Medo da morte
O medo da morte é universal, mas Cristo o venceu. A Bíblia ensina que para quem crê, a morte perdeu o aguilhão — não é mais motivo de terror, mas porta para a eternidade com Deus.
Cristo venceu a morte
Jesus assumiu carne e sangue para, pela morte, destruir o que tinha o poder da morte e libertar os que viviam em escravidão pelo medo dela.
ಮಕ್ಕಳು ರಕ್ತಮಾಂಸಧಾರಿಗಳು ಆಗಿರುವುದರಿಂದ ಯೇಸು ತಮ್ಮ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ, ಸೈತಾನನನ್ನು ನಾಶಮಾಡುವುದಕ್ಕೂ ಮರಣ ಭಯದಿಂದ ಜೀವಮಾನದಲ್ಲೆಲ್ಲಾ ದಾಸತ್ವದೊಳಗಿದ್ದವರನ್ನು ಬಿಡಿಸುವುದಕ್ಕೂ ಅವರ ಮಾನವತ್ವದಲ್ಲಿ ಪಾಲುಗಾರರಾದರು.
ನಶಿಸಿಹೋಗುವಂಥದ್ದು ನಶಿಸಿಹೋಗದಂಥದ್ದನ್ನೂ, ಮರಣಾಧೀನವಾದ ಈ ದೇಹವು ಅಮರತ್ವವನ್ನೂ ಧರಿಸಿಕೊಳ್ಳುವಾಗ, ಬರೆದಿರುವ ಈ ಮಾತುಗಳು ನೆರವೇರುವುದು: "ಮರಣವು ನುಂಗಿಯೇ ಹೋಯಿತು, ಜಯವಾಯಿತು."
"ಓ ಮರಣವೇ, ನಿನ್ನ ಜಯವು ಎಲ್ಲಿ?
ಓ ಮರಣವೇ, ನಿನ್ನ ವಿಷದ ಕೊಂಡಿ ಎಲ್ಲಿ?"
ಮರಣದ ಕೊಂಡಿ ಪಾಪವೇ ಮತ್ತು ಪಾಪದ ಶಕ್ತಿಯು ನಿಯಮವೇ. ಆದರೆ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ನಮಗೆ ಜಯವನ್ನು ಕೊಡುವ ದೇವರಿಗೆ ಸ್ತೋತ್ರ.
ಹೀಗಿರುವಲ್ಲಿ ಯೇಸುವಿರೊಂದಿಗೆ ದೀಕ್ಷಾಸ್ನಾನದ ಮೂಲಕ ಅವರ ಮರಣದಲ್ಲಿ ಹೂಣಲಾದೆವು. ಆದ್ದರಿಂದ ತಂದೆಯ ಮಹಿಮೆಯ ಮೂಲಕ ಕ್ರಿಸ್ತ ಯೇಸು ಸತ್ತವರೊಳಗಿಂದ ಎಬ್ಬಿಸಲಾದಂತೆಯೇ ನಾವು ಹೊಸ ಜೀವವನ್ನು ಜೀವಿಸಬೇಕು.
ನಾವು ಕ್ರಿಸ್ತ ಯೇಸುವಿನೊಂದಿಗೆ ಸೇರಿ ಅವರ ಮರಣದಲ್ಲಿ ಪಾಲುಗಾರರಾದರೆ, ಅವರ ಪುನರುತ್ಥಾನದಲ್ಲಿಯೂ ಪಾಲುಗಾರರಾಗುವೆವು.
A promessa da vida eterna
Quem ouve a Palavra e crê já passou da morte para a vida. O amor perfeito lança fora o medo, até o medo da morte.
"ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದ ತಂದೆಯನ್ನು ನಂಬುವವರು ನಿತ್ಯಜೀವವನ್ನು ಹೊಂದಿದ್ದಾರೆ. ಅವರು ನ್ಯಾಯತೀರ್ಪಿಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವವನ್ನು ಹೊಂದಿದ್ದಾರೆ.
ಯೇಸು ಆಕೆಗೆ, "ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ. ನನ್ನಲ್ಲಿ ನಂಬಿಕೆ ಇಡುವವರು ಸತ್ತರೂ ಬದುಕುವರು.
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಯಾರು ನನ್ನ ಮಾತನ್ನು ಪಾಲಿಸುತ್ತಾರೋ ಅವರು ಎಂದೆಂದಿಗೂ ಮರಣವನ್ನು ಕಾಣುವುದಿಲ್ಲ," ಎಂದರು.
ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತಮ್ಮ ಏಕೈಕ ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಕೊಟ್ಟರು. ಅದಕ್ಕಾಗಿಯೇ ಅವರನ್ನು ನಂಬುವ ಪ್ರತಿಯೊಬ್ಬರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕು.
ಪ್ರೀತಿಯಲ್ಲಿ ಹೆದರಿಕೆಯಿಲ್ಲ ಆದರೆ ಪೂರ್ಣ ಪ್ರೀತಿಯು ಹೆದರಿಕೆಯನ್ನು ಹೊರಡಿಸಿಬಿಡುತ್ತದೆ. ಏಕೆಂದರೆ ಭಯವಿರುವಲ್ಲಿ ಯಾತನೆಯಿರುವುದು. ಭಯಪಡುವವನು ಪ್ರೀತಿಯಲ್ಲಿ ಸಿದ್ಧಿಗೆ ಬಂದವನಲ್ಲ.
Não temas
Jesus disse: não temais os que matam o corpo. No vale da sombra da morte, o Senhor está conosco como pastor e protetor.
ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾಗದವರಿಗೆ ಹೆದರಬೇಡಿರಿ. ಆದರೆ ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿರಿ.
ನಾನು ಕಾರ್ಗತ್ತಲಿನ
ಕಣಿವೆಯಲ್ಲಿ ನಡೆಯುವಾಗಲೂ,
ನೀವು ನನ್ನೊಂದಿಗಿರುವುದರಿಂದ
ನಾನು ಕೇಡಿಗೆ ಹೆದರೆನು;
ನಿಮ್ಮ ದೊಣ್ಣೆಯೂ ನಿಮ್ಮ ಕೋಲೂ
ನನ್ನನ್ನು ಸಂತೈಸುತ್ತವೆ.
‘ದೇವರು ಅವರ ಕಣ್ಣೀರನ್ನೆಲ್ಲಾ ಒರೆಸಿಬಿಡುವರು. ಇನ್ನು ಮರಣವಿರುವುದಿಲ್ಲ.’ ಇನ್ನು ದುಃಖವಾಗಲಿ, ಗೋಳಾಟವಾಗಲಿ, ನೋವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು!" ಎಂದು ಹೇಳಿತು.
ನಿನಗೆ ಸಂಭವಿಸುವುದಕ್ಕಿರುವ ಬಾಧೆಗಳಿಗೆ ಭಯಪಡಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು, ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕೆ ಇದ್ದಾನೆ. ಹತ್ತು ದಿವಸಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವವರೆಗೆ ನಂಬಿಗಸ್ತನಾಗಿರು. ನಾನು ನಿನಗೆ ಜೀವದ ಕಿರೀಟವನ್ನು ಕೊಡುವೆನು.
ಅವರು ಸಮಾಧಾನಕ್ಕೆ ಪ್ರವೇಶಿಸುತ್ತಾರೆ.
ಅವರಲ್ಲಿ ನೆಟ್ಟಗೆ ನಡೆಯುವ ಪ್ರತಿಯೊಬ್ಬರೂ ತಮ್ಮ
ಮರಣದ ಹಾಸಿಗೆಗಳಲ್ಲಿ ವಿಶ್ರಮಿಸಿಕೊಳ್ಳುತ್ತಾರೆ.
ಏಕೆಂದರೆ, "ಕರ್ತನ ಹೆಸರನ್ನು ಕರೆಯುವವರೆಲ್ಲರಿಗೆ ರಕ್ಷಣೆ ಆಗುವುದು."
ಇವು ಪವಿತ್ರ ವೇದದಲ್ಲಿ ಬರೆದಿರುವಂತೆ ಇವೆ:
"ನಿನಗೋಸ್ಕರ ನಾವು ದಿನವೆಲ್ಲಾ ಮರಣಕ್ಕೆ ಗುರಿಯಾಗಿದ್ದೇವೆ;
ವಧಿಸಲಿಕ್ಕಾಗಿರುವ ಕುರಿಗಳಂತೆ ನಾವು ಭಾವಿಸಿರುತ್ತೇವೆ."
ಇವೆಲ್ಲವುಗಳಲ್ಲಿಯೂ ನಾವು ನಮ್ಮನ್ನು ಪ್ರೀತಿಸಿದಾತನ ಮೂಲಕ ಜಯ ಹೊಂದಿದವರಿಗಿಂತಲೂ ಹೆಚ್ಚಿನವರಾಗಿದ್ದೇವೆ. ಏಕೆಂದರೆ ಮರಣವಾಗಲಿ, ಜೀವವಾಗಲಿ, ದೇವದೂತರಾಗಲಿ, ದುರಾತ್ಮಗಳಾಗಲಿ, ವರ್ತಮಾನಕಾಲದ ಸಂಗತಿಗಳಾಗಲಿ, ಭವಿಷ್ಯತ್ಕಾಲದ ಸಂಗತಿಗಳಾಗಲಿ, ಯಾವುದೇ ಶಕ್ತಿಯಾಗಲಿ, ಎತ್ತರವಾಗಲಿ, ಆಳವಾಗಲಿ ಅಥವಾ ಸೃಷ್ಟಿಯಲ್ಲಿರುವ ಬೇರೆ ಯಾವುದೇ ಆಗಲಿ ನಮ್ಮ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿರುವ ದೇವರ ಪ್ರೀತಿಯಿಂದ ನಮ್ಮನ್ನು ಅಗಲಿಸಲಾಗದೆಂದು ನಮಗೆ ದೃಢ ನಿಶ್ಚಯವಿದೆ.