜ್ಞತೆಯಿಂದಲೂ ಹಾಡಿರಿ.
ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಸಕಲಜ್ಞಾನದಿಂದ ಒಬ್ಬರಿಗೊಬ್ಬರು ಉಪದೇಶಮಾಡಿಕೊಂಡು ಬುದ್ಧಿಹೇಳಿಕೊಳ್ಳಿರಿ. ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ ಮತ್ತು ಆತ್ಮೀಕವಾದ ಗೀತೆಗಳಿಂದಲೂ ಹಾಗೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಕೃತಜ್ಞತೆಯಿಂದಲೂ ಹಾಡಿರಿ.
ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ, ಆತ್ಮೀಕ ಹಾಡುಗಳಿಂದಲೂ ಒಬ್ಬರಿಗೊಬ್ಬರು ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯಗಳಲ್ಲಿ ಕರ್ತನನ್ನು ಹಾಡಿ ಕೊಂಡಾಡಿರಿ. ಯಾವಾಗಲೂ ಎಲ್ಲಾ ಕಾರ್ಯಗಳಿಗಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರವನ್ನು ಮಾಡಿರಿ.
ರಕ್ಷಕನನ್ನು ಕೀರ್ತಿಸುವ ಭಕ್ತ
ನೀತಿವಂತರೇ, ಯೆಹೋವನ ವಿಷಯದಲ್ಲಿ ಉಲ್ಲಾಸಪಡಿರಿ;
ಯಥಾರ್ಥಚಿತ್ತರು ಆತನನ್ನು ಸ್ತುತಿಸುವುದು ಯುಕ್ತವಾಗಿದೆ.
ಕಿನ್ನರಿಯನ್ನು ನುಡಿಸುತ್ತಾ ಯೆಹೋವನನ್ನು ಕೊಂಡಾಡಿರಿ;
ಹತ್ತುತಂತಿಗಳ ಸ್ವರಮಂಡಲವನ್ನು ನುಡಿಸುತ್ತಾ ಸಂಕೀರ್ತಿಸಿರಿ.
ಆತನ ಘನಕ್ಕಾಗಿ ನೂತನ ಕೀರ್ತನೆಯನ್ನು ಹಾಡಿರಿ;
ಉತ್ಸಾಹಧ್ವನಿಯೊಡನೆ ಇಂಪಾಗಿ ಬಾರಿಸಿರಿ.
ದಾವೀದನೂ ಎಲ್ಲಾ ಇಸ್ರಾಯೇಲರೂ ಕಿನ್ನರಿ, ಸ್ವರಮಂಡಲ, ದಮ್ಮಡಿ, ತಾಳ, ತುತ್ತೂರಿ ಇವುಗಳನ್ನು ಬಾರಿಸುತ್ತಾ ಪೂರ್ಣಾಸಕ್ತಿಯಿಂದ ಗೀತೆಗಳನ್ನು ಹಾಡುತ್ತಾ, ದೇವರ ಮುಂದೆ ನರ್ತನ ಮಾಡುತ್ತಾ ಹೋದರು.
ಆತನನ್ನು ಕೀರ್ತಿಸಿರಿ, ಭಜಿಸಿರಿ; ಆತನ ಅದ್ಭುತಕೃತ್ಯಗಳನ್ನೆಲ್ಲಾ ಧ್ಯಾನಿಸಿರಿ.
ಆತನು ನನ್ನ ಬಾಯಲ್ಲಿ ನೂತನ ಕೀರ್ತನೆಯನ್ನು ಹುಟ್ಟಿಸಿದ್ದಾನೆ;
ಅದು ನಮ್ಮ ದೇವರ ಸ್ತೋತ್ರವೇ.
ಆತನ ಮಹತ್ಕಾರ್ಯಗಳನ್ನು ನೋಡಿದ ಅನೇಕರು
ಭಯಭಕ್ತಿಯುಳ್ಳವರಾಗಿ ಯೆಹೋವನಲ್ಲಿ ನಂಬಿಕೆಯಿಡುವರು.
ದೇವರ ನೀತಿಸಾಧನೆಗಳನ್ನು ಹೊಗಳುವುದು
ಯೆಹೋವನೇ, ನಿನ್ನನ್ನು ಕೊಂಡಾಡುವುದೂ,
ಪರಾತ್ಪರನಾದ ದೇವರೇ, ನಿನ್ನ ನಾಮವನ್ನು ಸಂಕೀರ್ತಿಸುವುದೂ ಯುಕ್ತವಾಗಿದೆ.
ರಾಜಶ್ರೇಷ್ಠನ ಪ್ರತಿಜ್ಞೆ
ಪ್ರೀತಿ, ನೀತಿಗಳನ್ನು ಕುರಿತು ಹಾಡುವೆನು;
ಯೆಹೋವನೇ, ನಿನ್ನನ್ನು ಕೊಂಡಾಡುವೆನು.
ರಾಜಶ್ರೇಷ್ಠನ ಪ್ರತಿಜ್ಞೆ
ಪ್ರೀತಿ, ನೀತಿಗಳನ್ನು ಕುರಿತು ಹಾಡುವೆನು;
ಯೆಹೋವನೇ, ನಿನ್ನನ್ನು ಕೊಂಡಾಡುವೆನು.
Louvor nas lutas
Paulo e Silas louvaram na prisão e houve terremoto. O louvor é arma espiritual que transforma circunstâncias e derrota o inimigo.
ಭೂಕಂಪ ಉಂಟಾಗಿ ಅವರು ಬಿಡಿಸಲ್ಪಟ್ಟದ್ದು
ಮಧ್ಯರಾತ್ರಿಯಲ್ಲಿ ಪೌಲನೂ ಮತ್ತು ಸೀಲನೂ ಪ್ರಾರ್ಥನೆಮಾಡುತ್ತಾ ದೇವರಿಗೆ ಸ್ತುತಿಗೀತೆಗಳನ್ನು ಹಾಡುತ್ತಿದ್ದರು; ಸೆರೆಯಲ್ಲಿದ್ದವರು ಲಕ್ಷ್ಯವಿಟ್ಟು ಕೇಳುತ್ತಿದ್ದರು.
ಭೂಕಂಪ ಉಂಟಾಗಿ ಅವರು ಬಿಡಿಸಲ್ಪಟ್ಟದ್ದು
ಮಧ್ಯರಾತ್ರಿಯಲ್ಲಿ ಪೌಲನೂ ಮತ್ತು ಸೀಲನೂ ಪ್ರಾರ್ಥನೆಮಾಡುತ್ತಾ ದೇವರಿಗೆ ಸ್ತುತಿಗೀತೆಗಳನ್ನು ಹಾಡುತ್ತಿದ್ದರು; ಸೆರೆಯಲ್ಲಿದ್ದವರು ಲಕ್ಷ್ಯವಿಟ್ಟು ಕೇಳುತ್ತಿದ್ದರು.
ಆ ನಂತರ ಅವನು ಜನರೊಂದಿಗೆ ಸಮಾಲೋಚನೆ ಮಾಡಿ ಯೆಹೋವನನ್ನು ಸ್ತುತಿಸಿ ಹಾಡುವುದಕ್ಕಾಗಿ ಕೆಲವರನ್ನು ಆರಿಸಿಕೊಂಡು ಅವರಿಗೆ, "ಪರಿಶುದ್ಧವಸ್ತ್ರ ಅಲಂಕಾರ ಭೂಷಣದೊಡನೆ ಭಟರ ಮುಂದೆ ಹೋಗುತ್ತಾ, ‘ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ, ಆತನ ಕೃಪೆಯು ಶಾಶ್ವತವಾದದ್ದು’ ಎಂದು ಭಜಿಸಿರಿ" ಎಂಬುದಾಗಿ ಆಜ್ಞಾಪಿಸಿದನು. ಅವರು ಉತ್ಸಾಹ ಧ್ವನಿಯಿಂದ ಕೀರ್ತಿಸುವುದಕ್ಕೆ ಪ್ರಾರಂಭಿಸಿದರು. ಆಗ ಯೆಹೋವನು ಯೆಹೂದ್ಯರಿಗೆ ವಿರುದ್ಧವಾಗಿ ಬಂದ ಅಮ್ಮೋನಿಯರನ್ನೂ, ಮೋವಾಬ್ಯರನ್ನೂ, ಸೇಯೀರ್ ಪರ್ವತದವರನ್ನೂ ನಾಶಮಾಡುವುದಕ್ಕಾಗಿ ಹೊಂಚು ಹಾಕುವವರನ್ನು ಬರಮಾಡಿದನು.
ಆಗ ಯೋಬನು ಎದ್ದು ಮೇಲಂಗಿಯನ್ನು ಹರಿದುಕೊಂಡು, ತಲೆ ಬೋಳಿಸಿಕೊಂಡು ನೆಲದ ಮೇಲೆ ಅಡ್ಡಬಿದ್ದು ದೇವರನ್ನು ಆರಾಧಿಸಿ, "ಏನೂ ಇಲ್ಲದವನಾಗಿ ತಾಯಿಯ ಗರ್ಭದಿಂದ ಬಂದೆನು; ಏನೂ ಇಲ್ಲದವನಾಗಿಯೇ ಗತಿಸಿಹೋಗುವೆನು; ನನಗಿರುವುದನ್ನೆಲ್ಲ ಯೆಹೋವನೇ ಕೊಟ್ಟನು, ಅವುಗಳನ್ನು ಯೆಹೋವನೇ ತೆಗೆದುಕೊಂಡನು; ಯೆಹೋವನ ನಾಮಕ್ಕೆ ಸ್ತೋತ್ರವಾಗಲಿ" ಎಂದು ಹೇಳಿದನು.
ಯೆಹೋವನ ಭಕ್ತರೇ, ಆತನನ್ನು ಕೀರ್ತಿಸಿರಿ;
ಆತನ ಪರಿಶುದ್ಧನಾಮವನ್ನು ಕೊಂಡಾಡಿರಿ.
ಆತನ ಕೋಪವು ಕ್ಷಣಮಾತ್ರವೇ;
ಆತನ ಅನುಗ್ರಹವೋ ಜೀವಮಾನವೆಲ್ಲಾ ಇರುವುದು;
ಸಂಜೆಗೆ ದುಃಖವೆಂಬುದು ಬಂದು ನಮ್ಮ ಬಳಿಯಲ್ಲಿ ಇಳಿದುಕೊಂಡರೂ,
ಮುಂಜಾನೆ ಹರ್ಷಧ್ವನಿಯು ಕೇಳಿಸುವುದು.
ಆಗ ನೀನು ನನ್ನ ಗೋಳಾಟವನ್ನು ತಪ್ಪಿಸಿ, ಸಂತೋಷದಿಂದ ಕುಣಿದಾಡುವಂತೆ ಮಾಡಿದಿ;
ನಾನು ಕಟ್ಟಿಕೊಂಡಿದ್ದ ಗೋಣಿತಟ್ಟನ್ನು ತೆಗೆದುಬಿಟ್ಟು,
ಹರ್ಷವಸ್ತ್ರವನ್ನು ನನಗೆ ಧಾರಣೆಮಾಡಿಸಿದಿ.
ಇದರಿಂದ ಯೆಹೋವನೇ, ನನ್ನ ಮನಸ್ಸು ಎಡೆಬಿಡದೆ ನಿನ್ನನ್ನು ಕೀರ್ತಿಸುತ್ತಿರುವುದು;
ನನ್ನ ದೇವರೇ, ನಿನ್ನನ್ನು ಸದಾಕಾಲವೂ ಸ್ತುತಿಸುವೆನು.
ನನ್ನ ಮನವೇ, ನೀನು ಕುಗ್ಗಿ ಹೋಗಿರುವುದೇನು?
ಹೀಗೆ ವ್ಯಥೆಪಡುವುದೇಕೆ? ದೇವರನ್ನು ನಿರೀಕ್ಷಿಸು;
ಆತನೇ ನನಗೆ ರಕ್ಷಕನೂ, ದೇವರೂ ಆಗಿದ್ದಾನೆ;
ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.
ಇದಲ್ಲದೆ ನೆಹೆಮೀಯನು ಅವರಿಗೆ, "ಹೋಗಿ, ಮೃಷ್ಟಾನ್ನವನ್ನೂ, ಮಧುರಪಾನವನ್ನೂ ತೆಗೆದುಕೊಳ್ಳಿರಿ, ತಮಗೋಸ್ಕರ ಏನೂ ಸಿದ್ಧಮಾಡದವರಿಗೆ ಪಾಲನ್ನು ಕಳುಹಿಸಿರಿ. ಈ ದಿನ ನಮ್ಮ ಕರ್ತನಿಗೆ ಪರಿಶುದ್ಧ ದಿನವಾಗಿರುವುದರಿಂದ ದುಃಖಪಡಬೇಡಿರಿ; ಯೆಹೋವನ ಆನಂದವೇ ನಿಮ್ಮ ಬಲವಾಗಿದೆ" ಎಂದನು.
Gratidão e louvor
Em tudo dai graças. O louvor nasce da gratidão por quem Deus é e pelo que Ele faz. Cada bênção é motivo de adoração.
ದೇವರ ಕೃಪೆಯನ್ನು ಕೊಂಡಾಡುವುದು
ನನ್ನ ಮನವೇ, ಯೆಹೋವನನ್ನು ಕೊಂಡಾಡು;
ನನ್ನ ಸರ್ವೇಂದ್ರಿಯಗಳೇ, ಆತನ ಪವಿತ್ರ ನಾಮವನ್ನು ಕೀರ್ತಿಸಿರಿ.
ದೇವರ ಕೃಪೆಯನ್ನು ಕೊಂಡಾಡುವುದು
ನನ್ನ ಮನವೇ, ಯೆಹೋವನನ್ನು ಕೊಂಡಾಡು;
ನನ್ನ ಸರ್ವೇಂದ್ರಿಯಗಳೇ, ಆತನ ಪವಿತ್ರ ನಾಮವನ್ನು ಕೀರ್ತಿಸಿರಿ.
ನನ್ನ ಮನವೇ, ಯೆಹೋವನನ್ನು ಕೊಂಡಾಡು;
ಆತನ ಉಪಕಾರಗಳಲ್ಲಿ ಒಂದನ್ನೂ ಮರೆಯಬೇಡ.
ದೇವರ ಕೃಪೆಯನ್ನು ಕೊಂಡಾಡುವುದು
ನನ್ನ ಮನವೇ, ಯೆಹೋವನನ್ನು ಕೊಂಡಾಡು;
ನನ್ನ ಸರ್ವೇಂದ್ರಿಯಗಳೇ, ಆತನ ಪವಿತ್ರ ನಾಮವನ್ನು ಕೀರ್ತಿಸಿರಿ.
ನನ್ನ ಮನವೇ, ಯೆಹೋವನನ್ನು ಕೊಂಡಾಡು;
ಆತನ ಉಪಕಾರಗಳಲ್ಲಿ ಒಂದನ್ನೂ ಮರೆಯಬೇಡ.
ಆತನು ನಿನ್ನ ಎಲ್ಲಾ ಅಪರಾಧಗಳನ್ನು ಕ್ಷಮಿಸುವವನೂ,
ಸಮಸ್ತ ರೋಗಗಳನ್ನು ವಾಸಿಮಾಡುವವನೂ,
ನಿನ್ನ ಜೀವವನ್ನು ನಾಶನದಿಂದ ತಪ್ಪಿಸುವವನೂ,
ಶಾಶ್ವತ ಪ್ರೀತಿ ಮತ್ತು ಕರುಣೆಯೆಂಬ ಕಿರೀಟದಿಂದ ನಿನ್ನನ್ನು ಶೃಂಗರಿಸುವವನೂ ಆಗಿದ್ದಾನೆ.
ನನ್ನ ಮನವೇ, ಯೆಹೋವನನ್ನು ಕೊಂಡಾಡು;
ಆತನ ಉಪಕಾರಗಳಲ್ಲಿ ಒಂದನ್ನೂ ಮರೆಯಬೇಡ.
ಅವರು ಯೆಹೋವನ ಕೃಪೆಗೋಸ್ಕರವೂ,
ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ,
ಆತನನ್ನು ಕೊಂಡಾಡಲಿ.
ಆತನು ಬಾಯಾರಿದವರ ಆಶೆಯನ್ನು ಪೂರೈಸಿ,
ಹಸಿದವರನ್ನು ಮೃಷ್ಟಾನ್ನದಿಂದ ತೃಪ್ತಿಗೊಳಿಸುತ್ತಾನೆ.
ವಾಗ್ದಾನವನ್ನು ನೆರವೇರಿಸಿದ ಯೆಹೋವನಿಗೆ ಸ್ತೋತ್ರ
ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ;
ಆತನ ನಾಮದ ಮಹತ್ವವನ್ನು ವರ್ಣಿಸಿರಿ;
ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಪಡಿಸಿರಿ.
ಆ ದಿನದಲ್ಲಿ ನೀವು ಹೇಳುವುದೇನೆಂದರೆ, "ಯೆಹೋವನಿಗೆ ಕೃತಜ್ಞತಾ ಸ್ತುತಿಮಾಡಿರಿ, ಆತನ ನಾಮದ ಮಹತ್ವವನ್ನು ವರ್ಣಿಸಿರಿ,
ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಿಪಡಿಸಿರಿ, ಆತನ ನಾಮವು ಉನ್ನತೋನ್ನತ ಎಂದು ಜ್ಞಾಪಕಪಡಿಸಿರಿ.
ನ್ಯಾಯತೀರ್ಪು ಮತ್ತು ರಕ್ಷಣೆಗಾಗಿ ಸ್ತುತಿ
ಯೆಹೋವನೇ, ನೀನೇ ನನ್ನ ದೇವರು; ನೀನು ಸತ್ಯ ಪ್ರಾಮಾಣಿಕತೆಗಳನ್ನು ಅನುಸರಿಸಿ,
ಆದಿ ಸಂಕಲ್ಪಗಳನ್ನು ನೆರವೇರಿಸುತ್ತಾ, ಅದ್ಭುತಗಳನ್ನು ನಡೆಸಿದ ಕಾರಣ ನಿನ್ನನ್ನು ಕೊಂಡಾಡುವೆನು, ನಿನ್ನ ನಾಮವನ್ನು ಮಹಿಮೆಪಡಿಸುವೆನು.
ನನ್ನ ಪೂರ್ವಿಕರ ದೇವರೇ, ನಿನ್ನನ್ನು ಸ್ತುತಿಸುತ್ತೇನೆ, ಕೊಂಡಾಡುತ್ತೇನೆ,
ನೀನು ನನಗೆ ಜ್ಞಾನತ್ರಾಣಗಳನ್ನು ದಯಪಾಲಿಸಿ ನಾವು ಬೇಡಿದ್ದನ್ನು ನನಗೆ ತೋರ್ಪಡಿಸಿದ್ದಿಯಲ್ಲಾ;
ಹೌದು, ರಾಜನ ರಹಸ್ಯವನ್ನು ನಮಗೆ ಪ್ರಕಟಪಡಿಸಿರುವೆ" ಎಂದನು.
A majestade do Rei
Ao nome de Jesus todo joelho se dobrará. A adoração culminará na eternidade, onde os redimidos louvarão ao Cordeiro para sempre.
ಅವರು
"ವಧಿಸಲ್ಪಟ್ಟ ಕುರಿಮರಿಯು
ಬಲ, ಐಶ್ವರ್ಯ, ಜ್ಞಾನ, ಸಾಮರ್ಥ್ಯ,
ಘನತೆ, ಮಹಿಮೆ ಸ್ತೋತ್ರಗಳನ್ನು ಹೊಂದುವುದಕ್ಕೆ ಯೋಗ್ಯನು"
ಎಂದು ಮಹಾಧ್ವನಿಯಿಂದ ಹಾಡಿದರು.
ಇದಲ್ಲದೆ ಆಕಾಶದಲ್ಲಿಯೂ, ಭೂಮಿಯ ಮೇಲೆಯೂ, ಭೂಮಿಯ ಕೆಳಗಡೆಯೂ, ಸಮುದ್ರದಲ್ಲಿಯೂ ಇರುವ ಎಲ್ಲಾ ಸೃಷ್ಟಿಗಳೂ ಅಂದರೆ ಭೂಮ್ಯಾಕಾಶ ಸಮುದ್ರಗಳೊಳಗೆ ಇರುವುದೆಲ್ಲವೂ,
"ಸಿಂಹಾಸನದ ಮೇಲೆ ಕುಳಿತಿದ್ದಾತನಿಗೂ ಕುರಿಮರಿಯಾದಾತನಿಗೂ
ಸ್ತೋತ್ರ, ಗೌರವ, ಮಹಿಮೆ, ಅಧಿಪತ್ಯಗಳು
ಯುಗಯುಗಾಂತರಗಳಲ್ಲಿಯೂ ಇರಲಿ"
ಎಂದು ಹೇಳುವುದನ್ನು ಕೇಳಿದೆನು.
ಆ ದೂತನು, "ನೀವೆಲ್ಲರೂ ದೇವರಿಗೆ ಭಯಪಟ್ಟು ಆತನಿಗೆ ಮಹಿಮೆಯನ್ನು ಸಲ್ಲಿಸಿರಿ. ಏಕೆಂದರೆ ಆತನು ನ್ಯಾಯತೀರ್ಪು ಮಾಡುವ ಸಮಯವು ಬಂದಿದೆ. ಭೂಲೋಕ ಪರಲೋಕಗಳನ್ನೂ, ಸಮುದ್ರವನ್ನೂ, ನೀರಿನ ಬುಗ್ಗೆಗಳನ್ನೂ ಉಂಟುಮಾಡಿದಾತನನ್ನು ಆರಾಧಿಸಿರಿ" ಎಂದು ಮಹಾಧ್ವನಿಯಿಂದ ಹೇಳಿದನು.
ಕುರಿಮರಿಯ ವಿವಾಹದ ಔತಣ
ಆ ಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಧ್ವನಿಯು, "ದೇವರ ಸೇವಕರೆಲ್ಲರೂ, ದೇವರಿಗೆ ಭಯಪಡುವ ಶ್ರೇಷ್ಠರು ಮತ್ತು ಕನಿಷ್ಠರು ನಮ್ಮ ದೇವರನ್ನು ಕೊಂಡಾಡಿರಿ" ಎಂದು ಹೇಳಿತು.
ಕುರಿಮರಿಯ ವಿವಾಹದ ಔತಣ
ಆ ಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಧ್ವನಿಯು, "ದೇವರ ಸೇವಕರೆಲ್ಲರೂ, ದೇವರಿಗೆ ಭಯಪಡುವ ಶ್ರೇಷ್ಠರು ಮತ್ತು ಕನಿಷ್ಠರು ನಮ್ಮ ದೇವರನ್ನು ಕೊಂಡಾಡಿರಿ" ಎಂದು ಹೇಳಿತು.
ಪವಿತ್ರ ಶಾಸ್ತ್ರದಲ್ಲಿ: "ನಾನು ಜೀವಿಸುವುದರಿಂದ ಪ್ರತಿಯೊಬ್ಬನೂ ನನ್ನ ಮುಂದೆ ಮೊಣಕಾಲೂರುವನು. ಪ್ರತಿಯೊಂದು ನಾಲಿಗೆಯೂ ನನ್ನನ್ನು ದೇವರೆಂದು ಆರಿಕೆಮಾಡುವರು ಎಂದು ಕರ್ತನು ಹೇಳುತ್ತಾನೆ" ಎಂದು ಬರೆದಿದೆ.
ಕಡೆಯದಾಗಿ, ಸಹೋದರರೇ, ಯಾವುದು ಸತ್ಯವೂ, ಮಾನ್ಯವೂ, ನ್ಯಾಯವೂ, ಶುದ್ಧವೂ, ಪ್ರೀತಿಕರವೂ, ಮನೋಹರವೂ ಆಗಿದೆಯೋ, ಯಾವುದು ಸದ್ಗುಣವಾಗಿದೆಯೋ, ಯಾವುದು ಕೀರ್ತಿಗೆ ಯೋಗ್ಯವೋ, ಅವೆಲ್ಲವುಗಳ ಬಗ್ಗೆ ಚಿಂತಿಸುವವರಾಗಿರಿ.
Vida de louvor
O louvor transforma, fortalece a fé e nos conecta com o céu. Quem louva a Deus em toda circunstância experimenta sua presença real.
ಯೆಹೋವನನ್ನು ಭಯಭಕ್ತಿಯಿಂದ ಸೇವಿಸಿರಿ;
ನಡುಗುತ್ತಾ ಉಲ್ಲಾಸಪಡಿರಿ.
ಯೆಹೋವನು ಮಾಡಿದ ನ್ಯಾಯವಾದ ತೀರ್ಪಿಗಾಗಿ,
ನಾನು ಆತನನ್ನು ಕೊಂಡಾಡುವೆನು.
ಪರಾತ್ಪರ ದೇವನಾದ ಯೆಹೋವನ ನಾಮವನ್ನು ಸಂಕೀರ್ತಿಸುವೆನು.
ನ್ಯಾಯಸ್ಥಾಪಕನಾದ ಯೆಹೋವನನ್ನು ಕೊಂಡಾಡುವ ಇಬ್ರಿಯ ಅಕ್ಷರಕ್ರಮಾನುಸಾರವಾದ ಕೀರ್ತನೆ
ಯೆಹೋವನೇ, ಮನಃಪೂರ್ವಕವಾಗಿ ನಿನ್ನನ್ನು ಕೊಂಡಾಡುವೆನು;
ನೀನು ಮಾಡಿದ ಅದ್ಭುತಕಾರ್ಯಗಳನ್ನೆಲ್ಲಾ ವರ್ಣಿಸುವೆನು.
ನ್ಯಾಯಸ್ಥಾಪಕನಾದ ಯೆಹೋವನನ್ನು ಕೊಂಡಾಡುವ ಇಬ್ರಿಯ ಅಕ್ಷರಕ್ರಮಾನುಸಾರವಾದ ಕೀರ್ತನೆ
ಯೆಹೋವನೇ, ಮನಃಪೂರ್ವಕವಾಗಿ ನಿನ್ನನ್ನು ಕೊಂಡಾಡುವೆನು;
ನೀನು ಮಾಡಿದ ಅದ್ಭುತಕಾರ್ಯಗಳನ್ನೆಲ್ಲಾ ವರ್ಣಿಸುವೆನು.
ಪರಾತ್ಪರನಾದ ದೇವರೇ, ನಾನು ನಿನ್ನಲ್ಲಿ ಸಂತೋಷಿಸಿ ಉತ್ಸಾಹಗೊಳ್ಳುವೆನು;
ನಿನ್ನ ಹೆಸರನ್ನು ಕೀರ್ತಿಸುವೆನು.
ಯೆಹೋವನು ನನ್ನ ವಿಜ್ಞಾಪನೆಗಳನ್ನು ಕೇಳಿದ್ದಾನೆ;
ಆತನಿಗೆ ಸ್ತೋತ್ರವಾಗಲಿ.
ಯೆಹೋವನು ನನಗೆ ಬಲವೂ, ಗುರಾಣಿಯೂ ಆಗಿದ್ದಾನೆ;
ನಾನು ಆತನಲ್ಲಿ ಭರವಸವಿಟ್ಟೆನು, ನನಗೆ ಸಹಾಯವು ಉಂಟಾಯಿತು.
ಆದಕಾರಣ ನನ್ನ ಹೃದಯವು ಹರ್ಷಿಸುವುದು;
ಕೀರ್ತನಾರೂಪವಾಗಿ ಆತನನ್ನು ಸ್ತುತಿಸುವೆನು.
ಯಾರು ಸ್ತುತಿಯಜ್ಞವನ್ನು ಸಮರ್ಪಿಸುತ್ತಾರೋ ಅವರೇ ನನ್ನನ್ನು ಗೌರವಿಸುವವರು;
ತಮ್ಮ ನಡತೆಯನ್ನು ಸರಿಪಡಿಸಿಕೊಳ್ಳುವವರಿಗೆ ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸುವೆನು."
ದೇವರ ವಾಗ್ದಾನಕ್ಕೋಸ್ಕರ ಆತನಲ್ಲಿಯೇ ಹೆಚ್ಚಳಪಡುವೆನು;
ದೇವರನ್ನು ನಂಬಿ ನಿರ್ಭಯದಿಂದಿರುವೆನು.
ನರಪ್ರಾಣಿಗಳು ನನಗೆ ಏನು ಮಾಡಾರು?
ನನ್ನ ಬಲವೇ, ನಿನ್ನನ್ನು ಹಾಡಿಹರಸುವೆನು,
ನನ್ನ ಆಶ್ರಯದುರ್ಗವೂ ಕೃಪಾನಿಧಿಯೂ ದೇವರೇ.
ನಿನ್ನ ಪ್ರೇಮಾನುಭವವು ಜೀವಕ್ಕಿಂತಲೂ ಶ್ರೇಷ್ಠ;
ನನ್ನ ಬಾಯಿ ನಿನ್ನನ್ನು ಕೀರ್ತಿಸುವುದು.
ನನ್ನ ಜೀವಮಾನದಲ್ಲೆಲ್ಲಾ ಹೀಗೆಯೇ ನಿನ್ನನ್ನು ಹಾಡಿ ಹರಸುತ್ತಾ,
ನಿನ್ನ ಹೆಸರೆತ್ತಿ ಕೈಮುಗಿಯುವೆನು.
ಲೋಕಪರಿಪಾಲನೆ ಮತ್ತು ಫಲಸಮೃದ್ಧಿಗಾಗಿ ದೇವರನ್ನು ಸ್ತುತಿಸುವುದು
ದೇವರೇ, ಚೀಯೋನಿನಲ್ಲಿ ನಿನಗೋಸ್ಕರ ಸ್ತೋತ್ರವು ಸಿದ್ಧವಾಗಿದೆ;
ಹರಕೆಗಳು ನಿನಗೆ ಸಲ್ಲುತ್ತವೆ.
ಪ್ರಾರ್ಥನೆಯನ್ನು ಕೇಳುವವನೇ,
ನರರೆಲ್ಲರೂ ನಿನ್ನ ಬಳಿಗೆ ಬರುವರು.
ನನ್ನ ಪಾಪಗಳನ್ನು ನಿವಾರಿಸಲು ನನ್ನಿಂದಾಗುವುದಿಲ್ಲ.
ಆದರೆ ನಮ್ಮ ದೋಷಪರಿಹಾರಕನು ನೀನೇ.
ನನ್ನ ಮೊರೆಯೊಡನೆ ಕೃತಜ್ಞತಾಸ್ತುತಿಯೂ ನನ್ನ ನಾಲಿಗೆಯ ಮೇಲಿತ್ತು.
ಆತನು ನನ್ನ ಬಿನ್ನಹವನ್ನು ತಿರಸ್ಕರಿಸಲಿಲ್ಲ;
ನನ್ನ ಮೇಲಿನ ತನ್ನ ದಯೆಯನ್ನು ತಪ್ಪಿಸಿಬಿಡಲಿಲ್ಲ.
ದೇವರಿಗೆ ಸ್ತೋತ್ರವಾಗಲಿ.
ನೀತಿವಂತರಾದರೋ ದೇವರ ಸನ್ನಿಧಿಯಲ್ಲಿ ಹರ್ಷಿಸಲಿ;
ಉಲ್ಲಾಸಿಸಲಿ, ಆನಂದಧ್ವನಿಮಾಡಲಿ.
ದೇವರಿಗೆ ಗಾಯನಮಾಡಿರಿ; ಆತನ ನಾಮವನ್ನು ಭಜಿಸಿರಿ;
ಅರಣ್ಯದಲ್ಲಿ ಸವಾರಿಮಾಡುತ್ತಾ ಬರುವಾತನಿಗೆ ರಾಜಮಾರ್ಗವನ್ನು ಸಿದ್ಧಮಾಡಿರಿ.
ಆತನ ನಾಮಧೇಯ ಯಾಹು; ಆತನ ಸನ್ನಿಧಿಯಲ್ಲಿ ಉಲ್ಲಾಸಿಸಿರಿ.
ಪರಿಶುದ್ಧ ವಾಸಸ್ಥಾನದಲ್ಲಿರುವ ದೇವರು ದಿಕ್ಕಿಲ್ಲದವರಿಗೆ ತಂದೆಯೂ,
ವಿಧವೆಯರಿಗೆ ಸಹಾಯಕನೂ ಆಗಿದ್ದಾನೆ.
ದೇವರಿಗೆ ಗಾಯನಮಾಡಿರಿ; ಆತನ ನಾಮವನ್ನು ಭಜಿಸಿರಿ;
ಅರಣ್ಯದಲ್ಲಿ ಸವಾರಿಮಾಡುತ್ತಾ ಬರುವಾತನಿಗೆ ರಾಜಮಾರ್ಗವನ್ನು ಸಿದ್ಧಮಾಡಿರಿ.
ಆತನ ನಾಮಧೇಯ ಯಾಹು; ಆತನ ಸನ್ನಿಧಿಯಲ್ಲಿ ಉಲ್ಲಾಸಿಸಿರಿ.
ಅನುದಿನವೂ ನಮ್ಮ ಭಾರವನ್ನು ಹೊರುತ್ತಿರುವ ಕರ್ತನಿಗೆ ಸ್ತೋತ್ರವಾಗಲಿ.
ನಮ್ಮನ್ನು ರಕ್ಷಿಸುವ ದೇವರು ಆತನೇ. ಸೆಲಾ
ಉತ್ಸಾಹಧ್ವನಿಯನ್ನು ತಿಳಿದಿರುವ ಜನರು ಧನ್ಯರು;
ಯೆಹೋವನೇ, ಅವರು ನಿನ್ನ ಮುಖಪ್ರಕಾಶದಲ್ಲಿ ಸಂಚರಿಸುತ್ತಾರೆ.
ಯೆಹೋವನೊಬ್ಬನೇ ರಕ್ಷಕನು
ನಮ್ಮನ್ನಲ್ಲ, ಯೆಹೋವನೇ, ನಮ್ಮನ್ನಲ್ಲ, ನಿನ್ನ ಪ್ರೀತಿ, ಸತ್ಯತೆಗಳ ನಿಮಿತ್ತವಾಗಿ
ನಿನ್ನ ಹೆಸರನ್ನೇ ಘನಪಡಿಸು.
ಭೂಲೋಕವೆಲ್ಲಾ ಯೆಹೋವನನ್ನು ಕೊಂಡಾಡಬೇಕು
ಸರ್ವಜನಾಂಗಗಳೇ, ಯೆಹೋವನನ್ನು ಕೀರ್ತಿಸಿರಿ;
ಸಮಸ್ತ ಪ್ರಜೆಗಳೇ, ಆತನನ್ನು ಕೊಂಡಾಡಿರಿ.
ಆತನ ಕೃಪೆಯು ನಮ್ಮ ಮೇಲೆ ಅಪಾರವಾಗಿದೆ;
ಯೆಹೋವನ ಸತ್ಯತೆಯು ಸದಾ ಇರುವುದು.
ಯೆಹೋವನಿಗೆ ಸ್ತೋತ್ರ!
ನಾನು ನಿನ್ನ ನೀತಿಯ ವಿಧಿಗಳನ್ನು ಕಲಿತ ಹಾಗೆಲ್ಲಾ,
ನಿನ್ನನ್ನು ಯಥಾರ್ಥ ಹೃದಯದಿಂದ ಕೊಂಡಾಡುತ್ತಾ ಹೋಗುವೆನು.
ನನ್ನ ಅಂತರಿಂದ್ರಿಯಗಳನ್ನು ಉಂಟುಮಾಡಿದವನೂ,
ತಾಯಿಯ ಗರ್ಭದಲ್ಲಿ ನನ್ನನ್ನು ರೂಪಿಸಿದವನೂ ನೀನಲ್ಲವೋ?
ನೀನು ನನ್ನನ್ನು ಅದ್ಭುತವಾಗಿಯೂ, ವಿಚಿತ್ರವಾಗಿಯೂ ರಚಿಸಿದ್ದರಿಂದ,
ನಿನ್ನನ್ನು ಕೊಂಡಾಡುತ್ತೇನೆ.
ನಿನ್ನ ಕೃತ್ಯಗಳು ಆಶ್ಚರ್ಯವಾಗಿವೆಯೆಂದು,
ನನ್ನ ಹೃದಯವು ಚೆನ್ನಾಗಿ ಗ್ರಹಿಸಿಕೊಂಡಿದೆ.
ಜಯದ ಗೀತೆ, ಸೌಭಾಗ್ಯದ ನಿರೀಕ್ಷೆ
ನನ್ನ ಶರಣನಾದ ಯೆಹೋವನಿಗೆ ಕೊಂಡಾಟವಾಗಲಿ.
ಆತನು ನನ್ನ ಕೈಗಳಿಗೆ ಯುದ್ಧವಿದ್ಯೆಯನ್ನು,
ನನ್ನ ಬೆರಳುಗಳಿಗೆ ಕಾಳಗವನ್ನು ಕಲಿಸಿದ್ದಾನೆ.
ಯೆಹೋವನನ್ನು ಆಶ್ರಯಿಸಿಕೊಂಡವನು ಧನ್ಯನು
ಯೆಹೋವನಿಗೆ ಸ್ತೋತ್ರ!
ನನ್ನ ಮನವೇ, ಯೆಹೋವನನ್ನು ಸ್ತುತಿಸು.
ಪ್ರಾಣವಿರುವವರೆಗೂ ಯೆಹೋವನನ್ನು ಸ್ತುತಿಸುವೆನು,
ಜೀವಮಾನವೆಲ್ಲಾ ನನ್ನ ದೇವರನ್ನು ಕೊಂಡಾಡುವೆನು.
ಕ್ರಿಸ್ತನ ಮುಖಾಂತರ ನಮ್ಮನ್ನು ವಿಜಯೋತ್ಸವದತ್ತ ನಡೆಸುವ ಹಾಗೂ ನಮ್ಮ ಮೂಲಕವಾಗಿ ತನ್ನ ಜ್ಞಾನವೆಂಬ ಸುವಾಸನೆಯನ್ನು ಎಲ್ಲಾ ಸ್ಥಳಗಳಲ್ಲಿ ಹರಡಿಸಿದ ದೇವರಿಗೆ ಸ್ತೋತ್ರವಾಗಲಿ.
ದೇವರು ತನ್ನ ದಯಾಪೂರ್ವಕವಾದ ಚಿತ್ತಕ್ಕನುಸಾರವಾಗಿ ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನ್ನ ಮಕ್ಕಳನ್ನಾಗಿ ಅಂಗೀಕರಿಸಲು ಪ್ರೀತಿಯಿಂದ ಮೊದಲೇ ಸಂಕಲ್ಪಮಾಡಿದ್ದನು. ತನ್ನ ಪ್ರಿಯನಲ್ಲಿಯೇ ನಮಗೆ ಉಚಿತವಾಗಿ ಅನುಗ್ರಹಿಸಿರುವ ತನ್ನ ಮಹಿಮೆಯುಳ್ಳ ಕೃಪೆಯ ಸ್ತುತಿಗಾಗಿ ಇದೆಲ್ಲಾವನ್ನು ಮಾಡಿದನು.
ನೀವು ದೇವರಾತ್ಮನ ಮೂಲಕ ಆಂತರ್ಯದಲ್ಲಿ ವಿಶೇಷಬಲವನ್ನು ಹೊಂದುವಂತೆಯೂ,
ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ.
ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ. ಮೊದಲು ನೀವು ಪ್ರಜೆಯಾಗಿರಲಿಲ್ಲ. ಈಗಲಾದರೂ ದೇವರ ಸ್ವಕೀಯಪ್ರಜೆಯಾಗಿದ್ದೀರಿ. ಮೊದಲು ನೀವು ಕರುಣೆ ಹೊಂದಿದವರಾಗಿರಲಿಲ್ಲ. ಈಗಲಾದರೂ ಕರುಣೆ ಹೊಂದಿದವರಾಗಿದ್ದೀರಿ.
ಯೆಹೋವನು ಸ್ತೋತ್ರಕ್ಕೆ ಅರ್ಹನು. ನಾನು ಆತನಿಗೆ ಮೊರೆಯಿಡಲು ಆತನು ನನ್ನನ್ನು ಶತ್ರುಗಳಿಂದ ರಕ್ಷಿಸುತ್ತಾನೆ.
ಈ ಕಾರಣದಿಂದ ಯೆಹೋವನೇ, ಅನ್ಯಜನಾಂಗಗಳ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು. ನಿನ್ನ ನಾಮವನ್ನು ಸಂಕೀರ್ತಿಸುವೆನು.
ಆತನೊಬ್ಬನೇ ನಿಮ್ಮ ಸ್ತುತಿ ಸ್ತೋತ್ರಕ್ಕೆ ಪಾತ್ರನು; ಆತನು ನಿಮ್ಮ ದೇವರು; ನೀವು ನೋಡಿದ ಆ ಅದ್ಭುತವಾದ ಮಹತ್ಕಾರ್ಯಗಳನ್ನು ನಿಮಗೋಸ್ಕರ ನಡಿಸಿದವನು ಆತನೇ.
"ಇಸ್ರಾಯೇಲರೇ, ಕೇಳಿರಿ; ನೀವು ಈಗ ಶತ್ರುಗಳೊಡನೆ ಯುದ್ಧಮಾಡುವ ಕಾಲ ಸಮೀಪಿಸಿತಷ್ಟೆ. ನೀವು ಎದೆಗುಂದಬಾರದು, ದಿಗಿಲುಪಡಬಾರದು, ನಡುಗಬಾರದೂ ಮತ್ತು ಅವರಿಗೆ ಹೆದರಲೂಬಾರದು.
ಅದೇ ಬಾಯಿಂದ ಸ್ತುತಿ ಮತ್ತು ಶಾಪ ಎರಡೂ ಬರುತ್ತವೆ. ನನ್ನ ಸಹೋದರರೇ,
ನಾನು ಇದನ್ನು ಸಹ ನಿನಗೆ ಹೇಳುತ್ತೇನೆ, "ನೀನು ಪೇತ್ರನು, ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು. ಪಾತಾಳದ ಶಕ್ತಿಗಳು ಅದನ್ನು ಸೋಲಿಸಲಾರವು.
ಕ್ರಿಸ್ತ ಯೇಸುವಿನ ಒಳ್ಳೆಯ ಸೈನಿಕನಂತೆ ನನ್ನೊಂದಿಗೆ ಕಷ್ಟವನ್ನನುಭವಿಸು.
ಯುದ್ಧಕ್ಕೆ ಹೋಗುವ ಸೈನಿಕನು ಲೋಕವ್ಯವಹಾರದಲ್ಲಿ ಸಿಕ್ಕಿಕೊಳ್ಳದೆ, ತನ್ನನ್ನು ಸೈನ್ಯದಲ್ಲಿ ಸೇರಿಸಿಕೊಂಡವನನ್ನು ಮೆಚ್ಚಿಸುವುದಕ್ಕಾಗಿ ಪ್ರಯಾಸ ಪಡುತ್ತಿರುವನಲ್ಲವೇ.
ಕ್ರಿಸ್ತ ನಂಬಿಕೆಯ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ. ಅದಕ್ಕಾಗಿ ನೀನು ದೇವರಿಂದ ಕರೆಯಲ್ಪಟ್ಟಿದಿ ಮತ್ತು ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೆಯ ಪ್ರತಿಜ್ಞೆಯನ್ನು ಮಾಡಿದಿಯಲ್ಲಾ.
ತಂದೆಗಳಿರಾ, ಆದಿಯಿಂದಿರುವಾತನನ್ನು ನೀವು ಬಲ್ಲವರಾಗಿರುವುದರಿಂದ ನಿಮಗೆ ಬರೆದಿದ್ದೇನೆ. ಯೌವನಸ್ಥರೇ, ನೀವು ಶಕ್ತರಾಗಿರುವುದರಿಂದಲೂ ದೇವರ ವಾಕ್ಯವು ನಿಮ್ಮಲ್ಲಿ ನೆಲೆಗೊಂಡಿರುವುದರಿಂದಲೂ ನೀವು ಕೆಡುಕನನ್ನು ಜಯಿಸಿರುವುದರಿಂದಲೂ ನಾನು ನಿಮಗೆ ಬರೆದಿದ್ದೇನೆ.
ದುರ್ಬೋಧಕರು
ಪ್ರಿಯರೇ, ನಮಗೆ ಹುದುವಾಗಿರುವ ರಕ್ಷಣೆಯ ವಿಷಯದಲ್ಲಿ ನಿಮಗೆ ಬರೆಯುವುದಕ್ಕೆ ಪೂರ್ಣಾಸಕ್ತಿಯಿಂದ ಪ್ರಯತ್ನ ಮಾಡುತ್ತಿದ್ದಾಗ, ದೇವಜನರಿಗೆ ಶಾಶ್ವತವಾಗಿರುವಂತೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವುದಕ್ಕೆ, ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವುದು ನನಗೆ ಅವಶ್ಯವೆಂದು ತೋರಿತು.
ಅವರು ಪ್ರತಿದಿನ ಏಕಮನಸ್ಸಿನಿಂದ ದೇವಾಲಯದಲ್ಲಿ ಸೇರಿಬರುತ್ತಾ, ಮನೆಮನೆಗಳಲ್ಲಿ ರೊಟ್ಟಿಮುರಿದು ಉಲ್ಲಾಸದಿಂದಲೂ, ಸರಳ ಸಹೃದಯದಿಂದಲೂ ಸಹಭೋಜನ ಮಾಡುತ್ತಾ ಇದ್ದರು. ಅವರೆಲ್ಲರೂ ದೇವರನ್ನು ಕೊಂಡಾಡುವವರಾಗಿಯೂ, ಜನರೆಲ್ಲರ ದಯವನ್ನು ಹೊಂದುವವರಾಗಿಯೂ ಇದ್ದರು. ಕರ್ತನು ರಕ್ಷಣೆಯ ಮಾರ್ಗದಲ್ಲಿರುವವರನ್ನು ಪ್ರತಿದಿನ ಅವರೊಂದಿಗೆ ಸಭೆಗೆ ಸೇರಿಸುತ್ತಿದ್ದನು.
Este artigo te tocou? Faça uma oração!
+581 estão orando agora.
Junte-se à corrente de oração.