Mulher
A Bíblia celebra a mulher como obra-prima da criação divina. Ela é elogiada por sua sabedoria, força, beleza interior e papel fundamental na família e na sociedade.
A mulher na criação
Deus criou o homem e a mulher à sua imagem. A mulher foi formada como ajudadora idônea — parceira de igual dignidade e valor.
ಹೀಗೆ ದೇವರು ಮನುಷ್ಯನನ್ನು ತಮ್ಮ ಸ್ವರೂಪದಲ್ಲಿ ಸೃಷ್ಟಿ ಮಾಡಿದರು.
ದೇವರ ಸ್ವರೂಪದಲ್ಲಿಯೇ ಅವರನ್ನು ಸೃಷ್ಟಿ ಮಾಡಿದರು.
ಅವರನ್ನು ಗಂಡು ಹೆಣ್ಣಾಗಿ ಸೃಷ್ಟಿ ಮಾಡಿದರು.
ಆದಕಾರಣ ಯೆಹೋವ ದೇವರು ಮನುಷ್ಯನಿಗೆ ಗಾಢನಿದ್ರೆ ಬರಮಾಡಿದರು. ಅವನು ನಿದ್ರಿಸುತ್ತಿರುವಾಗ, ಅವರು ಅವನ ಪಕ್ಕೆಯನ್ನು ತೆಗೆದುಕೊಂಡು, ಅದರ ಸ್ಥಳವನ್ನು ಮಾಂಸದಿಂದ ಮುಚ್ಚಿದರು. ಬಳಿಕ ಯೆಹೋವ ದೇವರು ಮನುಷ್ಯನಿಂದ ತೆಗೆದಿದ್ದ ಪಕ್ಕೆಯಿಂದ ಒಬ್ಬ ಸ್ತ್ರೀಯನ್ನು ಉಂಟುಮಾಡಿ, ಆಕೆಯನ್ನು ಆ ಮನುಷ್ಯನ ಬಳಿಗೆ ತಂದರು.
ಆಗ ಮನುಷ್ಯನು ಹೀಗೆ ಹೇಳಿದನು:
"ಇದು ನನ್ನ ಎಲುಬಿನಿಂದಾದ ಎಲುಬು
ಮತ್ತು ನನ್ನ ಮಾಂಸದಿಂದಾದ ಮಾಂಸವಾಗಿದೆ.
ಈಕೆ ನರನಿಂದ ತೆಗೆದಿರುವುದರಿಂದ,
ಈಕೆ, ‘ನಾರಿ’ ಎಂದು ಎನಿಸಿಕೊಳ್ಳುವಳು."
Virtude e caráter
A beleza é vã e a formosura passageira, mas a mulher que teme ao Senhor é digna de louvor. Seu caráter é seu maior tesouro.
ಸೌಂದರ್ಯವು ಮೋಸಕರವಾದದ್ದು, ಸೌಂದರ್ಯವು ಶಾಶ್ವತವಲ್ಲ.
ಆದರೆ ಯೆಹೋವ ದೇವರಿಗೆ ಭಯಪಡುವವಳೇ ಪ್ರಶಂಸನೀಯಳು.
ಜ್ಞಾನಿಯಾದ ಸ್ತ್ರೀಯು ತನ್ನ ಮನೆಯನ್ನು ಕಟ್ಟುತ್ತಾಳೆ;
ಬುದ್ಧಿಹೀನಳೋ ತನ್ನ ಕೈಗಳಿಂದಲೇ ಅದನ್ನು ಕಿತ್ತುಹಾಕುತ್ತಾಳೆ.
ಗುಣವತಿಯಾದ ಸ್ತ್ರೀಯು ತನ್ನ ಪತಿಗೆ ಕಿರೀಟ;
ಆದರೆ ನಾಚಿಕೆ ಪಡಿಸುವವಳು ಅವನ ಎಲುಬುಗಳಿಗೆ ಕ್ಷಯ ರೋಗದಂತೆ ಇರುವಳು.
ದಯೆಯುಳ್ಳ ಸ್ತ್ರೀಯು ತನ್ನ ಗೌರವವನ್ನು ಸಂಪಾದಿಸಿಕೊಳ್ಳುತ್ತಾಳೆ,
ನಿಷ್ಕರುಣ ವ್ಯಕ್ತಿ ಸಂಪತ್ತನ್ನು ಮಾತ್ರ ಪಡೆದುಕೊಳ್ಳುತ್ತಾನೆ.
ಮನೆಯೂ ಸಂಪತ್ತೂ ಪಿತೃಗಳ ಸ್ವಾಸ್ತ್ಯವು;
ವಿವೇಕಿಯಾದ ಹೆಂಡತಿಯು ಯೆಹೋವ ದೇವರಿಂದಲೇ.
ಕಾಡುವ ಜಗಳಗಂಟಿ ಹೆಂಡತಿಯೊಂದಿಗೆ ವಾಸಮಾಡುವುದಕ್ಕಿಂತ,
ಮರಭೂಮಿಯಲ್ಲಿ ವಾಸಿಸುವುದು ಲೇಸು.
ಈಗ ನನ್ನ ಮಗಳೇ, ನೀನು ಭಯಪಡಬೇಡ. ನಿನಗೆ ಬೇಕಾಗಿರುವುದನ್ನು ನಿನಗೆ ಮಾಡುವೆನು. ನೀನು ಗುಣವತಿಯಾದ ಸ್ತ್ರೀ ಎಂದು ಪಟ್ಟಣದಲ್ಲಿರುವ ನನ್ನ ಜನರೆಲ್ಲರೂ ಬಲ್ಲರು.
Sabedoria e serviço
As mulheres da Bíblia foram líderes, profetisas e discípulas fiéis. Jesus honrou as mulheres e as incluiu em seu ministério.
ಬಿತ್ತುವವನ ಸಾಮ್ಯ
ಇದಾದ ಮೇಲೆ, ಯೇಸು ಪ್ರತಿಯೊಂದು ಪಟ್ಟಣಕ್ಕೂ ಹಳ್ಳಿಗೂ ಹೋಗಿ, ದೇವರ ರಾಜ್ಯದ ವಿಷಯ ಪ್ರಚಾರ ಮಾಡುತ್ತಾ ಸುವಾರ್ತೆಯನ್ನು ಸಾರುತ್ತಾ ಇದ್ದರು. ಹನ್ನೆರಡು ಮಂದಿ ಶಿಷ್ಯರು ಅವರೊಂದಿಗೆ ಇದ್ದರು. ಇದಲ್ಲದೆ ದುರಾತ್ಮಗಳಿಂದಲೂ ರೋಗಗಳಿಂದಲೂ ಬಿಡುಗಡೆ ಹೊಂದಿದ ಕೆಲವು ಸ್ತ್ರೀಯರು ಮತ್ತು ಏಳು ದೆವ್ವಗಳು ಬಿಟ್ಟುಹೋಗಿದ್ದ ಮಗ್ದಲಿನ ಎಂದು ಕರೆಯಲಾದ ಮರಿಯಳು, ಹೆರೋದನ ಅರಮನೆಯ ಗೃಹ ನಿರ್ವಾಹಕನಾದ ಕೂಜನ ಪತ್ನಿ ಯೋಹಾನಳು, ಸುಸನ್ನಳು ಮತ್ತು ಬೇರೆ ಅನೇಕರು ತಮ್ಮ ಆಸ್ತಿಯಿಂದ ಯೇಸುವಿಗೂ ಅವರ ಶಿಷ್ಯರಿಗೂ ಉಪಚಾರಮಾಡುತ್ತಿದ್ದರು.
ಅದೇ ರೀತಿಯಾಗಿ ಪತ್ನಿಯರೇ, ನಿಮ್ಮ ಗಂಡಂದಿರಿಗೆ ಅಧೀನರಾಗಿರಿ. ಪತಿಯರಲ್ಲಿ ಯಾರಾದರೂ ವಾಕ್ಯವನ್ನು ಸ್ವೀಕರಿಸದವರಾಗಿದ್ದರೂ ಪತ್ನಿಯರ ನಡತೆಯಿಂದ ವಾಕ್ಯವಿಲ್ಲದೆ ಅವರನ್ನು ಗೆಲ್ಲುವಂತೆ,
ಅದೇ ರೀತಿಯಾಗಿ ಪುರುಷರೇ, ಸ್ತ್ರೀಯು ಬಲಹೀನಳೆಂಬುದನ್ನು ತಿಳಿದು ನಿಮ್ಮ ಪತ್ನಿಯರ ಸಂಗಡ ವಿವೇಕದಿಂದ ಇರಿ. ಅವರು ಜೀವ ಕೃಪೆಯಲ್ಲಿ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಮಾನವನ್ನು ಸಲ್ಲಿಸಿರಿ. ಹೀಗೆ ನಡೆದರೆ ನಿಮ್ಮ ಪ್ರಾರ್ಥನೆಗಳಿಗೆ ಅಡ್ಡಿಯಿರುವುದಿಲ್ಲ.
ಹಾಗೆಯೇ ಅವರ ಹೆಂಡತಿಯರು ಗೌರವವುಳ್ಳವರಾಗಿರಬೇಕು. ಚಾಡಿ ಹೇಳದವರೂ ಸ್ವಸ್ಥ ಬುದ್ಧಿಯುಳ್ಳವರೂ ಎಲ್ಲಾ ವಿಷಯಗಳಲ್ಲಿ ನಂಬಿಗಸ್ತರೂ ಆಗಿರತಕ್ಕದ್ದು.
ಅದೇ ಪ್ರಕಾರ, ವೃದ್ಧಸ್ತ್ರೀಯರು ನಡತೆಯಲ್ಲಿ ಭಕ್ತಿಗೆ ತಕ್ಕ ಹಾಗೆ ಇರುವವರಾಗಿರಬೇಕು. ಅವರು ಸುಳ್ಳಾಗಿ ದೂರುವವರೂ ಮದ್ಯಾಸಕ್ತರೂ ಆಗಿರದೆ, ಒಳ್ಳೆಯವುಗಳನ್ನು ಬೋಧಿಸುವವರಾಗಿರಬೇಕು ಎಂದು ಅವರಿಗೆ ಉಪದೇಶಿಸು. ಇದಲ್ಲದೆ ದೇವರ ವಾಕ್ಯವು ದೂಷಣೆಯಾಗದಂತೆ ಯೌವನ ಸ್ತ್ರೀಯರು ತಮ್ಮ ಗಂಡಂದಿರನ್ನು ಮತ್ತು ಮಕ್ಕಳನ್ನು ಪ್ರೀತಿಸುವವರೂ ಸ್ವಶಿಸ್ತನ್ನು ಹೊಂದಿದವರೂ ಪತಿವ್ರತೆಯರೂ ಮನೆಯಲ್ಲಿ ಕೆಲಸ ಮಾಡುವವರೂ ದಯೆವುಳ್ಳವರೂ ತಮ್ಮ ಗಂಡಂದಿರಿಗೆ ಅಧೀನರೂ ಆಗಿರಬೇಕೆಂದು ವೃದ್ಧಸ್ತ್ರೀಯರಿಂದ ಕಲಿತುಕೊಳ್ಳಿರಿ.
Este artigo te tocou? Faça uma oração!
+581 estão orando agora.
Junte-se à corrente de oração.