Mudança de vida
A mudança de vida é possível em Cristo. Não importa o passado, qual foi o erro ou quão fundo a queda — Deus renova, restaura e transforma completamente aquele que se volta para Ele.
Nova vida em Cristo
Se alguém está em Cristo, nova criação é. Deus nos dá coração novo, mente renovada e esperança para o futuro.
ಆದ್ದರಿಂದ ಯಾರಾದರೂ ಕ್ರಿಸ್ತ ಯೇಸುವಿನಲ್ಲಿದ್ದರೆ, ಅವರು ನೂತನ ಸೃಷ್ಟಿಯಾಗಿದ್ದಾರೆ: ಹಳೆಯದೆಲ್ಲವೂ ಹೋಗಿ ಅವರಿಗೆ ಹೊಸ ಸೃಷ್ಟಿಯು ಬರುವುದು.
ಓ ದೇವರೇ, ಶುದ್ಧ ಹೃದಯವನ್ನು ನನ್ನಲ್ಲಿ ಸೃಷ್ಟಿಮಾಡಿರಿ,
ಸ್ಥಿರವಾದ ಆತ್ಮವನ್ನು ನನ್ನಲ್ಲಿ ನವೀಕರಿಸಿರಿ.
ನಿಮ್ಮ ಸನ್ನಿಧಿಯಿಂದ ನನ್ನನ್ನು ಹೊರ ದೂಡಬೇಡಿರಿ;
ನಿಮ್ಮ ಪರಿಶುದ್ಧಾತ್ಮರನ್ನು ನನ್ನಿಂದ ತೆಗೆಯಬೇಡಿರಿ.
ನಿಮ್ಮ ರಕ್ಷಣೆಯ ಆನಂದವನ್ನು ನನಗೆ ಪುನಃ ಸ್ಥಾಪಿಸಿರಿ;
ನನಗೆ ಸಿದ್ಧ ಆತ್ಮವನ್ನು ನೀಡಿ, ನನ್ನನ್ನು ಬೆಂಬಲಿಸಿರಿ.
ಸಜೀವ ಯಜ್ಞಗಳು
ಆದ್ದರಿಂದ, ಪ್ರಿಯರೇ ದೇವರ ಕರುಣೆಯಿಂದ ಬೇಡಿಕೊಳ್ಳುವುದೇನೆಂದರೆ, ನೀವು ನಿಮ್ಮ ದೇಹಗಳನ್ನು ದೇವರಿಗೆ ಪರಿಶುದ್ಧವೂ ಮೆಚ್ಚುಗೆಯೂ ಆಗಿರುವ ಸಜೀವ ಯಜ್ಞವಾಗಿ ಸಮರ್ಪಿಸಿರಿ. ಇದೇ ನಿಮ್ಮ ವಿವೇಕ ಪೂರ್ವಕವಾದ ಆರಾಧನೆಯು. ಈ ಲೋಕದ ನಡುವಳಿಕೆಯನ್ನು ಹೊಂದಿಕೊಳ್ಳದೇ, ನಿಮ್ಮ ಮನಸ್ಸನ್ನು ರೂಪಾಂತರಿಸಿಕೊಂಡು ನವೀಕರಿಸಿಕೊಳ್ಳಿರಿ. ಆಗ ನೀವು ಉತ್ತಮವಾದ, ಮೆಚ್ಚುಗೆಯಾಗಿರುವಂಥ ಮತ್ತು ಪರಿಪೂರ್ಣವಾದ ದೇವರ ಚಿತ್ತ ಯಾವುದು ಎಂಬುದನ್ನು ತಿಳಿದುಕೊಳ್ಳುವಿರಿ.
ಕ್ರಿಸ್ತ ಯೇಸುವಿನೊಂದಿಗೆ ನಾನೂ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ. ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತ ಯೇಸುವೇ ನನ್ನಲ್ಲಿ ಜೀವಿಸುತ್ತಾರೆ. ನನ್ನನ್ನು ಪ್ರೀತಿಸಿ ನನಗೋಸ್ಕರ ತಮ್ಮನ್ನೇ ಒಪ್ಪಿಸಿಕೊಟ್ಟ ದೇವಪುತ್ರ ಆಗಿರುವವರ ನಂಬಿಕೆಯಲ್ಲಿಯೇ ಈಗ ನಾನು ಈ ಶರೀರದಲ್ಲಿ ಜೀವಿಸುತ್ತಿದ್ದೇನೆ.
Passos para a transformação
A mudança começa com confissão, fé e decisão. Deus é fiel para perdoar e completar a boa obra que começou em nós.
ನಾವು ನಮ್ಮ ಪಾಪಗಳನ್ನು ದೇವರಿಗೆ ಅರಿಕೆಮಾಡಿದರೆ ಅವರು ನಂಬಿಗಸ್ತರೂ ನೀತಿವಂತರೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ, ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವರು.
ನಾನು ನಿಮ್ಮನ್ನು ಕುರಿತು ಮಾಡುವ ಯೋಜನೆಗಳನ್ನು ಬಲ್ಲೆನು. ಅವು ಕೇಡಿಗಲ್ಲ, ಹಿತಕ್ಕಾಗಿರುವ ಯೋಜನೆಗಳು. ನಿಮಗೆ ಭವಿಷ್ಯವನ್ನೂ, ನಿರೀಕ್ಷೆಯನ್ನೂ ಕೊಡುವುದಕ್ಕಿವೆ.
ಯಾವ ವಿಷಯವಾಗಿಯೂ ಚಿಂತೆ ಮಾಡದೆ, ಸರ್ವ ವಿಷಯದಲ್ಲಿ ಕೃತಜ್ಞತಾಸ್ತುತಿಯೊಡನೆ ಪ್ರಾರ್ಥನೆ ವಿಜ್ಞಾಪನೆಗಳನ್ನು ಮಾಡುತ್ತಾ ನಿಮ್ಮ ಬೇಡಿಕೆಯನ್ನು ದೇವರಿಗೆ ಸಮರ್ಪಿಸಿರಿ. ಆಗ ಎಲ್ಲಾ ಗ್ರಹಿಕೆಯನ್ನೂ ಮೀರುವ ದೇವರ ಸಮಾಧಾನವು ನಿಮ್ಮ ಹೃದಯಗಳನ್ನೂ ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಯುವುದು.
ನೀನು ನಾಚಿಕೆಗೆ ಒಳಪಡದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ಬೋಧಿಸುವವನೂ ಆಗಿರುವಂತೆ ನಿನ್ನನ್ನು ದೇವರಿಗೆ ಮೆಚ್ಚಿಕೆಯಾದವನಾಗಿರಲು ಸಮರ್ಪಿಸಲು ಅತ್ಯಂತ ಆಸಕ್ತನಾಗಿರು.
Coragem para mudar
Não temas, porque Deus está contigo. Ele nos fortalece para sermos sal da terra e nos dá palavras que edificam e transformam.
ಶಕ್ತಿಶಾಲಿಗಳಾಗಿರಿ, ಧೈರ್ಯವಾಗಿರಿ, ಭಯಪಡಬೇಡಿರಿ, ಅವರಿಗೆ ಹೆದರಬೇಡಿರಿ. ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ತಾವೇ ನಿಮ್ಮ ಮುಂದೆ ಹೋಗುತ್ತಾರೆ. ಅವರು ನಿಮ್ಮನ್ನು ಕೈಬಿಡುವುದಿಲ್ಲ, ತೊರೆಯುವುದೂ ಇಲ್ಲ."
ಉಪ್ಪು ಮತ್ತು ಬೆಳಕು
"ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ಸಪ್ಪಗಾದರೆ, ಅದಕ್ಕೆ ಉಪ್ಪಿನ ರುಚಿ ಹೇಗೆ ಬಂದೀತು? ಅದು ಹೊರಗೆ ಹಾಕಿ ತುಳಿಯುವುದಕ್ಕೆ ಯೋಗ್ಯವೇ ಹೊರತು ಬೇರೆ ಯಾವ ಕೆಲಸಕ್ಕೂ ಬರುವುದಿಲ್ಲ.
ನಿಮ್ಮ ಬಾಯೊಳಗಿಂದ ಯಾವ ಕೆಟ್ಟಮಾತೂ ಹೊರಡದಿರಲಿ. ಕೇಳುವವರಿಗೆ ಆತ್ಮಿಕ ಹಿತವನ್ನುಂಟು ಮಾಡಿ, ಇತರರಿಗೆ ಅವಶ್ಯವಿರುವ ಮಾತುಗಳನ್ನು ಮಾತ್ರ ಆಡಿರಿ.
ಆದ್ದರಿಂದ ನಾವು ಅಧೈರ್ಯಪಡುವುದಿಲ್ಲ. ನಮ್ಮ ಹೊರಗಿನ ಮನುಷ್ಯ ಕ್ಷಯಿಸುತ್ತಿದ್ದರೂ ನಮ್ಮ ಆಂತರ್ಯ ಮನುಷ್ಯ ಅನುದಿನವೂ ನೂತನವಾಗುತ್ತಿದೆ. ಹಗುರವಾಗಿಯೂ ಕ್ಷಣಿಕವಾಗಿಯೂ ಇರುವ ನಮ್ಮ ಸಂಕಟವು ಅತ್ಯಂತ ಘನತೆಯುಳ್ಳ ನಿತ್ಯ ಮಹಿಮೆಯನ್ನು ನಮಗೆ ದೊರಕಿಸಿಕೊಡುವುದು. ಆದ್ದರಿಂದ ನಮ್ಮ ದೃಷ್ಟಿಯು ದೃಶ್ಯ ಸಂಗತಿಗಳ ಮೇಲಿರದೆ, ಅದೃಶ್ಯವಾದವುಗಳ ಮೇಲೆ ಇವೆ. ಕಾಣುವವುಗಳು ತಾತ್ಕಾಲಿಕವಾದವುಗಳು. ಆದರೆ ಕಾಣದಿರುವಂಥದ್ದು ನಿತ್ಯವಾಗಿರುವುದು.