Milagres
Os milagres manifestam o poder soberano de Deus. Desde a criação até os sinais de Jesus e dos apóstolos, Deus intervém sobrenaturalmente na história para revelar sua glória e amor.
O Deus dos milagres
Para Deus nada é impossível. Ele abriu o mar, fez cair fogo do céu e ressuscitou mortos. Seu poder não tem limites.
ಯೇಸು ಅವರನ್ನು ದೃಷ್ಟಿಸಿ ನೋಡಿ "ಇದು ಮನುಷ್ಯರಿಂದ ಅಸಾಧ್ಯ. ಆದರೆ ದೇವರಿಗೆ ಎಲ್ಲವು ಸಾಧ್ಯವೇ" ಅಂದನು.
ಯೇಸು ಅವರನ್ನು ದೃಷ್ಟಿಸಿ ನೋಡಿ "ಇದು ಮನುಷ್ಯರಿಂದ ಅಸಾಧ್ಯ. ಆದರೆ ದೇವರಿಗೆ ಎಲ್ಲವು ಸಾಧ್ಯವೇ" ಅಂದನು.
ದೇವರಿಗೆ ಅಸಾಧ್ಯವಾದದ್ದು ಯಾವುದೂ ಇಲ್ಲ" ಅಂದನು.
"ಇಗೋ, ನಾನು ಯೆಹೋವನು, ನರಪ್ರಾಣಿಗೆಲ್ಲಾ ದೇವರು; ನನಗೆ ಅಸಾಧ್ಯವಾದದ್ದುಂಟೋ?
ಮೋಶೆ ಸಮುದ್ರದ ಮೇಲೆ ಕೈಚಾಚಿದಾಗ, ಯೆಹೋವನು ಆ ರಾತ್ರಿಯೆಲ್ಲಾ ಮೂಡಣ ದಿಕ್ಕಿನಿಂದ ಬಲವಾದ ಬಿರುಗಾಳಿಯನ್ನು ಬೀಸುವಂತೆ ಮಾಡಿ ಸಮುದ್ರದ ನೀರನ್ನು ಒಂದು ಕಡೆಗೆ ನೂಕಿ ಅದರ ತಳದಲ್ಲಿ ಒಣನೆಲವು ಕಾಣಿಸುವಂತೆ ಮಾಡಿದನು. ನೀರು ಇಬ್ಭಾಗವಾಯಿತು. ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿ ಒಣನೆಲದಲ್ಲಿ ನಡೆದುಹೋದರು. ನೀರು ಅವರ ಎಡಗಡೆ ಮತ್ತು ಬಲಗಡೆಗಳಲ್ಲಿ ಗೋಡೆಯಂತೆ ನಿಂತುಕೊಂಡಿತು.
ಯೆಹೋವನ ಕೃತ್ಯಗಳನ್ನು ವರ್ಣಿಸುವೆನು;
ಪೂರ್ವದಿಂದ ನೀನು ನಡೆಸಿದ ಅದ್ಭುತಗಳನ್ನು ನೆನಪು ಮಾಡಿಕೊಳ್ಳುವೆನು.
ನಿನ್ನ ಕಾರ್ಯಗಳನ್ನೆಲ್ಲಾ ಧ್ಯಾನಿಸುವೆನು;
ನಿನ್ನ ಪ್ರವರ್ತನೆಗಳನ್ನು ಸ್ಮರಿಸುವೆನು" ಅಂದುಕೊಂಡೆನು.
ಅದ್ಭುತಗಳನ್ನು ನಡೆಸುವ ದೇವರು ನೀನೇ;
ಜನಾಂಗಗಳಲ್ಲಿ ಪರಾಕ್ರಮವನ್ನು ತೋರ್ಪಡಿಸಿದಿ.
Milagres pela fé
Se tiverdes fé como um grão de mostarda, movereis montanhas. A fé é a chave que acessa o poder miraculoso de Deus.
ಆತನು ಅವರಿಗೆ, "ನಿಮ್ಮ ಅಪನಂಬಿಕೆಯಿಂದಲೇ ಆಗಲಿಲ್ಲ. ಸಾಸಿವೇ ಕಾಳಿನಷ್ಟು ನಂಬಿಕೆ ನಿಮಗೆ ಇರುವುದಾದರೆ,
ಅದಕ್ಕೆ ಯೇಸು, "ನಿಮಗೆ ಸತ್ಯವಾಗಿ ಹೇಳುತ್ತೇನೆ ನೀವು ಸಂಶಯಪಡದೆ ನಂಬಿದರೆ ಈ ಅಂಜೂರದ ಮರಕ್ಕೆ ಮಾಡಿದಂಥದನ್ನು ನೀವು ಮಾಡುವಿರಿ ಮಾತ್ರವಲ್ಲದೆ ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು’ ಎಂದು ಹೇಳಿದರೆ ಅದೂ ಆಗುವುದು.
ಯೇಸು ಅವನಿಗೆ, "‘ನಿನ್ನ ಕೈಯಲ್ಲಿ ಆಗುವ ಹಾಗಿದ್ದರೆ ಅನ್ನುತ್ತೀಯೋ’? ನಂಬುವವನಿಗೆ ಎಲ್ಲವೂ ಸಾಧ್ಯ!" ಎಂದು ಹೇಳಿದನು.
ಯೇಸು ಅವರನ್ನು ದೃಷ್ಟಿಸಿ ನೋಡಿ "ಇದು ಮನುಷ್ಯರಿಗೆ ಅಸಾಧ್ಯ; ದೇವರಿಗೆ ಅಸಾಧ್ಯವಲ್ಲ. ದೇವರಿಗೆ ಎಲ್ಲವೂ ಸಾಧ್ಯವೇ" ಅಂದನು.
ಆತನು, "ಮನುಷ್ಯರಿಗೆ ಅಸಾಧ್ಯವಾದ ಕಾರ್ಯಗಳು ದೇವರಿಗೆ ಸಾಧ್ಯವಾಗಿವೆ" ಅಂದನು.
ಅವರ ಅಪನಂಬಿಕೆಯ ನಿಮಿತ್ತ ಆತನು ಅಲ್ಲಿ ಹೆಚ್ಚು ಮಹತ್ಕಾರ್ಯಗಳನ್ನು ಮಾಡಲಿಲ್ಲ.
Sinais e prodígios
Os apóstolos realizaram sinais e maravilhas em nome de Jesus. Os dons do Espírito incluem a operação de milagres e a fé sobrenatural.
"ಇಸ್ರಾಯೇಲ್ ಜನರೇ, ನನ್ನ ಮಾತುಗಳನ್ನು ಕೇಳಿರಿ;, ನಜರೇತಿನ ಯೇಸು ಇದ್ದನಲ್ಲಾ, ನಿಮಗೂ ತಿಳಿದಿರುವಂತೆ ದೇವರು ಆತನ ಕೈಯಿಂದ ಮಹತ್ತುಗಳನ್ನೂ ಅದ್ಭುತಗಳನ್ನೂ ಸೂಚಕಕಾರ್ಯಗಳನ್ನೂ ನಿಮ್ಮಲ್ಲಿ ನಡಿಸಿ ಆತನನ್ನು ತನಗೆ ಮೆಚ್ಚಿಕೆಯಾದವನೆಂದು ನಿಮಗೆ ತೋರಿಸಿಕೊಟ್ಟನು.
ಹೀಗೆ ಪ್ರಾರ್ಥನೆ ಮಾಡಿದ ಕೂಡಲೇ ಅವರು ನೆರೆದಿದ್ದ ಸ್ಥಳವು ನಡುಗಿತು. ಅವರೆಲ್ಲರು ಪವಿತ್ರಾತ್ಮ ಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಹೇಳತೊಡಗಿದರು.
ದೇವರು ಪೌಲನ ಕೈಯಿಂದ ವಿಶೇಷವಾದ ಮಹತ್ಕಾರ್ಯಗಳನ್ನು ನಡಿಸುತ್ತಾ ಇದ್ದುದರಿಂದ, ಜನರು ಅವನ ಮೈಮೇಲಿನಿಂದ ಕೈವಸ್ತ್ರಗಳನ್ನೂ, ರುಮಾಲುಗಳನ್ನೂ ತಂದು ರೋಗಿಗಳ ಮೇಲೆ ಹಾಕಲು ಅವರ ರೋಗಗಳು ವಾಸಿಯಾದವು, ದುರಾತ್ಮಗಳೂ ಬಿಟ್ಟುಹೋದವು.
ನಾನು ಹಿಂಸೆಯನ್ನು ಸ್ಥಿರಚಿತ್ತದಿಂದ ತಾಳಿಕೊಳ್ಳುವುದರಲ್ಲಿಯೂ, ಸೂಚಕಕಾರ್ಯಗಳನ್ನೂ ಮತ್ತು ಅದ್ಭುತಗಳನ್ನೂ, ಹಾಗೂ ಮಹತ್ಕಾರ್ಯಗಳನ್ನೂ ನಡಿಸಿದ್ದರಲ್ಲಿಯೂ ಒಬ್ಬ ಅಪೊಸ್ತಲನಿಗೆ ಇರತಕ್ಕ ಲಕ್ಷಣಗಳು ನಿಮ್ಮ ಮಧ್ಯದಲ್ಲಿ ಪ್ರಕಟವಾದವಲ್ಲಾ.
ದೇವರು ತನ್ನ ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ಇಟ್ಟಿದ್ದಾನೆ. ಆ ಮೇಲೆ ಮಹತ್ಕಾರ್ಯ ಮಾಡುವ ಶಕ್ತಿಯನ್ನು, ನಾನಾ ರೋಗಗಳನ್ನು ವಾಸಿಮಾಡುವ ವರವನ್ನೂ, ಪರಸಹಾಯ ಮಾಡುವ ಗುಣವನ್ನೂ, ಕಾರ್ಯಗಳನ್ನು ನಿರ್ವಹಿಸುವ ಜ್ಞಾನವನ್ನು ಮತ್ತು ವಿವಿಧ ಭಾಷೆಗಳನ್ನಾಡುವ ವರವನ್ನೂ ಅವರವರಿಗೆ ಬೇರೆ ಬೇರೆಯಾಗಿ ಕೊಟ್ಟಿದ್ದಾನೆ.
ಒಬ್ಬನಿಗೆ ದೇವರಾತ್ಮನ ಮೂಲಕ ಜ್ಞಾನವಾಕ್ಯವು ಮತ್ತೊಬ್ಬನಿಗೆ ಆ ಆತ್ಮನಿಂದಲೇ ತಿಳಿವಳಿಕೆಯ ವಾಕ್ಯವು ಒಬ್ಬನಿಗೆ ಆ ಆತ್ಮನಿಂದಲೇ ನಂಬಿಕೆಯು ಮತ್ತೊಬ್ಬನಿಗೆ ಆ ಒಬ್ಬ ಆತ್ಮನಿಂದಲೇ ನಾನಾ ರೋಗಗಳನ್ನು ವಾಸಿಮಾಡುವ ವರವು, ಮತ್ತೊಬ್ಬನಿಗೆ ಮಹತ್ಕಾರ್ಯಗಳನ್ನು ಮಾಡುವ ವರವು, ಇನ್ನೊಬ್ಬನಿಗೆ ಪ್ರವಾದನೆಯ ವರವು, ಒಬ್ಬನಿಗೆ ಆತ್ಮವನ್ನು ವಿವೇಚಿಸುವ ವರವು, ಮತ್ತೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ವರವು, ಒಬ್ಬನಿಗೆ ಭಾಷೆಗಳ ಅರ್ಥವನ್ನು ಬಿಡಿಸಿ ಹೇಳುವ ವರವು ಕೊಡಲ್ಪಡುತ್ತದೆ.
ಅದಕ್ಕೆ ಯೇಸು, "ಅವನಿಗೆ ಅಡ್ಡಿಮಾಡಬೇಡಿರಿ; ನನ್ನ ಹೆಸರಿನಲ್ಲಿ ಮಹತ್ಕಾರ್ಯವನ್ನು ಮಾಡಿ ಏಕಾಏಕಿ ನನ್ನನ್ನು ದೂಷಿಸುವವನು ಒಬ್ಬನೂ ಇಲ್ಲ. ನಮಗೆ ವಿರುದ್ಧವಾಗಿಲ್ಲದವನು ನಮ್ಮ ಪಕ್ಷದವನೇ.
Milagres de cura e provisão
A oração da fé salvará o enfermo. Deus provê, cura e intervém quando clamamos a Ele com fé genuína.
ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ಗುಣಪಡಿಸುವುದು ಮತ್ತು ಕರ್ತನು ಅವನನ್ನು ಎಬ್ಬಿಸುವನು; ಅವನು ಪಾಪ ಮಾಡಿದವನಾಗಿದ್ದರೆ, ದೇವರು ಆ ಪಾಪಗಳನ್ನು ಕ್ಷಮಿಸುವನು. ಹೀಗಿರಲು ನೀವು ಸ್ವಸ್ಥವಾಗಬೇಕಾದರೆ ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ,, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಸಾಮರ್ಥ್ಯವುಳ್ಳದಾಗಿರುತ್ತದೆ.
ಎಲೀಯನು ನಮಗೆ ಸಮಾನವಾದ ಸ್ವಭಾವವುಳ್ಳವನಾಗಿದ್ದನು, ಅವನು ಮಳೆ ಬರಬಾರದೆಂದು ಭಕ್ತಿಯಿಂದ ಪ್ರಾರ್ಥಿಸಲು ಮೂರು ವರ್ಷ ಆರು ತಿಂಗಳವರೆಗೂ ಭೂಮಿಯ ಮೇಲೆ ಮಳೆ ಬೀಳಲಿಲ್ಲ. ತಿರುಗಿ ಅವನು ಪ್ರಾರ್ಥನೆ ಮಾಡಲು ಆಕಾಶವು ಮಳೆಗರೆಯಿತು, ಭೂಮಿಯು ಫಲಕೊಟ್ಟಿತು.
ಆ ಮೇಲೆ ಯೇಸುವು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ ಅವುಗಳನ್ನು ಆಶೀರ್ವದಿಸಿ, ಮುರಿದು ಶಿಷ್ಯರ ಕೈಗೆ ಕೊಟ್ಟು, ಇದನ್ನು ಜನರ ಗುಂಪಿಗೆ ಹಂಚಿರಿ ಅಂದನು. ಅವರೆಲ್ಲರು ಊಟಮಾಡಿ ತೃಪ್ತರಾದರು; ನಂತರ ಉಳಿದ ತುಂಡುಗಳನ್ನು ಕೂಡಿಸಲಾಗಿ ಅವು ಹನ್ನೆರಡು ಪುಟ್ಟಿ ಆದವು.
ಯೇಸು ಸಬ್ಬತ್ ದಿನದಲ್ಲಿ ಗೂನಿಯಾದ ಸ್ತ್ರೀಯನ್ನು ಸ್ವಸ್ಥಮಾಡಿದ್ದು
ಒಂದು ಸಬ್ಬತ್ ದಿನದಲ್ಲಿ ಯೇಸು ಒಂದು ಸಭಾಮಂದಿರದೊಳಗೆ ಉಪದೇಶಮಾಡುತ್ತಾ ಇದ್ದನು. ಅಲ್ಲಿ ಹದಿನೆಂಟು ವರ್ಷಗಳಿಂದ ದುರಾತ್ಮನಿಂದ ಬಾಧಿತಳಾಗಿ ಬೆನ್ನು ಬಗ್ಗಿ ಹೋಗಿ ಗೂನಿಯಾಗಿದ್ದು ಸ್ವಲ್ಪವಾದರೂ ಮೈಯನ್ನು ಮೇಲಕ್ಕೆ ಎತ್ತಲಾರದೆ ಇದ್ದ ಒಬ್ಬ ಹೆಂಗಸು ಇದ್ದಳು. ಯೇಸು ಆಕೆಯನ್ನು ನೋಡಿ ಹತ್ತಿರಕ್ಕೆ ಕರೆದು ಆಕೆಗೆ, "ನಿನ್ನ ರೋಗವು ಬಿಡುಗಡೆಯಾಯಿತು" ಎಂದು ಹೇಳಿ ಆಕೆಯ ಮೇಲೆ ತನ್ನ ಕೈಗಳನ್ನಿಟ್ಟನು. ಇಟ್ಟಕೂಡಲೆ ಆಕೆ ನೆಟ್ಟಗಾದಳು, ದೇವರನ್ನು ಕೊಂಡಾಡಿದಳು. ಆದರೆ ಆ ಸಭಾಮಂದಿರದ ಅಧಿಕಾರಿಯು ನಡೆದ ಸಂಗತಿಯನ್ನು ನೋಡಿ, ಸಬ್ಬತ್ ದಿನದಲ್ಲಿ ಯೇಸು ಸ್ವಸ್ಥ ಮಾಡಿದನಲ್ಲಾ ಎಂದು ಸಿಟ್ಟುಗೊಂಡು ಜನರಿಗೆ, "ಕೆಲಸ ಮಾಡುವುದಕ್ಕೆ ಆರು ದಿನಗಳು ಅವೆಯಷ್ಟೆ. ಆ ದಿನಗಳಲ್ಲಿ ಬಂದು ವಾಸಿಮಾಡಿಸಿಕೊಳ್ಳಿರಿ, ಸಬ್ಬತ್ ದಿನದಲ್ಲಿ ಮಾತ್ರ ಬೇಡ" ಎಂದು ಹೇಳಿದನು. ಆ ಮಾತನ್ನು ಕೇಳಿ ಕರ್ತನು ಅವನಿಗೆ, "ಕಪಟಿಗಳೇ, ನಿಮ್ಮಲ್ಲಿ ಪ್ರತಿಯೊಬ್ಬನು ಸಬ್ಬತ್ ದಿನದಲ್ಲಿ ತನ್ನ ಎತ್ತನ್ನಾಗಲಿ ಕತ್ತೆಯನ್ನಾಗಲಿ ಗೋದಲಿಯಿಂದ ಬಿಚ್ಚಿ ನೀರು ಕುಡಿಸುವುದಕ್ಕಾಗಿ ಹಿಡಿದುಕೊಂಡು ಹೋಗುತ್ತಾನಲ್ಲವೇ. ಹಾಗಾದರೆ ಹದಿನೆಂಟು ವರ್ಷಗಳ ತನಕ ಸೈತಾನನು ಕಟ್ಟಿ ಹಾಕಿದ್ದವಳೂ ಅಬ್ರಹಾಮನ ವಂಶದವಳೂ ಆಗಿರುವ ಈಕೆಯನ್ನು ಸಬ್ಬತ್ ದಿನದಲ್ಲಿ ಈ ಬಂಧನದಿಂದ ಬಿಡಿಸಬಾರದೋ?" ಎಂದು ಕೇಳಿದನು. ಈ ಮಾತುಗಳನ್ನು ಆತನು ಹೇಳುತ್ತಿರಲಾಗಿ ಆತನ ವಿರೋಧಿಗಳೆಲ್ಲರೂ ಅವಮಾನಿತರಾದರು. ಗುಂಪು ಕೂಡಿದ್ದ ಜನರೆಲ್ಲರೂ ಆತನಿಂದಾಗುತ್ತಿದ್ದ ಎಲ್ಲಾ ಮಹತ್ತಾದ ಕಾರ್ಯಗಳಿಗೆ ಸಂತೋಷಪಟ್ಟರು.
ಯೇಸು ಈ ಮೊದಲನೆಯ ಸೂಚಕ ಕಾರ್ಯವನ್ನು ಗಲಿಲಾಯದ ಕಾನಾ ಊರಿನಲ್ಲಿ ಮಾಡಿ, ತನ್ನ ಮಹಿಮೆಯನ್ನು ತೋರ್ಪಡಿಸಿದನು. ಇದರಿಂದ ಆತನ ಶಿಷ್ಯರು ಆತನಲ್ಲಿ ನಂಬಿಕೆಯಿಟ್ಟರು.
ಆತನು ಮಾಡಿದ ಈ ಸೂಚಕಕಾರ್ಯವನ್ನು ಆ ಜನರು ನೋಡಿ, "ನಿಜವಾಗಿಯೂ ಲೋಕಕ್ಕೆ ಬರಬೇಕಾಗಿದ್ದ ಪ್ರವಾದಿಯು ಈತನೇ" ಎಂದು ಹೇಳಿಕೊಂಡರು.
ಯೇಸು ಆತನಿಗೆ, "ನೀನು ನನ್ನನ್ನು ನೋಡಿದ್ದರಿಂದ ನಂಬಿದ್ದೀ, ನೋಡದೆ ನಂಬಿದವರು ಧನ್ಯರು" ಎಂದು ಹೇಳಿದನು. ಯೇಸು ಇನ್ನು ಬೇರೆ ಎಷ್ಟೋ ಸೂಚಕಕಾರ್ಯಗಳನ್ನು ತನ್ನ ಶಿಷ್ಯರ ಮುಂದೆ ಮಾಡಿದನು. ಅವುಗಳನ್ನೆಲ್ಲಾ ಈ ಗ್ರಂಥದಲ್ಲಿ ಬರೆದಿರುವುದಿಲ್ಲಾ. ಆದರೆ ಯೇಸುವೇ ದೇವಕುಮಾರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ, ನಂಬಿ ಆತನ ಹೆಸರಿನಲ್ಲಿ ನಿತ್ಯ ಜೀವವನ್ನು ಪಡೆದುಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದಿದೆ.
ಆಗ ಸಮಾಧಿಯ ಬಳಿಗೆ ಮೊದಲು ಬಂದಿದ್ದ ಆ ಮತ್ತೊಬ್ಬ ಶಿಷ್ಯನು ಸಹ ಒಳಗೆ ಹೋಗಿ ಬಗ್ಗಿ ನೋಡಿ ನಂಬಿದನು. ಆತನು ಸತ್ತ ಮೇಲೆ ಜೀವದಿಂದೆದ್ದು ಬರಬೇಕೆಂಬುದಾಗಿ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ಅವರಿಗೆ ಇನ್ನೂ ತಿಳಿದಿರಲಿಲ್ಲ.
Discernimento nos sinais
A Bíblia alerta contra falsos milagres e sinais enganosos. Devemos provar os espíritos e não seguir sinais que desviam de Deus.
ಯಾವ ಪ್ರವಾದಿಯಾಗಲಿ ಅಥವಾ ಕನಸುಗಾರನೇ ಆಗಲಿ ನಿಮ್ಮ ಮಧ್ಯದಲ್ಲಿ ಬಂದು, ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ತೋರಿಸಿ, "ಈ ದೇವತೆಗಳನ್ನು ಅವಲಂಬಿಸಿ ಅವುಗಳನ್ನು ಸೇವಿಸೋಣ" ಎಂದು ಬೋಧಿಸುತ್ತಾ, ಆ ಬೋಧನೆಯನ್ನು ಸ್ಥಾಪಿಸುವುದಕ್ಕೆ ಒಂದು ಅದ್ಭುತವನ್ನಾಗಲಿ ಅಥವಾ ಮಹತ್ಕಾರ್ಯವನ್ನಾಗಲಿ ತೋರಿಸಿಕೊಡುತ್ತೇನೆಂದು ಹೇಳಿ ಅವನು ಹೇಳಿದಂತೆಯೇ ನಡೆದರೂ ನೀವು ಅವನ ಮಾತಿಗೆ ಕಿವಿಗೊಡಬಾರದು. ಏಕೆಂದರೆ ನಿಮ್ಮ ದೇವರಾದ ಯೆಹೋವನು, "ಇವರು ಸಂಪೂರ್ಣ ಹೃದಯದಿಂದಲೂ ಮತ್ತು ಸಂಪೂರ್ಣ ಮನಸ್ಸಿನಿಂದಲೂ ತನ್ನನ್ನೇ ಪ್ರೀತಿಸುವವರು ಹೌದೋ ಅಲ್ಲವೋ" ಎಂಬುದನ್ನು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಪರೀಕ್ಷಿಸುತ್ತಾನೆ. ಆತನು ಹೇಳುವ ಮಾರ್ಗದಲ್ಲೇ ನೀವು ನಡೆದು, ಆತನಲ್ಲಿಯೇ ಭಯಭಕ್ತಿಯುಳ್ಳವರಾಗಿ, ಆತನ ಆಜ್ಞೆಗಳನ್ನೇ ಅನುಸರಿಸಿ, ಆತನಿಗೇ ವಿಧೇಯರಾಗಿ, ಆತನನ್ನೇ ಸೇವಿಸುತ್ತಾ ಹೊಂದಿಕೊಂಡಿರಬೇಕು.
ಆಗ ಘಟಸರ್ಪದ ಬಾಯಿಂದ, ಮೃಗದ ಬಾಯಿಂದ ಮತ್ತು ಸುಳ್ಳುಪ್ರವಾದಿಯ ಬಾಯಿಂದ ಕಪ್ಪೆಗಳಂತಿದ್ದ ಮೂರು ಅಶುದ್ಧಾತ್ಮಗಳು ಬರುವುದನ್ನು ಕಂಡೆನು. ಇವು ಸೂಚಕಕಾರ್ಯಗಳನ್ನು ಮಾಡುವ ಭೂತಾತ್ಮಗಳಾಗಿದ್ದು ಭೂಲೋಕದ ಎಲ್ಲಾ ರಾಜರುಗಳ ಬಳಿಗೆ ಹೋಗಿ ಸರ್ವಶಕ್ತನಾದ ದೇವರ ಮಹಾದಿನದ ಯುದ್ಧಕ್ಕಾಗಿ ಅವರನ್ನು ಕೂಡಿಸುತ್ತಿದ್ದವು.
ಫರಿಸಾಯರು ಸೂಚಕಕಾರ್ಯವನ್ನು ನೋಡಬೇಕೆಂದು ಕೇಳಿದ್ದು
ಆಗ ಶಾಸ್ತ್ರಿಗಳಲ್ಲಿಯೂ ಫರಿಸಾಯರಲ್ಲಿಯೂ ಕೆಲವರು, "ಬೋಧಕನೇ, ನಿನ್ನಿಂದ ಒಂದು ಸೂಚಕಕಾರ್ಯವನ್ನು ನೋಡಬೇಕೆಂದು" ಯೇಸುವನ್ನು ಕೇಳಿದರು. ಅದಕ್ಕೆ ಆತನು ಅವರಿಗೆ ಉತ್ತರಕೊಟ್ಟದ್ದೇನಂದರೆ, "ವ್ಯಭಿಚಾರಿಣಿಯಂತಿರುವ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತಾರೆ. ಆದರೆ ಯೋನನೆಂಬ ಪ್ರವಾದಿಯಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವುದೂ ಇದಕ್ಕೆ ಸಿಕ್ಕುವುದಿಲ್ಲ. ಅಂದರೆ ಯೋನನು ಹೇಗೆ ಮೂರು ದಿನ ರಾತ್ರಿ ಹಗಲು ದೊಡ್ಡ ಮೀನಿನ ಹೊಟ್ಟೆಯೊಳಗೆ ಇದ್ದನೋ, ಹಾಗೆಯೇ ಮನುಷ್ಯಕುಮಾರನು ಮೂರು ದಿನ ರಾತ್ರಿ ಹಗಲು ಭೂಗರ್ಭದೊಳಗೆ ಇರುವನು.
ಯೇಸು ಮಾನಸಾಂತರಪಡದ ಪಟ್ಟಣದವರನ್ನು ಗದರಿಸಿದ್ದು
ಅನಂತರ ಆತನು ತನ್ನ ಮಹತ್ಕಾರ್ಯಗಳು ಬಹಳವಾಗಿ ನಡೆದ ಊರುಗಳವರು ಮಾನಸಾಂತರಪಡಲಿಲ್ಲವೆಂದು ಅವುಗಳನ್ನು ಗದರಿಸತೊಡಗಿದನು. ಹೇಗೆಂದರೆ, "ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿನವರು ಎಂದೋ ಗೋಣಿತಟ್ಟು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡು ಮಾನಸಾಂತರಪಡುತ್ತಿದ್ದರು. ಆದರೆ ನ್ಯಾಯವಿಚಾರಣೆಯ ದಿನದಲ್ಲಿ ನಿಮ್ಮ ಗತಿಗಿಂತಲೂ ತೂರ್ ಸೀದೋನ್ ಪಟ್ಟಣಗಳ ಗತಿಯು ಹೆಚ್ಚು ಸಹನೀಯವಾಗಿರುವುದು. ಎಲೈ ಕಪೆರ್ನೌಮೇ ನೀನು ಪರಲೋಕಕ್ಕೇರುವೇ ಎಂದು ನೆನಸುತ್ತೀಯೋ? ಇಲ್ಲ, ಪಾತಾಳಕ್ಕೆ ಇಳಿಯುವೆ. ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ ಅದು ಇಂದಿನ ವರೆಗೆ ಉಳಿದಿರುತ್ತಿತ್ತು. ಆದರೆ ನ್ಯಾಯವಿಚಾರಣೆಯ ದಿನದಲ್ಲಿ ನಿಮ್ಮ ಗತಿಗಿಂತಲೂ ಸೊದೋಮ್ ಸೀಮೆಯ ಗತಿಯು ಸಹನೀಯವಾಗಿರುವುದು" ಎಂದು ನಿಮಗೆ ಹೇಳುತ್ತೇನೆ ಅಂದನು.
A criação como milagre
O próprio corpo humano é milagre de Deus. Toda a criação testifica do poder e da sabedoria do Criador.
ನನ್ನ ಅಂತರಿಂದ್ರಿಯಗಳನ್ನು ಉಂಟುಮಾಡಿದವನೂ,
ತಾಯಿಯ ಗರ್ಭದಲ್ಲಿ ನನ್ನನ್ನು ರೂಪಿಸಿದವನೂ ನೀನಲ್ಲವೋ?
ನೀನು ನನ್ನನ್ನು ಅದ್ಭುತವಾಗಿಯೂ, ವಿಚಿತ್ರವಾಗಿಯೂ ರಚಿಸಿದ್ದರಿಂದ,
ನಿನ್ನನ್ನು ಕೊಂಡಾಡುತ್ತೇನೆ.
ನಿನ್ನ ಕೃತ್ಯಗಳು ಆಶ್ಚರ್ಯವಾಗಿವೆಯೆಂದು,
ನನ್ನ ಹೃದಯವು ಚೆನ್ನಾಗಿ ಗ್ರಹಿಸಿಕೊಂಡಿದೆ.
ನ್ಯಾಯಸ್ಥಾಪಕನಾದ ಯೆಹೋವನನ್ನು ಕೊಂಡಾಡುವ ಇಬ್ರಿಯ ಅಕ್ಷರಕ್ರಮಾನುಸಾರವಾದ ಕೀರ್ತನೆ
ಯೆಹೋವನೇ, ಮನಃಪೂರ್ವಕವಾಗಿ ನಿನ್ನನ್ನು ಕೊಂಡಾಡುವೆನು;
ನೀನು ಮಾಡಿದ ಅದ್ಭುತಕಾರ್ಯಗಳನ್ನೆಲ್ಲಾ ವರ್ಣಿಸುವೆನು.
ಆದಕಾರಣ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು.
ಕರ್ತನು ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು; ಆ ಮಾತು ಏನೆಂದರೆ,
"ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು;
ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು.
‘ದೇವರು ನಮ್ಮ ಕೂಡ ಇದ್ದಾನೆಂದು’ ಈ ಹೆಸರಿನ ಅರ್ಥ."
ಆದರೆ ಸಮುದ್ರದ ಮೇಲೆ ನಡೆಯುವ ಆತನನ್ನು ಅವರು ಕಂಡು ಭೂತವೆಂದು ಭಾವಿಸಿ ಅಬ್ಬರಿಸಿ ಕೂಗಿದರು; ಏಕೆಂದರೆ ಅವರೆಲ್ಲರೂ ಆತನನ್ನು ನೋಡಿ ಭಯಭೀತರಾಗಿದ್ದರು. ಕೂಡಲೆ ಆತನು ಅವರನ್ನು ಮಾತನಾಡಿಸಿ ಅವರಿಗೆ, "ಧೈರ್ಯವಾಗಿರಿ, ನಾನೇ, ಹೆದರಬೇಡಿರಿ" ಎಂದು ಹೇಳಿದನು.
ಆದರೆ ಯೇಸು ಅದನ್ನು ಕೇಳಿ ಸಭಾಮಂದಿರದ ಅಧಿಕಾರಿಗೆ, "ಅಂಜಬೇಡ, ನಂಬಿಕೆ ಮಾತ್ರ ಇರಲಿ, ಆಕೆ ಬದುಕುವಳು" ಎಂದು ಉತ್ತರಕೊಟ್ಟನು.
ಆತನು ಪಟ್ಟಣವನ್ನು ಸಮೀಪಿಸಿ ಎಣ್ಣೆಮರಗಳ ಗುಡ್ಡದಿಂದ ಇಳಿಯುವ ಸ್ಥಳಕ್ಕೆ ಬಂದಾಗ ಶಿಷ್ಯರ ಗುಂಪೆಲ್ಲಾ ಸಂತೋಷಪಡುತ್ತಾ ತಾವು ಕಂಡಿದ್ದ ಎಲ್ಲಾ ಮಹತ್ಕಾರ್ಯಗಳ ವಿಷಯದಲ್ಲಿ,
"ಕರ್ತನ ಹೆಸರಿನಲ್ಲಿ ಬರುವ ಅರಸನಿಗೆ ಆಶೀರ್ವಾದ,
ಪರಲೋಕದಲ್ಲಿ ಸಮಾಧಾನ,
ಮೇಲಣಲೋಕಗಳಲ್ಲಿ ಮಹಿಮೆ"
ಎಂದು ಮಹಾ ಶಬ್ದದಿಂದ ದೇವರನ್ನು ಕೊಂಡಾಡುವುದಕ್ಕೆ ತೊಡಗಿದರು.
ಈ ಮಾತುಗಳನ್ನು ಅವನು ಹೇಳಿದ ಬಳಿಕ ಅವರು ನೋಡುತ್ತಿದ್ದ ಹಾಗೆಯೇ ಆತನು ಪರಲೋಕಕ್ಕೆ ಎತ್ತಲ್ಪಟ್ಟನು, ಮೋಡವೊಂದು ಆತನನ್ನು ಕವಿದುಕೊಂಡಿದ್ದರಿಂದ, ಯೇಸುವು ಅವರ ಕಣ್ಣಿಗೆ ಮರೆಯಾದನು.
ಆಗ; ‘ಸೌಲನೇ, ಸೌಲನೇ, ನನ್ನನ್ನು ಏಕೆ ಹಿಂಸೆಪಡಿಸುತ್ತೀ’? ಎಂದು ನನಗೆ ಹೇಳಿದ ಒಂದು ಶಬ್ದವನ್ನು ಕೇಳಿದೆನು.
ಮಿಡತೆಗಳಿಂದ ಉಂಟಾದ ಬಾಧೆ
ತರುವಾಯ ಯೆಹೋವನು ಮೋಶೆಗೆ, "ಫರೋಹನ ಬಳಿಗೆ ಹಿಂತಿರುಗಿ ಹೋಗು. ನಾನು ಫರೋಹನ ಮತ್ತು ಅವನ ಪರಿವಾರದವರ ಹೃದಯಗಳನ್ನು ಕಠಿಣಗೊಳಿಸಿದ್ದೇನೆ. ಏಕೆಂದರೆ ನಾನು ಈ ಮಹತ್ಕಾರ್ಯಗಳನ್ನು ಅವರ ಮುಂದೆ ನಡೆಸುವುದಕ್ಕೆ ಇದು ಕಾರಣವಾಯಿತು. ಇಸ್ರಾಯೇಲರು ತಮ್ಮ ಮಕ್ಕಳಿಗೂ, ಮೊಮ್ಮಕ್ಕಳಿಗೂ ನಾನು ಐಗುಪ್ತ್ಯರ ನಡುವೆ ನಡೆಸಿರುವ ಈ ಮಹತ್ಕಾರ್ಯಗಳನ್ನು ವಿವರಿಸಿ ಯೆಹೋವನು ಐಗುಪ್ತ್ಯರನ್ನು ತನಗೆ ಇಷ್ಟಬಂದ ಹಾಗೆ ಶಿಕ್ಷಿಸಿದನು ಎಂಬುದಾಗಿ ತಿಳಿಸಬೇಕು. ಹೀಗೆ ನಾನು ಫರೋಹನ ಹೃದಯವನ್ನು, ಅವನ ಪರಿವಾರದವರ ಹೃದಯಗಳನ್ನೂ ಕಠಿಣಮಾಡಿದ್ದೇನೆ. ಇದಲ್ಲದೆ ಈ ಮಹತ್ಕಾರ್ಯಗಳಿಂದ ನೀವು ನನ್ನನ್ನೇ ಯೆಹೋವನೆಂದು ತಿಳಿದುಕೊಳ್ಳುವಿರಿ" ಎಂದನು.