Medo da morte
O medo da morte é universal, mas Cristo o venceu. A Bíblia ensina que para quem crê, a morte perdeu o aguilhão — não é mais motivo de terror, mas porta para a eternidade com Deus.
Cristo venceu a morte
Jesus assumiu carne e sangue para, pela morte, destruir o que tinha o poder da morte e libertar os que viviam em escravidão pelo medo dela.
ಇದಲ್ಲದೆ ಮಕ್ಕಳು ರಕ್ತ ಮಾಂಸಧಾರಿಗಳು ಆಗಿರುವುದರಿಂದ ಯೇಸು ಸಹ ಅವರಂತೆಯೇ ಆದನು. ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶಮಾಡುವುದಕ್ಕೂ, ಮರಣ ಭಯದಿಂದ ತಮ್ಮ ಜೀವಮಾನದಲ್ಲೆಲ್ಲಾ ದಾಸತ್ವದೊಳಗಿದ್ದವರನ್ನು ಬಿಡಿಸುವುದಕ್ಕೂ ಅವರಂತೆ ರಕ್ತಮಾಂಸಧಾರಿಯಾದನು.
ನಶಿಸಿಹೋಗುವ ಈ ದೇಹವು ನಿರ್ಲಯತ್ವವನ್ನು ಧರಿಸಿಕೊಂಡಾಗ ಮರಣಾಧೀನವಾಗಿರುವ ಈ ದೇಹವು ಅಮರತ್ವವನ್ನು ಧರಿಸಿಕೊಂಡಾಗ ಬರೆದಿರುವ ಮಾತು ನೆರವೇರುವುದು. "ಹೇ! ಮರಣವೇ ನಿನ್ನ ಜಯವೆಲ್ಲಿ? ಹೇ! ಮರಣವೇ ನಿನ್ನ ವಿಷದ ಕೊಂಡಿ ಎಲ್ಲಿ?" ಸಾವಿನ ವಿಷಕೊಂಡಿ ಪಾಪವೇ; ಪಾಪದ ಶಕ್ತಿಯ ಆಧಾರವು ಧರ್ಮಶಾಸ್ತ್ರವಿಧಿಗಳೇ. ಆದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ಜಯವನ್ನು ಕೊಡುವ ದೇವರಿಗೆ ಸದಾಕಾಲ ಮಹಿಮೆಯುಂಟಾಗಲಿ.
ಹೀಗಿರಲಾಗಿ ನಾವು ದೀಕ್ಷಾಸ್ನಾನ ಮಾಡಿಸಿಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗಿ ಆತನೊಂದಿಗೆ ಹೂಣಲ್ಪಟ್ಟೆವು. ಆದ್ದರಿಂದ ಕ್ರಿಸ್ತನು ಸತ್ತು ತಂದೆಯ ಮಹಿಮೆಯಿಂದ ಜೀವಿತನಾಗಿ ಎಬ್ಬಿಸಲ್ಪಟ್ಟಂತೆಯೇ ನಾವು ಕೂಡ ಜೀವದಿಂದೆದ್ದು ನೂತನ ಜೀವದಲ್ಲಿ ನಡೆದುಕೊಳ್ಳಬೇಕು. ಹೇಗೆಂದರೆ ನಾವು ಆತನ ಮರಣಕ್ಕೆ ಸದೃಶ್ಯವಾದ ಮರಣವನ್ನು ಹೊಂದಿ ಆತನಲ್ಲಿ ಐಕ್ಯವಾಗಿದ್ದರೆ ಆತನ ಪುನರುತ್ಥಾನಕ್ಕೆ ಸದೃಶವಾದ ಪುನರುತ್ಥಾನವನ್ನೂ ಹೊಂದಿ ಆತನಲ್ಲಿ ಐಕ್ಯವಾಗುವೆವು.
A promessa da vida eterna
Quem ouve a Palavra e crê já passou da morte para a vida. O amor perfeito lança fora o medo, até o medo da morte.
ನಿಮಗೆ ನಿಜನಿಜವಾಗಿ ಹೇಳುತ್ತೇನೆ ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯ ಜೀವವನ್ನು ಹೊಂದಿದ್ದಾನೆ, ಅವನು ಖಂಡನೆಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದಾನೆ.
ಯೇಸು ಆಕೆಗೆ, "ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ. ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು,
ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಯಾವನಾದರೂ ನನ್ನ ವಾಕ್ಯಕ್ಕೆ ವಿಧೇಯನಾದರೆ ಅವನು ನಿತ್ಯಮರಣವನ್ನು ಅನುಭವಿಸುವುದಿಲ್ಲ" ಅಂದನು.
"ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.
ಪ್ರೀತಿ ಇರುವಲ್ಲಿ ಹೆದರಿಕೆಯಿಲ್ಲ. ಹೆದರಿಕೆಯಿರುವಲ್ಲಿ ಯಾತನೆಗಳಿರುವವು. ಆದರೆ ಪೂರ್ಣಪ್ರೀತಿಯು ಹೆದರಿಕೆಯನ್ನು ಹೊಡೆದೊಡಿಸಿಬಿಡುತ್ತದೆ. ಹೆದರುವವನು ಪ್ರೀತಿಯಲ್ಲಿ ಪೂರ್ಣಗೊಂಡವನಲ್ಲ.
Não temas
Jesus disse: não temais os que matam o corpo. No vale da sombra da morte, o Senhor está conosco como pastor e protetor.
ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ, ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ.
ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ,
ನೀನು ಹತ್ತಿರವಿರುವುದರಿಂದ ಕೇಡಿಗೆ ಹೆದರೆನು;
ನಿನ್ನ ದೊಣ್ಣೆಯೂ ಮತ್ತು ನಿನ್ನ ಕೋಲೂ ನನಗೆ ಧೈರ್ಯ ಕೊಡುತ್ತವೆ.
ಅವರ ಕಣ್ಣೀರನ್ನೆಲ್ಲಾ ಆತನೇ ಒರಸಿಬಿಡುವನು. ಇನ್ನು ಮರಣವಿರುವುದಿಲ್ಲ. ಇನ್ನು ದುಃಖವಾಗಲಿ, ಗೋಳಾಟವಾಗಲಿ, ಕಷ್ಟವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು" ಎಂದು ಹೇಳಿತು.
ನಿನಗೆ ಸಂಭವಿಸಬಹುದಾದ ಬಾಧೆಗಳಿಗೆ ಹೆದರಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕಿದ್ದಾನೆ ಮತ್ತು ಹತ್ತು ದಿನಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವ ತನಕ ನಂಬಿಗಸ್ತನಾಗಿರು, ನಾನು ನಿನಗೆ ಜೀವದ ಕಿರೀಟವನ್ನು ಕೊಡುವೆನು.
ಇವರು ಸಮಾಧಾನದಲ್ಲಿ ಸೇರಿದ್ದಾರಲ್ಲಾ;
ನೀತಿಯುಳ್ಳವನಾಗಿ ನಡೆಯುವ ಪ್ರತಿಯೊಬ್ಬನು ತನ್ನ ತನ್ನ ದೀರ್ಘನಿದ್ರಾಸ್ಥಾನದಲ್ಲಿ ವಿಶ್ರಮಿಸಿಕೊಳ್ಳುತ್ತಿದ್ದಾನೆ.
ಆದ್ದರಿಂದ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೂ ರಕ್ಷಣೆಯಾಗುವುದೆಂದು ಬರೆದಿದೆ.
"ದೇವರೇ ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗುತ್ತಿದ್ದೇವೆ. ವಧ್ಯಸ್ಥಾನಕ್ಕೆ ಒಯ್ದ ಕುರಿಗಳಂತೆ ಎಣಿಸಿದರು." ಎಂಬುದಾಗಿ ಬರೆದಿರುವಂತೆ ಆಗುತ್ತದಲ್ಲಾ. ಆದರೆ ನಮ್ಮನ್ನು ಪ್ರೀತಿಸಿದಾತನ ಮೂಲಕವಾಗಿ ನಾವು ಎಲ್ಲಾ ವಿಷಯಗಳಲ್ಲಿಯೂ ಪೂರ್ಣ ಜಯಶಾಲಿಗಳಾಗಿದ್ದೇವೆ. ಹೇಗೆಂದರೆ ಮರಣವಾಗಲಿ, ಜೀವವಾಗಲಿ, ದೇವದೂತರಾಗಲಿ, ದುರಾತ್ಮಗಳಾಗಲಿ, ಈಗಿನ ಸಂಗತಿಗಳಾಗಲಿ, ಮುಂದಣ ಸಂಗತಿಗಳಾಗಲಿ, ಮಹತ್ವಗಳಾಗಲಿ, ಮೇಲಣ ಲೋಕವಾಗಲಿ, ಕೆಳಗಣ ಲೋಕವಾಗಲಿ, ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿ ತೋರಿಬಂದ ದೇವರ ಪ್ರೀತಿಯಿಂದ ಅಗಲಿಸಲು ಸಾಧ್ಯವಿಲ್ಲವೆಂದು ನಾವು ಬಲ್ಲವರಾಗಿದ್ದೇವೆ.