Mundo
A Bíblia tem muito a dizer sobre o mundo e nossa relação com ele. Cristãos estão no mundo, mas não são do mundo — chamados a ser luz e sal sem se conformar com os padrões seculares.
Não ameis o mundo
Não ameis o mundo nem o que nele há. A cobiça da carne, a cobiça dos olhos e a soberba da vida não vêm do Pai, mas do mundo.
ದೇವರನ್ನು ಪ್ರೀತಿಸುವವರು ಲೋಕವನ್ನು ಪ್ರೀತಿಸಬಾರದು
ಲೋಕವನ್ನಾಗಲಿ ಲೋಕದಲ್ಲಿರುವವುಗಳನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕವನ್ನು ಪ್ರೀತಿಸಿದರೆ ತಂದೆಯ ಮೇಲಿನ ಪ್ರೀತಿಯು ಅವನಲ್ಲಿಲ್ಲ.
ದೇವರನ್ನು ಪ್ರೀತಿಸುವವರು ಲೋಕವನ್ನು ಪ್ರೀತಿಸಬಾರದು
ಲೋಕವನ್ನಾಗಲಿ ಲೋಕದಲ್ಲಿರುವವುಗಳನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕವನ್ನು ಪ್ರೀತಿಸಿದರೆ ತಂದೆಯ ಮೇಲಿನ ಪ್ರೀತಿಯು ಅವನಲ್ಲಿಲ್ಲ. ಲೋಕದಲ್ಲಿರುವ ಶರೀರದಾಶೆ, ಕಣ್ಣಿನಾಶೆ, ಬದುಕುಬಾಳಿನ ಗರ್ವ, ಇವು ತಂದೆಗೆ ಸಂಬಂಧಪಟ್ಟವುಗಳಲ್ಲ. ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ.
ಲೋಕದಲ್ಲಿರುವ ಶರೀರದಾಶೆ, ಕಣ್ಣಿನಾಶೆ, ಬದುಕುಬಾಳಿನ ಗರ್ವ, ಇವು ತಂದೆಗೆ ಸಂಬಂಧಪಟ್ಟವುಗಳಲ್ಲ. ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ.
ಲೋಕವೂ ಅದರ ಆಸೆಯೂ ಗತಿಸಿಹೋಗುತ್ತವೆ. ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಸದಾಕಾಲಕ್ಕೂ ಇರುವನು.
ವ್ಯಭಿಚಾರಿಗಳೇ, ಇಹಲೋಕದ ಗೆಳೆತನವು ದೇವರಿಗೆ ಹಗೆತನವೆಂದು ನಿಮಗೆ ತಿಳಿಯದೋ? ಆದ್ದರಿಂದ ಲೋಕಕ್ಕೆ ಸ್ನೇಹಿತನಾಗಿರಬೇಕೆಂದಿರುವವನು ತನ್ನನ್ನು ದೇವರಿಗೆ ವಿರೋಧಿಯನ್ನಾಗಿ ಮಾಡಿಕೊಳ್ಳುತ್ತಾನೆ.
ವ್ಯಭಿಚಾರಿಗಳೇ, ಇಹಲೋಕದ ಗೆಳೆತನವು ದೇವರಿಗೆ ಹಗೆತನವೆಂದು ನಿಮಗೆ ತಿಳಿಯದೋ? ಆದ್ದರಿಂದ ಲೋಕಕ್ಕೆ ಸ್ನೇಹಿತನಾಗಿರಬೇಕೆಂದಿರುವವನು ತನ್ನನ್ನು ದೇವರಿಗೆ ವಿರೋಧಿಯನ್ನಾಗಿ ಮಾಡಿಕೊಳ್ಳುತ್ತಾನೆ.
O amor de Deus pelo mundo
Porque Deus amou o mundo de tal maneira que deu seu Filho. O mesmo mundo que rejeita a Deus é amado por Ele e objeto de sua redenção.
"ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.
"ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.
ಆ ತೀರ್ಪು ಏನೆಂದರೆ ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವುದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿಸಿದರು.
ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತ ಯಜ್ಞವಾಗಿದ್ದಾನೆ. ನಮ್ಮ ಪಾಪಗಳಿಗೆ ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳಿಗೂ ಪ್ರಾಯಶ್ಚಿತ್ತವಾಗಿದ್ದಾನೆ.
ದೇವರ ಮಕ್ಕಳೂ ಮತ್ತು ಸೈತಾನನ ಮಕ್ಕಳನ್ನು ಕುರಿತದ್ದು
ಇಗೋ, ನಾವು ದೇವರ ಮಕ್ಕಳೆಂದು ಕರೆಯಲ್ಪಡುವುದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ! ನಾವು ಆತನ ಮಕ್ಕಳಾಗಿದ್ದೇವೆ. ಲೋಕವು ಆತನನ್ನು ಅರ್ಥಮಾಡಿಕೊಳ್ಳದೆ ಇರುವುದರಿಂದ ನಮ್ಮನ್ನೂ ಅರ್ಥಮಾಡಿಕೊಳ್ಳುವುದಿಲ್ಲ.
ದೇವರ ಮಕ್ಕಳೂ ಮತ್ತು ಸೈತಾನನ ಮಕ್ಕಳನ್ನು ಕುರಿತದ್ದು
ಇಗೋ, ನಾವು ದೇವರ ಮಕ್ಕಳೆಂದು ಕರೆಯಲ್ಪಡುವುದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ! ನಾವು ಆತನ ಮಕ್ಕಳಾಗಿದ್ದೇವೆ. ಲೋಕವು ಆತನನ್ನು ಅರ್ಥಮಾಡಿಕೊಳ್ಳದೆ ಇರುವುದರಿಂದ ನಮ್ಮನ್ನೂ ಅರ್ಥಮಾಡಿಕೊಳ್ಳುವುದಿಲ್ಲ.
Vencer o mundo
Jesus venceu o mundo e nos dá sua paz e vitória. A fé é a vitória que vence o mundo — e aquele que nasceu de Deus o vence.
ನೀವು ನನ್ನಲ್ಲಿದ್ದು ಸಮಾಧಾನವನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮ್ಮೊಂದಿಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟಗಳುಂಟು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ" ಎಂದು ಹೇಳಿದನು.
ನೀವು ನನ್ನಲ್ಲಿದ್ದು ಸಮಾಧಾನವನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮ್ಮೊಂದಿಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟಗಳುಂಟು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ" ಎಂದು ಹೇಳಿದನು.
ಏಕೆಂದರೆ ದೇವರಿಂದ ಹುಟ್ಟಿದವನು ಲೋಕವನ್ನು ಜಯಿಸುತ್ತಾನೆ. ಲೋಕವನ್ನು ಜಯಿಸುವಂಥದ್ದು ನಮ್ಮ ನಂಬಿಕೆಯೇ.
ಏಕೆಂದರೆ ದೇವರಿಂದ ಹುಟ್ಟಿದವನು ಲೋಕವನ್ನು ಜಯಿಸುತ್ತಾನೆ. ಲೋಕವನ್ನು ಜಯಿಸುವಂಥದ್ದು ನಮ್ಮ ನಂಬಿಕೆಯೇ.
ಯೇಸುಕ್ರಿಸ್ತನು ದೇವರ ಮಗನೆಂದು ಒಪ್ಪಿಕೊಂಡು ನಂಬಿದವರಲ್ಲದೆ ಮತ್ತಾರು ಲೋಕವನ್ನು ಜಯಿಸಿದವರಾಗಿದ್ದಾರೆ?
ಪ್ರಿಯಮಕ್ಕಳೇ, ನೀವಂತೂ ದೇವರಿಗೆ ಸೇರಿದವರಾಗಿದ್ದೀರಿ. ಮತ್ತು ಲೋಕದಲ್ಲಿರುವವನಿಗಿಂತ ನಿಮ್ಮಲ್ಲಿರುವಾತನು ಉನ್ನತನಾಗಿರುವುದರಿಂದ ನೀವು ಆ ಸುಳ್ಳು ಪ್ರವಾದಿಗಳ ಆತ್ಮವನ್ನು ಜಯಿಸಿದ್ದೀರಿ.
No mundo sem ser do mundo
Jesus orou: não peço que os tires do mundo, mas que os guardes do mal. Somos enviados ao mundo como embaixadores do Reino.
ನಾನು ನಿನ್ನ ವಾಕ್ಯವನ್ನು ಇವರಿಗೆ ಕೊಟ್ಟಿದ್ದೇನೆ, ನಾನು ಈ ಲೋಕದವನಲ್ಲದವನಾಗಿರುವ ಪ್ರಕಾರ ಇವರೂ ಈ ಲೋಕದವರಲ್ಲ. ಆದಕಾರಣ ಲೋಕವು ಇವರನ್ನು ದ್ವೇಷಿಸುತ್ತದೆ.
ಇವರನ್ನು ಲೋಕದಿಂದ ತೆಗೆಯಬೇಕೆಂದು ನಾನು ಬೇಡಿಕೊಳ್ಳುವುದಿಲ್ಲ, ಆದರೆ ಇವರನ್ನು ಕೆಡುಕನಿಂದ ಕಾಪಾಡಬೇಕೆಂದು ನಾನು ಬೇಡಿಕೊಳ್ಳುತ್ತೇನೆ.
ಇವರನ್ನು ಲೋಕದಿಂದ ತೆಗೆಯಬೇಕೆಂದು ನಾನು ಬೇಡಿಕೊಳ್ಳುವುದಿಲ್ಲ, ಆದರೆ ಇವರನ್ನು ಕೆಡುಕನಿಂದ ಕಾಪಾಡಬೇಕೆಂದು ನಾನು ಬೇಡಿಕೊಳ್ಳುತ್ತೇನೆ. ನಾನು ಲೋಕದವನಲ್ಲದೆ ಇರುವಂತೆ ಇವರೂ ಲೋಕದವರಲ್ಲ. ನೀನು ಸತ್ಯದಿಂದ ಇವರನ್ನು ಪ್ರತಿಷ್ಠೆಪಡಿಸು, ನಿನ್ನ ವಾಕ್ಯವೇ ಸತ್ಯ. ನೀನು ನನ್ನನ್ನು ಲೋಕಕ್ಕೆ ಕಳುಹಿಸಿದಂತೆಯೇ, ನಾನು ಸಹ ಇವರನ್ನು ಲೋಕಕ್ಕೆ ಕಳುಹಿಸಿದ್ದೇನೆ.
ನೀತಿಸ್ವರೂಪನಾದ ತಂದೆಯೇ, ಲೋಕವು ನಿನ್ನನ್ನು ತಿಳಿಯಲಿಲ್ಲ, ಆದರೆ ನಾನು ನಿನ್ನನ್ನು ತಿಳಿದಿದ್ದೇನೆ ಮತ್ತು ಇವರು ನೀನೇ ನನ್ನನ್ನು ಕಳುಹಿಸಿದ್ದೀ ಎಂದು ತಿಳಿದಿದ್ದಾರೆ. ನಾನು ಅವರಿಗೆ ನಿನ್ನ ಹೆಸರನ್ನು ತಿಳಿಸಿದ್ದೇನೆ. ಇನ್ನೂ ತಿಳಿಸುವೆನು. ಏಕೆಂದರೆ, ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಇವರಲ್ಲಿ ಇರಬೇಕೆಂತಲೂ ಮತ್ತು ನಾನೂ ಅವರಲ್ಲಿ ಇರಬೇಕೆಂದೂ ಪ್ರಾರ್ಥಿಸುತ್ತೇನೆ" ಎಂದನು.
ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ. ಈಗ ಇಹಲೋಕಾಧಿಪತಿಯು ಹೊರಗೆ ನೂಕಲ್ಪಡುವನು
"ನಾನು ನನ್ನ ಸಮಾಧಾನವನ್ನು ನಿಮಗೆ ಕೊಟ್ಟು ಹೋಗುತ್ತಿದ್ದೇನೆ. ನನ್ನಲ್ಲಿರುವಂಥ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.
"ಲೋಕವು ನಿಮ್ಮನ್ನು ದ್ವೇಷ ಮಾಡುವುದಾದರೆ ಅದು ಮೊದಲು ನನ್ನನ್ನು ದ್ವೇಷ ಮಾಡಿತ್ತೆಂದು ನೀವು ತಿಳಿದುಕೊಳ್ಳಿರಿ. ನೀವು ಲೋಕದವರಾಗಿದ್ದರೆ ಲೋಕವು ನಿಮ್ಮನ್ನು ತನ್ನವರೆಂದು ಪ್ರೀತಿಸುತ್ತಿತ್ತು. ನೀವಾದರೋ ಲೋಕದ ಕಡೆಯವರಲ್ಲ, ನಾನು ನಿಮ್ಮನ್ನು ಆರಿಸಿಕೊಂಡಿದ್ದರಿಂದಲೇ ಲೋಕವು ನಿಮ್ಮನ್ನು ದ್ವೇಷ ಮಾಡುತ್ತದೆ.
Sal e luz
Vós sois o sal da terra e a luz do mundo. O cristão transforma o ambiente onde está, sem se conformar com os padrões mundanos.
"ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ಸಪ್ಪಗಾದರೆ ಅದಕ್ಕೆ ಬೇರೆ ಯಾವುದರಿಂದ ಉಪ್ಪಿನ ರುಚಿಯನ್ನು ಕೊಡಲು ಸಾಧ್ಯ? ಜನರು ಅದನ್ನು ಹೊರಗೆಹಾಕಿ ದಾರಿಹೋಕರು ತುಳಿಯುವುದಕ್ಕೆ ಅದು ಯೋಗ್ಯವೇ ಹೊರತು ಮತ್ತ್ಯಾವ ಕೆಲಸಕ್ಕೂ ಬರುವುದಿಲ್ಲ. ನೀವು ಲೋಕಕ್ಕೆ ಬೆಳಕಾಗಿದ್ದೀರಿ. ಬೆಟ್ಟದ ಮೇಲೆ ಕಟ್ಟಲ್ಪಟ್ಟಿರುವ ಊರು ಮರೆಯಾಗಿರಲಾರದು.
ಇದಲ್ಲದೆ ರಾಜ್ಯದ ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲ್ಪಡುವುದು; ಆಗ ಅಂತ್ಯವು ಬರುವುದು.
ಒಬ್ಬ ಮನುಷ್ಯನು ಭೂಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಅವನ ಪ್ರಾಣವನ್ನು ಕಳೆದುಕೊಂಡರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಬದಲಿಗೆ ಏನು ಕೊಟ್ಟಾನು?
ಒಬ್ಬ ಮನುಷ್ಯನು ಭೂಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಅವನ ಪ್ರಾಣವನ್ನು ಕಳೆದುಕೊಂಡರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಬದಲಿಗೆ ಏನು ಕೊಟ್ಟಾನು?
"ತೊಡಕುಗಳ ನಿಮಿತ್ತ ಲೋಕಕ್ಕೆ ಅಯ್ಯೋ, ತೊಡಕುಗಳು ಬರುವುದು ಅನಿವಾರ್ಯ, ಆದಾಗ್ಯೂ ಯಾವ ಮನುಷ್ಯನಿಂದ ತೊಡಕು ಬರುತ್ತದೋ ಅವನಿಗೆ ಅಯ್ಯೋ.
ಆ ಮೇಲೆ ಅವರಿಗೆ, "ನೀವು ಲೋಕದ ಎಲ್ಲಾ ಕಡೆಗಳಿಗೂ ಹೋಗಿ ಸೃಷ್ಟಿಗಳಿಗೆಲ್ಲಾ ಸುವಾರ್ತೆಯನ್ನು ಸಾರಿರಿ.
ಆ ಮೇಲೆ ಅವರಿಗೆ, "ನೀವು ಲೋಕದ ಎಲ್ಲಾ ಕಡೆಗಳಿಗೂ ಹೋಗಿ ಸೃಷ್ಟಿಗಳಿಗೆಲ್ಲಾ ಸುವಾರ್ತೆಯನ್ನು ಸಾರಿರಿ.
ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತನ್ನ ಸ್ವಂತ ಪ್ರಾಣವನ್ನೇ ನಷ್ಟಪಡಿಸಿಕೊಂಡರೆ ಅವನಿಗೆ ಲಾಭವೇನು?
Não se conformar
Não vos conformeis com este mundo. A religião pura é guardar-se da corrupção do mundo e viver segundo o Espírito de Deus.
ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತವನ್ನು ತಿಳಿದವರಾಗಿ ಉತ್ತಮವಾದದ್ದೂ, ಮೆಚ್ಚಿಕೆಯಾದದ್ದೂ, ದೋಷವಿಲ್ಲದ್ದೂ ಯಾವ ಯಾವುದೆಂದು ವಿವೇಚಿಸುವಿರಿ.
ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತವನ್ನು ತಿಳಿದವರಾಗಿ ಉತ್ತಮವಾದದ್ದೂ, ಮೆಚ್ಚಿಕೆಯಾದದ್ದೂ, ದೋಷವಿಲ್ಲದ್ದೂ ಯಾವ ಯಾವುದೆಂದು ವಿವೇಚಿಸುವಿರಿ.
ಹೇಗೆಂದರೆ ಕಣ್ಣಿಗೆ ಕಾಣದಿರುವ ಆತನ ಗುಣಲಕ್ಷಣಗಳು ಅಂದರೆ ಆತನ ನಿತ್ಯ ಶಕ್ತಿಯೂ, ದೈವತ್ವವೂ, ಜಗದುತ್ಪತ್ತಿ ಮೊದಲುಗೊಂಡು ಆತನು ಮಾಡಿದ ಸೃಷ್ಟಿಗಳ ಮೂಲಕ ಬುದ್ಧಿಗೆ ಗೊತ್ತಾಗಿ ಕಾಣಬರುತ್ತದೆ. ಹೀಗಿರುವುದರಿಂದ ಅವರು ನೆಪವನ್ನು ಹೇಳಲು ಆಗುವುದಿಲ್ಲ.
ಹೇಗೆಂದರೆ ಕಣ್ಣಿಗೆ ಕಾಣದಿರುವ ಆತನ ಗುಣಲಕ್ಷಣಗಳು ಅಂದರೆ ಆತನ ನಿತ್ಯ ಶಕ್ತಿಯೂ, ದೈವತ್ವವೂ, ಜಗದುತ್ಪತ್ತಿ ಮೊದಲುಗೊಂಡು ಆತನು ಮಾಡಿದ ಸೃಷ್ಟಿಗಳ ಮೂಲಕ ಬುದ್ಧಿಗೆ ಗೊತ್ತಾಗಿ ಕಾಣಬರುತ್ತದೆ. ಹೀಗಿರುವುದರಿಂದ ಅವರು ನೆಪವನ್ನು ಹೇಳಲು ಆಗುವುದಿಲ್ಲ.
ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೆ ಹೇಳಿವೆಯೆಂದು ಬಲ್ಲೆವಷ್ಟೆ. ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವುದು. ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವುದು.
ಸಂಕಟದಲ್ಲಿ ಬಿದ್ದಿರುವ ದಿಕ್ಕಿಲ್ಲದವರನ್ನೂ, ವಿಧವೆಯರನ್ನೂ ಪರಾಂಬರಿಸಿ ತನಗೆ ಇಹಲೋಕದ ದೋಷವು ಹತ್ತದಂತೆ ತನ್ನನ್ನು ತಾನು ಕಾಪಾಡಿಕೊಳ್ಳುವುದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ, ನಿರ್ಮಲವೂ ಆಗಿರುವ ಭಕ್ತಿ.
ಸಂಕಟದಲ್ಲಿ ಬಿದ್ದಿರುವ ದಿಕ್ಕಿಲ್ಲದವರನ್ನೂ, ವಿಧವೆಯರನ್ನೂ ಪರಾಂಬರಿಸಿ ತನಗೆ ಇಹಲೋಕದ ದೋಷವು ಹತ್ತದಂತೆ ತನ್ನನ್ನು ತಾನು ಕಾಪಾಡಿಕೊಳ್ಳುವುದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ, ನಿರ್ಮಲವೂ ಆಗಿರುವ ಭಕ್ತಿ.
ಏಕೆಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟುಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು; ಅದು ಭಕ್ತಿಹೀನತೆಯನ್ನೂ, ಲೋಕದ ಆಸೆಗಳನ್ನೂ ತ್ಯಜಿಸಿ ಭಾಗ್ಯಕರವಾದ ನಿರೀಕ್ಷೆಯನ್ನು,
A batalha espiritual
A nossa luta não é contra carne e sangue. Os poderes do mundo são reais, mas o que está em nós é maior que o que está no mundo.
ನಮಗೆ ಹೋರಾಟವಿರುವುದು ಮನುಷ್ಯಮಾತ್ರದವರ ಸಂಗಡವಲ್ಲ. ರಾಜತ್ವಗಳ ಮೇಲೆಯೂ, ಅಧಿಕಾರಿಗಳ ಮೇಲೆಯೂ, ಈ ಅಂಧಕಾರದ ಲೋಕಾಧಿಪತಿಗಳ ಮೇಲೆಯೂ, ಆಕಾಶ ಮಂಡಲಗಳಲ್ಲಿರುವ ದುರಾತ್ಮಗಳ ಸೇನೆಯ ಮೇಲೆಯೂ ನಾವು ಹೋರಾಡುವವರಾಗಿದ್ದೇವೆ.
ಮೋಸಕರವಾದ ಮತ್ತು ವ್ಯರ್ಥವಾದ ತತ್ವಜ್ಞಾನ ಬೋಧನೆಯಿಂದ ಯಾರೂ ನಿಮ್ಮನ್ನು ವಶಮಾಡಿಕೊಳ್ಳದಂತೆ ಎಚ್ಚರಿಕೆಯಾಗಿರಿ. ಇವುಗಳು ಮನುಷ್ಯರ ಸಂಪ್ರದಾಯಗಳಿಗೆ ಮತ್ತು ಪ್ರಾಪಂಚಿಕ ಮೂಲ ಬೋಧನೆಗಳಿಗೆ ಸಂಬಂಧಿಸಿದವುಗಳೇ ಹೊರತು ಕ್ರಿಸ್ತನಿಗಲ್ಲ.
ನಾವು ಲೋಕದಲ್ಲಿದ್ದರೂ ಲೋಕಾನುಸಾರವಾಗಿ ಯುದ್ಧಮಾಡುವವರಲ್ಲ.
ನಾವು ಇಹಲೋಕದ ಆತ್ಮವನ್ನು ಹೊಂದದೆ ದೇವರು ನಮಗೆ ಉಚಿತವಾಗಿ ದಯಪಾಲಿಸಿರುವ ವರಗಳನ್ನು ತಿಳಿದುಕೊಳ್ಳುವುದಕ್ಕಾಗಿ ದೇವರಿಂದ ಬಂದ ಆತ್ಮವನ್ನೇ ಹೊಂದಿದವರಾಗಿದ್ದೇವೆ.
ಜ್ಞಾನಿಯು ಎಲ್ಲಿ? ವಿದ್ವಾಂಸನು ಎಲ್ಲಿ? ಇಹಲೋಕದ ತರ್ಕವಾದಿ ಎಲ್ಲಿ? ದೇವರು ಇಹಲೋಕದ ಜ್ಞಾನವನ್ನು ಮೂರ್ಖತನವಾಗಿ ಮಾಡಿದ್ದಾನಲ್ಲವೇ? ಲೋಕವು ತನ್ನ ಜ್ಞಾನದಿಂದ ದೇವರನ್ನು ತಿಳಿದುಕೊಳ್ಳದೆ ಹೋದದ್ದರಿಂದ; ಮೂರ್ಖತನವೆನಿಸಿಕೊಂಡಿರುವ ನಮ್ಮ ಬೋಧನೆಯ ಮೂಲಕ ನಂಬುವವರನ್ನು ರಕ್ಷಿಸುವುದು ದೇವರಿಗೆ ಹಿತವೆಂದು ತೋರಿತು.
ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡನು; ದೇವರು ಬಲಿಷ್ಠರನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಅಶಕ್ತರನ್ನು, ಬಲಹೀನರನ್ನು ಆರಿಸಿಕೊಂಡನು.
ದೇವರು ಈ ಲೋಕದಲ್ಲಿ ಕೀಳಾದವರನ್ನೂ ಹಾಗೂ ಅಸಡ್ಡೆಯಾದವರನ್ನೂ ಆರಿಸಿಕೊಂಡದ್ದಲ್ಲದೆ ಗಣ್ಯರನ್ನು ಇಲ್ಲದಂತೆ ಮಾಡುವುದಕ್ಕಾಗಿ ಗಣನೆಗೆ ಬಾರದವರನ್ನು, ನಿಂದಿಸಲ್ಪಟ್ಟವರನ್ನು ಆರಿಸಿಕೊಂಡಿದ್ದಾನೆ. ಹೀಗಿರಲು ದೇವರ ಮುಂದೆ ಹೊಗಳಿಕೊಳ್ಳುವುದಕ್ಕೆ ಯಾರಿಗೂ ಆಸ್ಪದವಿಲ್ಲ.
ಯಾವನೂ ತನ್ನನ್ನು ತಾನೇ ಮೋಸಗೊಳಿಸಿಕೊಳ್ಳದಿರಲಿ ನಿಮ್ಮಲ್ಲಿ ಯಾವನಾದರೂ ಲೋಕಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿಕೊಳ್ಳುವುದಾದರೆ ಅವನು ಜ್ಞಾನಿಯಾಗುವುದಕ್ಕಾಗಿ "ಮೂರ್ಖನಾಗಲಿ"
ನಾವು ಲೋಕದೊಳಕ್ಕೆ ಏನೂ ತೆಗೆದುಕೊಂಡು ಬರಲಿಲ್ಲವಾದ್ದರಿಂದ, ಅದರೊಳಗಿಂದ ಏನೂ ತೆಗೆದುಕೊಂಡು ಹೋಗಲಾರೆವು. ನಮಗೆ ಅನ್ನ ವಸ್ತ್ರಗಳಿದ್ದರೆ ಸಾಕು, ನಾವು ಸಂತುಷ್ಟರಾಗುತ್ತವೆ.
ನಾವು ಲೋಕದೊಳಕ್ಕೆ ಏನೂ ತೆಗೆದುಕೊಂಡು ಬರಲಿಲ್ಲವಾದ್ದರಿಂದ, ಅದರೊಳಗಿಂದ ಏನೂ ತೆಗೆದುಕೊಂಡು ಹೋಗಲಾರೆವು. ನಮಗೆ ಅನ್ನ ವಸ್ತ್ರಗಳಿದ್ದರೆ ಸಾಕು, ನಾವು ಸಂತುಷ್ಟರಾಗುತ್ತವೆ.
Pertencemos a Deus
Do Senhor é a terra e tudo o que nela existe. Vivemos neste mundo como peregrinos, desejando a pátria celestial.
ಯೆಹೋವನ ಸನ್ನಿಧಿಯಲ್ಲಿ ಸೇರತಕ್ಕವರು
ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವನದು;
ಲೋಕವೂ ಮತ್ತು ಅದರ ನಿವಾಸಿಗಳೂ ಆತನವೇ.
ಆತನೇ ಅದರ ಅಸ್ತಿವಾರವನ್ನು ಸಾಗರದ ಮೇಲೆ ಹಾಕಿದವನು;
ಅದನ್ನು ಜಲರಾಶಿಗಳ ಮೇಲೆ ಸ್ಥಿರಪಡಿಸಿದವನು ಆತನೇ.
ಆಕಾಶವೂ ನಿನ್ನದು, ಭೂಮಿಯೂ ನಿನ್ನದೇ;
ಲೋಕವನ್ನೂ ಅದರಲ್ಲಿರುವುದೆಲ್ಲವನ್ನೂ ನಿರ್ಮಿಸಿದವನು ನೀನು.
ಸದ್ಭಕ್ತರಿಗೋಸ್ಕರ ನೀನು ಇಟ್ಟುಕೊಂಡಿರುವ ಮೇಲೂ,
ಆಶ್ರಿತರಿಗೋಸ್ಕರ ನೀನು ಎಲ್ಲರ ಮುಂದೆ ಮಾಡಿದ ಉಪಕಾರಗಳೂ
ಎಷ್ಟೋ ವಿಶೇಷವಾಗಿವೆ.
ಯೆಹೋವನಾದರೋ ಯಾವಾಗಲೂ ನೆಲೆಗೊಂಡಿದ್ದು,
ನ್ಯಾಯವಿಚಾರಿಸುವುದಕ್ಕಾಗಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ.
ಆತನೇ ನೀತಿಗನುಸಾರವಾಗಿ ಲೋಕಕ್ಕೆ ನ್ಯಾಯ ತೀರಿಸುವವನು;
ಆತನು ಜನಾಂಗಗಳಿಗೆ ಸತ್ಯಕ್ಕನುಸಾರವಾಗಿ ತೀರ್ಪುಕೊಡುವನು.
ನಿಜವಾದ ಬೆಳಕು ಲೋಕಕ್ಕೆ ಬರುವುದಾಗಿತ್ತು; ಆ ಬೆಳಕೇ ಪ್ರತಿ ಮನುಷ್ಯನಿಗೂ ಬೆಳಕನ್ನು ಕೊಡುವಂಥದು. ಆತನು ಲೋಕದಲ್ಲಿ ಇದ್ದನು ಮತ್ತು ಲೋಕವು ಆತನ ಮೂಲಕ ಉಂಟಾಯಿತು, ಆದರೂ ಲೋಕವು ಆತನನ್ನು ಅರಿತುಕೊಳ್ಳಲಿಲ್ಲ.
ಆತನು ಲೋಕದಲ್ಲಿ ಇದ್ದನು ಮತ್ತು ಲೋಕವು ಆತನ ಮೂಲಕ ಉಂಟಾಯಿತು, ಆದರೂ ಲೋಕವು ಆತನನ್ನು ಅರಿತುಕೊಳ್ಳಲಿಲ್ಲ.
ಯೇಸು ಲೋಕದ ಬೆಳಕಾಗಿದ್ದಾನೆ
ಯೇಸು ಪುನಃ ಜನರೊಂದಿಗೆ ಮಾತನಾಡುತ್ತಾ, "ನಾನೇ ಲೋಕದ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವನು ಎಂದಿಗೂ ಕತ್ತಲೆಯಲ್ಲಿ ನಡೆಯುವುದಿಲ್ಲ, ಆದರೆ ಅವನು ಜೀವದ ಬೆಳಕನ್ನು ಹೊಂದಿರುವನು" ಎಂದು ಹೇಳಿದನು.
ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ನಾನು ಅವುಗಳನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ. ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದೆಂದಿಗೂ ನಾಶವಾಗುವುದೇ ಇಲ್ಲ. ಅವುಗಳನ್ನು ಯಾರೂ ನನ್ನ ಕೈಯಿಂದ ಕಸಿದುಕೊಳ್ಳಲಾರರು.
ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ, ನಾನು ಹೋಗುವುದು ನಿಮಗೆ ಒಳ್ಳೆಯದು, ಹೇಗೆಂದರೆ ನಾನು ಹೋಗದಿದ್ದರೆ ಆ ಸಹಾಯಕನು ನಿಮ್ಮ ಬಳಿಗೆ ಬರುವುದಿಲ್ಲ. ನಾನು ಹೋದರೆ ಆತನನ್ನು ನಿಮ್ಮ ಬಳಿಗೆ ಕಳುಹಿಸಿಕೊಡುತ್ತೇನೆ. ಆತನು ಬಂದಾಗ ಪಾಪ, ನೀತಿ ಮತ್ತು ನ್ಯಾಯತೀರ್ಪಿನ ಕುರಿತು ಲೋಕಕ್ಕೆ ಮನವರಿಕೆಯನ್ನು ಉಂಟುಮಾಡುವನು. ಅವರು ನನ್ನನ್ನು ನಂಬದೇ ಇರುವುದರಿಂದ ಪಾಪದ ಕುರಿತಾಗಿಯೂ ನಾನು ನನ್ನ ತಂದೆಯ ಬಳಿಗೆ ಹೋಗಿ, ಇನ್ನು ಮೇಲೆ ನಿಮಗೆ ಕಾಣಿಸದೆ ಇರುವುದರಿಂದ ನೀತಿಯ ಕುರಿತಾಗಿಯೂ, ಇಹಲೋಕಾಧಿಪತಿಗೆ ನ್ಯಾಯತೀರ್ಪಾಗಿರುವುದರಿಂದ ನ್ಯಾಯತೀರ್ಪಿನ ಕುರಿತಾಗಿಯೂ, ಲೋಕಕ್ಕೆ ಮನವರಿಕೆಯನ್ನು ಉಂಟುಮಾಡುವನು.
ನೀವು ಲೋಕದಲ್ಲಿ ದುರಾಶೆಯಿಂದುಂಟಾಗುವ ಕೆಟ್ಟತನದಿಂದ ದೂರವಾಗಿ ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂಬ ಉದ್ದೇಶದಿಂದ ದೇವರು ತನ್ನ ಅತ್ಯಂತ ಮಹತ್ವವುಳ್ಳ ಮತ್ತು ಅಮೂಲ್ಯವಾದ ವಾಗ್ದಾನಗಳನ್ನು ನಮಗೆ ದಯಪಾಲಿಸಿದ್ದಾನೆ.
ಕಡೆ ದಿನಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು ಕುಚೋದ್ಯ ಮಾಡುತ್ತಾ, "ಆತನ ಪ್ರತ್ಯಕ್ಷತೆಯ ವಿಷಯವಾದ ವಾಗ್ದಾನವು ಏನಾಯಿತು? ನಮ್ಮ ಪೂರ್ವಿಕರು ನಿದ್ರೆಹೊಂದಿದ ನಂತರದಿಂದ; ಸಮಸ್ತವೂ ಸೃಷ್ಟಿಯ ಆರಂಭದಲ್ಲಿ ಇದ್ದ ಹಾಗೆಯೇ ಇದೆಯಲ್ಲಾ?" ಎಂದು ಪರಿಹಾಸ್ಯಮಾಡುತ್ತಾ ಕೇಳುವರೆಂಬುದಾಗಿ ನೀವು ಮೊದಲು ತಿಳಿದುಕೊಳ್ಳಬೇಕು. ಆದರೆ ಪೂರ್ವಕಾಲದಲ್ಲಿ ಭೂಮ್ಯಾಕಾಶಗಳು ದೇವರ ವಾಕ್ಯದ ಮೂಲಕ ನೀರಿನೊಳಗಿನಿಂದ ಹಾಗೂ ನೀರಿನಿಂದ ರೂಪಿಸಲ್ಪಟ್ಟಿತೆಂಬುದನ್ನು ಅವರು ಉದ್ದೇಶರ್ಪೂವಕವಾಗಿಯೇ ಮರೆತುಬಿಡುತ್ತಾರೆ. ಆ ನೀರಿನಿಂದಲೇ ಅಂದಿನ ಲೋಕವು ಜಲಪ್ರಳಯದಲ್ಲಿ ನಾಶವಾಯಿತು. ಆದರೆ ಈಗಿನ ಭೂಮ್ಯಾಕಾಶಗಳು ಅದೇ ವಾಕ್ಯದಿಂದ ಅಗ್ನಿನಾಶಕ್ಕಾಗಿ ಕಾದಿರಿಸಲ್ಪಟ್ಟಿವೆ. ಅವು ನ್ಯಾಯ ತೀರ್ಪಿನ ದಿನಕ್ಕಾಗಿ ಮತ್ತು ಭಕ್ತಿಹೀನರ ನಾಶಕ್ಕಾಗಿ ಉಳಿಸಲ್ಪಟ್ಟಿವೆ.
ದೇವರ ಚಿತ್ತಾನುಸಾರವಾಗಿರುವ ದುಃಖವು ರಕ್ಷಣೆಗೆ ಕಾರಣವಾಗುವ ಮಾನಸಾಂತರವನ್ನುಂಟು ಮಾಡುತ್ತದೆ, ಆ ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಆಸ್ಪದವಿಲ್ಲ; ಆದರೆ ಲೋಕದವರಿಗಿರುವಂಥ ದುಃಖವು ಮರಣವನ್ನುಂಟುಮಾಡುತ್ತದೆ.
ನಾನು ಲೋಕದವರಿಗೆ ಅವರ ಪಾಪದ ಫಲವನ್ನೂ, ದುಷ್ಟರಿಗೆ ಅವರ ದುಷ್ಕೃತ್ಯಗಳ ಫಲಗಳಿಗಾಗಿ ಶಿಕ್ಷಿಸಿ,
ಸೊಕ್ಕಿದವರ ಅಹಂಕಾರವನ್ನು ಅಡಗಿಸಿ, ಭಯಂಕರವಾದ ಅವರ ಹೆಮ್ಮೆಯನ್ನು ತಗ್ಗಿಸುವೆನು.
ನಿತ್ಯಜೀವದಲ್ಲಿ ಸೇರಿರುವವರಿಗೆ ಪರರ ಪ್ರೀತಿಯಿರುವುದು
ನನ್ನ ಸಹೋದರರೇ, ಲೋಕವು ನಿಮ್ಮನ್ನು ದ್ವೇಷಿಸಿದರೆ ಆಶ್ಚರ್ಯಪಡಬೇಡಿರಿ.
ಇಡೀ ಲೋಕವು ಕೆಡುಕನ ವಶದಲ್ಲಿ ಇದ್ದರು ಸಹ ನಾವು ದೇವರಿಗೆ ಸಂಬಂಧಪಟ್ಟವರಾಗಿದ್ದೇವೆಂಬುದು ನಮಗೆ ತಿಳಿದಿದೆ.
ಒಂದು ಸಂತತಿಯು ಹೋಗುವುದು,
ಇನ್ನೊಂದು ಸಂತತಿಯು ಬರುವುದು,
ಆದರೆ ಭೂಮಿಯು ಶಾಶ್ವತವಾಗಿ ನಿಲ್ಲುವುದು.
ಸೂರ್ಯನು ಉದಯಿಸುತ್ತಾನೆ.
ಸೂರ್ಯನು ಮುಳುಗುತ್ತಾನೆ.
ತಾನು ಉದಯಿಸುವ ಸ್ಥಾನಕ್ಕೆ ಅವಸರವಾಗಿ ಹಿಂತಿರುಗಿ ಹೋಗುತ್ತಾನೆ.
ಗಾಳಿಯು ದಕ್ಷಿಣದ ಕಡೆಗೆ ಬೀಸುತ್ತದೆ.
ಉತ್ತರದ ಕಡೆಗೆ ತಿರುಗುವುದು.
ಅದು ಸುತ್ತುತ್ತಾ ಸುತ್ತುತ್ತಾ ಹೋಗಿ,
ಗಾಳಿ ಸುತ್ತಳತೆಯ ಪ್ರಕಾರ ಹಿಂದಿರುಗುತ್ತವೆ.
ನದಿಗಳೆಲ್ಲಾ ಸಮುದ್ರಕ್ಕೆ ಹರಿದು ಹೋಗುತ್ತವೆ.
ಆದರೂ ಸಮುದ್ರವು ತುಂಬುವುದಿಲ್ಲ.
ನದಿಗಳು ಎಲ್ಲಿಂದ ಬಂದಿವೆಯೋ
ಅದೇ ಸ್ಥಳಕ್ಕೆ ಹಿಂತಿರುಗುತ್ತವೆ.
ಆಕಾಶವೂ, ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ವಾಕ್ಯವು ಅಳಿದು ಹೋಗುವುದೇ ಇಲ್ಲ."
ಯೇಸು ಕ್ರಿಸ್ತನು ನಿನ್ನೇ ಇದ್ದ ಹಾಗೆಯೇ, ಈ ಹೊತ್ತು, ನಿರಂತರವೂ ಇರುವನು.
ಆದರೆ ಯೇಸು ಅದನ್ನು ಕೇಳಿ ಸಭಾಮಂದಿರದ ಅಧಿಕಾರಿಗೆ, "ಅಂಜಬೇಡ, ನಂಬಿಕೆ ಮಾತ್ರ ಇರಲಿ, ಆಕೆ ಬದುಕುವಳು" ಎಂದು ಉತ್ತರಕೊಟ್ಟನು.
ಒಬ್ಬನು ಮಾಡಿದ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ದೆಸೆಯಿಂದಲೇ ಮರಣವು ಆಳುವುದಾದರೆ ದೇವರು ಧಾರಾಳವಾಗಿ ಅನುಗ್ರಹಿಸುವ ಕೃಪಾದಾನವನ್ನೂ, ನೀತಿಯೆಂಬ ವರವನ್ನೂ ಹೊಂದಿದವರು ಯೇಸು ಕ್ರಿಸ್ತನೆಂಬ ಈ ಒಬ್ಬ ಪುರುಷನ ಮೂಲಕ ಜೀವಭರಿತರಾಗಿ ಆಳುವುದು ಮತ್ತೂ ನಿಶ್ಚಯವಲ್ಲವೇ.
ಯುಕ್ತಿಯಿಂದಲೇ ತನ್ನ ಮೋಸವನ್ನು ಸಿದ್ಧಿಗೆ ತಂದು, ಮನದಲ್ಲಿ ಉಬ್ಬಿಕೊಂಡು ನೆಮ್ಮದಿಯಾಗಿರುವ ಬಹಳ ಜನರನ್ನು ನಾಶಪಡಿಸಿ, ಪ್ರಭುಗಳ ಪ್ರಭುವಿಗೂ ವಿರುದ್ಧವಾಗಿ ಏಳುವನು. ಆಹಾ, ಯಾರ ಕೈಯೂ ಸೋಕದೆ ಹಾಳಾಗುವನು.