A mulher virtuosa
A mulher virtuosa de Provérbios 31 é um retrato de excelência. Seu valor excede o de rubis — ela é sábia, trabalhadora, generosa e teme ao Senhor acima de tudo.
Uma joia rara
Mulher virtuosa, quem a achará? Seu valor excede o de rubis. Ela é o coração da família e a força do lar.
ಗುಣವತಿಯಾದ ಸತಿ
ಗುಣವತಿಯಾದ ಸತಿಯು ಎಲ್ಲಿ ಸಿಕ್ಕುವಳು?
ಆಕೆಯು ಹವಳಕ್ಕಿಂತಲೂ ಬಹೂ ಅಮೂಲ್ಯಳು.
ಗುಣವತಿಯಾದ ಸತಿ
ಗುಣವತಿಯಾದ ಸತಿಯು ಎಲ್ಲಿ ಸಿಕ್ಕುವಳು?
ಆಕೆಯು ಹವಳಕ್ಕಿಂತಲೂ ಬಹೂ ಅಮೂಲ್ಯಳು.
ಪತಿಯ ಹೃದಯವು ಆಕೆಯಲ್ಲಿ ಭರವಸವಿಡುವುದು,
ಅವನು ಕೊಳ್ಳೆ ಕೊಳ್ಳೆಯಾಗಿ ಸಂಪಾದಿಸುವನು.
ಆಕೆಯು ಜೀವಮಾನದಲ್ಲೆಲ್ಲಾ ಅವನಿಗೆ ಅಹಿತವನ್ನು ಮಾಡದೆ,
ಹಿತವನ್ನೇ ಮಾಡುತ್ತಿರುವಳು.
ಉಣ್ಣೆಯನ್ನೂ, ಸೆಣಬನ್ನೂ ಹುಡುಕಿ ತಂದು,
ಕೈಕೆಲಸವನ್ನು ಆಸಕ್ತಿಯಿಂದ ಮಾಡುವಳು.
ವ್ಯಾಪಾರದ ಹಡಗುಗಳಂತೆ,
ದೂರದಿಂದ ಬೇಕಾದ ಆಹಾರವನ್ನು ತರುವಳು.
ಇನ್ನೂ ಕತ್ತಲಿರುವಾಗಲೇ ಎದ್ದು,
ಮನೆಯವರಿಗೆ ಆಹಾರವನ್ನು, ನೀಡುವಳು
ದಾಸಿಯರಿಗೆ ದಿನದ ಕೆಲಸಗಳನ್ನು ಹಂಚುವಳು.
ಹೊಲವನ್ನು ನೋಡಿ ಯೋಚಿಸಿ ಕೊಂಡುಕೊಳ್ಳುವಳು,
ತನ್ನ ಕೈಗೆಲಸದ ಲಾಭದಿಂದ ದ್ರಾಕ್ಷಿತೋಟವನ್ನು ಮಾಡಿಸುವಳು.
ನಡುವಿನ ಬಲವೆಂಬ ಪಟ್ಟಿಯನ್ನು ಕಟ್ಟಿಕೊಂಡು,
ತೋಳುಗಳನ್ನು ಶಕ್ತಿಗೊಳಿಸುವಳು.
ವಿವೇಚಿಸಿ ಬಹುಲಾಭವಾಯಿತೆಂದು ತಿಳುಕೊಳ್ಳುವಳು,
ಆಕೆಯ ದೀಪವು ರಾತ್ರಿಯಲ್ಲೆಲ್ಲಾ ಆರದು.
ರಾಟೆಯ ಮೇಲೆ ಕೈ ಹಾಕಿ,
ಕದರನ್ನು ಹಿಡಿಯುವಳು.
ಬಡವರಿಗಾಗಿ ಕೈ ಬಿಚ್ಚಿ,
ದಿಕ್ಕಿಲ್ಲದವರಿಗೆ ಕೈ ನೀಡುವಳು.
ಗುಣವತಿಯಾದ ಸ್ತ್ರೀಯು ಪತಿಯ ತಲೆಗೆ ಕಿರೀಟ,
ಮಾನ ಕಳೆಯುವವಳು ಪತಿಯ ಎಲುಬಿಗೆ ಕ್ಷಯ.
ನನ್ನ ಮಗಳೇ, ಈಗ ಭಯಪಡಬೇಡ. ನೀನು ಗುಣವಂತೆಯೆಂಬುದು ಊರಿನವರಿಗೆಲ್ಲಾ ತಿಳಿದಿದೆ; ಆದ್ದರಿಂದ ನೀನು ಹೇಳಿದ್ದನ್ನೆಲ್ಲಾ ಮಾಡುವೆನು.
Caráter acima da aparência
Enganosa é a graça e vã é a formosura, mas a mulher que teme ao Senhor será louvada. A verdadeira beleza é interior.
ಸೌಂದರ್ಯವು ನೆಚ್ಚತಕ್ಕದ್ದಲ್ಲ, ಲಾವಣ್ಯವು ನೆಲೆಯಲ್ಲ,
ಯೆಹೋವನಲ್ಲಿ ಭಯಭಕ್ತಿಯುಳ್ಳವಳೇ ಸ್ತೋತ್ರಪಾತ್ರಳು.
ಹಾಗೆಯೇ ಸ್ತ್ರೀಯರು ಮಾನಸ್ಥೆಯರಾಗಿಯೂ, ಸಭ್ಯತೆಯುಳ್ಳವರಾಗಿಯೂ ಇದ್ದು, ಗೌರವಕ್ಕೆ ತಕ್ಕ ಉಡುಪನ್ನೂ ಧರಿಸಿಕೊಳ್ಳಬೇಕೆಂದು ಅಪೇಕ್ಷಿಸುತ್ತೇನೆ. ಅವರು ಜಡೆಯನ್ನು ಹೆಣೆಯುವುದು, ಚಿನ್ನ, ಮುತ್ತು, ಬೆಲೆಯುಳ್ಳ ವಸ್ತ್ರ ಮುಂತಾದವುಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳದೆ ದೇವಭಕ್ತೆಯರೆನಿಸಿಕೊಳ್ಳುವ ಸ್ತ್ರೀಯರಿಗೆ ಯುಕ್ತವಾಗಿರುವ ಪ್ರಕಾರ ಸತ್ಕ್ರಿಯೆಗಳಿಂದಲೇ ಅಲಂಕರಿಸಿಕೊಳ್ಳಬೇಕು.
ಜ್ಞಾನವಂತೆಯು ತನ್ನ ಮನೆಯನ್ನು ಕಟ್ಟಿಕೊಳ್ಳುವಳು,
ಜ್ಞಾನಹೀನಳು ಅದನ್ನು ಸ್ವಂತ ಕೈಯಿಂದ ನಾಶಮಾಡುವಳು.
ಮನೆಮಾರು, ಆಸ್ತಿಪಾಸ್ತಿಯು ಪೂರ್ವಿಕರಿಂದ ದೊರಕುವವು,
ವಿವೇಕಿನಿಯಾದ ಹೆಂಡತಿಯು ಯೆಹೋವನ ಅನುಗ್ರಹವೇ.
ಹಾಗೆಯೇ, ವೃದ್ಧ ಸ್ತ್ರೀಯರು ಚಾಡಿಹೇಳುವವರೂ ಮದ್ಯಕ್ಕೆ ಅಧೀನರು ಆಗಿರದೆ ದೇವಭಕ್ತೆಯರಿಗೆ ಯೋಗ್ಯವಾದ ನಡತೆಯುಳ್ಳವರೂ, ಸದ್ಬೋಧಕಿಯರು ಆಗಿರಬೇಕು. ಇದಲ್ಲದೆ, ವೃದ್ಧ ಸ್ತ್ರೀಯರು ಪ್ರಾಯದ ಸ್ತ್ರೀಯರಿಗೆ ಮಾದರಿಯಾಗಿ, ತಮ್ಮ ಮೂಲಕ ದೇವರ ವಾಕ್ಯಕ್ಕೆ ದೂಷಣೆಯಾಗದಂತೆ ನಡೆದುಕೊಳ್ಳುವಂತೆ ತಿಳಿಸು. ಪ್ರಾಯದಸ್ತ್ರಿಯರು ಗಂಡಂದಿರನ್ನೂ, ಮಕ್ಕಳನ್ನೂ ಪ್ರೀತಿಸುವವರೂ, ವಿವೇಕವುಳ್ಳವರೂ, ಕ್ಷಮಾಶಿಲರೂ, ಪತಿವ್ರತೆಯರೂ ಸ್ವಂತಮನೆಗಾಗಿ ಕೆಲಸಮಾಡುವವರೂ, ಸುಶೀಲೆಯರೂ ಆಗಿ ತಮ್ಮ ಗಂಡಂದಿರಿಗೆ ವಿಧೇಯರಾಗಿರಬೇಕೆಂದು ಬುದ್ಧಿಹೇಳಬೇಕೆಂದು ನೀನು ವೃದ್ಧ ಸ್ತ್ರೀಯರಿಗೆ ಬೋಧಿಸು.