Milagres de Jesus
Os Evangelhos registram dezenas de milagres realizados por Jesus — curas, ressurreições, domínio sobre a natureza e libertações. Cada milagre revelava sua divindade e compaixão.
Curas de cegos e surdos
Jesus devolveu a visão aos cegos e a audição aos surdos, manifestando seu poder sobre toda enfermidade e deficiência.
ಯೇಸು ಅಲ್ಲಿಂದ ಹಾದುಹೋಗುತ್ತಿರುವಾಗ ಇಬ್ಬರು ಕುರುಡರು, "ದಾವೀದ ಕುಮಾರನೇ, ನಮ್ಮನ್ನು ಕರುಣಿಸು" ಎಂದು ಕೂಗುತ್ತಾ ಆತನನ್ನು ಹಿಂಬಾಲಿಸಿದರು. ಯೇಸು ಮನೆಗೆ ಬಂದಾಗ ಆ ಕುರುಡರು ಆತನ ಬಳಿಗೆ ಬಂದರು. ಯೇಸು ಅವರನ್ನು, "ನಾನು ಇದನ್ನು ಮಾಡಬಲ್ಲೆನೆಂಬುದನ್ನು ನೀವು ನಂಬುತ್ತೀರೋ" ಎಂದು ಕೇಳಿದ್ದಕ್ಕೆ, ಅವರು "ಹೌದು, ಕರ್ತನೇ, ನಂಬುತ್ತೇವೆ" ಅಂದರು. ಆಗ ಆತನು ಅವರ ಕಣ್ಣುಗಳನ್ನು ಮುಟ್ಟಿ, "ನಿಮ್ಮ ನಂಬಿಕೆಯಂತೆ ನಿಮಗೆ ಆಗಲಿ" ಅಂದನು. ಆಗ ಅವರ ಕಣ್ಣುಗಳು ತೆರೆಯಲ್ಪಟ್ಟವು. ನಂತರ ಯೇಸು ಅವರಿಗೆ, "ಇದು ಯಾರಿಗೂ ತಿಳಿಯದಂತೆ ನೋಡಿಕೊಳ್ಳಿರಿ" ಎಂದು ಕಟ್ಟುನಿಟ್ಟಾಗಿ ಆದೇಶಿಸಿದನು. ಆದರೆ ಅವರು ಹೊರಟುಹೋಗಿ ಆ ದೇಶದೊಳಗೆಲ್ಲಾ ಆತನ ಸುದ್ದಿಯನ್ನು ಹಬ್ಬಿಸಿದರು.
ಯೇಸು ಇಬ್ಬರು ಕುರುಡರಿಗೆ ದೃಷ್ಟಿ ಕೊಟ್ಟದ್ದು
ಅವರು ಯೆರಿಕೋವಿನಿಂದ, ಹೊರಟುಹೋಗುತ್ತಿರುವಾಗ ಜನರ ದೊಡ್ಡ ಗುಂಪು ಆತನನ್ನು ಹಿಂಬಾಲಿಸಿತು. ಆಗ ದಾರಿಯ ಮಗ್ಗುಲಲ್ಲಿ ಕುಳಿತಿದ್ದ ಕುರುಡರಿಬ್ಬರು ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾನೆಂದು ಕೇಳಿ, "ಕರ್ತನೇ, ದಾವೀದ ಕುಮಾರನೇ ನಮ್ಮನ್ನು ಕರುಣಿಸು" ಎಂದು ಕೂಗಿಕೊಂಡರು. ಆದರೆ ಆ ಗುಂಪಿನವರು, ಸುಮ್ಮನಿರಿ ಎಂದು ಅವರನ್ನು ಗದರಿಸಿದರು. ಅವರಾದರೋ, "ಕರ್ತನೇ, ದಾವೀದ ಕುಮಾರನೇ, ನಮ್ಮನ್ನು ಕರುಣಿಸು" ಎಂದು ಗಟ್ಟಿಯಾಗಿ ಕೂಗಿಕೊಂಡರು. ಆಗ ಯೇಸು ನಿಂತು ಅವರನ್ನು ಕರೆದು, "ನಾನು ನಿಮಗೆ ಏನು ಮಾಡಬೇಕೆಂದು ಕೋರುತ್ತೀರಿ?" ಎಂದು ಕೇಳಿದನು. ಅವರು, "ಕರ್ತನೇ, ನಮ್ಮ ಕಣ್ಣುಗಳು ಕಾಣುವಂತೆ ಮಾಡು" ಅಂದರು. ಆಗ ಯೇಸು ಕನಿಕರಪಟ್ಟು, ಅವರ ಕಣ್ಣುಗಳನ್ನು ಮುಟ್ಟಿದನು. ಕೂಡಲೇ ಅವರು ದೃಷ್ಟಿಯನ್ನು ಹೊಂದಿಕೊಂಡು ಆತನನ್ನು ಹಿಂಬಾಲಿಸಿದರು.
ಯೇಸು ಕುರುಡನಿಗೆ ಕಣ್ಣುಕೊಟ್ಟದ್ದು
ಮತ್ತು ಅವರು ಬೇತ್ಸಾಯಿದ ಊರಿಗೆ ಬಂದರು. ಅಲ್ಲಿ ಜನರು ಒಬ್ಬ ಕುರುಡನನ್ನು ಯೇಸುವಿನ ಬಳಿಗೆ ಕರೆದುಕೊಂಡು ಬಂದು, ಇವನನ್ನು ಮುಟ್ಟಬೇಕು ಎಂದು ಆತನನ್ನು ಬೇಡಿಕೊಂಡರು. ಆತನು ಕುರುಡನ ಕೈ ಹಿಡಿದು ಊರ ಹೊರಗೆ ಕರೆದುಕೊಂಡು ಹೋಗಿ ಅವನ ಕಣ್ಣುಗಳ ಮೇಲೆ ಉಗುಳು ಹಚ್ಚಿ, ಅವನ ಮೇಲೆ ತನ್ನ ಕೈಗಳನ್ನಿಟ್ಟು, "ನಿನಗೆ ಏನಾದರೂ ಕಾಣುತ್ತದೆಯೋ?" ಎಂದು ಅವನನ್ನು ಕೇಳಿದನು. ಅವನು ತಲೆಯೆತ್ತಿ ನೋಡಿ, "ನನಗೆ ಜನರು ಕಾಣುತ್ತಾರೆ; ಆದರೆ ಅವರು ನಡೆದಾಡುವ ಮರಗಳಂತೆ ಕಾಣಿಸುತ್ತಿದ್ದಾರೆ" ಎಂದನು. ತನ್ನ ಕೈಗಳನ್ನು ಪುನಃ ಅವನ ಕಣ್ಣುಗಳ ಮೇಲಿಟ್ಟನು; ಆಗ ಅವನು ಕಣ್ಣರಳಿಸಿ ನೋಡಿ ಪೂರ್ಣ ದೃಷ್ಟಿಯನ್ನು ಹೊಂದಿದನು. ಅವನು ನೋಡಲು ಎಲ್ಲವೂ ಸ್ಪಷ್ಟವಾಗಿ ಕಾಣಿಸಿತು. ತರುವಾಯ ಆತನು, "ನೀನು ಊರೊಳಗೆ ಹೋಗಬೇಡ" ಎಂದು ಹೇಳಿ ಅವನನ್ನು ಅವನ ಮನೆಗೆ ಕಳುಹಿಸಿಬಿಟ್ಟನು.
ಒಬ್ಬ ಮೂಕನನ್ನೂ ಸ್ವಸ್ಥಪಡಿಸಿದ್ದು
ಅನಂತರ ಆತನು ತೂರ್ ಪಟ್ಟಣದ ಪ್ರಾಂತ್ಯಗಳನ್ನು ಬಿಟ್ಟು ಸೀದೋನ್ ಪಟ್ಟಣದ ಮಾರ್ಗವಾಗಿ ದೆಕಪೊಲಿಯ ಪ್ರಾಂತ್ಯಗಳನ್ನು ಹಾದು ಗಲಿಲಾಯ ಸಮುದ್ರದ ದಡಕ್ಕೆ ಬಂದನು. ಆಗ ಕೆಲವರು ತೊದಲು ಮಾತನಾಡುವ ಒಬ್ಬ ಕಿವುಡನನ್ನು ಆತನ ಬಳಿಗೆ ಕರೆದುಕೊಂಡು ಬಂದು, ಇವನ ಮೇಲೆ ನಿನ್ನ ಕೈಯಿಡಬೇಕು ಎಂದು ಆತನನ್ನು ಬೇಡಿಕೊಂಡರು. ಆತನು ಅವನನ್ನು ಜನರ ಗುಂಪಿನಿಂದ ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ, ತನ್ನ ಬೆರಳುಗಳನ್ನು ಅವನ ಕಿವಿಗಳಲ್ಲಿ ಇಟ್ಟನು ಮತ್ತು ಉಗುಳಿ ನಂತರ ಅವನ ನಾಲಿಗೆಯನ್ನು ಮುಟ್ಟಿ, ಆಕಾಶದ ಕಡೆಗೆ ನೋಡಿ ದೀರ್ಘವಾಗಿ ನಿಟ್ಟುಸಿರುಬಿಟ್ಟು ಅವನಿಗೆ, "ಎಪ್ಫಥಾ" ಎಂದು ಹೇಳಿದನು. ಆ ಶಬ್ದಕ್ಕೆ "ತೆರೆಯಲಿ" ಎಂದರ್ಥ. ಹೇಳುತ್ತಲೇ ಅವನ ಕಿವಿಗಳು ತೆರೆದವು; ಅವನ ನಾಲಿಗೆಯು ಸಡಿಲವಾಯಿತು; ಅವನು ಸ್ಪಷ್ಟವಾಗಿ ಮಾತನಾಡಿದನು. ಆಗ ಆತನು, ಇದನ್ನು ಯಾರಿಗೂ ತಿಳಿಸಬಾರದೆಂದು ಅವರಿಗೆ ಕಟ್ಟಪ್ಪಣೆ ಮಾಡಿದನು. ಆದರೆ ಎಷ್ಟು ಹೇಳಿದರೂ ಕೇಳದೆ ಅವರು ಮತ್ತಷ್ಟು ಹೆಚ್ಚಾಗಿ ಅದನ್ನು ಪ್ರಚಾರ ಮಾಡಿದರು. ಅವರು ಅತ್ಯಂತ ಆಶ್ಚರ್ಯಪಟ್ಟು, "ಆತನು ಎಲ್ಲವನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡುತ್ತಾನೆ" ಎಂದು ಅಂದುಕೊಂಡರು.
ಯೇಸು ಹಾಗೂ ಬಾರ್ತಿಮಾಯನೆಂಬ ಕುರುಡ
ತರುವಾಯ ಅವರು ಯೆರಿಕೋವಿಗೆ ಬಂದರು. ಯೇಸುವೂ ತನ್ನ ಶಿಷ್ಯರೂ ಬಹು ಜನರ ಗುಂಪಿನೊಂದಿಗೆ ಆ ಊರಿನಿಂದ ಹೊರಟುಹೋಗುತ್ತಿರುವಾಗ ತಿಮಾಯನ ಮಗನಾದ ಬಾರ್ತಿಮಾಯನು ದಾರಿಯ ಬದಿಯಲ್ಲಿ ಕುಳಿತಿದ್ದನು. ಅವನು ಒಬ್ಬ ಕುರುಡ ಭಿಕ್ಷುಕನಾಗಿದ್ದನು. ಈ ಮಾರ್ಗವಾಗಿ ಹೋಗುತ್ತಿರುವವನು ನಜರೇತಿನ ಯೇಸುವೆಂದು ಅವನು ಕೇಳಿದಾಗ ಅವನು, "ಯೇಸುವೇ, ದಾವೀದನ ಕುಮಾರನೇ, ನನ್ನನ್ನು ಕರುಣಿಸು" ಎಂದು ಕೂಗಿಕೊಳ್ಳುವುದಕ್ಕೆ ಪ್ರಾರಂಭಿಸಿದನು. ಅನೇಕರು, ಅವನಿಗೆ ಸುಮ್ಮನಿರು ಎಂದು ಗದರಿಸಲು ಅವನು, "ದಾವೀದನ ಕುಮಾರನೇ ನನ್ನನ್ನು ಕರುಣಿಸು" ಎಂದು ಮತ್ತಷ್ಟು ಕೂಗಿಕೊಂಡನು. ಆಗ ಯೇಸು ನಿಂತು, "ಅವನನ್ನು ಕರೆಯಿರಿ" ಅನ್ನಲು ಅವರು ಆ ಕುರುಡನನ್ನು ಕರೆದು, "ಧೈರ್ಯವಾಗಿರು, ಏಳು, ಯೇಸು ನಿನ್ನನ್ನು ಕರೆಯುತ್ತಾನೆ" ಅಂದರು. ಅವನು ತನ್ನ ಹೊದಿಕೆಯನ್ನು ತೆಗೆದುಹಾಕಿ ತಟ್ಟನೆ ಎದ್ದು ಯೇಸುವಿನ ಬಳಿಗೆ ಬಂದನು. ಯೇಸು ಅವನನ್ನು, "ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ" ಎಂದು ಕೇಳಲು ಆ ಕುರುಡನು, "ಗುರುವೇ, ನನಗೆ ಕಣ್ಣಿನ ದೃಷ್ಟಿ ಬರುವಂತೆ ಮಾಡಬೇಕು" ಅಂದನು. ಯೇಸು ಅವನಿಗೆ, "ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಗುಣಪಡಿಸಿದೆ" ಎಂದು ಹೇಳಿದನು. ಕೂಡಲೇ ಅವನಿಗೆ ಕಣ್ಣಿನ ದೃಷ್ಟಿ ಬಂದಿತು. ಅವನು ಆ ದಾರಿಯಲ್ಲಿ ಆತನನ್ನು ಹಿಂಬಾಲಿಸಿದನು.
ಯೇಸು ಒಬ್ಬ ಕುರುಡ ಭಿಕ್ಷುಕನನ್ನು ಸ್ವಸ್ಥಮಾಡಿದ್ದು
ಆತನು ಯೆರಿಕೋವಿನ ಸಮೀಪಕ್ಕೆ ಬಂದಾಗ ದಾರಿಯ ಬಳಿಯಲ್ಲಿ ಕುಳಿತು ಭಿಕ್ಷೆಬೇಡುತ್ತಿದ್ದ ಒಬ್ಬ ಕುರುಡನು, ಗುಂಪಾಗಿ ಹೋಗುತ್ತಿದ್ದ ಜನರ ಶಬ್ದವನ್ನು ಕೇಳಿ ಇದೇನು ಎಂದು ವಿಚಾರಿಸಿದನು. ಅವರು ಅವನಿಗೆ, ನಜರೇತಿನ ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾನೆಂದು ತಿಳಿಸಿದಾಗ, ಅವನು, "ಯೇಸುವೇ, ದಾವೀದನ ಕುಮಾರನೇ, ನನ್ನನ್ನು ಕರುಣಿಸು" ಎಂದು ಕೂಗಿಕೊಂಡನು. ಮುಂದೆ ಹೋಗುತ್ತಿದ್ದವರು ಸುಮ್ಮನಿರು ಎಂದು ಅವನನ್ನು ಗದರಿಸಲು ಅವನು, "ದಾವೀದನ ಕುಮಾರನೇ, ನನ್ನನ್ನು ಕರುಣಿಸು" ಎಂದು ಮತ್ತಷ್ಟು ಬೇಡಿಕೊಂಡನು. ಆಗ ಯೇಸು ನಿಂತು, ಅವನನ್ನು ತನ್ನ ಬಳಿಗೆ ಕರೆತರುವುದಕ್ಕೆ ಅಪ್ಪಣೆಕೊಟ್ಟನು. ಅವನು ಹತ್ತಿರಕ್ಕೆ ಬಂದಾಗ, ಆತನು ಅವನಿಗೆ, "ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ?" ಎಂದು ಕೇಳಲು, ಅವನು, "ನನಗೆ ಕಣ್ಣುಕಾಣುವಂತೆ ಮಾಡು ಕರ್ತನೇ" ಅಂದನು. ಯೇಸು ಅವನಿಗೆ, "ನಿನಗೆ ಕಣ್ಣುಕಾಣುವಂತಾಗಲಿ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿದೆ" ಎಂದು ಹೇಳಿದನು. ತಕ್ಷಣವೇ ಅವನಿಗೆ ಕಣ್ಣು ಕಾಣಿಸಿದವು, ಅವನು ದೇವರನ್ನು ಕೊಂಡಾಡುತ್ತಾ ಯೇಸುವಿನ ಹಿಂದೆ ಹೋದನು. ಜನರೆಲ್ಲರು ನಡೆದ ಸಂಗತಿಯನ್ನು ನೋಡಿ ದೇವರನ್ನು ಸ್ತುತಿಸಿದರು.
ಯೇಸು ಸಬ್ಬತ್ ದಿನದಲ್ಲಿ ಹುಟ್ಟುಕುರುಡನಿಗೆ ಕಣ್ಣುಕೊಟ್ಟಿದ್ದು
ಯೇಸು ಹಾದು ಹೋಗುತ್ತಿದ್ದಾಗ, ಹುಟ್ಟು ಕುರುಡನಾಗಿದ್ದ ಒಬ್ಬ ಮನುಷ್ಯನನ್ನು ಕಂಡನು. ಆತನ ಶಿಷ್ಯರು, "ಗುರುವೇ, ಇವನು ಕುರುಡನಾಗಿ ಹುಟ್ಟಿರುವುದಕ್ಕೆ ಯಾರು ಪಾಪಮಾಡಿದರು? ಇವನೋ ಅಥವಾ ಇವನ ತಂದೆತಾಯಿಗಳೋ?" ಎಂದು ಆತನನ್ನು ಕೇಳಿದರು. ಯೇಸು, "ಇವನಾಗಲಿ ಇವನ ತಂದೆತಾಯಿಗಳಾಗಲಿ ಪಾಪ ಮಾಡಲಿಲ್ಲ. ಆದರೆ ದೇವರ ಕ್ರಿಯೆಗಳು ಇವನಲ್ಲಿ ತೋರಿಬರುವುದಕ್ಕಾಗಿ ಹೀಗಾಯಿತು. ನನ್ನನ್ನು ಕಳುಹಿಸಿದಾತನ ಕ್ರಿಯೆಗಳನ್ನು ನಾವು ಹಗಲಿರುವಾಗಲೇ ಮಾಡಬೇಕು. ರಾತ್ರಿ ಬರುತ್ತದೆ, ಅದು ಬಂದಾಗ ಯಾರೂ ಕೆಲಸ ಮಾಡಲಾರರು. ನಾನು ಲೋಕದಲ್ಲಿರುವಾಗ ಲೋಕಕ್ಕೆ ಬೆಳಕಾಗಿದ್ದೇನೆ" ಎಂದನು. ಆತನು ಹೀಗೆ ಹೇಳಿ ನೆಲದ ಮೇಲೆ ಉಗುಳಿ ಆ ಉಗುಳಿನಿಂದ ಕೆಸರು ಮಾಡಿ, ಆ ಕೆಸರನ್ನು ಕುರುಡನ ಕಣ್ಣುಗಳಿಗೆ ಹಚ್ಚಿದನು. ಆತನು ಅವನಿಗೆ, "ನೀನು ಹೋಗಿ ಸಿಲೋವ (ಸಿಲೋವ ಎಂದರೆ ‘ಕಳುಹಿಸಲ್ಪಟ್ಟವನು’ ಎಂದರ್ಥ) ಕೊಳದಲ್ಲಿ ತೊಳೆದುಕೋ" ಎಂದನು. ಅವನು ಹೋಗಿ ತೊಳೆದುಕೊಂಡು ದೃಷ್ಟಿಯುಳ್ಳವನಾಗಿ ಬಂದನು.
Curas de paralíticos e enfermos
Paralíticos caminharam, leprosos ficaram limpos e todo tipo de doença foi curada pelo toque e pela palavra de Jesus.
ಆಗ ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಆತನಿಗೆ ಅಡ್ಡಬಿದ್ದು, "ಕರ್ತನೇ, ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ" ಅಂದನು. ಆತನು ಕೈಚಾಚಿ ಆತನನ್ನು ಮುಟ್ಟಿ, "ನನಗೆ ಮನಸ್ಸುಂಟು; ಶುದ್ಧನಾಗು" ಅಂದನು. ಕೂಡಲೆ ಅವನು ಕುಷ್ಠದಿಂದ ಶುದ್ಧನಾದನು. ಆಗ ಯೇಸು ಅವನಿಗೆ; "ನೋಡು, ಯಾರಿಗೂ ಹೇಳಬೇಡ; ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆ ನೇಮಿಸಿದ ಕಾಣಿಕೆಯನ್ನು ಕೊಡು;" ಅದು ಅವರಿಗೆ ಸಾಕ್ಷಿಯಾಗಲಿ ಎಂದು ಹೇಳಿದನು.
ಯೇಸು ಪಾರ್ಶ್ವವಾಯು ರೋಗಿಯ ಪಾಪವನ್ನು ಕ್ಷಮಿಸಿ ಸ್ವಸ್ಥಮಾಡಿದ್ದು
ಅಲ್ಲಿಗೆ ಯೇಸು ಬಂದಾಗ ಹಾಸಿಗೆಯ ಮೇಲೆ ಬಿದ್ದುಕೊಂಡಿದ್ದ ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ಹೊತ್ತುಕೊಂಡು ಬಂದರು. ಯೇಸು ರೋಗಿಯನ್ನು ಹೊತ್ತುಕೊಂಡು ಬಂದವರ ನಂಬಿಕೆಯನ್ನು ನೋಡಿ ಪಾರ್ಶ್ವವಾಯು ರೋಗಿಗೆ, "ಮಗನೇ ಧೈರ್ಯವಾಗಿರು, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ" ಎಂದು ಹೇಳಿದನು. ಅಲ್ಲಿದ್ದ ಶಾಸ್ತ್ರಿಗಳಲ್ಲಿ ಕೆಲವರು, "ಇವನು ದೇವದೂಷಣೆ ಮಾಡುತ್ತಾನೆಂದು" ತಮ್ಮತಮ್ಮೊಳಗೆ ಮಾತನಾಡಿಕೊಂಡರು. ಯೇಸು ಅವರ ಆಲೋಚನೆಗಳನ್ನು ತಿಳಿದು, "ನೀವು ಏಕೆ ನಿಮ್ಮ ಮನಸ್ಸಿನಲ್ಲಿ ದುರಾಲೋಚನೆಯನ್ನು ಮಾಡುತ್ತಿದ್ದೀರಿ? ಯಾವುದು ಸುಲಭ? ‘ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ’ ಎಂದು ಅನ್ನುವುದೋ? ಅಥವಾ ‘ಎದ್ದು ನಡೆ’ ಅನ್ನುವದೋ? ಆದರೆ ಪಾಪಗಳನ್ನು ಕ್ಷಮಿಸಿಬಿಡುವುದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬುದು ನಿಮಗೆ ತಿಳಿಯಬೇಕು" ಎಂದು ಹೇಳಿ ಪಾರ್ಶ್ವವಾಯು ರೋಗಿಗೆ, "ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು" ಅಂದನು. ಆಗ ಅವನು ಎದ್ದು ತನ್ನ ಮನೆಗೆ ಹೊರಟುಹೋದನು.
ಆಗ ಅಲ್ಲಿ ಕೈಬತ್ತಿದವನೊಬ್ಬನಿದ್ದನು. ಫರಿಸಾಯರು ಯೇಸುವಿನ ಮೇಲೆ ತಪ್ಪು ಹೊರಿಸಬೇಕೆಂದು ಆತನನ್ನು, "ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವುದು ನ್ಯಾಯವೋ?" ಎಂದು ಕೇಳಿದರು. ಅದಕ್ಕಾತನು, "ನಿಮ್ಮಲ್ಲಿ ಯಾರಿಗಾದರೂ ಒಂದೇ ಒಂದು ಕುರಿ ಇದ್ದು ಅದು ಸಬ್ಬತ್ ದಿನದಲ್ಲಿ ಗುಂಡಿಯೊಳಗೆ ಬಿದ್ದರೆ ಅವನು ಅದನ್ನು ಹಿಡಿದು ಮೇಲಕ್ಕೆ ಎತ್ತದೇ ಇರುವನೇ? ಕುರಿಗಿಂತ ಮನುಷ್ಯನು ಎಷ್ಟೋ ಮೌಲ್ಯವುಳ್ಳವನು. ಆದಕಾರಣ ಸಬ್ಬತ್ ದಿನದಲ್ಲಿ ಒಳ್ಳೆಯ ಕೆಲಸ ಮಾಡುವುದು ನ್ಯಾಯವಾದದ್ದೆ" ಎಂದು ಉತ್ತರ ಕೊಟ್ಟನು. ತರುವಾಯ ಯೇಸು ಆ ಮನುಷ್ಯನಿಗೆ "ನಿನ್ನ ಕೈ ಚಾಚು" ಎಂದು ಹೇಳಿದನು. ಅವನು ಚಾಚಿದನು. ಅದು ಸಂಪೂರ್ಣವಾಸಿಯಾಗಿ ಮತ್ತೊಂದು ಕೈಯಂತಾಯಿತು.
ಅಲ್ಲಿ ಸೀಮೋನನ ಅತ್ತೆ ಜ್ವರದಿಂದ ಮಲಗಿರಲಾಗಿ ಅವರು ಆಕೆಯ ಸಂಗತಿಯನ್ನು ಆತನಿಗೆ ತಿಳಿಸಿದರು. ಆತನು ಹತ್ತಿರಕ್ಕೆ ಬಂದು ಆಕೆಯ ಕೈಯನ್ನು ಹಿಡಿದು ಎಬ್ಬಿಸಲು ಜ್ವರವು ಆಕೆಯನ್ನು ಬಿಟ್ಟುಹೋಯಿತು; ಆಕೆಯು ಅವರಿಗೆ ಉಪಚಾರಮಾಡಿದಳು.
ಯೇಸು ಕುಷ್ಠರೋಗಿಯನ್ನು ಸ್ವಸ್ಥಮಾಡಿದ್ದು
ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಆತನ ಮುಂದೆ ಮೊಣಕಾಲೂರಿಕೊಂಡು, "ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ" ಎಂದು ಬೇಡಿಕೊಂಡನು.
ಯೇಸು ಕನಿಕರಪಟ್ಟು ತನ್ನ ಕೈ ಚಾಚಿ ಅವನನ್ನು ಮುಟ್ಟಿ, "ನನಗೆ ಮನಸ್ಸುಂಟು; ಶುದ್ಧನಾಗು" ಅಂದನು. ಕೂಡಲೆ ಅವನ ಕುಷ್ಠವು ಹೋಗಿ, ಅವನು ಶುದ್ಧನಾದನು.
ಅಷ್ಟರಲ್ಲಿ ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ತಂದರು; ನಾಲ್ಕು ಮಂದಿಯು ಆತನನ್ನು ಹೊತ್ತುಕೊಂಡಿದರು. ಜನರು ಗುಂಪಾಗಿದ್ದುದರಿಂದ ಅವರು ಆತನ ಹತ್ತಿರಕ್ಕೆ ಬರಲು ಸಾಧ್ಯವಾಗದೆ ಆತನು ನಿಂತ ಸ್ಥಳಕ್ಕೆ ಸರಿಯಾಗಿ ಮನೆಯ ಮೇಲ್ಛಾವಣಿಯನ್ನು ತೆರೆದು ಕಿಂಡಿಯೊಂದನ್ನು ಮಾಡಿ ಪಾರ್ಶ್ವವಾಯು ರೋಗಿಯನ್ನು ಮಲಗಿದ್ದ ಹಾಸಿಗೆಯ ಸಮೇತ ಕೆಳಗಿಳಿಸಿದರು. ಯೇಸು ಅವರ ನಂಬಿಕೆಯನ್ನು ನೋಡಿ ಆ ಪಾರ್ಶ್ವವಾಯು ರೋಗಿಗೆ, "ಮಗನೇ, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ" ಎಂದು ಹೇಳಿದನು. ಆದರೆ ಶಾಸ್ತ್ರಿಗಳಲ್ಲಿ ಕೆಲವರು ಅಲ್ಲಿ ಕುಳಿತುಕೊಂಡಿದ್ದು; "ಈತನು ಯಾಕೆ ಹೀಗೆ ಮಾತನಾಡುತ್ತಾನೆ? ಇದು ದೇವದೂಷಣೆ. ದೇವರೊಬ್ಬನೇ ಹೊರತು ಮತ್ತಾರು ಪಾಪಗಳನ್ನು ಕ್ಷಮಿಸಬಲ್ಲರು?" ಎಂದು ತಮ್ಮ ಮನಸ್ಸಿನಲ್ಲಿ ಆಲೋಚಿಸಿಕೊಳ್ಳುತ್ತಿದ್ದರು. ಹೀಗೆ ಆಲೋಚಿಸಿಕೊಳ್ಳುತ್ತಿದ್ದುದನ್ನು ಕೂಡಲೆ ಯೇಸು ತನ್ನ ಆತ್ಮದಲ್ಲಿ ತಿಳಿದುಕೊಂಡು ಅವರಿಗೆ, "ನೀವು ನಿಮ್ಮ ಮನಸ್ಸಿನಲ್ಲಿ ಯಾಕೆ ಹೀಗೆ ಯೋಚಿಸುತ್ತೀರಿ? ಯಾವುದು ಸುಲಭ? ಪಾರ್ಶ್ವವಾಯು ರೋಗಿಗೆ ‘ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅನ್ನುವುದೋ’ ಅಥವಾ ‘ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ’ ಅನ್ನುವುದೋ? ಆದರೆ ಪಾಪಗಳನ್ನು ಕ್ಷಮಿಸಿಬಿಡುವುದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬುದನ್ನು ನೀವು ತಿಳಿಯಬೇಕು" ಎಂದು ಹೇಳಿ ಪಾರ್ಶ್ವವಾಯು ರೋಗಿಯನ್ನು ನೋಡಿ "ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಿನ್ನ ಮನೆಗೆ ಹೋಗೆಂದು ನಿನಗೆ ಹೇಳುತ್ತೇನೆ" ಅಂದನು. ಅವನು ಕೂಡಲೆ ಎದ್ದು ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟುಹೋದನು. ಅದನ್ನು ನೋಡಿದವರೆಲ್ಲರು ಆಶ್ಚರ್ಯಚಕಿತರಾದರು, "ಇದುವರೆಗೆ ನಾವು ಇಂಥದನ್ನು ಎಂದಿಗೂ ನೋಡಿದ್ದೇ" ಇಲ್ಲವೆಂದು ಹೇಳುತ್ತಾ ದೇವರಿಗೆ ಮಹಿಮೆ ಸಲ್ಲಿಸಿದರು.
ಯೇಸು ಕೈ ಬತ್ತಿಹೋದ ಮನುಷ್ಯನನ್ನು ಸ್ವಸ್ಥಪಡಿಸಿದ್ದು
ಇನ್ನೊಂದು ಸಾರಿ ಯೇಸು ಸಭಾಮಂದಿರಕ್ಕೆ ಹೋದಾಗ ಅಲ್ಲಿ ಕೈ ಬತ್ತಿಹೋದ ಮನುಷ್ಯನೊಬ್ಬನಿದ್ದನು. ಕೆಲವರು ಯೇಸುವಿನ ಮೇಲೆ ತಪ್ಪುಹೊರಿಸುವುದಕ್ಕೆ, ಸಬ್ಬತ್ ದಿನದಲ್ಲಿ ಅವನನ್ನು ಸ್ವಸ್ಥಮಾಡುವನೋ ಏನೋ ಎಂದು ಆತನನ್ನು ಹೊಂಚುಹಾಕಿ ನೋಡುತ್ತಾ ಇದ್ದರು. ಆತನು ಕೈಬತ್ತಿದ್ದವನಿಗೆ, "ಎದ್ದು ನಡುವೆ ನಿಂತುಕೋ" ಎಂದು ಹೇಳಿದನು. ಆಗ ಅವರಿಗೆ, "ಸಬ್ಬತ್ ದಿನದಲ್ಲಿ ಧರ್ಮಸಮ್ಮತವಾದದು ಯಾವುದು? ಮೇಲನ್ನು ಮಾಡುವುದೋ, ಕೇಡನ್ನು ಮಾಡುವುದೋ? ಪ್ರಾಣವನ್ನು ಉಳಿಸುವುದೋ, ತೆಗೆಯುವುದೋ?" ಎಂದು ಹೇಳಲು ಅವರು ಸುಮ್ಮನಿದ್ದರು. ಆಗ ಯೇಸು ಅವರ ಹೃದಯ ಕಾಠಿಣ್ಯಕ್ಕಾಗಿ ದುಃಖಪಟ್ಟು, ಕೋಪದಿಂದ ಸುತ್ತಲೂ ಅವರನ್ನು ದೃಷ್ಟಿಸಿ ನೋಡಿ ಆ ಮನುಷ್ಯನಿಗೆ, "ನಿನ್ನ ಕೈ ಚಾಚು" ಎಂದು ಹೇಳಲು ಅವನು ಕೈ ಚಾಚಿದನು; ಅವನ ಕೈ ವಾಸಿಯಾಯಿತು.
ಯೇಸು ಕುಷ್ಠರೋಗಿಯನ್ನು ವಾಸಿಮಾಡಿದ್ದು
ಆತನು ಒಂದಾನೊಂದು ಊರಿನಲ್ಲಿದ್ದಾಗ ಮೈಯೆಲ್ಲಾ ಕುಷ್ಠರೋಗ ತುಂಬಿದ್ದ ಒಬ್ಬ ಮನುಷ್ಯನು ಯೇಸುವನ್ನು ಕಂಡು ಸಾಷ್ಟಾಂಗವೆರಗಿ, "ಕರ್ತನೇ, ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ" ಎಂದು ಬೇಡಿಕೊಂಡನು. ಆತನು ಕೈನೀಡಿ ಅವನನ್ನು ಮುಟ್ಟಿ, "ನನಗೆ ಮನಸ್ಸುಂಟು, ಶುದ್ಧನಾಗು" ಅಂದನು. ಕೂಡಲೆ ಅವನ ಕುಷ್ಠವು ವಾಸಿಯಾಯಿತು.
ಹೀಗಿರುವಲ್ಲಿ ಕೆಲವು ಮಂದಿ ಗಂಡಸರು ಒಬ್ಬ ಪಾರ್ಶ್ವವಾಯು ರೋಗಿಯನ್ನು ದೋಲಿಯಲ್ಲಿ ಹೊತ್ತುಕೊಂಡು ಬಂದರು. ಅವನನ್ನು ಒಳಗೆ ತೆಗೆದುಕೊಂಡು ಹೋಗಿ ಆತನ ಮುಂದೆ ಇರಿಸಬೇಕೆಂದು ಪ್ರಯತ್ನಿಸಿದರು. ಜನರ ಗುಂಪು ದಟ್ಟವಾಗಿದ್ದ ಕಾರಣ ಅವನನ್ನು ಒಳಗೆ ತೆಗೆದುಕೊಂಡುಹೋಗುವ ಮಾರ್ಗವನ್ನು ಕಾಣದೆ ಮನೆಯ ಮೇಲೆ ಹತ್ತಿ ಹಂಚುಗಳನ್ನು ತೆಗೆದು ಅವನನ್ನು ಹಾಸಿಗೆಯ ಸಹಿತವಾಗಿ ಜನರ ನಡುವೆ ಯೇಸುವಿನ ಮುಂದೆ ಇಳಿಸಿದರು. ಯೇಸು ಅವರ ನಂಬಿಕೆಯನ್ನು ನೋಡಿ, "ಸ್ನೇಹಿತನೇ, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ" ಅಂದನು.
ಅದಕ್ಕೆ ಆ ಶಾಸ್ತ್ರಿಗಳೂ ಮತ್ತು ಫರಿಸಾಯರೂ, "ದೇವದೂಷಣೆಯ ಮಾತನಾಡುವ ಇವನು ಎಷ್ಟರವನು? ಪಾಪಗಳನ್ನು ಕ್ಷಮಿಸಲು ದೇವರೊಬ್ಬನಿಂದ ಹೊರತು ಮತ್ತಾರಿಂದಾದೀತು?" ಎಂದು ಅಂದುಕೊಳ್ಳುತ್ತಿದ್ದರು.
ಆದರೆ ಅವರು ಹಾಗಂದುಕೊಳ್ಳುವುದನ್ನು ಯೇಸುವು ತಿಳಿದುಕೊಂಡು ಅವರಿಗೆ, "ನೀವು ನಿಮ್ಮ ಮನಸ್ಸಿನಲ್ಲಿ ಅಂದುಕೊಳ್ಳುವುದೇನು? ಯಾವುದು ಸುಲಭ? ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅನ್ನುವುದೋ? ಎದ್ದು ನಡೆ ಅನ್ನುವುದೋ? ಆದರೆ ಪಾಪಗಳನ್ನು ಕ್ಷಮಿಸುವುದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬುದು ನಿಮಗೆ ತಿಳಿಯಬೇಕು" ಎಂದು ಹೇಳಿ, ಆ ಪಾರ್ಶ್ವವಾಯು ರೋಗಿಯನ್ನು ನೋಡಿ, "ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು" ಎಂದು ಹೇಳಿದನು. ಕೂಡಲೆ ಅವನು ಅವರ ಮುಂದೆ ಎದ್ದು ತಾನು ಮಲಗಿದ್ದ ಹಾಸಿಗೆಯನ್ನು ಎತ್ತಿಕೊಂಡು ದೇವರನ್ನು ಕೊಂಡಾಡುತ್ತಾ ಮನೆಗೆ ಹೋದನು.
ಕೈ ಬತ್ತಿಹೋಗಿದ ಮನುಷ್ಯನನ್ನು ಸ್ವಸ್ಥಪಡಿಸಿದ್ದು
ಮತ್ತೊಂದು ಸಬ್ಬತ್ ದಿನದಲ್ಲಿ ಆತನು ಸಭಾಮಂದಿರಕ್ಕೆ ಹೋಗಿ ಉಪದೇಶಮಾಡುತ್ತಿರುವಾಗ, ಅಲ್ಲಿ ಬಲಗೈ ಬತ್ತಿದವನೊಬ್ಬನು ಇದ್ದನು. ಶಾಸ್ತ್ರಿಗಳೂ ಫರಿಸಾಯರೂ ಆತನ ಮೇಲೆ ತಪ್ಪುಹೊರಿಸುವುದಕ್ಕೆ ಕಾರಣ ಸಿಕ್ಕಬೇಕೆಂದು ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವನೋ ಇಲ್ಲವೋ ಎಂದು ಆತನನ್ನು ಹೊಂಚಿನೋಡುತ್ತಿದ್ದರು. ಆದರೆ ಆತನು ಅವರ ಯೋಚನೆಗಳನ್ನು ತಿಳಿದು ಕೈ ಬತ್ತಿಹೋಗಿದ್ದ ಆ ಮನುಷ್ಯನಿಗೆ, "ಎದ್ದು ನಡುವೆ ಬಂದು ನಿಂತುಕೋ" ಎಂದು ಹೇಳಿದನು. ಅವನು ಎದ್ದುಬಂದು ನಿಂತುಕೊಂಡನು. ಆಗ ಯೇಸು ಅವರಿಗೆ, "ನಿಮ್ಮನ್ನು ಒಂದು ಮಾತು ಕೇಳುತ್ತೇನೆ, ಸಬ್ಬತ್ ದಿನದಲ್ಲಿ ಯಾವುದನ್ನು ಮಾಡುವುದು ನ್ಯಾಯ? ಮೇಲನ್ನು ಮಾಡುವುದೋ ಅಥವಾ ಕೇಡನ್ನು ಮಾಡುವುದೋ? ಪ್ರಾಣವನ್ನು ಉಳಿಸುವುದೋ ಅಥವಾ ಹಾಳುಮಾಡುವುದೋ?" ಎಂದು ಕೇಳಿ, ಸುತ್ತಲೂ ಇದ್ದವರೆಲ್ಲರನ್ನೂ ನೋಡಿ ಆ ಮನುಷ್ಯನಿಗೆ, "ನಿನ್ನ ಕೈಚಾಚು" ಎಂದು ಹೇಳಿದನು. ಅವನು ಹಾಗೆಯೇ ಮಾಡಿದನು, ಕೈ ವಾಸಿಯಾಯಿತು.
ಯೇಸು ಶತಾಧಿಪತಿಯ ಆಳನ್ನು ಸ್ವಸ್ಥಮಾಡಿದ್ದು
ಆತನು ತನ್ನ ಮಾತುಗಳನ್ನೆಲ್ಲಾ ಜನರು ಕೇಳುವಂತೆ ಹೇಳಿ ಮುಗಿಸಿದ ಮೇಲೆ, ಕಪೆರ್ನೌಮಿಗೆ ಬಂದನು. ಅಲ್ಲಿ ದಂಡಿನ ಶತಾಧಿಪತಿಗೆ ಇಷ್ಟನಾದ ಒಬ್ಬ ಆಳು ಕ್ಷೇಮವಿಲ್ಲದೆ ಸಾಯುವ ಹಾಗಿದ್ದನು. ಅವನು ಯೇಸುವಿನ ಸುದ್ದಿಯನ್ನು ಕೇಳಿ ಆತನ ಬಳಿಗೆ ಬಂದು ನನ್ನ ಆಳನ್ನು ಸ್ವಸ್ಥಮಾಡಬೇಕೆಂದು ಆತನನ್ನು ಬೇಡಿಕೊಳ್ಳುವ ಹಾಗೆ ಯೆಹೂದ್ಯರ ಹಿರಿಯರನ್ನು ಕಳುಹಿಸಿದನು. ಅವರು ಯೇಸುವಿನ ಬಳಿಗೆ ಬಂದು, "ನಿನ್ನಿಂದ ಇಂಥ ಉಪಕಾರ ಹೊಂದುವುದಕ್ಕೆ ಅವನು ಯೋಗ್ಯನು, ಅವನು ನಮ್ಮ ದೇಶವನ್ನು ಪ್ರೀತಿಸಿ ಪ್ರಾರ್ಥನೆಗಾಗಿ ನಮಗೆ ಸಭಾಮಂದಿರವನ್ನು ಕಟ್ಟಿಸಿಕೊಟ್ಟಿರುವನು" ಎಂದು ಆತನನ್ನು ಬಹಳವಾಗಿ ಬೇಡಿಕೊಳ್ಳಲು, ಯೇಸು ಅವರ ಸಂಗಡ ಹೋದನು. ಆತನು ಇನ್ನೂ ಮನೆಗೆ ಮುಟ್ಟುವುದಕ್ಕೆ ಸ್ವಲ್ಪ ದೂರವಿರುವಾಗಲೇ ಶತಾಧಿಪತಿಯು ಅವನ ಸ್ನೇಹಿತರನ್ನು ಆತನ ಬಳಿಗೆ ಕಳುಹಿಸಿ, "ಕರ್ತನೇ, ತೊಂದರೆ ತೆಗೆದುಕೊಳ್ಳಬೇಡ. ನೀವು ನನ್ನ ಮನೆಗೆ ಬರತಕ್ಕಷ್ಟು ಯೋಗ್ಯತೆ ನನಗಿಲ್ಲ. ಈ ಕಾರಣದಿಂದ ನಾನು ನಿಮ್ಮ ಬಳಿಗೆ ಬರುವುದಕ್ಕೆ ನನ್ನನ್ನೇ ಯೋಗ್ಯನೆಂದು ಎಣಿಸಿಕೊಳ್ಳಲಿಲ್ಲ. ಆದರೆ ನೀವು ಒಂದು ಮಾತು ಹೇಳಿದರೆ ಸಾಕು, ನನ್ನ ಆಳಿಗೆ ಗುಣವಾಗುವುದು. ನಾನು ಸಹ ಮತ್ತೊಬ್ಬರ ಅಧಿಕಾರದ ಕೆಳಗಿರುವವನು; ನನ್ನ ಕೈ ಕೆಳಗೆ ಸಿಪಾಯಿಗಳಿದ್ದಾರೆ. ನಾನು ಅವರಲ್ಲಿ ಒಬ್ಬನಿಗೆ ‘ಹೋಗು’ ಎಂದು ಹೇಳಿದರೆ ಅವನು ಹೋಗುತ್ತಾನೆ. ಮತ್ತೊಬ್ಬನಿಗೆ ‘ಬಾ’ ಎಂದು ಹೇಳಿದರೆ ಅವನು ಬರುತ್ತಾನೆ; ನನ್ನ ಆಳಿಗೆ ‘ಇಂಥಿಂಥದನ್ನು ಮಾಡು’ ಎಂದು ಹೇಳಿದರೆ ಮಾಡುತ್ತಾನೆ" ಎಂಬುದಾಗಿ ಹೇಳಿಸಿದನು.
ಯೇಸು ಈ ಮಾತನ್ನು ಕೇಳಿ ಅವನ ವಿಷಯದಲ್ಲಿ ಆಶ್ಚರ್ಯಪಟ್ಟು ತನ್ನ ಹಿಂದೆ ಬರುತ್ತಿರುವ ಗುಂಪನ್ನು ನೋಡಿ, "ನಾನು ಇಂಥ ದೊಡ್ಡ ನಂಬಿಕೆಯನ್ನು ಇಸ್ರಾಯೇಲ್ ಜನರಲ್ಲೂ ಕಾಣಲಿಲ್ಲವೆಂದು ನಿಮಗೆ ಹೇಳುತ್ತೇನೆ" ಅಂದನು. ತರುವಾಯ ಆ ಶತಾಧಿಪತಿಯ ಕಡೆಯಿಂದ ಬಂದವರು ತಿರುಗಿ ಮನೆಗೆ ಹೋಗಿ ಆಳು ಸ್ವಸ್ಥನಾಗಿರುವುದನ್ನು ಕಂಡರು.
ಅಲ್ಲಿ ಹದಿನೆಂಟು ವರ್ಷಗಳಿಂದ ದುರಾತ್ಮನಿಂದ ಬಾಧಿತಳಾಗಿ ಬೆನ್ನು ಬಗ್ಗಿ ಹೋಗಿ ಗೂನಿಯಾಗಿದ್ದು ಸ್ವಲ್ಪವಾದರೂ ಮೈಯನ್ನು ಮೇಲಕ್ಕೆ ಎತ್ತಲಾರದೆ ಇದ್ದ ಒಬ್ಬ ಹೆಂಗಸು ಇದ್ದಳು. ಯೇಸು ಆಕೆಯನ್ನು ನೋಡಿ ಹತ್ತಿರಕ್ಕೆ ಕರೆದು ಆಕೆಗೆ, "ನಿನ್ನ ರೋಗವು ಬಿಡುಗಡೆಯಾಯಿತು" ಎಂದು ಹೇಳಿ ಆಕೆಯ ಮೇಲೆ ತನ್ನ ಕೈಗಳನ್ನಿಟ್ಟನು. ಇಟ್ಟಕೂಡಲೆ ಆಕೆ ನೆಟ್ಟಗಾದಳು, ದೇವರನ್ನು ಕೊಂಡಾಡಿದಳು.
ಯೇಸು ಜಲೋದರ ರೋಗಿಯನ್ನು ಸ್ವಸ್ಥಪಡಿಸಿದ್ದು
ಆತನು ಸಬ್ಬತ್ ದಿನದಲ್ಲಿ ಫರಿಸಾಯರ ಮುಖ್ಯಸ್ಥರಲ್ಲಿ ಒಬ್ಬನ ಮನೆಗೆ ಊಟಕ್ಕೆ ಹೋದಾಗ ಅವರು ಆತನನ್ನು ಹೊಂಚಿನೋಡುತ್ತಿದ್ದರು. ಆಗ ಯೇಸು ತನ್ನೆದುರಿಗೆ ಜಲೋದರವುಳ್ಳ ಒಬ್ಬ ಮನುಷ್ಯನಿರುವುದನ್ನು ನೋಡಿ, "ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವುದು ಸರಿಯೋ ಅಥವಾ ಸರಿಯಲ್ಲವೋ?" ಎಂದು ಧರ್ಮೋಪದೇಶಕರನ್ನೂ ಫರಿಸಾಯರನ್ನೂ ಕೇಳಿದನು. ಅವರು ಸುಮ್ಮನೇ ಇರಲು ಆತನು ಅವನ ಕೈ ಹಿಡಿದು ಅವನನ್ನು ವಾಸಿಮಾಡಿ ಕಳುಹಿಸಿ,
ಯೇಸು ಹತ್ತುಮಂದಿ ಕುಷ್ಠರೋಗಿಗಳನ್ನು ಸ್ವಸ್ಥಮಾಡಿದ್ದು
ಯೇಸು ಯೆರೂಸಲೇಮಿಗೆ ಪ್ರಯಾಣಮಾಡುವಾಗ ಸಮಾರ್ಯ, ಗಲಿಲಾಯ ಸೀಮೆಗಳ ನಡುವೆ ಹಾದುಹೋದನು. ಒಂದು ಹಳ್ಳಿಗೆ ಬಂದಾಗ ಹತ್ತುಮಂದಿ ಕುಷ್ಠರೋಗಿಗಳು ಆತನ ಎದುರಿಗೆ ಬಂದು ದೂರದಲ್ಲಿ ನಿಂತು, "ಯೇಸುವೇ, ಗುರುವೇ, ನಮ್ಮ ಮೇಲೆ ದಯವಿಡು" ಎಂದು ಕೂಗಿ ಹೇಳಿದರು. ಆತನು ಅವರನ್ನು ನೋಡಿ, "ನೀವು ಹೋಗಿ ಯಾಜಕರಿಗೆ ನಿಮ್ಮ ಮೈ ತೋರಿಸಿಕೊಳ್ಳಿರಿ" ಎಂದು ಹೇಳಿದನು. ಅವರು ಹೋಗುತ್ತಿರುವಾಗಲೇ ಶುದ್ಧರಾದರು. ಅವರಲ್ಲಿ ಒಬ್ಬನು ತನಗೆ ಗುಣವಾದದ್ದನ್ನು ನೋಡಿ, ಮಹಾಶಬ್ದದಿಂದ ದೇವರನ್ನು ಕೊಂಡಾಡುತ್ತಾ ಹಿಂತಿರುಗಿ ಬಂದು, ಯೇಸುವಿನ ಪಾದಗಳಿಗೆ ಅಡ್ಡಬಿದ್ದು, ಆತನಿಗೆ ಕೃತಜ್ಞತಾಸುತ್ತಿಯನ್ನು ಸಲ್ಲಿಸಿದನು. ಅವನು ಸಮಾರ್ಯದವನು. ಯೇಸು ಇದನ್ನು ನೋಡಿ, "ಹತ್ತು ಮಂದಿ ಶುದ್ಧರಾದರಲ್ಲವೇ. ಮಿಕ್ಕ ಒಂಭತ್ತು ಮಂದಿ ಎಲ್ಲಿ? ದೇವರನ್ನು ಸ್ತುತಿಸುವುದಕ್ಕೆ ಈ ಅನ್ಯದೇಶದವನೇ ಹೊರತು ಇನ್ನಾರೂ ಹಿಂತಿರುಗಿ ಬರಲಿಲ್ಲವೇ?" ಎಂದು ಹೇಳಿ, ಅವನಿಗೆ, "ಎದ್ದು ಹೋಗು, ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥಮಾಡಿಯದೆ" ಎಂದು ಹೇಳಿದನು.
ಯೇಸು ಸಬ್ಬತ್ ದಿನದಲ್ಲಿ ಒಬ್ಬ ರೋಗಿಯನ್ನು ಸ್ವಸ್ಥಮಾಡಿದ್ದರಿಂದ ಯೆಹೂದ್ಯರು ಆತನನ್ನು ವಿರೋಧಿಸಿದ್ದು
ಇದಾದ ಮೇಲೆ ಯೆಹೂದ್ಯರ ಒಂದು ಜಾತ್ರೆ ಇದ್ದುದರಿಂದ ಯೇಸು ಯೆರೂಸಲೇಮಿಗೆ ಹೋದನು. ಅಲ್ಲಿ ಕುರಿಬಾಗಿಲು ಎಂಬ ಸ್ಥಳದ ಬಳಿ ಐದು ಮಂಟಪಗಳಿಂದ ಕೂಡಿದ ಒಂದು ಕೊಳವಿದೆ. ಅದನ್ನು ಇಬ್ರಿಯ ಭಾಷೆಯಲ್ಲಿ ಬೇತ್ಸಥಾ ಎಂದು ಕರೆಯುತ್ತಾರೆ. ಇವುಗಳಲ್ಲಿ ಅಸ್ವಸ್ಥರೂ, ರೋಗಿಗಳೂ, ಕುರುಡರೂ, ಕುಂಟರೂ, ಪಾರ್ಶ್ವವಾಯು ಪೀಡಿತರು ಮೊದಲಾದ ಅನೇಕ ರೋಗಿಗಳು ಅಲ್ಲಿ ಬಿದ್ದುಕೊಂಡಿರುತ್ತಿದ್ದರು. (ನೀರು ಕಲಕುವುದನ್ನು ಕಾದುಕೊಂಡು ಅಲ್ಲಿ ಬಿದ್ದುಕೊಂಡಿರುತ್ತಿದ್ದರು. ಆಗಾಗ ಒಬ್ಬ ದೂತನು ಬಂದು ಕೊಳದ ನೀರನ್ನು ಕಲಕಿಹೊಗುತ್ತಿದ್ದನು. ಆಗ ಮೊದಲು ಯಾರು ಕೊಳದೊಳಗೆ ಇಳಿಯುತ್ತಿದ್ದರೋ ಅವರ ರೋಗವು ವಾಸಿಯಾಗುತ್ತಿತ್ತು.) ಅಲ್ಲಿ ಮೂವತ್ತೆಂಟು ವರ್ಷಗಳಿಂದ ರೋಗಿಯಾಗಿದ್ದ ಒಬ್ಬ ಮನುಷ್ಯನಿದ್ದನು. ಅವನು ಬಿದ್ದುಕೊಂಡಿರುವುದನ್ನು ಯೇಸು ನೋಡಿ ಇವನಿಗೆ ಹೀಗಾಗಿ ಬಹು ಕಾಲವಾಗಿದೆ ಎಂದು ಅರಿತು ಅವನಿಗೆ "ನಿನಗೆ ಗುಣಹೊಂದಲು ಮನಸ್ಸಿದೆಯೋ?" ಎಂದು ಕೇಳಿದನು. ಅದಕ್ಕೆ ಆ ರೋಗಿಯು "ಆಯ್ಯಾ, ನೀರು ಉಕ್ಕುವಾಗ ನನ್ನನ್ನು ಕೊಳದೊಳಗೆ ಇಳಿಸುವುದಕ್ಕೆ ಯಾರೂ ಇಲ್ಲ. ನಾನು ಹೋಗುವುದರೊಳಗೆ ನನಗಿಂತ ಮೊದಲು ಮತ್ತೊಬ್ಬನು ಇಳಿಯುತ್ತಾನೆ" ಎಂದನು. ಯೇಸು ಅವನಿಗೆ, "ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ" ಎಂದು ಹೇಳಿದನು. ಕೂಡಲೇ ಆ ಮನುಷ್ಯನು ಸ್ವಸ್ಥನಾಗಿ ತನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆದನು. ಅಂದು ಸಬ್ಬತ್ ದಿನವಾಗಿತ್ತು,
ಹೀಗಿರಲಾಗಿ, ಯೇಸು ತಾನು ನೀರನ್ನು ದ್ರಾಕ್ಷಾರಸವನ್ನಾಗಿ ಮಾಡಿದ ಗಲಿಲಾಯದ ಕಾನಾ ಊರಿಗೆ ಹಿಂತಿರುಗಿ ಬಂದನು. ಆಗ ಕಪೆರ್ನೌಮಿನಲ್ಲಿದ್ದ ಅರಮನೆಯ ಒಬ್ಬ ಅಧಿಕಾರಿಯ ಮಗನು ಅಸ್ವಸ್ಥನಾಗಿದ್ದನು. ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದ ಸುದ್ದಿಯನ್ನು ಆ ಅಧಿಕಾರಿಯು ಕೇಳಿದಾಗ ತನ್ನ ಮಗನು ಸಾಯುವ ಸ್ಥಿತಿಯಲ್ಲಿದುದ್ದರಿಂದ ಯೇಸುವಿನ ಬಳಿಗೆ ಹೋಗಿ, "ನೀನು ಬಂದು ನನ್ನ ಮಗನನ್ನು ಸ್ವಸ್ಥಮಾಡು" ಎಂದು ಬೇಡಿಕೊಂಡನು. ಯೇಸು ಅವನಿಗೆ "ನೀವು ಸೂಚಕ ಕಾರ್ಯಗಳನ್ನೂ ಮತ್ತು ಅದ್ಭುತ ಕಾರ್ಯಗಳನ್ನೂ ನೋಡದಿದ್ದರೆ ನಂಬುವುದೇ ಇಲ್ಲ" ಎಂದು ಹೇಳಿದನು. ಆ ಅರಮನೆಯ ಅಧಿಕಾರಿಯು "ಆಯ್ಯಾ, ನನ್ನ ಮಗನು ಸಾಯುವುದಕ್ಕೆ ಮುಂಚೆ ನೀನು ಬರಬೇಕು" ಅನ್ನಲು ಯೇಸು ಅವನಿಗೆ "ಹೋಗು ನಿನ್ನ ಮಗನು ಬದುಕುತ್ತಾನೆ" ಎಂದು ಹೇಳಿದನು. ಆ ಮನುಷ್ಯನು ಯೇಸು ತನಗೆ ಹೇಳಿದ ಮಾತನ್ನು ನಂಬಿ ಹೊರಟು ಹೋದನು. ಅವನು ಇನ್ನೂ ಘಟ್ಟಾ ಇಳಿದು ಹೋಗುತ್ತಿರುವಾಗಲೇ ಅವನ ಆಳುಗಳು ಅವನೆದುರಿಗೆ ಬಂದು ಅವನ ಮಗನು ಬದುಕಿರುವುದಾಗಿ ಅವನಿಗೆ ಹೇಳಿದರು. ಅವನು ಎಷ್ಟು ಘಂಟೆಯಲ್ಲಿ ಚೇತರಿಸಿಕೊಂಡನು ಎಂದು ಅವರನ್ನು ಕೇಳಿದಾಗ ಅವರು, "ನಿನ್ನೆ ಮಧ್ಯಾಹ್ನ ಒಂದು ಘಂಟೆಗೆ ಜ್ವರವು ಅವನನ್ನು ಬಿಟ್ಟಿತು" ಎಂದರು. ಆಗ "ನಿನ್ನ ಮಗನು ಬದುಕುತ್ತಾನೆ" ಎಂದು ಯೇಸು ತನಗೆ ಹೇಳಿದ ತಾಸಿನಲ್ಲಿಯೇ ಅದು ಸಂಭವಿಸಿತೆಂದು ಆ ತಂದೆಯು ತಿಳಿದುಕೊಂಡದ್ದರಿಂದ ಅವನೂ ಅವನ ಮನೆಯವರೆಲ್ಲರೂ ಯೇಸುವನ್ನು ನಂಬಿದರು. ಇದು ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದ ಮೇಲೆ ಮಾಡಿದ ಎರಡನೆಯ ಸೂಚಕಕಾರ್ಯ.
A mulher com fluxo de sangue
Uma mulher que sofria há doze anos tocou a orla do manto de Jesus e foi curada instantaneamente pela sua fé.
ಆಗ ಹನ್ನೆರಡು ವರ್ಷದಿಂದ ರಕ್ತಕುಸುಮ ರೋಗವಿದ್ದ ಒಬ್ಬ ಹೆಂಗಸು, "ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ಸ್ವಸ್ಥಳಾಗುವೆ ಎಂದು ಮನಸ್ಸಿನಲ್ಲಿ" ಅಂದುಕೊಂಡು ಹಿಂದಿನಿಂದ ಬಂದು ಯೇಸುವಿನ ಉಡುಪಿನ ಅಂಚನ್ನು ಮುಟ್ಟಿದಳು. ಆಗ ಯೇಸು ಹಿಂತಿರುಗಿ ಆಕೆಯನ್ನು ನೋಡಿ, "ಮಗಳೇ, ಧೈರ್ಯವಾಗಿರು; ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು" ಅಂದನು. ಆ ಕ್ಷಣವೇ ಆ ಹೆಂಗಸು ಸ್ವಸ್ಥಳಾದಳು.
ಆಗ ಅಲ್ಲಿ ಹನ್ನೆರಡು ವರ್ಷದಿಂದ ರಕ್ತಕುಸುಮ ರೋಗವಿದ್ದ ಒಬ್ಬ ಹೆಂಗಸು ಇದ್ದಳು. ಅನೇಕ ವೈದ್ಯರ ಚಿಕಿತ್ಸೆಯಿಂದ ಆಕೆಯು ಬಹು ಕಷ್ಟವನ್ನು ಅನುಭವಿಸಿ, ಕೈಯಲ್ಲಿದ್ದ ಹಣವನ್ನೆಲ್ಲಾ ವ್ಯಯಮಾಡಿದ್ದರೂ ಅವಳ ರೋಗ ಮಾತ್ರ ಹೆಚ್ಚುತ್ತಾ ಬಂದಿತ್ತೇ ಹೊರತು ಸ್ವಲ್ಪವೂ ಗುಣಮುಖ ಆಗುತ್ತಿರಲಿಲ್ಲ.
ಆ ಹೆಂಗಸು ಯೇಸುವಿನ ಸಮಾಚಾರವನ್ನು ಕೇಳಿದ್ದರಿಂದ, "ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ಸ್ವಸ್ಥಳಾಗುವೆನು" ಎಂದು ಆಲೋಚಿಸಿ ಗುಂಪಿನಲ್ಲಿ ಹಿಂದಿನಿಂದ ಬಂದು ಆತನ ಉಡುಪನ್ನು ಮುಟ್ಟಿದಳು. ಮುಟ್ಟಿದ ಕೂಡಲೆ ಆಕೆಯ ರಕ್ತಸ್ರಾವವು ನಿಂತುಹೋದುದರಿಂದ ಆಕೆಯು, ನನ್ನನ್ನು ಕಾಡಿದ ರೋಗವು ಹೋಗಿ ನನಗೆ ಗುಣವಾಯಿತು ಎಂದು ತನ್ನ ಮನಸ್ಸಿನಲ್ಲಿ ತಿಳಿದುಕೊಂಡಳು.
ಆಗ ಹನ್ನೆರಡು ವರ್ಷದಿಂದ ರಕ್ತಸ್ರಾವ ರೋಗವಿದ್ದ ಒಬ್ಬ ಹೆಂಗಸು ಅಲ್ಲಿಗೆ ಬಂದಿದ್ದಳು. ಆಕೆಯು ತನ್ನ ಬಳಿ ಇದ್ದ ಹಣವನ್ನೆಲ್ಲಾ ವೆಚ್ಚಮಾಡಿದರೂ ಒಬ್ಬ ವೈದ್ಯರಿಂದಲೂ ಗುಣಹೊಂದಲಾರದೆ ಇದ್ದಳು. ಆಕೆಯು ಹಿಂದಿನಿಂದ ಬಂದು ಆತನ ಅಂಗಿಯ ಅಂಚನ್ನು ಮುಟ್ಟಿದಳು; ಮುಟ್ಟುತ್ತಲೇ ಆಕೆಗೆ ರಕ್ತಸ್ರಾವವಾಗುವುದು ನಿಂತಿತು. ಆಗ ಯೇಸುವು, "ನನ್ನನ್ನು ಮುಟ್ಟಿದವರಾರು?" ಎಂದು ಕೇಳಲು ಎಲ್ಲರೂ, ನಾನಲ್ಲ, ನಾನಲ್ಲ ಅನ್ನಲು ಪೇತ್ರನು, "ಗುರುವೇ, ಎಷ್ಟೋ ಜನರು ನಿನ್ನನ್ನು ಮೈಮೇಲೆ ಬೀಳುತ್ತಾ ನೂಕುತ್ತಿದ್ದಾರಲ್ಲಾ" ಅಂದನು. ಆದರೆ ಯೇಸುವು, "ಯಾರೋ ಒಬ್ಬರು ನನ್ನನ್ನು ಮುಟ್ಟಿದರು; ನನ್ನಿಂದ ಶಕ್ತಿಯು ಹೊರಟಿತೆಂಬುದು ನನಗೆ ಗೊತ್ತಾಯಿತು" ಅಂದಾಗ, ಆ ಹೆಂಗಸು ತಾನು ಮರೆಯಾಗಿಲ್ಲವೆಂದು ತಿಳಿದು ನಡುಗುತ್ತಾ ಬಂದು ಯೇಸುವಿಗೆ ಅಡ್ಡಬಿದ್ದು ತಾನು ಇಂಥ ಕಾರಣದಿಂದ ಮುಟ್ಟಿದೆನೆಂತಲೂ ಮುಟ್ಟಿದ ಕೂಡಲೆ ತನಗೆ ವಾಸಿಯಾಯಿತೆಂದೂ ಎಲ್ಲರ ಮುಂದೆ ತಿಳಿಸಿದಳು. ಯೇಸು ಆಕೆಗೆ, "ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು; ಸಮಾಧಾನದಿಂದ ಹೋಗು" ಎಂದು ಹೇಳಿದನು.
Ressurreições
Jesus ressuscitou mortos — a filha de Jairo, o filho da viúva de Naim e Lázaro. Ele é Senhor sobre a morte.
ಯೇಸು ಒಬ್ಬ ಹುಡುಗಿಯನ್ನು ಬದುಕಿಸಿದ್ದು; ಇನ್ನೂ ಕೆಲವು ಅದ್ಭುತಗಳನ್ನು ನಡೆಸಿದ್ದು
ಹೀಗೆ ಯೇಸು ಅವರೊಂದಿಗೆ ಮಾತನಾಡುತ್ತಿರುವಾಗ ಒಬ್ಬ ಅಧಿಕಾರಿಯು ಬಂದು ಆತನಿಗೆ ಅಡ್ಡಬಿದ್ದು, "ನನ್ನ ಮಗಳು ಈಗಲೇ ತೀರಿಹೋದಳು; ಆದಾಗ್ಯೂ ನೀನು ಬಂದು ಆಕೆಯ ಮೇಲೆ ಕೈ ಇಟ್ಟರೆ ಬದುಕುವಳು" ಎಂದು ಬೇಡಿಕೊಂಡನು. ಯೇಸು ಎದ್ದು ಆ ಅಧಿಕಾರಿಯ ಹಿಂದೆ ಹೋಗುವಾಗ ಆತನ ಶಿಷ್ಯರು ಸಹ ಆತನನ್ನು ಹಿಂಬಾಲಿಸಿದರು.
ಯೇಸು ಆ ಅಧಿಕಾರಿಯ ಮನೆಗೆ ಬಂದಾಗ ಕೊಳಲು ಊದುವವರನ್ನೂ ಗದ್ದಲ ಮಾಡುವ ಜನರ ಗುಂಪನ್ನೂ ಕಂಡು ಅವರಿಗೆ, "ಹೊರಗೆ ಹೋಗಿರಿ; ಹುಡುಗಿ ಸತ್ತಿಲ್ಲ ನಿದ್ರಿಸುತ್ತಿದ್ದಾಳೆ" ಅಂದನು. ಅದಕ್ಕೆ ಅವರು ಆತನನ್ನು ಪರಿಹಾಸ್ಯ ಮಾಡಿದರು. ಜನರನ್ನು ಹೊರಕ್ಕೆ ಕಳುಹಿಸಿದ ಮೇಲೆ ಆತನು ಒಳಗೆ ಹೋಗಿ ಆಕೆಯ ಕೈ ಹಿಡಿಯಲು ಆಕೆ ಎದ್ದಳು.
ಆಗ ಸಭಾಮಂದಿರದ ಅಧಿಕಾರಿಗಳಲ್ಲಿ ಒಬ್ಬನಾದ ಯಾಯೀರನೆಂಬವನು ಬಂದು ಯೇಸುವನ್ನು ಕಂಡು ಆತನ ಪಾದಗಳಿಗೆ ಬಿದ್ದು, "ನನ್ನ ಚಿಕ್ಕ ಮಗಳು ಈಗ ಸಾವಿನ ಅಂಚಿನಲ್ಲಿದ್ದಾಳೆ; ಆಕೆಯು ಗುಣಹೊಂದಿ ಬದುಕುವಂತೆ ದಯಮಾಡಿ ನೀನು ಬಂದು ಆಕೆಯ ಮೇಲೆ ನಿನ್ನ ಕೈಯಿಡಬೇಕು" ಎಂದು ಆತನನ್ನು ಬಹಳವಾಗಿ ಬೇಡಿಕೊಂಡನು. ಯೇಸುವು ಅವನ ಸಂಗಡ ಹೋದನು; ಮತ್ತು ಬಹು ಜನರು ಆತನನ್ನು ನೂಕುತ್ತಾ ಹಿಂಬಾಲಿಸಿದರು.
ಅವರು ಆ ಸಭಾಮಂದಿರದ ಅಧಿಕಾರಿಯ ಮನೆಗೆ ಬಂದಾಗ ಅಲ್ಲಿ ಜನರ ಗದ್ದಲವನ್ನೂ ಕೆಲವರು ಅಳುವುದನ್ನೂ ಗೋಳಾಡುವುದನ್ನೂ ಆತನು ಕಂಡನು.
ಆತನು ಒಳಕ್ಕೆ ಹೋಗಿ, "ನೀವು ಗದ್ದಲ ಮಾಡುವುದೂ ಅಳುವುದೂ ಯಾಕೆ? ಹುಡುಗಿ ಸತ್ತಿಲ್ಲ; ಅವಳು ನಿದ್ದೆಮಾಡುತ್ತಿದ್ದಾಳೆ" ಅನ್ನಲು, ಅವರು ಆತನನ್ನು ಪರಿಹಾಸ್ಯಮಾಡಿದರು. ಆದರೆ ಆತನು ಎಲ್ಲರನ್ನು ಹೊರಕ್ಕೆ ಕಳುಹಿಸಿ ಆ ಹುಡುಗಿಯ ತಂದೆತಾಯಿಗಳನ್ನೂ ತನ್ನೊಂದಿಗಿದ್ದವರನ್ನೂ ಹುಡುಗಿಯಿದ್ದಲ್ಲಿಗೆ ಕರೆದುಕೊಂಡು ಹೋಗಿ,
ಅವಳ ಕೈಹಿಡಿದು, "ತಲಿಥಾಕೂಮ್" ಅಂದನು. ಈ ಮಾತಿಗೆ "ಅಮ್ಮಣ್ಣೀ, ಎದ್ದೇಳು ಎಂದು ನಾನು ಹೇಳುತ್ತೇನೆ" ಎಂದರ್ಥ. ಕೂಡಲೆ ಆ ಹುಡುಗಿ ಎದ್ದು ನಡೆದಾಡಿದಳು; ಆಕೆಯು ಹನ್ನೆರಡು ವರ್ಷ ವಯಸ್ಸಿನವಳು.
ಯೇಸು ತಮ್ಮ ಬೋಧನೆಯ ಮುಂದುವರಿಸುತ್ತಾ, "ಈ ಕಾಲದ ಜನರನ್ನು ಯಾರಿಗೆ ಹೋಲಿಸಲಿ? ಅವರು ಯಾರನ್ನು ಹೋಲುತ್ತಾರೆ? ಪೇಟೆಯಲ್ಲಿ ಕುಳಿತುಕೊಂಡು, ‘ನಾವು ನಿಮಗೋಸ್ಕರ ಕೊಳಲೂದಿದೆವು, ನೀವು ಕುಣಿಯಲಿಲ್ಲ; ಗೋಳಾಡಿದೆವು, ನೀವು ಅಳಲಿಲ್ಲ’ ಎಂದು ಒಬ್ಬರಿಗೊಬ್ಬರು ಕೂಗಿ ಹೇಳುವಂಥ ಮಕ್ಕಳನ್ನು ಹೋಲುತ್ತಾರೆ. ಏಕೆಂದರೆ ಸ್ನಾನಿಕನಾದ ಯೋಹಾನನು ಬಂದಿದ್ದಾನೆ; ಅವನು ರೊಟ್ಟಿ ತಿನ್ನದವನು, ದ್ರಾಕ್ಷಾರಸ ಕುಡಿಯದವನು; ನೀವು, ‘ಅವನಿಗೆ ದೆವ್ವ ಹಿಡಿದದೆ’ ಅನ್ನುತ್ತೀರಿ. ಮನುಷ್ಯಕುಮಾರನು ಬಂದಿದ್ದಾನೆ, ಆತನು ಅನ್ನ ಪಾನಗಳನ್ನು ತೆಗೆದುಕೊಳ್ಳುವವನಾಗಿದ್ದಾನೆ. ನೀವು, ‘ಇಗೋ, ಈತನು ಹೊಟ್ಟೆಬಾಕನು, ಕುಡುಕನು, ಸುಂಕದವರ ಮತ್ತು ಪಾಪಿಷ್ಠರ ಗೆಳೆಯನು’ ಅನ್ನುತ್ತೀರಿ. ಆದರೆ ಜ್ಞಾನವಾದರೋ ತನ್ನ ಎಲ್ಲಾ ಮಕ್ಕಳಿಂದ ಸಮರ್ಥನೆ ಪಡೆದದೆ" ಅಂದನು.
ಯೇಸು ದುರಾಚಾರಿಣಿಯಾದ ಸ್ತ್ರೀಯನ್ನು ಕ್ಷಮಿಸಿದ್ದು
ಫರಿಸಾಯರಲ್ಲಿ ಒಬ್ಬನು ಆತನನ್ನು ತನ್ನ ಜೊತೆಯಲ್ಲಿ ಊಟಮಾಡಬೇಕೆಂದು ಬೇಡಿಕೊಂಡಾಗ ಆತನು ಆ ಫರಿಸಾಯನ ಮನೆಗೆ ಹೋಗಿ ಆತನ ಸಂಗಡ ಊಟಕ್ಕೆ ಕುಳಿತುಕೊಂಡನು. ಆಗ ಆ ಊರಿನಲ್ಲಿದ್ದ ದುರಾಚಾರಿಯಾದ ಒಬ್ಬ ಹೆಂಗಸು ಫರಿಸಾಯನ ಮನೆಯಲ್ಲಿ ಆತನು ಊಟಕ್ಕೆ ಬಂದಿದ್ದಾನೆಂದು ತಿಳಿದು ಸುಗಂಧತೈಲದ ಭರಣಿಯನ್ನು ತೆಗೆದುಕೊಂಡು ಬಂದು,
ಆಗ ಸಭಾಮಂದಿರದ ಅಧಿಕಾರಿಯಾದ ಯಾಯೀರನೆಂಬ ಒಬ್ಬ ಮನುಷ್ಯನು ಬಂದು ಯೇಸುವಿನ ಪಾದಗಳಿಗೆ ಅಡ್ಡಬಿದ್ದನು. ಏಕೆಂದರೆ ಹೆಚ್ಚುಕಡಿಮೆ ಹನ್ನೆರಡು ವರ್ಷದವಳಾದ ಅವನ ಒಬ್ಬಳೇ ಮಗಳು ಸಾಯುವ ಸ್ಥಿತಿಯಲ್ಲಿದ್ದ ಕಾರಣ ಆತನನ್ನು ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು. ಯೇಸು ಹೋಗುತ್ತಿರುವಲ್ಲಿ ಜನಸಮೂಹವು ಸುತ್ತಲಿನಿಂದಲೂ ಆತನನ್ನು ನೂಕಾಡುತ್ತಿತ್ತು.
ಆತನು ಇನ್ನೂ ಮಾತನಾಡುತ್ತಿರುವಲ್ಲಿ ಸಭಾಮಂದಿರದ ಅಧಿಕಾರಿಯ ಕಡೆಯವನೊಬ್ಬನು ಬಂದು, "ನಿನ್ನ ಮಗಳು ಸತ್ತುಹೋದಳು, ಗುರುವಿಗೆ ತೊಂದರೆ ಕೊಡಬೇಡ" ಅಂದನು. ಆದರೆ ಯೇಸು ಅದನ್ನು ಕೇಳಿ ಸಭಾಮಂದಿರದ ಅಧಿಕಾರಿಗೆ, "ಅಂಜಬೇಡ, ನಂಬಿಕೆ ಮಾತ್ರ ಇರಲಿ, ಆಕೆ ಬದುಕುವಳು" ಎಂದು ಉತ್ತರಕೊಟ್ಟನು.
ತರುವಾಯ ಆತನು ಆ ಅಧಿಕಾರಿಯ ಮನೆಗೆ ಹೋಗಿ, ಪೇತ್ರ ಯೋಹಾನ ಯಾಕೋಬ ಮತ್ತು ಆ ಹುಡುಗಿಯ ತಂದೆತಾಯಿಯರನ್ನು ಹೊರತು ಬೇರೆ ಯಾರನ್ನೂ ತನ್ನ ಸಂಗಡ ಒಳಕ್ಕೆ ಬರಗೊಡಿಸಲಿಲ್ಲ. ಎಲ್ಲರು ಅಳುತ್ತಾ ಆಕೆಗೋಸ್ಕರ ಎದೆಬಡಿದುಕೊಳ್ಳುತ್ತಾ ಇದ್ದರು. ಯೇಸು ಅವರಿಗೆ, "ಅಳಬೇಡಿರಿ, ಆಕೆ ಸತ್ತಿಲ್ಲ, ನಿದ್ರಿಸುತ್ತಿದ್ದಾಳೆ" ಅನ್ನಲು, ಜನರು ಆಕೆ ಸತ್ತಳೆಂದು ತಿಳಿದುಕೊಂಡಿದ್ದರಿಂದ ಆತನನ್ನು ಪರಿಹಾಸ್ಯಮಾಡಿದರು. ಆದರೆ ಆತನು ಆಕೆಯ ಕೈ ಹಿಡಿದು, "ಮಗಳೇ, ಎದ್ದೇಳು" ಎಂದು ಕೂಗಿ ಹೇಳಿದನು. ಆಕೆಯ ಆತ್ಮವು ತಿರುಗಿ ಬಂದು ತಕ್ಷಣವೇ ಆಕೆ ಎದ್ದಳು. ತರುವಾಯ ಆತನು, ಈಕೆಗೆ ಊಟಮಾಡಿಸಿರಿ ಎಂದು ಅಪ್ಪಣೆಕೊಟ್ಟನು. ಆಕೆಯ ತಂದೆತಾಯಿಗಳು ಬೆರಗಾದರು. ಆತನು, ಈ ನಡೆದ ಸಂಗತಿಯನ್ನು ಯಾರಿಗೂ ತಿಳಿಸಬೇಡಿರೆಂದು ಅವರಿಗೆ ಆಜ್ಞಾಪಿಸಿದನು.
ಲಾಜರನ ಮರಣ
ಮಾರ್ಥಳು ಮತ್ತು ಆಕೆಯ ಸಹೋದರಿಯಾದ, ಮರಿಯಳ ಊರಾದ, ಬೇಥಾನ್ಯದಲ್ಲಿ ಲಾಜರನೆಂಬುವನೊಬ್ಬನು ಅಸ್ವಸ್ಥನಾಗಿದ್ದನು. ಈ ಮರಿಯಳು ಕರ್ತನಿಗೆ ತೈಲವನ್ನು ಹಚ್ಚಿ ಆತನ ಪಾದಗಳನ್ನು ತನ್ನ ತಲೆ ಕೂದಲಿನಿಂದ ಒರಸಿದವಳು. ಈಕೆಯ ಸಹೋದರನಾದ ಲಾಜರನೇ ಅಸ್ವಸ್ಥನಾಗಿದ್ದನು. ಹೀಗಿರಲಾಗಿ ಅವನ ಸಹೋದರಿಯರು, "ಕರ್ತನೇ ಇಗೋ, ನೀನು ಪ್ರೀತಿಸುವವನು ಅಸ್ವಸ್ಥನಾಗಿದ್ದಾನೆ" ಎಂಬುದಾಗಿ ಯೇಸುವಿನ ಬಳಿಗೆ ಹೇಳಿ ಕಳುಹಿಸಿದರು. ಯೇಸು ಇದನ್ನು ಕೇಳಿ, "ಈ ರೋಗವು ಮರಣಕ್ಕಾಗಿ ಬಂದದ್ದಲ್ಲ; ಇದರಿಂದ ದೇವಕುಮಾರನಿಗೆ ಮಹಿಮೆ ಉಂಟಾಗುವಂತೆ ದೇವರ ಮಹಿಮೆಗೋಸ್ಕರ ಬಂದದ್ದು" ಎಂದು ಹೇಳಿದನು. ಮಾರ್ಥಳನ್ನು ಆಕೆಯ ತಂಗಿಯನ್ನು ಮತ್ತು ಲಾಜರನನ್ನು ಯೇಸು ಪ್ರೀತಿಸುತ್ತಿದ್ದನು. ಲಾಜರನು ಅಸ್ವಸ್ಥನಾಗಿದ್ದಾನೆಂದು ಆತನು ಕೇಳಿದ ಮೇಲೆಯೂ ಎರಡು ದಿನ ತಾನಿದ್ದ ಸ್ಥಳದಲ್ಲೇ ಉಳಿದುಕೊಂಡನು. ಬಳಿಕ ಆತನು ತನ್ನ ಶಿಷ್ಯರಿಗೆ, "ನಾವು ಪುನಃ ಯೂದಾಯಕ್ಕೆ ಹೋಗೋಣ" ಎಂದು ಹೇಳಿದನು. ಆತನ ಶಿಷ್ಯರು ಆತನಿಗೆ, "ಗುರುವೇ, ಆಗಲೇ ಯೆಹೂದ್ಯರು ನಿನ್ನ ಮೇಲೆ ಕಲ್ಲೆಸೆಯಬೇಕೆಂದು ಹುಡುಕುತ್ತಿದ್ದಾರೆ, ಪುನಃ ನೀನು ಅಲ್ಲಿಗೆ ಹೋಗಬೇಕೆಂದಿರುವಿಯಾ?" ಎಂದರು. ಯೇಸು, "ಹಗಲಿಗೆ ಹನ್ನೆರಡು ತಾಸುಗಳು ಉಂಟಲ್ಲವೇ? ಒಬ್ಬನು ಹಗಲಿನಲ್ಲಿ ನಡೆದರೆ, ಈ ಲೋಕದ ಬೆಳಕು ಕಾಣಿಸುವುದರಿಂದ ಅವನು ಎಡವುದಿಲ್ಲ. ರಾತ್ರಿಯಲ್ಲಿ ನಡೆದರೆ ತನ್ನಲ್ಲಿ ಬೆಳಕಿಲ್ಲದ್ದರಿಂದ ಅವನು ಎಡವುತ್ತಾನೆ" ಎಂದು ಉತ್ತರಕೊಟ್ಟನು. ಇದನ್ನು ಹೇಳಿದ ಮೇಲೆ ಆತನು ಅವರಿಗೆ, "ನಮ್ಮ ಮಿತ್ರನಾದ ಲಾಜರನು ನಿದ್ರೆ ಮಾಡುತ್ತಿದ್ದಾನೆ, ಆದುದರಿಂದ ನಾನು ಹೋಗಿ ಅವನನ್ನು ನಿದ್ರೆಯಿಂದ ಎಬ್ಬಿಸಬೇಕಾಗಿದೆ" ಎಂದು ಹೇಳಿದನು. ಅದಕ್ಕೆ ಶಿಷ್ಯರು, "ಅವನು ನಿದ್ರೆ ಮಾಡುತ್ತಿದ್ದರೆ ಸ್ವಸ್ಥನಾಗುವನು" ಎಂದರು. ಯೇಸು ಅವನ ಮರಣವನ್ನು ಕುರಿತು ಅದನ್ನು ಹೇಳಿದ್ದನು, ಆದರೆ ಅವರು ವಿಶ್ರಾಂತಿಗಾಗಿ ಮಲಗಿದ್ದಾನೆಂಬುದಾಗಿ ಹೇಳಿದನೆಂದು ಯೋಚಿಸಿದರು. ಆಗ ಯೇಸು ಸ್ಪಷ್ಟವಾಗಿ ಅವರಿಗೆ, "ಲಾಜರನು ಸತ್ತು ಹೋಗಿದ್ದಾನೆ.
Domínio sobre a natureza
Jesus acalmou a tempestade, andou sobre as águas e multiplicou pães. A natureza obedece à voz do seu Criador.
ಯೇಸು ಬಿರುಗಾಳಿಯನ್ನು ನಿಲ್ಲಿಸಿದ್ದು
ಯೇಸು ದೋಣಿಯನ್ನು ಹತ್ತಿದಾಗ ಆತನ ಶಿಷ್ಯರು ಆತನನ್ನು ಹಿಂಬಾಲಿಸಿದರು. ಅವರು ಹೋಗುತ್ತಿರುವಾಗ ಸಮುದ್ರವು ಅಲ್ಲೋಲಕಲ್ಲೋಲವಾಗಿ ದೋಣಿಯು ಅಲೆಗಳಿಂದ ಮುಚ್ಚುವಂತೆ ಆಯಿತು; ಆದರೆ ಯೇಸು ನಿದ್ರಿಸುತ್ತಿದ್ದನು. ಆಗ ಶಿಷ್ಯರು ಆತನ ಹತ್ತಿರ ಬಂದು ಆತನನ್ನು ಎಬ್ಬಿಸಿ, "ಕರ್ತನೇ, ನಮ್ಮನ್ನು ಕಾಪಾಡು, ಸಾಯುತ್ತಿದ್ದೇವೆ" ಎಂದರು. ಆತನು ಅವರಿಗೆ, "ಅಲ್ಪ ವಿಶ್ವಾಸಿಗಳೇ, ಏಕೆ ಹೆದರುತ್ತೀರಿ?" ಎಂದು ಹೇಳಿ, ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು; ಆಗ ಅಲ್ಲಿ ಸಂಪೂರ್ಣವಾಗಿ ಶಾಂತವಾಯಿತು. ಆ ಜನರು ಬೆರಗಾಗಿ, "ಈತನು ಎಂಥವನಾಗಿರಬಹುದು! ಗಾಳಿಯೂ ಸಮುದ್ರವೂ ಸಹ ಈತನಿಗೆ ವಿಧೇಯವಾಗುತ್ತವಲ್ಲಾ" ಅಂದರು.
ಸಂಜೆಯಾದಾಗ ಶಿಷ್ಯರು ಆತನ ಬಳಿಗೆ ಬಂದು, "ಇದು ಅಡವಿಯ ಸ್ಥಳ ಈಗ ಹೊತ್ತು ಮುಳುಗಿಹೋಯಿತು. ಅವರು ಹಳ್ಳಿಗಳಿಗೆ ಹೋಗಿ ತಮಗಾಗಿ ಆಹಾರ ಪದಾರ್ಥಗಳನ್ನು ಕೊಂಡುಕೊಳ್ಳುವಂತೆ ಕಳುಹಿಸಿಕೊಡು" ಎಂದು ಹೇಳಿದರು. ಆದರೆ ಯೇಸು, "ಅವರು ಹೋಗುವ ಅಗತ್ಯವಿಲ್ಲ. ನೀವೇ ಅವರಿಗೆ ಊಟಕ್ಕೆ ಏನಾದರೂ ಕೊಡಿರಿ" ಅಂದನು. ಅದಕ್ಕವರು, "ಇಲ್ಲಿ ಐದು ರೊಟ್ಟಿ ಎರಡು ಮೀನು ಮಾತ್ರ ಇವೆ" ಅನ್ನಲಾಗಿ, ಆತನು, "ಅವುಗಳನ್ನು ನನಗೆ ತಂದು ಕೊಡಿರಿ" ಅಂದನು. ತರುವಾಯ ಜನರ ಗುಂಪಿಗೆ ಹುಲ್ಲಿನ ಮೇಲೆ ಕುಳಿತುಕೊಳ್ಳುವುದಕ್ಕೆ ಹೇಳಿ ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ ದೇವರಿಗೆ ಸ್ತೋತ್ರ ಮಾಡಿ ರೊಟ್ಟಿಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು. ಶಿಷ್ಯರು ಜನರಿಗೆ ಕೊಟ್ಟರು. ಅವರೆಲ್ಲರೂ ಊಟಮಾಡಿ ತೃಪ್ತರಾದರು. ಉಳಿದ ತುಂಡುಗಳನ್ನು ಕೂಡಿಸಲಾಗಿ ಹನ್ನೆರಡು ಪುಟ್ಟಿ ತುಂಬಿತು. ಊಟಮಾಡಿದವರು ಹೆಂಗಸರೂ ಮಕ್ಕಳನ್ನು ಬಿಟ್ಟು ಗಂಡಸರೇ ಸುಮಾರು ಐದು ಸಾವಿರವಿದ್ದರು.
ರಾತ್ರಿಯ ನಾಲ್ಕನೆಯ ಜಾವದಲ್ಲಿ ಯೇಸು ಸಮುದ್ರದ ಮೇಲೆ ನಡೆಯುತ್ತಾ ಅವರ ಕಡೆಗೆ ಬಂದನು.
ನಾಲ್ಕು ಸಾವಿರ ಜನರಿಗೆ ಊಟಮಾಡಿಸಿದ್ದು
ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ, "ನಾನು ಈ ಜನರನ್ನು ನೋಡಿ ಕನಿಕರಪಡುತ್ತೇನೆ. ಏಕೆಂದರೆ ಅವರು ಮೂರು ದಿನಗಳಿಂದಲೂ ನನ್ನ ಜೊತೆಯಲ್ಲಿದ್ದಾರೆ. ಅವರಿಗೆ ತಿನ್ನುವುದಕ್ಕೆ ಏನೂ ಇಲ್ಲ. ಅವರನ್ನು ಹಸಿವಿನಿಂದ ಕಳುಹಿಸಿಬಿಡುವುದಕ್ಕೆ ನನಗೆ ಇಷ್ಟವಿಲ್ಲ. ಅವರು ದಾರಿಯಲ್ಲಿ ಬಳಲಿ ಹೋದಾರು" ಎಂದು ಹೇಳಿದನು. ಶಿಷ್ಯರು ಆತನಿಗೆ, "ಇಷ್ಟು ದೊಡ್ಡ ಜನರ ಗುಂಪನ್ನು ತೃಪ್ತಿಪಡಿಸಲಾಗುವಷ್ಟು ರೊಟ್ಟಿಯು ಈ ಅಡವಿಯಲ್ಲಿ ನಮಗೆ ಎಲ್ಲಿಂದ ಸಿಕ್ಕೀತು?" ಎಂದು ಹೇಳಿದರು. ಅದಕ್ಕೆ ಯೇಸು, "ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ?" ಎಂದು ಕೇಳಿದ್ದಕ್ಕೆ ಅವರು, "ಏಳು ರೊಟ್ಟಿಗಳಿವೆ ಮತ್ತು ಕೆಲವು ಸಣ್ಣ ಮೀನುಗಳು ಅವೆ" ಅಂದರು. ಆಗ ಆತನು ಜನರ ಗುಂಪಿಗೆ, ನೆಲದ ಮೇಲೆ ಕುಳಿತುಕೊಳ್ಳಿರಿ ಎಂದು ಅಪ್ಪಣೆ ಕೊಟ್ಟನು. ಆತನು ಆ ಏಳು ರೊಟ್ಟಿಗಳನ್ನೂ ಆ ಮೀನುಗಳನ್ನೂ ತೆಗೆದುಕೊಂಡು ದೇವರಿಗೆ ಸ್ತೋತ್ರ ಮಾಡಿ ಅವುಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು. ಶಿಷ್ಯರು ಜನರಿಗೆ ಹಂಚಿಕೊಟ್ಟರು. ಆ ಜನರೆಲ್ಲರೂ ಊಟಮಾಡಿ ತೃಪ್ತರಾದರು. ಉಳಿದ ತುಂಡುಗಳನ್ನು ಕೂಡಿಸಲಾಗಿ ಏಳು ಪುಟ್ಟಿಗಳು ತುಂಬಿದವು. ಊಟಮಾಡಿದವರು ಹೆಂಗಸರು ಮಕ್ಕಳು ಅಲ್ಲದೆ ಗಂಡಸರೇ ನಾಲ್ಕು ಸಾವಿರವಿದ್ದರು.
ಯೇಸು ದೇವಾಲಯದ ತೆರಿಗೆಯನ್ನು ಕೊಟ್ಟ ರೀತಿಯಿಂದ ತಾನು ದೇವಕುಮಾರನೆಂದು ತೋರಿಸಿದ್ದು
ಅವರು ಕಪೆರ್ನೌಮಿಗೆ ಬಂದಾಗ ದೇವಾಲಯಕ್ಕಾಗಿ ತೆರಿಗೆಯನ್ನು ಸಂಗ್ರಹಿಸುವವರು ಪೇತ್ರನ ಬಳಿಗೆ ಬಂದು, "ನಿಮ್ಮ ಗುರುವು ದೇವಾಲಯದ ತೆರಿಗೆಯನ್ನು ಕಟ್ಟುವುದಿಲ್ಲವೇ" ಎಂದು ಕೇಳಲು, "ಹೌದು ಕಟ್ಟುವನು" ಅಂದನು. ಪೇತ್ರನು ಮನೆಯೊಳಗೆ ಬಂದಾಗ, ಅವನು ಬಾಯಿ ತೆರೆದು ಮಾತನಾಡುವ ಮೊದಲೇ, ಯೇಸು ಅವನಿಗೆ, "ಸೀಮೋನನೇ, ನಿನಗೆ ಹೇಗೆ ತೋರುತ್ತದೆ? ಭೂಲೋಕದ ಅರಸರು ಕಂದಾಯವನ್ನಾಗಲಿ ತೆರಿಗೆಯನ್ನಾಗಲಿ ಯಾರಿಂದ ತೆಗೆದುಕೊಳ್ಳುತ್ತಾರೆ? ತಮ್ಮ ಪ್ರಜೆಗಳಿಂದಲೋ ಅಥವಾ ಪರರಿಂದಲೋ?" ಎಂದು ಕೇಳಿದನು. ಅವನು, "ಪರರಿಂದ" ಎಂದು ಉತ್ತರ ಕೊಡಲು, ಯೇಸು ಅವನಿಗೆ, "ಹಾಗಾದರೆ ಪ್ರಜೆಗಳು ಅದನ್ನು ಕೊಡಬೇಕಾಗಿಲ್ಲವೇ. ಆದರೂ ನಾವು ಅವರಿಗೆ ಅಡ್ಡಿಯಾಗದಂತೆ, ನೀನು ಸಮುದ್ರಕ್ಕೆ ಹೋಗಿ ಗಾಳವನ್ನು ಹಾಕಿ ಮೊದಲು ಸಿಕ್ಕುವ ಮೀನನ್ನು ಹಿಡಿದು, ಅದರ ಬಾಯಿ ತೆರೆದು ನೋಡು ಅದರಲ್ಲಿ ಒಂದು ಬೆಳ್ಳಿ ನಾಣ್ಯ ಸಿಕ್ಕುವುದು. ಅದನ್ನು ತೆಗೆದುಕೊಂಡು ನನಗೋಸ್ಕರ ಮತ್ತು ನಿನಗೋಸ್ಕರ ತೆರಿಗೆ ಹಣ ಕೊಡು" ಎಂದು ಹೇಳಿದನು.
ಬೆಳಗ್ಗೆ ಯೇಸು ಪಟ್ಟಣಕ್ಕೆ ಹಿಂತಿರುಗಿ ಬರುತ್ತಿರುವಾಗ ಹಸಿದಿದ್ದನು. ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಹತ್ತಿರಕ್ಕೆ ಹೋಗಿ ಅದರಲ್ಲಿ ಬರೀ ಎಲೆಗಳು ಮಾತ್ರ ಇರುವುದನ್ನು ಕಂಡು ಅದಕ್ಕೆ, "ಇನ್ನು ಮೇಲೆ ನಿನ್ನಲ್ಲಿ ಎಂದೆಂದಿಗೂ ಫಲವು ಫಲಿಸದೆ ಹೋಗಲಿ" ಎಂದು ಹೇಳಿದನು. ಆ ಕ್ಷಣವೇ ಆ ಅಂಜೂರದ ಮರವು ಒಣಗಿಹೋಯಿತು. ಶಿಷ್ಯರು ಅದನ್ನು ನೋಡಿ ಬೆರಗಾಗಿ, "ಈ ಅಂಜೂರದ ಮರವು ಒಂದು ಕ್ಷಣದಲ್ಲೇ ಒಣಗಿಹೋಯಿತಲ್ಲಾ" ಎಂದು ಆಶ್ಚರ್ಯಗೊಂಡರು. ಅದಕ್ಕೆ ಯೇಸು, "ನಿಮಗೆ ಸತ್ಯವಾಗಿ ಹೇಳುತ್ತೇನೆ ನೀವು ಸಂಶಯಪಡದೆ ನಂಬಿದರೆ ಈ ಅಂಜೂರದ ಮರಕ್ಕೆ ಮಾಡಿದಂಥದನ್ನು ನೀವು ಮಾಡುವಿರಿ ಮಾತ್ರವಲ್ಲದೆ ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು’ ಎಂದು ಹೇಳಿದರೆ ಅದೂ ಆಗುವುದು. ನೀವು ನಂಬಿಕೊಂಡು ಪ್ರಾರ್ಥನೆಯಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನೆಲ್ಲಾ ಹೊಂದುವಿರಿ" ಅಂದನು.
ತರುವಾಯ ದೊಡ್ಡ ಬಿರುಗಾಳಿ ಎದ್ದು ಅಲೆಗಳು ಆ ದೋಣಿಗೆ ಬಡಿದು ನೀರು ಒಳಗೆ ನುಗ್ಗಿದ್ದರಿಂದ ಆ ದೋಣಿ ಆಗಲೇ ತುಂಬುವುದಕ್ಕೆ ಬಂದಿತ್ತು. ಆದರೆ ಆತನು ದೋಣಿಯ ಹಿಂಭಾಗದಲ್ಲಿ ತಲೆದಿಂಬನ್ನು ಒರಗಿ ನಿದ್ದೆಮಾಡುತ್ತಿದ್ದನು. ಅವರು ಆತನನ್ನು ಎಬ್ಬಿಸಿ, "ಗುರುವೇ, ನಾವು ಮುಳುಗಿಹೋಗುವುದರಲ್ಲಿ ನಿನಗೆ ಚಿಂತೆಯಿಲ್ಲವೇ" ಎಂದು ಕೇಳಿದರು. ಆತನು ಎದ್ದು ಗಾಳಿಯನ್ನು ಗದರಿಸಿ, ಸಮುದ್ರಕ್ಕೆ "ಶಾಂತವಾಗಿರು, ಮೊರೆಯಬೇಡ" ಎಂದು ಅಪ್ಪಣೆಕೊಡುತ್ತಲೇ ಗಾಳಿ ನಿಂತುಹೋಗಿ ಸಮುದ್ರವು ಶಾಂತವಾಯಿತು. ತರುವಾಯ ಆತನು ಅವರನ್ನು, "ಯಾಕೆ ಭಯಪಡುತ್ತೀರಿ? ಇನ್ನೂ ನಿಮಗೆ ನಂಬಿಕೆಯಿಲ್ಲವೇ?" ಎಂದು ಕೇಳಲು ಅವರು ಬಹು ಭಯಪಟ್ಟು, "ಈತನು ಯಾರಿರಬಹುದು? ಗಾಳಿಯೂ, ಸಮುದ್ರವೂ ಸಹ ಈತನು ಹೇಳಿದ ಹಾಗೆ ಕೇಳುತ್ತವಲ್ಲಾ" ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
ಅಷ್ಟರಲ್ಲಿ ಸಂಜೆ ಆಗಿದ್ದರಿಂದ ಆತನ ಶಿಷ್ಯರು ಆತನ ಬಳಿಗೆ ಬಂದು, "ಇದು ನಿರ್ಜನ ಸ್ಥಳ, ಈಗ ಹೊತ್ತು ಬಹಳವಾಯಿತು; ಈ ಜನರಿಗೆ ಅಪ್ಪಣೆಕೊಡು; ಇವರು ಸುತ್ತಲಿರುವ ಸೀಮೆಗೂ ಹಳ್ಳಿಗಳಿಗೂ ಹೋಗಿ ತಮ್ಮ ಊಟಕ್ಕೆ ಏನಾದರೂ ಕೊಂಡುಕೊಳ್ಳಲಿ" ಎಂದು ಹೇಳಿದರು. ಅದಕ್ಕೆ ಯೇಸು, "ನೀವೇ ಅವರಿಗೆ ಊಟಕ್ಕೇನಾದರೂ ಕೊಡಿರಿ" ಎಂದು ಉತ್ತರಕೊಟ್ಟನು. ಅದಕ್ಕವರು, "ನಾವು ಹೋಗಿ ಇನ್ನೂರು ದಿನಾರಿ ನಾಣ್ಯಗಳ ಬೆಲೆಯಷ್ಟು ರೊಟ್ಟಿಯನ್ನು ಕೊಂಡುಕೊಂಡು ಅವರಿಗೆ ಊಟ ಕೊಡಬೇಕೋ?" ಎಂದು ಹೇಳಲು ಆತನು, "ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ? ಹೋಗಿ ನೋಡಿ" ಅಂದನು. ಅವರು ವಿಚಾರಿಸಿಕೊಂಡು ಬಂದು, "ನಮ್ಮಲ್ಲಿ ಐದು ರೊಟ್ಟಿ ಮತ್ತು ಎರಡು ಮೀನುಗಳಿವೆ" ಅಂದರು. ಆಗ ಆತನು ಅವರಿಗೆ, ಎಲ್ಲರೂ ಹಸಿರುಹುಲ್ಲಿನ ಮೇಲೆ ಪಂಕ್ತಿಪಂಕ್ತಿಯಾಗಿ ಕುಳಿತುಕೊಳ್ಳಲಿ ಎಂದು ಅಪ್ಪಣೆಕೊಟ್ಟಾಗ, ಜನರು ಪಂಕ್ತಿಗೆ ನೂರರಂತೆ ಐವತ್ತರಂತೆ ಸಾಲುಸಾಲಾಗಿ ಕುಳಿತುಕೊಂಡರು. ಆ ಮೇಲೆ ಆತನು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಪರಲೋಕದ ಕಡೆಗೆ ನೋಡಿ ದೇವರಿಗೆ ಸ್ತೋತ್ರಮಾಡಿ ಆ ರೊಟ್ಟಿಗಳನ್ನು ಮುರಿದು ಇದನ್ನು ನೀವು ಜನರಿಗೆ ಹಂಚಿರಿ ಎಂದು ಶಿಷ್ಯರ ಕೈಗೆ ಕೊಟ್ಟನು, ಅದೇ ರೀತಿಯಲ್ಲಿ ಆ ಎರಡು ಮೀನುಗಳನ್ನೂ ಆತನು ಎಲ್ಲರಿಗೂ ಹಂಚಿಸಿದನು. ಅವರೆಲ್ಲರೂ ತೃಪ್ತರಾಗುವವರೆಗೂ ಊಟಮಾಡಿದರು. ರೊಟ್ಟಿಯ ತುಂಡುಗಳನ್ನೂ ಮೀನಿನ ತುಂಡುಗಳನ್ನೂ ಕೂಡಿಸಲಾಗಿ ಹನ್ನೆರಡು ಪುಟ್ಟಿಗಳು ತುಂಬಿದವು. ಊಟಮಾಡಿದವರು ಐದು ಸಾವಿರ ಮಂದಿ ಗಂಡಸರು.
ಎದುರು ಗಾಳಿ ಬೀಸುತ್ತಿದ್ದುದರಿಂದ ಶಿಷ್ಯರು ಹುಟ್ಟುಗೋಲು ಹಾಕಿ ದಣಿದು ಹೋದದ್ದನ್ನು ಯೇಸು ಕಂಡು ಹೆಚ್ಚುಕಡಿಮೆ ರಾತ್ರಿಯ ನಾಲ್ಕನೆಯ ಜಾವದಲ್ಲಿ ಸಮುದ್ರದ ಮೇಲೆ ನಡೆದು ಅವರ ಕಡೆಗೆ ಬಂದು ಅವರನ್ನು ದಾಟಿ ಮುಂದಕ್ಕೆ ಹೋಗಬೇಕೆಂದಿದ್ದನು. ಆದರೆ ಸಮುದ್ರದ ಮೇಲೆ ನಡೆಯುವ ಆತನನ್ನು ಅವರು ಕಂಡು ಭೂತವೆಂದು ಭಾವಿಸಿ ಅಬ್ಬರಿಸಿ ಕೂಗಿದರು; ಏಕೆಂದರೆ ಅವರೆಲ್ಲರೂ ಆತನನ್ನು ನೋಡಿ ಭಯಭೀತರಾಗಿದ್ದರು. ಕೂಡಲೆ ಆತನು ಅವರನ್ನು ಮಾತನಾಡಿಸಿ ಅವರಿಗೆ, "ಧೈರ್ಯವಾಗಿರಿ, ನಾನೇ, ಹೆದರಬೇಡಿರಿ" ಎಂದು ಹೇಳಿದನು. ತರುವಾಯ ಆತನು ದೋಣಿಯನ್ನು ಹತ್ತಿ ಅವರ ಬಳಿಗೆ ಬರಲು ಆ ಬಿರುಗಾಳಿಯು ನಿಂತುಹೋಯಿತು. ಆಗ ಅವರು ತಮ್ಮೊಳಗೆ ಬಹು ಆಶ್ಚರ್ಯಪಟ್ಟರು.
ಯೇಸು ನಾಲ್ಕುಸಾವಿರ ಜನರಿಗೆ ಊಟಮಾಡಿಸಿದ್ದು
ಆ ದಿನಗಳಲ್ಲಿ ಜನರು ಪುನಃ ದೊಡ್ಡಗುಂಪಾಗಿ ಬಂದು ನೆರೆದಿದ್ದರು. ಊಟಮಾಡಲು ಅವರಲ್ಲಿ ಆಹಾರವಿರಲಿಲ್ಲ. ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು, "ಈ ಜನರನ್ನು ನೋಡಿ ಕನಿಕರಪಡುತ್ತೇನೆ, ಏಕೆಂದರೆ ಮೂರು ದಿನಗಳಿಂದ ಇವರು ನನ್ನ ಬಳಿಯಲ್ಲಿದ್ದಾರೆ; ಇವರಿಗೆ ಊಟಕ್ಕೆ ಏನೂ ಇಲ್ಲ. ಇವರನ್ನು ಹಸಿವೆಯಿಂದ ಮನೆಗೆ ಕಳುಹಿಸಿದರೆ ದಾರಿಯಲ್ಲಿ ಬಳಲಿ ಬಿದ್ದಾರು. ಇವರಲ್ಲಿ ಕೆಲವರು ದೂರದಿಂದ ಬಂದಿದ್ದಾರಲ್ಲಾ" ಎಂದು ಅವರಿಗೆ ಹೇಳಿದನು. ಅದಕ್ಕೆ ಶಿಷ್ಯರು, "ಈ ಅಡವಿಯಲ್ಲಿ ಸಾಕಷ್ಟು ರೊಟ್ಟಿಯನ್ನು ಎಲ್ಲಿಂದ ತಂದು ಈ ಜನರನ್ನು ತೃಪ್ತಿಪಡಿಸುವುದಕ್ಕಾದೀತು?" ಅಂದರು. ಆತನು, "ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ?" ಎಂದು ಅವರನ್ನು ಕೇಳಿದ್ದಕ್ಕೆ ಅವರು, "ಏಳು ರೊಟ್ಟಿಗಳು ಇವೆ" ಅಂದರು. ಆಗ ಯೇಸು ಜನರ ಗುಂಪಿಗೆ, ನೆಲದ ಮೇಲೆ ಕುಳಿತುಕೊಳ್ಳುವಂತೆ ಅಪ್ಪಣೆಕೊಟ್ಟು, ಆ ಏಳು ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಸ್ತೋತ್ರಮಾಡಿ ಅವುಗಳನ್ನು ಮುರಿದು ಜನರಿಗೆ ಹಂಚಲು ತನ್ನ ಶಿಷ್ಯರ ಕೈಗೆ ಕೊಟ್ಟನು; ಅವರು ಗುಂಪಿನವರಿಗೆ ಹಂಚಿಕೊಟ್ಟರು. ಇದಲ್ಲದೆ ಅವರಲ್ಲಿ ಕೆಲವು ಸಣ್ಣ ಮೀನುಗಳಿದ್ದವು; ಆತನು ಅವುಗಳಿಗಾಗಿ ದೇವರಿಗೆ ಸ್ತೋತ್ರಮಾಡಿ, ಇವುಗಳನ್ನೂ ಹಂಚಿಕೊಡಿರಿ ಎಂದು ಶಿಷ್ಯರಿಗೆ ಅಪ್ಪಣೆ ಕೊಟ್ಟನು. ಜನರು ತಿಂದು ತೃಪ್ತರಾದರು. ಉಳಿದ ತುಂಡುಗಳನ್ನು ಒಟ್ಟುಗೂಡಿಸಲಾಗಿ ಏಳು ಬುಟ್ಟಿಗಳು ತುಂಬಿದವು. ಊಟಮಾಡಿದವರು ಹೆಚ್ಚುಕಡಿಮೆ ನಾಲ್ಕು ಸಾವಿರ ಗಂಡಸರಿದ್ದರು.
ಯೇಸು ಅಂಜೂರದ ಮರವನ್ನು ಶಪಿಸಿದ್ದು
ಮರುದಿನ ಅವರು ಬೇಥಾನ್ಯವನ್ನು ಬಿಟ್ಟು ಬರುತ್ತಿರುವಾಗ ಆತನಿಗೆ ಹಸಿವಾಯಿತು. ಎಲೆಗಳಿದ್ದ ಅಂಜೂರದ ಮರವನ್ನು ದೂರದಿಂದ ಕಂಡು ಅದರಲ್ಲಿ ತನಗೇನಾದರೂ ಹಣ್ಣು ಸಿಕ್ಕೀತೆಂದು ಅಲ್ಲಿಗೆ ಹೋದನು. ಅದರ ಹತ್ತಿರಕ್ಕೆ ಬಂದಾಗ ಅದರಲ್ಲಿ ಬರೀ ಎಲೆಗಳನ್ನೇ ಹೊರತು ಮತ್ತೇನೂ ಕಾಣಲಿಲ್ಲ; ಏಕೆಂದರೆ ಅದು ಅಂಜೂರದ ಹಣ್ಣಿನ ಕಾಲವಾಗಿರಲಿಲ್ಲ. ಆಗ ಯೇಸು ಆ ಮರಕ್ಕೆ, "ಇನ್ನೆಂದಿಗೂ ಒಬ್ಬರೂ ನಿನ್ನಲ್ಲಿ ಹಣ್ಣನ್ನು ತಿನ್ನದಿರಲಿ" ಎಂದು ಹೇಳಿದನು. ಆತನ ಶಿಷ್ಯರು ಅದನ್ನು ಕೇಳಿಸಿಕೊಂಡರು.
ನಿಸ್ಸಂದೇಹವಾದ ನಂಬಿಕೆ
ಬೆಳಗ್ಗೆ ಅವರು ಬರುತ್ತಿರುವಾಗ ಆ ಅಂಜೂರದ ಮರವು ಬೇರುಸಹಿತ ಒಣಗಿಹೋಗಿರುವುದನ್ನು ಕಂಡರು. ಆಗ ಪೇತ್ರನು ಹಿಂದಿನ ದಿನದ ಸಂಗತಿಯನ್ನು ನೆನಪಿಸಿಕೊಂಡು ಆತನಿಗೆ, "ಗುರುವೇ, ಇಗೋ, ನೀನು ಶಾಪ ಕೊಟ್ಟ ಅಂಜೂರದ ಮರವು ಒಣಗಿಹೋಗಿದೆ" ಎಂದು ಹೇಳಿದ್ದಕ್ಕೆ ಯೇಸು ಹೇಳಿದ್ದೇನಂದರೆ, "ನಿಮಗೆ ದೇವರಲ್ಲಿ ನಂಬಿಕೆಯಿರಲಿ. ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರಾದರೂ ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು!’ ಎಂದು ಹೇಳಿ ತನ್ನ ಮನಸ್ಸಿನಲ್ಲಿ ಸಂಶಯಪಡದೆ ತಾನು ಹೇಳಿದ್ದು ಆಗುವುದೆಂದು ನಂಬಿದರೆ ಅವನು ಹೇಳಿದಂತೆಯೇ ಆಗುವುದು. ಆದಕಾರಣ ನೀವು ಪ್ರಾರ್ಥನೆಮಾಡಿ ಏನೇನು ಬೇಡಿಕೊಳ್ಳುತ್ತೀರೋ ಅದನ್ನೆಲ್ಲಾ ಹೊಂದಿದ್ದೇವೆಂದು ನಂಬಿರಿ; ಅದು ನಿಮಗೆ ಸಿಕ್ಕುವುದೆಂದು ನಿಮಗೆ ಹೇಳುತ್ತೇನೆ. ಇದಲ್ಲದೆ ನೀವು ನಿಂತುಕೊಂಡು ಪ್ರಾರ್ಥಿಸುವಾಗ ಯಾರ ಮೇಲೆ ಏನಾದರೂ ವಿರೋಧವಿದ್ದರೆ ಅದನ್ನು ಕ್ಷಮಿಸಿರಿ; ಆಗ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವನು" ಅಂದನು.
ಯೇಸು ಪ್ರಥಮ ಶಿಷ್ಯರನ್ನು ಆಯ್ಕೆ ಮಾಡಿಕೊಂಡದ್ದು
ಒಮ್ಮೆ ಯೇಸು ಗೆನೆಜರೇತ್ ಸರೋವರದ ದಡದಲ್ಲಿ ನಿಂತಿದ್ದಾಗ ಜನರು ಗುಂಪಾಗಿ ಬಂದು ದೇವರ ವಾಕ್ಯವನ್ನು ಕೇಳುವುದಕ್ಕಾಗಿ ಆತನನ್ನು ಸುತ್ತುವರೆದು ನೂಕಾಡುತ್ತಿದ್ದರು. ಯೇಸು ಆ ಸರೋವರದ ದಡದಲ್ಲಿದ್ದ ಎರಡು ದೋಣಿಗಳನ್ನು ಕಂಡನು. ಬೆಸ್ತರು ಅವುಗಳೊಳಗಿಂದ ಹೊರಗೆ ಬಂದು ತಮ್ಮ ಬಲೆಗಳನ್ನು ತೊಳೆಯುತ್ತಿದ್ದರು. ಆ ದೋಣಿಗಳಲ್ಲಿ, ಸೀಮೋನನ ದೋಣಿಯನ್ನು ಯೇಸು ಹತ್ತಿ ದಡದಿಂದ ಸ್ವಲ್ಪ ದೂರಕ್ಕೆ ನೂಕಬೇಕೆಂದು ಅವನನ್ನು ಕೇಳಿಕೊಂಡನು. ತರುವಾಯ ಯೇಸು ಕುಳಿತುಕೊಂಡು ದೋಣಿಯೊಳಗಿಂದಲೇ ಆ ಜನರ ಗುಂಪಿಗೆ ಉಪದೇಶಮಾಡಿದನು. ಮಾತನಾಡುವುದನ್ನು ಮುಗಿಸಿದ ಮೇಲೆ ಸೀಮೋನನಿಗೆ, "ಆಳವಾದ ಸ್ಥಳಕ್ಕೆ ದೋಣಿಯನ್ನು ನಡೆಸಿ ಮೀನುಹಿಡಿಯಲು ನಿಮ್ಮ ಬಲೆಗಳನ್ನು ಬೀಸಿರಿ" ಎಂದು ಹೇಳಿದನು. ಅದಕ್ಕೆ ಸೀಮೋನನು, "ಗುರುವೇ, ನಾವು ರಾತ್ರಿಯೆಲ್ಲಾ ಪ್ರಯತ್ನಪಟ್ಟರೂ ಏನೂ ಸಿಕ್ಕಲಿಲ್ಲ; ಆದರೆ ನಿನ್ನ ಮಾತಿನ ಮೇಲೆ ಬಲೆಗಳನ್ನು ಬೀಸುತ್ತೇವೆ" ಅಂದನು. ಅವರು ಬಲೆಗಳನ್ನು ಬೀಸಿದ ಮೇಲೆ ಮೀನುಗಳು ರಾಶಿರಾಶಿಯಾಗಿ ಬಲೆಗೆ ಸಿಕ್ಕಿಕೊಂಡಿದ್ದರ ಪರಿಣಾಮ ಬಲೆಗಳು ಹರಿದುಹೋಗುವಂತ್ತಿದವು. ಆಗ ಅವರು ಮತ್ತೊಂದು ದೋಣಿಯಲ್ಲಿದ್ದ ತಮ್ಮ ಸಂಗಡಿಗರನ್ನೂ ಕರೆದು, ನೀವು ಬಂದು ನಮಗೆ ನೆರವಾಗಬೇಕೆಂದು ಸನ್ನೆಮಾಡಿದರು. ಅವರು ಬಂದು ಆ ಎರಡು ದೋಣಿಗಳಲ್ಲಿ ಮೀನುಗಳನ್ನು ತುಂಬಿಸಲು, ಅವು ಮುಳುಗುವ ಹಾಗಾದವು. ಸೀಮೋನ್ ಪೇತ್ರನು ಇದನ್ನು ಕಂಡು ಯೇಸುವಿನ ಮೊಣಕಾಲಿಗೆ ಬಿದ್ದು, "ಕರ್ತನೇ, ನಾನು ಪಾಪಾತ್ಮನು; ನನ್ನನ್ನು ಬಿಟ್ಟುಹೋಗು" ಅಂದನು.
ಏಕೆಂದರೆ ಅವನಿಗೂ ಅವನ ಸಂಗಡ ಇದ್ದವರೆಲ್ಲರಿಗೂ ತಾವು ಹಿಡಿದ ಮೀನುಗಳ ನಿಮಿತ್ತ ಆಶ್ಚರ್ಯಪಟ್ಟಿದ್ದರು. ಸೀಮೋನನ ಸಂಗಡಿಗರಾಗಿದ್ದ ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರೂ ಹಾಗೆಯೇ ಆಶ್ಚರ್ಯಪಟ್ಟರು. ಯೇಸು ಸೀಮೋನನಿಗೆ, "ಅಂಜಬೇಡ, ಇಂದಿನಿಂದ ನೀನು ಮನುಷ್ಯರನ್ನು ಹಿಡಿಯುವ ಬೆಸ್ತನಾಗಿರುವಿ" ಎಂದು ಹೇಳಿದನು. ಅವರು ತಮ್ಮ ದೋಣಿಗಳನ್ನು ದಡಕ್ಕೆ ತಂದು ಮತ್ತು ಎಲ್ಲವನ್ನು ಬಿಟ್ಟು ಅಂದಿನಿಂದ ಯೇಸುವನ್ನು ಹಿಂಬಾಲಿಸಿದರು.
ಯೇಸು ಸಮುದ್ರದ ಮೇಲಣ ಬಿರುಗಾಳಿಯನ್ನು ಶಾಂತಗೊಳಿಸಿದ್ದು
ಒಂದು ದಿನ ಯೇಸು ತನ್ನ ಶಿಷ್ಯರೊಂದಿಗೆ ದೋಣಿಯನ್ನು ಹತ್ತಿ, "ಸಮುದ್ರದ ಆಚೇ ದಡಕ್ಕೆ ಹೋಗೋಣ" ಎಂದು ಹೇಳಲು, ಅವರು ದೋಣಿಯನ್ನು ಸಾಗಿಸಿ ಹೊರಟರು. ಅವರು ಹೋಗುತ್ತಿರುವಾಗ ಆತನಿಗೆ ನಿದ್ರೆ ಹತ್ತಿತು, ಅಷ್ಟರಲ್ಲಿ ಬಿರುಗಾಳಿ ಸಮುದ್ರದಲ್ಲಿ ಬೀಸಿ ದೋಣಿಯೊಳಗೆ ನೀರು ತುಂಬಿಕೊಂಡದ್ದರಿಂದ ಅವರೆಲ್ಲರು ಅಪಾಯಕ್ಕೆ ಗುರಿಯಾದರು. ಹೀಗಿರಲಾಗಿ ಅವರು ಆತನ ಹತ್ತಿರ ಬಂದು, "ಗುರುವೇ, ಗುರುವೇ, ನಾವು ಸಾಯುತ್ತಿದ್ದೇವೆ" ಎಂದು ಹೇಳಿ ಆತನನ್ನು ಎಬ್ಬಿಸಿದರು. ಆಗ ಆತನು ಎದ್ದು ಗಾಳಿಯನ್ನೂ ಏರಿ ಬರುತ್ತಿದ್ದ ನೀರಿನ ಅಲೆಗಳನ್ನೂ ಗದರಿಸಿದನು. ಆಗ ಅವು ನಿಂತು, ಶಾಂತವಾಯಿತು. ತರುವಾಯ ಆತನು, "ನಿಮ್ಮ ನಂಬಿಕೆ ಎಲ್ಲಿ?" ಎಂದು ಅವರನ್ನು ಕೇಳಿದನು. ಅವರು ಭಯಪಟ್ಟು, "ಈತನು ಯಾರಿರಬಹುದು? ಗಾಳಿಗೂ ನೀರಿಗೂ ಅಪ್ಪಣೆ ಕೊಡುತ್ತಾನೆ. ಅವು ಕೂಡ ಈತನು ಹೇಳಿದ ಹಾಗೆ ಕೇಳುತ್ತವಲ್ಲಾ?" ಎಂದು ಆಶ್ಚರ್ಯಪಟ್ಟು ಒಬ್ಬರಿಗೊಬ್ಬರು ಮಾತನಾಡಿಕೊಂಡು.
ಯೇಸು ಸಮುದ್ರದ ಮೇಲಣ ಬಿರುಗಾಳಿಯನ್ನು ಶಾಂತಗೊಳಿಸಿದ್ದು
ಒಂದು ದಿನ ಯೇಸು ತನ್ನ ಶಿಷ್ಯರೊಂದಿಗೆ ದೋಣಿಯನ್ನು ಹತ್ತಿ, "ಸಮುದ್ರದ ಆಚೇ ದಡಕ್ಕೆ ಹೋಗೋಣ" ಎಂದು ಹೇಳಲು, ಅವರು ದೋಣಿಯನ್ನು ಸಾಗಿಸಿ ಹೊರಟರು. ಅವರು ಹೋಗುತ್ತಿರುವಾಗ ಆತನಿಗೆ ನಿದ್ರೆ ಹತ್ತಿತು, ಅಷ್ಟರಲ್ಲಿ ಬಿರುಗಾಳಿ ಸಮುದ್ರದಲ್ಲಿ ಬೀಸಿ ದೋಣಿಯೊಳಗೆ ನೀರು ತುಂಬಿಕೊಂಡದ್ದರಿಂದ ಅವರೆಲ್ಲರು ಅಪಾಯಕ್ಕೆ ಗುರಿಯಾದರು. ಹೀಗಿರಲಾಗಿ ಅವರು ಆತನ ಹತ್ತಿರ ಬಂದು, "ಗುರುವೇ, ಗುರುವೇ, ನಾವು ಸಾಯುತ್ತಿದ್ದೇವೆ" ಎಂದು ಹೇಳಿ ಆತನನ್ನು ಎಬ್ಬಿಸಿದರು. ಆಗ ಆತನು ಎದ್ದು ಗಾಳಿಯನ್ನೂ ಏರಿ ಬರುತ್ತಿದ್ದ ನೀರಿನ ಅಲೆಗಳನ್ನೂ ಗದರಿಸಿದನು. ಆಗ ಅವು ನಿಂತು, ಶಾಂತವಾಯಿತು. ತರುವಾಯ ಆತನು, "ನಿಮ್ಮ ನಂಬಿಕೆ ಎಲ್ಲಿ?" ಎಂದು ಅವರನ್ನು ಕೇಳಿದನು. ಅವರು ಭಯಪಟ್ಟು, "ಈತನು ಯಾರಿರಬಹುದು? ಗಾಳಿಗೂ ನೀರಿಗೂ ಅಪ್ಪಣೆ ಕೊಡುತ್ತಾನೆ. ಅವು ಕೂಡ ಈತನು ಹೇಳಿದ ಹಾಗೆ ಕೇಳುತ್ತವಲ್ಲಾ?" ಎಂದು ಆಶ್ಚರ್ಯಪಟ್ಟು ಒಬ್ಬರಿಗೊಬ್ಬರು ಮಾತನಾಡಿಕೊಂಡು.
ಯೇಸು ದೆವ್ವಗಳ ದಂಡಿನಿಂದ ಹಿಡಿಯಲ್ಪಟ್ಟವನನ್ನು ಬಿಡಿಸಿದ್ದು
ಆ ಮೇಲೆ ಅವರು ಗಲಿಲಾಯಕ್ಕೆ ಎದುರಾಗಿರುವ ಗೆರಸೇನರ ಸೀಮೆಯನ್ನು ತಲುಪಿದರು.
ಸಂಜೆಯಾಗುತ್ತಿರಲು, ಆ ಹನ್ನೆರಡು ಮಂದಿ ಶಿಷ್ಯರು ಯೇಸುವಿನ ಬಳಿಗೆ ಬಂದು, "ಈ ಗುಂಪಿಗೆ ಅಪ್ಪಣೆಕೊಡು; ಇವರು ಸುತ್ತಲಿರುವ ಹಳ್ಳಿಪಳ್ಳಿಗಳಿಗೆ ಹೋಗಿ ಅವರಿಗೋಸ್ಕರ ಊಟವಸತಿಗಳನ್ನು ಏರ್ಪಡಿಸಿಕೊಳ್ಳಲಿ; ನಾವು ಇಲ್ಲಿ ನಿರ್ಜನ ಪ್ರದೇಶದಲ್ಲಿ ಇದ್ದೇವಲ್ಲಾ" ಎಂದು ಆತನಿಗೆ ಹೇಳಲಾಗಿ, ಆತನು, "ನೀವೇ ಅವರಿಗೆ ಊಟಕ್ಕೆ ಕೊಡಿರಿ" ಅಂದನು. ಅದಕ್ಕವರು, "ನಮ್ಮಲ್ಲಿ ಐದು ರೊಟ್ಟಿ ಎರಡು ಮೀನು ಹೊರತು ಹೆಚ್ಚೇನೂ ಇಲ್ಲ, ನಾವು ಹೋಗಿ ಈ ಜನರಿಗೆಲ್ಲಾ ಆಹಾರವನ್ನು ಕೊಂಡು ತರಬೇಕೋ?" ಅಂದರು. ಅಲ್ಲಿ ಗಂಡಸರೇ ಹೆಚ್ಚು ಕಡಿಮೆ ಐದು ಸಾವಿರ ಮಂದಿಯಿದ್ದರು. ಆಗ ಯೇಸುವು ತನ್ನ ಶಿಷ್ಯರಿಗೆ, "ಇವರನ್ನು ಒಂದೊಂದು ಪಂಕ್ತಿಗೆ ಹೆಚ್ಚುಕಡಿಮೆ ಐವತ್ತೈವತ್ತರಂತೆ ಕೂರಿಸಿರಿ" ಎಂದು ಹೇಳಲು, ಅವರು ಅದರಂತೆ ಮಾಡಿ ಎಲ್ಲರನ್ನೂ ಕುಳ್ಳಿರಿಸಿದರು. ಆ ಮೇಲೆ ಯೇಸುವು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ ಅವುಗಳನ್ನು ಆಶೀರ್ವದಿಸಿ, ಮುರಿದು ಶಿಷ್ಯರ ಕೈಗೆ ಕೊಟ್ಟು, ಇದನ್ನು ಜನರ ಗುಂಪಿಗೆ ಹಂಚಿರಿ ಅಂದನು. ಅವರೆಲ್ಲರು ಊಟಮಾಡಿ ತೃಪ್ತರಾದರು; ನಂತರ ಉಳಿದ ತುಂಡುಗಳನ್ನು ಕೂಡಿಸಲಾಗಿ ಅವು ಹನ್ನೆರಡು ಪುಟ್ಟಿ ಆದವು.
ಯೇಸು ಮಾಡಿದ ಮೊದಲನೆಯ ಸೂಚಕಕಾರ್ಯ
ಮೂರನೆಯ ದಿನದಲ್ಲಿ ಗಲಿಲಾಯದ ಕಾನಾ ಎಂಬ ಊರಿನಲ್ಲಿ ಒಂದು ಮದುವೆ ನಡೆಯಿತು. ಯೇಸುವಿನ ತಾಯಿ ಅಲ್ಲಿ ಇದ್ದಳು. ಯೇಸುವನ್ನೂ ಆತನ ಶಿಷ್ಯರನ್ನೂ ಸಹ ಮದುವೆಗೆ ಕರೆದಿದ್ದರು. ಅಲ್ಲಿ ದ್ರಾಕ್ಷಾರಸವು ಸಾಲದೆ ಹೋದಾಗ, ಯೇಸುವಿನ ತಾಯಿಯು ಆತನಿಗೆ "ಅವರಲ್ಲಿ ದ್ರಾಕ್ಷಾರಸವು ಮುಗಿದುಹೋಗಿದೆ" ಎಂದು ತಿಳಿದಳು. ಯೇಸು ಆಕೆಗೆ "ಅಮ್ಮಾ, ಅದಕ್ಕೆ ನಾನೇನು ಮಾಡಲಿ? ನನ್ನ ಸಮಯವು ಇನ್ನೂ ಬಂದಿಲ್ಲ" ಎಂದು ಉತ್ತರಕೊಟ್ಟನು. ಆತನ ತಾಯಿಯು ಸೇವಕರಿಗೆ "ಆತನು ನಿಮಗೆ ಏನು ಹೇಳುತ್ತಾನೋ ಅದನ್ನು ಮಾಡಿರಿ" ಎಂದಳು. ಯೆಹೂದ್ಯರ ಶುದ್ಧಾಚಾರ ಪದ್ಧತಿಯ ಪ್ರಕಾರ ಅಲ್ಲಿ ಆರು ಕಲ್ಲಿನ ಬಾನೆಗಳು ಇದ್ದವು. ಪ್ರತಿಯೊಂದು ಬಾನೆಯೂ ಎರಡು ಇಲ್ಲವೆ ಮೂರು ಕೊಳಗ ನೀರು ಹಿಡಿಯುವ ಅಳತೆಯುಳ್ಳದ್ದಾಗಿತ್ತು. ಯೇಸು ಅವರಿಗೆ, "ಆ ಬಾನೆಗಳಲ್ಲಿ ನೀರು ತುಂಬಿರಿ" ಎಂದನು. ಅವರು ಅವುಗಳನ್ನು ಕಂಠದವರೆಗೆ ತುಂಬಿದರು. ಅನಂತರ ಆತನು ಸೇವಕರಿಗೆ, "ಈಗ ಇದನ್ನು ತೆಗೆದುಕೊಂಡು ಹೋಗಿ ಔತಣದ ಮೇಲ್ವಿಚಾರಕನಿಗೆ ಕೊಡಿರಿ" ಎಂದು ಹೇಳಿದಾಗ, ಅವರು ತೆಗೆದುಕೊಂಡು ಹೋಗಿ ಕೊಟ್ಟರು. ಔತಣದ ಮೇಲ್ವಿಚಾರಕನು ದ್ರಾಕ್ಷಾರಸವಾಗಿ ಮಾರ್ಪಟ್ಟಿದ್ದ ನೀರನ್ನು ರುಚಿನೋಡಿದಾಗ, ಅದು ಎಲ್ಲಿಂದ ಬಂದಿತೆಂದು ಅವನಿಗೆ ತಿಳಿದಿರಲಿಲ್ಲ, ಆದರೆ ನೀರನ್ನು ತೋಡಿಕೊಂಡು ತಂದ ಸೇವಕರಿಗೆ ತಿಳಿದಿತ್ತು. ಔತಣದ ಮೇಲ್ವಿಚಾರಕನು ಮದುಮಗನನ್ನು ಕರೆದು, "ಎಲ್ಲರೂ ಉತ್ತಮವಾದ ದ್ರಾಕ್ಷಾರಸವನ್ನು ಮೊದಲು ಕೊಟ್ಟು ಅಮಲೇರಿದ ಮೇಲೆ ಸಾಧಾರಣವಾದ ದ್ರಾಕ್ಷಾರಸವನ್ನು ಕೊಡುತ್ತಾರೆ. ನೀನಾದರೋ ಉತ್ತಮವಾದ ದ್ರಾಕ್ಷಾರಸವನ್ನು ಇದುವರೆಗೂ ಇಟ್ಟುಕೊಂಡಿರುವೆ" ಎಂದನು. ಯೇಸು ಈ ಮೊದಲನೆಯ ಸೂಚಕ ಕಾರ್ಯವನ್ನು ಗಲಿಲಾಯದ ಕಾನಾ ಊರಿನಲ್ಲಿ ಮಾಡಿ, ತನ್ನ ಮಹಿಮೆಯನ್ನು ತೋರ್ಪಡಿಸಿದನು. ಇದರಿಂದ ಆತನ ಶಿಷ್ಯರು ಆತನಲ್ಲಿ ನಂಬಿಕೆಯಿಟ್ಟರು.
ತಾನು ಮಾಡಲಿದ್ದಕಾರ್ಯ ಯೇಸುವಿಗೆ ತಿಳಿದಿದ್ದರೂ, ಫಿಲಿಪ್ಪನನ್ನು ಪರೀಕ್ಷಿಸುವ ಸಲುವಾಗಿ, ಆ ಪ್ರಶ್ನೆಯನ್ನು ಕೇಳಿದನು. ಅದಕ್ಕೆ ಫಿಲಿಪ್ಪನು, "ಪ್ರತಿಯೊಬ್ಬನಿಗೆ ಸ್ವಲ್ಪ ಸ್ವಲ್ಪ ಸಿಕ್ಕಬೇಕಾದರೂ ಇನ್ನೂರು ದಿನಾರಿ ಮೌಲ್ಯದ ರೊಟ್ಟಿಯಾದರೂ ಅವರಿಗೆ ಸಾಲುವುದಿಲ್ಲ" ಎಂದನು. ಆಗ ಆತನ ಶಿಷ್ಯರಲ್ಲಿ ಒಬ್ಬನಾಗಿರುವ ಸೀಮೋನ್ ಪೇತ್ರನ ತಮ್ಮನಾದ ಅಂದ್ರೆಯನು ಆತನಿಗೆ; "ಇಲ್ಲಿ ಒಬ್ಬ ಹುಡುಗನ ಬಳಿಯಲ್ಲಿ ಐದು ಜವೆಗೋದಿಯ ರೊಟ್ಟಿಗಳೂ, ಎರಡು ಮೀನುಗಳೂ ಇವೆ. ಆದರೆ ಇಷ್ಟೊಂದು ಜನರಿಗೆ ಅವು ಯಾತಕ್ಕಾದಾವು?" ಎಂದು ಹೇಳಲು, ಯೇಸು "ಆ ಜನರನ್ನು ಊಟಕ್ಕೆ ಕುಳ್ಳಿರಿಸಿರಿ" ಎಂದನು. ಆ ಸ್ಥಳದಲ್ಲಿ ಬಹಳ ಹುಲ್ಲು ಬೆಳೆದಿತ್ತು. ಜನರು ಹುಲ್ಲಿನ ಮೇಲೆ ಕುಳಿತುಕೊಂಡರು. ಗಂಡಸರ ಸಂಖ್ಯೆ ಹೆಚ್ಚುಕಡಿಮೆ ಐದು ಸಾವಿರವಿತ್ತು. ಆಮೇಲೆ ಯೇಸು ಆ ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿ, ಕುಳಿತಿದ್ದವರಿಗೆ ಹಂಚಿದನು. ಅದೇ ರೀತಿ ಮೀನುಗಳನ್ನು ಅವರಿಗೆ ಬೇಕಾದಷ್ಟು ಹಂಚಿದನು. ಅವರಿಗೆ ತೃಪ್ತಿಯಾದ ಮೇಲೆ ಯೇಸು ತನ್ನ ಶಿಷ್ಯರಿಗೆ, "ಮಿಕ್ಕ ತುಂಡುಗಳನ್ನು ಕೂಡಿಸಿರಿ, ಇದರಲ್ಲಿ ಯಾವುದೂ ವ್ಯರ್ಥವಾಗಬಾರದು" ಎಂದು ಹೇಳಿದನು. ಅವರು ಆ ಐದು ಜವೆಗೋದಿಯ ರೊಟ್ಟಿಗಳಲ್ಲಿ ಜನರು ತಿಂದು ಮಿಕ್ಕ ತುಂಡುಗಳನ್ನು ಕೂಡಿಸಿ, ಹನ್ನೆರಡು ಪುಟ್ಟಿಗಳಿಗೆ ತುಂಬಿಸಿದರು.
ಹೀಗಿರಲಾಗಿ ಅವರು ಹುಟ್ಟು ಹಾಕುತ್ತಾ ಸುಮಾರು ಒಂದು ಹರದಾರಿ ದೂರ ಹೋದ ಬಳಿಕ ಯೇಸು ನೀರಿನ ಮೇಲೆ ನಡೆಯುತ್ತಾ ದೋಣಿಯ ಸಮೀಪಕ್ಕೆ ಬರುವುದನ್ನು ನೋಡಿ ಭಯಪಟ್ಟರು. ಆದರೆ ಯೇಸು ಅವರಿಗೆ, "ಭಯಪಡಬೇಡಿರಿ, ನಾನೇ!" ಎಂದನು. ಆಗ ಆತನನ್ನು ದೋಣಿಯಲ್ಲಿ ಸೇರಿಸಿಕೊಳ್ಳಬೇಕೆಂದಿದ್ದರು. ಆ ಕ್ಷಣವೇ ದೋಣಿಯು ಅವರು ಹೋಗಬೇಕಾಗಿದ್ದ ದಡಕ್ಕೆ ಮುಟ್ಟಿತು.
ಯೇಸು ತನ್ನ ಶಿಷ್ಯರಿಗೆ ಪುನಃ ದರ್ಶನಕೊಟ್ಟದ್ದು
ತರುವಾಯ ಯೇಸು ತಿಬೇರಿಯ ಸಮುದ್ರದ ಬಳಿಯಲ್ಲಿ ಶಿಷ್ಯರಿಗೆ ಪುನಃ ಕಾಣಿಸಿಕೊಂಡನು: ಸೀಮೋನ್ ಪೇತ್ರನೂ, ದಿದುಮನೆಂಬ ತೋಮನೂ, ಗಲಿಲಾಯದ ಕಾನಾ ಊರಿನ ನತಾನಯೇಲನೂ, ಜೆಬೆದಾಯನ ಮಕ್ಕಳೂ ಮತ್ತು ಆತನ ಶಿಷ್ಯರಲ್ಲಿ ಇನ್ನಿಬ್ಬರೂ ಕೂಡಿಬಂದಿದ್ದರು. ಆಗ ಅವರಿಗೆ ಸೀಮೋನ ಪೇತ್ರನು, "ನಾನು ಮೀನು ಹಿಡಿಯಲು ಹೋಗುತ್ತೇನೆ" ಎಂದು ಹೇಳಲು ಅವರು ಅವನಿಗೆ, "ನಾವೂ ಸಹ ನಿನ್ನ ಜೊತೆಯಲ್ಲಿ ಬರುತ್ತೇವೆ" ಎಂದರು. ಅವರು ಹೊರಟು ದೋಣಿಯನ್ನು ಹತ್ತಿದರು. ಆದರೆ ಆ ರಾತ್ರಿ ಅವರಿಗೆ ಏನೂ ಸಿಗಲಿಲ್ಲ. ಬೆಳಗಾಗುವಾಗ ಯೇಸು ದಡದಲ್ಲಿ ನಿಂತಿದ್ದನು. ಆದಾಗ್ಯೂ ಶಿಷ್ಯರು ಆತನನ್ನು ಯೇಸುವೇ ಎಂದು ಗುರುತಿಸಲಿಲ್ಲ. ಆಗ ಯೇಸು ಅವರನ್ನು, "ಮಕ್ಕಳಿರಾ, ನಿಮ್ಮಲ್ಲಿ ಮೀನುಗಳು ಉಂಟೋ?" ಎಂದು ಕೇಳಲು, ಅವರು ಆತನಿಗೆ "ಇಲ್ಲ" ಎಂದು ಉತ್ತರಕೊಟ್ಟರು. ಆತನು ಅವರಿಗೆ, "ನೀವು ದೋಣಿಯ ಬಲಗಡೆಯಲ್ಲಿ ಬಲೆಯನ್ನು ಬೀಸಿರಿ; ಆಗ ನಿಮಗೆ ಸಿಕ್ಕುತ್ತವೆ" ಎಂದು ಹೇಳಿದನು. ಅವರು ಬಲೆ ಬೀಸಿದಾಗ ಮೀನುಗಳು ರಾಶಿ ರಾಶಿಯಾಗಿ ಬಲೆಗೆ ಬಂದು ಸೇರಿದ್ದರಿಂದ, ಅವರಿಗೆ ಬಲೆಯನ್ನು ಎಳೆಯುವುದಕ್ಕೆ ಸಾಧ್ಯವಾಗದೆ ಹೋಯಿತು. ಆಗ ಯೇಸುವಿಗೆ ಪ್ರಿಯನಾಗಿದ್ದ ಶಿಷ್ಯನು ಪೇತ್ರನಿಗೆ, "ಆತನು ಕರ್ತನೇ" ಎಂದು ಹೇಳಿದನು. ಸೀಮೋನ್ ಪೇತ್ರನು ಅದನ್ನು ಕೇಳಿ ತಾನು ತೆಗೆದು ಬಿಟ್ಟಿದ್ದ ತನ್ನ ಮೇಲಂಗಿಯನ್ನು ಸುತ್ತಿಕೊಂಡು ಸಮುದ್ರದೊಳಗೆ ಧುಮುಕಿದನು. ದಡವು ದೂರವಿರಲಿಲ್ಲ, ಹೆಚ್ಚು ಕಡಿಮೆ ಇನ್ನೂರು ಅಡಿ ದೂರವಿತ್ತು. ಉಳಿದ ಶಿಷ್ಯರು ಮೀನು ತುಂಬಿದ್ದ ಆ ಬಲೆಯನ್ನು ಎಳೆಯುತ್ತಾ ದೋಣಿಯಲ್ಲಿಯೇ ಬಂದರು. ಅವರು ದಡಕ್ಕೆ ಬಂದು ಸೇರಿದಾಗ, ಕೆಂಡಗಳನ್ನೂ ಅವುಗಳ ಮೇಲೆ ಇಟ್ಟಿದ್ದ ಮೀನುಗಳನ್ನು ಮತ್ತು ರೊಟ್ಟಿಯನ್ನು ಕಂಡರು. ಯೇಸು ಅವರಿಗೆ, "ನೀವು ಈಗ ಹಿಡಿದ ಮೀನುಗಳಲ್ಲಿ ಕೆಲವನ್ನು ತನ್ನಿರಿ" ಎಂದು ಹೇಳಲು, ಸೀಮೋನ್ ಪೇತ್ರನು ದೋಣಿಯನ್ನು ಹತ್ತಿ ಬಲೆಯನ್ನು ದಡಕ್ಕೆ ಎಳದುಕೊಂಡು ಬಂದನು. ಅದು ನೂರೈವತ್ಮೂರು ದೊಡ್ಡ ಮೀನುಗಳಿಂದ ತುಂಬಿತ್ತು. ಅಷ್ಟು ಮೀನುಗಳು ಇದ್ದರೂ ಬಲೆಯು ಹರಿದಿರಲಿಲ್ಲ.
Libertações
Jesus expulsou demônios com autoridade. Os espíritos impuros não resistiam à sua palavra e saíam imediatamente.
ಶತಾಧಿಪತಿಯ ಆಳನ್ನು ಸ್ವಸ್ಥಮಾಡಿದ್ದು
ಯೇಸು ಕಪೆರ್ನೌಮಿಗೆ ಬಂದಾಗ ಒಬ್ಬ ದಂಡಿನ ಶತಾಧಿಪತಿಯು ಆತನ ಬಳಿಗೆ ಬಂದು, "ಕರ್ತನೇ, ನನ್ನ ಆಳು ಪಾರ್ಶ್ವವಾಯುವಿನ ನಿಮಿತ್ತ ತೀವ್ರವಾದ ನೋವಿನಿಂದ ಮನೆಯಲ್ಲಿ ಮಲಗಿ ನರಳುತ್ತಿದ್ದಾನೆ" ಎಂದು ಹೇಳಿದನು. ಯೇಸು ಅವನಿಗೆ, "ನಾನು ಬಂದು ಅವನನ್ನು ವಾಸಿ ಮಾಡುತ್ತೇನೆ" ಎಂದು ಹೇಳಲು, ಆ ಶತಾಧಿಪತಿಯು, "ಕರ್ತನೇ, ನೀನು ನನ್ನ ಮನೆಗೆ ಬರುವಷ್ಟು ಯೋಗ್ಯತೆ ನನ್ನಲ್ಲಿಲ್ಲ; ನೀನು ಒಂದು ಮಾತು ಹೇಳಿದರೆ ಸಾಕು, ನನ್ನ ಆಳಿಗೆ ಗುಣವಾಗುವುದು. ನಾನು ಸಹ ಅಧಿಕಾರದ ಕೆಳಗಿರುವ ಮನುಷ್ಯನು; ನನ್ನ ಕೈಕೆಳಗೆ ಸಿಪಾಯಿಗಳಿದ್ದಾರೆ; ನಾನು ಅವರಲ್ಲಿ ಒಬ್ಬನಿಗೆ ‘ಹೋಗು’ ಎಂದು ಹೇಳಿದರೆ ಹೋಗುತ್ತಾನೆ; ಮತ್ತೊಬ್ಬನಿಗೆ ‘ಬಾ’ ಎಂದು ಹೇಳಿದರೆ ಬರುತ್ತಾನೆ; ‘ನನ್ನ ಆಳಿಗೆ ಇಂಥಿಂಥದ್ದನ್ನು ಮಾಡು’ ಎಂದು ಹೇಳಿದರೆ ಮಾಡುತ್ತಾನೆ" ಅಂದನು. ಯೇಸು ಇದನ್ನು ಕೇಳಿ ಆಶ್ಚರ್ಯಚಕಿತನಾದನು, ತನ್ನ ಹಿಂದೆ ಬರುತ್ತಿದ್ದವರಿಗೆ, "ನಾನು ಇಂಥಾ ಮಹತ್ತರವಾದ ನಂಬಿಕೆಯನ್ನು ಇಸ್ರಾಯೇಲ್ ಜನರಲ್ಲಿಯೂ ಕಾಣಲಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅಂದನು. ಇದಲ್ಲದೆ ನಿಮಗೆ ಹೇಳುವುದೇನಂದರೆ ಪೂರ್ವ ಪಶ್ಚಿಮ ದಿಕ್ಕುಗಳಿಂದ ಬಹಳ ಜನ ಬಂದು ಪರಲೋಕ ರಾಜ್ಯದಲ್ಲಿ ಅಬ್ರಹಾಮ, ಇಸಾಕ, ಯಾಕೋಬ ಎಂಬುವವರ ಸಂಗಡ ಊಟಕ್ಕೆ ಕುಳಿತುಕೊಳ್ಳುವರು; ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಗೆ ಎಸೆಯಲ್ಪಡುವರು; ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು" ಎಂದು ಹೇಳಿದನು. ಬಳಿಕ ಯೇಸು ಆ ಶತಾಧಿಪತಿಗೆ, "ನೀನು ನಂಬಿದಂತೆ ನಿನಗಾಗಲಿ, ಹೋಗು" ಎಂದು ಹೇಳಿದನು. ಅದೇ ಗಳಿಗೆಯಲ್ಲಿ ಅವನ ಆಳಿಗೆ ಗುಣವಾಯಿತು.
ಯೇಸು ಇಬ್ಬರಿಂದ ಅನೇಕ ದೆವ್ವಗಳನ್ನು ಬಿಡಿಸಿದ್ದು
ಆಮೇಲೆ ಆತನು ಆಚೇದಡಕ್ಕೆ ಗದರೇನರ ಸೀಮೆಗೆ ಬಂದಾಗ ದೆವ್ವಹಿಡಿದವರಿಬ್ಬರು ಸಮಾಧಿಯ ಗವಿಗಳೊಳಗಿಂದ ಹೊರಟು ಆತನೆದುರಿಗೆ ಬಂದರು. ಅವರು ಮಹಾಕ್ರೂರಿಗಳಾಗಿದ್ದುದರಿಂದ ಆ ದಾರಿಯಲ್ಲಿ ಯಾರೂ ತಿರುಗಾಡುತ್ತಿರಲಿಲ್ಲ. ಅವರು, "ದೇವರ ಕುಮಾರನೇ, ನಮ್ಮ ಗೊಡವೆ ನಿನಗೇಕೆ? ಕಾಲ ಬರುವುದಕ್ಕಿಂತ ಮೊದಲೇ ನಮ್ಮನ್ನು ದಂಡಿಸುವುದಕ್ಕೆ ಇಲ್ಲಿಗೆ ಬಂದಿರುವೆಯಾ" ಎಂದು ಕೂಗಿದರು. ಅವರಿಂದ ಸ್ವಲ್ಪ ದೂರದಲ್ಲಿ ಬಹಳ ಹಂದಿಗಳ ಒಂದು ಹಿಂಡು ಮೇಯುತ್ತಿತ್ತು. ಆ ದೆವ್ವಗಳು, "ನೀನು ನಮ್ಮನ್ನು ಇವರೊಳಗಿಂದ ಹೊರಡಿಸುವುದಾದರೆ ಆ ಹಂದಿಯ ಗುಂಪಿನೊಳಗೆ ನಮ್ಮನ್ನು ಕಳುಹಿಸಿಕೊಡು" ಎಂದು ಬೇಡಿಕೊಂಡವು. ಆತನು ಅವುಗಳಿಗೆ, "ಹೋಗಿರಿ" ಅನ್ನಲು ಅವು ಹೊರಗೆ ಬಂದು ಹಂದಿಗಳೊಳಗೆ ಹೊಕ್ಕವು; ಅ ಕ್ಷಣವೇ ಆ ಗುಂಪೆಲ್ಲಾ ಓಡಿ ಕಡಿದಾದ ಸ್ಥಳದಿಂದ ಸಮುದ್ರದೊಳಗೆ ಬಿದ್ದು ನೀರಿನಲ್ಲಿ ಮುಳುಗಿ ಸತ್ತು ಹೋದವು. ಹಂದಿಗಳನ್ನು ಮೇಯಿಸುವವರು ಊರೊಳಕ್ಕೆ ಓಡಿಹೋಗಿ ಇದೆಲ್ಲವನ್ನು ದೆವ್ವಹಿಡಿದವರ ಸಂಗತಿ ಸಹಿತವಾಗಿ ತಿಳಿಸಲು; ಆಗ ಊರಿನವರೆಲ್ಲರೂ ಯೇಸುವನ್ನು ಸಂಧಿಸಲು ಹೊರಟುಬಂದು ಆತನನ್ನು ಕಂಡು ತಮ್ಮ ಸೀಮೆಯನ್ನು ಬಿಟ್ಟು ಹೋಗಬೇಕೆಂದು ಬೇಡಿಕೊಂಡರು.
ಅವರು ಹೊರಟುಹೋಗುತ್ತಿರುವಾಗ ದೆವ್ವಹಿಡಿದ ಒಬ್ಬ ಮೂಕನನ್ನು ಯೇಸುವಿನ ಬಳಿಗೆ ಕರೆತಂದರು. ದೆವ್ವ ಬಿಡಿಸಿದ ಮೇಲೆ ಮೂಕನಾಗಿದ್ದ ಅವನು ಮಾತನಾಡುವವನಾದನು. ಅದಕ್ಕೆ ಜನರು, "ಇಸ್ರಾಯೇಲಿನಲ್ಲಿ ಇಂಥ ಕಾರ್ಯವನ್ನು ಇದುವರೆಗೂ ಯಾರೂ ನೋಡಲಿಲ್ಲವೆಂದು" ಆಶ್ಚರ್ಯಚಕಿತರಾದರು.
ಯೇಸು ಮತ್ತು ಬೆಲ್ಜೆಬೂಲನು
ದೆವ್ವ ಹಿಡಿದ ಕುರುಡನೂ, ಮೂಕನೂ ಆಗಿರುವ ಒಬ್ಬನನ್ನು ಯೇಸುವಿನ ಬಳಿಗೆ ಕರೆತಂದರು. ಆತನು ಅವನನ್ನು ಸ್ವಸ್ಥಮಾಡಲು ಆ ಮೂಕನಿಗೆ ಮಾತು ಹಾಗೂ ದೃಷ್ಟಿ ಎರಡೂ ಬಂದವು.
ಕಾನಾನ್ಯ ಸ್ತ್ರೀಯ ನಂಬಿಕೆ
ಅನಂತರ ಯೇಸು ಅಲ್ಲಿಂದ ಹೊರಟು ತೂರ್ ಸೀದೋನ್ ಪಟ್ಟಣಗಳ ಪ್ರಾಂತ್ಯಗಳಿಗೆ ಹೋದನು. ಆ ಸೀಮೆಯಿಂದ ಕಾನಾನ್ಯಳಾದ ಸ್ತ್ರೀಯೊಬ್ಬಳು ಹೊರಟು ಬಂದು, "ಕರ್ತನೇ, ದಾವೀದನ ಕುಮಾರನೇ, ನನ್ನ ಮೇಲೆ ಕರುಣೆಯಿಡು, ನನ್ನ ಮಗಳಿಗೆ ದೆವ್ವಹಿಡಿದು ಬಹಳ ಯಾತನೆಪಡುತ್ತಿದ್ದಾಳೆ" ಎಂದು ಕೂಗಿಕೊಂಡಳು. ಆದರೆ ಆತನು ಆಕೆಗೆ ಏನೂ ಉತ್ತರ ಕೊಡಲಿಲ್ಲ. ಆಗ ಆತನ ಶಿಷ್ಯರು ಬಂದು, "ಅವಳು ನಮ್ಮ ಹಿಂದೆ ಕೂಗಿಕೊಂಡು ಬರುತ್ತಿದ್ದಾಳೆ. ಆಕೆಯನ್ನು ಕಳುಹಿಸಿಬಿಡು" ಎಂದು ಆತನನ್ನು ಬೇಡಿಕೊಂಡರು. ಆದರೆ ಯೇಸು ಹೇಳಿದ್ದೇನೆಂದರೆ "ಕಳೆದುಹೋದ ಕುರಿಗಳಂತಿರುವ ಇಸ್ರಾಯೇಲ್ ಮನೆತನದವರ ಬಳಿಗೇ ಹೊರತು ಮತ್ತಾರ ಬಳಿಗೂ ನಾನು ಕಳುಹಿಸಲ್ಪಟ್ಟವನಲ್ಲ" ಅಂದನು. ಆಗ ಆಕೆ ಬಂದು ಆತನ ಮುಂದೆ ಅಡ್ಡ ಬಿದ್ದು, "ಕರ್ತನೇ ನನಗೆ ಸಹಾಯಮಾಡು" ಅಂದಳು. ಅದಕ್ಕಾತನು, "ಮಕ್ಕಳ ರೊಟ್ಟಿಯನ್ನು ತೆಗೆದುಕೊಂಡು ನಾಯಿಮರಿಗಳಿಗೆ ಹಾಕುವುದು ಸರಿಯಲ್ಲ" ಎಂದು ಉತ್ತರಕೊಟ್ಟನು. ಆಕೆಯು, "ಹೌದು, ಕರ್ತನೇ, ಆದರೆ ನಾಯಿಮರಿಗಳಂತೂ ತಮ್ಮ ಯಜಮಾನನ ಮೇಜಿನಿಂದ ಬೀಳುವ ರೊಟ್ಟಿಯ ತುಂಡುಗಳನ್ನು ತಿನ್ನುತ್ತವಲ್ಲಾ" ಅಂದಳು. ಆಗ ಯೇಸು ಆಕೆಗೆ, "ಸ್ತ್ರೀಯೇ ನಿನ್ನ ನಂಬಿಕೆ ದೊಡ್ಡದು. ನಿನ್ನ ಇಷ್ಟದಂತೆಯೇ ನಿನಗಾಗಲಿ" ಎಂದು ಉತ್ತರಕೊಟ್ಟನು. ಅದೇ ಗಳಿಗೆಯಲ್ಲಿ ಆಕೆಯ ಮಗಳು ಸ್ವಸ್ಥವಾದಳು.
ಮೂರ್ಛೆರೋಗಿಯನ್ನು ಸ್ವಸ್ಥಮಾಡಿದ್ದು
ಅವರು ಜನರ ಗುಂಪಿನ ಬಳಿಗೆ ಬಂದಾಗ ಒಬ್ಬನು ಆತನ ಹತ್ತಿರಕ್ಕೆ ಬಂದು ಆತನ ಮುಂದೆ ಮೊಣಕಾಲೂರಿ, "ಕರ್ತನೇ ನನ್ನ ಮಗನನ್ನು ಕರುಣಿಸು, ಅವನು ಮೂರ್ಛೆರೋಗದಿಂದ ಬಹಳ ಕಷ್ಟಪಡುತ್ತಿದ್ದಾನೆ. ಅನೇಕ ಬಾರಿ ಬೆಂಕಿಯಲ್ಲಿಯೂ, ನೀರಿನಲ್ಲಿಯೂ ಬೀಳುತ್ತಾನೆ. ಅವನನ್ನು ನಿನ್ನ ಶಿಷ್ಯರ ಬಳಿಗೆ ಕರತಂದಿದ್ದೆನು. ಆದರೆ ಗುಣಪಡಿಸುವುದಕ್ಕೆ ಅವರಿಂದ ಆಗಲಿಲ್ಲ" ಅಂದನು. ಅದಕ್ಕೆ ಯೇಸು, "ಎಲಾ ಅಪನಂಬಿಕೆಯುಳ್ಳ ವಕ್ರಬುದ್ಧಿಯುಳ್ಳ ಸಂತಾನವೇ, ನಾನು ಇನ್ನೆಷ್ಟು ಕಾಲ ನಿಮ್ಮ ಸಂಗಡ ಇರಲಿ? ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ಇಲ್ಲಿ ನನ್ನ ಬಳಿಗೆ ಕರತನ್ನಿರಿ" ಅಂದನು. ಯೇಸು ಅವನ ಮೇಲಿದ್ದ ದೆವ್ವವನ್ನು ಗದರಿಸಲು ಆ ದೆವ್ವವು ಅವನನ್ನು ಬಿಟ್ಟುಹೋಯಿತು. ಆ ಕ್ಷಣವೇ ಆ ಹುಡುಗನಿಗೆ ಸ್ವಸ್ಥವಾಯಿತು.
ಆಗ ಅವರ ಸಭಾಮಂದಿರದಲ್ಲಿ ದೆವ್ವಹಿಡಿದ ಒಬ್ಬ ಮನುಷ್ಯನಿದ್ದನು. ಆ ದೆವ್ವವು, "ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನೀನು ನಮ್ಮನ್ನು ನಾಶಮಾಡುವುದಕ್ಕೆ ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು. ನೀನು ದೇವರಿಂದ ಬಂದ ಪರಿಶುದ್ಧನು" ಎಂದು ಕೂಗಿ ಹೇಳಿತು. ಯೇಸು ಅದನ್ನು ಗದರಿಸಿ, "ಸುಮ್ಮನಿರು, ಅವನನ್ನು ಬಿಟ್ಟು ಹೊರಗೆ ಬಾ" ಎಂದನು. ಆ ದೆವ್ವವು ಅವನನ್ನು ಒದ್ದಾಡಿಸಿ ಗಟ್ಟಿಯಾಗಿ ಕೂಗುತ್ತಾ, ಅವನೊಳಗಿಂದ ಹೊರಗೆ ಬಂದಿತು.
ದೆವ್ವಗಳ ದಂಡಿನಿಂದ ಹಿಡಿಯಲ್ಪಟ್ಟವನನ್ನು ಬಿಡಿಸಿದ್ದು
ಆ ಮೇಲೆ ಅವರು ಸಮುದ್ರದ ಆಚೇದಡದಲ್ಲಿದ್ದ ಗೆರಸೇನರ ಸೀಮೆಗೆ ತಲುಪಿದರು. ಯೇಸು ದೋಣಿಯಿಂದ ಇಳಿದು ಬಂದ ಕೂಡಲೆ ದೆವ್ವ ಹಿಡಿದ ಒಬ್ಬ ಮನುಷ್ಯನು ಸಮಾಧಿಯ ಗವಿಗಳೊಳಗಿಂದ ಬಂದು ಆತನನ್ನು ಸಂಧಿಸಿದನು. ಅವನಿಗೆ ಸಮಾಧಿಯಲ್ಲಿನ ಗವಿಗಳೇ ವಾಸಸ್ಥಳವಾಗಿತ್ತು. ಅವನನ್ನು ಅನೇಕಸಾರಿ ಬೇಡಿಗಳಿಂದ ಮತ್ತು ಸರಪಣಿಗಳಿಂದ ಕಟ್ಟಿದ್ದರೂ ಅವನು ಸರಪಣಿಗಳನ್ನು ಕಿತ್ತು ಬೇಡಿಗಳನ್ನು ತುಂಡುತುಂಡು ಮಾಡುಬಿಡುತಿದ್ದನು; ಅವನನ್ನು ಯಾರೂ ಯಾವ ಸರಪಣಿಯಿಂದಲೂ ಕಟ್ಟಲಾರದೆ ಹೋದರು; ಅವನನ್ನು ಹತೋಟಿಗೆ ತರುವುದಕ್ಕೆ ಯಾರಿಂದಲೂ ಆಗಲಿಲ್ಲ.
ಅವನು ರಾತ್ರಿ ಮತ್ತು ಹಗಲು ಸಮಾಧಿಯ ಗವಿಗಳಲ್ಲಿ ಮತ್ತು ಗುಡ್ಡಗಳ ಮೇಲೆ ಆರ್ಭಟಿಸುತ್ತಾ ಚೂಪಾದ ಕಲ್ಲುಗಳಿಂದ ತನ್ನನ್ನು ಗಾಯಮಾಡಿಕೊಳ್ಳುತ್ತಾ ಇದ್ದನು. ಅವನು ಯೇಸುವನ್ನು ದೂರದಿಂದ ಕಂಡು ಓಡಿಬಂದು ಆತನಿಗೆ ಅಡ್ಡಬಿದ್ದು, ಮಹಾಶಬ್ದದಿಂದ ಆರ್ಭಟಿಸಿ, "ಯೇಸುವೇ, ಮಹೋನ್ನತನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ದೇವರಾಣೆ ನನ್ನನ್ನು ಹಿಂಸಿಸಬೇಡ ಎಂದು ನಿನ್ನನ್ನು ನಾನು ಬೇಡಿಕೊಳ್ಳುತ್ತೇನೆ" ಎಂದು ಹೇಳಿದನು. ಏಕೆಂದರೆ ಯೇಸು, "ಅಶುದ್ಧಾತ್ಮವೇ ಇವನನ್ನು ಬಿಟ್ಟುಹೋಗು" ಎಂದು ಆಜ್ಞಾಪಿಸಿದ್ದನು.
ಯೇಸು, "ನಿನ್ನ ಹೆಸರು ಏನೆಂದು" ಅವನನ್ನು ಕೇಳಿದ್ದಕ್ಕೆ ಅವನು, "ನನ್ನ ಹೆಸರು ದಂಡು; ಯಾಕೆಂದರೆ ನಾವು ಬಹು ಮಂದಿ ಇದ್ದೇವೆ" ಎಂದು ಹೇಳಿ, ನಮ್ಮನ್ನು ಈ ಪ್ರಾಂತ್ಯದಿಂದ ಹೊರಡಿಸಬೇಡ ಎಂದು ಆತನನ್ನು ಬಹಳವಾಗಿ ಬೇಡಿಕೊಂಡವು.
ಅಲ್ಲಿಯ ಗುಡ್ಡದಲ್ಲಿ ಹಂದಿಗಳ ದೊಡ್ಡ ಹಿಂಡು ಮೇಯುತ್ತಿತ್ತು. ಆ ಅಶುದ್ಧಾತ್ಮಗಳು, "ಆ ಹಂದಿಗಳೊಳಗೆ ಸೇರಿಕೊಳ್ಳುವುದಕ್ಕೆ ನಮ್ಮನ್ನು ಕಳುಹಿಸಿಕೊಡು" ಎಂದು ಆತನನ್ನು ಬೇಡಿಕೊಂಡವು. ಆತನು ಅವುಗಳಿಗೆ ಅನುಮತಿಸಲು ಆ ದೆವ್ವಗಳು ಆ ಮನುಷ್ಯನಿಂದ ಹೊರಗೆ ಬಂದು ಹಂದಿಗಳೊಳಗೆ ಪ್ರವೇಶಿಸಿದವು; ಅಲ್ಲಿ ಹೆಚ್ಚುಕಡಿಮೆ ಎರಡು ಸಾವಿರ ಹಂದಿಗಳಿದ್ದವು. ಆ ಹಂದಿಗಳು ಓಡಿ ಹೋಗಿ ಇಳಿಜಾರು ಸ್ಥಳದಿಂದ ಸಮುದ್ರದೊಳಗೆ ಬಿದ್ದು ನೀರಿನಲ್ಲಿ ಮುಳುಗಿ ಉಸಿರು ಕಟ್ಟಿ ಸತ್ತುಹೋದವು.
ಅವುಗಳನ್ನು ಮೇಯಿಸುವವರು ಓಡಿಹೋಗಿ ನಡೆದಿರುವ ಸಂಗತಿಯನ್ನು ಆ ಊರಲ್ಲಿಯೂ ಪಕ್ಕದ ಹಳ್ಳಿಗಳಲ್ಲಿಯೂ ತಿಳಿಸಲು ಜನರು ನಡೆದ ಸಂಗತಿ ಏನೆಂದು ನೋಡುವುದಕ್ಕೆ ಹೊರಟು ಯೇಸು ಇದ್ದಲ್ಲಿಗೆ ಬಂದರು.
ನೀವಾದರೋ ‘ಒಬ್ಬನು ತನ್ನ ತಂದೆಯನ್ನಾಗಲಿ, ತಾಯಿಯನ್ನಾಗಲಿ ನೋಡಿ, ನಾನು ನಿನ್ನ ಸಂರಕ್ಷಣೆಗಾಗಿ ಕೊಡತಕ್ಕದ್ದನ್ನು ಕೊರ್ಬಾನ್ (ಅಂದರೆ ದೇವರಿಗೆ ಮುಡಿಪು) ಮಾಡಿದ್ದೇನೆ’ ಎಂದು ಹೇಳುವುದಾದರೆ ಅವನು ತನ್ನ ತಂದೆಗಾಗಲಿ, ತಾಯಿಗಾಗಲಿ ಇನ್ನೇನೂ ಸಹಾಯ ಮಾಡಬೇಕಾಗಿಲ್ಲ ಎಂದು ಹೇಳುತ್ತೀರಿ. ಹೀಗೆ ನೀವು ಕಲಿಸುತ್ತಾ ಬಂದಿರುವ ಸಂಪ್ರದಾಯದಿಂದ ದೇವರ ವಾಕ್ಯವನ್ನು ನಿರರ್ಥಕಮಾಡುತ್ತಿದ್ದೀರಿ, ಮತ್ತು ಇಂಥ ಕಾರ್ಯಗಳನ್ನು ಇನ್ನೂ ಎಷ್ಟೋ ಮಾಡುತ್ತೀರಿ" ಎಂದು ಹೇಳಿದನು.
ಆ ಮೇಲೆ ಯೇಸು ಜನರ ಗುಂಪನ್ನು ಪುನಃ ಹತ್ತಿರಕ್ಕೆ ಕರೆದು, "ಎಲ್ಲರೂ ಕಿವಿಗೊಟ್ಟು ನನ್ನ ಮಾತನ್ನು ಕೇಳಿರಿ ಮತ್ತು ಅರ್ಥ ಮಾಡಿಕೊಳ್ಳಿರಿ. ಹೊರಗಿನಿಂದ ಮನುಷ್ಯನ ಒಳಗೆ ಹೋಗುವ ಯಾವುದು ಅವನನ್ನು ಮೈಲಿಗೆ ಮಾಡುವುದಿಲ್ಲ; ಆದರೆ ಮನುಷ್ಯನೊಳಗಿನಿಂದ ಹೊರಗೆ ಬರುವಂಥದು ಮನುಷ್ಯನನ್ನು ಮೈಲಿಗೆ ಮಾಡುವಂಥವುಗಳಾಗಿವೆ" ಎಂದು ಹೇಳಿದನು.
ಯೇಸು ಅನ್ಯಮತಸ್ಥಳ ಮಗಳನ್ನೂ ಸ್ವಸ್ಥಮಾಡಿದ್ದು
ಯೇಸು ಅಲ್ಲಿಂದ ಹೊರಟು ತೂರ್ ಪಟ್ಟಣದ ಪ್ರಾಂತ್ಯಗಳಿಗೆ ಹೋಗಿ ಒಂದು ಮನೆಯೊಳಗೆ ಇಳಿದುಕೊಂಡು ಅದು ಯಾರಿಗೂ ತಿಳಿಯಬಾರದೆಂದು ಬಯಸಿದನು; ಆದರೆ ಆತನು ಗುಪ್ತವಾಗಿರುವುದಕ್ಕೆ ಸಾಧ್ಯವಾಗದೆ ಹೋಯಿತು. ಕೂಡಲೆ ಒಬ್ಬ ಹೆಂಗಸು ಆತನ ಸುದ್ದಿಯನ್ನು ಕೇಳಿ ಬಂದು ಆತನ ಪಾದಕ್ಕೆ ಬಿದ್ದಳು. ಆಕೆಯ ಮಗಳಿಗೆ ದೆವ್ವ ಹಿಡಿದಿತ್ತು. ಆ ಹೆಂಗಸು ಸುರೋಪೊಯಿನಿಕ್ಯದಲ್ಲಿ ಹುಟ್ಟಿದ ಗ್ರೀಕಳಾಗಿದ್ದಳು. ಆಕೆಯು ತನ್ನ ಮಗಳಿಗೆ ಹಿಡಿದಿದ್ದ ದೆವ್ವವನ್ನು ಬಿಡಿಸಬೇಕೆಂದು ಆತನನ್ನು ಬೇಡಿಕೊಂಡಾಗ, ಆತನು ಆಕೆಗೆ, "ಮೊದಲು ಮಕ್ಕಳು ತಿಂದು ತೃಪ್ತಿಯಾಗಲಿ; ಮಕ್ಕಳು ತಿನ್ನುವ ರೊಟ್ಟಿಯನ್ನು ತೆಗೆದು ನಾಯಿಮರಿಗಳಿಗೆ ಹಾಕುವುದು ಸರಿಯಲ್ಲ" ಎಂದು ಹೇಳಿದನು. ಆದರೆ ಅದಕ್ಕೆ ಆಕೆಯು, "ಹೌದು ಕರ್ತನೇ, ಮೇಜಿನ ಕೆಳಗಿರುವ ನಾಯಿಮರಿಗಳಂತೂ ಮಕ್ಕಳ ಕೈಯಿಂದ ಬೀಳುವ ರೊಟ್ಟೀತುಂಡುಗಳನ್ನು ತಿನ್ನುತ್ತವಲ್ಲಾ" ಎಂದು ಉತ್ತರಕೊಡಲು ಆತನು, "ಆಕೆಗೆ ನೀನು ಕೊಟ್ಟಿರುವ ಈ ಉತ್ತರದ ನಿಮಿತ್ತ ದೆವ್ವವು ನಿನ್ನ ಮಗಳನ್ನು ಬಿಟ್ಟು ಹೋಗಿದೆ, ನೀನು ಹೋಗು" ಅಂದನು. ಆಕೆಯು ತನ್ನ ಮನೆಗೆ ಹೋಗಿ ನೋಡಲಾಗಿ ಆ ಹುಡುಗಿಯು ಹಾಸಿಗೆಯ ಮೇಲೆ ಮಲಗಿದ್ದಳು; ದೆವ್ವ ಅವಳನ್ನು ಬಿಟ್ಟು ಹೋಗಿತ್ತು.
ಅದಕ್ಕೆ ಆ ಗುಂಪಿನಲ್ಲಿ ಒಬ್ಬನು, "ಬೋಧಕನೇ, ನನ್ನ ಮಗನನ್ನು ನಿನ್ನ ಬಳಿಗೆ ಕರೆದುಕೊಂಡು ಬಂದೆನು; ಅವನಿಗೊಂದು ದೆವ್ವ ಹಿಡಿದದೆ ಅದು ಅವನನ್ನು ಮೂಗನನ್ನಾಗಿಸಿದೆ. ಅದು ಎಲ್ಲಿ ಅವನ ಮೇಲೆ ಬಂದರೂ ಅವನನ್ನು ನೆಲಕ್ಕೆ ಕೆಡವುತ್ತದೆ; ಆಗ ಅವನು ನೊರೆಸುರಿಸುತ್ತಾನೆ, ಕರಕರನೆ ಹಲ್ಲು ಕಡಿಯುತ್ತಾನೆ ಮತ್ತು ಮರಗಟ್ಟಿದವನಂತೆ ಆಗುತ್ತಾನೆ. ಅದನ್ನು ಬಿಡಿಸಬೇಕೆಂದು ನಿನ್ನ ಶಿಷ್ಯರಿಗೆ ಕೇಳಿಕೊಂಡೆನು, ಆದರೆ ಅವರ ಕೈಯಿಂದ ಆಗದೆಹೋಯಿತು" ಎಂದು ಉತ್ತರ ಕೊಟ್ಟನು. ಅದಕ್ಕಾತನು, "ಎಲಾ, ಅಪನಂಬಿಕೆಯುಳ್ಳಂಥ ಸಂತಾನವೇ, ನಾನು ಇನ್ನೆಷ್ಟು ದಿನ ನಿಮ್ಮ ಸಂಗಡ ಇರಲಿ! ಇನ್ನೆಷ್ಟು ದಿನ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ" ಅಂದನು. ಆಗ ಅವರು ಆ ಹುಡುಗನನ್ನು ಯೇಸುವಿನ ಬಳಿಗೆ ತೆಗೆದುಕೊಂಡು ಬಂದರು. ಆತನನ್ನು ಕಂಡಕೂಡಲೆ ಆ ದೆವ್ವವು ಹುಡುಗನನ್ನು ಬಹಳವಾಗಿ ಒದ್ದಾಡಿಸಲು ಅವನು ನೆಲಕ್ಕೆ ಬಿದ್ದು ನೊರೆಸುರಿಸುತ್ತಾ ಹೊರಳಾಡಿದನು. ಯೇಸು ಅವನ ತಂದೆಯನ್ನು, "ಇವನಿಗೆ ಹೀಗಾಗಿ ಎಷ್ಟು ಕಾಲವಾಯಿತು?" ಎಂದು ಕೇಳಿದಾಗ ಅವನು, "ಚಿಕ್ಕಂದಿನಲ್ಲಿಯೇ ಬಂದಿದೆ; ಮತ್ತು ಇವನನ್ನು ಕೊಲ್ಲಬೇಕೆಂದು ಪದೇಪದೇ ಬೆಂಕಿಯಲ್ಲಿಯೂ ನೀರಿನಲ್ಲಿಯೂ ಕೆಡವಿತು; ನಿನ್ನ ಕೈಯಲ್ಲಿ ಏನಾದರೂ ಆಗುವ ಹಾಗಿದ್ದರೆ ನಮ್ಮ ಮೇಲೆ ಕನಿಕರವಿಟ್ಟು ನಮಗೆ ಸಹಾಯಮಾಡು" ಅಂದನು. ಯೇಸು ಅವನಿಗೆ, "‘ನಿನ್ನ ಕೈಯಲ್ಲಿ ಆಗುವ ಹಾಗಿದ್ದರೆ ಅನ್ನುತ್ತೀಯೋ’? ನಂಬುವವನಿಗೆ ಎಲ್ಲವೂ ಸಾಧ್ಯ!" ಎಂದು ಹೇಳಿದನು. ಕೂಡಲೆ ಆ ಹುಡುಗನ ತಂದೆಯು, "ನಂಬುತ್ತೇನೆ, ನನಗೆ ಅಪನಂಬಿಕೆ ಇಲ್ಲದಂತೆ ಸಹಾಯಮಾಡು" ಎಂದು ಕೂಗಿ ಹೇಳಿದನು. ಆಗ ಯೇಸು ಜನರ ಗುಂಪು ಓಡಿಬರುವುದನ್ನು ಕಂಡು ಆ ದೆವ್ವವನ್ನು ಗದರಿಸಿ, "ಎಲೈ, ಕಿವುಡಾದ ಮೂಗದೆವ್ವವೇ, ಇವನನ್ನು ಬಿಟ್ಟು ಹೋಗು; ಇನ್ನೆಂದಿಗೂ ಇವನೊಳಗೆ ಪ್ರವೇಶಿಸಕೂಡದೆಂದು ನಾನು ನಿನಗೆ ಅಪ್ಪಣೆಕೊಡುತ್ತೇನೆ" ಅಂದನು. ಆಗ ಅದು ಅಬ್ಬರಿಸಿ ಹುಡುಗನನ್ನು ಒದ್ದಾಡಿಸಿ ಬಿಟ್ಟುಹೋಯಿತು. ಆ ಹುಡುಗನು ಸತ್ತಹಾಗೆ ಬಿದ್ದಿದ್ದರಿಂದ ಬಹುಜನರು, "ಸತ್ತುಹೋದನು" ಎಂದು ಅಂದುಕೊಂಡರು. ಆದರೆ ಯೇಸು ಅವನನ್ನು ಕೈಹಿಡಿದು ಎಬ್ಬಿಸಲು ಹುಡುಗನು ಎದ್ದು ನಿಂತನು.
ಯೇಸು ಅನೇಕ ಜನರನ್ನು ಸ್ವಸ್ಥಪಡಿಸಿದ್ದು
ಆತನು ಸಭಾಮಂದಿರದಿಂದೆದ್ದು ಸೀಮೋನನ ಮನೆಗೆ ಬಂದನು. ಅಲ್ಲಿ ಸೀಮೋನನ ಅತ್ತೆಯು ವಿಪರೀತ ಜ್ವರದಿಂದ ಕಷ್ಟಪಡುತ್ತಿರಲಾಗಿ; ಆಕೆಯ ವಿಷಯದಲ್ಲಿ ಅಲಿದ್ದವರು ಆತನನ್ನು ಬೇಡಿಕೊಂಡರು. ಆತನು ಆಕೆಯ ಬಳಿ ನಿಂತು ಬಾಗಿ, ಜ್ವರವನ್ನು ಬಿಟ್ಟುಹೋಗೆಂದು ಗದರಿಸಲು; ಅದು ಆಕೆಯನ್ನು ಬಿಟ್ಟುಹೋಯಿತು. ಕೂಡಲೆ ಆಕೆಯು ಎದ್ದು ಅವರೆಲ್ಲರಿಗೆ ಉಪಚಾರಮಾಡಿದಳು.
ಯೇಸು ದಡಕ್ಕೆ ಇಳಿಯುತ್ತಲೇ ಆ ಊರಿನವನಾದ ಒಬ್ಬ ಮನುಷ್ಯನು ಆತನೆದುರಿಗೆ ಬಂದನು. ಅವನಿಗೆ ದೆವ್ವಗಳು ಹಿಡಿದಿದ್ದವು. ಅವನು ಬಹುಕಾಲದಿಂದ ವಸ್ತ್ರವನ್ನೇ ಧರಿಸದೆ ಮನೆಯಲ್ಲಿ ವಾಸಿಸದೆ ಸಮಾಧಿಯ ಗವಿಗಳಲ್ಲಿಯೇ ಇರುತ್ತಿದ್ದನು. ಇವನು ಯೇಸುವನ್ನು ಕಂಡು ಆರ್ಭಟಿಸಿ ಆತನ ಮುಂದೆ ಅಡ್ಡಬಿದ್ದು ಮಹಾಶಬ್ದದಿಂದ, "ಯೇಸುವೇ, ಪರಾತ್ಪರನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ನನ್ನನ್ನು ಕಾಡಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ" ಅಂದನು. ಏಕೆಂದರೆ, ಈ ಮನುಷ್ಯನನ್ನು ಬಿಟ್ಟುಹೋಗಬೇಕೆಂದು ಆತನು ಆ ದೆವ್ವಕ್ಕೆ ಅಪ್ಪಣೆ ಕೊಟ್ಟಿದ್ದನು. ಅದು ಬಹು ಕಾಲದಿಂದ ಅವನನ್ನು ಹಿಡಿದಿತ್ತು; ಇದಲ್ಲದೆ ಅವನನ್ನು ಕಾವಲಲ್ಲಿಟ್ಟು ಸರಪಣಿಗಳಿಂದಲೂ ಬೇಡಿಗಳಿಂದಲೂ ಬಂಧಿಸಿದ್ದರೂ ಅವನು ಅವುಗಳನ್ನು ಮುರಿದುಹಾಕುತ್ತಿದ್ದನು; ಮತ್ತು ಆ ದೆವ್ವವು ಅವನನ್ನು ನಿರ್ಜನ ಪ್ರದೇಶಗಳಿಗೆ ಓಡಿಸುತ್ತಿತ್ತು.
ಯೇಸುವು ಅವನಿಗೆ, "ನಿನ್ನ ಹೆಸರೇನೆಂದು?" ಕೇಳಲು ಅವನು, "ನನ್ನ ಹೆಸರು ದಂಡು" ಅಂದನು, ಏಕೆಂದರೆ ಬಹಳ ದೆವ್ವಗಳು ಅವನೊಳಗೆ ಹೊಕ್ಕಿದವು. ಪಾತಾಳಕ್ಕೆ ಹೋಗಿಬಿಡುವಂತೆ ನಮಗೆ ಆಜ್ಞೆಮಾಡಬೇಡವೆಂದು ಅವು ಆತನನ್ನು ಬೇಡಿಕೊಂಡವು.
ಅಲ್ಲಿಯ ಗುಡ್ಡದ ಮೇಲೆ ಹಂದಿಗಳ ಹಿಂಡು ಮೇಯುತ್ತಿತ್ತು. ಆ ದೆವ್ವಗಳು, ಆ ಹಂದಿಗಳೊಳಗೆ ಸೇರಿಕೊಳ್ಳುವುದಕ್ಕೆ ನಮಗೆ ಅಪ್ಪಣೆಕೊಡಬೇಕೆಂದು ಯೇಸುವನ್ನು ಬೇಡಿಕೊಂಡವು. ಆತನು ಆಗಲಿ ಎಂದು ಅವುಗಳಿಗೆ ಅಪ್ಪಣೆಕೊಡಲು, ದೆವ್ವಗಳು ಆ ಮನುಷ್ಯನೊಳಗಿಂದ ಹೊರಗೆ ಬಂದು ಹಂದಿಗಳೊಳಗೆ ಹೊಕ್ಕವು. ಆ ಹಂದಿಗಳು ಉಗ್ರವಾಗಿ ಓಡಿ ಕಡಿದಾದ ಸ್ಥಳದಿಂದ ಕೆರೆಯೊಳಗೆ ಬಿದ್ದು ಉಸಿರುಕಟ್ಟಿ ಸತ್ತು ಹೋದವು. ಮೇಯಿಸುವವರು ನಡೆದದ್ದನ್ನು ಕಂಡು ಓಡಿ ಹೋಗಿ ಆ ಊರಲ್ಲಿಯೂ ಹಳ್ಳಿಗಳಲ್ಲಿಯೂ ಅದನ್ನು ತಿಳಿಸಲು, ಜನರು ನಡೆದ ಸಂಗತಿಯನ್ನು ನೋಡುವುದಕ್ಕೆ ಹೊರಟು ಯೇಸುವಿದ್ದಲ್ಲಿಗೆ ಬಂದಾಗ ದೆವ್ವಗಳು ಬಿಟ್ಟುಹೋಗಿದ್ದ ಆ ಮನುಷ್ಯನು ಬಟ್ಟೆಯನ್ನು ಧರಿಸಿಕೊಂಡು ಸ್ವಸ್ಥಬುದ್ಧಿಯಿಂದ ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತಿರುವುದನ್ನು ಕಂಡು ಹೆದರಿದರು.
ನಿಮಗೆ ಸತ್ಯವಾಗಿ ಹೇಳುತ್ತೇನೆ, ಇಲ್ಲಿ ನಿಂತಿರುವವರೊಳಗೆ ಕೆಲವರು ದೇವರ ರಾಜ್ಯವನ್ನು ನೋಡುವ ತನಕ ಮರಣಹೊಂದುವುದಿಲ್ಲ" ಎಂದು ಹೇಳಿದನು.
ಯೇಸು ಪ್ರಕಾಶರೂಪದಿಂದ ಕಾಣಿಸಿಕೊಂಡದ್ದು
ಯೇಸು ಈ ಮಾತುಗಳನ್ನು ಹೇಳಿ ಸುಮಾರು ಎಂಟು ದಿನಗಳಾದ ಮೇಲೆ ಪೇತ್ರ ಯೋಹಾನ ಯಾಕೋಬರನ್ನು ಕರೆದುಕೊಂಡು ಪ್ರಾರ್ಥನೆಮಾಡುವುದಕ್ಕೆ ಬೆಟ್ಟವನ್ನು ಹತ್ತಿದನು. ಆತನು ಪ್ರಾರ್ಥನೆಮಾಡುತ್ತಿರಲಾಗಿ ಆತನ ಮುಖಭಾವವು ಬದಲಾಯಿತು. ಆತನ ಉಡುಪು ಬೆಳ್ಳಗಾಗಿ ಮಿಂಚುತ್ತಾ ಬಂದಿತು. ಇದಲ್ಲದೆ ಇಬ್ಬರು ಪುರುಷರು ಆತನ ಸಂಗಡ ಮಾತನಾಡುತ್ತಿದ್ದರು. ಅವರು ಯಾರೆಂದರೆ ಮೋಶೆಯೂ ಎಲೀಯನೂ. ಅವರು ವೈಭವದೊಡನೆ ಕಾಣಿಸಿಕೊಂಡು ಯೆರೂಸಲೇಮಿನಲ್ಲಿ ಆತನು ಹೊಂದಬೇಕಾಗಿದ್ದ ಮರಣದ ವಿಷಯವಾಗಿ ಮಾತನಾಡುತ್ತಿದ್ದರು.
ಇಷ್ಟರಲ್ಲಿ ಪೇತ್ರನಿಗೂ ಅವನ ಸಂಗಡ ಇದ್ದವರಿಗೂ ನಿದ್ರೆಯಿಂದ ಮೈಭಾರವಾಗಿತ್ತು. ಆದರೆ ಎಚ್ಚರವಾದ ಮೇಲೆ ಅವರು ಆತನ ಮಹಿಮೆಯನ್ನೂ ಆತನ ಸಂಗಡ ನಿಂತಿದ್ದ ಆ ಇಬ್ಬರು ಪುರುಷರನ್ನೂ ಕಂಡರು. ಅವರು ಯೇಸುವನ್ನು ಬಿಟ್ಟುಹೋಗುತ್ತಿರುವಾಗ ಪೇತ್ರನು ಯೇಸುವಿಗೆ, "ಗುರುವೇ ನಾವು ಇಲ್ಲೇ ಇರುವುದು ಒಳ್ಳೆಯದು, ಮೂರು ಗುಡಾರಗಳನ್ನು ಕಟ್ಟುವೆವು; ನಿನಗೊಂದು ಎಲೀಯನಿಗೊಂದು ಹಾಗೂ ಮೋಶೆಗೊಂದು" ಎಂದು ಹೇಳಿದನು. ತಾನು ಏನು ಹೇಳುತ್ತಿದ್ದೇನೆಂದು ತನಗೇ ಗೊತ್ತಾಗಲಿಲ್ಲ.
ಆಗ ಆ ಗುಂಪಿನಲ್ಲಿದ್ದ ಒಬ್ಬನು, "ಬೋಧಕನೇ, ನನ್ನ ಮಗನನ್ನು ಕಟಾಕ್ಷಿಸು ಎಂದು ನಿನ್ನನ್ನು ಬೇಡಿಕೊಳ್ಳುತ್ತೇನೆ. ನನಗೆ ಇವನೊಬ್ಬನೇ ಮಗನು. ಇವನನ್ನು ದೆವ್ವಹಿಡಿಯುತ್ತದೆ, ಹಿಡಿಯುತ್ತಲೇ ಕೂಗಿಕೊಳ್ಳುತ್ತಾನೆ. ಅದು ಬಾಯಲ್ಲಿ ನೊರೆ ಬರುವಷ್ಟು ಇವನನ್ನು ಒದ್ದಾಡಿಸುತ್ತದೆ ಮತ್ತು ಬಹು ಕಷ್ಟಕೊಟ್ಟು ತೊಂದರೆಪಡಿಸಿದ ಹೊರತು ಬಿಟ್ಟುಬಿಡುವುದಿಲ್ಲ. ಅದನ್ನು ಬಿಡಿಸಬೇಕೆಂದು ನಿನ್ನ ಶಿಷ್ಯರನ್ನು ಬೇಡಿಕೊಂಡೆನು. ಆದರೆ ಅವರಿಂದ ಆಗದೆಹೋಯಿತು" ಎಂದು ಹೇಳಿದನು. ಅದಕ್ಕೆ ಯೇಸು, "ಎಲಾ ಅಪನಂಬಿಕೆಯುಳ್ಳಂಥ ಮೂರ್ಖಸಂತಾನವೇ, ನಾನು ಇನ್ನೆಷ್ಟು ದಿನ ನಿಮ್ಮ ಸಂಗಡ ಇದ್ದು ನಿಮ್ಮನ್ನು ಸಹಿಸಿಕೊಳ್ಳಲಿ?" ಎಂದು ಹೇಳಿದನು. ಮತ್ತು ಆ ಮನುಷ್ಯನಿಗೆ "ನಿನ್ನ ಮಗನನ್ನು ಇಲ್ಲಿಗೆ ಕರೆದುಕೊಂಡು ಬಾ" ಅಂದನು. ಆ ಹುಡುಗನು ಇನ್ನೂ ಬರುತ್ತಿರುವಾಗಲೇ ಆ ದೆವ್ವವು ಅವನನ್ನು ನೆಲಕ್ಕೆ ಅಪ್ಪಳಿಸಿ ಬಹಳವಾಗಿ ಒದ್ದಾಡಿಸಿತು. ಆದರೆ ಯೇಸು ಆ ದೆವ್ವವನ್ನು ಗದರಿಸಿ ಆ ಹುಡುಗನಿಗೆ ವಾಸಿಮಾಡಿ ಅವನ ತಂದೆಗೆ ಒಪ್ಪಿಸಿದನು. ಅದನ್ನು ನೋಡಿ ಎಲ್ಲರು ದೇವರ ಮಹತ್ಕಾರ್ಯಕ್ಕೆ ಬೆರಗಾದರು.
ಯೇಸು ತನ್ನ ಮರಣವನ್ನು ಎರಡನೆಯ ಸಾರಿ ಮುಂತಿಳಿಸಿದ್ದು
ಯೇಸುಮಾಡಿದ ಎಲ್ಲಾ ಮಹತ್ಕಾರ್ಯಗಳಿಗೆ ಎಲ್ಲರೂ ಆಶ್ಚರ್ಯಪಡುತ್ತಿರಲಾಗಿ, ಆತನು ತನ್ನ ಶಿಷ್ಯರಿಗೆ,
ಯೇಸು ಮತ್ತು ಬೆಲ್ಜೆಬೂಲ
ಒಮ್ಮೆ ಯೇಸು ಮೂಗದೆವ್ವವನ್ನು ಬಿಡಿಸುತ್ತಿದ್ದನು. ಆ ದೆವ್ವವು ಬಿಟ್ಟು ಹೋದ ಮೇಲೆ ಮೂಕನು ಮಾತನಾಡಿದನು; ಅದನ್ನು ನೋಡಿದ ಜನರು ಆಶ್ಚರ್ಯಪಟ್ಟರು.
ಅಷ್ಟರಲ್ಲಿ ಅವರಲ್ಲಿ ಒಬ್ಬನು ಮಹಾಯಾಜಕನ ಆಳನ್ನು ಕತ್ತಿಯಿಂದ ಹೊಡೆದು ಅವನ ಬಲಗಿವಿಯನ್ನು ಕತ್ತರಿಸಿ ಹಾಕಿದನು. ಆದರೆ ಯೇಸು, "ಇಷ್ಟಕ್ಕೇ ಬಿಡಿರಿ" ಎಂದು ಹೇಳಿ ಆ ಆಳಿನ ಕಿವಿಯನ್ನು ಮುಟ್ಟಿ ವಾಸಿಮಾಡಿದನು.
ಯೋಹಾನನ ಶಿಷ್ಯರು ಹಿಂತಿರುಗಿ ಹೋಗಲು ಆತನು ಯೋಹಾನನ ವಿಷಯವಾಗಿ ಆ ಜನರ ಗುಂಪುಗಳಿಗೆ ಹೇಳತೊಡಗಿದ್ದೇನಂದರೆ, "ಏನು ನೋಡಬೇಕೆಂದು ಮರುಭೂಮಿಗೆ ಹೋಗಿದ್ದಿರಿ? ಗಾಳಿಯಿಂದ ಅಲ್ಲಾಡುವ ದಂಟನ್ನೋ? ಅಲ್ಲವಾದರೆ ಏನು ನೋಡಬೇಕೆಂದು ಹೋಗಿದ್ದಿರಿ? ನಯವಾದ ಉಡುಪನ್ನು ಹಾಕಿಕೊಂಡ ಮನುಷ್ಯನನ್ನೋ? ಶೋಭಾಯಮಾನವಾದ ಉಡುಪನ್ನು ಧರಿಸಿ ಭೋಗದಲ್ಲಿ ಬಾಳುವವರು ಅರಮನೆಗಳಲ್ಲಿ ಇರುತ್ತಾರಷ್ಟೆ. ಹಾಗಾದರೆ ನೀವು ಏನು ನೋಡಬೇಕೆಂದು ಹೋಗಿದ್ದಿರಿ? ಪ್ರವಾದಿಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನನ್ನು ನೋಡಿದ್ದಿರಿ ಎಂದು ನಿಮಗೆ ಹೇಳುತ್ತೇನೆ. ‘ಇಗೋ, ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ. ನೀನು ಹೋಗುವ ದಾರಿಯನ್ನು ಅವನು ನಿನ್ನ ಮುಂದೆ ಸಿದ್ಧಮಾಡುವನು,’ ಎಂದು ಯಾರ ವಿಷಯವಾಗಿ ಬರೆದದೆಯೋ, ಆ ಪುರುಷನು ಅವನೇ. ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಯೋಹಾನನಿಗಿಂತ ಮಹಾಪುರುಷನು ಒಬ್ಬನೂ ಹುಟ್ಟಿಲ್ಲ, ಅದರೂ ದೇವರ ರಾಜ್ಯದಲ್ಲಿ ಚಿಕ್ಕವನು ಅವನಿಗಿಂತಲೂ ದೊಡ್ಡವನೆಂದು" ನಿಮಗೆ ಹೇಳುತ್ತೇನೆ.
ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡ ಜನರೆಲ್ಲರೂ, ಸುಂಕದವರೂ ಸಹ ಆತನ ಉಪದೇಶವನ್ನು ಕೇಳಿದಾಗ, ದೇವರು ನೀತಿವಂತನೆಂದು ಒಪ್ಪಿಕೊಂಡರು. ಆದರೆ ಫರಿಸಾಯರೂ ಧರ್ಮೋಪದೇಶಕರೂ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳದೆ ಹೋದದ್ದರಿಂದ ಅವರು ತಮ್ಮ ಕುರಿತಾದ ದೈವಸಂಕಲ್ಪವನ್ನು ನಿರಾಕರಿಸಿದರು.