Maria
Maria, mãe de Jesus, é honrada nas Escrituras como a mulher escolhida por Deus para trazer ao mundo o Salvador. Sua fé, humildade e obediência são exemplo para todos os cristãos.
A escolhida de Deus
O anjo Gabriel anunciou a Maria que ela seria mãe do Filho do Altíssimo. Ela respondeu com fé: 'Faça-se em mim segundo a tua palavra.'
ದೇವದೂತನು ಯೇಸುವಿನ ಜನನವನ್ನು ಮುಂತಿಳಿಸಿದ್ದು
ಎಲಿಸಬೇತಳು ಗರ್ಭಿಣಿಯಾದ ಆರನೆಯ ತಿಂಗಳಲ್ಲಿ, ಗಲಿಲಾಯ ಪ್ರಾಂತದ ನಜರೇತೆಂಬ ಊರಿಗೆ, ದೇವರು ಗಬ್ರಿಯೇಲನೆಂಬ ದೇವದೂತನನ್ನು, ದಾವೀದನ ವಂಶದ ಯೋಸೇಫನಿಗೆ, ನಿಶ್ಚಯವಾಗಿದ್ದ ಮರಿಯಳೆಂಬ ಒಬ್ಬ ಕನ್ನಿಕೆಯ ಬಳಿಗೆ ಕಳುಹಿಸಿದರು. ಆ ದೇವದೂತನು ಆಕೆಗೆ, "ಅತ್ಯಂತ ದಯೆ ಹೊಂದಿದವಳೇ! ನಿನಗೆ ಶುಭವಾಗಲಿ, ಪ್ರಭುವು ನಿನ್ನೊಂದಿಗಿದ್ದಾರೆ," ಎಂದು ಹೇಳಿದನು.
ಆ ದೇವದೂತನು ಆಕೆಗೆ, "ಮರಿಯಳೇ, ಹೆದರಬೇಡ. ನೀನು ದೇವರ ದಯೆಯನ್ನು ಹೊಂದಿರುವಿ. ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವೆ, ಅವರಿಗೆ ‘ಯೇಸು’ ಎಂದು ಹೆಸರಿಡಬೇಕು. ಅವರು ದೊಡ್ಡವರಾಗಿ ಮಹೋನ್ನತರ ಪುತ್ರ ಎಂದು ಎನಿಸಿಕೊಳ್ಳುವರು. ಕರ್ತದೇವರು ಅವರ ತಂದೆ ದಾವೀದನ ಸಿಂಹಾಸನವನ್ನು ಅವರಿಗೆ ಕೊಡುವರು. ಅವರು ಯಾಕೋಬನ ವಂಶವನ್ನು ಸದಾಕಾಲ ಆಳುವರು; ಅವರ ರಾಜ್ಯಕ್ಕೆ ಅಂತ್ಯವೇ ಇರುವುದಿಲ್ಲ," ಎಂದು ಹೇಳಿದನು.
ಕ್ರಿಸ್ತ ಯೇಸುವಿನ ಜನನ
ಕ್ರಿಸ್ತ ಯೇಸುವಿನ ಜನನದ ವಿವರ: ಯೇಸುವಿನ ತಾಯಿ ಮರಿಯಳನ್ನು ಯೋಸೇಫನಿಗೆ ನಿಶ್ಚಯ ಮಾಡಿದ್ದರು, ಆದರೆ ಅವರಿಬ್ಬರು ಕೂಡಿಬಾಳುವುದಕ್ಕಿಂತ ಮುಂಚೆಯೇ, ಮರಿಯಳು ಪವಿತ್ರಾತ್ಮರಿಂದ ಗರ್ಭಧರಿಸಿರುವುದು ತಿಳಿದುಬಂತು.
O Magnificat
Maria cantou: 'Minha alma engrandece ao Senhor!' Seu cântico exalta a misericórdia, o poder e a fidelidade de Deus.
ಮರಿಯಳ ಹಾಡು
ಆಗ ಮರಿಯಳು ಹೀಗೆ ಹೇಳಿದ್ದು:
"ನನ್ನ ಪ್ರಾಣವು ಕರ್ತದೇವರನ್ನು ಸ್ತುತಿಸುತ್ತದೆ,
ನನ್ನ ಆತ್ಮವು ನನ್ನ ರಕ್ಷಕ ದೇವರಲ್ಲಿ ಉಲ್ಲಾಸಗೊಂಡಿದೆ.
ದೇವರು ತಮ್ಮ ದಾಸಿಯ
ದೀನಸ್ಥಿತಿಯನ್ನು ಲಕ್ಷಿಸಿದ್ದಾರೆ.
ಇಂದಿನಿಂದ ತಲತಲಾಂತರದವರೆಲ್ಲರೂ ನನ್ನನ್ನು ಧನ್ಯಳೆಂದು ಕರೆಯುವರು,
ಪರಾಕ್ರಮಿಯಾದ ದೇವರು ನನಗೆ ಮಹಾಕಾರ್ಯಗಳನ್ನು ಮಾಡಿದ್ದಾರೆ,
ಅವರ ಹೆಸರು ಪವಿತ್ರವಾದದ್ದು.
ದೇವರಲ್ಲಿ ಭಯಭಕ್ತಿಯುಳ್ಳವರ ಮೇಲೆ,
ಅವರ ಕರುಣೆಯು ತಲತಲಾಂತರಗಳಿಗೂ ಇರುವುದು.
ದೇವರು ತಮ್ಮ ಭುಜಪರಾಕ್ರಮವನ್ನು ಮಾಡಿ;
ಹೃದಯದ ಯೋಚನೆಯಲ್ಲಿ ಗರ್ವಿಷ್ಠರಾದವರನ್ನು ಚದರಿಸಿಬಿಟ್ಟಿದ್ದಾರೆ.
ಅಧಿಪತಿಗಳನ್ನು ಅವರ ಸಿಂಹಾಸನಗಳಿಂದ ಕೆಳಗೆ ದಬ್ಬಿ,
ದೀನರನ್ನು ಮೇಲಕ್ಕೆ ಎತ್ತಿದ್ದಾರೆ.
ಹಸಿದವರನ್ನು ಒಳ್ಳೆಯವುಗಳಿಂದ ತುಂಬಿಸಿ,
ಐಶ್ವರ್ಯವಂತರನ್ನು ಬರಿಗೈಯಲ್ಲಿ ಕಳುಹಿಸಿಬಿಟ್ಟಿದ್ದಾರೆ.
ನಮ್ಮ ಪಿತೃಗಳಾದ
ಅಬ್ರಹಾಮನಿಗೂ ಅವನ ಸಂತತಿಗೂ
ತಾವು ವಾಗ್ದಾನಮಾಡಿದ ತಮ್ಮ ನಿತ್ಯ ಕರುಣೆಯನ್ನು
ಜ್ಞಾಪಕಮಾಡಿಕೊಂಡು, ತಮ್ಮ ಸೇವಕನಾದ ಇಸ್ರಾಯೇಲನಿಗೆ, ದೇವರು ಸಹಾಯ ಮಾಡಿದ್ದಾರೆ."
ಯೋಸೇಫನು ದಾವೀದನ ಕುಟುಂಬದವನೂ ವಂಶದವನೂ ಆಗಿದ್ದರಿಂದ, ಅವನು ಸಹ ಗಲಿಲಾಯ ಪ್ರಾಂತದ ನಜರೇತೆಂಬ ಪಟ್ಟಣದಿಂದ ಯೂದಾಯ ಪ್ರಾಂತದ ಬೇತ್ಲೆಹೇಮ್ ಎಂಬ ದಾವೀದನ ಪಟ್ಟಣಕ್ಕೆ ಹೋದನು. ಅವನು ತನಗೆ ನಿಶ್ಚಯಿಸಿದ್ದ ಮತ್ತು ಪೂರ್ಣ ಗರ್ಭಿಣಿಯಾಗಿದ್ದ ಮರಿಯಳೊಂದಿಗೆ ಜನಗಣತಿಯ ದಾಖಲೆ ಮಾಡಿಸಿಕೊಳ್ಳುವುದಕ್ಕಾಗಿ ಹೋದನು. ಅವರು ಬೇತ್ಲೆಹೇಮಿನಲ್ಲಿ ಇದ್ದಾಗ, ಆಕೆಗೆ ಹೆರಿಗೆಯ ಕಾಲ ಸಮೀಪಿಸಿತು. ಮರಿಯಳು ತನ್ನ ಚೊಚ್ಚಲು ಮಗನನ್ನು ಹೆತ್ತು, ಬಟ್ಟೆಗಳಿಂದ ಸುತ್ತಿ, ಛತ್ರದಲ್ಲಿ ಅವರಿಗೆ ಸ್ಥಳವಿಲ್ಲವಾದ್ದರಿಂದ ಶಿಶುವನ್ನು ದನದ ಕೊಟ್ಟಿಗೆಯಲ್ಲಿ ಮಲಗಿಸಿದಳು.
ಆದರೆ ಮರಿಯಳು ಈ ಎಲ್ಲಾ ವಿಷಯಗಳನ್ನು ತನ್ನ ಹೃದಯದಲ್ಲಿಟ್ಟುಕೊಂಡು ಆಲೋಚಿಸುತ್ತಿದ್ದಳು.
ಅನಂತರ ಸಿಮೆಯೋನನು ಅವರನ್ನು ಆಶೀರ್ವದಿಸಿ, ಶಿಶುವಿನ ತಾಯಿ ಮರಿಯಳಿಗೆ, "ಇಗೋ, ಇಸ್ರಾಯೇಲಿನಲ್ಲಿ ಅನೇಕರು ಬೀಳುವುದಕ್ಕೂ ಏಳುವುದಕ್ಕೂ ಈ ಮಗು ನೇಮಕವಾಗಿದೆ, ಜನರು ಎದುರು ಮಾತನಾಡುವುದಕ್ಕೆ ಈ ಮಗು ಗುರುತಾಗಿರುವದು. ಹೀಗೆ ಅನೇಕ ಹೃದಯಗಳ ಆಲೋಚನೆಗಳು ಪ್ರಕಟವಾಗುವವು. ನಿನ್ನ ಸ್ವಂತ ಪ್ರಾಣವನ್ನು ಸಹ ಖಡ್ಗವು ತಿವಿಯುವುದು" ಎಂದನು.
ತಂದೆತಾಯಿಗಳು ಯೇಸುವನ್ನು ಕಂಡಾಗ ಆಶ್ಚರ್ಯಪಟ್ಟರು. ಆತನ ತಾಯಿಯು, "ಮಗು, ನೀನು ನಮಗೆ ಹೀಗೇಕೆ ಮಾಡಿದೆ? ನಿನ್ನ ತಂದೆಯೂ ನಾನೂ ಎಷ್ಟೋ ಕಳವಳಗೊಂಡು ನಿನ್ನನ್ನು ಹುಡುಕಿದೆವು," ಎಂದಳು.
ಯೇಸು ಅವರಿಗೆ, "ನೀವು ನನ್ನನ್ನು ಹುಡುಕಿದ್ದೇಕೆ? ನಾನು ನನ್ನ ತಂದೆಯ ಮನೆಯಲ್ಲಿ ಇರಬೇಕೆಂಬುದು ನಿಮಗೆ ತಿಳಿಯಲಿಲ್ಲವೋ?" ಎಂದರು. ಆದರೆ ಯೇಸು ಅವರಿಗೆ ಹೇಳಿದ ಮಾತನ್ನು ಅವರು ಗ್ರಹಿಸಲಿಲ್ಲ.
ಬಳಿಕ ಯೇಸು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ಅಧೀನರಾಗಿದ್ದರು. ಆದರೆ ಯೇಸುವಿನ ತಾಯಿಯು ಈ ಮಾತುಗಳನ್ನೆಲ್ಲಾ ತನ್ನ ಮನಸ್ಸಿನಲ್ಲಿ ಸಂಗ್ರಹಿಸಿ ಇಟ್ಟುಕೊಂಡಳು.
Mãe fiel até o fim
Maria acompanhou Jesus desde o nascimento até a cruz. Ela estava entre os discípulos no Pentecostes, fiel em oração.
ಅಲ್ಲಿ ದ್ರಾಕ್ಷಾರಸವು ಮುಗಿದು ಹೋದಾಗ, ಯೇಸುವಿನ ತಾಯಿ, "ಅವರಲ್ಲಿ ದ್ರಾಕ್ಷಾರಸ ಮುಗಿದು ಹೋಗಿದೆ," ಎಂದು ಯೇಸುವಿಗೆ ತಿಳಿಸಿದಳು.
ಯೇಸು ಆಕೆಗೆ, "ಅಮ್ಮಾ, ನಾನು ನಿಮಗೆ ಏನು ಮಾಡಲು ಬಯಸುತ್ತೀರಿ? ನನ್ನ ಸಮಯವು ಇನ್ನೂ ಬಂದಿಲ್ಲ," ಎಂದು ಹೇಳಿದರು.
ಯೇಸುವಿನ ತಾಯಿಯು ಸೇವಕರಿಗೆ, "ಆತನು ನಿಮಗೆ ಹೇಳಿದಂತೆ ಮಾಡಿರಿ," ಎಂದು ಹೇಳಿದಳು.
ಯೇಸುವಿನ ಶಿಲುಬೆಯ ಬಳಿಯಲ್ಲಿ ಅವರ ತಾಯಿಯೂ ಅವರ ತಾಯಿಯ ಸಹೋದರಿಯೂ ಕ್ಲೋಪನ ಹೆಂಡತಿಯಾದ ಮರಿಯಳೂ ಮಗ್ದಲದ ಮರಿಯಳೂ ನಿಂತಿದ್ದರು. ಯೇಸು ತಮ್ಮ ತಾಯಿಯೂ ತಾವು ಪ್ರೀತಿಸಿದ ಶಿಷ್ಯನೂ ಹತ್ತಿರದಲ್ಲಿ ನಿಂತಿರುವುದನ್ನು ಕಂಡು ತಮ್ಮ ತಾಯಿಗೆ, "ಅಮ್ಮಾ, ಇಗೋ, ನಿನ್ನ ಮಗನು," ಎಂದರು. ಆಮೇಲೆ ಯೇಸು ಆ ಶಿಷ್ಯನಿಗೆ, "ಇಗೋ, ನಿನ್ನ ತಾಯಿಯು," ಎಂದರು. ಆ ಸಮಯದಿಂದ ಆ ಶಿಷ್ಯನು ಆಕೆಯನ್ನು ತನ್ನ ಸ್ವಂತ ಮನೆಯಲ್ಲಿ ಇರಿಸಿಕೊಂಡನು.
ಆಗ ಯೇಸುವಿನ ತಾಯಿ ಮತ್ತು ಸಹೋದರರು ಬಂದು ಹೊರಗೆ ನಿಂತುಕೊಂಡು, ಯೇಸುವನ್ನು ಕರೆಯಲು ಹೇಳಿ ಕಳುಹಿಸಿದರು. ಯೇಸುವಿನ ಸುತ್ತಲೂ ಗುಂಪಾಗಿ ಕುಳಿತಿದ್ದ ಜನರು ಅವರಿಗೆ, "ನಿಮ್ಮ ತಾಯಿಯೂ ಸಹೋದರರೂ ನಿಮಗಾಗಿ ಹೊರಗೆ ಕಾದಿದ್ದಾರೆ," ಎಂದು ಹೇಳಿದರು.
ಅದಕ್ಕೆ ಯೇಸು, "ನನ್ನ ತಾಯಿ ಮತ್ತು ಸಹೋದರರು ಯಾರು?" ಎಂದು ಕೇಳಿದರು.
ಅನಂತರ ತಮ್ಮ ಸುತ್ತಲೂ ಕುಳಿತ್ತಿದ್ದವರನ್ನು ನೋಡಿ, "ಇಗೋ, ಇವರೇ ನನ್ನ ತಾಯಿ ಮತ್ತು ನನ್ನ ಸಹೋದರರು! ದೇವರ ಚಿತ್ತದಂತೆ ಮಾಡುವವರೇ ನನ್ನ ಸಹೋದರ, ಸಹೋದರಿ ಮತ್ತು ತಾಯಿ ಆಗಿದ್ದಾರೆ," ಎಂದು ಹೇಳಿದರು.
ಈತನು ಬಡಗಿಯ ಪುತ್ರನಲ್ಲವೇ? ಮರಿಯಳೆಂಬುವಳು ಈತನ ತಾಯಿಯಲ್ಲವೇ? ಯಾಕೋಬ, ಯೋಸೇಫ, ಸೀಮೋನ, ಯೂದ ಎಂಬುವರು ಈತನ ತಮ್ಮಂದಿರಲ್ಲವೇ? ಈತನ ತಂಗಿಯರೆಲ್ಲರೂ ನಮ್ಮೊಂದಿಗೆ ಇದ್ದಾರಲ್ಲವೇ? ಹಾಗಾದರೆ, ಇವೆಲ್ಲವು ಈತನಿಗೆ ಎಲ್ಲಿಂದ ಬಂದವು?" ಎಂದು ಮಾತನಾಡಿಕೊಂಡರು.
ಅಲ್ಲಿ ಕೆಲವು ಮಹಿಳೆಯರು, ಯೇಸುವಿನ ತಾಯಿ ಮರಿಯಳು, ಯೇಸುವಿನ ಸಹೋದರರು, ಇವರೆಲ್ಲರು ನಿತ್ಯವೂ ಏಕಮನಸ್ಸಿನಿಂದ ಪ್ರಾರ್ಥನೆಯಲ್ಲಿ ನಿರತರಾಗಿ ಸೇರುತ್ತಿದ್ದರು.
Este artigo te tocou? Faça uma oração!
+581 estão orando agora.
Junte-se à corrente de oração.