Morte de Jesus
A morte de Jesus é o sacrifício supremo do amor de Deus. Na cruz, o Cordeiro de Deus carregou os pecados do mundo, satisfez a justiça divina e abriu o caminho da salvação para todos.
O sacrifício na cruz
Jesus disse: 'Está consumado!' Na cruz, Ele cumpriu toda a lei, pagou o preço do pecado e reconciliou a humanidade com Deus.
ಇದಾದ ಮೇಲೆ ಯೇಸು ಈಗ ಎಲ್ಲ ಪೂರ್ತಿಯಾಗಿದೆಯೆಂದು ತಿಳಿದು, ಧರ್ಮಶಾಸ್ತ್ರದ ಮಾತು ನೆರವೇರುವಂತೆ, "ನನಗೆ ನೀರಡಿಕೆಯಾಗಿದೆ" ಎಂದನು. ಆಗ ಅಲ್ಲಿ ಹುಳಿರಸ ತುಂಬಿದ ಪಾತ್ರೆಯಿತ್ತು. ಅವರು ಸ್ಪಂಜನ್ನು ಹುಳಿರಸದಲ್ಲಿ ಅದ್ದಿ ಹಿಸ್ಸೋಪ್ ಗಿಡದ ಕೋಲಿಗೆ ಸಿಕ್ಕಿಸಿ ಆತನ ಬಾಯಿಗೆ ಮುಟ್ಟಿಸಿದರು. ಯೇಸು ಆ ಹುಳಿರಸವನ್ನು ತೆಗೆದುಕೊಂಡ ಮೇಲೆ, "ತೀರಿತು" ಎಂದು ಹೇಳಿ ತಲೆ ಬಾಗಿಸಿ ತನ್ನ ಆತ್ಮವನ್ನು ಒಪ್ಪಿಸಿಕೊಟ್ಟನು.
ಸಿಪಾಯಿಗಳು ಯೇಸುವನ್ನು ಶಿಲುಬೆಗೆ ಹಾಕಿದ ಮೇಲೆ ಅವರು ಆತನ ವಸ್ತ್ರಗಳನ್ನು ತೆಗೆದುಕೊಂಡು ನಾಲ್ಕು ಪಾಲು ಮಾಡಿ ಒಬ್ಬೊಬ್ಬ ಸಿಪಾಯಿಗೆ ಒಂದೊಂದು ಭಾಗದಂತೆ ಹಂಚಿಕೊಂಡರು. ಆತನ ಒಳಂಗಿಯನ್ನು ಸಹ ತೆಗೆದುಕೊಂಡರು. ಆದರೆ ಆ ಅಂಗಿಗೆ ಹೊಲಿಗೆ ಇರಲಿಲ್ಲ. ಅದು ಮೇಲಿನಿಂದ ಕೆಳಗಿನವರೆಗೆ ಹೆಣೆದದ್ದಾಗಿತ್ತು. ಆಮೇಲೆ ಅವರು, "ನಾವು ಇದನ್ನು ಹರಿಯಬಾರದು ಚೀಟು ಹಾಕಿ, ಇದು ಯಾರಿಗೆ ಬರುವುದೋ ನೋಡೋಣ" ಎಂದು ಮಾತನಾಡಿಕೊಂಡರು. ಇದರಿಂದ "ನನ್ನ ಬಟ್ಟೆಗಳನ್ನು ತಮ್ಮಲ್ಲಿ ಪಾಲುಮಾಡಿಕೊಂಡರು. ನನ್ನ ಅಂಗಿಗೋಸ್ಕರ ಚೀಟು ಹಾಕಿದರು" ಎಂಬ ಧರ್ಮಶಾಸ್ತ್ರದ ಮಾತು ನೆರವೇರಿತು. ಸಿಪಾಯಿಗಳು ಇದನ್ನೆಲ್ಲಾ ಮಾಡಿದರು.
ಯೇಸುವಿನ ಶಿಲುಬೆಯ ಬಳಿಯಲ್ಲಿ ಆತನ ತಾಯಿಯೂ, ಆತನ ತಾಯಿಯ ತಂಗಿಯೂ, ಕ್ಲೋಪನ ಹೆಂಡತಿಯಾದ ಮರಿಯಳೂ, ಮಗ್ದಲದ ಮರಿಯಳೂ ನಿಂತಿದ್ದರು. ಯೇಸು ತನ್ನ ತಾಯಿಯನ್ನೂ ಹತ್ತಿರದಲ್ಲಿ ನಿಂತಿದ್ದ ತನ್ನ ಪ್ರೀತಿಯ ಶಿಷ್ಯನನ್ನೂ ನೋಡಿ ತನ್ನ ತಾಯಿಗೆ, "ಸ್ತ್ರೀಯೇ, ಇಗೋ, ನಿನ್ನ ಮಗನು" ಎಂದು ಹೇಳಿದನು. ತರುವಾಯ ಆ ಶಿಷ್ಯನಿಗೆ, "ಇಗೋ, ನಿನ್ನ ತಾಯಿ" ಎಂದು ಹೇಳಿದನು. ಆ ಗಳಿಗೆಯಿಂದ ಆ ಶಿಷ್ಯನು ಆಕೆಯನ್ನು ತನ್ನ ಸ್ವಂತ ಮನೆಯಲ್ಲೇ ಇರಿಸಿಕೊಂಡನು.
ಅವರು ಕಪಾಲವೆಂಬ ಸ್ಥಳಕ್ಕೆ ಬಂದಾಗ ಅಲ್ಲಿ ಯೇಸುವನ್ನೂ ದುಷ್ಕರ್ಮಿಗಳನ್ನೂ ಶಿಲುಬೆಗೆ ಹಾಕಿದರು. ಒಬ್ಬನನ್ನು ಯೇಸುವಿನ ಬಲಗಡೆಯಲ್ಲಿಯೂ ಮತ್ತೊಬ್ಬನನ್ನು ಎಡಗಡೆಯಲ್ಲಿಯೂ ಹಾಕಿದರು. ಆಗ ಯೇಸು, "ತಂದೆಯೇ, ಅವರನ್ನು ಕ್ಷಮಿಸು ತಾವು ಏನು ಮಾಡುತ್ತೇವೆಂಬುದನ್ನು ಅವರು ಅರಿಯರು" ಅಂದನು. ಆ ಮೇಲೆ ಚೀಟು ಹಾಕಿ ಯೇಸುವಿನ ಬಟ್ಟೆಗಳನ್ನು ಪಾಲು ಮಾಡಿದರು.
ಜನರೆಲ್ಲರೂ ನೋಡುತ್ತಾ ನಿಂತರು. ಇದಲ್ಲದೆ ಅಧಿಕಾರಿಗಳು "ಅವನು ಮತ್ತೊಬ್ಬರನ್ನು ರಕ್ಷಿಸಿದನು, ಅವನು ದೇವರು ಆರಿಸಿಕೊಂಡ ಕ್ರಿಸ್ತನೇ ಆಗಿದ್ದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ" ಎಂದು ಗೇಲಿಮಾಡಿದರು. ಸಿಪಾಯಿಗಳೂ ಆತನನ್ನು ಪರಿಹಾಸ್ಯ ಮಾಡಿದರು. ಅವರು ಯೇಸುವಿನ ಹತ್ತಿರ ಬಂದು ಹುಳಿಮದ್ಯವನ್ನು ನೀಡಿ, "ನೀನು ಯೆಹೂದ್ಯರ ಅರಸನಾಗಿದ್ದರೆ ನಿನ್ನನ್ನು ನೀನು ರಕ್ಷಿಸಿಕೋ" ಅಂದರು.
ಇದಲ್ಲದೆ ಆತನ ಶಿಲುಬೆಯ ಮೇಲೆ "ಇವನು ಯೆಹೂದ್ಯರ ಅರಸನು" ಎಂಬುದಾಗಿ ಲಿಖಿತವಾದ ಸೂಚನೆಯನ್ನು ಹಾಕಲಾಗಿತ್ತು.
ಶಿಲುಬೇಗೆರಿಸಿದ್ದ ಆ ದುಷ್ಕರ್ಮಿಗಳಲ್ಲಿ ಒಬ್ಬನು ಯೇಸುವನ್ನು ದೂಷಿಸುತ್ತಾ, "ನೀನು ಬರಬೇಕಾದ ಕ್ರಿಸ್ತನಲ್ಲವೇ? ನಿನ್ನನ್ನು ರಕ್ಷಿಸಿಕೋ, ನಮ್ಮನ್ನು ರಕ್ಷಿಸು" ಎಂದು ಹೇಳಿದನು. ಅದಕ್ಕೆ ಎರಡನೆಯವನು ಅವನನ್ನು ಗದರಿಸಿ, "ನೀನು ಇದೇ ದಂಡನೆಯಲ್ಲಿರುವಾಗಲೂ ದೇವರಿಗೆ ಹೆದರುವುದಿಲ್ಲವೋ? ನಾವಂತೂ ನ್ಯಾಯವಾಗಿ ದಂಡನೆಯಲ್ಲಿದ್ದೇವೆ, ನಾವು ಮಾಡಿದ್ದಕ್ಕೆ ತಕ್ಕ ಪ್ರತಿಫಲವನ್ನು ಹೊಂದುತ್ತೇವೆ. ಈತನಾದರೋ ಅಂತಹದ್ದೇನನ್ನೂ ಮಾಡಲಿಲ್ಲ" ಎಂದು ಹೇಳಿ, "ಯೇಸುವೇ ನೀನು ನಿನ್ನ ರಾಜ್ಯವನ್ನು ಪಡೆದವನಾಗಿ ಬರುವಾಗ ನನ್ನನ್ನು ನೆನಪಿಸಿಕೋ" ಅಂದನು. ಅದಕ್ಕೆ ಯೇಸು, "ಈ ಹೊತ್ತೇ ನೀನು ನನ್ನ ಸಂಗಡ ಪರದೈಸಿನಲ್ಲಿರುವಿ ಎಂದು ನಿನಗೆ ಸತ್ಯವಾಗಿ ಹೇಳುತ್ತೇನೆ" ಎಂದು ಉತ್ತರಕೊಟ್ಟನು.
ಯೇಸುವಿನ ಮರಣ
ಹನ್ನೆರಡು ಗಂಟೆಯಿಂದ ಮೂರು ಗಂಟೆಯ ತನಕ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು. ಮೂರು ಗಂಟೆಗೆ ಯೇಸು, "ಎಲೋಹಿ, ಎಲೋಹಿ, ಲಮಾಸಬಕ್ತಾನೀ?" ಅಂದರೆ "ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ?" ಎಂದು ಮಹಾಧ್ವನಿಯಿಂದ ಕೂಗಿದನು.
ಆಗ ಇಗೋ, ದೇವಾಲಯದ ಪರದೆಯು ಮೇಲಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು; ಭೂಮಿಯು ನಡುಗಿತು; ಬಂಡೆಗಳು ಸೀಳಿಹೋದವು; ಸಮಾಧಿಗಳು ತೆರೆದವು; ನಿದ್ರೆಹೋಗಿದ್ದ ಅನೇಕ ಭಕ್ತರ ದೇಹಗಳು ಜೀವದಿಂದ ಎದ್ದವು; ಮತ್ತು ಆತನ ಪುನರುತ್ಥಾನವಾದ ಮೇಲೆ ಸಮಾಧಿಗಳೊಳಗಿಂದ ಹೊರಗೆ ಬಂದು ಪರಿಶುದ್ಧ ಪಟ್ಟಣದೊಳಗೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು. ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ, ನಡೆದ ಸಂಗತಿಗಳನ್ನೂ ನೋಡಿ ಬಹಳ ಹೆದರಿಕೊಂಡು, "ನಿಜವಾಗಿ ಈತನು ದೇವಕುಮಾರನಾಗಿದ್ದನು" ಅಂದರು.
ನಮ್ಮ ದ್ರೋಹಗಳ ದೆಸೆಯಿಂದ ಅವನಿಗೆ ಗಾಯವಾಯಿತು, ನಮ್ಮ ಅಪರಾಧಗಳ ನಿಮಿತ್ತ ಅವನು ಜಜ್ಜಲ್ಪಟ್ಟನು;
ನಮಗೆ ಸುಕ್ಷೇಮವನ್ನು ಉಂಟುಮಾಡುವ ದಂಡನೆಯನ್ನು ಅವನು ಅನುಭವಿಸಿದನು; ಅವನ ಬಾಸುಂಡೆಗಳಿಂದ ನಮಗೆ ಗುಣವಾಯಿತು.
ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ಹೋಗಿದ್ದೆವು, ಪ್ರತಿಯೊಬ್ಬನೂ ತನ್ನ ತನ್ನ ದಾರಿಯನ್ನು ಹಿಡಿಯುತ್ತಿದ್ದನು;
ನಮ್ಮೆಲ್ಲರ ದೋಷಫಲವನ್ನೂ ಯೆಹೋವನು ಅವನ ಮೇಲೆ ಹಾಕಿದನು.
ಅವನು ಬಾಧೆಗೆ ಒಳಗಾಗಿ ತನ್ನನ್ನು ತಗ್ಗಿಸಿಕೊಂಡನು, ಬಾಯಿ ತೆರೆಯಲಿಲ್ಲ;
ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆಯೂ, ಉಣ್ಣೆ ಕತ್ತರಿಸುವವರ ಮುಂದೆ ಮೌನವಾಗಿರುವ ಕುರಿಯ ಹಾಗೂ ಇದ್ದನು,
ಬಾಯಿ ತೆರೆಯಲೇ ಇಲ್ಲ.
ನಾಯಿಗಳು ನನ್ನನ್ನು ಸುತ್ತಿಕೊಂಡಿವೆ;
ದುಷ್ಟರ ಗುಂಪು ನನ್ನನ್ನು ಆವರಿಸಿಕೊಂಡಿದೆ.
ನನ್ನ ಕೈಕಾಲುಗಳನ್ನು ತಿವಿದಿದ್ದಾರೆ.
ನನ್ನ ಎಲುಬುಗಳನ್ನೆಲ್ಲಾ ಎಣಿಸುವುದಕ್ಕಾಗುವುದು;
ಅವರೋ ನನ್ನನ್ನು ನೋಡಿ ನೋಡಿ ಹಿಗ್ಗುತ್ತಾರೆ.
ನನ್ನ ಮೇಲ್ಹೊದಿಕೆಯನ್ನು ತಮ್ಮಲ್ಲಿ ಪಾಲು ಮಾಡಿಕೊಳ್ಳುತ್ತಾರೆ;
ನನ್ನ ಅಂಗಿಗಾಗಿ ಚೀಟುಹಾಕುತ್ತಾರೆ.
ನನ್ನನ್ನು ನೋಡುವವರೆಲ್ಲರೂ ಹಾಸ್ಯಮಾಡುತ್ತಾರೆ;
ಅವರು ಓರೇ ತುಟಿ ಮಾಡಿ ತಲೆ ಆಡಿಸುತ್ತಾ,
"ಯೆಹೋವನು ತನ್ನನ್ನು ರಕ್ಷಿಸುವನೆಂದು ಆತನಲ್ಲಿ ಭರವಸವಿಟ್ಟಿದ್ದಾನಲ್ಲಾ;
ಆತನು ಇವನನ್ನು ಮೆಚ್ಚಿದ್ದಾದರೆ ರಕ್ಷಿಸಲಿ" ಎಂದು ಹೇಳುತ್ತಾರೆ.
O amor que se entrega
Ninguém tem maior amor do que aquele que dá a vida pelos amigos. Deus prova seu amor em que Cristo morreu por nós quando ainda éramos pecadores.
ತನ್ನ ಪ್ರಾಣವನ್ನೇ ಸ್ನೇಹಿತರಿಗೋಸ್ಕರ ಕೊಡುವ ಪ್ರೀತಿಗಿಂತ ಹೆಚ್ಚಿನ ಪ್ರೀತಿಯು ಯಾವುದೂ ಇಲ್ಲ.
"ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.
ನಾವು ದೇವರಿಗೆ ಶತ್ರುಗಳಾಗಿದ್ದಾಗಲೇ ನಮಗೆ ಆತನ ಮಗನ ಮರಣದ ಮೂಲಕ ಆತನೊಂದಿಗೆ ಸಂಧಾನವಾಯಿತು ಆತನ ಕೂಡ ಸಂಧಾನವಾದ ನಮಗೆ ಮಗನ ಜೀವದಿಂದ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ?
ಕ್ರಿಸ್ತನು ನಮಗೋಸ್ಕರ ತನ್ನ ಪ್ರಾಣವನ್ನು ಅರ್ಪಿಸಿದ್ದರಿಂದ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ.
ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತ ಯಜ್ಞವಾಗಿದ್ದಾನೆ. ನಮ್ಮ ಪಾಪಗಳಿಗೆ ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳಿಗೂ ಪ್ರಾಯಶ್ಚಿತ್ತವಾಗಿದ್ದಾನೆ.
ಆತನು ತನ್ನನ್ನು ತಗ್ಗಿಸಿಕೊಂಡು ಮರಣವನ್ನು ಅಂದರೆ
ಶಿಲುಬೆಯ ಮರಣವನ್ನಾದರೂ ಹೊಂದುವಷ್ಟು ವಿಧೇಯನಾದನು.
Morte e ressurreição
Jesus morreu e ressuscitou, e a morte não mais tem domínio sobre Ele. Pelo batismo, participamos de sua morte e ressurreição.
ನಮಗೆ ತಿಳಿದಿರುವಂತೆ, ಕ್ರಿಸ್ತನು ಸತ್ತ ಮೇಲೆ ಜೀವಿತನಾಗಿ ಎದ್ದು ಬಂದದ್ದರಿಂದ ಆತನು ಇನ್ನು ಮುಂದೆ ಸಾಯತಕ್ಕವನಲ್ಲ, ಮರಣವು ಆತನ ಮೇಲೆ ಆಳ್ವಿಕೆ ನಡಿಸುವುದಿಲ್ಲ. ಆತನು ಸತ್ತದ್ದು ಒಂದೇ ಸಾರಿ ಅದು ಪಾಪದ ಪಾಲಿಗೆ; ಆತನು ಜೀವಿಸುವುದು ದೇವರಿಗಾಗಿಯೇ,
ಕ್ರಿಸ್ತ ಯೇಸುವಿನೊಂದಿಗೆ ಸೇರುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡವರಾದ ನಾವೆಲ್ಲರೂ ಆತನ ಮರಣದಲ್ಲಿ ಪಾಲುಗಾರರಾಗುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡೆವೆಂದು ನಿಮಗೆ ತಿಳಿಯದೋ? ಹೀಗಿರಲಾಗಿ ನಾವು ದೀಕ್ಷಾಸ್ನಾನ ಮಾಡಿಸಿಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗಿ ಆತನೊಂದಿಗೆ ಹೂಣಲ್ಪಟ್ಟೆವು. ಆದ್ದರಿಂದ ಕ್ರಿಸ್ತನು ಸತ್ತು ತಂದೆಯ ಮಹಿಮೆಯಿಂದ ಜೀವಿತನಾಗಿ ಎಬ್ಬಿಸಲ್ಪಟ್ಟಂತೆಯೇ ನಾವು ಕೂಡ ಜೀವದಿಂದೆದ್ದು ನೂತನ ಜೀವದಲ್ಲಿ ನಡೆದುಕೊಳ್ಳಬೇಕು.
ಒಂದೇ ಸಾರಿ ಸಾಯುವುದೂ ಆ ಮೇಲೆ ನ್ಯಾಯತೀರ್ಪು ಮನುಷ್ಯರಿಗೆ ಹೇಗೆ ನೇಮಕವಾಗಿದೆಯೋ, ಹಾಗೆಯೇ ಕ್ರಿಸ್ತನು ಸಹ ಬಹು ಜನರ ಪಾಪಗಳನ್ನು ಹೊತ್ತು ಕೊಳ್ಳುವುದಕ್ಕೊಸ್ಕರ ಒಂದೇ ಸಾರಿ ಸಮರ್ಪಿತನಾದನು. ಆತನು ಎರಡನೆಯ ಸಾರಿ ಪ್ರತ್ಯಕ್ಷನಾಗುವಂಥದ್ದು ಪಾಪವನ್ನು ಪರಿಹರಿಸುವುದಕ್ಕಾಗಿಯಲ್ಲ ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನು ಉಂಟುಮಾಡುವುದಕ್ಕಾಗಿಯೇ.
"ಇಸ್ರಾಯೇಲ್ ಜನರೇ, ನನ್ನ ಮಾತುಗಳನ್ನು ಕೇಳಿರಿ;, ನಜರೇತಿನ ಯೇಸು ಇದ್ದನಲ್ಲಾ, ನಿಮಗೂ ತಿಳಿದಿರುವಂತೆ ದೇವರು ಆತನ ಕೈಯಿಂದ ಮಹತ್ತುಗಳನ್ನೂ ಅದ್ಭುತಗಳನ್ನೂ ಸೂಚಕಕಾರ್ಯಗಳನ್ನೂ ನಿಮ್ಮಲ್ಲಿ ನಡಿಸಿ ಆತನನ್ನು ತನಗೆ ಮೆಚ್ಚಿಕೆಯಾದವನೆಂದು ನಿಮಗೆ ತೋರಿಸಿಕೊಟ್ಟನು. ಆದರೂ ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ, ಭವಿಷ್ಯದ ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿ ಮೊಳೆ ಜಡಿದು ಕೊಂದಿರಿ. ಆತನನ್ನು ದೇವರು ಮರಣದ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು; ಏಕೆಂದರೆ ಮರಣವು ಆತನನ್ನು ಹಿಡಿದುಕೊಂಡಿರುವುದು ಅಸಾಧ್ಯವಾಗಿತ್ತು.
"ನಾನೇ ಒಳ್ಳೆಯ ಕುರುಬನು. ಒಳ್ಳೆಯ ಕುರುಬನು ತನ್ನ ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.
ನೀವು ಈ ರೊಟ್ಟಿಯನ್ನು ತಿಂದು ಈ ಪಾನಪಾತ್ರೆಯಲ್ಲಿ ಪಾನಮಾಡುವಷ್ಟು ಸಾರಿ ಕರ್ತನ ಮರಣವನ್ನು ಆತನು ಬರುವ ತನಕ ಪ್ರಸಿದ್ಧಿಪಡಿಸುತ್ತೀರಿ.