Mentira
A mentira é condenada pela Bíblia como pecado grave. Deus é verdade, e quem mente se alinha com o pai da mentira. O cristão é chamado a falar a verdade em amor.
Deus odeia a mentira
Os lábios mentirosos são abominação para o Senhor. A Bíblia adverte que todo mentiroso terá parte no lago de fogo.
ಸುಳ್ಳಾಡುವ ತುಟಿಗಳು ಯೆಹೋವ ದೇವರಿಗೆ ಅಸಹ್ಯವಾಗಿವೆ;
ಆದರೆ ಸತ್ಯವಂತರಲ್ಲಿ ಅವರು ಆನಂದಿಸುತ್ತಾರೆ.
ಆದರೆ ಹೇಡಿಗಳು, ನಂಬದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ, ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು!" ಎಂದು ನನಗೆ ಹೇಳಿದರು.
ಈ ಆರು ವಿಷಯಗಳನ್ನು ಯೆಹೋವ ದೇವರು ಹಗೆ ಮಾಡುತ್ತಾರೆ;
ಹೌದು, ಏಳು ದೇವರಿಗೆ ಅಸಹ್ಯವಾಗಿವೆ, ಅವು ಯಾವವೆಂದರೆ:
ಹೆಮ್ಮೆಯ ದೃಷ್ಟಿ,
ಸುಳ್ಳಾಡುವ ನಾಲಿಗೆ,
ನಿರಪರಾಧಿಯ ರಕ್ತವನ್ನು ಸುರಿಸುವ ಕೈಗಳು,
ದುರಾಲೋಚನೆಗಳನ್ನು ಕಲ್ಪಿಸುವ ಹೃದಯ,
ಕೇಡಿಗೆ ನುಗ್ಗಲು ತ್ವರೆಪಡುವ ಕಾಲುಗಳು,
ಅಸತ್ಯವನ್ನಾಡುವ ಸುಳ್ಳುಸಾಕ್ಷಿ ಮತ್ತು
ಸಹೋದರರಲ್ಲಿ ಜಗಳ ಹುಟ್ಟಿಸುವ ವ್ಯಕ್ತಿ.
ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ, ನೀವು ಹಳೆಯ ಸ್ವಭಾವವನ್ನು ಅದರ ಕೃತ್ಯಗಳನ್ನು ಕೂಡ ತೆಗೆದು ಹಾಕಿದ್ದೀರಲ್ಲವೇ!
Falar a verdade
Despojai-vos da mentira e falai a verdade cada um com o próximo. Cristo é a verdade, e nos chama a ser testemunhas fiéis.
ಆದಕಾರಣ ಸುಳ್ಳಾಡುವುದನ್ನು ಬಿಟ್ಟುಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ. ಏಕೆಂದರೆ ನಾವೆಲ್ಲರೂ ಒಂದೇ ದೇಹದ ಅಂಗಗಳು.
ಯೇಸು ಅವನಿಗೆ, "ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ. ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರಲಾರರು.
ನೀವು ನಿಮ್ಮ ತಂದೆಯಾದ ಪಿಶಾಚನಿಗೆ ಸೇರಿದವರಾಗಿದ್ದೀರಿ. ನಿಮ್ಮ ತಂದೆಯ ಆಶೆಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನಿಲ್ಲಲಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ಸುಳ್ಳಾಡುವಾಗ ತನ್ನ ಸ್ವಭಾವಾನುಸಾರವಾಗಿ ಆಡುತ್ತಾನೆ. ಅವನು ಸುಳ್ಳುಗಾರನೂ ಸುಳ್ಳಿನ ತಂದೆಯೂ ಆಗಿದ್ದಾನೆ.
ಸುಳ್ಳುಸಾಕ್ಷಿಯು ಶಿಕ್ಷೆಹೊಂದದೇ ಇರುವುದಿಲ್ಲ;
ಸುಳ್ಳಾಡುವವನು ಹಾಳಾಗಿ ಹೋಗುವನು.
ಮೋಸ ಮಾಡುವವನು ನನ್ನ ಮನೆಯೊಳಗೆ ವಾಸಮಾಡನು;
ಸುಳ್ಳಾಡುವವನು ನನ್ನ ಕಣ್ಣುಗಳ ಮುಂದೆ ನಿಂತುಕೊಳ್ಳನು.
Consequências da falsidade
A mentira destrói confiança e relacionamentos. As Escrituras alertam sobre os frutos amargos do engano e da falsidade.
ಸುಳ್ಳಿನ ನಾಲಿಗೆಯಿಂದ ಸಂಪಾದಿಸಿದ ಸಂಪತ್ತು
ಕ್ಷಣಿಕ ಆವಿಯಂತೆಯೂ ಮೃತ್ಯುಪಾಶದಂತೆಯೂ ಆಗಿದೆ.
ಸತ್ಯದ ತುಟಿಯು ಸದಾ ಸ್ಥಿರಗೊಳ್ಳುವುದು,
ಸುಳ್ಳಾಡುವ ನಾಲಿಗೆಯು ಕ್ಷಣಿಕ.
ಸುಳ್ಳು ನಾಲಿಗೆಯವನು ತಾನು ಬಾಧಿಸಿದವರನ್ನೇ ಹಗೆ ಮಾಡುವನು;
ಮುಖಸ್ತುತಿ ಮಾಡುವ ಬಾಯಿಯು ನಾಶವನ್ನುಂಟುಮಾಡುತ್ತದೆ.
ಸುಳ್ಳಾಡುವವರನ್ನು ನೀವು ದಂಡಿಸುತ್ತೀರಿ.
ಕೊಲೆಗಾರರನ್ನೂ ಮೋಸಗಾರರನ್ನೂ
ಯೆಹೋವ ದೇವರು ಅಸಹ್ಯಪಡುತ್ತಾರೆ.
" ‘ಕದಿಯಬಾರದು.
" ‘ಸುಳ್ಳಾಡಬಾರದು.
" ‘ಒಬ್ಬರಿಗೊಬ್ಬರು ಮೋಸಮಾಡಬಾರದು.