Motivação
Motivação verdadeira vem de Deus. A Bíblia nos inspira a correr a carreira da fé com perseverança, sabendo que o Senhor fortalece, guia e recompensa os fiéis.
Força do alto
Tudo posso naquele que me fortalece. Deus dá poder aos fracos e renova a força dos cansados — Ele é a fonte de toda motivação.
ನನ್ನನ್ನು ಬಲಪಡಿಸುವವನ ಮುಖಾಂತರ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.
ಸೋತವನಿಗೆ ತ್ರಾಣವನ್ನು ಅನುಗ್ರಹಿಸಿ, ಬಲಹೀನನಿಗೆ ಬಹು ಬಲವನ್ನು ದಯಪಾಲಿಸುತ್ತಾನೆ.
ಯುವಕರೂ ದಣಿದು ಬಳಲುವರು, ತರುಣರೂ ಸೊರಗಿ ಮುಗ್ಗರಿಸುವರು.
ಯೆಹೋವನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗಳಂತೆ ರೆಕ್ಕೆಗಳನ್ನು ಚಾಚಿಕೊಂಡು ಏರುವರು;
ಅವರು ಓಡಿ ದಣಿಯರು, ನಡೆದು ಬಳಲರು.
ನಾನು ಯೆಹೋವನಲ್ಲಿ ಪರಮಾನಂದಪಡುವೆನು, ನನ್ನ ಆತ್ಮವು ನನ್ನ ದೇವರಲ್ಲಿ ಹಿಗ್ಗುವುದು.
ವರನು ಬಾಸಿಂಗವನ್ನು ಧರಿಸಿಕೊಳ್ಳುವಂತೆಯೂ, ವಧುವು ತನ್ನನ್ನು ಆಭರಣಗಳಿಂದ ಅಲಂಕರಿಸಿಕೊಳ್ಳುವ ಹಾಗೂ,
ಆತನು ನನಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸಿ, ಧರ್ಮವೆಂಬ ನಿಲುವಂಗಿಯನ್ನು ತೊಡಿಸಿದ್ದಾನೆ.
ಯಾಕೆಂದರೆ ದೇವರೇ ತನ್ನ ಸುಚಿತ್ತವನ್ನು ನೆರವೇರಿಸಬೇಕೆಂದು ನಿಮ್ಮಲ್ಲಿ ಉದ್ದೇಶವನ್ನೂ ಮತ್ತು ಪ್ರಯತ್ನವನ್ನೂ ಉಂಟುಮಾಡುವವನಾಗಿದ್ದಾನೆ.
Correr para o alvo
Prossigo para o alvo, para o prêmio da soberana vocação de Deus em Cristo Jesus. A corrida da fé exige disciplina e foco.
ಸಹೋದರರೇ, ನಾನಂತೂ ಪಡೆದುಕೊಂಡವನೆಂದು ನನ್ನನ್ನು ಈ ವರೆಗೂ ಎಣಿಸಿಕೊಳ್ಳುವುದಿಲ್ಲ. ಆದರೆ ಒಂದು, ನಾನು ಹಿಂದಿನ ಸಂಗತಿಗಳನ್ನು ಮರೆತುಬಿಟ್ಟು ಮುಂದಿನವುಗಳನ್ನು ಹಿಡಿಯುವುದಕ್ಕಾಗಿ ಎದೆಬೊಗ್ಗಿದವನಾಗಿ, ದೇವರು ಕ್ರಿಸ್ತನ ಮೂಲಕವಾಗಿ ನಮ್ಮನ್ನು ಮೇಲಕ್ಕೆ ಕರೆದು ನಮ್ಮ ಮುಂದೆ ಇಟ್ಟಿರುವ ಬಿರುದನ್ನು ಹೊಂದುವ ಗುರಿಯನ್ನು ತಲುಪಲೆಂದು ಓಡುತ್ತಾ ಇದ್ದೇನೆ.
ಕ್ರೀಡಾಂಗಣದಲ್ಲಿ ಅನೇಕರು ಓಟದ ಸ್ಪರ್ಧೆಯಲ್ಲಿ ಭಾಗವಹಿಸುತ್ತಾರೆ, ಆದರೂ ಒಬ್ಬನು ಮಾತ್ರ ಜಯಮಾಲೆಯನ್ನು ಪಡೆಯುತ್ತಾನೆ ಎಂಬುದು ನಿಮಗೆ ತಿಳಿಯದೋ? ಅವರಂತೆ ನೀವೂ ಸಹ ಬಹುಮಾನವನ್ನು ಗೆಲ್ಲಬೇಕೆಂದು ಓಡಿರಿ. ಪ್ರತಿಯೊಬ್ಬ ಕ್ರೀಡಾಪಟುವು ತನ್ನ ತರಬೇತಿಯ ಎಲ್ಲಾ ವಿಷಯಗಳಲ್ಲಿ ಶಮೆದಮೆಯುಳ್ಳವನಾಗಿರುತ್ತಾನೆ. ಅವರು ಬಾಡಿ ಹೋಗುವ ಜಯಮಾಲೆಯನ್ನು ಹೊಂದುವುದಕ್ಕೆ ಸಾಧನೆ ಮಾಡುತ್ತಾರೆ; ನಾವಾದರೋ ಬಾಡಿಹೋಗದ ಜಯಮಾಲೆಯನ್ನು ಹೊಂದುವುದಕ್ಕೆ ಸಾಧನೆ ಮಾಡುವವರಾಗಿದ್ದೇವೆ. ಆದ್ದರಿಂದ ನಾನು ಸಹ ಗೊತ್ತುಗುರಿಯಿಲ್ಲದವನಂತೆ ಓಡುವುದಿಲ್ಲ; ಗಾಳಿಯೊಂದಿಗೆ ಗುದ್ದಾಡುವವನಂತೆ ಹೋರಾಡುವುದಿಲ್ಲ. ಇತರರಿಗೆ ಬೋಧಿಸಿದ ಮೇಲೆ ನಾನೇ ಅಯೋಗ್ಯನಾಗದಂತೆ, ನನ್ನ ದೇಹವನ್ನು ದಂಡಿಸಿ ಸ್ವಾಧಿನದಲ್ಲಿಟ್ಟುಕೊಳ್ಳುತ್ತೇನೆ.
ದೇವರು ನಮ್ಮ ತಂದೆ
ಆದಕಾರಣ ಇಷ್ಟು ಸಾಕ್ಷಿಗಳ ದೊಡ್ಡ ಗುಂಪು ಮೇಘದಂತೆ ನಮ್ಮ ಸುತ್ತಲು ಇರುವುದರಿಂದ ನಮಗೆ ಅಭ್ಯಂತರಪಡಿಸುವ ಎಲ್ಲಾ ಭಾರವನ್ನೂ, ಸುಲಭವಾಗಿ ಮುತ್ತಿಕೊಳ್ಳುವ ಪಾಪವನ್ನು ಸಹ ನಾವು ತೆಗೆದಿಟ್ಟು, ನಂಬಿಕೆಯನ್ನು ಹುಟ್ಟಿಸುವಾತನೂ ಅದನ್ನು ಪರಿಪೂರ್ಣಗೊಳಿಸುವಾತನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸಹನೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅಪಮಾನವನ್ನು ಅಲಕ್ಷ್ಯಮಾಡಿ, ಶಿಲುಬೆಯ ಮರಣವನ್ನು ಸಹಿಸಿಕೊಂಡು, ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನನಾಗಿದ್ದಾನೆ. ನೀವು ಮನಗುಂದಿದವರಾಗಿ ಬೇಸರಗೊಳ್ಳದಂತೆ ಯೇಸುವನ್ನು ಕುರಿತು ಯೋಚಿಸಿರಿ. ಆತನು ಪಾಪಿಗಳಿಂದ ಎಷ್ಟೋ ವಿರೋಧವನ್ನು ಸಹಿಸಿಕೊಂಡನು.
ನೀವು ಯಾವ ಕೆಲಸವನ್ನು ಮಾಡಿದರೋ ಅದನ್ನು ಮನುಷ್ಯರಿಗೋಸ್ಕರವೆಂದು ಮಾಡದೇ ಕರ್ತನಿಗೋಸ್ಕರವೇ ಎಂದು ಮನಃಪೂರ್ವಕವಾಗಿ ಮಾಡಿರಿ.
Propósito e missão
Deus tem planos de esperança para nós. Cada dia é oportunidade de fazer a sua vontade e avançar com confiança na missão.
ಇವರಿಗೆ ಒಳ್ಳೆಯದಾಗಲಿ, ನಿರೀಕ್ಷೆಯಿರಲಿ ಎಂದು ನಾನು ನಿಮ್ಮ ವಿಷಯದಲ್ಲಿ ಮಾಡಿಕೊಳ್ಳುತ್ತಿರುವ ಆಲೋಚನೆಗಳನ್ನು ನಾನೇ ಬಲ್ಲೆನು; ಅವು ಅಹಿತದ ಯೋಚನೆಗಳಲ್ಲ, ಹಿತದ ಯೋಚನೆಗಳೇ.
ಇದಲ್ಲದೆ ನೀವು ನನ್ನ ಹೆಸರಿನಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನು ನಾನು ನೆರವೇರಿಸುವೆನು. ಹೀಗೆ ಮಗನ ಮೂಲಕವಾಗಿ ತಂದೆಗೆ ಮಹಿಮೆ ಉಂಟಾಗುವುದು. ನೀವು ನನ್ನ ಹೆಸರಿನಲ್ಲಿ ನನ್ನನ್ನು ಏನಾದರೂ ಬೇಡಿಕೊಂಡರೆ ನಾನು ಅದನ್ನು ನೆರವೇರಿಸುವೆನು.
ಆದುದರಿಂದ ನೀವು ಹೊರಟುಹೋಗಿ ಎಲ್ಲಾ ಜನಾಂಗಗಳನ್ನು ಶಿಷ್ಯರನ್ನಾಗಿ ಮಾಡಿ; ಅವರಿಗೆ ತಂದೆ, ಮಗ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿರಿ. ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ" ಎಂದು ಹೇಳಿದನು.
ನೀವು ಶೂರರಾಗಿ ಧೈರ್ಯದಿಂದ ಇರಿ; ಅವರಿಗೆ ಅಂಜಬೇಡಿರಿ, ಕಳವಳಪಡಬೇಡಿರಿ. ನಿಮ್ಮ ದೇವರಾದ ಯೆಹೋವನೇ ನಿಮ್ಮ ಸಂಗಡ ಇರುತ್ತಾನಲ್ಲಾ; ಆತನು ನಿಮ್ಮನ್ನು ಕೈಬಿಡುವುದಿಲ್ಲ, ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ" ಎಂದು ಹೇಳಿದನು.
ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಸೇರಬೇಕಾದ ಸಮಾಧಿಯಲ್ಲಿ ಯಾವ ಕೆಲಸವೂ, ಯುಕ್ತಿಯೂ, ತಿಳಿವಳಿಕೆಯೂ, ಜ್ಞಾನವೂ ಇರುವುದಿಲ್ಲ.
ನಿನ್ನ ಮಗ್ಗುಲಲ್ಲಿ ಸಾವಿರ ಜನರು,
ನಿನ್ನ ಬಲಗಡೆಯಲ್ಲಿ ಹತ್ತು ಸಾವಿರ ಜನರು ಸತ್ತು ಬಿದ್ದರೂ ನಿನಗೇನೂ ತಟ್ಟದು.
ಏನು ಊಟ ಮಾಡಬೇಕು? ಏನು ಕುಡಿಯಬೇಕು? ಎಂದು ತವಕಪಟ್ಟು ಚಿಂತಿಸಬೇಡಿರಿ. ಇವೆಲ್ಲವುಗಳ ಕುರಿತು ಇಹಲೋಕದ ಜನಗಳು ಅಲೆದಾಡುತ್ತಾರೆ. ಇವು ನಿಮಗೆ ಅವಶ್ಯವೆಂದು ನಿಮ್ಮ ತಂದೆಗೆ ತಿಳಿದಿದೆ.
ಇದಲ್ಲದೆ ನಾವು ನಿಮ್ಮ ಸಂಗಡ ಇದ್ದಾಗ, "ಕೆಲಸ ಮಾಡಲೊಲ್ಲದವನು ಊಟಮಾಡಬಾರದು" ಎಂದು ನಿಮಗೆ ಆಜ್ಞಾಪಿಸಿದೆವಷ್ಟೆ. ಆದರೆ ನಿಮ್ಮಲ್ಲಿ ಕೆಲವರು ಯಾವ ಕೆಲಸವನ್ನೂ ಮಾಡದೆ, ಇತರರ ವಿಷಯದಲ್ಲಿ ಮಾತ್ರ ತಲೆ ಹಾಕಿ ಸೋಮಾರಿಯಾಗಿ ನಡೆಯುತ್ತಾರೆಂಬ ಸುದ್ದಿಯನ್ನು ಕೇಳಿದ್ದೇವೆ. ಇಂಥವರು ತಮ್ಮ ಕೆಲಸಕಾರ್ಯಗಳನ್ನು ನೋಡುತ್ತಾ ತಾವೇ ಸಂಪಾದಿಸಿದ್ದನ್ನು ಊಟಮಾಡಬೇಕೆಂದು ಕರ್ತನಾದ ಯೇಸು ಕ್ರಿಸ್ತನಲ್ಲಿ ನಾವು ಆಜ್ಞಾಪಿಸಿ ಬುದ್ಧಿ ಹೇಳುತ್ತೇವೆ. ಸಹೋದರರೇ, ನೀವಾದರೋ ಒಳ್ಳೆಯದನ್ನು ಮಾಡುವುದರಲ್ಲಿ ಬೇಸರಗೊಳ್ಳಬೇಡಿರಿ.