Mulher
A Bíblia celebra a mulher como obra-prima da criação divina. Ela é elogiada por sua sabedoria, força, beleza interior e papel fundamental na família e na sociedade.
A mulher na criação
Deus criou o homem e a mulher à sua imagem. A mulher foi formada como ajudadora idônea — parceira de igual dignidade e valor.
ಹೀಗೆ ದೇವರು;
"ಮನುಷ್ಯನನ್ನು ತನ್ನ ಸ್ವರೂಪದಲ್ಲಿ
ಉಂಟುಮಾಡಿದನು.
ದೇವರ ಸ್ವರೂಪದಲ್ಲಿ ಅವನನ್ನು
ಉಂಟುಮಾಡಿದನು.
ಅವರನ್ನು ಗಂಡುಹೆಣ್ಣಾಗಿ ಸೃಷ್ಟಿ ಮಾಡಿದನು."
ಹೀಗಿರುವಲ್ಲಿ ಯೆಹೋವನಾದ ದೇವರು ಆ ಮನುಷ್ಯನಿಗೆ ಗಾಢನಿದ್ರೆಯನ್ನು ಬರಮಾಡಿ ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತೆಗೆದುಕೊಂಡು ಅದರ ಸ್ಥಳವನ್ನು ಮಾಂಸದಿಂದ ತುಂಬಿದನು. ಯೆಹೋವನು ಮನುಷ್ಯನಿಂದ ತೆಗೆದ ಎಲುಬನ್ನು, ಸ್ತ್ರೀಯನ್ನಾಗಿ ಮಾಡಿ ಆಕೆಯನ್ನು ಅವನ ಬಳಿಗೆ ಕರೆದುಕೊಂಡು ಬಂದನು. ಅವನು ಆಕೆಯನ್ನು ನೋಡಿ,
"ಈಗ ಸರಿ, ಈಕೆಯು ನನ್ನ ಎಲುಬುಗಳಿಂದ ಬಂದ ಎಲುಬು,
ನನ್ನ ಮಾಂಸದಿಂದ ಬಂದ ಮಾಂಸವೂ ಆಗಿದ್ದಾಳೆ.
ಈಕೆಯು ಮನುಷ್ಯನಿಂದ ಉತ್ಪತ್ತಿಯಾದ ಕಾರಣ ನಾರೀ ಎನ್ನಿಸಿಕೊಳ್ಳುವಳು" ಅಂದನು.
Virtude e caráter
A beleza é vã e a formosura passageira, mas a mulher que teme ao Senhor é digna de louvor. Seu caráter é seu maior tesouro.
ಸೌಂದರ್ಯವು ನೆಚ್ಚತಕ್ಕದ್ದಲ್ಲ, ಲಾವಣ್ಯವು ನೆಲೆಯಲ್ಲ,
ಯೆಹೋವನಲ್ಲಿ ಭಯಭಕ್ತಿಯುಳ್ಳವಳೇ ಸ್ತೋತ್ರಪಾತ್ರಳು.
ಜ್ಞಾನವಂತೆಯು ತನ್ನ ಮನೆಯನ್ನು ಕಟ್ಟಿಕೊಳ್ಳುವಳು,
ಜ್ಞಾನಹೀನಳು ಅದನ್ನು ಸ್ವಂತ ಕೈಯಿಂದ ನಾಶಮಾಡುವಳು.
ಗುಣವತಿಯಾದ ಸ್ತ್ರೀಯು ಪತಿಯ ತಲೆಗೆ ಕಿರೀಟ,
ಮಾನ ಕಳೆಯುವವಳು ಪತಿಯ ಎಲುಬಿಗೆ ಕ್ಷಯ.
ದಯಾಳುವಾದ ಹೆಂಗಸು ಗೌರವವನ್ನು ಪಡೆಯುವಳು,
ಬಲಾತ್ಕಾರಿಗಳು ಧನವನ್ನು ಮಾತ್ರ ಕೂಡಿಸಿಕೊಳ್ಳುವರು.
ಮನೆಮಾರು, ಆಸ್ತಿಪಾಸ್ತಿಯು ಪೂರ್ವಿಕರಿಂದ ದೊರಕುವವು,
ವಿವೇಕಿನಿಯಾದ ಹೆಂಡತಿಯು ಯೆಹೋವನ ಅನುಗ್ರಹವೇ.
ಕಾಡುವ ಜಗಳಗಂಟಿಯ ಸಹವಾಸಕ್ಕಿಂತಲೂ,
ಕಾಡಿನ ವಾಸವೇ ಲೇಸು.
ನನ್ನ ಮಗಳೇ, ಈಗ ಭಯಪಡಬೇಡ. ನೀನು ಗುಣವಂತೆಯೆಂಬುದು ಊರಿನವರಿಗೆಲ್ಲಾ ತಿಳಿದಿದೆ; ಆದ್ದರಿಂದ ನೀನು ಹೇಳಿದ್ದನ್ನೆಲ್ಲಾ ಮಾಡುವೆನು.
Sabedoria e serviço
As mulheres da Bíblia foram líderes, profetisas e discípulas fiéis. Jesus honrou as mulheres e as incluiu em seu ministério.
ಕೆಲವು ಸ್ತ್ರೀಯರು ಯೇಸುವನ್ನು ಹಿಂಬಾಲಿಸಿದ್ದು
ತರುವಾಯ ಯೇಸು ದೇವರ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಊರುಗಳಲ್ಲಿಯೂ ಗ್ರಾಮಗಳಲ್ಲಿಯೂ ಸಂಚರಿಸಿದನು. ಆತನ ಸಂಗಡ ಹನ್ನೆರಡು ಮಂದಿ ಶಿಷ್ಯರೂ, ದೆವ್ವಗಳ ಕಾಟದಿಂದಲೂ ರೋಗಗಳಿಂದಲೂ ಗುಣಹೊಂದಿದ ಕೆಲವು ಮಂದಿ ಹೆಂಗಸರು ಸಹ ಇದ್ದರು. ಈ ಹೆಂಗಸರು ಯಾರಾರೆಂದರೆ, ಏಳು ದುರಾತ್ಮಗಳಿಂದ ಬಿಡುಗಡೆ ಹೊಂದಿದ್ದ ಮಗ್ದಲದ ಮರಿಯಳು, ಹೆರೋದನ ಮನೆಯ ಮೇಲ್ವಿಚಾರಕನಾಗಿದ್ದ ಕೂಜನ ಹೆಂಡತಿ ಯೋಹಾನಳು, ಸುಸನ್ನಳು, ಇನ್ನು ಬೇರೆ ಅನೇಕರು. ಇವರು ತಮ್ಮ ಸ್ವಂತ ಆಸ್ತಿಯಿಂದ ಅವರಿಗೆ ಉಪಚಾರಮಾಡುತ್ತಿದ್ದರು.
ಸತಿಪತಿಯರು
ಅದೇ ರೀತಿಯಾಗಿ ಪತ್ನಿಯರೇ, ನಿಮ್ಮ ಪತಿಯರಿಗೆ ಅಧೀನರಾಗಿರಿ. ಅವರಲ್ಲಿ ಕೆಲವರು ದೇವರ ವಾಕ್ಯಕ್ಕೆ ಅವಿಧೇಯರಾಗಿದ್ದರೂ ನೀವು ನಿರ್ಮಲರಾಗಿಯೂ, ಗೌರವದಿಂದಲೂ ನಡೆದುಕೊಳ್ಳುವುದನ್ನು ಅವರು ನೋಡಿ ವಾಕ್ಯೋಪದೇಶವಿಲ್ಲದೆ ತಮ್ಮ ಪತ್ನಿಯರಾದ ನಿಮ್ಮ ಒಳ್ಳೆಯ ನಡತೆಗಳಿಂದಲೇ ಸನ್ಮಾರ್ಗಕ್ಕೆ ಬಂದಾರು.
ಅದೇ ರೀತಿಯಾಗಿ ಪತಿಯರೇ, ಸ್ತ್ರೀಯು ನಿಮ್ಮಗಿಂತ ಬಲಹೀನಳೆಂಬುದನ್ನು ತಿಳಿದುಕೊಂಡು, ನಿಮ್ಮ ಪತ್ನಿಯರ ಸಂಗಡ ವಿವೇಕದಿಂದ ನಡೆದುಕೊಳ್ಳಿರಿ, ಅವರು ನಿತ್ಯಜೀವ ವರಕ್ಕೆ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಗೌರವವನ್ನು ಸಲ್ಲಿಸಿರಿ. ಹೀಗೆ ಮಾಡಿದರೆ ನಿಮ್ಮ ಪ್ರಾರ್ಥನೆಗಳಿಗೆ ಅಡಚಣೆ ಉಂಟಾಗುವುದಿಲ್ಲ.
ಹಾಗೆಯೇ ಸಭಾಸೇವಕಿಯರಾದ ಸ್ತ್ರೀಯರೂ ಗೌರವವುಳ್ಳವರಾಗಿರಬೇಕು, ಚಾಡಿಹೇಳುವವರಾಗಿರದೆ, ಸ್ವಸ್ಥಬುದ್ಧಿಯುಳ್ಳವರೂ, ಎಲ್ಲಾ ವಿಷಯಗಳಲ್ಲಿ ನಂಬಿಗಸ್ತರಾಗಿಯೂ ಇರಬೇಕು.
ಹಾಗೆಯೇ, ವೃದ್ಧ ಸ್ತ್ರೀಯರು ಚಾಡಿಹೇಳುವವರೂ ಮದ್ಯಕ್ಕೆ ಅಧೀನರು ಆಗಿರದೆ ದೇವಭಕ್ತೆಯರಿಗೆ ಯೋಗ್ಯವಾದ ನಡತೆಯುಳ್ಳವರೂ, ಸದ್ಬೋಧಕಿಯರು ಆಗಿರಬೇಕು. ಇದಲ್ಲದೆ, ವೃದ್ಧ ಸ್ತ್ರೀಯರು ಪ್ರಾಯದ ಸ್ತ್ರೀಯರಿಗೆ ಮಾದರಿಯಾಗಿ, ತಮ್ಮ ಮೂಲಕ ದೇವರ ವಾಕ್ಯಕ್ಕೆ ದೂಷಣೆಯಾಗದಂತೆ ನಡೆದುಕೊಳ್ಳುವಂತೆ ತಿಳಿಸು. ಪ್ರಾಯದಸ್ತ್ರಿಯರು ಗಂಡಂದಿರನ್ನೂ, ಮಕ್ಕಳನ್ನೂ ಪ್ರೀತಿಸುವವರೂ, ವಿವೇಕವುಳ್ಳವರೂ, ಕ್ಷಮಾಶಿಲರೂ, ಪತಿವ್ರತೆಯರೂ ಸ್ವಂತಮನೆಗಾಗಿ ಕೆಲಸಮಾಡುವವರೂ, ಸುಶೀಲೆಯರೂ ಆಗಿ ತಮ್ಮ ಗಂಡಂದಿರಿಗೆ ವಿಧೇಯರಾಗಿರಬೇಕೆಂದು ಬುದ್ಧಿಹೇಳಬೇಕೆಂದು ನೀನು ವೃದ್ಧ ಸ್ತ್ರೀಯರಿಗೆ ಬೋಧಿಸು.