Milagres de Jesus
Os Evangelhos registram dezenas de milagres realizados por Jesus — curas, ressurreições, domínio sobre a natureza e libertações. Cada milagre revelava sua divindade e compaixão.
Curas de cegos e surdos
Jesus devolveu a visão aos cegos e a audição aos surdos, manifestando seu poder sobre toda enfermidade e deficiência.
ಯೇಸು ಕುರುಡರನ್ನು ಮತ್ತು ಮೂಕನನ್ನು ಸ್ವಸ್ಥಮಾಡಿದ್ದು
ಯೇಸು ಅಲ್ಲಿಂದ ಹೋಗುತ್ತಿರುವಾಗ ಇಬ್ಬರು ಕುರುಡರು, "ದಾವೀದನ ಪುತ್ರನೇ, ನಮ್ಮ ಮೇಲೆ ಕರುಣೆಯಿಡು," ಎಂದು ಮೊರೆಯಿಡುತ್ತಾ ಯೇಸುವಿನ ಹಿಂದೆ ಹೋದರು.
ಯೇಸು ಮನೆಗೆ ಬಂದಾಗ, ಆ ಕುರುಡರು ಅವರ ಬಳಿಗೆ ಬಂದರು. ಆಗ ಯೇಸು ಅವರಿಗೆ, "ನಾನು ಇದನ್ನು ಮಾಡಲು ಶಕ್ತನೆಂದು ನೀವು ನಂಬುತ್ತೀರೋ?" ಎಂದು ಕೇಳಿದರು.
ಅದಕ್ಕವರು ಯೇಸುವಿಗೆ, "ಹೌದು ಕರ್ತನೆ," ಎಂದರು.
ಆಗ ಯೇಸು ಅವರ ಕಣ್ಣುಗಳನ್ನು ಮುಟ್ಟಿ, "ನಿಮ್ಮ ನಂಬಿಕೆಯಂತೆ ನಿಮಗಾಗಲಿ," ಎಂದು ಹೇಳಿದರು. ಆಗ ಅವರಿಗೆ ದೃಷ್ಟಿ ಬಂದಿತು. ಯೇಸು ಅವರಿಗೆ, "ಇದು ಯಾರಿಗೂ ತಿಳಿಯಬಾರದು," ಎಂದು ಅವರಿಗೆ ಖಂಡಿತವಾಗಿ ಎಚ್ಚರಿಸಿದರು. ಆದರೆ ಸ್ವಸ್ಥರಾದವರು ಹೊರಟುಹೋಗಿ, ಆ ನಾಡಿನಲ್ಲೆಲ್ಲಾ ಯೇಸುವಿನ ಕೀರ್ತಿಯನ್ನು ಹರಡಿದರು.
ಯೇಸು ಇಬ್ಬರು ಕುರುಡರಿಗೆ ದೃಷ್ಟಿಕೊಟ್ಟದ್ದು
ಯೇಸು ಮತ್ತು ಅವರ ಶಿಷ್ಯರು ಯೆರಿಕೋವಿನಿಂದ ಹೊರಟು ಹೋಗುತ್ತಿರುವಾಗ, ಜನರು ದೊಡ್ಡ ಸಮೂಹವಾಗಿ ಯೇಸುವನ್ನು ಹಿಂಬಾಲಿಸಿದರು. ದಾರಿಯ ಮಗ್ಗುಲಲ್ಲಿ ಕೂತಿದ್ದ ಇಬ್ಬರು ಕುರುಡರು ಯೇಸು ಹಾದು ಹೋಗುತ್ತಿದ್ದಾರೆಂದು ಕೇಳಿ, "ಕರ್ತನೇ, ದಾವೀದನ ಪುತ್ರನೇ, ನಮ್ಮ ಮೇಲೆ ಕರುಣೆಯಿಡು!" ಎಂದು ಕೂಗಿ ಹೇಳಿದರು.
ಅವರು ಸುಮ್ಮನಿರುವಂತೆ ಜನರ ಸಮೂಹವು ಅವರನ್ನು ಗದರಿಸಿತು. ಆದರೂ ಅವರು, "ಕರ್ತನೇ, ದಾವೀದನ ಪುತ್ರನೇ, ನಮ್ಮ ಮೇಲೆ ಕರುಣೆಯಿಡು!" ಎಂದು ಇನ್ನೂ ಗಟ್ಟಿಯಾಗಿ ಕೂಗಿಕೊಂಡರು.
ಆಗ ಯೇಸು ನಿಂತು, ಅವರನ್ನು ಕರೆದು, "ನಾನು ನಿಮಗೆ ಏನು ಮಾಡಬೇಕೆಂದು ಅಪೇಕ್ಷಿಸುತ್ತೀರಿ?" ಎಂದು ಕೇಳಿದರು.
ಅವರು ಯೇಸುವಿಗೆ, "ಕರ್ತದೇವರೇ, ನಮಗೆ ಕಣ್ಣು ಕಾಣುವಂತೆ ಮಾಡು," ಎಂದರು.
ಯೇಸು ಅವರ ಮೇಲೆ ಕನಿಕರಪಟ್ಟು ಅವರ ಕಣ್ಣುಗಳನ್ನು ಮುಟ್ಟಿದರು. ಕೂಡಲೇ ಅವರ ಕಣ್ಣುಗಳು ದೃಷ್ಟಿಯನ್ನು ಪಡೆದವು. ಅವರೂ ಯೇಸುವನ್ನು ಹಿಂಬಾಲಿಸಿದರು.
ಯೇಸು ಕುರುಡರಿಗೆ ಕಣ್ಣು ಕೊಟ್ಟದ್ದು
ಯೇಸು ಬೇತ್ಸಾಯಿದಕ್ಕೆ ಬಂದಾಗ, ಕೆಲವರು ಒಬ್ಬ ಕುರುಡನನ್ನು ಯೇಸುವಿನ ಬಳಿಗೆ ತಂದು ಅವನನ್ನು ಮುಟ್ಟಬೇಕೆಂದು ಬೇಡಿಕೊಂಡರು. ಯೇಸು ಆ ಕುರುಡನ ಕೈಹಿಡಿದು ಊರ ಹೊರಗೆ ಕರೆದುಕೊಂಡು ಹೋಗಿ, ಅವನ ಕಣ್ಣುಗಳ ಮೇಲೆ ಉಗುಳಿ ಅವನ ಮೇಲೆ ತಮ್ಮ ಕೈಯಿಟ್ಟು, "ನಿನಗೆ ಏನಾದರೂ ಕಾಣುತ್ತದೋ?" ಎಂದು ಅವನನ್ನು ಕೇಳಿದರು.
ಅವನು ಮೇಲಕ್ಕೆ ನೋಡಿ, "ಮನುಷ್ಯರು ಮರಗಳ ಹಾಗೆ ಕಾಣುತ್ತಿದ್ದಾರೆ. ಆದರೂ ಅವರು ನಡೆದಾಡುವುದನ್ನು ನೋಡುತ್ತಿದ್ದೇನೆ," ಎಂದನು.
ತರುವಾಯ ಯೇಸು ತಿರುಗಿ ಅವನ ಕಣ್ಣುಗಳ ಮೇಲೆ ತಮ್ಮ ಕೈಗಳನ್ನಿಟ್ಟರು. ಆಗ ಅವನು ಗುಣಹೊಂದಿದವನಾಗಿ ಎಲ್ಲವನ್ನೂ ಬಹುಸ್ಪಷ್ಟವಾಗಿ ಕಂಡನು. ಯೇಸು ಅವನಿಗೆ, "ನೀನು ಊರೊಳಕ್ಕೆ ಹೋಗಬೇಡ," ಎಂದು ಹೇಳಿ ಅವನನ್ನು ಮನೆಗೆ ಕಳುಹಿಸಿಬಿಟ್ಟರು.
ಕಿವುಡ ಮತ್ತು ಮೂಕನನ್ನು ಗುಣಪಡಿಸಿದ್ದು
ಆಮೇಲೆ ಯೇಸು ಟೈರ್ ಪಟ್ಟಣದ ಸಮೀಪವಿದ್ದ ಪ್ರದೇಶದಿಂದ ಹೊರಟು ಸೀದೋನಿನ ಮಾರ್ಗವಾಗಿ ಗಲಿಲಾಯ ಸರೋವರ ತೀರವನ್ನು ಹಾದು ದೆಕಪೊಲಿ ಪ್ರದೇಶಕ್ಕೆ ಬಂದರು. ಅಲ್ಲಿ ಕೆಲವರು ಮಾತನಾಡಲಾಗದ ಒಬ್ಬ ಕಿವುಡನನ್ನು ಕರೆದುಕೊಂಡು ಬಂದು ಅವನ ಮೇಲೆ ಕೈಯಿಡಬೇಕೆಂದು ಯೇಸುವನ್ನು ಬೇಡಿಕೊಂಡರು.
ಯೇಸು ಅವನನ್ನು ಜನರ ಗುಂಪಿನಿಂದ ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ ತಮ್ಮ ಬೆರಳುಗಳನ್ನು ಅವನ ಕಿವಿಯೊಳಗಿಟ್ಟು ಅನಂತರ ಉಗುಳಿ, ಅವನ ನಾಲಿಗೆಯನ್ನು ಮುಟ್ಟಿದರು. ಯೇಸು ಸ್ವರ್ಗದ ಕಡೆಗೆ ನೋಡಿ, ದೀರ್ಘವಾಗಿ ನಿಟ್ಟುಸಿರುಬಿಟ್ಟು ಅವನಿಗೆ "ಎಪ್ಫಥಾ!" ಎಂದರು. "ತೆರೆಯಲಿ!" ಎಂಬುದು ಅದರ ಅರಮೀಯ ಅರ್ಥ. ಕೂಡಲೇ ಅವನ ಕಿವಿಗಳು ತೆರೆದವು; ಅವನ ನಾಲಿಗೆಯು ಸಡಿಲವಾಯಿತು. ಅವನು ಸ್ಪಷ್ಟವಾಗಿ ಮಾತನಾಡಲಾರಂಭಿಸಿದನು.
ಯಾವ ಮನುಷ್ಯನಿಗೂ ಇದನ್ನು ಹೇಳಬಾರದೆಂದು ಯೇಸು ಅವರಿಗೆ ಖಂಡಿತವಾಗಿ ಹೇಳಿದರು. ಆದರೆ ಎಷ್ಟು ಖಂಡಿತವಾಗಿ ಹೇಳಿದರೂ ಅವರು ಅದನ್ನು ಮತ್ತಷ್ಟೂ ಹೆಚ್ಚಾಗಿ ಪ್ರಚಾರಮಾಡಿದರು. ಜನರು ಅತ್ಯಂತ ಆಶ್ಚರ್ಯಪಟ್ಟು, "ಯೇಸು ಎಲ್ಲಾ ಕಾರ್ಯವನ್ನು ಚೆನ್ನಾಗಿ ಮಾಡುತ್ತಾರೆ. ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡುತ್ತಾರೆ," ಎಂದುಕೊಳ್ಳುತ್ತಿದ್ದರು.
ಕುರುಡ ಬಾರ್ತಿಮಾಯನಿಗೆ ದೃಷ್ಟಿ ಬಂದದ್ದು
ತರುವಾಯ ಅವರು ಯೆರಿಕೋವಿಗೆ ಬಂದರು. ಯೇಸು ತಮ್ಮ ಶಿಷ್ಯರೊಡನೆಯೂ ಅಸಂಖ್ಯಾತ ಜನರೊಡನೆಯೂ ಯೆರಿಕೋವಿನಿಂದ ಹೊರಟಾಗ ತಿಮಾಯನ ಮಗ ಕುರುಡ ಬಾರ್ತಿಮಾಯನು ದಾರಿಯಲ್ಲಿ ಕುಳಿತುಕೊಂಡು ಭಿಕ್ಷೆಬೇಡುತ್ತಿದ್ದನು. ನಜರೇತಿನ ಯೇಸು ಬರುತ್ತಿದ್ದಾರೆ ಎಂದು ಅವನು ಕೇಳಿದಾಗ, "ಯೇಸುವೇ, ದಾವೀದನ ಪುತ್ರನೇ, ನನ್ನನ್ನು ಕರುಣಿಸು," ಎಂದು ಕೂಗಿಕೊಳ್ಳಲಾರಂಭಿಸಿದನು.
ಸುಮ್ಮನಿರುವಂತೆ ಅನೇಕರು ಅವನಿಗೆ ಒತ್ತಾಯಪಡಿಸಿ ಹೇಳಿದರು. ಆದರೆ ಅವನು ಇನ್ನೂ ಗಟ್ಟಿಯಾಗಿ, "ದಾವೀದನ ಪುತ್ರನೇ, ನನ್ನನ್ನು ಕರುಣಿಸು," ಎಂದು ಇನ್ನಷ್ಟು ಕೂಗಿದನು.
ಯೇಸು ನಿಂತು, ಅವನನ್ನು ಕರೆಯಬೇಕೆಂದು ಆಜ್ಞಾಪಿಸಲು,
ಅವರು ಆ ಕುರುಡನನ್ನು ಕರೆದು, "ಧೈರ್ಯವಾಗಿರು, ಏಳು, ಯೇಸು ನಿನ್ನನ್ನು ಕರೆಯುತ್ತಿದ್ದಾರೆ," ಎಂದು ಅವನಿಗೆ ಹೇಳಿದರು. ಅವನು ತನ್ನ ಮೇಲಂಗಿಯನ್ನು ತೆಗೆದುಹಾಕಿ ತಟ್ಟನೆ ಎದ್ದು ಯೇಸುವಿನ ಬಳಿಗೆ ಬಂದನು.
ಯೇಸು ಅವನಿಗೆ, "ನಾನು ನಿನಗೆ ಏನು ಮಾಡಬೇಕೆಂದು ನೀನು ಕೋರುತ್ತೀ?" ಎಂದು ಕೇಳಲು,
ಆ ಕುರುಡನು ಯೇಸುವಿಗೆ, "ಗುರುವೇ, ನನಗೆ ಕಣ್ಣು ಕಾಣುವಂತೆ ಮಾಡಬೇಕು," ಎಂದನು.
ಅದಕ್ಕೆ ಯೇಸು ಅವನಿಗೆ, "ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಪಡಿಸಿದೆ," ಎಂದರು. ಕೂಡಲೇ ಅವನು ತನ್ನ ದೃಷ್ಟಿಯನ್ನು ಪಡೆದು, ದಾರಿಯಲ್ಲಿ ಯೇಸುವನ್ನು ಹಿಂಬಾಲಿಸಿದನು.
ಕುರುಡ ಭಿಕ್ಷುಕನಿಗೆ ದೃಷ್ಟಿ ಬಂದದ್ದು
ಯೇಸು ಯೆರಿಕೋವಿನ ಸಮೀಪಕ್ಕೆ ಬಂದಾಗ, ಒಬ್ಬ ಕುರುಡನು ದಾರಿಯ ಪಕ್ಕದಲ್ಲಿ ಕುಳಿತುಕೊಂಡು ಭಿಕ್ಷೆಬೇಡುತ್ತಿದ್ದನು. ಜನಸಮೂಹವು ಹಾದು ಹೋಗುವುದನ್ನು ಇವನು ಕೇಳಿಸಿಕೊಂಡು, ಅದೇನೆಂದು ವಿಚಾರಿಸಿದನು. "ನಜರೇತಿನ ಯೇಸು ಹಾದು ಹೋಗುತ್ತಿದ್ದಾರೆ," ಎಂದು ಜನರು ಅವನಿಗೆ ಹೇಳಿದರು.
ಆಗ ಅವನು, "ಯೇಸುವೇ, ದಾವೀದನ ಪುತ್ರನೇ, ನನ್ನನ್ನು ಕರುಣಿಸಿ!" ಎಂದು ಗಟ್ಟಿಯಾಗಿ ಕೂಗಿಕೊಂಡನು.
ಮುಂದೆ ಹೋಗುತ್ತಿದ್ದವರು ಸುಮ್ಮನಿರುವಂತೆ ಅವನನ್ನು ಗದರಿಸಿದರು, ಆದರೂ ಅವನು, "ದಾವೀದನ ಪುತ್ರರೇ, ನನ್ನನ್ನು ಕರುಣಿಸಿ," ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡನು.
ಆಗ ಯೇಸು ನಿಂತು ಅವನನ್ನು ತಮ್ಮ ಬಳಿಗೆ ಕರೆತರುವಂತೆ ಅಪ್ಪಣೆಕೊಟ್ಟರು. ಅವನು ಯೇಸುವಿನ ಬಳಿಗೆ ಬಂದಾಗ, ಅವರು ಅವನಿಗೆ, "ನನ್ನಿಂದ ನಿನಗೇನಾಗಬೇಕು?" ಎಂದು ಕೇಳಿದರು.
ಅದಕ್ಕವನು, "ಕರ್ತದೇವರೇ, ನನಗೆ ದೃಷ್ಟಿ ಕೊಡಿ," ಎಂದನು.
ಆಗ ಯೇಸು ಅವನಿಗೆ, "ನೀನು ದೃಷ್ಟಿ ಪಡೆ; ನಿನ್ನ ವಿಶ್ವಾಸವೇ ನಿನ್ನನ್ನು ಸ್ವಸ್ಥಪಡಿಸಿದೆ," ಎಂದರು. ಕೂಡಲೇ ಅವನು ದೃಷ್ಟಿಯನ್ನು ಪಡೆದನು. ಆಗ ಅವನು ದೇವರನ್ನು ಸ್ತುತಿಸುತ್ತಾ, ಯೇಸುವನ್ನು ಹಿಂಬಾಲಿಸಿದನು. ಎಲ್ಲಾ ಜನರು ಅದನ್ನು ಕಂಡು, ದೇವರಿಗೆ ಸ್ತೋತ್ರ ಸಲ್ಲಿಸಿದರು.
ಯೇಸು ಸಬ್ಬತ್ ದಿನದಲ್ಲಿ ಹುಟ್ಟು ಕುರುಡನಿಗೆ ಕಣ್ಣು ಕೊಟ್ಟದ್ದು
ಯೇಸು ನಡೆದು ಹೋಗುತ್ತಿದ್ದಾಗ, ಹುಟ್ಟುಕುರುಡನಾಗಿದ್ದ ಒಬ್ಬ ಮನುಷ್ಯನನ್ನು ಕಂಡರು. ಯೇಸುವಿನ ಶಿಷ್ಯರು, "ಬೋಧಕರೇ, ಇವನು ಕುರುಡನಾಗಿ ಹುಟ್ಟಿರುವುದಕ್ಕೆ ಯಾರು ಪಾಪಮಾಡಿದರು? ಈ ಮನುಷ್ಯನ ಪಾಪದಿಂದಲೋ ಇವನ ತಂದೆತಾಯಿಗಳ ಪಾಪದಿಂದಲೋ?" ಎಂದು ಅವರನ್ನು ಕೇಳಿದರು.
ಯೇಸು, "ಈ ಮನುಷ್ಯನಾಗಲಿ ಇವನ ತಂದೆತಾಯಿಗಳಾಗಲಿ ಪಾಪಮಾಡಲಿಲ್ಲ. ಆದರೆ ದೇವರ ಕ್ರಿಯೆಗಳು ಇವನಲ್ಲಿ ವ್ಯಕ್ತವಾಗುವಂತೆ ಹೀಗಾಯಿತು. ನನ್ನನ್ನು ಕಳುಹಿಸಿದ ತಂದೆಯ ಕೆಲಸಗಳನ್ನು ಹಗಲಿರುವಾಗಲೇ ನಾವು ಮಾಡಬೇಕು. ರಾತ್ರಿ ಬಂದಾಗ ಯಾರಿಗೂ ಕೆಲಸ ಮಾಡಲಾಗದು. ನಾನು ಈ ಲೋಕದಲ್ಲಿರುವಾಗ ಲೋಕದ ಬೆಳಕಾಗಿದ್ದೇನೆ," ಎಂದರು.
ಯೇಸು ಹೀಗೆ ಹೇಳಿ ನೆಲದ ಮೇಲೆ ಉಗುಳಿ ಆ ಉಗುಳಿನಿಂದ ಮಣ್ಣಿನ ಲೇಪಮಾಡಿ ಆ ಲೇಪವನ್ನು ಅವನ ಕಣ್ಣುಗಳಿಗೆ ಹಚ್ಚಿದರು. ಅವನಿಗೆ, "ಹೋಗು, ಸಿಲೋವ ಕೊಳದಲ್ಲಿ ತೊಳೆದುಕೋ," ಎಂದರು. ಸಿಲೋವ ಎಂದರೆ, "ಕಳುಹಿಸಲಾದವನು" ಎಂದರ್ಥ. ಕುರುಡನು ಹೋಗಿ ಕಣ್ಣು ತೊಳೆದುಕೊಂಡು ದೃಷ್ಟಿಹೊಂದಿದವನಾಗಿ ಬಂದನು.
Curas de paralíticos e enfermos
Paralíticos caminharam, leprosos ficaram limpos e todo tipo de doença foi curada pelo toque e pela palavra de Jesus.
ಅಲ್ಲಿಗೆ ಕುಷ್ಠರೋಗಿಯಾಗಿದ್ದ ಒಬ್ಬನು ಬಂದು, ಯೇಸುವಿನ ಮುಂದೆ ಮೊಣಕಾಲೂರಿ, "ಕರ್ತನೇ, ನೀವು ಮನಸ್ಸು ಮಾಡಿದರೆ, ನನ್ನನ್ನು ಶುದ್ಧಮಾಡಬಲ್ಲಿರಿ," ಎಂದನು.
ಆಗ ಯೇಸು ಕೈಚಾಚಿ ಅವನನ್ನು ಮುಟ್ಟಿ, "ನನಗೆ ಮನಸ್ಸಿದೆ, ನೀನು ಶುದ್ಧನಾಗು," ಎಂದರು. ತಕ್ಷಣವೇ ಅವನ ಕುಷ್ಠವು ಹೋಗಿ ಅವನು ಶುದ್ಧನಾದನು. ಆಗ ಯೇಸು ಅವನಿಗೆ, "ನೋಡು ಇದನ್ನು ನೀನು ಯಾರಿಗೂ ಹೇಳಬೇಡ, ಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ಜನರಿಗೆ ಸಾಕ್ಷಿಯಾಗಿರುವಂತೆ ಮೋಶೆಯು ಆಜ್ಞಾಪಿಸಿದ ಕಾಣಿಕೆಯನ್ನು ಅರ್ಪಿಸು," ಎಂದು ಹೇಳಿದರು.
ಆಗ ಹಾಸಿಗೆಯ ಮೇಲೆ ಮಲಗಿದ್ದ, ಒಬ್ಬ ಪಾರ್ಶ್ವವಾಯು ರೋಗಿಯನ್ನು ಜನರು ಯೇಸುವಿನ ಬಳಿಗೆ ತಂದರು. ಯೇಸು ಅವರ ನಂಬಿಕೆಯನ್ನು ಕಂಡು, ಆ ಪಾರ್ಶ್ವವಾಯು ರೋಗಿಗೆ, "ಮಗನೇ, ಧೈರ್ಯವಾಗಿರು. ನಿನ್ನ ಪಾಪಗಳು ಕ್ಷಮಿಸಲಾಗಿವೆ," ಎಂದರು.
ಆಗ ನಿಯಮ ಬೋಧಕರಲ್ಲಿ ಕೆಲವರು, "ಈತನು ದೇವದೂಷಣೆ ಮಾಡುತ್ತಿದ್ದಾನೆ," ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
ಯೇಸು ಅವರ ಆಲೋಚನೆಗಳನ್ನು ತಿಳಿದುಕೊಂಡು, "ನೀವು ನಿಮ್ಮ ಮನಸ್ಸಿನಲ್ಲಿ ಕೆಟ್ಟದ್ದನ್ನು ಯೋಚಿಸುವುದೇಕೆ? ಯಾವುದು ಸುಲಭ? ‘ನಿನ್ನ ಪಾಪಗಳು ಕ್ಷಮಿಸಲಾಗಿವೆ,’ ಎನ್ನುವುದೋ ಅಥವಾ ‘ಎದ್ದು ನಡೆ,’ ಎನ್ನುವುದೋ? ಆದರೆ ಮನುಷ್ಯಪುತ್ರನಾದ ನನಗೆ ಈ ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸುವುದಕ್ಕೆ ಅಧಿಕಾರವುಂಟೆಂದು ನೀವು ತಿಳಿಯಬೇಕು," ಎಂದು ಹೇಳಿ ಆ ಪಾರ್ಶ್ವವಾಯು ರೋಗಿಗೆ, "ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ," ಎಂದರು. ಆಗ ಅವನು ಎದ್ದು ತನ್ನ ಮನೆಗೆ ಹೊರಟುಹೋದನು.
ಅಲ್ಲಿ ಕೈ ಬತ್ತಿದ ಒಬ್ಬ ಮನುಷ್ಯನಿದ್ದನು. ಆಗ ಫರಿಸಾಯರು ಯೇಸುವಿನ ಮೇಲೆ ತಪ್ಪು ಹೊರಿಸಬೇಕೆಂದು ಆತನಿಗೆ, "ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವುದು ನ್ಯಾಯಸಮ್ಮತವೋ?" ಎಂದು ಕೇಳಿದರು.
ಅದಕ್ಕೆ ಯೇಸು ಅವರಿಗೆ, "ನಿಮ್ಮಲ್ಲಿ ಯಾವನಿಗಾದರೂ ಒಂದು ಕುರಿಯಿರಲಾಗಿ ಅದು ಸಬ್ಬತ್ ದಿನದಲ್ಲಿ ಕುಣಿಯೊಳಗೆ ಬಿದ್ದರೆ, ಅವನು ಅದನ್ನು ಮೇಲಕ್ಕೆ ಎತ್ತದೆ ಇರುವನೇ? ಕುರಿಗಿಂತಲೂ ಒಬ್ಬ ಮನುಷ್ಯನು ಎಷ್ಟೋ ಮೌಲ್ಯವುಳ್ಳವನಾಗಿದ್ದಾನಲ್ಲವೇ? ಆದ್ದರಿಂದ ಸಬ್ಬತ್ ದಿನಗಳಲ್ಲಿ ಒಳ್ಳೆಯದನ್ನು ಮಾಡುವುದು ನ್ಯಾಯಸಮ್ಮತವಾಗಿದೆ!" ಎಂದು ಹೇಳಿದರು.
ಆಗ ಯೇಸು ಆ ಮನುಷ್ಯನಿಗೆ, "ನಿನ್ನ ಕೈಚಾಚು" ಎಂದರು. ಅವನು ಕೈಚಾಚಿದಾಗ ಅದು ಸಂಪೂರ್ಣ ವಾಸಿಯಾಗಿ ಇನ್ನೊಂದು ಕೈಯಂತೆಯೇ ಆಯಿತು.
ಅಲ್ಲಿ ಸೀಮೋನನ ಅತ್ತೆಯು ಜ್ವರದಿಂದ ಮಲಗಿದ್ದಳು. ಕೂಡಲೇ ಅವರು ಆಕೆಯ ವಿಷಯವಾಗಿ ಯೇಸುವಿಗೆ ತಿಳಿಸಿದರು. ಯೇಸು ಆಕೆಯ ಬಳಿಗೆ ಬಂದು, ಕೈಹಿಡಿದು ಎಬ್ಬಿಸಿದರು. ಜ್ವರವು ಆಕೆಯನ್ನು ಬಿಟ್ಟುಹೋಯಿತು ಮತ್ತು ಆಕೆಯು ಅವರಿಗೆ ಉಪಚರಿಸಿದಳು.
ಕುಷ್ಠರೋಗಿ ಗುಣಹೊಂದಿದ್ದು
ಕುಷ್ಠರೋಗಿಯಾಗಿದ್ದ ಒಬ್ಬನು ಯೇಸುವಿನ ಬಳಿಗೆ ಬಂದು, ಮೊಣಕಾಲೂರಿ, "ನಿಮಗೆ ಮನಸ್ಸಿದ್ದರೆ, ನೀವು ನನ್ನನ್ನು ಶುದ್ಧಮಾಡಬಲ್ಲಿರಿ," ಎಂದು ಅವರನ್ನು ಬೇಡಿಕೊಂಡನು.
ಯೇಸು ಕನಿಕರಪಟ್ಟು, ತಮ್ಮ ಕೈಚಾಚಿ ಅವನನ್ನು ಮುಟ್ಟಿ, "ನನಗೆ ಮನಸ್ಸಿದೆ, ನೀನು ಶುದ್ಧನಾಗು," ಎಂದರು. ತಕ್ಷಣವೇ ಕುಷ್ಠರೋಗವು ಹೋಗಿ ಅವನು ಶುದ್ಧನಾದನು.
ಆಗ ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ನಾಲ್ವರಿಂದ ಹೊರಿಸಿಕೊಂಡು ಅಲ್ಲಿಗೆ ಬಂದರು. ಜನರ ಗುಂಪಿನ ನಿಮಿತ್ತ ಅವನನ್ನು ಯೇಸುವಿನ ಬಳಿಗೆ ತರಲು ಸಾಧ್ಯವಾಗದೆ ಹೋಯಿತು. ಆದ್ದರಿಂದ ಅವರು ಯೇಸು ಇದ್ದ ಕಡೆ ಮನೆಯ ಮೇಲ್ಚಾವಣಿಯನ್ನು ಒಡೆದು ತೆರೆದು, ಪಾರ್ಶ್ವವಾಯು ರೋಗಿಯನ್ನು ಮಲಗಿದ್ದ ಹಾಸಿಗೆಯ ಸಮೇತ ಕೆಳಗಿಳಿಸಿದರು. ಯೇಸು ಅವರ ನಂಬಿಕೆಯನ್ನು ಕಂಡು, ಆ ಪಾರ್ಶ್ವವಾಯು ರೋಗಿಗೆ, "ಮಗನೇ, ನಿನ್ನ ಪಾಪಗಳು ಕ್ಷಮಿಸಲಾಗಿವೆ," ಎಂದರು.
ಅಲ್ಲಿ ಕುಳಿತಿದ್ದ ಕೆಲವು ನಿಯಮ ಬೋಧಕರು, "ಈತನು ಏಕೆ ಹೀಗೆ ಮಾತನಾಡುತ್ತಾನೆ? ಈತನು ದೇವದೂಷಣೆ ಮಾಡುತ್ತಿದ್ದಾನೆ! ದೇವರೊಬ್ಬನೇ ಹೊರತು ಪಾಪಗಳನ್ನು ಕ್ಷಮಿಸುವವರು ಯಾರು?" ಎಂದು ತಮ್ಮೊಳಗೇ ಆಲೋಚಿಸಿಕೊಳ್ಳುತ್ತಿದ್ದರು.
ಯೇಸು ಅವರು ಯೋಚಿಸುತ್ತಿರುವುದನ್ನು ಕೂಡಲೇ ತಮ್ಮ ಆತ್ಮದಲ್ಲಿ ಗ್ರಹಿಸಿಕೊಂಡು ಅವರಿಗೆ, "ನೀವು ನಿಮ್ಮ ಮನಸ್ಸಿನಲ್ಲಿ ಹೀಗೆ ಆಲೋಚಿಸುವುದೇಕೆ? ಯಾವುದು ಸುಲಭ? ಪಾರ್ಶ್ವವಾಯು ರೋಗಿಗೆ, ‘ನಿನ್ನ ಪಾಪಗಳು ಕ್ಷಮಿಸಲಾಗಿವೆ,’ ಎನ್ನುವುದೋ ಅಥವಾ, ‘ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆ,’ ಎಂದು ಹೇಳುವುದೋ? ಆದರೆ ಮನುಷ್ಯಪುತ್ರನಾದ ನನಗೆ ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸುವುದಕ್ಕೆ ಅಧಿಕಾರವುಂಟೆಂದು ನೀವು ತಿಳಿಯಬೇಕು," ಎಂದು ಹೇಳಿ ಆ ಪಾರ್ಶ್ವವಾಯು ರೋಗಿಗೆ, "ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ," ಎಂದರು. ಕೂಡಲೇ ಅವನು ಎದ್ದು, ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟುಹೋದನು. ಆಗ ಎಲ್ಲರು ವಿಸ್ಮಯಗೊಂಡು, "ಇಂಥದ್ದನ್ನು ನಾವು ಹಿಂದೆಂದೂ ಕಂಡಿರಲಿಲ್ಲ!" ಎಂದು ಹೇಳುತ್ತಾ ದೇವರನ್ನು ಮಹಿಮೆಪಡಿಸಿದರು.
ಯೇಸು ಯೆಹೂದ್ಯರ ಸಬ್ಬತ್ ದಿನದಂದು ಸ್ವಸ್ಥಪಡಿಸಿದ್ದು
ಇನ್ನೊಂದು ಸಾರಿ ಯೇಸು ಸಭಾಮಂದಿರಕ್ಕೆ ಹೋದರು. ಅಲ್ಲಿ ಕೈ ಬತ್ತಿದ ಒಬ್ಬ ಮನುಷ್ಯನಿದ್ದನು. ಕೆಲವರು ಯೇಸುವಿನ ಮೇಲೆ ತಪ್ಪು ಹೊರಿಸಬೇಕೆಂದು, ಸಬ್ಬತ್ ದಿನದಲ್ಲಿ ಅವನನ್ನು ಯೇಸು ಗುಣಪಡಿಸುವರೋ ಏನೋ ಎಂದು ಲಕ್ಷವಿಟ್ಟು ನೋಡುತ್ತಿದ್ದರು. ಯೇಸು ಕೈಬತ್ತಿದವನಿಗೆ, "ಎದ್ದು ಮುಂದೆ ಬಾ," ಎಂದರು.
ಆಗ ಯೇಸು ಅವರನ್ನು, "ಸಬ್ಬತ್ ದಿನದಲ್ಲಿ ಒಳ್ಳೆಯದನ್ನು ಮಾಡುವುದು ನಿಯಮಕ್ಕೆ ಸಮ್ಮತವೋ ಅಥವಾ ಕೆಟ್ಟದ್ದನ್ನು ಮಾಡುವುದೋ? ಪ್ರಾಣವನ್ನು ಉಳಿಸುವುದೋ ಅಥವಾ ತೆಗೆಯುವುದೋ?" ಎಂದು ಕೇಳಿದರು. ಅದಕ್ಕೆ ಅವರು ಸುಮ್ಮನಿದ್ದರು.
ಆಗ ಯೇಸು ಸುತ್ತಲೂ ಇದ್ದವರನ್ನು ಕೋಪದಿಂದ ನೋಡಿ, ಅವರ ಹೃದಯಕಾಠಿಣ್ಯಕ್ಕಾಗಿ ದುಃಖಪಟ್ಟು, ಆ ಮನುಷ್ಯನಿಗೆ, "ನಿನ್ನ ಕೈಚಾಚು," ಎಂದು ಹೇಳಿದರು. ಅವನು ಕೈಚಾಚಿದಾಗ, ಅವನ ಕೈ ಸಂಪೂರ್ಣವಾಗಿ ಗುಣವಾಯಿತು.
ಯೇಸು ಒಬ್ಬ ಕುಷ್ಠರೋಗಿಯನ್ನು ವಾಸಿಮಾಡಿದ್ದು
ಯೇಸು ಒಂದು ಪಟ್ಟಣದಲ್ಲಿದ್ದಾಗ, ಮೈಯೆಲ್ಲಾ ಕುಷ್ಠರೋಗವಿದ್ದ ಒಬ್ಬ ಮನುಷ್ಯನು ಯೇಸುವನ್ನು ಕಂಡು ಅಡ್ಡಬಿದ್ದು ಅವರಿಗೆ, "ಸ್ವಾಮಿ, ನಿಮಗೆ ಮನಸ್ಸಿದ್ದರೆ, ನೀವು ನನ್ನನ್ನು ಶುದ್ಧಮಾಡಬಲ್ಲಿರಿ," ಎಂದು ಅವರನ್ನು ಬೇಡಿಕೊಂಡನು.
ಯೇಸು ತಮ್ಮ ಕೈಚಾಚಿ ಅವನನ್ನು ಮುಟ್ಟಿ ಅವನಿಗೆ, "ನನಗೆ ಮನಸ್ಸಿದೆ, ನೀನು ಶುದ್ಧನಾಗು!" ಎಂದು ಹೇಳಿದರು. ಕೂಡಲೇ ಆ ಕುಷ್ಠವು ಅವನನ್ನು ಬಿಟ್ಟುಹೋಯಿತು.
ಆಗ ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಹಾಸಿಗೆಯಲ್ಲಿ ಹೊತ್ತುಕೊಂಡು ಬಂದು, ಒಳಗೆ ಯೇಸುವಿನ ಎದುರಿಗೆ ತರುವುದಕ್ಕೆ ಪ್ರಯತ್ನಿಸುತ್ತಿದ್ದರು. ಆದರೆ ಅಲ್ಲಿದ್ದ ಜನಸಮೂಹದವರ ನಿಮಿತ್ತ ಅವರು ಅವನನ್ನು ಒಳಗೆ ತರುವ ಯಾವ ವಿಧಾನವನ್ನೂ ಕಾಣದೆ, ಮನೆಯ ಮೇಲೆ ಹೋಗಿ ಹೆಂಚುಗಳನ್ನು ತೆಗೆದು ಅವನನ್ನು ಹಾಸಿಗೆಯೊಂದಿಗೆ ಯೇಸುವಿನ ಮುಂದೆ ಇಳಿಸಿದರು.
ಯೇಸು ಅವರ ವಿಶ್ವಾಸವನ್ನು ಕಂಡು ಅವನಿಗೆ, "ಮಗನೇ, ನಿನ್ನ ಪಾಪಗಳು ಕ್ಷಮಿಸಲಾಗಿವೆ," ಎಂದು ಹೇಳಿದರು.
ಆಗ ಫರಿಸಾಯರೂ ನಿಯಮ ಬೋಧಕರೂ, "ದೇವದೂಷಣೆಯನ್ನು ಮಾಡುವುದಕ್ಕೆ ಈತನು ಯಾರು? ದೇವರೊಬ್ಬನೇ ಹೊರತು ಪಾಪಗಳನ್ನು ಕ್ಷಮಿಸುವವರು ಯಾರು?" ಎಂದು ತಮ್ಮಲ್ಲಿ ಮಾತನಾಡಲಾರಂಭಿಸಿದರು.
ಯೇಸು ಅವರ ಆಲೋಚನೆಗಳನ್ನು ತಿಳಿದು, "ನೀವು ನಿಮ್ಮ ಮನಸ್ಸಿನಲ್ಲಿ ಅಂದುಕೊಳ್ಳುತ್ತಿರುವುದೇನು? ಯಾವುದು ಸುಲಭ? ‘ನಿನ್ನ ಪಾಪಗಳು ಕ್ಷಮಿಸಲಾಗಿವೆ,’ ಎನ್ನುವುದೋ ಅಥವಾ ‘ಎದ್ದು ನಡೆ,’ ಎನ್ನುವುದೋ? ಆದರೆ ಮನುಷ್ಯಪುತ್ರನಾದ ನನಗೆ ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸುವುದಕ್ಕೆ ಅಧಿಕಾರವುಂಟೆಂದು ನೀವು ತಿಳಿಯಬೇಕು," ಎಂದು ಹೇಳಿ, ಆ ಪಾರ್ಶ್ವವಾಯು ರೋಗಿಗೆ, "ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ," ಎಂದರು. ಕೂಡಲೇ ಅವನು ಅವರ ಮುಂದೆ ಎದ್ದು ತಾನು ಮಲಗಿದ್ದ ಹಾಸಿಗೆಯನ್ನು ಎತ್ತಿಕೊಂಡು, ದೇವರನ್ನು ಸ್ತುತಿಸುತ್ತಾ ತನ್ನ ಮನೆಗೆ ಹೊರಟುಹೋದನು.
ಇನ್ನೊಂದು ಸಬ್ಬತ್ ದಿನದಲ್ಲಿ ಯೇಸು ಸಭಾಮಂದಿರದೊಳಕ್ಕೆ ಪ್ರವೇಶಿಸಿ ಬೋಧಿಸಿದರು, ಅಲ್ಲಿ ಬಲಗೈ ಬತ್ತಿದ ಒಬ್ಬ ಮನುಷ್ಯನಿದ್ದನು. ಆಗ ಫರಿಸಾಯರೂ ನಿಯಮ ಬೋಧಕರೂ ಯೇಸುವಿಗೆ ವಿರೋಧವಾಗಿ ತಪ್ಪು ಕಂಡು ಹಿಡಿಯಬೇಕೆಂದು, ಅವರು ಆ ಸಬ್ಬತ್ ದಿನದಲ್ಲಿ ಅವನನ್ನು ಯೇಸು ಗುಣಪಡಿಸುವರೋ ಏನೋ ಎಂದು ಗಮನಿಸಿ ನೋಡುತ್ತಿದ್ದರು. ಆದರೆ ಯೇಸು ಅವರ ಆಲೋಚನೆಗಳನ್ನು ತಿಳಿದುಕೊಂಡು ಕೈಬತ್ತಿದವನಿಗೆ, "ನೀನು ಎದ್ದು ಬಂದು ನಡುವೆ ನಿಂತುಕೋ," ಎಂದಾಗ ಅವನು ಎದ್ದು ನಿಂತುಕೊಂಡನು.
ಯೇಸು ಅವರಿಗೆ, "ನಾನು ನಿಮ್ಮನ್ನು ಕೇಳುತ್ತೇನೆ: ಸಬ್ಬತ್ ದಿನದಲ್ಲಿ ಒಳ್ಳೆಯದನ್ನು ಮಾಡುವುದು ಮೋಶೆಯ ನಿಯಮಕ್ಕೆ ಸಮ್ಮತವೋ ಕೆಟ್ಟದ್ದನ್ನು ಮಾಡುವುದೋ? ಪ್ರಾಣವನ್ನು ಉಳಿಸುವುದೋ ಅಳಿಸುವುದೋ?" ಎಂದರು.
ಯೇಸು ಸುತ್ತಲೂ ಇದ್ದವರನ್ನು ನೋಡಿ, ಆ ಮನುಷ್ಯನಿಗೆ, "ನಿನ್ನ ಕೈಚಾಚು," ಎಂದರು. ಅವನು ಹಾಗೆಯೇ ಮಾಡಿದನು. ಆಗ ಅವನ ಕೈ ಸಂಪೂರ್ಣವಾಗಿ ಗುಣವಾಯಿತು.
ಶತಾಧಿಪತಿಯ ವಿಶ್ವಾಸ
ತಮ್ಮ ಎಲ್ಲಾ ಮಾತುಗಳನ್ನು ಜನರೆಲ್ಲರೂ ಕೇಳುವಂತೆ ಹೇಳಿ ಮುಗಿಸಿದ ಮೇಲೆ, ಯೇಸು ಕಪೆರ್ನೌಮಿಗೆ ಪ್ರವೇಶಿಸಿದರು. ಆಗ ಒಬ್ಬ ಶತಾಧಿಪತಿಗೆ, ಪ್ರಿಯನಾಗಿದ್ದ ಸೇವಕ, ಅಸ್ವಸ್ಥನಾಗಿ ಸಾಯುವುದರಲ್ಲಿದ್ದನು. ಅವನು ಯೇಸುವಿನ ವಿಷಯ ಕೇಳಿದಾಗ, ಬಂದು ತನ್ನ ಸೇವಕನನ್ನು ಗುಣಮಾಡಬೇಕೆಂದು ಬೇಡಿಕೊಳ್ಳುವಂತೆ ಯೆಹೂದ್ಯರ ಹಿರಿಯರನ್ನು ಅವರ ಬಳಿಗೆ ಕಳುಹಿಸಿದನು. ಅವರು ಯೇಸುವಿನ ಬಳಿಗೆ ಬಂದು ಅವರಿಗೆ, "ನೀವು ಇದನ್ನು ಮಾಡುವುದಕ್ಕೆ ಅವನು ಯೋಗ್ಯನು, ಏಕೆಂದರೆ ಅವನು ನಮ್ಮ ಜನಾಂಗವನ್ನು ಪ್ರೀತಿಸುವುದಲ್ಲದೆ ನಮಗಾಗಿ ಒಂದು ಸಭಾಮಂದಿರವನ್ನು ಕಟ್ಟಿಸಿದ್ದಾನೆ," ಎಂದು ಆಸಕ್ತಿಯಿಂದ ಬೇಡಿಕೊಂಡರು. ಯೇಸು ಅವರೊಂದಿಗೆ ಹೋದರು.
ಅವರು ಮನೆಗೆ ಇನ್ನೂ ಸ್ವಲ್ಪ ದೂರ ಇರುವಾಗಲೇ ಶತಾಧಿಪತಿಯು ಸ್ನೇಹಿತರನ್ನು ಯೇಸುವಿನ ಬಳಿಗೆ ಕಳುಹಿಸಿ, "ಕರ್ತದೇವರೇ, ನಿಮ್ಮನ್ನು ತೊಂದರೆ ಪಡಿಸಿಕೊಳ್ಳಬೇಡಿರಿ, ನನ್ನ ಮನೆಯೊಳಗೆ ನೀವು ಬರುವಷ್ಟು ಯೋಗ್ಯತೆ ನನಗಿಲ್ಲ. ನಾನು ನಿಮ್ಮ ಬಳಿಗೆ ಬರುವುದಕ್ಕೆ ಯೋಗ್ಯನೆಂದು ಎಣಿಸಿಕೊಳ್ಳಲಿಲ್ಲ. ಆದರೆ ನೀವು ಒಂದು ಮಾತು ಹೇಳಿರಿ, ಆಗ ನನ್ನ ಸೇವಕ ಗುಣಹೊಂದುವನು. ನಾನು ಸಹ ಮತ್ತೊಬ್ಬ ಅಧಿಕಾರಿಯ ಕೈಕೆಳಗಿರುವವನು, ನನ್ನ ಅಧೀನದಲ್ಲಿಯೂ ಸೈನಿಕರಿದ್ದಾರೆ ಮತ್ತು ನಾನು ಒಬ್ಬನಿಗೆ, ‘ಹೋಗು,’ ಎಂದರೆ ಅವನು ಹೋಗುತ್ತಾನೆ, ಮತ್ತೊಬ್ಬನಿಗೆ ‘ಬಾ,’ ಎಂದರೆ ಅವನು ಬರುತ್ತಾನೆ. ನನ್ನ ಸೇವಕನಿಗೆ, ‘ಇದನ್ನು ಮಾಡು,’ ಎಂದರೆ ಅವನು ಮಾಡುತ್ತಾನೆ," ಎಂದು ಹೇಳಿ ಕಳುಹಿಸಿದನು.
ಯೇಸು ಅವನ ಈ ಮಾತುಗಳನ್ನು ಕೇಳಿದಾಗ, ಆಶ್ಚರ್ಯಪಟ್ಟು ತಿರುಗಿಕೊಂಡು ತಮ್ಮನ್ನು ಹಿಂಬಾಲಿಸುತ್ತಿದ್ದ ಗುಂಪಿಗೆ, "ನಾನು ನಿಮಗೆ ಹೇಳುವುದೇನೆಂದರೆ, ಇಂಥ ಮಹಾ ನಂಬಿಕೆಯನ್ನು ನಾನು ಇಸ್ರಾಯೇಲ್ ಜನರಲ್ಲಿಯೂ ಸಹ ಕಾಣಲಿಲ್ಲ," ಎಂದರು. ಶತಾಧಿಪತಿಯ ಕಡೆಯಿಂದ ಬಂದವರು ಮನೆಗೆ ಹಿಂದಿರುಗಿದಾಗ ಅಸ್ವಸ್ಥನಾಗಿದ್ದ ಆ ಸೇವಕ ಸ್ವಸ್ಥನಾಗಿರುವುದನ್ನು ಕಂಡರು.
ಆಗ, ಹದಿನೆಂಟು ವರ್ಷಗಳಿಂದ ದುರಾತ್ಮನಿಂದ ರೋಗ ಪೀಡಿತಳಾಗಿ ನಡುಬಗ್ಗಿ ಹೋಗಿದ್ದ ಒಬ್ಬ ಸ್ತ್ರೀಯು ಅಲ್ಲಿ ಇದ್ದಳು. ಆಕೆ ತನ್ನಷ್ಟಕ್ಕೆ ತಾನೇ ನೆಟ್ಟಗೆ ನಿಲ್ಲಲಾರದೆ ಇದ್ದಳು. ಯೇಸು ಆಕೆಯನ್ನು ಕಂಡು, ಹತ್ತಿರಕ್ಕೆ ಕರೆದು ಆಕೆಗೆ, "ಅಮ್ಮಾ, ನೀನು ಈ ನಿನ್ನ ಬಲಹೀನತೆಯಿಂದ ಬಿಡುಗಡೆಯಾಗಿದ್ದಿ," ಎಂದು ಹೇಳಿ, ಯೇಸು ಆಕೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು, ಕೂಡಲೇ ಆಕೆಯು ನೆಟ್ಟಗಾದಳು ಮತ್ತು ದೇವರನ್ನು ಸ್ತುತಿಸಿದಳು.
ಫರಿಸಾಯನ ಮನೆಯಲ್ಲಿ ಯೇಸು
ಯೇಸು ಒಂದು ಸಬ್ಬತ್ ದಿನದಲ್ಲಿ, ಫರಿಸಾಯರ ಮುಖ್ಯಸ್ಥರಲ್ಲಿ ಒಬ್ಬನ ಮನೆಯೊಳಗೆ ಊಟಕ್ಕೆ ಹೋದಾಗ, ಎಲ್ಲರು ಅವರನ್ನು ಗಮನಿಸುತ್ತಿದ್ದರು. ಅಲ್ಲಿ ದೇಹದಲ್ಲಿ ಅಸಾಧಾರಣವಾಗಿ ನೀರು ತುಂಬಿದ್ದ ರೋಗಿಯೊಬ್ಬನು ಯೇಸುವಿನ ಮುಂದೆ ಇದ್ದನು. ಆಗ ಯೇಸು ನಿಯಮ ಪಂಡಿತರಿಗೂ ಫರಿಸಾಯರಿಗೂ, "ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವುದು ಮೋಶೆಯ ನಿಯಮದ ಪ್ರಕಾರವೋ?" ಎಂದು ಕೇಳಿದರು. ಆದರೆ ಅವರು ಮೌನವಾಗಿಯೇ ಇದ್ದರು. ಆಗ ಯೇಸು, ಆ ರೋಗಿಯನ್ನು ಸ್ವಸ್ಥಮಾಡಿ ಕಳುಹಿಸಿಬಿಟ್ಟರು.
ಯೇಸು ಹತ್ತು ಕುಷ್ಠರೋಗಿಗಳನ್ನು ಗುಣಪಡಿಸಿದ್ದು
ಯೇಸು ಯೆರೂಸಲೇಮಿಗೆ ಹೋಗುತ್ತಿರುವಾಗ, ಸಮಾರ್ಯ ಮತ್ತು ಗಲಿಲಾಯ ಪ್ರಾಂತಗಳ ಮಧ್ಯದಲ್ಲಿದ್ದ ಹಳ್ಳಿಯ ಮಾರ್ಗವಾಗಿ ಪ್ರಯಾಣಮಾಡಿದರು. ಯೇಸು ಒಂದು ಹಳ್ಳಿಯನ್ನು ಪ್ರವೇಶಿಸಿದಾಗ, ಹತ್ತು ಮಂದಿ ಕುಷ್ಠರೋಗಿಗಳು ಯೇಸುವಿನ ಕಡೆಗೆ ಬಂದು ದೂರದಲ್ಲಿ ನಿಂತುಕೊಂಡು, "ಯೇಸುವೇ, ಗುರುವೇ, ನಮ್ಮನ್ನು ಕರುಣಿಸು!" ಎಂದು ತಮ್ಮ ಧ್ವನಿಯೆತ್ತಿ ಕೂಗಿದರು.
ಯೇಸು ಅವರನ್ನು ನೋಡಿ, "ಹೋಗಿ, ಯಾಜಕರಿಗೆ ನಿಮ್ಮನ್ನು ತೋರಿಸಿಕೊಳ್ಳಿರಿ," ಎಂದರು. ಅವರು ಹೋಗುತ್ತಿರುವಾಗಲೇ ಸ್ವಸ್ಥರಾದರು.
ಅವರಲ್ಲಿ ಒಬ್ಬನು, ತಾನು ಸ್ವಸ್ಥವಾದದ್ದನ್ನು ಕಂಡು, ಮಹಾಶಬ್ದದಿಂದ ದೇವರನ್ನು ಮಹಿಮೆಪಡಿಸುತ್ತಾ ಹಿಂದಿರುಗಿ ಬಂದು, ಯೇಸುವಿನ ಪಾದಕ್ಕೆ ಅಡ್ಡಬಿದ್ದು, ಅವರಿಗೆ ಕೃತಜ್ಞತೆಯನ್ನು ಸಲ್ಲಿಸಿದನು. ಅವನೋ ಸಮಾರ್ಯದವನಾಗಿದ್ದನು.
ಯೇಸು ಅವನಿಗೆ, "ಆ ಎಲ್ಲಾ ಹತ್ತು ಮಂದಿ ಸ್ವಸ್ಥರಾದರಲ್ಲವೆ? ಉಳಿದ ಒಂಬತ್ತು ಮಂದಿ ಎಲ್ಲಿ? ದೇವರನ್ನು ಮಹಿಮೆಪಡಿಸುವುದಕ್ಕೆ ಈ ವಿದೇಶಿಯೇ ಹೊರತು ಯಾರೂ ಹಿಂದಿರುಗಲಿಲ್ಲವೇ?" ಎಂದು ಹೇಳಿ ಅವನಿಗೆ, "ಎದ್ದು ಹೋಗು; ನಿನ್ನ ವಿಶ್ವಾಸವೇ ನಿನ್ನನ್ನು ಸ್ವಸ್ಥಪಡಿಸಿದೆ," ಎಂದರು.
ಮೂವತ್ತೆಂಟು ವರ್ಷದ ರೋಗಿಯ ಸ್ವಸ್ಥತೆ
ಇದಾದ ಮೇಲೆ ಯೆಹೂದ್ಯರ ಹಬ್ಬವೊಂದು ಬಂತು. ಆದ್ದರಿಂದ, ಯೇಸು ಯೆರೂಸಲೇಮಿಗೆ ಹೋದರು. ಯೆರೂಸಲೇಮಿನಲ್ಲಿ "ಕುರಿಬಾಗಿಲು" ಎಂಬ ಸ್ಥಳದ ಬಳಿ ಒಂದು ಕೊಳವಿದೆ. ಇದನ್ನು ಹೀಬ್ರೂ ಭಾಷೆಯಲ್ಲಿ ಬೇತ್ಸಥಾ ಎಂದು ಕರೆಯುತ್ತಾರೆ. ಅದಕ್ಕೆ ಐದು ಮಂಟಪಗಳಿದ್ದವು. ಅವುಗಳಲ್ಲಿ ಅಸ್ವಸ್ಥರೂ ಕುರುಡರೂ ಕುಂಟರೂ ಪಾರ್ಶ್ವವಾಯು ಪೀಡಿತರೂ ಆಗಿದ್ದವರ ದೊಡ್ಡ ಸಮೂಹವೇ ಬಿದ್ದುಕೊಂಡು, ನೀರು ಉಕ್ಕುವುದನ್ನೇ ಕಾದು ನೋಡುತ್ತಿದ್ದರು. ಏಕೆಂದರೆ ಕೆಲವೊಮ್ಮೆ ದೇವದೂತನು ಇಳಿದುಬಂದು ನೀರನ್ನು ಕಲಕುತ್ತಿದ್ದನು. ನೀರು ಕಲಕಿದೊಡನೆ ಮೊದಲು ಯಾರು ನೀರಿನೊಳಗೆ ಹೆಜ್ಜೆಯಿಡುತ್ತಿದ್ದರೋ ಅವರಿಗೆ ಯಾವ ರೋಗವಿದ್ದರೂ ಅದು ಗುಣವಾಗುತ್ತಿತ್ತು. ಆಗ ಮೂವತ್ತೆಂಟು ವರ್ಷದಿಂದ ರೋಗಿಯಾಗಿದ್ದ ಒಬ್ಬ ಮನುಷ್ಯನು ಅಲ್ಲಿ ಇದ್ದನು. ಅವನು ಬಿದ್ದುಕೊಂಡಿರುವುದನ್ನು ಯೇಸು ಕಂಡು ಅವನು ಈಗಾಗಲೇ ಬಹುಕಾಲದಿಂದ ಆ ಸ್ಥಿತಿಯಲ್ಲಿದ್ದಾನೆಂದು ತಿಳಿದು ಅವನಿಗೆ, "ನಿನಗೆ ಗುಣಹೊಂದಲು ಮನಸ್ಸಿದೆಯೋ?" ಎಂದು ಕೇಳಿದರು.
ಅದಕ್ಕೆ ಆ ರೋಗಿಯು ಯೇಸುವಿಗೆ, "ಸ್ವಾಮಿ, ನೀರು ಉಕ್ಕುವಾಗ ನನ್ನನ್ನು ಕೊಳದೊಳಗೆ ಇಳಿಸುವುದಕ್ಕೆ ನನಗೆ ಯಾರೂ ಇಲ್ಲ. ಆದರೆ ನಾನು ಹೋಗುತ್ತಿರುವಾಗಲೇ ನನಗಿಂತ ಮುಂದಾಗಿ ಮತ್ತೊಬ್ಬನು ಹೋಗುತ್ತಾನೆ," ಎಂದನು.
ಯೇಸು ಅವನಿಗೆ, "ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ," ಎಂದರು. ಕೂಡಲೇ ಆ ಮನುಷ್ಯನು ಸ್ವಸ್ಥನಾಗಿ ತನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆದನು.
ಆ ದಿನವು ಸಬ್ಬತ್ ದಿನವಾಗಿತ್ತು.
ಯೇಸು ತಾನು ನೀರನ್ನು ದ್ರಾಕ್ಷಾರಸವನ್ನಾಗಿ ಮಾಡಿದ ಗಲಿಲಾಯದ ಕಾನಾ ಊರಿಗೆ ತಿರುಗಿ ಬಂದರು. ಆಗ ಕಪೆರ್ನೌಮಿನಲ್ಲಿದ್ದ ಒಬ್ಬ ಅಧಿಕಾರಿಯ ಮಗನು ಅಸ್ವಸ್ಥನಾಗಿದ್ದನು. ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದಿರುವುದನ್ನು ಅವನು ಕೇಳಿದಾಗ ಅವರ ಬಳಿಗೆ ಹೋಗಿ, ಯೇಸು ಬಂದು ತನ್ನ ಮಗನನ್ನು ಸ್ವಸ್ಥಪಡಿಸಬೇಕೆಂದು ಬೇಡಿಕೊಂಡನು. ಏಕೆಂದರೆ ಅವನ ಮಗನು ಸಾಯುವ ಸ್ಥಿತಿಯಲ್ಲಿದ್ದನು.
ಯೇಸು ಅವನಿಗೆ, "ನೀವು ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಕಾಣದ ಹೊರತು ನಂಬುವುದೇ ಇಲ್ಲ," ಎಂದರು.
ಆಗ ಆ ಅಧಿಕಾರಿಯು ಯೇಸುವಿಗೆ, "ಅಯ್ಯಾ, ನನ್ನ ಮಗನು ಸಾಯುವ ಮೊದಲೇ ಬನ್ನಿರಿ," ಎಂದನು.
ಯೇಸು ಅವನಿಗೆ, "ಹೋಗು, ನಿನ್ನ ಮಗನು ಬದುಕುವನು," ಎಂದರು.
ಆ ಮನುಷ್ಯನು ಯೇಸು ತನಗೆ ಹೇಳಿದ ಮಾತನ್ನು ನಂಬಿ ಹೊರಟುಹೋದನು. ಹೀಗೆ ಅವನು ಇಳಿದು ಹೋಗುತ್ತಿರುವಾಗಲೇ ಸೇವಕರು ಅವನನ್ನು ಸಂಧಿಸಿ, ಅವನ ಮಗನು ಬದುಕಿರುವುದಾಗಿ ಅವನಿಗೆ ಹೇಳಿದರು. ಅವನು, "ಯಾವ ಸಮಯದಲ್ಲಿ ಮಗನು ಚೇತರಿಸಿಕೊಂಡನು?" ಎಂದು ಅವರನ್ನು ವಿಚಾರಿಸಿದಾಗ ಅವರು, "ನಿನ್ನೆ ಮಧ್ಯಾಹ್ನ ಒಂದು ಗಂಟೆಗೆ ಜ್ವರವು ಬಿಟ್ಟಿತು," ಎಂದು ಸೇವಕರು ಅವನಿಗೆ ಹೇಳಿದರು.
ಹೀಗೆ, "ನಿನ್ನ ಮಗನು ಬದುಕುವನು" ಎಂದು ಯೇಸು ತನಗೆ ಹೇಳಿದ ಸಮಯದಯಲ್ಲಿಯೇ ಅದು ಆಯಿತೆಂದು ತಂದೆಯು ತಿಳಿದುಕೊಂಡು, ಅವನೂ ಅವನ ಮನೆಯವರೆಲ್ಲರೂ ಯೇಸುವನ್ನು ನಂಬಿದರು.
ಇದು ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದ ಮೇಲೆ ಮಾಡಿದ ಎರಡನೆಯ ಸೂಚಕಕಾರ್ಯ.
A mulher com fluxo de sangue
Uma mulher que sofria há doze anos tocou a orla do manto de Jesus e foi curada instantaneamente pela sua fé.
ಆಗ ಅಲ್ಲಿ ಹನ್ನೆರಡು ವರ್ಷಗಳಿಂದ ರಕ್ತಸ್ರಾವ ರೋಗದಿಂದ ನರಳುತ್ತಿದ್ದ ಒಬ್ಬ ಸ್ತ್ರೀಯು ಹಿಂಬದಿಯಿಂದ ಬಂದು, ಯೇಸುವಿನ ನಿಲುವಂಗಿಯ ಅಂಚನ್ನು ಮುಟ್ಟಿ, "ನಾನು ಯೇಸುವಿನ ಉಡುಪನ್ನು ಮುಟ್ಟಿದರೆ ಸಾಕು, ನನಗೆ ಗುಣವಾಗುವುದು," ಎಂದು ಆಕೆಯು ತನ್ನೊಳಗೆ ಹೇಳಿಕೊಂಡಳು.
ಯೇಸು ಹಿಂತಿರುಗಿ ಆಕೆಯನ್ನು ನೋಡಿ, "ಮಗಳೇ, ಧೈರ್ಯವಾಗಿರು; ನಿನ್ನ ನಂಬಿಕೆಯೇ ನಿನ್ನನ್ನು ಗುಣಪಡಿಸಿದೆ," ಎಂದರು. ಆ ಗಳಿಗೆಯಲ್ಲೇ ಆ ಸ್ತ್ರೀಯು ಸ್ವಸ್ಥಳಾದಳು.
ಹನ್ನೆರಡು ವರ್ಷಗಳಿಂದಲೂ ರಕ್ತಸ್ರಾವ ರೋಗದಿಂದ ನರಳುತ್ತಿದ್ದ ಒಬ್ಬ ಸ್ತ್ರೀ ಆ ಗುಂಪಿನಲ್ಲಿದ್ದಳು. ಆಕೆ ಅನೇಕ ವೈದ್ಯರ ಚಿಕಿತ್ಸೆಯಿಂದ ಬಹು ಶ್ರಮಪಟ್ಟು, ತನಗಿದ್ದದ್ದೆಲ್ಲವನ್ನು ಖರ್ಚು ಮಾಡಿದ್ದರೂ ಸ್ವಲ್ಪವೂ ಪ್ರಯೋಜನವಾಗದೆ ಆ ರೋಗವು ಇನ್ನೂ ಹೆಚ್ಚಾಗುತ್ತಾ ಬಂತು. ಆಕೆ ಯೇಸುವಿನ ವಿಷಯವಾಗಿ ಕೇಳಿ, ಜನರ ಗುಂಪಿನಲ್ಲಿ ಅವರ ಹಿಂದೆ ಬಂದು ಯೇಸುವಿನ ಉಡುಪಿನ ಅಂಚನ್ನು ಮುಟ್ಟಿದಳು. ಏಕೆಂದರೆ, "ನಾನು ಯೇಸುವಿನ ಉಡುಪನ್ನು ಮುಟ್ಟಿದರೆ ಸಾಕು, ನನಗೆ ಗುಣವಾಗುವುದು," ಎಂದುಕೊಂಡಿದ್ದಳು. ಕೂಡಲೇ ಆಕೆಯ ರಕ್ತಸ್ರಾವವು ನಿಂತಿತು ಮತ್ತು ರೋಗಬಾಧೆಯಿಂದ ತಾನು ಗುಣಹೊಂದಿದಳೆಂದು ಆಕೆಗೆ ತಿಳಿಯಿತು.
ಹನ್ನೆರಡು ವರ್ಷಗಳಿಂದಲೂ ರಕ್ತಸ್ರಾವ ರೋಗದಿಂದ ನರಳುತ್ತಿದ್ದ ಒಬ್ಬ ಸ್ತ್ರೀ ಆ ಗುಂಪಿನಲ್ಲಿದ್ದಳು. ಅವಳು ತನ್ನ ಆಸ್ತಿಯನ್ನೆಲ್ಲಾ ವೆಚ್ಚಮಾಡಿದ್ದರೂ ಆಕೆಯನ್ನು ಗುಣಪಡಿಸಲು ಯಾರಿಂದಲೂ ಸಾಧ್ಯವಾಗಲಿಲ್ಲ. ಅವಳು ಯೇಸುವಿನ ಹಿಂದೆ ಬಂದು ಅವರ ಉಡುಪಿನ ಅಂಚನ್ನು ಮುಟ್ಟಿದಳು, ಕೂಡಲೇ ಆಕೆಯ ರಕ್ತಸ್ರಾವವು ನಿಂತುಹೋಯಿತು.
ಯೇಸು, "ನನ್ನನ್ನು ಮುಟ್ಟಿದವರು ಯಾರು?" ಎಂದರು.
ಎಲ್ಲರೂ ನಿರಾಕರಿಸಿದರು, ಪೇತ್ರನು ಯೇಸುವಿಗೆ, "ಬೋಧಕರೇ, ಇಷ್ಟೊಂದು ಜನರು ನಿಮ್ಮನ್ನು ನೂಕುತ್ತಾ ನಿಮ್ಮನ್ನು ಒತ್ತುತ್ತಿದ್ದಾರಲ್ಲಾ" ಎಂದನು.
ಆದರೆ ಯೇಸು, "ಯಾರೋ ಒಬ್ಬರು ನನ್ನನ್ನು ಮುಟ್ಟಿದ್ದಾರೆ; ನನ್ನಿಂದ ಗುಣಪಡಿಸುವ ಶಕ್ತಿಯು ಹೊರಟಿತೆಂದು ನನಗೆ ತಿಳಿಯಿತು," ಎಂದರು.
ಆ ಸ್ತ್ರೀಯು, ತಾನು ಇನ್ನು ಮರೆಮಾಡಲು ಸಾಧ್ಯವಿಲ್ಲವೆಂದು ತಿಳಿದು, ನಡುಗುತ್ತಾ ಬಂದು ಯೇಸುವಿನ ಮುಂದೆ ಅಡ್ಡಬಿದ್ದು, ಯಾವ ಕಾರಣದಿಂದ ಆಕೆಯು ಯೇಸುವನ್ನು ಮುಟ್ಟಿದಳೆಂದೂ ಹೇಗೆ ತಾನು ಕೂಡಲೇ ಸ್ವಸ್ಥಳಾದಳೆಂದೂ ಎಲ್ಲಾ ಜನರ ಮುಂದೆ ಅವರಿಗೆ ತಿಳಿಯಪಡಿಸಿದಳು. ಆಗ ಯೇಸು ಆಕೆಗೆ, "ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಗುಣಪಡಿಸಿದೆ. ಸಮಾಧಾನದಿಂದ ಹೋಗು," ಎಂದರು.
Ressurreições
Jesus ressuscitou mortos — a filha de Jairo, o filho da viúva de Naim e Lázaro. Ele é Senhor sobre a morte.
ಸತ್ತ ಬಾಲಕಿ ಮತ್ತು ರೋಗಿಯಾದ ಸ್ತ್ರೀ
ಯೇಸು ಇದೆಲ್ಲವನ್ನು ಅವರೊಂದಿಗೆ ಮಾತನಾಡುತ್ತಿದ್ದಾಗ, ಸಭಾಮಂದಿರದ ಒಬ್ಬ ಅಧಿಕಾರಿಯು ಬಂದು ಯೇಸುವಿನ ಮುಂದೆ ಮೊಣಕಾಲೂರಿ, "ನನ್ನ ಮಗಳು ಈಗ ತಾನೆ ಸತ್ತುಹೋದಳು. ಆದರೂ ನೀವು ಬಂದು ಆಕೆಯ ಮೇಲೆ ನಿಮ್ಮ ಕೈಯನ್ನಿಡಿರಿ; ಆಗ ಅವಳು ಬದುಕುವಳು," ಎಂದು ಹೇಳಿದನು. ಯೇಸು ಎದ್ದು ತಮ್ಮ ಶಿಷ್ಯರೊಂದಿಗೆ ಆ ಅಧಿಕಾರಿಯ ಹಿಂದೆ ಹೋದರು.
ತರುವಾಯ ಯೇಸು ಆ ಅಧಿಕಾರಿಯ ಮನೆಯೊಳಗೆ ಬಂದು ಕೊಳಲೂದುವವರನ್ನೂ ಜನರ ಗೊಂದಲವನ್ನೂ ಕಂಡು, ಅವರಿಗೆ, "ಹೊರಗೆ ಹೋಗಿರಿ, ಬಾಲಕಿಯು ಸತ್ತಿಲ್ಲ, ನಿದ್ರಿಸುತ್ತಿದ್ದಾಳೆ," ಎಂದರು. ಅದಕ್ಕವರು ನಕ್ಕು ಯೇಸುವನ್ನು ಹಾಸ್ಯಮಾಡಿದರು. ಆದರೆ ಜನರನ್ನು ಹೊರಗೆ ಕಳುಹಿಸಿದ ಮೇಲೆ ಯೇಸು ಒಳಗೆ ಹೋಗಿ, ಬಾಲಕಿಯ ಕೈಯನ್ನು ಹಿಡಿದು ಎಬ್ಬಿಸಿದಾಗ ಬಾಲಕಿಯು ಎದ್ದಳು.
ಯೇಸು ಸರೋವರದ ದಡದಲ್ಲಿದ್ದಾಗ ಸಭಾಮಂದಿರದ ಅಧಿಕಾರಿಗಳಲ್ಲಿ ಒಬ್ಬನಾದ ಯಾಯೀರನು ಅಲ್ಲಿಗೆ ಬಂದು ಯೇಸುವನ್ನು ಕಂಡು ಅವರ ಪಾದಕ್ಕೆ ಬಿದ್ದು, "ನನ್ನ ಚಿಕ್ಕ ಮಗಳು ಸಾಯುತ್ತಿದ್ದಾಳೆ. ಅವಳು ಗುಣಹೊಂದಿ ಬದುಕುವಂತೆ ದಯಮಾಡಿ ಬಂದು ಅವಳ ಮೇಲೆ ನಿಮ್ಮ ಕೈಗಳನ್ನಿಡಬೇಕು," ಎಂದು ಬಹಳವಾಗಿ ಬೇಡಿಕೊಂಡನು. ಆಗ ಯೇಸು ಅವನೊಂದಿಗೆ ಹೋದರು.
ಜನರು ದೊಡ್ಡ ಗುಂಪಾಗಿ ಯೇಸುವನ್ನು ನೂಕುತ್ತಾ ಹಿಂಬಾಲಿಸಿದರು.
ಅವರು ಸಭಾಮಂದಿರದ ಅಧಿಕಾರಿಯ ಮನೆಗೆ ಬಂದಾಗ, ಯೇಸು ಜನರು ಬಹಳವಾಗಿ ಗೋಳಾಡುವುದನ್ನೂ ಪ್ರಲಾಪಿಸುವುದನ್ನೂ ಕಂಡರು. ಯೇಸು ಮನೆಯೊಳಗೆ ಹೋಗಿ, "ನೀವು ಗೋಳಾಡಿ ಅಳುವುದೇಕೆ? ಮಗು ಸತ್ತಿಲ್ಲ, ಅವಳು ನಿದ್ದೆ ಮಾಡುತ್ತಿದ್ದಾಳೆ," ಎಂದರು. ಆದರೆ ಅವರು ಯೇಸುವನ್ನು ಪರಿಹಾಸ್ಯ ಮಾಡಿದರು.
ಯೇಸು ಅವರನ್ನೆಲ್ಲಾ ಹೊರಗೆ ಹಾಕಿ, ಆ ಹುಡುಗಿಯ ತಂದೆತಾಯಿ ಮತ್ತು ತನ್ನೊಂದಿಗಿದ್ದ ಶಿಷ್ಯರನ್ನು ಮಾತ್ರ ಕರೆದುಕೊಂಡು ಆ ಹುಡುಗಿಯನ್ನಿಟ್ಟಿದ್ದ ಕೋಣೆಗೆ ಹೋದರು. ಯೇಸು ಆಕೆಯ ಕೈಹಿಡಿದು, "ತಲಿಥಾ ಕೂಮ್!" ಎಂದರು. ಅರಮೀಯ ಭಾಷೆಯಲ್ಲಿ ಇದರ ಅರ್ಥ, "ಚಿಕ್ಕ ಹುಡುಗಿಯೇ! ನಾನು ನಿನಗೆ ಹೇಳುತ್ತೇನೆ, ಎದ್ದೇಳು!" ಎಂಬುದು. ಕೂಡಲೇ ಆ ಹುಡುಗಿ ಎದ್ದು ನಡೆದಾಡಿದಳು. ಆಕೆಗೆ ಹನ್ನೆರಡು ವಯಸ್ಸಾಗಿತ್ತು. ಎಲ್ಲರೂ ಬಹಳ ಆಶ್ಚರ್ಯಪಟ್ಟರು.
ಅನಂತರ ಯೇಸು ಜನರಿಗೆ, "ಈ ಕಾಲದ ಜನರನ್ನು, ನಾನು ಯಾವುದಕ್ಕೆ ಹೋಲಿಸಲಿ? ಅವರು ಯಾವುದಕ್ಕೆ ಹೋಲಿಕೆಯಾಗಿದ್ದಾರೆ? ಅವರು ಸಂತೆಯಲ್ಲಿ ಕುಳಿತುಕೊಂಡು ಒಬ್ಬರನ್ನೊಬ್ಬರು ಕರೆಯುತ್ತಾ:
" ‘ನಾವು ನಿಮಗಾಗಿ ಕೊಳಲೂದಿದೆವು,
ನೀವು ಕುಣಿಯಲಿಲ್ಲ,
ನಾವು ನಿಮಗಾಗಿ ಶೋಕಗೀತೆ ಹಾಡಿದೆವು,
ನೀವು ಅಳಲಿಲ್ಲ,’
ಎಂದು ಹೇಳುವ ಮಕ್ಕಳಿಗೆ ಹೋಲಿಕೆಯಾಗಿದ್ದಾರೆ.
"ಸ್ನಾನಿಕ ಯೋಹಾನನು ರೊಟ್ಟಿಯನ್ನು ತಿನ್ನದೆಯೂ ದ್ರಾಕ್ಷಾರಸವನ್ನು ಕುಡಿಯದೆಯೂ ಬಂದನು, ಅದಕ್ಕೆ ನೀವು, ‘ಅವನಿಗೆ ದೆವ್ವ ಹಿಡಿದಿದೆ,’ ಎನ್ನುತ್ತೀರಿ. ಮನುಷ್ಯಪುತ್ರನಾದ ನಾನು ಅನ್ನಪಾನ ಸೇವಿಸುವವನಾಗಿ ಬಂದೆನು, ಆದರೆ ನೀವು, ‘ಇಗೋ, ಹೊಟ್ಟೆಬಾಕನು, ಕುಡುಕನು, ಸುಂಕದವರ ಮತ್ತು ಪಾಪಿಗಳ ಸ್ನೇಹಿತನು,’ ಎನ್ನುತ್ತೀರಿ. ಆದರೆ ಜ್ಞಾನವನ್ನು ಅನ್ವಯಿಸಿಕೊಳ್ಳುವಾಗಲೇ ಜ್ಞಾನದ ಗುಣಲಕ್ಷಣಗಳು ಸ್ಪಷ್ಟವಾಗಿರುವುದು," ಎಂದರು.
ಪಾಪಿಯಾದ ಸ್ತ್ರೀಯಿಂದ ಯೇಸು ಅಭಿಷೇಕ ಹೊಂದಿದ್ದು
ಆಗ ಫರಿಸಾಯರಲ್ಲಿ ಒಬ್ಬನು ಯೇಸು ತನ್ನೊಂದಿಗೆ ಊಟ ಮಾಡಬೇಕೆಂದು ಅಪೇಕ್ಷಿಸಿದನು, ಆಗ ಯೇಸು ಆ ಫರಿಸಾಯನ ಮನೆಯೊಳಕ್ಕೆ ಹೋಗಿ ಊಟಕ್ಕೆ ಕುಳಿತುಕೊಂಡರು. ಆ ಪಟ್ಟಣದಲ್ಲಿದ್ದ ಫರಿಸಾಯನ ಮನೆಯಲ್ಲಿ ಯೇಸು ಊಟಕ್ಕೆ ಕುಳಿತುಕೊಂಡಿದ್ದಾರೆಂದು ಒಬ್ಬ ಪಾಪಿ ಸ್ತ್ರೀಯು ತಿಳಿದು, ಸುಗಂಧ ತೈಲದ ಭರಣಿಯನ್ನು ತಂದು,
ಆಗ ಸಭಾಮಂದಿರದ ಅಧಿಕಾರಿಯಾಗಿದ್ದ, ಯಾಯೀರನೆಂಬವನು ಬಂದು ಯೇಸುವಿನ ಪಾದಗಳ ಮುಂದೆ ಅಡ್ಡಬಿದ್ದು, ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು ಏಕೆಂದರೆ ಸುಮಾರು ಹನ್ನೆರಡು ವರ್ಷದ, ಅವನ ಒಬ್ಬಳೇ ಮಗಳು, ಸಾಯುವ ಹಾಗಿದ್ದಳು.
ಯೇಸು ದಾರಿಯಲ್ಲಿ ಹೋಗುತ್ತಿದ್ದಾಗ, ಜನರು ಅವರನ್ನು ನೂಕಾಡುತ್ತಿದ್ದರು.
ಯೇಸು ಇನ್ನೂ ಮಾತನಾಡುತ್ತಿರುವಾಗಲೇ, ಸಭಾಮಂದಿರದ ಅಧಿಕಾರಿಯಾದ ಯಾಯೀರನ ಮನೆಯಿಂದ ಒಬ್ಬನು ಬಂದು ಅಧಿಕಾರಿಗೆ, "ನಿನ್ನ ಮಗಳು ತೀರಿಹೋದಳು, ಇನ್ನೂ ಗುರುವಿಗೆ ತೊಂದರೆಪಡಿಸುವುದೇಕೆ?" ಎಂದನು.
ಯೇಸು ಅದನ್ನು ಕೇಳಿ, ಆ ಅಧಿಕಾರಿಗೆ, "ಭಯಪಡಬೇಡ; ನಂಬಿಕೆ ಮಾತ್ರ ಇರಲಿ, ಅವಳು ಬದುಕುವಳು," ಎಂದು ಹೇಳಿದರು.
ಯೇಸು ಯಾಯೀರನ ಮನೆಯೊಳಕ್ಕೆ ಬಂದಾಗ ಪೇತ್ರ, ಯಾಕೋಬ ಯೋಹಾನ ಮತ್ತು ಹುಡುಗಿಯ ತಂದೆತಾಯಿಗಳ ಹೊರತು ಯಾರನ್ನೂ ಒಳಗೆ ಬರಗೊಡಲಿಲ್ಲ. ಎಲ್ಲರೂ ಅಳುತ್ತಾ ಹುಡುಗಿಗಾಗಿ ಗೋಳಾಡುತ್ತಿದ್ದರು. ಯೇಸು, "ಅಳಬೇಡಿರಿ, ಆಕೆಯು ಸತ್ತಿಲ್ಲ, ನಿದ್ರೆ ಮಾಡುತ್ತಾಳೆ," ಎಂದರು.
ಆಕೆಯು ಸತ್ತಿದ್ದಾಳೆಂದು ತಿಳಿದು ಅಳುತ್ತಿದ್ದವರು ಯೇಸುವನ್ನು ಹಾಸ್ಯಮಾಡಿದರು. ಆದರೆ ಯೇಸು ಆಕೆಯ ಕೈಹಿಡಿದು, "ಮಗಳೇ, ಎದ್ದೇಳು!" ಎಂದು ಕರೆದರು. ಆಗ ಆಕೆಯ ಪ್ರಾಣವು ಹಿಂದಿರುಗಿ ಬಂತು. ಕೂಡಲೇ ಆಕೆಯು ಎದ್ದಳು. ಆಕೆಗೆ ತಿನ್ನಲು ಏನಾದರೂ ಕೊಡುವಂತೆ ಯೇಸು ಅಪ್ಪಣೆಕೊಟ್ಟರು. ಆಕೆಯ ತಂದೆತಾಯಿಗಳು ಬೆರಗಾದರು, ಆಗ ನಡೆದದ್ದನ್ನು ಅವರು ಯಾರಿಗೂ ಹೇಳಬಾರದೆಂದು ಯೇಸು ಅವರಿಗೆ ಆಜ್ಞಾಪಿಸಿದರು.
ಲಾಜರನ ಮರಣ
ಮರಿಯಳ ಮತ್ತು ಆಕೆಯ ಸಹೋದರಿಯಾದ ಮಾರ್ಥಳ ಊರಾದ ಬೇಥಾನ್ಯದಲ್ಲಿ ಲಾಜರನೆಂಬವನೊಬ್ಬನು ಅಸ್ವಸ್ಥನಾಗಿದ್ದನು. ಯೇಸುಸ್ವಾಮಿಯ ಪಾದಗಳಿಗೆ ತೈಲವನ್ನು ಹಚ್ಚಿ ತನ್ನ ತಲೆಕೂದಲಿನಿಂದ ಅವರ ಪಾದಗಳನ್ನು ಒರಸಿದ ಮರಿಯಳ ಸಹೋದರನಾದ ಲಾಜರನೇ ಅಸ್ವಸ್ಥನಾಗಿದ್ದನು. ಆದ್ದರಿಂದ ಅವನ ಸಹೋದರಿಯರು, "ಸ್ವಾಮೀ, ಇಗೋ, ನೀವು ಪ್ರೀತಿಸುವವನು ಅಸ್ವಸ್ಥನಾಗಿದ್ದಾನೆ," ಎಂದು ಯೇಸುವಿಗೆ ಹೇಳಿ ಕಳುಹಿಸಿದರು.
ಯೇಸು ಅದನ್ನು ಕೇಳಿ, "ಈ ಕಾಯಿಲೆಯು ಮರಣಕ್ಕಾಗಿಯಲ್ಲ. ದೇವರ ಮಹಿಮೆಗಾಗಿಯೇ ಬಂದದ್ದು. ಇದರಿಂದ ದೇವರ ಪುತ್ರನಿಗೆ ಮಹಿಮೆಯಾಗುವುದು," ಎಂದು ಹೇಳಿದರು. ಮಾರ್ಥಳನ್ನು ಅವಳ ಸಹೋದರಿಯನ್ನು ಮತ್ತು ಲಾಜರನನ್ನು ಯೇಸು ಪ್ರೀತಿಸುತ್ತಿದ್ದರು. ಅವನು ಅಸ್ವಸ್ಥನಾಗಿದ್ದಾನೆಂದು ಯೇಸು ಕೇಳಿದ ಮೇಲೆಯೂ ಎರಡು ದಿವಸ ತಾನಿದ್ದ ಸ್ಥಳದಲ್ಲೇ ಉಳಿದುಕೊಂಡರು. ತರುವಾಯ ಯೇಸು ತಮ್ಮ ಶಿಷ್ಯರಿಗೆ, "ನಾವು ತಿರುಗಿ ಯೂದಾಯಕ್ಕೆ ಹೋಗೋಣ," ಎಂದರು.
ಯೇಸುವಿನ ಶಿಷ್ಯರು ಅವರಿಗೆ, "ಬೋಧಕರೇ, ಈಗ ಯೆಹೂದ್ಯರು ನಿಮ್ಮ ಮೇಲೆ ಕಲ್ಲೆಸೆಯಬೇಕೆಂದು ಹುಡುಕುತ್ತಿದ್ದಾರೆ. ತಿರುಗಿ ನೀವು ಅಲ್ಲಿಗೆ ಹೋಗಬೇಕೆಂದಿರುವಿರಾ?" ಎಂದರು.
ಯೇಸು, "ಹಗಲಿಗೆ ಹನ್ನೆರಡು ತಾಸುಗಳು ಇವೆಯಲ್ಲವೇ? ಯಾರಾದರೂ ಹಗಲಿನಲ್ಲಿ ನಡೆದರೆ ಎಡವುದಿಲ್ಲ ಏಕೆಂದರೆ ಈ ಲೋಕದ ಬೆಳಕು ಅವರಿಗೆ ಕಾಣಿಸುತ್ತದೆ. ಯಾರಾದರೂ ರಾತ್ರಿಯಲ್ಲಿ ನಡೆದರೆ ತಮ್ಮಲ್ಲಿ ಬೆಳಕಿಲ್ಲದಿರುವುದರಿಂದ ಅವರು ಎಡವುತ್ತಾರೆ," ಎಂದು ಉತ್ತರಕೊಟ್ಟರು.
ಇದನ್ನು ಹೇಳಿದ ತರುವಾಯ ಯೇಸು ಅವರಿಗೆ, "ನಮ್ಮ ಸ್ನೇಹಿತ ಲಾಜರನು ನಿದ್ರೆ ಮಾಡುತ್ತಿದ್ದಾನೆ. ಆದರೆ ನಾನು ಹೋಗಿ ಅವನನ್ನು ಎಬ್ಬಿಸಬೇಕು," ಎಂದರು.
ಯೇಸುವಿನ ಶಿಷ್ಯರು, "ಸ್ವಾಮೀ, ಅವನು ನಿದ್ರೆಮಾಡುತ್ತಿದ್ದರೆ ಸ್ವಸ್ಥನಾಗುವನು," ಎಂದರು. ಯೇಸು ಅವನ ಮರಣವನ್ನು ಕುರಿತು ಹೇಳಿದ್ದರು. ಆದರೆ ಶಿಷ್ಯರು ನಿದ್ರೆಯ ವಿಶ್ರಾಂತಿಯನ್ನು ಕುರಿತು ಯೇಸು ಹೇಳಿದರೆಂದು ಯೋಚಿಸಿದರು.
ಆಗ ಯೇಸು ಸ್ಪಷ್ಟವಾಗಿ ಅವರಿಗೆ, "ಲಾಜರನು ಸತ್ತುಹೋಗಿದ್ದಾನೆ.
Domínio sobre a natureza
Jesus acalmou a tempestade, andou sobre as águas e multiplicou pães. A natureza obedece à voz do seu Criador.
ಯೇಸು ಬಿರುಗಾಳಿಯನ್ನು ನಿಲ್ಲಿಸಿದ್ದು
ಯೇಸುವು ದೋಣಿಯನ್ನು ಹತ್ತಲು, ಶಿಷ್ಯರು ಸಹ ಅವರ ಸಂಗಡ ಹೋದರು. ಇದ್ದಕ್ಕಿದ್ದ ಹಾಗೆ, ಸರೋವರದಲ್ಲಿ ದೊಡ್ಡ ಬಿರುಗಾಳಿ ಎದ್ದ ಕಾರಣ ದೋಣಿಯು ಅಲೆಗಳಿಂದ ಮುಚ್ಚುತ್ತಿತ್ತು. ಆದರೆ ಯೇಸು ನಿದ್ರಿಸುತ್ತಿದ್ದರು. ಆಗ ಶಿಷ್ಯರು ಯೇಸುವಿನ ಬಳಿ ಬಂದು ಅವರನ್ನು ಎಬ್ಬಿಸಿ, "ಕರ್ತನೇ, ಕಾಪಾಡು! ನಾವು ಮುಳುಗುತ್ತಿದ್ದೇವೆ!" ಎಂದರು.
ಆಗ ಯೇಸು ಅವರಿಗೆ, "ಅಲ್ಪವಿಶ್ವಾಸವುಳ್ಳವರೇ, ನೀವು ಏಕೆ ಭಯಪಡುತ್ತೀರಿ?" ಎಂದು ಹೇಳಿ, ಎದ್ದು ಬಿರುಗಾಳಿಯನ್ನೂ ಸರೋವರವನ್ನೂ ಗದರಿಸಿದರು. ಆಗ ಎಲ್ಲವೂ ಪ್ರಶಾಂತವಾಯಿತು.
ಆದರೆ ಶಿಷ್ಯರು ಆಶ್ಚರ್ಯದಿಂದ, "ಇವರು ಎಂಥಾ ಮನುಷ್ಯನಾಗಿರಬಹುದು? ಗಾಳಿಯೂ ಸರೋವರವೂ ಸಹ ಇವರ ಮಾತುಗಳನ್ನು ಕೇಳುತ್ತವಲ್ಲಾ!" ಎಂದರು.
ಸಂಜೆಯಾದಾಗ ಶಿಷ್ಯರು ಯೇಸುವಿನ ಬಳಿಗೆ ಬಂದು, "ಇದು ನಿರ್ಜನಪ್ರದೇಶ, ಸಮಯವು ದಾಟಿದೆ. ಜನರು ಹಳ್ಳಿಗಳಿಗೆ ಹೋಗಿ ತಮಗಾಗಿ ಆಹಾರವನ್ನು ಕೊಂಡುಕೊಳ್ಳುವಂತೆ ಅವರನ್ನು ಕಳುಹಿಸಿಬಿಡು," ಎಂದರು.
ಆದರೆ ಯೇಸುವು, "ಅವರು ಹೋಗಬೇಕಾಗಿಲ್ಲ. ನೀವೇ ಅವರಿಗೆ ಊಟಕ್ಕೆ ಏನಾದರೂ ಕೊಡಿರಿ," ಎಂದು ಹೇಳಿದರು.
ಅವರು ಯೇಸುವಿಗೆ, "ನಮ್ಮ ಹತ್ತಿರ ಐದು ರೊಟ್ಟಿ ಎರಡು ಮೀನುಗಳು ಮಾತ್ರ ಇವೆ," ಎಂದು ಉತ್ತರಕೊಟ್ಟರು.
ಯೇಸು, "ಅವುಗಳನ್ನು ತೆಗೆದುಕೊಂಡು ನನ್ನ ಬಳಿಗೆ ಬನ್ನಿರಿ," ಎಂದರು. ಜನಸಮೂಹವು ಹುಲ್ಲಿನ ಮೇಲೆ ಕುಳಿತುಕೊಳ್ಳಬೇಕೆಂದು ಯೇಸು ಅಪ್ಪಣೆಕೊಟ್ಟು, ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಪರಲೋಕದ ಕಡೆಗೆ ನೋಡಿ, ಅವುಗಳನ್ನು ಆಶೀರ್ವದಿಸಿ ಮುರಿದು, ತಮ್ಮ ಶಿಷ್ಯರಿಗೆ ಕೊಟ್ಟರು. ಶಿಷ್ಯರು ಜನಸಮೂಹಕ್ಕೆ ಕೊಟ್ಟರು. ಅವರೆಲ್ಲರೂ ತಿಂದು ತೃಪ್ತರಾದರು. ಶಿಷ್ಯರು ಉಳಿದ ತುಂಡುಗಳನ್ನು ಕೂಡಿಸಲು ಹನ್ನೆರಡು ಬುಟ್ಟಿ ತುಂಬಿದವು. ಊಟಮಾಡಿದವರಲ್ಲಿ ಸ್ತ್ರೀಯರೂ ಮಕ್ಕಳೂ ಅಲ್ಲದೆ ಗಂಡಸರೇ ಹೆಚ್ಚು ಕಡಿಮೆ ಐದು ಸಾವಿರ ಮಂದಿ ಇದ್ದರು.
ರಾತ್ರಿ ಮೂರು ಗಂಟೆಯಲ್ಲಿ ಯೇಸು ಸರೋವರದ ಮೇಲೆ, ನಡೆಯುತ್ತಾ ಶಿಷ್ಯರ ಬಳಿಗೆ ಬಂದರು.
ಯೇಸು ತಮ್ಮ ಶಿಷ್ಯರನ್ನು ಕರೆದು, "ನಾನು ಈ ಜನಸಮೂಹವನ್ನು ನೋಡಿ ಕನಿಕರಪಡುತ್ತೇನೆ. ಮೂರು ದಿನಗಳಿಂದ ಇವರು ನನ್ನೊಂದಿಗಿದ್ದಾರೆ. ಇವರಿಗೆ ಊಟಕ್ಕೆ ಏನೂ ಇಲ್ಲ, ದಾರಿಯಲ್ಲಿ ಅವರು ಬಳಲಿ ಹೋಗುವರು. ಇವರನ್ನು ಉಪವಾಸವಾಗಿ ಕಳುಹಿಸುವುದಕ್ಕೆ ನನಗೆ ಮನಸ್ಸಿಲ್ಲ," ಎಂದರು.
ಅದಕ್ಕೆ ಶಿಷ್ಯರು, "ಇಂಥಾ ದೊಡ್ಡ ಸಮೂಹವನ್ನು ತೃಪ್ತಿಪಡಿಸುವಂತೆ ಈ ನಿರ್ಜನ ಪ್ರದೇಶದಲ್ಲಿ ನಮಗೆ ಎಲ್ಲಿಂದ ರೊಟ್ಟಿ ಸಿಕ್ಕೀತು?" ಎಂದರು.
ಯೇಸು ಅವರಿಗೆ, "ನಿಮ್ಮ ಹತ್ತಿರ ಎಷ್ಟು ರೊಟ್ಟಿಗಳಿವೆ?" ಎಂದು ಕೇಳಿದರು.
ಶಿಷ್ಯರು, "ಏಳು ರೊಟ್ಟಿಗಳು ಮತ್ತು ಕೆಲವು ಸಣ್ಣ ಮೀನುಗಳಿವೆ," ಎಂದರು.
ಯೇಸು ಜನಸಮೂಹವು ನೆಲದ ಮೇಲೆ ಕುಳಿತುಕೊಳ್ಳುವಂತೆ ಅಪ್ಪಣೆಕೊಟ್ಟರು. ಅನಂತರ ಯೇಸು ಆ ಏಳು ರೊಟ್ಟಿಗಳನ್ನು ಮತ್ತು ಮೀನುಗಳನ್ನು ತೆಗೆದುಕೊಂಡು ದೇವರಿಗೆ ಸ್ತೋತ್ರಮಾಡಿ, ಅವುಗಳನ್ನು ಮುರಿದು ತಮ್ಮ ಶಿಷ್ಯರಿಗೆ ಕೊಡಲು ಶಿಷ್ಯರು ಜನಸಮೂಹಕ್ಕೆ ಕೊಟ್ಟರು. ಅವರೆಲ್ಲರೂ ಊಟಮಾಡಿ ತೃಪ್ತರಾದರು. ಅನಂತರ ಶಿಷ್ಯರು ಮಿಕ್ಕ ತುಂಡುಗಳನ್ನು ಕೂಡಿಸಲಾಗಿ ಏಳು ಬುಟ್ಟಿಗಳು ತುಂಬಿದವು. ಊಟಮಾಡಿದವರು ಸ್ತ್ರೀಯರೂ ಮಕ್ಕಳೂ ಅಲ್ಲದೆ ನಾಲ್ಕು ಸಾವಿರ ಗಂಡಸರಿದ್ದರು.
ಯೇಸು ದೇವಾಲಯದ ತೆರಿಗೆ ಕೊಟ್ಟದ್ದು
ತರುವಾಯ ಯೇಸು ಕಪೆರ್ನೌಮಿಗೆ ಬಂದಾಗ, ದೇವಾಲಯದ ತೆರಿಗೆಗಾಗಿ ಎರಡು ಬೆಳ್ಳಿ ನಾಣ್ಯಗಳನ್ನು ವಸೂಲಿಮಾಡುವವರು ಪೇತ್ರನ ಬಳಿಗೆ ಬಂದರು. ಅವರು ಪೇತ್ರನಿಗೆ, "ನಿಮ್ಮ ಬೋಧಕನು ತೆರಿಗೆ ಕಟ್ಟುವುದಿಲ್ಲವೋ?" ಎಂದು ಕೇಳಿದರು.
ಅದಕ್ಕೆ ಪೇತ್ರನು, "ಹೌದು, ಕಟ್ಟುತ್ತಾರೆ," ಎಂದನು.
ಅವನು ಮನೆಯೊಳಕ್ಕೆ ಬಂದಾಗ ಯೇಸು ಮುಂದಾಗಿಯೇ ಅವನಿಗೆ, "ಸೀಮೋನನೇ ನಿನಗೆ ಹೇಗೆ ತೋರುತ್ತದೆ? ಭೂಲೋಕದ ರಾಜರು ಯಾರಿಂದ ಕಂದಾಯವನ್ನು ಇಲ್ಲವೆ ತೆರಿಗೆಯನ್ನು ವಸೂಲಿ ಮಾಡುತ್ತಾರೆ? ತಮ್ಮ ಪುತ್ರರಿಂದಲೋ ಇಲ್ಲವೆ ಪರರಿಂದಲೋ?" ಎಂದು ಕೇಳಿದರು.
"ಪರರಿಂದ," ಎಂದು ಪೇತ್ರನು ಹೇಳಿದನು.
ಯೇಸು ಅವನಿಗೆ, "ಹಾಗಾದರೆ ಪುತ್ರನು ಕಟ್ಟಬೇಕಾಗಿಲ್ಲ. ಆದರೂ ನಾವು ಅವರನ್ನು ಅಭ್ಯಂತರಪಡಿಸದಂತೆ, ನೀನು ಸರೋವರಕ್ಕೆ ಹೋಗಿ ಗಾಳವನ್ನು ಹಾಕು. ಆಗ ಮೊದಲು ಬರುವ ಮೀನನ್ನು ಹಿಡಿ. ನೀನು ಅದರ ಬಾಯನ್ನು ತೆರೆದಾಗ ಅದರಲ್ಲಿ ನಾಲ್ಕು ಬೆಳ್ಳಿ ನಾಣ್ಯಗಳನ್ನು ಕಾಣುವೆ. ಅದನ್ನು ತಂದು ನನ್ನ ಮತ್ತು ನಿನ್ನ ಪರವಾಗಿ ಅವರಿಗೆ ಕೊಡು," ಎಂದು ಹೇಳಿದರು.
ಅಂಜೂರದ ಮರವು ಒಣಗಿದ್ದು
ಬೆಳಿಗ್ಗೆ ಪಟ್ಟಣಕ್ಕೆ ಹಿಂದಿರುಗಿ ಬರುತ್ತಿದ್ದಾಗ, ಯೇಸುವಿಗೆ ಹಸಿವಾಯಿತು. ಯೇಸು ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು, ಅದರ ಹತ್ತಿರಕ್ಕೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಕಾಣಲಿಲ್ಲ. ಆಗ ಯೇಸು, ಆ ಮರಕ್ಕೆ, "ಇನ್ನು ಮೇಲೆ ಎಂದೆಂದಿಗೂ ನಿನ್ನಲ್ಲಿ ಫಲವು ಬಾರದಿರಲಿ," ಎಂದರು. ತಕ್ಷಣವೇ ಅಂಜೂರದ ಮರವು ಒಣಗಿ ಹೋಯಿತು.
ಶಿಷ್ಯರು ಅದನ್ನು ಕಂಡು ಆಶ್ಚರ್ಯದಿಂದ, "ಇಷ್ಟು ಬೇಗನೆ ಈ ಅಂಜೂರದ ಮರವು ಒಣಗಿಹೋಯಿತಲ್ಲಾ?" ಎಂದು ಕೇಳಿದರು.
ಯೇಸು ಉತ್ತರವಾಗಿ ಅವರಿಗೆ, "ನಾನು ನಿಮಗೆ ನಿಜವಾಗಿ ಹೇಳುತ್ತೇನೆ: ಸಂದೇಹ ಪಡದೆ ನಂಬಿದರೆ, ನಾನು ಈ ಅಂಜೂರದ ಮರಕ್ಕೆ ಮಾಡಿದಂತೆಯೇ ನೀವೂ ಮಾಡುವಿರಿ. ಇದಲ್ಲದೆ ನೀವು ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು’ ಎಂದು ಹೇಳಿದರೂ ಅದು ಹಾಗೆಯೇ ಆಗುವುದು. ನೀವು ನಂಬಿಕೆಯಿಂದ ಪ್ರಾರ್ಥನೆಯಲ್ಲಿ ಏನೇನು ಬೇಡಿಕೊಳ್ಳುವಿರೋ ಅವುಗಳನ್ನೆಲ್ಲಾ ಪಡೆಯುವಿರಿ," ಎಂದರು.
ಇದ್ದಕ್ಕಿದ್ದ ಹಾಗೆ ದೊಡ್ಡ ಬಿರುಗಾಳಿಯು ರಭಸವಾಗಿ ಬೀಸಿದ್ದರಿಂದ ಅಲೆಗಳು ದೋಣಿಗೆ ಅಪ್ಪಳಿಸಿದವು. ಆಗ ದೋಣಿಯೊಳಗೆ ನೀರು ನುಗ್ಗಿ ಅದು ಮುಳುಗಿ ಹೋಗುವುದರಲ್ಲಿತ್ತು. ಯೇಸು ದೋಣಿಯ ಹಿಂಭಾಗದಲ್ಲಿ ದಿಂಬಿನ ಮೇಲೆ ಒರಗಿ ನಿದ್ದೆಮಾಡುತ್ತಿದ್ದರು. ಶಿಷ್ಯರು ಯೇಸುವನ್ನು ಎಬ್ಬಿಸಿ, "ಗುರುವೇ, ನಾವು ಮುಳುಗಿ ಸಾಯುತ್ತಿದ್ದೇವೆ. ನಿಮಗೆ ಚಿಂತೆಯಿಲ್ಲವೇ?" ಎಂದು ಕೇಳಿದರು.
ಯೇಸು ಎದ್ದು ಬಿರುಗಾಳಿಯನ್ನು ಗದರಿಸಿದರು ಮತ್ತು ಅಲೆಗಳಿಗೆ, "ಸುಮ್ಮನಿರು, ಶಾಂತವಾಗು!" ಎಂದು ಆಜ್ಞಾಪಿಸಿದರು. ಆಗ ಬಿರುಗಾಳಿಯು ನಿಂತು ಹೋಗಿ ಎಲ್ಲವೂ ಪ್ರಶಾಂತವಾಯಿತು.
ಯೇಸು ತಮ್ಮ ಶಿಷ್ಯರಿಗೆ, "ನೀವು ಏಕೆ ಭಯಪಡುತ್ತೀರಿ? ನಿಮಗೆ ಇನ್ನೂ ನಂಬಿಕೆಯಿಲ್ಲವೇ?" ಎಂದರು.
ಶಿಷ್ಯರು ಭಯಭೀತರಾಗಿ, "ಇವರು ಯಾರಿರಬಹುದು? ಗಾಳಿಯೂ ಸರೋವರವೂ ಸಹ ಇವರ ಮಾತುಗಳನ್ನು ಕೇಳುತ್ತವಲ್ಲಾ!" ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
ಅಷ್ಟರೊಳಗೆ ಸಂಜೆಯಾಯಿತು. ಶಿಷ್ಯರು ಯೇಸುವಿನ ಬಳಿಗೆ ಬಂದು, "ಇದು ನಿರ್ಜನಪ್ರದೇಶ, ಈಗಲೇ ಹೊತ್ತು ಮೀರಿದೆ, ಈ ಜನರು ಸುತ್ತಮುತ್ತಲಿನ ಹಳ್ಳಿಗಳಿಗೆ ಹೋಗಿ ತಿನ್ನುವುದಕ್ಕಾಗಿ ಏನಾದರೂ ಕೊಂಡುಕೊಳ್ಳುವಂತೆ ಇವರನ್ನು ಕಳುಹಿಸಿಬಿಡು," ಎಂದು ಹೇಳಿದರು.
ಆದರೆ ಯೇಸು, "ನೀವೇ ಅವರಿಗೆ ಊಟಕ್ಕೆ ಏನಾದರೂ ಕೊಡಿರಿ," ಎಂದರು.
ಶಿಷ್ಯರು, "ನಾವು ಹೋಗಿ ಅವರಿಗೆ ಊಟಕ್ಕಾಗಿ ಆರು ತಿಂಗಳ ಸಂಬಳದಷ್ಟು ಖರ್ಚುಮಾಡಿ, ಆಹಾರವನ್ನು ಕೊಂಡುಕೊಂಡು ಬರಬೇಕೆ?" ಎಂದು ಕೇಳಿದರು.
ಯೇಸು ಅವರಿಗೆ, "ನಿಮ್ಮ ಬಳಿಯಲ್ಲಿ ಎಷ್ಟು ರೊಟ್ಟಿಗಳಿವೆ? ಹೋಗಿ ನೋಡಿರಿ," ಎಂದು ಕೇಳಿದರು.
ಅವರು ವಿಚಾರಿಸಿ, "ಐದು ರೊಟ್ಟಿ ಮತ್ತು ಎರಡು ಮೀನುಗಳಿವೆ," ಎಂದು ಉತ್ತರಕೊಟ್ಟರು.
ಆಮೇಲೆ ಯೇಸು ಹಸಿರು ಹುಲ್ಲಿನ ಮೇಲೆ ಸಾಲುಸಾಲಾಗಿ ಕುಳಿತುಕೊಳ್ಳುವಂತೆ ಜನರಿಗೆ ಆಜ್ಞಾಪಿಸಿದರು. ಅವರು ನೂರರಂತೆ, ಐವತ್ತರಂತೆ ಸಾಲಾಗಿ ಕುಳಿತರು. ಯೇಸು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಪರಲೋಕದ ಕಡೆಗೆ ನೋಡಿ, ರೊಟ್ಟಿಗಳನ್ನು ಆಶೀರ್ವದಿಸಿ ಮುರಿದು, ತಮ್ಮ ಶಿಷ್ಯರಿಗೆ ಕೊಟ್ಟು ಜನರಿಗೆ ಹಂಚುವಂತೆ ತಿಳಿಸಿದರು. ಅದರಂತೆಯೇ ಎರಡು ಮೀನುಗಳನ್ನು ಜನರೆಲ್ಲರಿಗೆ ಹಂಚಿಸಿದರು. ಅವರೆಲ್ಲರೂ ತಿಂದು ತೃಪ್ತರಾದರು. ಶಿಷ್ಯರು ಉಳಿದ ರೊಟ್ಟಿ ಮತ್ತು ಮೀನಿನ ತುಂಡುಗಳನ್ನು ಕೂಡಿಸಲು ಹನ್ನೆರಡು ಬುಟ್ಟಿ ತುಂಬಿದವು. ಊಟಮಾಡಿದವರಲ್ಲಿ ಐದು ಸಾವಿರ ಮಂದಿ ಗಂಡಸರಿದ್ದರು.
ಎದುರುಗಾಳಿ ಬಲವಾಗಿ ಬೀಸುತ್ತಿದ್ದುದರಿಂದ ಶಿಷ್ಯರು ದೋಣಿಯನ್ನು ನಿಯಂತ್ರಿಸಲು ದಣಿದು ಹೋದದ್ದನ್ನು ಯೇಸು ಕಂಡು, ಮುಂಜಾನೆ ಸುಮಾರು ಮೂರು ಗಂಟೆಯಲ್ಲಿ ಅವರ ಬಳಿಗೆ ಸರೋವರದ ಮೇಲೆ ನಡೆಯುತ್ತಾ ಬಂದರು. ಯೇಸು ಅವರನ್ನು ದಾಟಿ ಹೋಗುವುದರಲ್ಲಿದ್ದರು. ಆದರೆ ಯೇಸು ಸರೋವರದ ಮೇಲೆ ನಡೆಯುವುದನ್ನು ಕಂಡಾಗ, ಅವರು ಯೇಸುವನ್ನು ಭೂತವೆಂದು ಭಾವಿಸಿ, ಕಿರುಚಿದರು. ಅವರೆಲ್ಲರೂ ಯೇಸುವನ್ನು ಕಂಡು ದಿಗಿಲುಗೊಂಡಿದ್ದರು.
ಕೂಡಲೇ ಯೇಸು ಅವರಿಗೆ, "ಧೈರ್ಯವಾಗಿರಿ, ನಾನೇ! ಭಯಪಡಬೇಡಿರಿ," ಎಂದರು. ಆಮೇಲೆ ಯೇಸು ದೋಣಿಯನ್ನು ಹತ್ತಿ ಅವರ ಬಳಿಗೆ ಬರಲು ಗಾಳಿ ನಿಂತುಹೋಯಿತು. ಅವರು ಬಹು ಆಶ್ಚರ್ಯಗೊಂಡರು.
ಯೇಸು ನಾಲ್ಕು ಸಾವಿರ ಜನರಿಗೆ ಊಟಮಾಡಿಸಿದ್ದು
ಆ ದಿವಸಗಳಲ್ಲಿ ದೊಡ್ಡ ಜನಸಮೂಹ ಕೂಡಿಬಂದಿತು. ಅವರಿಗೆ ಊಟಕ್ಕೆ ಏನೂ ಇಲ್ಲದ್ದರಿಂದ ಯೇಸು ತಮ್ಮ ಶಿಷ್ಯರನ್ನು ಹತ್ತಿರಕ್ಕೆ ಕರೆದು, "ನಾನು ಈ ಜನಸಮೂಹವನ್ನು ನೋಡಿ ಕನಿಕರಪಡುತ್ತೇನೆ. ಏಕೆಂದರೆ ಮೂರು ದಿನಗಳಿಂದ ಇವರು ನನ್ನೊಂದಿಗಿದ್ದಾರೆ. ಇವರಿಗೆ ಊಟಕ್ಕೆ ಏನೂ ಇಲ್ಲ. ನಾನು ಇವರನ್ನು ಹಸಿವೆಯಿಂದ ತಮ್ಮ ಮನೆಗಳಿಗೆ ಕಳುಹಿಸಿದರೆ ದಾರಿಯಲ್ಲಿ ಬಳಲಿ ಹೋಗುವರು. ಇವರಲ್ಲಿ ಕೆಲವರು ದೂರದಿಂದ ಬಂದಿದ್ದಾರೆ," ಎಂದರು.
ಅದಕ್ಕೆ ಶಿಷ್ಯರು ಯೇಸುವಿಗೆ, "ಈ ನಿರ್ಜನ ಪ್ರದೇಶದಲ್ಲಿ ಈ ಜನರನ್ನು ತೃಪ್ತಿಪಡಿಸಲು ಸಾಕಷ್ಟು ರೊಟ್ಟಿಯನ್ನು ಎಲ್ಲಿಂದ ತರುವುದು?" ಎಂದರು.
ಯೇಸು ಅವರಿಗೆ, "ನಿಮ್ಮ ಹತ್ತಿರ ಎಷ್ಟು ರೊಟ್ಟಿಗಳಿವೆ?" ಎಂದು ಕೇಳಿದ್ದಕ್ಕೆ ಶಿಷ್ಯರು,
"ಏಳು ರೊಟ್ಟಿಗಳಿವೆ," ಎಂದರು.
ಆಗ ಯೇಸು ಜನಸಮೂಹವು ನೆಲದ ಮೇಲೆ ಕುಳಿತುಕೊಳ್ಳುವಂತೆ ಅಪ್ಪಣೆಕೊಟ್ಟು ಆ ಏಳು ರೊಟ್ಟಿಗಳನ್ನು ತೆಗೆದುಕೊಂಡು ಮುರಿದು ಜನಸಮೂಹಕ್ಕೆ ಹಂಚಲು ತಮ್ಮ ಶಿಷ್ಯರಿಗೆ ಕೊಟ್ಟರು. ಅವರು ಜನಸಮೂಹಕ್ಕೆ ಹಂಚಿದರು. ಇದಲ್ಲದೆ ಅವರಲ್ಲಿ ಕೆಲವು ಸಣ್ಣ ಮೀನುಗಳಿದ್ದವು. ಯೇಸು ಅವುಗಳನ್ನೂ ಆಶೀರ್ವದಿಸಿ ಅವರಿಗೆ ಹಂಚುವಂತೆ ಆಜ್ಞಾಪಿಸಿದರು. ಜನರು ಊಟಮಾಡಿ ತೃಪ್ತರಾದರು. ಉಳಿದ ತುಂಡುಗಳನ್ನು ಒಟ್ಟುಗೂಡಿಸಿದಾಗ ಏಳು ಬುಟ್ಟಿಗಳು ತುಂಬಿದವು. ಊಟಮಾಡಿದವರು ಸುಮಾರು ನಾಲ್ಕು ಸಾವಿರ ಮಂದಿ. ಯೇಸು ಅವರನ್ನು ಕಳುಹಿಸಿದ ನಂತರ,
ದೇವಾಲಯವನ್ನು ಶುದ್ಧೀಕರಿಸಿದ್ದು
ಮರುದಿನ ಅವರು ಬೇಥಾನ್ಯದಿಂದ ಬರುತ್ತಿರುವಾಗ ಯೇಸುವಿಗೆ ಹಸಿವಾಯಿತು. ಯೇಸು ಎಲೆಗಳಿದ್ದ ಒಂದು ಅಂಜೂರದ ಮರವನ್ನು ದೂರದಿಂದ ಕಂಡು ಒಂದು ವೇಳೆ ಅದರಲ್ಲಿ ಹಣ್ಣು ಏನಾದರೂ ಸಿಕ್ಕೀತೆಂದುಕೊಂಡರು. ಆದರೆ ಯೇಸು ಅದರ ಹತ್ತಿರ ಬಂದಾಗ ಎಲೆಗಳನ್ನು ಹೊರತು ಮತ್ತೇನೂ ಕಾಣಲಿಲ್ಲ. ಅದು ಅಂಜೂರ ಫಲದ ಕಾಲವಾಗಿರಲಿಲ್ಲ. ಯೇಸು ಅದಕ್ಕೆ, "ಇನ್ನೆಂದಿಗೂ ಯಾರೂ ನಿನ್ನಿಂದ ಹಣ್ಣನ್ನು ತಿನ್ನದಿರಲಿ," ಎಂದರು. ಅದನ್ನು ಅವರ ಶಿಷ್ಯರು ಕೇಳಿಸಿಕೊಂಡರು.
ಬೆಳಿಗ್ಗೆ ಅವರು ಅದೇ ದಾರಿಯಲ್ಲಿ ಹೋಗುತ್ತಿದ್ದಾಗ ಆ ಅಂಜೂರ ಮರವು ಬೇರುಸಹಿತವಾಗಿ ಒಣಗಿರುವುದನ್ನು ಕಂಡರು. ಆಗ ಪೇತ್ರನು ಜ್ಞಾಪಕಮಾಡಿಕೊಂಡು ಯೇಸುವಿಗೆ, "ಗುರುವೇ, ಇಗೋ! ನೀನು ಶಪಿಸಿದ ಅಂಜೂರದ ಮರವು ಒಣಗಿಹೋಗಿದೆ!" ಎಂದು ಹೇಳಿದನು.
ಯೇಸು ಉತ್ತರವಾಗಿ ಅವರಿಗೆ ಹೇಳಿದ್ದೇನೆಂದರೆ, "ದೇವರ ನಂಬಿಕೆ ನಿಮಗಿರಲಿ. ಏಕೆಂದರೆ ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಯಾರಾದರೂ ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು,’ ಎಂದು ಹೇಳಿ ತಮ್ಮ ಹೃದಯದಲ್ಲಿ ಸಂಶಯಪಡದೆ ತಾವು ಹೇಳಿದಂತೆಯೇ ಆಗುವುದೆಂದು ನಂಬಿದರೆ ಅವರು ಹೇಳಿದಂತೆಯೇ ಅವರಿಗೆ ಆಗುವುದು. ಆದಕಾರಣ, ನೀವು ಪ್ರಾರ್ಥನೆಯಲ್ಲಿ ಏನೇನು ಬೇಡಿಕೊಳ್ಳುವಿರೋ ಎಲ್ಲವೂ ನಿಮಗೆ ಸಿಕ್ಕಿವೆಯೆಂದು ನಂಬಿರಿ. ಅವು ನಿಮಗೆ ಲಭಿಸುವವು. ನೀವು ನಿಂತುಕೊಂಡು ಪ್ರಾರ್ಥಿಸುವಾಗ ಯಾರಿಗಾದರೂ ವಿರೋಧವಾದದ್ದು ನಿಮ್ಮಲ್ಲಿದ್ದರೆ ಕ್ಷಮಿಸಿರಿ. ಆಗ ಪರಲೋಕದಲ್ಲಿರುವ ನಿಮ್ಮ ತಂದೆಯೂ ಸಹ ನಿಮ್ಮ ಅಪರಾಧಗಳನ್ನು ಕ್ಷಮಿಸುವರು.
ಪ್ರಥಮ ಶಿಷ್ಯರನ್ನು ಕರೆದದ್ದು
ಒಂದು ದಿನ ಯೇಸು ಗೆನೆಜರೇತ್ ಕೆರೆಯ ಬಳಿಯಲ್ಲಿ ನಿಂತುಕೊಂಡಿದ್ದಾಗ, ಜನರು ದೇವರ ವಾಕ್ಯವನ್ನು ಕೇಳುವುದಕ್ಕಾಗಿ ಅವರ ಸುತ್ತಲೂ ಗುಂಪಾಗಿ ಕೂಡಿದ್ದರು. ಯೇಸು ಕೆರೆಯ ಬಳಿಯಲ್ಲಿ ಎರಡು ದೋಣಿಗಳನ್ನು ಕಂಡರು. ಅಲ್ಲಿ ಬೆಸ್ತರು ಅವುಗಳಿಂದ ಹೊರಗೆ ಹೋಗಿ ತಮ್ಮ ಬಲೆಗಳನ್ನು ತೊಳೆಯುತ್ತಿದ್ದರು. ಅವುಗಳಲ್ಲಿ ಸೀಮೋನನ ದೋಣಿಯನ್ನು, ಯೇಸು ಹತ್ತಿ ಅದನ್ನು ದಡದಿಂದ ಸ್ವಲ್ಪ ದೂರ ನೂಕಬೇಕೆಂದು ಅವನನ್ನು ಕೇಳಿಕೊಂಡರು. ಆಮೇಲೆ ಯೇಸು ಕುಳಿತುಕೊಂಡು ದೋಣಿಯೊಳಗಿಂದಲೇ ಜನರಿಗೆ ಬೋಧಿಸಿದರು.
ಅವರು ಮಾತನಾಡುವುದನ್ನು ಮುಗಿಸಿದ ಮೇಲೆ ಸೀಮೋನನಿಗೆ, "ಆಳವಾದ ಸ್ಥಳಕ್ಕೆ ದೋಣಿಯನ್ನು ನಡೆಸಿ, ಮೀನು ಹಿಡಿಯುವುದಕ್ಕೆ ನಿಮ್ಮ ಬಲೆಗಳನ್ನು ಬೀಸಿರಿ," ಎಂದರು.
ಅದಕ್ಕೆ ಉತ್ತರವಾಗಿ ಸೀಮೋನನು ಯೇಸುವಿಗೆ, "ಗುರುವೇ, ನಾವು ರಾತ್ರಿಯೆಲ್ಲಾ ಪ್ರಯಾಸಪಟ್ಟರೂ ಏನೂ ಸಿಕ್ಕಲಿಲ್ಲ. ಆದರೂ ನಿಮ್ಮ ಮಾತಿನಂತೆ ನಾನು ಬಲೆಯನ್ನು ಬೀಸುತ್ತೇನೆ," ಎಂದು ಹೇಳಿದನು.
ಅವರು ಅದರಂತೆ ಬಲೆ ಹಾಕಿದಾಗ, ಮೀನಿನ ದೊಡ್ಡ ರಾಶಿಯನ್ನು ಹಿಡಿದರು ಅವರ ಬಲೆಯು ಹರಿಯುವಂತಾಯಿತು. ಆಗ ಬೇರೆ ದೋಣಿಯಲ್ಲಿದ್ದ ತಮ್ಮ ಪಾಲುಗಾರರು ಬಂದು ತಮಗೆ ಸಹಾಯ ಮಾಡಬೇಕೆಂದು ಅವರು ಸನ್ನೆಮಾಡಿದರು. ಪಾಲುಗಾರರು ಬಂದು ಎರಡು ದೋಣಿಗಳನ್ನು ತುಂಬಿಸಲಾಗಿ ಅವು ಮುಳುಗಲಾರಂಭಿಸಿದವು.
ಸೀಮೋನ್ ಪೇತ್ರನು ಇದನ್ನು ಕಂಡಾಗ, ಯೇಸುವಿನ ಮುಂದೆ ಮೊಣಕಾಲೂರಿ, "ಸ್ವಾಮಿ, ನನ್ನನ್ನು ಬಿಟ್ಟು ಹೋಗಿರಿ, ನಾನು ಪಾಪಿ," ಎಂದನು. ಯಾಕಂದರೆ, ಅವರು ಹಿಡಿದ ಮೀನುಗಳ ರಾಶಿಯನ್ನು ಕಂಡು ಅವನೂ ಅವನ ಸಂಗಡ ಇದ್ದವರೂ ವಿಸ್ಮಯಗೊಂಡಿದ್ದರು. ಸೀಮೋನನ ಕೂಡ ಪಾಲುಗಾರರಾಗಿದ್ದ ಜೆಬೆದಾಯನ ಮಕ್ಕಳಾದ ಯಾಕೋಬ, ಯೋಹಾನರೂ ಹಾಗೆಯೇ ವಿಸ್ಮಯಗೊಂಡಿದ್ದರು.
ಆಗ ಯೇಸು ಸೀಮೋನನಿಗೆ, "ಹೆದರಬೇಡ; ಇಂದಿನಿಂದ ನೀನು ದೇವರಿಗಾಗಿ ಮನುಷ್ಯರನ್ನೇ ಹಿಡಿಯುವವನಾಗಿರುವೆ," ಎಂದರು. ಅವರು ತಮ್ಮ ದೋಣಿಗಳನ್ನು ದಡಕ್ಕೆ ತಂದು ಎಲ್ಲವನ್ನು ಬಿಟ್ಟು, ಯೇಸುವನ್ನೇ ಹಿಂಬಾಲಿಸಿದರು.
ಯೇಸು ಸಮುದ್ರದ ಬಿರುಗಾಳಿಯನ್ನು ನಿಲ್ಲಿಸಿದ್ದು
ಒಂದು ದಿನ ಯೇಸು ತಮ್ಮ ಶಿಷ್ಯರಿಗೆ, "ನಾವು ಕೆರೆಯ ಆಚೆದಡಕ್ಕೆ ಹೋಗೋಣ," ಎಂದು ಹೇಳಿದರು, ಆಗ ಅವರು ದೋಣಿಯನ್ನು ಹತ್ತಿ ಹೊರಟರು. ಆದರೆ ಅವರು ಪ್ರಯಾಣ ಮಾಡುತ್ತಿದ್ದಾಗ, ಯೇಸು ನಿದ್ರಿಸುತ್ತಿದ್ದರು. ಆಗ ಬಿರುಗಾಳಿಯು ಸರೋವರದ ಮೇಲೆ ಬೀಸಲು, ದೋಣಿಯು ನೀರಿನಿಂದ ತುಂಬಿದ್ದರಿಂದ, ಅವರು ಅಪಾಯಕ್ಕೊಳಗಾದರು.
ಆಗ ಶಿಷ್ಯರು ಯೇಸುವಿನ ಬಳಿ ಬಂದು ಅವರನ್ನು ಎಬ್ಬಿಸಿ, "ಗುರುವೇ, ಗುರುವೇ, ನಾವು ಮುಳುಗುತ್ತಿದ್ದೇವೆ!" ಎಂದರು.
ಆಗ ಯೇಸು ಎದ್ದು ಬಿರುಗಾಳಿಯನ್ನೂ ರಭಸವಾಗಿ ಬರುತ್ತಿದ್ದ ಅಲೆಗಳನ್ನೂ ಗದರಿಸಿದರು; ಆಗ ಬಿರುಗಾಳಿಯು ನಿಂತು ಹೋಗಿ, ಎಲ್ಲಾ ಪ್ರಶಾಂತವಾಯಿತು. ಆಗ ಯೇಸು ತಮ್ಮ ಶಿಷ್ಯರಿಗೆ, "ನಿಮ್ಮ ನಂಬಿಕೆ ಎಲ್ಲಿ?" ಎಂದರು.
ಅವರು ಹೆದರಿದವರಾಗಿ ಆಶ್ಚರ್ಯದಿಂದ ಒಬ್ಬರಿಗೊಬ್ಬರು, "ಇವರು ಯಾರಿರಬಹುದು? ಗಾಳಿಗೂ ನೀರಿಗೂ ಸಹ ಅಪ್ಪಣೆ ಕೊಡುತ್ತಾರಲ್ಲಾ. ಅವು ಇವರು ಹೇಳಿದ ಹಾಗೆ ಕೇಳುತ್ತಾವಲ್ಲಾ?" ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
ಯೇಸು ಸಮುದ್ರದ ಬಿರುಗಾಳಿಯನ್ನು ನಿಲ್ಲಿಸಿದ್ದು
ಒಂದು ದಿನ ಯೇಸು ತಮ್ಮ ಶಿಷ್ಯರಿಗೆ, "ನಾವು ಕೆರೆಯ ಆಚೆದಡಕ್ಕೆ ಹೋಗೋಣ," ಎಂದು ಹೇಳಿದರು, ಆಗ ಅವರು ದೋಣಿಯನ್ನು ಹತ್ತಿ ಹೊರಟರು. ಆದರೆ ಅವರು ಪ್ರಯಾಣ ಮಾಡುತ್ತಿದ್ದಾಗ, ಯೇಸು ನಿದ್ರಿಸುತ್ತಿದ್ದರು. ಆಗ ಬಿರುಗಾಳಿಯು ಸರೋವರದ ಮೇಲೆ ಬೀಸಲು, ದೋಣಿಯು ನೀರಿನಿಂದ ತುಂಬಿದ್ದರಿಂದ, ಅವರು ಅಪಾಯಕ್ಕೊಳಗಾದರು.
ಆಗ ಶಿಷ್ಯರು ಯೇಸುವಿನ ಬಳಿ ಬಂದು ಅವರನ್ನು ಎಬ್ಬಿಸಿ, "ಗುರುವೇ, ಗುರುವೇ, ನಾವು ಮುಳುಗುತ್ತಿದ್ದೇವೆ!" ಎಂದರು.
ಆಗ ಯೇಸು ಎದ್ದು ಬಿರುಗಾಳಿಯನ್ನೂ ರಭಸವಾಗಿ ಬರುತ್ತಿದ್ದ ಅಲೆಗಳನ್ನೂ ಗದರಿಸಿದರು; ಆಗ ಬಿರುಗಾಳಿಯು ನಿಂತು ಹೋಗಿ, ಎಲ್ಲಾ ಪ್ರಶಾಂತವಾಯಿತು. ಆಗ ಯೇಸು ತಮ್ಮ ಶಿಷ್ಯರಿಗೆ, "ನಿಮ್ಮ ನಂಬಿಕೆ ಎಲ್ಲಿ?" ಎಂದರು.
ಅವರು ಹೆದರಿದವರಾಗಿ ಆಶ್ಚರ್ಯದಿಂದ ಒಬ್ಬರಿಗೊಬ್ಬರು, "ಇವರು ಯಾರಿರಬಹುದು? ಗಾಳಿಗೂ ನೀರಿಗೂ ಸಹ ಅಪ್ಪಣೆ ಕೊಡುತ್ತಾರಲ್ಲಾ. ಅವು ಇವರು ಹೇಳಿದ ಹಾಗೆ ಕೇಳುತ್ತಾವಲ್ಲಾ?" ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
ದೆವ್ವಗಳಿಂದ ಪೀಡಿತನಾದವನನ್ನು ಗುಣಮಾಡಿದ್ದು
ಅವರು ಗಲಿಲಾಯಕ್ಕೆ ಎದುರಾಗಿದ್ದ, ಗೆರಸೇನರ ಸೀಮೆಗೆ ತಲುಪಿದರು.
ಸಂಜೆಯಾಗುತ್ತಿದ್ದಾಗ ಹನ್ನೆರಡು ಮಂದಿ ಶಿಷ್ಯರು ಯೇಸುವಿನ ಬಳಿಗೆ ಬಂದು, "ಈ ಜನಸಮೂಹವು ಸುತ್ತಲಿರುವ ಊರುಗಳಿಗೂ ಸೀಮೆಗಳಿಗೂ ಹೋಗಿ ಊಟವಸತಿಯನ್ನು ದೊರಕಿಸಿಕೊಳ್ಳುವಂತೆ ಅವರನ್ನು ಕಳುಹಿಸಿಬಿಡಿ. ನಾವು ಇಲ್ಲಿ ನಿರ್ಜನ ಪ್ರದೇಶದಲ್ಲಿ ಇದ್ದೇವಲ್ಲ," ಎಂದರು.
ಆದರೆ ಯೇಸು ಅವರಿಗೆ, "ನೀವೇ ಅವರಿಗೆ ಊಟಕ್ಕೆ ಏನಾದರೂ ಕೊಡಿರಿ," ಎಂದರು.
ಅದಕ್ಕೆ ಅವರು, "ನಮ್ಮಲ್ಲಿ ಐದು ರೊಟ್ಟಿ ಎರಡು ಮೀನುಗಳಿಗಿಂತ ಹೆಚ್ಚೇನು ಇಲ್ಲ. ನಾವು ಹೋಗಿ ಈ ಜನರಿಗೆ ಬೇಕಾಗುವಷ್ಟು ಆಹಾರವನ್ನು ಕೊಂಡುಕೊಂಡು ಬರಬೇಕೆ?" ಎಂದರು. ಅಲ್ಲಿ ಹೆಚ್ಚು ಕಡಿಮೆ ಗಂಡಸರೇ ಐದು ಸಾವಿರ ಮಂದಿ ಇದ್ದರು.
ಆಗ ಯೇಸು ತಮ್ಮ ಶಿಷ್ಯರಿಗೆ, "ಪಂಕ್ತಿಗಳಲ್ಲಿ ಐವತ್ತರಂತೆ ಅವರನ್ನು ಕೂರಿಸಿರಿ," ಎಂದರು. ಅವರು ಹಾಗೆಯೇ ಮಾಡಿ, ಎಲ್ಲರನ್ನೂ ಕುಳ್ಳಿರಿಸಿದರು. ತರುವಾಯ ಯೇಸು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಪರಲೋಕದ ಕಡೆಗೆ ನೋಡಿ, ಅವುಗಳನ್ನು ಆಶೀರ್ವದಿಸಿ ಮುರಿದು, ತಮ್ಮ ಶಿಷ್ಯರಿಗೆ ಕೊಟ್ಟು ಜನರಿಗೆ ಹಂಚುವಂತೆ ತಿಳಿಸಿದರು. ಅವರೆಲ್ಲರೂ ತಿಂದು ತೃಪ್ತರಾದರು. ಶಿಷ್ಯರು ಉಳಿದ ತುಂಡುಗಳನ್ನು ಕೂಡಿಸಲು ಹನ್ನೆರಡು ಬುಟ್ಟಿಗಳು ತುಂಬಿದವು.
ಯೇಸು ನೀರನ್ನು ದ್ರಾಕ್ಷಾರಸವನ್ನಾಗಿ ಮಾರ್ಪಡಿಸಿದ್ದು
ಮೂರನೆಯ ದಿನದಲ್ಲಿ ಗಲಿಲಾಯದ ಕಾನಾ ಎಂಬ ಊರಿನಲ್ಲಿ ಒಂದು ಮದುವೆ ನಡೆಯಿತು. ಯೇಸುವಿನ ತಾಯಿ ಅಲ್ಲಿ ಇದ್ದಳು. ಯೇಸು ಮತ್ತು ಅವರ ಶಿಷ್ಯರು ಮದುವೆಗೆ ಆಮಂತ್ರಿತರಾಗಿದ್ದರು. ಅಲ್ಲಿ ದ್ರಾಕ್ಷಾರಸವು ಮುಗಿದು ಹೋದಾಗ, ಯೇಸುವಿನ ತಾಯಿ, "ಅವರಲ್ಲಿ ದ್ರಾಕ್ಷಾರಸ ಮುಗಿದು ಹೋಗಿದೆ," ಎಂದು ಯೇಸುವಿಗೆ ತಿಳಿಸಿದಳು.
ಯೇಸು ಆಕೆಗೆ, "ಅಮ್ಮಾ, ನಾನು ನಿಮಗೆ ಏನು ಮಾಡಲು ಬಯಸುತ್ತೀರಿ? ನನ್ನ ಸಮಯವು ಇನ್ನೂ ಬಂದಿಲ್ಲ," ಎಂದು ಹೇಳಿದರು.
ಯೇಸುವಿನ ತಾಯಿಯು ಸೇವಕರಿಗೆ, "ಆತನು ನಿಮಗೆ ಹೇಳಿದಂತೆ ಮಾಡಿರಿ," ಎಂದು ಹೇಳಿದಳು.
ಯೆಹೂದ್ಯರ ಶುದ್ಧಾಚಾರದ ಪ್ರಕಾರ ಅಲ್ಲಿ ಕಲ್ಲಿನ ಆರು ಬಾನೆಗಳು ಇದ್ದವು. ಪ್ರತಿಯೊಂದು ಬಾನೆಯೂ ಎರಡು ಇಲ್ಲವೆ ಮೂರು ಕೊಡದ ಅಳತೆಯುಳ್ಳದ್ದಾಗಿತ್ತು.
ಯೇಸು ಸೇವಕರಿಗೆ, "ಆ ಬಾನೆಗಳಲ್ಲಿ ನೀರು ತುಂಬಿರಿ," ಎಂದರು. ಅವರು ಅವುಗಳನ್ನು ಕಂಠದವರೆಗೆ ತುಂಬಿದರು.
ಅನಂತರ ಯೇಸು ಅವರಿಗೆ, "ಈಗ ಇದನ್ನು ತೆಗೆದುಕೊಂಡು ಔತಣದ ಮೇಲ್ವಿಚಾರಕನಿಗೆ ಕೊಡಿರಿ," ಎಂದರು.
ಸೇವಕರು ತೆಗೆದುಕೊಂಡು ಹೋದರು. ಔತಣದ ಮೇಲ್ವಿಚಾರಕನು ದ್ರಾಕ್ಷಾರಸವಾಗಿದ್ದ ನೀರನ್ನು ರುಚಿನೋಡಿದಾಗ, ಅದು ಎಲ್ಲಿಂದ ಬಂತೆಂದು ಅವನಿಗೆ ತಿಳಿದಿರಲಿಲ್ಲ. ಆದರೆ ನೀರನ್ನು ತಂದ ಸೇವಕರಿಗೆ ತಿಳಿದಿತ್ತು. ಔತಣದ ಮೇಲ್ವಿಚಾರಕನು ಮದುಮಗನನ್ನು ಕರೆದು, "ಪ್ರತಿಯೊಬ್ಬನು ಉತ್ತಮ ದ್ರಾಕ್ಷಾರಸವನ್ನು ಮೊದಲು ತಂದಿಟ್ಟು ಜನರು ತುಂಬಾ ಕುಡಿದ ಮೇಲೆ ಸಾಧಾರಣವಾದದ್ದನ್ನು ಕೊಡುತ್ತಾರೆ, ನೀನಾದರೋ ಉತ್ತಮ ದ್ರಾಕ್ಷಾರಸವನ್ನು ಇನ್ನೂ ಇಟ್ಟುಕೊಂಡಿರುವೆ," ಎಂದನು.
ಯೇಸು ಗಲಿಲಾಯದ ಕಾನಾದಲ್ಲಿ ಮಾಡಿದ ಸೂಚಕಕಾರ್ಯಗಳಲ್ಲಿ ಇದು ಮೊದಲನೆಯದಾಗಿತ್ತು. ಹೀಗೆ ಯೇಸು ತಮ್ಮ ಮಹಿಮೆಯನ್ನು ತೋರ್ಪಡಿಸಿದರು. ಯೇಸುವಿನ ಶಿಷ್ಯರು ಅವರಲ್ಲಿ ನಂಬಿಕೆಯಿಟ್ಟರು.
ಅವನನ್ನು ಪರೀಕ್ಷಿಸುವುದಕ್ಕಾಗಿ ಯೇಸು ಇದನ್ನು ಹೇಳಿದರು. ಏಕೆಂದರೆ ತಾನು ಮಾಡಲಿರುವುದು ಏನೆಂದು ಯೇಸುವಿಗೆ ತಿಳಿದಿತ್ತು.
ಫಿಲಿಪ್ಪನು ಯೇಸುವಿಗೆ, "ಇವರಲ್ಲಿ ಪ್ರತಿಯೊಬ್ಬನು ಸ್ವಲ್ಪ ಸ್ವಲ್ಪ ತಿಂದರೂ ಆರು ತಿಂಗಳ ಕೂಲಿಯಷ್ಟು ರೊಟ್ಟಿಗಳೂ ಅವರಿಗೆ ಸಾಲುವುದಿಲ್ಲ," ಎಂದನು.
ಆಗ ಯೇಸುವಿನ ಶಿಷ್ಯರಲ್ಲಿ ಒಬ್ಬನಾಗಿರುವ ಸೀಮೋನ್ ಪೇತ್ರನ ಸಹೋದರನಾದ ಅಂದ್ರೆಯನು ಯೇಸುವಿಗೆ, "ಇಲ್ಲಿ ಒಬ್ಬ ಹುಡುಗನ ಬಳಿ ಐದು ಜವೆಗೋಧಿಯ ರೊಟ್ಟಿಗಳೂ ಎರಡು ಮೀನುಗಳೂ ಇವೆ. ಆದರೆ ಅಷ್ಟೊಂದು ಜನರಿಗೆ ಇವು ಹೇಗೆ ಸಾಕಾಗುತ್ತವೆ?" ಎಂದನು.
ಯೇಸು, "ಜನರನ್ನು ಊಟಕ್ಕೆ ಕುಳಿತುಕೊಳ್ಳಲು ಹೇಳಿರಿ," ಎಂದರು. ಆ ಸ್ಥಳದಲ್ಲಿ ಬಹಳ ಹುಲ್ಲು ಇದ್ದುದರಿಂದ ಜನರೆಲ್ಲರೂ ಕುಳಿತುಕೊಂಡರು, ಗಂಡಸರೇ ಐದು ಸಾವಿರ ಮಂದಿ ಇದ್ದರು. ಆಮೇಲೆ ಯೇಸು ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿ, ಕುಳಿತಿದ್ದವರಿಗೆ ಬೇಕಾದಷ್ಟು ಹಂಚಿದರು. ಅದೇ ರೀತಿಯಲ್ಲಿ ಮೀನುಗಳನ್ನು ಅವರಿಗೆ ಹಂಚಿದರು.
ಅವರೆಲ್ಲರೂ ತಿಂದು ತೃಪ್ತಿಯಾದ ಮೇಲೆ ಯೇಸು ತಮ್ಮ ಶಿಷ್ಯರಿಗೆ, "ಏನೂ ನಷ್ಟವಾಗದಂತೆ ಉಳಿದ ತುಂಡುಗಳನ್ನು ಕೂಡಿಸಿರಿ," ಎಂದರು. ಅದರಂತೆ ಅವರು ಐದು ಜವೆಗೋಧಿಯ ರೊಟ್ಟಿಗಳಲ್ಲಿ ತಿಂದವರಿಂದ ಉಳಿದ ತುಂಡುಗಳನ್ನು ಕೂಡಿಸಿ, ಹನ್ನೆರಡು ಬುಟ್ಟಿಗಳಲ್ಲಿ ತುಂಬಿದರು.
ಅವರು ದೋಣಿಯನ್ನು ನಡೆಸುತ್ತಾ ಸುಮಾರು ಐದಾರು ಕಿಲೋಮೀಟರಿನಷ್ಟು ದೂರ ಹೋದ ಮೇಲೆ ಯೇಸು ಸರೋವರದ ಮೇಲೆ ನಡೆದು ದೋಣಿಯ ಕಡೆಗೆ ಸಮೀಪಿಸುತ್ತಿರುವುದನ್ನು ಅವರು ಕಂಡು, ಭಯಪಟ್ಟರು. ಆದರೆ ಯೇಸು ಅವರಿಗೆ, "ನಾನೇ, ಭಯಪಡಬೇಡಿರಿ," ಎಂದರು. ಆಗ ಶಿಷ್ಯರು ಯೇಸುವನ್ನು ದೋಣಿಯಲ್ಲಿ ಸೇರಿಸಿಕೊಳ್ಳಬೇಕೆಂದಿದ್ದರು. ಅಷ್ಟರಲ್ಲಿ ದೋಣಿಯು ಅವರು ಹೋಗಬೇಕಾಗಿದ್ದ ದಡಕ್ಕೆ ಸೇರಿತು.
ಯೇಸು ಮತ್ತು ಅದ್ಭುತಕರವಾದ ಮೀನು ಹಿಡಿಯುವಿಕೆ
ಇವುಗಳಾದ ಮೇಲೆ ಯೇಸು ಗಲಿಲಾಯ ಸರೋವರದ ಬಳಿಯಲ್ಲಿ ಶಿಷ್ಯರಿಗೆ ತಮ್ಮನ್ನು ಪುನಃ ತೋರಿಸಿಕೊಂಡರು. ಅವರು ಈ ರೀತಿಯಾಗಿ ಕಾಣಿಸಿಕೊಂಡರು: ಸೀಮೋನ ಪೇತ್ರನೂ ದಿದುಮನೆಂಬ ತೋಮನೂ ಗಲಿಲಾಯದ ಕಾನಾ ಊರಿನ ನತಾನಯೇಲನೂ ಜೆಬೆದಾಯನ ಮಕ್ಕಳೂ ಅವರ ಶಿಷ್ಯರಲ್ಲಿ ಇನ್ನಿಬ್ಬರೂ ಒಟ್ಟಾಗಿ ಕೂಡಿದ್ದರು. ಆಗ ಸೀಮೋನ ಪೇತ್ರನು ಅವರಿಗೆ, "ನಾನು ಮೀನು ಹಿಡಿಯಲು ಹೋಗುತ್ತೇನೆ," ಎಂದು ಹೇಳಲು ಅವರು ಅವನಿಗೆ, "ನಾವು ಸಹ ನಿನ್ನ ಸಂಗಡ ಬರುತ್ತೇವೆ," ಎಂದರು. ಅವರು ಹೊರಟು ದೋಣಿಯನ್ನು ಹತ್ತಿದರು. ಆದರೆ ಆ ರಾತ್ರಿ ಅವರಿಗೆ ಏನೂ ಸಿಗಲಿಲ್ಲ.
ಬೆಳಗಾಗುವಷ್ಟರಲ್ಲಿ ಯೇಸು ತೀರದಲ್ಲಿ ನಿಂತಿದ್ದರು. ಆದರೆ ಅವರೇ ಯೇಸು ಎಂದು ಶಿಷ್ಯರಿಗೆ ತಿಳಿಯಲಿಲ್ಲ.
ಆಗ ಯೇಸು ಅವರಿಗೆ, "ಮಕ್ಕಳೇ, ನಿಮ್ಮ ಬಳಿಯಲ್ಲಿ ಮೀನುಗಳಿವೆಯೋ?" ಎಂದು ಕೇಳಲು,
ಅವರು ಯೇಸುವಿಗೆ, "ಇಲ್ಲ," ಎಂದು ಉತ್ತರಕೊಟ್ಟರು.
ಯೇಸು ಶಿಷ್ಯರಿಗೆ, "ದೋಣಿಯ ಬಲಗಡೆಯಲ್ಲಿ ಬಲೆ ಬೀಸಿರಿ; ನಿಮಗೆ ಮೀನು ಸಿಗುತ್ತವೆ," ಎಂದರು. ಅವರು ಬಲೆ ಬೀಸಿದಾಗ ಮೀನುಗಳ ರಾಶಿ ಬಲೆಗೆ ಬಿದ್ದದರ ದೆಸೆಯಿಂದ ಅವರಿಗೆ ಎಳೆಯುವುದಕ್ಕೆ ಆಗದೆ ಹೋಯಿತು.
ಯೇಸು ಪ್ರೀತಿಸಿದ ಆ ಶಿಷ್ಯನು ಪೇತ್ರನಿಗೆ, "ಆತನು ಕರ್ತನೇ," ಎಂದನು. ಅದನ್ನು ಕೇಳಿ ಸೀಮೋನ ಪೇತ್ರನು ತಾನು ತೆಗೆದುಬಿಟ್ಟಿದ್ದ ತನ್ನ ಮೇಲಂಗಿಯನ್ನು ಸುತ್ತಿಕೊಂಡು ಸಮುದ್ರದೊಳಗೆ ಧುಮುಕಿದನು. ಉಳಿದ ಶಿಷ್ಯರು ಮೀನುಗಳಿದ್ದ ಬಲೆಯನ್ನು ಎಳೆಯುತ್ತಾ ಆ ದೋಣಿಯಲ್ಲಿ ಬಂದರು. ಏಕೆಂದರೆ ಅವರು ದಡದಿಂದ ಹೆಚ್ಚು ದೂರವಿರಲಿಲ್ಲ. ಸುಮಾರು ತೊಂಬತ್ತು ಮೀಟರ್ ದೂರವಿತ್ತು. ಅವರು ದಡವನ್ನು ಸೇರಿದಾಗ, ಕೆಂಡಗಳನ್ನೂ ಅವುಗಳ ಮೇಲೆ ಇಟ್ಟಿದ್ದ ಮೀನುಗಳನ್ನೂ ರೊಟ್ಟಿಯನ್ನೂ ಕಂಡರು.
ಯೇಸು ಅವರಿಗೆ, "ನೀವು ಈಗ ಹಿಡಿದ ಮೀನುಗಳಲ್ಲಿ ಕೆಲವನ್ನು ತನ್ನಿರಿ," ಎಂದರು. ಸೀಮೋನ ಪೇತ್ರನು ಹೋಗಿ ನೂರೈವತ್ತಮೂರು ದೊಡ್ಡ ಮೀನುಗಳಿಂದ ತುಂಬಿದ ಬಲೆಯನ್ನು ದಡಕ್ಕೆ ಎಳೆದನು. ಅಷ್ಟು ಮೀನುಗಳಿದ್ದರೂ ಬಲೆಯು ಹರಿದಿರಲಿಲ್ಲ.
Libertações
Jesus expulsou demônios com autoridade. Os espíritos impuros não resistiam à sua palavra e saíam imediatamente.
ಯೇಸು ಶತಾಧಿಪತಿಯ ಆಳನ್ನು ಸ್ವಸ್ಥಮಾಡಿದ್ದು
ಯೇಸು ಕಪೆರ್ನೌಮಿಗೆ ಪ್ರವೇಶಿಸಿದಾಗ, ಒಬ್ಬ ಶತಾಧಿಪತಿಯು ಅವರ ಬಳಿಗೆ ಬಂದು, "ಸ್ವಾಮೀ, ನನ್ನ ಸೇವಕನು ಪಾರ್ಶ್ವವಾಯು ರೋಗದಿಂದ ಘೋರವಾಗಿ ನರಳುತ್ತಾ ಮನೆಯಲ್ಲಿ ಹಾಸಿಗೆ ಹಿಡಿದಿದ್ದಾನೆ," ಎಂದು ಹೇಳಿಕೊಂಡನು.
ಯೇಸು ಅವನಿಗೆ, "ನಾನು ಬಂದು ಅವನನ್ನು ಸ್ವಸ್ಥಮಾಡುತ್ತೇನೆ," ಎಂದರು.
ಅದಕ್ಕೆ ಶತಾಧಿಪತಿಯು, "ಸ್ವಾಮೀ, ನನ್ನ ಮನೆಯೊಳಗೆ ನೀವು ಬರುವಷ್ಟು ಯೋಗ್ಯತೆ ನನಗಿಲ್ಲ. ಆದರೆ, ನೀವು ಒಂದು ಮಾತು ಮಾತ್ರ ಹೇಳಿರಿ, ಆಗ ನನ್ನ ಸೇವಕ ಗುಣಹೊಂದುವನು. ಏಕೆಂದರೆ ನಾನು ಸಹ ಮತ್ತೊಬ್ಬ ಅಧಿಕಾರಿಯ ಕೈಕೆಳಗಿರುವವನು, ನನ್ನ ಅಧೀನದಲ್ಲಿಯೂ ಸೈನಿಕರಿದ್ದಾರೆ ಮತ್ತು ನಾನು ಒಬ್ಬನಿಗೆ, ‘ಹೋಗು’ ಎಂದರೆ ಅವನು ಹೋಗುತ್ತಾನೆ. ಮತ್ತೊಬ್ಬನಿಗೆ, ‘ಬಾ’ ಎಂದರೆ ಅವನು ಬರುತ್ತಾನೆ. ನನ್ನ ಸೇವಕನಿಗೆ, ‘ಇದನ್ನು ಮಾಡು,’ ಎಂದರೆ ಅವನು ಮಾಡುತ್ತಾನೆ," ಎಂದು ಹೇಳಿದನು.
ಯೇಸು ಇದನ್ನು ಕೇಳಿ, ಆಶ್ಚರ್ಯಪಟ್ಟು ತಮ್ಮ ಹಿಂದೆ ಬರುತ್ತಿದ್ದವರಿಗೆ, "ಇಂಥ ಮಹಾ ನಂಬಿಕೆಯನ್ನು ನಾನು ಇಸ್ರಾಯೇಲ್ ಜನರಲ್ಲಿಯೂ ಕಾಣಲಿಲ್ಲ ಎಂದು ನಿಮಗೆ ನಿಜವಾಗಿ ಹೇಳುತ್ತೇನೆ. ಅನೇಕರು ಪೂರ್ವದಿಂದಲೂ ಪಶ್ಚಿಮದಿಂದಲೂ ಬಂದು, ಪರಲೋಕ ರಾಜ್ಯದಲ್ಲಿ ಅಬ್ರಹಾಮ್, ಇಸಾಕ್, ಯಾಕೋಬರೊಂದಿಗೆ ಹಬ್ಬದ ಔತಣಕ್ಕೆ ಕುಳಿತುಕೊಳ್ಳುವರು. ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಗೆ ದಬ್ಬಲಾಗುವರು, ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು ಎಂದು ನಿಮಗೆ ಹೇಳುತ್ತೇನೆ," ಎಂದರು.
ಅನಂತರ ಯೇಸು ಆ ಶತಾಧಿಪತಿಗೆ, "ಹೋಗು, ನೀನು ನಂಬಿದಂತೆಯೇ ನಿನಗಾಗಲಿ," ಎಂದು ಹೇಳಿದರು. ಅವನ ಸೇವಕನು ಅದೇ ಗಳಿಗೆಯಲ್ಲಿ ಸ್ವಸ್ಥನಾದನು.
ಯೇಸು ಇಬ್ಬರಲ್ಲಿದ್ದ ಅನೇಕ ದೆವ್ವಗಳನ್ನು ಬಿಡಿಸಿದ್ದು
ಯೇಸು ಆಚೆಯ ಕಡೆಯಲ್ಲಿದ್ದ ಗದರೇನರ ಪ್ರಾಂತಕ್ಕೆ ಬಂದಾಗ, ದೆವ್ವ ಹಿಡಿದಿದ್ದ ಇಬ್ಬರು ಸಮಾಧಿಯ ಗುಹೆಗಳಿಂದ ಬಂದು ಯೇಸುವಿಗೆ ಎದುರಾದರು. ಅವರು ಬಹು ಕ್ರೂರಿಗಳಾಗಿದ್ದುದರಿಂದ ಯಾರೂ ಆ ಮಾರ್ಗವಾಗಿ ಹೋಗಲಾಗುತ್ತಿರಲಿಲ್ಲ. ಆಗ ಅವರು, "ದೇವಪುತ್ರನೇ, ನಮ್ಮ ಗೊಡವೆ ನಿಮಗೆ ಏಕೆ? ಸಮಯಕ್ಕೆ ಮುಂಚೆಯೇ ನಮ್ಮನ್ನು ಪೀಡಿಸಲು ಇಲ್ಲಿಗೆ ಬಂದೆಯಾ?" ಎಂದು ಕೂಗಿ ಹೇಳಿದರು.
ಆಗ ಅವರಿಂದ ಸ್ವಲ್ಪ ದೂರದಲ್ಲಿ ಹಂದಿಗಳ ದೊಡ್ಡ ಹಿಂಡು ಮೇಯುತ್ತಿತ್ತು. "ನೀನು ನಮ್ಮನ್ನು ಹೊರಗೆ ಹಾಕುವುದಾದರೆ ಆ ಹಂದಿಗಳ ಹಿಂಡಿಗೆ ನಮ್ಮನ್ನು ಕಳುಹಿಸಿಕೊಡಿ," ಎಂದು ದೆವ್ವಗಳು ಯೇಸುವನ್ನು ಬೇಡಿಕೊಂಡವು.
ಯೇಸು ಅವುಗಳಿಗೆ, "ಹೋಗಿರಿ," ಎಂದರು. ಆಗ ಅವು ಹೊರಗೆ ಬಂದು ಹಂದಿಗಳ ಹಿಂಡನ್ನು ಹೊಕ್ಕವು. ಆಗ ಆ ಹಿಂಡೆಲ್ಲಾ ಕಡಿದಾದ ಬದಿಯಿಂದ ಓಡಿಹೋಗಿ ಸರೋವರದೊಳಗೆ ಬಿದ್ದು ಸತ್ತು ಹೋದವು. ಆ ಹಂದಿಗಳನ್ನು ಮೇಯಿಸುತ್ತಿದ್ದವರು ಓಡಿಹೋಗಿ, ಪಟ್ಟಣದೊಳಕ್ಕೆ ಹೋಗಿ ದೆವ್ವ ಹಿಡಿದಿದ್ದವರಿಗೆ ಸಂಭವಿಸಿದ್ದನ್ನು ವರದಿಮಾಡಿದರು. ಆಗ ಪಟ್ಟಣದವರೆಲ್ಲರೂ ಯೇಸುವನ್ನು ಕಾಣುವುದಕ್ಕೆ ಹೊರಗೆ ಬಂದರು. ಅವರು ಯೇಸುವನ್ನು ಕಂಡು, ತಮ್ಮ ಪ್ರಾಂತವನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು.
ಯೇಸು ಮತ್ತು ಶಿಷ್ಯರು ಹೊರಟು ಹೋಗುತ್ತಿದ್ದಾಗ, ದೆವ್ವ ಹಿಡಿದಿದ್ದ ಒಬ್ಬ ಮೂಕನನ್ನು ಕೆಲವರು ಯೇಸುವಿನ ಬಳಿಗೆ ತಂದರು. ದೆವ್ವ ಬಿಡಿಸಿದ ಮೇಲೆ, ಆ ಮೂಕನು ಮಾತನಾಡಿದನು. ಜನರು ಆಶ್ಚರ್ಯಪಟ್ಟು, "ಇಂಥದ್ದನ್ನು ಎಂದೂ ಇಸ್ರಾಯೇಲಿನಲ್ಲಿ ಕಂಡಿಲ್ಲ," ಎಂದು ಹೇಳಿದರು.
ಯೇಸು ಮತ್ತು ಬೆಲ್ಜೆಬೂಲ
ಆಗ ಕೆಲವರು ದೆವ್ವಹಿಡಿದ ಕುರುಡನೂ ಮೂಕನೂ ಆಗಿದ್ದ ಒಬ್ಬನನ್ನು ಯೇಸುವಿನ ಬಳಿಗೆ ತಂದರು. ಅವರು ಅವನನ್ನು ಗುಣಪಡಿಸಿದ್ದರಿಂದ, ಕುರುಡನೂ ಮೂಕನೂ ಆಗಿದ್ದವನು ಮಾತನಾಡಿದನು ಮತ್ತು ದೃಷ್ಟಿ ಹೊಂದಿದನು.
ಕಾನಾನ್ಯ ಸ್ತ್ರೀಯ ನಂಬಿಕೆ
ಯೇಸು ಅಲ್ಲಿಂದ ಹೊರಟು ಟೈರ್ ಸೀದೋನ್ ಪ್ರದೇಶಕ್ಕೆ ಬಂದರು. ಆಗ, ಕಾನಾನ್ಯ ಸ್ತ್ರೀಯೊಬ್ಬಳು ಬಂದು ಅವರಿಗೆ, "ಸ್ವಾಮೀ, ದಾವೀದನ ಪುತ್ರನೇ, ನನ್ನನ್ನು ಕರುಣಿಸು. ನನ್ನ ಮಗಳು ದೆವ್ವದ ಕಾಟದಿಂದ ಬಹಳವಾಗಿ ಸಂಕಟಪಡುತ್ತಿದ್ದಾಳೆ," ಎಂದು ಕೂಗಿಕೊಂಡಳು.
ಆದರೆ ಯೇಸು ಆಕೆಗೆ ಉತ್ತರ ಕೊಡಲಿಲ್ಲ. ಆಗ ಶಿಷ್ಯರು ಯೇಸುವಿನ ಬಳಿ ಬಂದು, "ಆಕೆಯನ್ನು ಕಳುಹಿಸಿಬಿಡು, ಆಕೆಯು ನಮ್ಮ ಹಿಂದೆ ಕೂಗಿಕೊಂಡು ಬರುತ್ತಾಳೆ" ಎಂದು ಕೇಳಿಕೊಂಡರು.
ಯೇಸು ಉತ್ತರವಾಗಿ, "ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರಾಯೇಲಿನ ಮನೆತನದವರ ಬಳಿಗೆ ಮಾತ್ರ ನನ್ನನ್ನು ಕಳುಹಿಸಲಾಗಿದೆ," ಎಂದರು.
ಆಕೆಯು ಬಂದು ಯೇಸುವಿನ ಮುಂದೆ ಮೊಣಕಾಲೂರಿ, "ಸ್ವಾಮೀ, ನನಗೆ ಸಹಾಯಮಾಡು!" ಎಂದು ಕೇಳಿಕೊಂಡಳು.
ಆಗ ಯೇಸು, "ಮಕ್ಕಳು ತಿನ್ನುವ ರೊಟ್ಟಿಯನ್ನು ನಾಯಿಮರಿಗಳಿಗೆ ಹಾಕುವುದು ಸರಿಯಲ್ಲ," ಎಂದು ಹೇಳಿದರು.
ಆಗ ಆಕೆಯು, "ಸ್ವಾಮೀ, ಅದು ನಿಜವೇ, ಆದರೂ ತಮ್ಮ ಯಜಮಾನರ ಮೇಜಿನಿಂದ ಬೀಳುವ ರೊಟ್ಟಿತುಂಡುಗಳನ್ನು ನಾಯಿಮರಿಗಳು ತಿನ್ನುತ್ತವಲ್ಲಾ," ಎಂದಳು.
ಯೇಸು ಉತ್ತರವಾಗಿ ಆಕೆಗೆ, "ಅಮ್ಮಾ ನಿನ್ನ ನಂಬಿಕೆಯು ದೊಡ್ಡದು! ನೀನು ಇಷ್ಟಪಟ್ಟಂತೆಯೇ ನಿನಗಾಗಲಿ," ಎಂದು ಹೇಳಿದರು. ಆಕೆಯ ಮಗಳು ಅದೇ ಗಳಿಗೆಯಲ್ಲಿ ಗುಣಹೊಂದಿದಳು.
ಮೂರ್ಛಾರೋಗಿಯಾದ ಹುಡುಗನ ಸ್ವಸ್ಥತೆ
ಅವರು ಜನಸಮೂಹದ ಬಳಿಗೆ ಬಂದಾಗ, ಒಬ್ಬ ಮನುಷ್ಯನು ಯೇಸುವಿನ ಬಳಿಗೆ ಬಂದು ಮೊಣಕಾಲೂರಿ, "ಕರ್ತನೇ, ನನ್ನ ಮಗನ ಮೇಲೆ ಕರುಣೆಯಿಡು. ಏಕೆಂದರೆ ಅವನು ಮೂರ್ಛಾರೋಗದಿಂದ ಬಹಳವಾಗಿ ಕಷ್ಟಪಡುತ್ತಾನೆ. ಅನೇಕ ಸಾರಿ ಬೆಂಕಿಯಲ್ಲಿಯೂ ನೀರಿನಲ್ಲಿಯೂ ಬೀಳುತ್ತಾನೆ. ನಾನು ಅವನನ್ನು ನಿಮ್ಮ ಶಿಷ್ಯರ ಬಳಿಗೆ ಕರೆತಂದೆನು. ಆದರೆ ಅವರು ಅವನನ್ನು ಸ್ವಸ್ಥ ಮಾಡದೆ ಹೋದರು," ಎಂದು ಹೇಳಿದನು.
ಆಗ ಯೇಸು, "ವಿಶ್ವಾಸವಿಲ್ಲದ ಮೂರ್ಖ ಸಂತತಿಯೇ, ಇನ್ನೂ ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ," ಎಂದು ಹೇಳಿದರು. ಆಗ ಯೇಸು ದೆವ್ವವನ್ನು ಗದರಿಸಲಾಗಿ ಅದು ಹುಡುಗನೊಳಗಿಂದ ಹೊರಟುಹೋಯಿತು. ಆಗ ಆ ಹುಡುಗನು ಅದೇ ಗಳಿಗೆಯಲ್ಲಿಯೇ ಗುಣಮುಖನಾದನು.
ಆ ಸಮಯದಲ್ಲಿ ಸಭಾಮಂದಿರದೊಳಗೆ ಅಶುದ್ಧಾತ್ಮವಿದ್ದ ಒಬ್ಬ ಮನುಷ್ಯನಿದ್ದನು. ಅವನು, "ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನೀವು ನಮ್ಮನ್ನು ನಾಶಮಾಡುವುದಕ್ಕಾಗಿ ಬಂದಿರುವೆಯೋ? ನೀವು ಯಾರೆಂದು ನಾನು ಬಲ್ಲೆನು. ನೀವು ದೇವರಿಂದ ಬಂದ ಪರಿಶುದ್ಧರು," ಎಂದು ಕೂಗಿ ಹೇಳಿದನು.
ಆಗ ಯೇಸು, "ಸುಮ್ಮನಿರು, ಅವನೊಳಗಿಂದ ಹೊರಗೆ ಬಾ," ಎಂದು ಗದರಿಸಿದರು. ಅಶುದ್ಧಾತ್ಮವು ಅವನನ್ನು ಉಗ್ರವಾಗಿ ಒದ್ದಾಡಿಸಿ ಗಟ್ಟಿಯಾಗಿ ಕೂಗುತ್ತಾ, ಅವನೊಳಗಿಂದ ಹೊರಗೆ ಬಂತು.
ದೆವ್ವ ಪೀಡಿತನನ್ನು ಗುಣಪಡಿಸಿದ್ದು
ಅವರೆಲ್ಲರು ಸರೋವರದ ಆಚೆಯ ಕಡೆಯಲ್ಲಿದ್ದ ಗೆರಸೇನರ ಪ್ರಾಂತವನ್ನು ಸೇರಿದರು. ಯೇಸು ದೋಣಿಯಿಂದ ಇಳಿದುಬರುವಾಗ, ಅಶುದ್ಧಾತ್ಮವುಳ್ಳ ಒಬ್ಬನು ಸಮಾಧಿಯ ಗುಹೆಯೊಳಗಿಂದ ಹೊರಬಂದು ಅವರನ್ನು ಸಂಧಿಸಿದನು. ಅವನು ಸಮಾಧಿಯ ಗುಹೆಗಳ ನಡುವೆ ವಾಸಿಸುತ್ತಿದ್ದನು ಮತ್ತು ಯಾರಿಗೂ ಅವನನ್ನು ಬಂಧಿಸಲು ಸಾಧ್ಯವಾಗುತ್ತಿರಲಿಲ್ಲ. ಸರಪಣಿಯಿಂದಲೂ ಅವನನ್ನು ಕಟ್ಟಿ ಹಾಕಲು ಆಗುತ್ತಿರಲಿಲ್ಲ. ಅನೇಕ ಸಾರಿ ಅವನ ಕೈಕಾಲುಗಳನ್ನು ಸರಪಣಿಗಳಿಂದ ಕಟ್ಟಿಹಾಕಿದ್ದರೂ ಅವನು ಅವುಗಳನ್ನು ಕಿತ್ತೆಸೆದು, ಬೇಡಿಗಳನ್ನು ತುಂಡುತುಂಡು ಮಾಡುತ್ತಿದ್ದನು. ಅವನನ್ನು ಹತೋಟಿಯಲ್ಲಿಡುವಷ್ಟು ಬಲ ಯಾರಿಗೂ ಇರಲಿಲ್ಲ. ಅವನು ಹಗಲಿರುಳು ಸಮಾಧಿಯ ಗುಹೆಗಳಲ್ಲಿಯೂ ಗುಡ್ಡಗಳಲ್ಲಿಯೂ ಇರುವವನಾಗಿ ಅರಚುತ್ತಾ ಕಲ್ಲುಗಳಿಂದ ತನ್ನನ್ನು ತಾನೇ ಚಚ್ಚಿಕೊಳ್ಳುತ್ತಿದ್ದನು.
ಅವನು ಯೇಸುವನ್ನು ದೂರದಿಂದ ಕಂಡು ಓಡಿಬಂದು, ಅವರ ಮುಂದೆ ಮೊಣಕಾಲೂರಿ, ಮಹಾಶಬ್ದದಿಂದ ಆರ್ಭಟಿಸಿ, "ಯೇಸುವೇ, ಮಹೋನ್ನತ ದೇವಪುತ್ರನೇ, ನನ್ನ ಗೊಡವೆ ನಿಮಗೆ ಏಕೆ? ದೇವರಾಣೆ, ನನ್ನನ್ನು ಪೀಡಿಸಬೇಡಿರಿ!" ಎಂದು ಅರಚಿದನು. ಏಕೆಂದರೆ ಯೇಸು ಅವನಿಗೆ, "ಅಶುದ್ಧಾತ್ಮವೇ ಅವನನ್ನು ಬಿಟ್ಟು ಹೊರಗೆ ಬಾ!" ಎಂದು ಹೇಳಿದ್ದರು.
ಅನಂತರ, ಯೇಸು ಅವನಿಗೆ, "ನಿನ್ನ ಹೆಸರೇನು?" ಎಂದು ಕೇಳಿದಾಗ,
"ನನ್ನ ಹೆಸರು ಸೇನೆ, ಏಕೆಂದರೆ ನಾವು ಬಹುಮಂದಿ ಇದ್ದೇವೆ," ಎಂದು ಹೇಳಿದನು. ಅವುಗಳನ್ನು ಆ ಪ್ರಾಂತದಿಂದ ಹೊರಗಟ್ಟಬಾರದೆಂದು ಅವನು ಯೇಸುವನ್ನು ಬಹಳವಾಗಿ ಬೇಡಿಕೊಂಡನು.
ಹತ್ತಿರದಲ್ಲಿದ್ದ ಗುಡ್ಡದ ಸಮೀಪದಲ್ಲಿ ಹಂದಿಗಳ ಒಂದು ದೊಡ್ಡ ಹಿಂಡು ಮೇಯುತ್ತಿತ್ತು. "ನಾವು ಆ ಹಂದಿಗಳ ಹಿಂಡಿನೊಳಗೆ ಸೇರಿಕೊಳ್ಳುವಂತೆ ನಮ್ಮನ್ನು ಅವುಗಳೊಳಗೆ ಕಳುಹಿಸಿಕೊಡಿ," ಎಂದು ದೆವ್ವಗಳು ಯೇಸುವನ್ನು ಬೇಡಿಕೊಂಡವು. ಯೇಸು ಅವುಗಳಿಗೆ ಅಪ್ಪಣೆಕೊಡಲು, ಆ ಅಶುದ್ಧಾತ್ಮಗಳು ಅವನಿಂದ ಹೊರಗೆ ಬಂದು ಹಂದಿಗಳೊಳಗೆ ಸೇರಿದವು. ಸುಮಾರು ಎರಡು ಸಾವಿರ ಹಂದಿಗಳಿದ್ದ ಆ ಹಿಂಡು ಓಡಿ ಕಡಿದಾದ ಬದಿಯಿಂದ ಸರೋವರದೊಳಗೆ ಬಿದ್ದು ಮುಳುಗಿ ಸತ್ತು ಹೋದವು.
ಆ ಹಂದಿಗಳನ್ನು ಮೇಯಿಸುತ್ತಿದ್ದವರು ಓಡಿಹೋಗಿ ಪಟ್ಟಣದಲ್ಲಿಯೂ ಸೀಮೆಯಲ್ಲಿಯೂ ನಡೆದ ಸಂಗತಿಯನ್ನು ತಿಳಿಸಿದರು ಮತ್ತು ನಡೆದದ್ದನ್ನು ಕಾಣಲು ಜನರು ಬಂದರು.
ಆದರೆ ನೀವು, ಯಾರಾದರೂ ತನ್ನ ತಂದೆಗೆ ಇಲ್ಲವೆ ತಾಯಿಗೆ, ನಾನು ನಿಮ್ಮ ಸಹಾಯಕ್ಕಾಗಿ ಇಟ್ಟಿದ್ದನ್ನು, ‘ದೇವರಿಗೆ ಕಾಣಿಕೆಯಾಗಿ ಕೊಟ್ಟಿದ್ದೇನೆ’ ಎಂದು ಹೇಳುವುದಾದರೆ, ನೀವು ಅವನನ್ನು ತನ್ನ ತಂದೆತಾಯಿಗಳಿಗೆ ಯಾವ ಸಹಾಯವನ್ನು ಮಾಡುವುದಕ್ಕೂ ಅನುಮತಿಸುವುದಿಲ್ಲ. ಹೀಗೆ ನೀವು ಮಾಡುತ್ತಾ ಬಂದಿರುವ ಸಂಪ್ರದಾಯಗಳ ಮೂಲಕ ದೇವರ ವಾಕ್ಯವನ್ನು ನಿರರ್ಥಕಮಾಡುತ್ತೀರಿ. ಇಂಥ ಕಾರ್ಯಗಳನ್ನು ಇನ್ನೂ ಎಷ್ಟೋ ಮಾಡುತ್ತೀರಿ," ಎಂದು ಹೇಳಿದರು.
ಯೇಸು ಜನಸಮೂಹವನ್ನು ಪುನಃ ತಮ್ಮ ಬಳಿಗೆ ಕರೆದು, "ಎಲ್ಲರೂ ನನ್ನ ಮಾತುಗಳನ್ನು ಕೇಳಿರಿ, ಅರ್ಥಮಾಡಿಕೊಳ್ಳಿರಿ. ಹೊರಗಿನಿಂದ ಮನುಷ್ಯನ ಒಳಗೆ ಹೋಗುವ ಯಾವುದೂ ಅವನನ್ನು ಅಶುದ್ಧ ಮಾಡುವುದಿಲ್ಲ. ಆದರೆ ಮನುಷ್ಯನೊಳಗಿಂದ ಹೊರಗೆ ಬರುವಂಥದ್ದು ಅವನನ್ನು ಅಶುದ್ಧ ಮಾಡುತ್ತದೆ.
ಸಿರಿಯದ ಫೊಯಿನಿಕೆ ಸ್ತ್ರೀಯ ನಂಬಿಕೆ
ಯೇಸು ಆ ಸ್ಥಳವನ್ನು ಬಿಟ್ಟು ಟೈರ್ ಪಟ್ಟಣದ ಸಮೀಪವಿದ್ದ ಪ್ರದೇಶಕ್ಕೆ ಹೋದರು. ಯೇಸು ಒಂದು ಮನೆಯೊಳಗೆ ಹೋದಾಗ, ಅದು ಯಾರಿಗೂ ತಿಳಿಯಬಾರದೆಂದು ಬಯಸಿದರು. ಆದರೂ ಅವರು ಗುಟ್ಟಾಗಿರಲು ಸಾಧ್ಯವಾಗಲಿಲ್ಲ. ಹೀಗೆ ಯೇಸುವಿನ ವಿಷಯ ತಿಳಿದ ಕೂಡಲೇ, ಅಶುದ್ಧಾತ್ಮಪೀಡಿತಳಾಗಿದ್ದ ಒಬ್ಬ ಚಿಕ್ಕ ಹುಡುಗಿಯ ತಾಯಿ ಬಂದು ಅವರ ಪಾದಕ್ಕೆ ಬಿದ್ದಳು. ಆಕೆ, ಸಿರಿಯದ ಫೊಯಿನಿಕೆಯಲ್ಲಿ ಹುಟ್ಟಿದ ಗ್ರೀಕಳಾಗಿದ್ದಳು. ತನ್ನ ಮಗಳಿಗೆ ಹಿಡಿದಿದ್ದ ದೆವ್ವವನ್ನು ಓಡಿಸಬೇಕೆಂದು ಆಕೆ ಯೇಸುವನ್ನು ಬೇಡಿಕೊಂಡಳು.
ಯೇಸು ಆಕೆಗೆ, "ಮೊದಲು ಮಕ್ಕಳು ತಮಗೆ ಬೇಕಾದದ್ದನ್ನು ತಿಂದು ತೃಪ್ತಿಗೊಳ್ಳಲಿ, ಏಕೆಂದರೆ ಮಕ್ಕಳು ತಿನ್ನುವ ರೊಟ್ಟಿಯನ್ನು ನಾಯಿಮರಿಗಳಿಗೆ ಹಾಕುವುದು ಸರಿಯಲ್ಲ," ಎಂದರು.
ಅದಕ್ಕೆ ಆಕೆಯು ಯೇಸುವಿಗೆ, "ಹೌದು ಸ್ವಾಮೀ, ಆದರೆ ಮೇಜಿನ ಕೆಳಗಿರುವ ನಾಯಿಮರಿಗಳು ಮಕ್ಕಳ ಕೈಯಿಂದ ಕೆಳಗೆ ಬೀಳುವ ರೊಟ್ಟಿತುಂಡುಗಳನ್ನು ತಿನ್ನುತ್ತವಲ್ಲಾ?" ಎಂದು ಉತ್ತರಕೊಟ್ಟಳು.
ಆಗ ಯೇಸು ಆಕೆಗೆ, "ನೀನು ಕೊಟ್ಟಿರುವ ಈ ಉತ್ತರದ ನಿಮಿತ್ತ ಮನೆಗೆ ಹಿಂದಿರುಗು, ದೆವ್ವವು ನಿನ್ನ ಮಗಳನ್ನು ಬಿಟ್ಟುಹೋಗಿದೆ," ಎಂದರು.
ಆಕೆ ಮನೆಗೆ ಹೋದಾಗ, ದೆವ್ವ ಅವಳ ಮಗಳನ್ನು ಬಿಟ್ಟುಹೋಗಿತ್ತು ಮತ್ತು ಮಗಳು ಹಾಸಿಗೆಯ ಮೇಲೆ ಮಲಗಿರುವುದನ್ನು ಕಂಡಳು.
ಸಮೂಹದಲ್ಲಿದ್ದ ಒಬ್ಬನು, "ಬೋಧಕರೇ, ಮೂಕದೆವ್ವ ಹಿಡಿದ ನನ್ನ ಮಗನನ್ನು ನಿನ್ನ ಬಳಿಗೆ ತೆಗೆದುಕೊಂಡು ಬಂದೆನು. ಅಶುದ್ಧಾತ್ಮವು ಅವನನ್ನು ಹಿಡಿದುಕೊಂಡಾಗಲೆಲ್ಲಾ ಅವನನ್ನು ಒದ್ದಾಡಿಸುತ್ತದೆ. ಅವನು ನೊರೆ ಕಾರುತ್ತಾ ತನ್ನ ಹಲ್ಲು ಕಡಿದು ಸೆಟೆದುಕೊಂಡು ಬೀಳುತ್ತಾನೆ. ಅದನ್ನು ಬಿಡಿಸಬೇಕೆಂದು ನಾನು ನಿನ್ನ ಶಿಷ್ಯರಿಗೆ ಹೇಳಿದೆನು. ಆದರೆ ಅದು ಅವರಿಂದ ಆಗಲಿಲ್ಲ," ಎಂದು ಹೇಳಿದನು.
ಆಗ ಯೇಸು ಅವರಿಗೆ, "ವಿಶ್ವಾಸವಿಲ್ಲದ ಸಂತಾನವೇ, ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ," ಎಂದು ಹೇಳಿದರು.
ಅವರು ಅವನನ್ನು ಯೇಸುವಿನ ಬಳಿಗೆ ತಂದರು. ಯೇಸುವನ್ನು ನೋಡಿದ ತಕ್ಷಣವೇ ಆ ದೆವ್ವವು ಆ ಬಾಲಕನನ್ನು ಒದ್ದಾಡಿಸಿದ್ದರಿಂದ ಅವನು ನೆಲಕ್ಕೆ ಬಿದ್ದು ನೊರೆ ಕಾರುತ್ತಾ ಹೊರಳಾಡಿದನು.
ಯೇಸು ಅವನ ತಂದೆಗೆ, "ಇದು ಇವನನ್ನು ಹಿಡಿದು ಎಷ್ಟು ಕಾಲವಾಯಿತು?" ಎಂದು ಕೇಳಲು, ಅವನು,
"ಬಾಲ್ಯದಿಂದಲೇ ಹೀಗಿದೆ. ಅಶುದ್ಧಾತ್ಮವು ಅವನನ್ನು ಕೊಲ್ಲಬೇಕೆಂದು ಅನೇಕ ಸಾರಿ ಬೆಂಕಿಯೊಳಗೂ ನೀರಿನೊಳಗೂ ಹಾಕಿತು. ಆದರೆ ನೀನು ಏನಾದರೂ ಮಾಡಲು ಸಾಧ್ಯವಿದ್ದರೆ, ಕನಿಕರಿಸಿ ನಮಗೆ ಸಹಾಯಮಾಡು," ಎಂದನು.
ಆಗ ಯೇಸು ಅವನಿಗೆ, "ನಿನಗೆ ಸಾಧ್ಯವಿದ್ದರೆ ಎನ್ನುತ್ತೀಯಲ್ಲಾ? ನಂಬುವವನಿಗೆ ಎಲ್ಲವೂ ಸಾಧ್ಯ," ಎಂದು ಹೇಳಿದರು.
ತಕ್ಷಣವೇ ಬಾಲಕನ ತಂದೆಯು, "ನಾನು ನಂಬುತ್ತೇನೆ. ನನಗೆ ಅಪನಂಬಿಕೆಯಿದೆ ನನಗೆ ಸಹಾಯಮಾಡು," ಎಂದು ಮೊರೆಯಿಟ್ಟನು.
ಜನರು ಕೂಡಿಕೊಂಡು ಓಡಿಬರುವುದನ್ನು ಯೇಸು ಕಂಡು, ಆ ಅಶುದ್ಧಾತ್ಮವನ್ನು ಗದರಿಸಿ ಅದಕ್ಕೆ, "ಮೂಕ ಮತ್ತು ಕಿವುಡಾದ ಆತ್ಮವೇ, ನೀನು ಅವನೊಳಗಿಂದ ಹೊರಗೆ ಬಾ, ಇನ್ನೆಂದಿಗೂ ಅವನೊಳಗೆ ಸೇರಬಾರದೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ," ಎಂದರು.
ಆಗ ಅಶುದ್ಧಾತ್ಮವು ಕೂಗಿ ಬಾಲಕನನ್ನು ಕ್ರೂರವಾಗಿ ಒದ್ದಾಡಿಸಿ ಅವನೊಳಗಿಂದ ಹೊರಗೆ ಬಂದಿತು. ಅವನು ಸತ್ತವನ ಹಾಗೆ ಬಿದ್ದಿದ್ದರಿಂದ ಅನೇಕರು, "ಅವನು ಸತ್ತಿದ್ದಾನೆ," ಎಂದರು. ಆದರೆ ಯೇಸು ಕೈಹಿಡಿದು ಅವನನ್ನು ಮೇಲಕ್ಕೆತ್ತಲು ಅವನು ಎದ್ದು ನಿಂತನು.
ಯೇಸು ಅನೇಕರನ್ನು ಸ್ವಸ್ಥಪಡಿಸಿದ್ದು
ಯೇಸು ಸಭಾಮಂದಿರದಿಂದ ಎದ್ದು ಸೀಮೋನನ ಮನೆಗೆ ಹೋದರು. ಅಲ್ಲಿ ಸೀಮೋನನ ಅತ್ತೆಗೆ ಕಠಿಣ ಜ್ವರವಿದ್ದುದರಿಂದ ಅಲ್ಲಿದ್ದವರು ಆಕೆಗೆ ಸಹಾಯ ಮಾಡಬೇಕೆಂದು ಯೇಸುವನ್ನು ಬೇಡಿಕೊಂಡರು. ಆಗ ಯೇಸು ಆಕೆಯ ಬಳಿಯಲ್ಲಿ ನಿಂತು ಜ್ವರವನ್ನು ಗದರಿಸಲು ಅದು ಆಕೆಯನ್ನು ಬಿಟ್ಟುಹೋಯಿತು. ಕೂಡಲೇ ಆಕೆಯು ಎದ್ದು ಅವರನ್ನು ಉಪಚರಿಸಿದಳು.
ಯೇಸು ದಡಕ್ಕೆ ಸೇರಿದಾಗ, ಬಹುಕಾಲದಿಂದ ದೆವ್ವಗಳು ಹಿಡಿದು ಬಟ್ಟೆ ಧರಿಸಿಕೊಳ್ಳದೆ ಯಾವ ಮನೆಯಲ್ಲಿ ಇರದೆ ಸಮಾಧಿಯ ಗುಹೆಗಳಲ್ಲಿ ವಾಸಿಸುತ್ತಿದ್ದ ಒಬ್ಬ ಮನುಷ್ಯನನ್ನು ಯೇಸು ಸಂಧಿಸಿದರು. ಅವನು ಯೇಸುವನ್ನು ಕಂಡಾಗ, ಅವರ ಮುಂದೆ ಅಡ್ಡಬಿದ್ದು, "ಯೇಸುವೇ, ಮಹೋನ್ನತ ದೇವಪುತ್ರರೇ, ನನ್ನ ಗೊಡವೆ ನಿಮಗೆ ಏಕೆ? ನನ್ನನ್ನು ಪೀಡಿಸಬೇಡಿ, ನಿಮ್ಮನ್ನು ಬೇಡಿಕೊಳ್ಳುತ್ತೇನೆ!" ಎಂದು ಗಟ್ಟಿಯಾದ ಸ್ವರದಿಂದ ಕೂಗಿ ಹೇಳಿದನು. ಏಕೆಂದರೆ, ದೆವ್ವಕ್ಕೆ ಅವನಿಂದ ಹೊರಗೆ ಬರಬೇಕೆಂದು ಯೇಸು ಅಪ್ಪಣೆ ಕೊಟ್ಟಿದ್ದರು. ಅದು ಬಹಳ ಸಾರಿ ಅವನನ್ನು ಹಿಡಿಯುತ್ತಿದ್ದುದರಿಂದ, ಅವನು ಸರಪಣಿಗಳಿಂದಲೂ ಬೇಡಿಗಳಿಂದಲೂ ಬಂಧಿತನಾದರೂ ಅವನು ಆ ಬಂಧನಗಳನ್ನು ಮುರಿದು ಬಿಡುತ್ತಿದ್ದನು ಮತ್ತು ದೆವ್ವವು ಅವನನ್ನು ಏಕಾಂತ ಸ್ಥಳಕ್ಕೆ ಓಡಿಸಿಕೊಂಡು ಹೋಗುತ್ತಿತ್ತು.
ಯೇಸು ಅವನಿಗೆ, "ನಿನ್ನ ಹೆಸರೇನು?" ಎಂದು ಕೇಳಿದರು.
ಅದಕ್ಕವನು, "ಸೇನೆ," ಎಂದನು. ಏಕೆಂದರೆ ಬಹಳ ದೆವ್ವಗಳು ಅವನಲ್ಲಿ ಸೇರಿಕೊಂಡಿದ್ದವು. ಅವು ತಮ್ಮನ್ನು ಪಾತಾಳಕ್ಕೆ ಹೋಗುವಂತೆ ಅಪ್ಪಣೆ ಕೊಡಬಾರದೆಂದು ಯೇಸುವನ್ನು ಬೇಡಿಕೊಂಡವು.
ಆಗ ಅಲ್ಲಿ ಬೆಟ್ಟದ ಮೇಲೆ ಹಂದಿಗಳ ಹಿಂಡು ಮೇಯುತ್ತಿದ್ದರಿಂದ ಅವುಗಳೊಳಗೆ ತಾವು ಸೇರಿಕೊಳ್ಳಲು ಅಪ್ಪಣೆ ಕೊಡಬೇಕೆಂದು ಯೇಸುವನ್ನು ಬೇಡಿಕೊಂಡವು, ಅವರು ಅವುಗಳಿಗೆ ಅನುಮತಿ ಕೊಟ್ಟರು. ಆಗ ಆ ದೆವ್ವಗಳು ಆ ಮನುಷ್ಯನೊಳಗಿಂದ ಹೊರಗೆ ಬಂದು, ಹಂದಿಗಳೊಳಗೆ ಸೇರಿದವು. ಆ ಗುಂಪು ಚುರುಕಾಗಿ ಓಡಿ, ಕಡಿದಾದ ಬದಿಯಿಂದ ಸರೋವರಕ್ಕೆ ಬಿದ್ದು ಮುಳುಗಿಹೋಯಿತು.
ಹಂದಿಗಳನ್ನು ಮೇಯಿಸುತ್ತಿದ್ದವರು ನಡೆದದ್ದನ್ನು ಕಂಡು, ಓಡಿಹೋಗಿ ಪಟ್ಟಣದಲ್ಲಿಯೂ ಸೀಮೆಯಲ್ಲಿಯೂ ಅದನ್ನು ತಿಳಿಯಪಡಿಸಿದರು, ಆಗ ಜನರು ನಡೆದ ಸಂಗತಿ ಏನೆಂದು ಕಾಣುವುದಕ್ಕಾಗಿ ಹೊರಟು ಯೇಸುವಿನ ಬಳಿಗೆ ಬಂದರು. ದೆವ್ವಗಳು ಬಿಟ್ಟುಹೋಗಿದ್ದ ಆ ಮನುಷ್ಯನು ಬಟ್ಟೆಯನ್ನು ಧರಿಸಿಕೊಂಡು ಸ್ವಸ್ಥಬುದ್ಧಿಯುಳ್ಳವನಾಗಿ, ಯೇಸುವಿನ ಪಾದಗಳ, ಬಳಿಯಲ್ಲಿ ಕುಳಿತಿರುವುದನ್ನು ಕಂಡು ಭಯಪಟ್ಟರು.
"ಆದರೆ ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಇಲ್ಲಿ ನಿಂತವರಲ್ಲಿ ಕೆಲವರು ದೇವರ ರಾಜ್ಯವನ್ನು ಕಾಣುವತನಕ ಮರಣವನ್ನು ಹೊಂದುವುದೇ ಇಲ್ಲ," ಎಂದರು.
ಯೇಸು ರೂಪಾಂತರವಾದದ್ದು
ಈ ಮಾತುಗಳನ್ನು ಹೇಳಿ ಸುಮಾರು ಎಂಟು ದಿನಗಳಾದ ಮೇಲೆ ಯೇಸು, ಪೇತ್ರ, ಯೋಹಾನ ಮತ್ತು ಯಾಕೋಬರನ್ನು ಕರೆದುಕೊಂಡು ಪ್ರಾರ್ಥನೆ ಮಾಡುವುದಕ್ಕಾಗಿ ಬೆಟ್ಟವನ್ನೇರಿದರು. ಯೇಸು ಪ್ರಾರ್ಥನೆ ಮಾಡುತ್ತಿದ್ದಾಗ, ಅವರ ಮುಖಭಾವವು ಬದಲಾಯಿತು ಮತ್ತು ಅವರ ಉಡುಪು ಬೆಳ್ಳಗಾಗಿ ಮಿಂಚುತ್ತಾ ಬಂತು. ಮೋಶೆ ಮತ್ತು ಎಲೀಯನು ಎಂಬ ಇಬ್ಬರು ಪುರುಷರು ಯೇಸುವಿನೊಂದಿಗೆ ಮಾತನಾಡುತ್ತಿದ್ದರು. ಇವರು ಮಹಿಮೆಯಲ್ಲಿ ಕಾಣಿಸಿಕೊಂಡು, ಯೇಸು ಯೆರೂಸಲೇಮಿನಲ್ಲಿ ಪೂರೈಸುವುದಕ್ಕಿದ್ದ ಅವರ ಮರಣದ ವಿಷಯವಾಗಿ ಮಾತನಾಡುತ್ತಿದ್ದರು.
ಆದರೆ ಪೇತ್ರನು ಅವನ ಸಂಗಡ ಇದ್ದವರೂ ನಿದ್ರೆಯಿಂದ ಭಾರವುಳ್ಳವರಾಗಿದ್ದರು, ಅವರು ಎಚ್ಚೆತ್ತಾಗ ಯೇಸುವಿನ ಮಹಿಮೆಯನ್ನೂ ಅವರ ಕೂಡ ನಿಂತಿದ್ದ ಇಬ್ಬರು ಪುರುಷರನ್ನೂ ಕಂಡರು. ಅವರು ಹೋಗುತ್ತಿದ್ದಾಗ ಪೇತ್ರನು ಯೇಸುವಿಗೆ, "ಗುರುವೇ, ನಾವು ಇಲ್ಲೇ ಇರುವುದು ನಮಗೆ ಒಳ್ಳೆಯದು, ನಾವು ನಿಮಗೊಂದು ಮೋಶೆಗೊಂದು ಮತ್ತು ಎಲೀಯನಿಗೊಂದು, ಹೀಗೆ ಮೂರು ಗುಡಾರಗಳನ್ನು ಕಟ್ಟುವೆವು," ಎಂದನು. ತಾನು ಹೇಳಿದ್ದನ್ನು ಅವನು ಅರಿಯದೆ ಇದ್ದನು.
ಆಗ ಆ ಗುಂಪಿನೊಳಗಿಂದ ಒಬ್ಬ ಮನುಷ್ಯನು ಕೂಗಿ, "ಬೋಧಕರೇ, ನನ್ನ ಮಗನ ಮೇಲೆ ದೃಷ್ಟಿಯಿಡಿರಿ ಎಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ, ಏಕೆಂದರೆ ಅವನು ನನಗೆ ಒಬ್ಬನೇ ಮಗನು. ದೆವ್ವವು ಅವನನ್ನು ಹಿಡಿಯುತ್ತಲೇ ಅವನು ಫಕ್ಕನೆ ಕೂಗಿಕೊಳ್ಳುತ್ತಾನೆ; ಇದಲ್ಲದೆ ಬಾಯಲ್ಲಿ ನೊರೆ ಸುರಿಯುವಷ್ಟು ಅವನನ್ನು ಒದ್ದಾಡಿಸುವುದಲ್ಲದೆ ಜಜ್ಜುತ್ತದೆ. ಅದು ಅವನನ್ನು ಬಿಟ್ಟು ಹೋಗುವುದು ಕಷ್ಟ. ಅದನ್ನು ಓಡಿಸುವಂತೆ, ನಾನು ನಿಮ್ಮ ಶಿಷ್ಯರನ್ನು ಬೇಡಿಕೊಂಡೆನು, ಆದರೆ ಅದು ಅವರಿಂದ ಆಗಲಿಲ್ಲ," ಎಂದನು.
ಯೇಸು, "ವಿಶ್ವಾಸವಿಲ್ಲದ ಮೂರ್ಖ ಸಂತತಿಯೇ, ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಿಮ್ಮನ್ನು ಸಹಿಸಲಿ?" ಎಂದು ಹೇಳಿ, "ನಿನ್ನ ಮಗನನ್ನು ಇಲ್ಲಿಗೆ ಕರೆದುಕೊಂಡು ಬಾ," ಎಂದರು.
ಅವನು ಇನ್ನೂ ಬರುತ್ತಿದ್ದಾಗಲೇ, ದೆವ್ವವು ಅವನನ್ನು ಒದ್ದಾಡಿಸಿ ನೆಲಕ್ಕೆ ಅಪ್ಪಳಿಸಿತು. ಯೇಸು ಆ ದೆವ್ವವನ್ನು ಗದರಿಸಿ ಹುಡುಗನನ್ನು ಸ್ವಸ್ಥಮಾಡಿ, ಅವನನ್ನು ಅವನ ತಂದೆಗೆ ಪುನಃ ಒಪ್ಪಿಸಿದರು. ಆಗ ಜನರೆಲ್ಲರೂ ದೇವರ ಮಹತ್ತಾದ ಶಕ್ತಿಗಾಗಿ ಬೆರಗಾದರು.
ಯೇಸು ತಮ್ಮ ಮರಣವನ್ನು ಎರಡನೆಯ ಬಾರಿ ಮುಂತಿಳಿಸಿದ್ದು
ಯೇಸು ಮಾಡಿದ ಎಲ್ಲಾ ಕಾರ್ಯಗಳಿಗಾಗಿ ಅವರಲ್ಲಿ ಪ್ರತಿಯೊಬ್ಬನೂ ಆಶ್ಚರ್ಯಪಡುತ್ತಿರುವಲ್ಲಿ, ಯೇಸು ತಮ್ಮ ಶಿಷ್ಯರಿಗೆ,
ಯೇಸು ಮತ್ತು ಬೆಲ್ಜೆಬೂಲನೂ
ಯೇಸು ಒಂದು ಮೂಕದೆವ್ವವನ್ನು ಹೊರಗೆ ಓಡಿಸುತ್ತಿದ್ದರು. ಆ ದೆವ್ವವು ಹೊರಟುಹೋದ ಮೇಲೆ, ಆ ಮೂಕನು ಮಾತನಾಡಿದನು. ಅದಕ್ಕೆ ಜನರು ಆಶ್ಚರ್ಯಪಟ್ಟರು.
ಅವರಲ್ಲಿ ಒಬ್ಬನು ಮಹಾಯಾಜಕನ ಆಳನ್ನು ಹೊಡೆದು, ಅವನ ಬಲಗಿವಿಯನ್ನು ಕತ್ತರಿಸಿದನು.
ಆದರೆ ಯೇಸು, "ಸಾಕು ಇಂಥದ್ದು ಬೇಡ!" ಎಂದು ಹೇಳಿ, ಅವನ ಕಿವಿಯನ್ನು ಮುಟ್ಟಿ ಸ್ವಸ್ಥಮಾಡಿದರು.
ಯೋಹಾನನ ಶಿಷ್ಯರು ಹೊರಟುಹೋದ ಮೇಲೆ, ಯೇಸು ಯೋಹಾನನ ವಿಷಯವಾಗಿ ಮಾತನಾಡಲಾರಂಭಿಸಿ ಜನರಿಗೆ, "ನೀವು ಯಾವುದನ್ನು ಕಾಣುವುದಕ್ಕಾಗಿ ಅರಣ್ಯಕ್ಕೆ ಹೋದಿರಿ? ಗಾಳಿಗೆ ಓಲಾಡುವ ದಂಟನ್ನೋ? ಇಲ್ಲವಾದರೆ, ನೀವು ಏನನ್ನು ಕಾಣುವುದಕ್ಕಾಗಿ ಹೋದಿರಿ? ನಯವಾದ ಉಡುಪನ್ನು ಧರಿಸಿದ್ದ ಮನುಷ್ಯನನ್ನೋ? ಶೋಭಾಯಮಾನವಾದ ಉಡುಪನ್ನು ಧರಿಸಿಕೊಂಡು ಸುಖವಾಗಿ ಜೀವಿಸುವವರು ಅರಮನೆಗಳಲ್ಲಿ ಇರುತ್ತಾರೆ. ಹಾಗಾದರೆ ಏನು ಕಾಣುವುದಕ್ಕಾಗಿ ಹೋದಿರಿ? ಒಬ್ಬ ಪ್ರವಾದಿಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನನ್ನು ನೋಡಿದಿರಿ, ಎಂದು ನಾನು ನಿಮಗೆ ಹೇಳುತ್ತೇನೆ. ಯಾರ ವಿಷಯವಾಗಿ ಪವಿತ್ರ ವೇದದಲ್ಲಿ ಬರೆದಿತ್ತೋ ಅವನೇ ಇವನು:
" ‘ಇಗೋ, ನಿನ್ನ ದಾರಿಯನ್ನು ನಿನ್ನ ಮುಂದೆ ಸಿದ್ಧಮಾಡುವಂತೆ
ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ,’
ನಾನು ನಿಮಗೆ ಹೇಳುವುದೇನೆಂದರೆ, ಸ್ತ್ರೀಯರಲ್ಲಿ ಹುಟ್ಟಿದವರಲ್ಲಿ ಸ್ನಾನಿಕ ಯೋಹಾನನಿಗಿಂತ ದೊಡ್ಡವನು ಇಲ್ಲ; ಆದರೆ ದೇವರ ರಾಜ್ಯದಲ್ಲಿ ಅತ್ಯಂತ ಚಿಕ್ಕವನು ಅವನಿಗಿಂತಲೂ ದೊಡ್ಡವನಾಗಿದ್ದಾನೆ," ಎಂದರು.
ಯೋಹಾನನಿಂದ ಉಪದೇಶ ಕೇಳಿದ ಎಲ್ಲಾ ಜನರೂ ಸುಂಕದವರೂ ಸಹ, ಯೇಸುವಿನ ಮಾತುಗಳನ್ನು ಕೇಳಿದಾಗ, ದೇವರ ಮಾರ್ಗವು ಸರಿಯಾಗಿದೆಯೆಂದು ಒಪ್ಪಿಕೊಂಡರು, ಏಕೆಂದರೆ ಅವರು ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡಿದ್ದರು. ಆದರೆ ಫರಿಸಾಯರೂ ಮೋಶೆಯ ನಿಯಮ ಪಂಡಿತರೂ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳದೆ ಹೋದದ್ದರಿಂದ ತಮ್ಮ ವಿಷಯದಲ್ಲಿರುವ ದೇವರ ಸಂಕಲ್ಪವನ್ನು ತಿರಸ್ಕಾರ ಮಾಡಿದರು.