Morte
A morte é a realidade que todos enfrentam, mas para o cristão ela não é o fim. A Bíblia ensina que Cristo venceu a morte e nos dá a esperança da ressurreição e da vida eterna.
Cristo venceu a morte
Onde está, ó morte, o teu aguilhão? Cristo destruiu o poder da morte e nos deu a vitória pela ressurreição.
"ಹೇ! ಮರಣವೇ ನಿನ್ನ ಜಯವೆಲ್ಲಿ? ಹೇ! ಮರಣವೇ ನಿನ್ನ ವಿಷದ ಕೊಂಡಿ ಎಲ್ಲಿ?" ಸಾವಿನ ವಿಷಕೊಂಡಿ ಪಾಪವೇ; ಪಾಪದ ಶಕ್ತಿಯ ಆಧಾರವು ಧರ್ಮಶಾಸ್ತ್ರವಿಧಿಗಳೇ. ಆದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ಜಯವನ್ನು ಕೊಡುವ ದೇವರಿಗೆ ಸದಾಕಾಲ ಮಹಿಮೆಯುಂಟಾಗಲಿ.
ನಿರ್ಮೂಲವಾಗುವ ಕಡೆ ಶತ್ರುವು ಮರಣವಾಗಿದೆ.
ಮನುಷ್ಯನ ಮೂಲಕ ಮರಣ ಉಂಟಾದ ಕಾರಣ, ಮನುಷ್ಯನ ಮೂಲಕವೇ ಸತ್ತವರಿಗೆ ಪುನರುತ್ಥಾನವುಂಟಾಗಿದೆ.
ಆದಾಮನಿಂದ ಹೇಗೆ ಎಲ್ಲರೂ ಸಾಯುವವರಾದರೋ ಅದೇ ಪ್ರಕಾರ ಯೇಸು ಕ್ರಿಸ್ತನಿಂದ ಎಲ್ಲರೂ ಬದುಕುವವರಾದರು.
ಈ ಮಾತು ನಂಬತಕ್ಕದ್ದಾಗಿದೆ, ಅದೇನೆಂದರೆ
"ನಾವು ಆತನೊಡನೆ ಸತ್ತಿದ್ದರೆ
ಆತನೊಡನೆ ಜೀವಿಸುವೆವು,
ಮೊದಲನೇಯ ಪುನರುತ್ಥಾನದಲ್ಲಿ ಸೇರಿದವರು ಧನ್ಯರೂ ಮತ್ತು ಪರಿಶುದ್ಧರೂ ಆಗಿದ್ದಾರೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ. ಆದರೆ ಅವರು ದೇವರಿಗೂ ಕ್ರಿಸ್ತನಿಗೂ ಯಾಜಕರಾಗಿ ಕ್ರಿಸ್ತನೊಂದಿಗೆ ಆ ಸಾವಿರ ವರ್ಷ ಆಳುವರು.
A esperança da vida eterna
Jesus disse: 'Eu sou a ressurreição e a vida.' Quem crê nele não está morto, mas apenas adormecido — e um dia despertará para a glória.
ಯೇಸು ಆಕೆಗೆ, "ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ. ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು, ಮತ್ತು ಜೀವಿಸುವ ಪ್ರತಿಯೊಬ್ಬನು ನನ್ನಲ್ಲಿ ನಂಬಿಕೆಯಿಟ್ಟರೆ, ಅವನು ಎಂದಿಗೂ ಸಾಯುವುದಿಲ್ಲ. ಇದನ್ನು ನೀನು ನಂಬುತ್ತೀಯೋ?" ಎಂದು ಕೇಳಿದಕ್ಕೆ,
ಯೇಸು ಆಕೆಗೆ, "ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ. ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು, ಮತ್ತು ಜೀವಿಸುವ ಪ್ರತಿಯೊಬ್ಬನು ನನ್ನಲ್ಲಿ ನಂಬಿಕೆಯಿಟ್ಟರೆ, ಅವನು ಎಂದಿಗೂ ಸಾಯುವುದಿಲ್ಲ. ಇದನ್ನು ನೀನು ನಂಬುತ್ತೀಯೋ?" ಎಂದು ಕೇಳಿದಕ್ಕೆ,
ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ನಾನು ಅವುಗಳನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ. ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದೆಂದಿಗೂ ನಾಶವಾಗುವುದೇ ಇಲ್ಲ. ಅವುಗಳನ್ನು ಯಾರೂ ನನ್ನ ಕೈಯಿಂದ ಕಸಿದುಕೊಳ್ಳಲಾರರು.
"ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.
ಯೇಸು ಕರ್ತನು ಪುನರಾಗಮನ
ಸಹೋದರರೇ, ನಿದ್ರೆಹೋಗುವವರ ಗತಿ ಏನೆಂದು ನೀವು ತಿಳಿಯದೆ ಇದ್ದು, ನಿರೀಕ್ಷೆಯಿಲ್ಲದವರಾಗಿರುವ ಇತರರಂತೆ ದುಃಖಿಸಬಾರದು ಎಂಬುದೇ ನಮ್ಮ ಬಯಕೆ. ಯೇಸು ಸತ್ತು ಜೀವಿತನಾಗಿ ಎದ್ದನೆಂದು ನಾವು ನಂಬುತ್ತೇವೆ ಹಾಗೆಯೇ ಯೇಸುವಿನಲ್ಲಿದ್ದು ನಿದ್ರೆಹೋದವರನ್ನು ಸಹ ದೇವರು ಆತನೊಡನೆ ಎಬ್ಬಿಸಿ ಕರೆದುಕೊಂಡು ಬರುವನೆಂದು ನಂಬಬೇಕಲ್ಲವೇ.
ಯಾಕೆಂದರೆ ಕರ್ತನು ತಾನೇ ಆಜ್ಞಾಘೋಷದೊಡನೆಯೂ, ಪ್ರಧಾನದೂತನ ಶಬ್ದದೊಡನೆಯೂ, ದೇವರ ತುತ್ತೂರಿ ಧ್ವನಿಯೊಡನೆಯೂ ಆಕಾಶದಿಂದ ಇಳಿದುಬರುವನು. ಆಗ ಕ್ರಿಸ್ತನಲ್ಲಿ ಸತ್ತವರು ಮೊದಲು ಎದ್ದು ಬರುವರು. ಆ ಮೇಲೆ ಜೀವದಿಂದುಳಿದಿರುವ ನಾವು ಅಂತರಿಕ್ಷದಲ್ಲಿ ಕರ್ತನನ್ನು ಎದುರುಗೊಳ್ಳುವುದಕ್ಕಾಗಿ ಅವರೊಂದಿಗೆ ಮೇಘಗಳಲ್ಲಿ ಫಕ್ಕನೆ ಒಯ್ಯಲ್ಪಡುವೆವು. ಹೀಗಾಗಿ ನಾವು ಸದಾಕಾಲವೂ ಕರ್ತನ ಜೊತೆಯಲ್ಲಿರುವೆವು.
Não temas a morte
Não temas os que matam o corpo. Para o cristão, viver é Cristo e morrer é lucro. O vale da sombra da morte não assusta quem caminha com o Pastor.
ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ, ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ.
ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು. ಆದರೆ ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಂಡವನು ಅದನ್ನು ಕಂಡುಕೊಳ್ಳುವನು.
ನನಗಂತೂ ಬದುಕುವುದೆಂದರೆ ಕ್ರಿಸ್ತನೇ, ಸಾಯುವುದು ಲಾಭವೇ.
ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ, ಇಲ್ಲಿಂದ ಹೊರಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬುದೇ ನನ್ನ ಅಭಿಲಾಷೆ, ಅದು ಅತ್ಯುತ್ತಮವಾಗಿದೆ. ಆದರೆ ನಾನಿನ್ನೂ ಶರೀರದಲ್ಲಿ ವಾಸಮಾಡಿಕೊಂಡಿರುವುದು ನಿಮಗೋಸ್ಕರ ಬಹು ಅವಶ್ಯಕವಾಗಿದೆ.
ನಾವಾದರೋ ಪರಲೋಕದ ಪ್ರಜೆಗಳು, ಕರ್ತನಾದ ಯೇಸು ಕ್ರಿಸ್ತನು ಅಲ್ಲಿಂದಲೇ ರಕ್ಷಕನಾಗಿ ಬರುವುದನ್ನು ಎದುರುನೋಡುತ್ತಾ ಇದ್ದೇವೆ. ಆತನು ಎಲ್ಲವನ್ನೂ ತನಗೆ ಅಧೀನಮಾಡಿಕೊಳ್ಳಲಾಗುವ ಪರಾಕ್ರಮವನ್ನು ಹೊಂದಿದವನಾಗಿ ದೀನಾವಸ್ಥೆಯುಳ್ಳ ನಮ್ಮ ದೇಹವನ್ನು ಪ್ರಭಾವವುಳ್ಳ ತನ್ನ ದೇಹದಂತೆ ರೂಪಾಂತರಪಡಿಸುವನು.
ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ,
ನೀನು ಹತ್ತಿರವಿರುವುದರಿಂದ ಕೇಡಿಗೆ ಹೆದರೆನು;
ನಿನ್ನ ದೊಣ್ಣೆಯೂ ಮತ್ತು ನಿನ್ನ ಕೋಲೂ ನನಗೆ ಧೈರ್ಯ ಕೊಡುತ್ತವೆ.
ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ,
ನೀನು ಹತ್ತಿರವಿರುವುದರಿಂದ ಕೇಡಿಗೆ ಹೆದರೆನು;
ನಿನ್ನ ದೊಣ್ಣೆಯೂ ಮತ್ತು ನಿನ್ನ ಕೋಲೂ ನನಗೆ ಧೈರ್ಯ ಕೊಡುತ್ತವೆ.
ನಾವು ಬದುಕಿದರೆ ಕರ್ತನಿಗಾಗಿ ಬದುಕುತ್ತೇವೆ; ಸತ್ತರೆ ಕರ್ತನಿಗಾಗಿ ಸಾಯುತ್ತೇವೆ; ಬದುಕಿದರೂ ಸತ್ತರೂ ನಾವು ಕರ್ತನವರೇ.
A eternidade nos aguarda
Deus enxugará toda lágrima. A morte será o último inimigo destruído. Para os salvos, a morte é a porta de entrada na presença eterna de Deus.
ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು, "ಇಗೋ ದೇವರ ನಿವಾಸವು ಮನುಷ್ಯರೊಂದಿಗೆ ಇದೆ. ಆತನು ಅವರೊಡನೆ ವಾಸಮಾಡುವನು. ಅವರು ಆತನಿಗೆ ಪ್ರಜೆಗಳಾಗಿರುವರು. ದೇವರು ತಾನೇ ಅವರ ಸಂಗಡ ಇರುವನು ಮತ್ತು ಅವರ ದೇವರಾಗಿರುವನು. ಅವರ ಕಣ್ಣೀರನ್ನೆಲ್ಲಾ ಆತನೇ ಒರಸಿಬಿಡುವನು. ಇನ್ನು ಮರಣವಿರುವುದಿಲ್ಲ. ಇನ್ನು ದುಃಖವಾಗಲಿ, ಗೋಳಾಟವಾಗಲಿ, ಕಷ್ಟವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು" ಎಂದು ಹೇಳಿತು.
ಅವರ ಕಣ್ಣೀರನ್ನೆಲ್ಲಾ ಆತನೇ ಒರಸಿಬಿಡುವನು. ಇನ್ನು ಮರಣವಿರುವುದಿಲ್ಲ. ಇನ್ನು ದುಃಖವಾಗಲಿ, ಗೋಳಾಟವಾಗಲಿ, ಕಷ್ಟವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು" ಎಂದು ಹೇಳಿತು.
ಒಂದೇ ಸಾರಿ ಸಾಯುವುದೂ ಆ ಮೇಲೆ ನ್ಯಾಯತೀರ್ಪು ಮನುಷ್ಯರಿಗೆ ಹೇಗೆ ನೇಮಕವಾಗಿದೆಯೋ,
ಹೇಗೆಂದರೆ ಮರಣವಾಗಲಿ, ಜೀವವಾಗಲಿ, ದೇವದೂತರಾಗಲಿ, ದುರಾತ್ಮಗಳಾಗಲಿ, ಈಗಿನ ಸಂಗತಿಗಳಾಗಲಿ, ಮುಂದಣ ಸಂಗತಿಗಳಾಗಲಿ, ಮಹತ್ವಗಳಾಗಲಿ, ಮೇಲಣ ಲೋಕವಾಗಲಿ, ಕೆಳಗಣ ಲೋಕವಾಗಲಿ, ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿ ತೋರಿಬಂದ ದೇವರ ಪ್ರೀತಿಯಿಂದ ಅಗಲಿಸಲು ಸಾಧ್ಯವಿಲ್ಲವೆಂದು ನಾವು ಬಲ್ಲವರಾಗಿದ್ದೇವೆ.
ನೀತಿವಂತರಿಗೋಸ್ಕರ ಯಾರಾದರೂ ಪ್ರಾಣಕೊಡುವುದು ಅಪರೂಪ. ನಿಜವಾಗಿಯೂ ಒಳ್ಳೆಯವನಿಗಾಗಿ ಪ್ರಾಣಕೊಡುವುದಕ್ಕೆ ಯಾವನಾದರೂ ಧೈರ್ಯಮಾಡಿದರೂ ಮಾಡಬಹುದು. ಆದರೆ ನಾವು ಪಾಪಿಗಳಾಗಿದ್ದಾಗಲೇ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ದೃಢಪಡಿಸಿದ್ದಾನೆ.
ಒಬ್ಬನು ಮಾಡಿದ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ದೆಸೆಯಿಂದಲೇ ಮರಣವು ಆಳುವುದಾದರೆ ದೇವರು ಧಾರಾಳವಾಗಿ ಅನುಗ್ರಹಿಸುವ ಕೃಪಾದಾನವನ್ನೂ, ನೀತಿಯೆಂಬ ವರವನ್ನೂ ಹೊಂದಿದವರು ಯೇಸು ಕ್ರಿಸ್ತನೆಂಬ ಈ ಒಬ್ಬ ಪುರುಷನ ಮೂಲಕ ಜೀವಭರಿತರಾಗಿ ಆಳುವುದು ಮತ್ತೂ ನಿಶ್ಚಯವಲ್ಲವೇ.
ಯಾಕೆಂದರೆ ಪಾಪವು ಕೊಡುವ ಸಂಬಳ ಮರಣ; ದೇವರ ಕೃಪಾವರವು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿರುವ ನಿತ್ಯಜೀವವೇ ಆಗಿದೆ.
A morte na perspectiva bíblica
Há tempo de nascer e tempo de morrer. A morte é realidade humana, mas Deus é Senhor tanto dos vivos quanto dos mortos.
ಜ್ಞಾನ
ಸುಗಂಧತೈಲಕ್ಕಿಂತ ಒಳ್ಳೆಯ ಹೆಸರು ಉತ್ತಮ,
ಮತ್ತು ಜನನ ದಿನಕ್ಕಿಂತ ಮರಣ ದಿನವೇ ಮೇಲು.
ಇವರು ಸಮಾಧಾನದಲ್ಲಿ ಸೇರಿದ್ದಾರಲ್ಲಾ;
ನೀತಿಯುಳ್ಳವನಾಗಿ ನಡೆಯುವ ಪ್ರತಿಯೊಬ್ಬನು ತನ್ನ ತನ್ನ ದೀರ್ಘನಿದ್ರಾಸ್ಥಾನದಲ್ಲಿ ವಿಶ್ರಮಿಸಿಕೊಳ್ಳುತ್ತಿದ್ದಾನೆ.
ಕತ್ತಲಲ್ಲಿ ಸಂಚರಿಸಿದ ಜನರಿಗೆ ದೊಡ್ಡ ಬೆಳಕು ಕಾಣಿಸಿತು.
ಕಾರ್ಗತ್ತಲಾದ ದೇಶದಲ್ಲಿದ್ದವರಿಗೆ ಪ್ರಕಾಶವು ಹೊಳೆಯಿತು.
ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ಈ ಮರದ ಹಣ್ಣನ್ನು ಮಾತ್ರ ತಿನ್ನಬಾರದು. ತಿಂದ ದಿನವೇ ಸತ್ತು ಹೋಗುವೆ" ಎಂದು ಆಜ್ಞಾಪಿಸಿದನು.
ತಮ್ಮನ್ನು ಪಾತಾಳಕ್ಕೆ ತಪ್ಪಿಸಿಕೊಂಡು, ಮರಣಹೊಂದದೆ
ಚಿರಂಜೀವಿಯಾಗಿರುವವರು ಯಾರು? ಸೆಲಾ
ನಾನು ನಿನ್ನ ಆತ್ಮಕ್ಕೆ ತಪ್ಪಿಸಿಕೊಳ್ಳುವಂತೆ ಎಲ್ಲಿಗೆ ಹೋಗಲಿ?
ನಿನ್ನ ಕಣ್ಣಿಗೆ ಮರೆಯಾಗುವಂತೆ ಎಲ್ಲಿಗೆ ಓಡಲಿ?
ಮೇಲಣ ಲೋಕಕ್ಕೆ ಏರಿಹೋದರೆ ಅಲ್ಲಿ ನೀನಿರುತ್ತಿ,
ಪಾತಾಳಕ್ಕೆ ಹೋಗಿ ಮಲಗಿಕೊಂಡೇನೆಂದರೆ ಅಲ್ಲಿಯೂ ನೀನಿರುವಿ.
ನಿನ್ನ ಕೈಯಲ್ಲಿನ ಮುದ್ರೆಯ ಹಾಗೆ ನಿನ್ನ ಹೃದಯದ ಮೇಲೆ ನನ್ನನ್ನು ಧರಿಸಿಕೋ.
ಪ್ರೀತಿ ಮೃತ್ಯುವಿನಷ್ಟು ಶಕ್ತಿಶಾಲಿ,
ಪ್ರೀತಿದ್ರೋಹದಿಂದ ಹುಟ್ಟುವ ಮತ್ಸರವು ಪಾತಾಳದಷ್ಟು ಕ್ರೂರ,
ಅದರ ಜ್ವಾಲೆಯು ಬೆಂಕಿಯ ಉರಿ, ಧಗಧಗಿಸುವ ಕೋಪಾಗ್ನಿ.
ಭೂಲೋಕದವರೆಲ್ಲರೂ ಹೋಗುವ ಮಾರ್ಗವನ್ನು ನಾನು ಈಗ ಅನುಸರಿಸಬೇಕಾಗಿದೆ. ನಿಮ್ಮ ದೇವರಾದ ಯೆಹೋವನು ನಿಮ್ಮ ವಿಷಯದಲ್ಲಿ ನುಡಿದ ಆಶೀರ್ವಾದದ ವಚನಗಳಲ್ಲಿ ಒಂದೂ ವ್ಯರ್ಥವಾಗಲಿಲ್ಲ. ಎಲ್ಲವೂ ತಪ್ಪದೆ ನೆರವೇರಿದೆ ಎಂಬುದು ನಿಮಗೆ ಮನದಟ್ಟಾಗಿದೆಯಲ್ಲ.
ಯಾರ ಸಾವಿನಲ್ಲೂ ನನಗೆ ಸಂತೋಷವಿಲ್ಲ; ಪಾಪದಿಂದ ತಿರುಗಿಕೊಂಡು ಜೀವಿಸಿರಿ" ಇದು ಕರ್ತನಾದ ಯೆಹೋವನ ನುಡಿ.
ಆ ಮೇಲೆ ಯೇಸು, "ತಂದೆಯೇ, ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸಿಕೊಡುತ್ತೇನೆ" ಎಂದು ಮಹಾಧ್ವನಿಯಿಂದ ಕೂಗಿದನು. ಇದನ್ನು ಹೇಳಿದ ಮೇಲೆ ಪ್ರಾಣಬಿಟ್ಟನು.
ಅವನು ಪಾತಾಳದೊಳಗೆ ಯಾತನೆಪಡುತ್ತಾ ಇರುವಲ್ಲಿ ಕಣ್ಣೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಗೆ ಒರಗಿಕೊಂಡಿದ್ದ ಲಾಜರನನ್ನೂ ನೋಡಿ, ‘ತಂದೆಯೇ, ಅಬ್ರಹಾಮನೇ ನನ್ನ ಮೇಲೆ ಕರುಣೆ ಇಟ್ಟು ಲಾಜರನನ್ನು ಕಳುಹಿಸು ಅವನು ತನ್ನ ತುದಿ ಬೆರಳನ್ನು ನೀರಿನಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡಲಿ, ಏಕೆಂದರೆ ಈ ಉರಿಯಲ್ಲಿ ಸಂಕಟಪಡುತ್ತಿದ್ದೇನೆ’ ಎಂದು ಕೂಗಿ ಹೇಳಿದನು.
ಆ ಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ. ಪಾಪವು ಪೂರ್ಣವಾಗಿ ಬೆಳೆದು ಮರಣವನ್ನು ತರುತ್ತದೆ.