Mal
A existência do mal é realidade que a Bíblia confronta diretamente. Deus não é autor do mal, mas nos dá armas para vencê-lo e promete que o bem sempre prevalecerá.
Separar-se do mal
O temor do Senhor é aborrecer o mal. A Bíblia nos exorta a odiar o pecado, guardar os pés do mal e fugir de toda aparência maligna.
ಯೆಹೋವನ ಭಯವು ಪಾಪದ್ವೇಷವನ್ನು ಹುಟ್ಟಿಸುತ್ತದೆ;
ಗರ್ವ, ಅಹಂಭಾವ, ದುರ್ಮಾರ್ಗತನ,
ಕುಟಿಲ ಭಾಷಣ ಇವುಗಳನ್ನು ಹಗೆಮಾಡುತ್ತೇನೆ.
ಕೆಟ್ಟತನವನ್ನು ಹಗೆಮಾಡುವವರನ್ನು, ಯೆಹೋವನನ್ನು ಪ್ರೀತಿಸುತ್ತಾನೆ.
ಆತನು ತನ್ನ ಭಕ್ತರ ಪ್ರಾಣಗಳನ್ನು ಕಾಯುವವನಾಗಿ,
ದುಷ್ಟರ ಕೈಯೊಳಗಿಂದ ಅವರನ್ನು ಬಿಡಿಸುವನು.
ಕೆಟ್ಟದ್ದನ್ನು ಬಿಟ್ಟು ಒಳ್ಳೆಯದನ್ನೇ ಮಾಡು;
ಸಮಾಧಾನವನ್ನು ಹಾರೈಸಿ ಅದಕ್ಕಾಗಿ ಪ್ರಯತ್ನಪಡು.
ನಿನ್ನ ನುಡಿಗನುಸಾರವಾಗಿ ನನ್ನ ಹೆಜ್ಜೆಯನ್ನು ದೃಢಪಡಿಸು,
ಯಾವ ಅನ್ಯಾಯವಾದರೂ ನನ್ನನ್ನು ಆಳದಂತೆ ಮಾಡು.
ನಿಮ್ಮನ್ನು ತೊಳೆದು ಶುದ್ಧರಾಗಿ,
ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಕೃತ್ಯಗಳನ್ನು ತೊಲಗಿಸಿರಿ,
ದುರಾಚಾರವನ್ನು ಬಿಡಿ,
ನೀನೇ ಬುದ್ಧಿವಂತನು ಎಂದೆಣಿಸದೆ,
ಯೆಹೋವನಿಗೆ ಭಯಪಟ್ಟು ಕೆಟ್ಟದ್ದನ್ನು ತೊರೆದುಬಿಡು.
ಇದರಿಂದ ನಿನ್ನ ದೇಹಕ್ಕೆ ಆರೋಗ್ಯವೂ,
ಎಲುಬುಗಳಿಗೆ ಸಾರವೂ ಉಂಟಾಗುವವು.
Vencer o mal com o bem
Não te deixes vencer do mal, mas vence o mal com o bem. A luz brilha nas trevas, e as trevas não prevalecem contra ela.
ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೆತನದಿಂದ ಕೆಟ್ಟತನವನ್ನು ಸೋಲಿಸಿರಿ.
ನಿಮ್ಮ ಪ್ರೀತಿಯು ನಿಷ್ಕಪಟವಾಗಿರಲಿ. ಕೆಟ್ಟತನವನ್ನು ತಿರಸ್ಕರಿಸಿರಿ, ಒಳ್ಳೆಯದನ್ನು ಬಿಗಿಯಾಗಿ ಹಿಡಿದುಕೊಳ್ಳಿರಿ.
ಕೊನೆಯ ಮಾತುಗಳು
ಪ್ರಿಯರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ, ವಿಘ್ನಗಳನ್ನೂ ನಿಮ್ಮಲ್ಲಿ ಉಂಟುಮಾಡುವವರನ್ನು ಗುರುತಿಸಿ ಅವರನ್ನು ಬಿಟ್ಟು ದೂರ ಹೋಗಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
ಆ ಬೆಳಕು ಕತ್ತಲಲ್ಲಿ ಪ್ರಕಾಶಿಸುತ್ತದೆ. ಕತ್ತಲು ಆ ಬೆಳಕನ್ನು ಮುಸುಕಲಿಲ್ಲ.
ಯಾರೂ ಅಪಕಾರಕ್ಕೆ ಅಪಕಾರಮಾಡದಂತೆ ನೋಡಿಕೊಳ್ಳಿರಿ, ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವುದಲ್ಲದೆ ಎಲ್ಲರಿಗೂ ಒಳ್ಳೆಯದನ್ನು ಮಾಡುವವರಾಗಿರಿ.
ಆದರೆ ಎಲ್ಲವನ್ನೂ ಪರೀಕ್ಷಿಸಿ ಒಳ್ಳೆಯದನ್ನೇ ಭದ್ರವಾಗಿ ಹಿಡಿದುಕೊಳ್ಳಿರಿ. ಸಕಲವಿಧವಾದ ಕೆಟ್ಟತನಕ್ಕೆ ದೂರವಾಗಿರಿ.
Proteção contra o mal
Deus nos livra do mal e guarda nossos passos. Devemos nos revestir da armadura de Deus para resistir às forças das trevas.
ನಮ್ಮನ್ನು ಶೋಧನೆಯೊಳಗೆ ಸೇರಿಸದೆ
ಕೆಡುಕನಿಂದ; ನಮ್ಮನ್ನು ತಪ್ಪಿಸು
ಇವರನ್ನು ಲೋಕದಿಂದ ತೆಗೆಯಬೇಕೆಂದು ನಾನು ಬೇಡಿಕೊಳ್ಳುವುದಿಲ್ಲ, ಆದರೆ ಇವರನ್ನು ಕೆಡುಕನಿಂದ ಕಾಪಾಡಬೇಕೆಂದು ನಾನು ಬೇಡಿಕೊಳ್ಳುತ್ತೇನೆ.
ಯೆಹೋವನು ನಿನ್ನನ್ನು ಎಲ್ಲಾ ಕೇಡಿನಿಂದ ತಪ್ಪಿಸುವನು;
ನಿನ್ನ ಪ್ರಾಣವನ್ನು ಕಾಯುವನು.
ನೀನು ಹೋಗುವಾಗಲೂ, ಬರುವಾಗಲೂ,
ಈಗಿನಿಂದ ಸದಾಕಾಲವೂ ಯೆಹೋವನು ನಿನ್ನನ್ನು ಕಾಪಾಡುವನು.
ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ನನ್ನನ್ನು ಕಾಪಾಡಿ ತನ್ನೊಂದಿಗೆ ಪರಲೋಕ ರಾಜ್ಯಕ್ಕೆ ಸೇರಿಸುವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಸ್ತೋತ್ರ. ಆಮೆನ್.
ಸೈತಾನನ ತಂತ್ರೋಪಾಯಗಳನ್ನು ನೀವು ಎದುರಿಸಿ ನಿಲ್ಲುವುದಕ್ಕೆ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.
ನಮಗೆ ಹೋರಾಟವಿರುವುದು ಮನುಷ್ಯಮಾತ್ರದವರ ಸಂಗಡವಲ್ಲ. ರಾಜತ್ವಗಳ ಮೇಲೆಯೂ, ಅಧಿಕಾರಿಗಳ ಮೇಲೆಯೂ, ಈ ಅಂಧಕಾರದ ಲೋಕಾಧಿಪತಿಗಳ ಮೇಲೆಯೂ, ಆಕಾಶ ಮಂಡಲಗಳಲ್ಲಿರುವ ದುರಾತ್ಮಗಳ ಸೇನೆಯ ಮೇಲೆಯೂ ನಾವು ಹೋರಾಡುವವರಾಗಿದ್ದೇವೆ.
"ಕೋಪಗೊಳ್ಳಬೇಕಾಗಿ ಬಂದರೂ ಪಾಪಮಾಡಬೇಡಿರಿ," ಸೂರ್ಯನು ಮುಳುಗುವುದಕ್ಕಿಂತ ಮೊದಲೇ ನಿಮ್ಮ ಸಿಟ್ಟು ತೀರಿಹೋಗಲಿ. ಸೈತಾನನಿಗೆ ಅವಕಾಶಕೊಡಬೇಡಿರಿ.
Deus transforma o mal em bem
O que o mal pretendeu contra nós, Deus transformou em bem. Ele tira pureza da aflição e confessa a restauração dos arrependidos.
ನೀವಂತೂ ನನಗೆ ಕೇಡಾಗಬೇಕೆಂದು ಎಣಿಸಿದಿರಿ. ಆದರೆ ದೇವರು ನನ್ನನ್ನು ಮೇಲಾಗಬೇಕೆಂದು ಸಂಕಲ್ಪಿಸಿದನು; ಆದುದರಿಂದ ಇಂದು ನೀವು ಕಾಣುವಂತೆ, ಅನೇಕ ಜನರ ಪ್ರಾಣವು ಸಂರಕ್ಷಿಸಲ್ಪಟ್ಟಿತ್ತು" ಎಂದನು.
ಆದಕಾರಣ ಎಲ್ಲಾ ನೀಚತನವನ್ನೂ, ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಮನಸ್ಸಿನೊಳಗೆ ಬೇರೂರಿರುವ ದೇವರ ವಾಕ್ಯವನ್ನು ನಮ್ರತೆಯಿಂದ ಸ್ವೀಕರಿಸಿರಿ. ಅದು ನಿಮ್ಮ ಆತ್ಮಗಳನ್ನು ರಕ್ಷಿಸುವುದಕ್ಕೆ ಸಾಮರ್ಥ್ಯವುಳ್ಳದ್ದಾಗಿರುತ್ತದೆ.
ನಾವು ನಮ್ಮ ಪಾಪಗಳನ್ನು ಒಪ್ಪಿಕೊಂಡು ಅರಿಕೆಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವನು.
ಆತನು ಮತ್ತೆ ಹೇಳಿದ್ದೇನೆಂದರೆ, "ಆದರೆ ಮನುಷ್ಯನ ಅಂತರಂಗದಿಂದ ಹೊರಹೊಮ್ಮುವಂಥವುಗಳೇ ಅವನನ್ನು ಅಶುದ್ಧಗೊಳಿಸುತ್ತವೆ; ಒಳಗಿನಿಂದ ಅಂದರೆ ಮನುಷ್ಯರ ಹೃದಯದೊಳಗಿನಿಂದ ಬರುವ ದುರಾಲೋಚನೆಗಳು, ಹಾದರ, ಕಳ್ಳತನ, ಕೊಲೆ, ವ್ಯಭಿಚಾರ, ದುರಾಶೆ, ಕೆಡುಕುತನ, ಮೋಸ, ಕಾಮಾಭಿಲಾಷೆ, ಹೊಟ್ಟೆಕಿಚ್ಚು, ಅಪನಿಂದೆ, ಗರ್ವ, ಬುದ್ಧಿಗೇಡಿತನ ಇವೇ ಮೊದಲಾದವುಗಳು ಹೊರಡುತ್ತವೆ. ಈ ಎಲ್ಲಾ ಕೆಡುಕುಗಳು ಮಾನವನ ಅಂತರಂಗದಿಂದಲೇ ಉದ್ಭವಿಸಿ ಅವನನ್ನು ಅಶುದ್ಧ ಮಾಡುತ್ತವೆ."
ದ್ವೇಷವು ಜಗಳಗಳನ್ನೆಬ್ಬಿಸುತ್ತದೆ,
ಪ್ರೀತಿಯು ಪಾಪಗಳನ್ನೆಲ್ಲಾ ಮುಚ್ಚುತ್ತದೆ.
"ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನಿಷ್ಠೆಯಿಂದ ನ್ಯಾಯತೀರಿಸಿರಿ,
ಒಬ್ಬರಿಗೊಬ್ಬರು ಪ್ರೀತಿ, ಕರುಣೆಗಳನ್ನು ತೋರಿಸಿರಿ; ವಿಧವೆ, ಅನಾಥ, ವಿದೇಶಿ, ದರಿದ್ರರಿಗೂ ಅನ್ಯಾಯಮಾಡಬೇಡಿರಿ;
ನಿಮ್ಮಲ್ಲಿ ಯಾವನೂ ತನ್ನ ಸಹೋದರನಿಗೆ ಕೇಡನ್ನು ಬಗೆಯದಿರಲಿ.’
Este artigo te tocou? Faça uma oração!
+581 estão orando agora.
Junte-se à corrente de oração.