Mãe
A mãe é honrada na Bíblia como pilar da família. Seu amor incondicional, sua sabedoria e sua dedicação são celebrados como reflexo do próprio amor de Deus por seus filhos.
O amor de mãe
Pode uma mãe esquecer-se do filho do seu ventre? Ainda que ela se esquecesse, Deus nunca nos abandona. O amor materno reflete o divino.
ತಾಯಿ ತನ್ನ ಮಗುವನ್ನು ಆದರಿಸುವ ಪ್ರಕಾರವೇ,
ನಾನು ನಿಮ್ಮನ್ನು ಆದರಿಸುವೆನು.
ಯೆರೂಸಲೇಮಿನ ನಿಮಿತ್ತವೇ, ಆದರಣೆ ಪಡುವಿರಿ."
ಮಕ್ಕಳು ಯೆಹೋವ ದೇವರು ಕೊಟ್ಟ ಸೊತ್ತು.
ಗರ್ಭಫಲವು ದೇವರ ಬಹುಮಾನ.
ಯೆಹೋವ ದೇವರಿಗೆ ಭಯಪಟ್ಟು ಅವರ ಮಾರ್ಗಗಳಲ್ಲಿ
ನಡೆದುಕೊಳ್ಳುವ ಪ್ರತಿಯೊಬ್ಬನು ಧನ್ಯನು.
ನಿನ್ನ ಕೈಗಳ ಕಷ್ಟಾರ್ಜಿತವನ್ನು ನೀನು ಊಟಮಾಡಿ
ಆಶೀರ್ವಾದವನ್ನೂ ಅಭಿವೃದ್ಧಿಯನ್ನೂ ಹೊಂದುವಿ.
ಪ್ರೀತಿ ತಾಳ್ಮೆಯುಳ್ಳದ್ದು, ಪ್ರೀತಿ ದಯೆಯುಳ್ಳದ್ದು, ಪ್ರೀತಿ ಅಸೂಯೆಪಡುವುದಿಲ್ಲ, ಪ್ರೀತಿ ಹೊಗಳಿಕೊಳ್ಳುವುದಿಲ್ಲ, ಗರ್ವಪಡುವುದಿಲ್ಲ, ಪ್ರೀತಿಯು ಇತರರನ್ನು ಅವಮಾನಪಡಿಸುವುದಿಲ್ಲ, ಸ್ವಹಿತವನ್ನೇ ಹುಡುಕುವುದಿಲ್ಲ, ಸುಲಭವಾಗಿ ಸಿಟ್ಟುಗೊಳ್ಳುವುದಿಲ್ಲ, ಅಪಕಾರವನ್ನು ಎಣಿಸುವುದಿಲ್ಲ, ಪ್ರೀತಿ ಕೆಟ್ಟದ್ದರಲ್ಲಿ ಸಂತೋಷಪಡುವುದಿಲ್ಲ, ಸತ್ಯದೊಂದಿಗೆ ಸಂತೋಷ ಪಡುತ್ತದೆ. ಯಾವಾಗಲೂ ಸಂರಕ್ಷಿಸುತ್ತದೆ, ಯಾವಾಗಲೂ ನಂಬುತ್ತದೆ, ಯಾವಾಗಲೂ ನಿರೀಕ್ಷಿಸುತ್ತದೆ, ಯಾವಾಗಲೂ ಸಹಿಸಿಕೊಳ್ಳುತ್ತದೆ.
Sabedoria e instrução
A mãe sábia instrui os filhos nos caminhos de Deus. Seu ensino é lei que guia e sua disciplina é expressão de amor verdadeiro.
ಪಾಪ ಸಂಬಧಿತ ಎಚ್ಚರಿಕೆ
ಮಗನೇ, ನಿನ್ನ ತಂದೆಯ ಶಿಕ್ಷಣಗಳನ್ನು ಕೇಳು,
ನಿನ್ನ ತಾಯಿಯ ಉಪದೇಶವನ್ನು ತೊರೆಯಬೇಡ.
ಅವು ನಿನ್ನ ತಲೆಗೆ ಸುಂದರ ಕಿರೀಟ
ನಿನ್ನ ಕೊರಳನ್ನು ಅಲಂಕರಿಸುವ ಹಾರ.
ನಡೆಯಬೇಕಾದ ಮಾರ್ಗಕ್ಕೆ ತಕ್ಕಂತೆ ಮಕ್ಕಳಿಗೆ ಶಿಕ್ಷಣವನ್ನು ಕೊಡು;
ಆಗ ಮುಪ್ಪಿನಲ್ಲಿಯೂ ಅವನು ಅದರಿಂದ ದೂರ ಹೋಗುವುದಿಲ್ಲ.
ಬೆತ್ತವನ್ನು ಹಿಡಿಯದವನು ತನ್ನ ಮಗನನ್ನು ಹಗೆಮಾಡುತ್ತಾನೆ;
ಆದರೆ ತಮ್ಮ ಮಕ್ಕಳನ್ನು ಪ್ರೀತಿಸುವವನು ಅವರನ್ನು ಶಿಸ್ತು ಮಾಡಲು ಜಾಗರೂಕರಾಗಿರುತ್ತಾನೆ.
ಜ್ಞಾನಿಯಾದ ಮಗನು ತಂದೆಯನ್ನು ಉಲ್ಲಾಸಗೊಳಿಸುತ್ತಾನೆ.
ಬುದ್ಧಿಹೀನನಾದರೋ ತನ್ನ ತಾಯಿಯನ್ನು ತಿರಸ್ಕರಿಸುತ್ತಾನೆ.
ನಿಮ್ಮ ಕಣ್ಣುಗಳಿಂದ ನೋಡಿದ ಕಾರ್ಯಗಳನ್ನು ನೀವು ಮರೆಯದ ಹಾಗೆಯೂ, ನೀವು ಬದುಕುವ ದಿನಗಳೆಲ್ಲಾ ಅವು ನಿಮ್ಮ ಹೃದಯಕ್ಕೆ ದೂರವಾಗದ ಹಾಗೆಯೂ ಬಹು ಜಾಗ್ರತೆಯಾಗಿದ್ದು, ಕಾಪಾಡಿಕೊಳ್ಳಿರಿ. ಅವುಗಳನ್ನು ನಿಮ್ಮ ಮಕ್ಕಳಿಗೂ, ನಿಮ್ಮ ಮಕ್ಕಳ ಮಕ್ಕಳಿಗೂ ಬೋಧಿಸಿರಿ.
Honrar a mãe
Honra teu pai e tua mãe. A mulher virtuosa é digna de louvor — seus filhos se levantam e a chamam bem-aventurada.
ನಿನ್ನ ದೇವರಾದ ಯೆಹೋವ ದೇವರು ನಿನಗೆ ಕೊಡುವ ದೇಶದಲ್ಲಿ ನೀನು ಬಹುಕಾಲ ಬಾಳುವಂತೆ ನಿನ್ನ ತಂದೆತಾಯಿಗಳನ್ನು ಗೌರವಿಸು.
ಮಕ್ಕಳೇ, ನೀವು ಕರ್ತನಲ್ಲಿ ನಿಮ್ಮ ತಂದೆತಾಯಿಗಳಿಗೆ ವಿಧೇಯರಾಗಿರಿ, ಇದು ಸೂಕ್ತವಾದದ್ದು. "ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು," ಎಂಬುದು ವಾಗ್ದಾನ ಸಹಿತವಾದ ಮೊದಲನೆಯ ಆಜ್ಞೆಯಾಗಿದೆ. "ಸನ್ಮಾನಿಸಿದರೆ ನಿನಗೆ ಶುಭವಾಗುವುದು. ನೀನು ಭೂಮಿಯ ಮೇಲೆ ಬಹುಕಾಲ ಬದುಕುವೆ."
ಗುಣವತಿಯಾದ ಹೆಂಡತಿ ಎಲ್ಲಿ ಸಿಕ್ಕಾಳು?
ಅವಳು ಹವಳಕ್ಕಿಂತಲೂ ಬಹು ಅಮೂಲ್ಯಳು.
ಆಕೆಯ ಉಡುಪು ಬಲವೂ ಘನತೆಯೂ ಆಗಿವೆ.
ಭವಿಷ್ಯತ್ತಿನ ಭಯವಿಲ್ಲದೆ ಆಕೆಯು ನಗುವಳು.
ಆಕೆಯು ಜ್ಞಾನದಿಂದ ಮಾತನಾಡುತ್ತಾಳೆ.
ಆಕೆಯ ನಾಲಿಗೆಯ ಮೇಲೆ ನಂಬಿಗಸ್ತ ಶಿಕ್ಷಣ ಇದೆ.
ಆಕೆಯು ತನ್ನ ಗೃಹಕೃತ್ಯಗಳನ್ನೆಲ್ಲಾ ಚೆನ್ನಾಗಿ ನೋಡಿಕೊಳ್ಳುತ್ತಾಳೆ.
ಸೋಮಾರಿಯಾಗಿ ಕೆಲಸಮಾಡದೆ ಆಹಾರವನ್ನು ತಿನ್ನುವುದಿಲ್ಲ.
ಆಕೆಯ ಮಕ್ಕಳು ಎದ್ದು, ಆಕೆಯನ್ನು ಧನ್ಯಳೆಂದು ಕರೆಯುವರು.
ಆಕೆಯ ಪತಿಯು ಸಹ ಆಕೆಯನ್ನು,
"ಬಹುಮಂದಿ ಸ್ತ್ರೀಯರು ಗುಣವತಿಯರಾಗಿದ್ದಾರೆ.
ಆದರೆ ನೀನು ಅವರೆಲ್ಲರಿಗಿಂತಲೂ ಶ್ರೇಷ್ಠಳು," ಎಂದು ಹೊಗಳುವನು.
ಸೌಂದರ್ಯವು ಮೋಸಕರವಾದದ್ದು, ಸೌಂದರ್ಯವು ಶಾಶ್ವತವಲ್ಲ.
ಆದರೆ ಯೆಹೋವ ದೇವರಿಗೆ ಭಯಪಡುವವಳೇ ಪ್ರಶಂಸನೀಯಳು.
Este artigo te tocou? Faça uma oração!
+581 estão orando agora.
Junte-se à corrente de oração.