A mulher virtuosa
A mulher virtuosa de Provérbios 31 é um retrato de excelência. Seu valor excede o de rubis — ela é sábia, trabalhadora, generosa e teme ao Senhor acima de tudo.
Uma joia rara
Mulher virtuosa, quem a achará? Seu valor excede o de rubis. Ela é o coração da família e a força do lar.
ಗುಣವತಿಯಾದ ಹೆಂಡತಿ ಎಲ್ಲಿ ಸಿಕ್ಕಾಳು?
ಅವಳು ಹವಳಕ್ಕಿಂತಲೂ ಬಹು ಅಮೂಲ್ಯಳು.
ಗುಣವತಿಯಾದ ಹೆಂಡತಿ ಎಲ್ಲಿ ಸಿಕ್ಕಾಳು?
ಅವಳು ಹವಳಕ್ಕಿಂತಲೂ ಬಹು ಅಮೂಲ್ಯಳು.
ಅವಳ ಪತಿಯ ಹೃದಯವು ಅವಳಲ್ಲಿ ಭರವಸೆ ಇಡುತ್ತದೆ,
ಅವನಿಗೆ ಯಾವ ಆದಾಯದ ಕೊರತೆಯೂ ಇರುವುದಿಲ್ಲ.
ತನ್ನ ಜೀವಮಾನದಲ್ಲೆಲ್ಲಾ ಆಕೆಯು ಅವನಿಗೆ ಕೆಟ್ಟದ್ದನ್ನಲ್ಲ,
ಒಳ್ಳೆಯದನ್ನೇ ಮಾಡುವಳು.
ಆಕೆಯು ಉಣ್ಣೆಯನ್ನೂ ಸೆಣಬನ್ನೂ ತಂದು,
ತನ್ನ ಚಟುವಟಿಕೆಯ ಕೈಗಳಿಂದ ಕೆಲಸ ಮಾಡುವಳು.
ಆಕೆಯು ವರ್ತಕರ ಹಡಗುಗಳಂತೆ ಇರುವಳು;
ದೂರದಿಂದ ಆಹಾರವನ್ನು ಆಕೆಯು ತರುವಳು.
ಇನ್ನೂ ಕತ್ತಲಿರುವಾಗಲೇ ಆಕೆಯು ಏಳುವಳು;
ತನ್ನ ಮನೆಯವರಿಗೆ ಆಹಾರವನ್ನು ಕೊಟ್ಟು,
ತನ್ನ ದಾಸಿಯರಿಗೆ ದಿನದ ಕೆಲಸವನ್ನು ಹಂಚುವಳು.
ಆಕೆಯು ಹೊಲವನ್ನು ನೋಡಿ, ಅದನ್ನು ಕೊಂಡುಕೊಳ್ಳುತ್ತಾಳೆ.
ತನ್ನ ಕೈಕೆಲಸದ ಆದಾಯದಿಂದ ದ್ರಾಕ್ಷಾಲತೆಗಳನ್ನು ನೆಡುತ್ತಾಳೆ.
ಆಕೆಯು ನಡುಕಟ್ಟಿ ಆಸಕ್ತಿಯಿಂದ ಕೆಲಸ ಮಾಡುತ್ತಾಳೆ.
ತನ್ನ ಶಕ್ತಿಯುತ ತೋಳುಗಳಿಂದ ಕೆಲಸ ಮಾಡುತ್ತಾಳೆ.
ತನ್ನ ವ್ಯಾಪಾರವು ಲಾಭದಾಯಕವೆಂದು ಅವಳು ನೋಡುತ್ತಾಳೆ.
ಆಕೆಯ ದೀಪವು ರಾತ್ರಿಯಲ್ಲೆಲ್ಲಾ ಆರದು.
ಅವಳು ರಾಟೆಯ ಮೇಲೆ ಕೈಹಾಕಿ,
ಕದಿರನ್ನು ಹಿಡಿಯುತ್ತಾಳೆ.
ಆಕೆಯು ಬಡವರಿಗಾಗಿ ಕೈ ಬಿಚ್ಚಿ ಕೊಡುತ್ತಾಳೆ.
ಹೌದು, ದಿಕ್ಕಿಲ್ಲದವರಿಗೆ ದಾನ ಮಾಡುತ್ತಾಳೆ.
ಗುಣವತಿಯಾದ ಸ್ತ್ರೀಯು ತನ್ನ ಪತಿಗೆ ಕಿರೀಟ;
ಆದರೆ ನಾಚಿಕೆ ಪಡಿಸುವವಳು ಅವನ ಎಲುಬುಗಳಿಗೆ ಕ್ಷಯ ರೋಗದಂತೆ ಇರುವಳು.
ಈಗ ನನ್ನ ಮಗಳೇ, ನೀನು ಭಯಪಡಬೇಡ. ನಿನಗೆ ಬೇಕಾಗಿರುವುದನ್ನು ನಿನಗೆ ಮಾಡುವೆನು. ನೀನು ಗುಣವತಿಯಾದ ಸ್ತ್ರೀ ಎಂದು ಪಟ್ಟಣದಲ್ಲಿರುವ ನನ್ನ ಜನರೆಲ್ಲರೂ ಬಲ್ಲರು.
Caráter acima da aparência
Enganosa é a graça e vã é a formosura, mas a mulher que teme ao Senhor será louvada. A verdadeira beleza é interior.
ಸೌಂದರ್ಯವು ಮೋಸಕರವಾದದ್ದು, ಸೌಂದರ್ಯವು ಶಾಶ್ವತವಲ್ಲ.
ಆದರೆ ಯೆಹೋವ ದೇವರಿಗೆ ಭಯಪಡುವವಳೇ ಪ್ರಶಂಸನೀಯಳು.
ಹಾಗೆಯೇ ಸ್ತ್ರೀಯರು ಸಭ್ಯತೆ ಹಾಗೂ ಸ್ವಸ್ಥಬುದ್ಧಿಯುಳ್ಳವರಾಗಿದ್ದು ಗೌರವಕ್ಕೆ ತಕ್ಕ ಉಡುಪನ್ನುಟ್ಟುಕೊಳ್ಳಬೇಕೆಂದು ಅಪೇಕ್ಷಿಸುತ್ತೇನೆ. ಅವರು ಜಡೆ, ಚಿನ್ನ, ಮುತ್ತುಗಳು, ಬೆಲೆಯುಳ್ಳ ವಸ್ತ್ರ ಇವುಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳದೆ, ದೇವ ಭಕ್ತೆಯರೆನಿಸಿಕೊಳ್ಳುವ ಸ್ತ್ರೀಯರಿಗೆ ತಕ್ಕಂತೆ ಸತ್ಕ್ರಿಯೆಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳಬೇಕು.
ಜ್ಞಾನಿಯಾದ ಸ್ತ್ರೀಯು ತನ್ನ ಮನೆಯನ್ನು ಕಟ್ಟುತ್ತಾಳೆ;
ಬುದ್ಧಿಹೀನಳೋ ತನ್ನ ಕೈಗಳಿಂದಲೇ ಅದನ್ನು ಕಿತ್ತುಹಾಕುತ್ತಾಳೆ.
ಮನೆಯೂ ಸಂಪತ್ತೂ ಪಿತೃಗಳ ಸ್ವಾಸ್ತ್ಯವು;
ವಿವೇಕಿಯಾದ ಹೆಂಡತಿಯು ಯೆಹೋವ ದೇವರಿಂದಲೇ.
ಅದೇ ಪ್ರಕಾರ, ವೃದ್ಧಸ್ತ್ರೀಯರು ನಡತೆಯಲ್ಲಿ ಭಕ್ತಿಗೆ ತಕ್ಕ ಹಾಗೆ ಇರುವವರಾಗಿರಬೇಕು. ಅವರು ಸುಳ್ಳಾಗಿ ದೂರುವವರೂ ಮದ್ಯಾಸಕ್ತರೂ ಆಗಿರದೆ, ಒಳ್ಳೆಯವುಗಳನ್ನು ಬೋಧಿಸುವವರಾಗಿರಬೇಕು ಎಂದು ಅವರಿಗೆ ಉಪದೇಶಿಸು. ಇದಲ್ಲದೆ ದೇವರ ವಾಕ್ಯವು ದೂಷಣೆಯಾಗದಂತೆ ಯೌವನ ಸ್ತ್ರೀಯರು ತಮ್ಮ ಗಂಡಂದಿರನ್ನು ಮತ್ತು ಮಕ್ಕಳನ್ನು ಪ್ರೀತಿಸುವವರೂ ಸ್ವಶಿಸ್ತನ್ನು ಹೊಂದಿದವರೂ ಪತಿವ್ರತೆಯರೂ ಮನೆಯಲ್ಲಿ ಕೆಲಸ ಮಾಡುವವರೂ ದಯೆವುಳ್ಳವರೂ ತಮ್ಮ ಗಂಡಂದಿರಿಗೆ ಅಧೀನರೂ ಆಗಿರಬೇಕೆಂದು ವೃದ್ಧಸ್ತ್ರೀಯರಿಂದ ಕಲಿತುಕೊಳ್ಳಿರಿ.