O marido
A Bíblia define o papel do marido com clareza: amar a esposa como Cristo amou a Igreja, ser fiel, protetor e líder servo no lar.
Amar como Cristo amou
Maridos, amai vossas mulheres como Cristo amou a Igreja e se entregou por ela. O amor do marido deve ser sacrificial e incondicional.
ಗಂಡಂದಿರೇ, ಕ್ರಿಸ್ತ ಯೇಸು ಸಭೆಯನ್ನು ಪ್ರೀತಿಸಿ, ಅದಕ್ಕಾಗಿ ತಮ್ಮನ್ನು ತಾವೇ ಒಪ್ಪಿಸಿಕೊಟ್ಟಂತೆಯೇ ನೀವು ನಿಮ್ಮ ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ.
ಗಂಡಂದಿರು ಸಹ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವಂತೆಯೇ ತಮ್ಮ ಹೆಂಡತಿಯರನ್ನು ಪ್ರೀತಿಸಬೇಕು. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸುತ್ತಾನೆ.
ಗಂಡಂದಿರು ಸಹ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವಂತೆಯೇ ತಮ್ಮ ಹೆಂಡತಿಯರನ್ನು ಪ್ರೀತಿಸಬೇಕು. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸುತ್ತಾನೆ. ಏಕೆಂದರೆ, ಯಾರೂ ಸ್ವಂತ ಶರೀರವನ್ನು ಎಂದೂ ದ್ವೇಷಿಸುವುದಿಲ್ಲ, ಬದಲಿಗೆ ತಮ್ಮ ಶರೀರವನ್ನು ಪೋಷಿಸಿ ಸಂರಕ್ಷಿಸುತ್ತಾರೆ. ಅದೇ ಪ್ರಕಾರ ಕರ್ತ ಯೇಸು ಸಭೆಯನ್ನು ಪೋಷಿಸಿ, ಸಂರಕ್ಷಿಸುವವರಾಗಿದ್ದಾರೆ.
ಆದರೂ ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನನ್ನು ಪ್ರೀತಿಸುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು. ಹೆಂಡತಿಯು ತನ್ನ ಗಂಡನನ್ನು ಗೌರವಿಸುವವಳಾಗಿರಬೇಕು.
ಆದಕಾರಣ ಸುಳ್ಳಾಡುವುದನ್ನು ಬಿಟ್ಟುಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ. ಏಕೆಂದರೆ ನಾವೆಲ್ಲರೂ ಒಂದೇ ದೇಹದ ಅಂಗಗಳು. "ಕೋಪ ಮಾಡಬೇಕಾಗಿ ಬಂದರೂ ಪಾಪಮಾಡಬೇಡಿರಿ," ಸೂರ್ಯನು ಮುಳುಗುವುದಕ್ಕಿಂತ ಮುಂಚೆ ನಿಮ್ಮ ಕೋಪವು ಇಳಿಯಲಿ. ಹೀಗೆ ನೀವು ಸೈತಾನನಿಗೆ ಅವಕಾಶಕೊಡಬೇಡಿರಿ. ಕಳ್ಳತನ ಮಾಡುವವನು ಇನ್ನು ಮೇಲೆ ಕಳ್ಳತನ ಮಾಡದೆ, ಕೈಯಿಂದ ಯಾವುದಾದರೊಂದು ಒಳ್ಳೆಯ ಉದ್ಯೋಗವನ್ನು ಮಾಡಿ ದುಡಿಯಲಿ. ಆಗ ಕೊರತೆಯಲ್ಲಿರುವವನಿಗೆ ಕೊಡುವುದಕ್ಕೆ ಅವನಿಂದಾಗುವುದು.
ನಿಮ್ಮ ಬಾಯೊಳಗಿಂದ ಯಾವ ಕೆಟ್ಟಮಾತೂ ಹೊರಡದಿರಲಿ. ಕೇಳುವವರಿಗೆ ಆತ್ಮಿಕ ಹಿತವನ್ನುಂಟು ಮಾಡಿ, ಇತರರಿಗೆ ಅವಶ್ಯವಿರುವ ಮಾತುಗಳನ್ನು ಮಾತ್ರ ಆಡಿರಿ. ದೇವರ ಪವಿತ್ರಾತ್ಮರನ್ನು ದುಃಖ ಪಡಿಸಬೇಡಿರಿ. ಆ ಆತ್ಮನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ. ಎಲ್ಲಾ ಕಹಿತನ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಎಲ್ಲಾ ದುಷ್ಟತನವನ್ನೂ ನಿಮ್ಮಿಂದ ದೂರಮಾಡಿರಿ. ನೀವು ದಯೆಯುಳ್ಳವರೂ ಮೃದು ಹೃದಯುಳ್ಳವರೂ ಆಗಿದ್ದು, ದೇವರು ಕ್ರಿಸ್ತನಲ್ಲಿ ನಿಮ್ಮನ್ನು ಕ್ಷಮಿಸಿದಂತೆಯೇ ನೀವು ಸಹ ಒಬ್ಬರೊನ್ನಬ್ಬರನ್ನು ಕ್ಷಮಿಸಿರಿ.
ಗಂಡಂದಿರೇ, ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ. ಅವರೊಂದಿಗೆ ಕಠಿಣವಾಗಿ ವರ್ತಿಸಬೇಡಿರಿ.
ವಿಶ್ವಾಸಿಗಳ ಕುಟುಂಬಗಳಿಗಾಗಿ ನಿಯಮಗಳು
ಹೆಂಡತಿಯರೇ, ನೀವು ಕರ್ತ ಯೇಸುವಿನಲ್ಲಿ ಯೋಗ್ಯರಾಗಿರುವಂತೆ ನಿಮ್ಮ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ.
ಗಂಡಂದಿರೇ, ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ. ಅವರೊಂದಿಗೆ ಕಠಿಣವಾಗಿ ವರ್ತಿಸಬೇಡಿರಿ.
ಎಲ್ಲದಕ್ಕಿಂತ ಮಿಗಿಲಾಗಿ, ಎಲ್ಲವನ್ನೂ ಪರಿಪೂರ್ಣವಾದ ಐಕ್ಯತೆಯಲ್ಲಿ ಬಂಧಿಸುವ ಪ್ರೀತಿಯನ್ನು ಧರಿಸಿಕೊಳ್ಳಿರಿ.
Fidelidade conjugal
O casamento é honroso e o leito conjugal é santo. O marido deve ser fiel à esposa da sua juventude em pensamento e ação.
ಎಲ್ಲರೂ ವಿವಾಹವನ್ನು ಗೌರವಿಸಬೇಕು ಮತ್ತು ದಾಂಪತ್ಯ ಜೀವನವು ಪರಿಶುದ್ಧವಾದದ್ದಾಗಿರಬೇಕು. ಏಕೆಂದರೆ ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವರು.
ನಿನ್ನ ಸ್ವಂತ ಕೊಳದ ನೀರನ್ನು ಕುಡಿ,
ನಿನ್ನ ಸ್ವಂತ ಬಾವಿಯೊಳಗಿಂದ ಉಕ್ಕಿಬರುವ ಜಲವನ್ನು ಕುಡಿ.
ನಿನ್ನ ಬುಗ್ಗೆಗಳು ಬೀದಿಗಳಲ್ಲಿ ಹರಡುವುದು ಯುಕ್ತವೋ?
ನೀರಿನ ಒರತೆಗಳು ಬೀದಿಚೌಕಗಳಲ್ಲಿ ಹರಿಯುವುದು ಸರಿಯೇ?
ಅವು ನಿನಗೆ ಸ್ವಂತವಾಗಿರಲಿ;
ಪರರು ಭಾಗಿಗಳಾಗಿರಬಾರದು.
ನಿನ್ನ ಬುಗ್ಗೆಯು ಆಶೀರ್ವಾದ ಹೊಂದಲಿ;
ನಿನ್ನ ಆನಂದವು ಯೌವನದ ಕಾಲದ ಹೆಂಡತಿಯೊಂದಿಗಿರಲಿ.
ಆಕೆಯು ಮನೋಹರವಾದ ಹರಿಣಿ, ಅಂದವಾದ ಜಿಂಕೆಯ ಹಾಗೆಯೂ;
ಆಕೆಯ ಎದೆಯು ನಿನ್ನನ್ನು ಸದಾ ತೃಪ್ತಿಪಡಿಸಲಿ;
ಆಕೆಯ ಪ್ರೀತಿಯಿಂದ ನೀನು ಸದಾ ಪರವಶನಾಗಿರು.
ಮಗನೇ, ಬೇರೆಯವನ ಹೆಂಡತಿಗೆ ವಶವಾಗುವುದೇಕೆ?
ಅನ್ಯಳ ಎದೆಯನ್ನೇಕೆ ಅಪ್ಪಿಕೊಳ್ಳುವೆ?
ಆದರೆ ಒಬ್ಬ ಸ್ತ್ರೀಯನ್ನು ಕಾಮದೃಷ್ಟಿಯಿಂದ ನೋಡುವ ಪ್ರತಿಯೊಬ್ಬನೂ ಆಗಲೇ ತನ್ನ ಹೃದಯದಲ್ಲಿ ಆಕೆಯ ಸಂಗಡ ವ್ಯಭಿಚಾರ ಮಾಡಿದ್ದಾನೆ ಎಂದು ನಾನು ನಿಮಗೆ ಹೇಳುತ್ತೇನೆ.
ನಾನು ನಿಮಗೆ ಹೇಳುವುದೇನೆಂದರೆ, ಹಾದರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಅವಳು ವ್ಯಭಿಚಾರ ಮಾಡುವುದಕ್ಕೆ ಕಾರಣನಾಗುತ್ತಾನೆ; ವಿವಾಹ ವಿಚ್ಛೇದನೆ ಹೊಂದಿದವಳನ್ನು ಮದುವೆ ಆಗುವವನು ವ್ಯಭಿಚಾರ ಮಾಡಿದವನಾಗುತ್ತಾನೆ.
ಆದ್ದರಿಂದ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ. ಆದಕಾರಣ ದೇವರು ಕೂಡಿಸಿದ್ದನ್ನು, ಮನುಷ್ಯನು ಅಗಲಿಸಬಾರದು," ಎಂದು ಹೇಳಿದರು.
ಗಂಡನು ಹೆಂಡತಿಗೆ, ಹೆಂಡತಿಯು ಗಂಡನಿಗೆ ದಾಂಪತ್ಯ ಧರ್ಮ ಪೂರೈಸಲಿ. ಹೆಂಡತಿಯ ಸ್ವಂತ ದೇಹದ ಮೇಲೆ ಆಕೆಗೆ ಅಧಿಕಾರವಿಲ್ಲ, ಅದು ಗಂಡನಿಗಿದೆ. ಹಾಗೆಯೇ, ಗಂಡನ ಸ್ವಂತ ದೇಹದ ಮೇಲೆ ಅವನಿಗೆ ಅಧಿಕಾರವಿಲ್ಲ, ಅದು ಅವನ ಹೆಂಡತಿಗಿದೆ.
ಗಂಡ ಹೆಂಡತಿ ಪರಸ್ಪರ ಸಮ್ಮತಿಯಿಂದ ಸ್ವಲ್ಪಕಾಲ ಪ್ರಾರ್ಥನೆಗಾಗಿ ಅಗಲಿರಬಹುದಷ್ಟೇ. ಇಲ್ಲದಿದ್ದರೆ, ಸೈತಾನನು ನಿಮ್ಮ ಸಂಯಮ ಇಲ್ಲದಿರುವುದನ್ನು ನೋಡಿ ನಿಮ್ಮನ್ನು ಶೋಧಿಸದಂತೆ ಒಂದುಗೂಡಬೇಕು.
ಮದುವೆ ಮಾಡಿಕೊಂಡಿರುವವರಿಗೆ ನನ್ನ ಅಪ್ಪಣೆ ಅಲ್ಲ, ನಿಜವಾಗಿ ಕರ್ತದೇವರ ಅಪ್ಪಣೆಯಾಗಿದೆ: ಏನೆಂದರೆ, ಹೆಂಡತಿಯು ಗಂಡನನ್ನು ಬಿಟ್ಟು ಅಗಲಬಾರದು. ಒಂದು ವೇಳೆ ಅಗಲಿದರೆ ಆಕೆಯು ಮದುವೆಯಿಲ್ಲದೆ ಇರಬೇಕು. ಇಲ್ಲವೆ ಗಂಡನ ಸಂಗಡ ಸಂಧಾನವಾಗಬೇಕು ಮತ್ತು ಗಂಡನು ಹೆಂಡತಿಯನ್ನು ಬಿಟ್ಟುಬಿಡಬಾರದು.
ಉಳಿದವರಿಗೆ ಕರ್ತ ದೇವರಿಂದ ಮಾತು ಇಲ್ಲವಾದರೂ ನಾನು ಹೇಳುವುದೇನೆಂದರೆ: ಒಬ್ಬ ಸಹೋದರನಿಗೆ ಕ್ರೈಸ್ತ ವಿಶ್ವಾಸಿಯಲ್ಲದ ಹೆಂಡತಿಯಿರಲಾಗಿ, ಆಕೆ ಅವನೊಂದಿಗೆ ಬಾಳುವುದಕ್ಕೆ ಸಮ್ಮತಿಸಿದರೆ, ಅವನು ಆಕೆಯನ್ನು ಬಿಡದಿರಲಿ.
ಲೈಂಗಿಕ ಅನೈತಿಕತೆಯಿಂದ ಓಡಿಹೋಗಿರಿ. ಮನುಷ್ಯನು ಮಾಡುವ ಇತರ ಎಲ್ಲಾ ಪಾಪಗಳು ಅವನ ದೇಹದ ಹೊರಗಿರುತ್ತವೆ, ಆದರೆ ಲೈಂಗಿಕ ಅನೈತಿಕತೆಯು, ತನ್ನ ದೇಹಕ್ಕೆ ವಿರುದ್ಧವಾಗಿ ಪಾಪಕ್ಕೆ ನಡೆಸುತ್ತದೆ.
Convivência com sabedoria
O marido sábio vive com a esposa com entendimento, dando-lhe honra como co-herdeira da graça. A união conjugal reflete Cristo e a Igreja.
ಅದೇ ರೀತಿಯಾಗಿ ಪುರುಷರೇ, ಸ್ತ್ರೀಯು ಬಲಹೀನಳೆಂಬುದನ್ನು ತಿಳಿದು ನಿಮ್ಮ ಪತ್ನಿಯರ ಸಂಗಡ ವಿವೇಕದಿಂದ ಇರಿ. ಅವರು ಜೀವ ಕೃಪೆಯಲ್ಲಿ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಮಾನವನ್ನು ಸಲ್ಲಿಸಿರಿ. ಹೀಗೆ ನಡೆದರೆ ನಿಮ್ಮ ಪ್ರಾರ್ಥನೆಗಳಿಗೆ ಅಡ್ಡಿಯಿರುವುದಿಲ್ಲ.
ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು, ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರೂ ಒಂದೇ ಶರೀರವಾಗಿರುವರು.
ಸ್ವಾರ್ಥ ಉದ್ದೇಶದಿಂದಾಗಲಿ, ವ್ಯರ್ಥ ಹೆಮ್ಮೆಯಿಂದಾಗಲಿ ಯಾವುದನ್ನೂ ಮಾಡದೆ ಪ್ರತಿಯೊಬ್ಬನೂ ದೀನತ್ವದಿಂದ ಮತ್ತೊಬ್ಬನನ್ನು ತನಗಿಂತಲೂ ಶ್ರೇಷ್ಠನೆಂದು ಎಣಿಸಲಿ. ಪ್ರತಿಯೊಬ್ಬನೂ ಸ್ವಹಿತವನ್ನು ನೋಡದೆ ಪರಹಿತವನ್ನು ಸಹ ನೋಡಲಿ.
ಈ ನಿರರ್ಥಕವಾದ ಎಲ್ಲಾ ದಿನಗಳಲ್ಲಿ ಸೂರ್ಯನ ಕೆಳಗೆ ದೇವರು ನಿನಗೆ ಕೊಟ್ಟ ಜೀವನದ ಎಲ್ಲಾ ದಿನಗಳಲ್ಲಿ, ನೀನು ಪ್ರೀತಿಸುವ ನಿನ್ನ ಹೆಂಡತಿಯೊಡನೆ ಆನಂದದಿಂದ ವಾಸಿಸು. ಸೂರ್ಯನ ಕೆಳಗೆ ನೀನು ಪಡುವ ನಿನ್ನ ಜೀವನದ ಕಷ್ಟದಲ್ಲಿ ಇದೇ ನಿನ್ನ ಪಾಲಾಗಿದೆ.
ಪತ್ನಿಯನ್ನು ದೊರಕಿಸಿಕೊಂಡವನು ಒಳ್ಳೆಯದನ್ನು ಸಂಪಾದಿಸಿದವನಾಗಿ,
ಯೆಹೋವ ದೇವರ ದಯೆಯನ್ನು ಹೊಂದುತ್ತಾನೆ.
ಯಾರೂ ಅಪಕಾರಕ್ಕೆ ಅಪಕಾರ ಮಾಡದಂತೆ ನೋಡಿಕೊಳ್ಳಿರಿ. ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಳ್ಳುವುದಲ್ಲದೆ ಎಲ್ಲರಿಗೂ ಹಿತವನ್ನು ಮಾಡುವವರಾಗಿರಿ.
ಯೆಹೋವ ದೇವರನ್ನು ಸೇವಿಸುವುದು ನಿಮಗೆ ಇಷ್ಟವಿಲ್ಲದಿದ್ದರೆ, ಈ ಹೊತ್ತು ನೀವು ಯಾರನ್ನು ಸೇವಿಸಬೇಕೆಂದಿದ್ದೀರಿ? ನಿಮ್ಮ ಪಿತೃಗಳು ಯೂಫ್ರೇಟೀಸ್ ನದಿಯ ಆಚೆ ಸೇವಿಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆಯ್ದುಕೊಳ್ಳಿರಿ. ಆದರೆ ನಾನೂ ನನ್ನ ಮನೆಯವರೂ ಯೆಹೋವ ದೇವರನ್ನೇ ಸೇವಿಸುವೆವು," ಎಂದನು.
ಅವಿಶ್ವಾಸಿಗಳ ಸಂಗಡ ಸೇರಬೇಡಿರಿ
ಕ್ರಿಸ್ತ ಯೇಸುವಿನಲ್ಲಿ ನಂಬಿಕೆ ಇಲ್ಲದವರೊಂದಿಗೆ ಸೇರಿ ಒಂದಾಗಿ ಪಾಲುಗಾರರಾಗಬೇಡಿರಿ. ನೀತಿಗೂ ಅನೀತಿಗೂ ಸಮಾನವೆಲ್ಲಿ? ಅಥವಾ ಬೆಳಕಿಗೂ ಕತ್ತಲೆಗೂ ಅನ್ಯೋನ್ಯತೆಯೇನು?
ಪ್ರೀತಿ ತಾಳ್ಮೆಯುಳ್ಳದ್ದು, ಪ್ರೀತಿ ದಯೆಯುಳ್ಳದ್ದು, ಪ್ರೀತಿ ಅಸೂಯೆಪಡುವುದಿಲ್ಲ, ಪ್ರೀತಿ ಹೊಗಳಿಕೊಳ್ಳುವುದಿಲ್ಲ, ಗರ್ವಪಡುವುದಿಲ್ಲ, ಪ್ರೀತಿಯು ಇತರರನ್ನು ಅವಮಾನಪಡಿಸುವುದಿಲ್ಲ, ಸ್ವಹಿತವನ್ನೇ ಹುಡುಕುವುದಿಲ್ಲ, ಸುಲಭವಾಗಿ ಸಿಟ್ಟುಗೊಳ್ಳುವುದಿಲ್ಲ, ಅಪಕಾರವನ್ನು ಎಣಿಸುವುದಿಲ್ಲ, ಪ್ರೀತಿ ಕೆಟ್ಟದ್ದರಲ್ಲಿ ಸಂತೋಷಪಡುವುದಿಲ್ಲ, ಸತ್ಯದೊಂದಿಗೆ ಸಂತೋಷ ಪಡುತ್ತದೆ. ಯಾವಾಗಲೂ ಸಂರಕ್ಷಿಸುತ್ತದೆ, ಯಾವಾಗಲೂ ನಂಬುತ್ತದೆ, ಯಾವಾಗಲೂ ನಿರೀಕ್ಷಿಸುತ್ತದೆ, ಯಾವಾಗಲೂ ಸಹಿಸಿಕೊಳ್ಳುತ್ತದೆ.