Messias
Jesus é o Messias prometido — o Cristo, o Ungido de Deus. Séculos de profecias apontaram para Ele, e Pedro declarou: 'Tu és o Cristo, o Filho do Deus vivo.'
A confissão messiânica
Pedro confessou: Tu és o Cristo, o Filho do Deus vivo. Os apóstolos pregaram incansavelmente que Jesus é o Messias prometido.
ಆತನು ಅವರನ್ನು, "ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ ಎಂದು ಕೇಳಿದನು?" ಆಗ ಸೀಮೋನ ಪೇತ್ರನು, "ನೀನು ಜೀವವುಳ್ಳ ದೇವರ ಕುಮಾರನಾದ ಕ್ರಿಸ್ತನು" ಎಂದು ಉತ್ತರ ಕೊಟ್ಟನು.
ಹಿರೀಸಭೆಯ ಎದುರಿನಿಂದ ಹೊರಟುಹೋಗಿ, ಪ್ರತಿದಿನ ಎಡೆಬಿಡದೆ ದೇವಾಲಯದಲ್ಲಿಯೂ, ಮನೆಮನೆಗಳಲ್ಲಿಯೂ, ಉಪದೇಶಮಾಡುತ್ತಾ ಕ್ರಿಸ್ತನಾದ ಯೇಸುವಿನ ಕುರಿತು ಶುಭವರ್ತಮಾನವನ್ನು ಸಾರುತ್ತಾ ಇದ್ದರು.
ಆದರೆ ನಾನು ದೇವರಿಂದ ಸಹಾಯವನ್ನು ಪಡೆದು ಈ ದಿನದವರೆಗೂ ಸುರಕ್ಷಿತವಾಗಿದ್ದು ಚಿಕ್ಕವರಿಗೂ, ದೊಡ್ಡವರಿಗೂ ಸಾಕ್ಷಿಹೇಳುವವನಾಗಿದ್ದೇನೆ. ಪ್ರವಾದಿಗಳೂ, ಮೋಶೆಯೂ ಮುಂದೆ ಆಗುವುದನ್ನು ಕುರಿತು ತಿಳಿಸಿದ ಸಂಗತಿಗಳನ್ನೇ, ಹೊರತು ನಾನು ಇನ್ನೇನೂ ಹೇಳುವವನಲ್ಲ. ಆ ಸಂಗತಿಗಳು ಏನೆಂದರೆ; ಕ್ರಿಸ್ತನು ಬಾಧೆಪಟ್ಟು ಸಾಯಬೇಕಾದವನು ಮತ್ತು ಆತನು ಸತ್ತವರೊಳಗಿಂದ ಮೊದಲನೆಯವನಾಗಿ ಎದ್ದು ಯೆಹೂದ್ಯರಿಗೂ, ಅನ್ಯಜನರಿಗೂ ಬೆಳಕನ್ನು ಪ್ರಸಿದ್ಧಿಪಡಿಸುವವನಾಗಿರುವನು" ಎಂಬುದೇ.
As profecias cumpridas
O Messias viria como Príncipe da Paz, Salvador e Senhor. Cada profecia se cumpriu em Jesus de Nazaré, nascido em Belém.
ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ,
ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವುದು;
ಅದ್ಭುತ ಸ್ವರೂಪನು, ಆಲೋಚನಾ ಕರ್ತನು,
ಪರಾಕ್ರಮಿಯಾದ ದೇವರೂ, ನಿತ್ಯನಾದ ತಂದೆ,
ಸಮಾಧಾನದ ಪ್ರಭು ಎಂಬುದು ಆತನ ಹೆಸರು.
ಅದೇನೆಂದರೆ, ಈ ಹೊತ್ತು ನಿಮಗೋಸ್ಕರ ದಾವೀದನೂರಲ್ಲಿ ಒಬ್ಬ ರಕ್ಷಕನು ಹುಟ್ಟಿದ್ದಾನೆ. ಆತನು ಕರ್ತನಾಗಿರುವ ಕ್ರಿಸ್ತನೇ.
ಮೊದಲನೇಯ ಪುನರುತ್ಥಾನದಲ್ಲಿ ಸೇರಿದವರು ಧನ್ಯರೂ ಮತ್ತು ಪರಿಶುದ್ಧರೂ ಆಗಿದ್ದಾರೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ. ಆದರೆ ಅವರು ದೇವರಿಗೂ ಕ್ರಿಸ್ತನಿಗೂ ಯಾಜಕರಾಗಿ ಕ್ರಿಸ್ತನೊಂದಿಗೆ ಆ ಸಾವಿರ ವರ್ಷ ಆಳುವರು.
ಆದಕಾರಣ ನೀವು ಸಹ ಸಿದ್ಧವಾಗಿರಿ; ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ.