Namoro e sexo
Namoro e sexo são temas que a Bíblia trata com clareza e sem tabus. Deus criou o sexo como bênção dentro do casamento e nos chama à pureza fora dele.
Pureza sexual
A vontade de Deus é a santificação. Cada um saiba controlar seu próprio corpo em santidade e honra, não na paixão do desejo.
ದೇವರ ಚಿತ್ತವೇನಂದರೆ ನೀವು ಶುದ್ಧರಾಗಬೇಕೆಂಬುದೇ. ಆದ್ದರಿಂದ ಹಾದರಕ್ಕೆ ದೂರವಾಗಿರಬೇಕು. ದೇವರನ್ನರಿಯದ ಅನ್ಯಜನರಂತೆ ಕಾಮಾಭಿಲಾಷೆಗಳಿಗೆ ಒಳಗಾಗದೆ, ನಿಮ್ಮಲ್ಲಿ ಪ್ರತಿಯೊಬ್ಬನು ಪವಿತ್ರವಾದ ಮನಸ್ಸಿನಿಂದಲೂ ಘನತೆಯಿಂದಲೂ ಪತ್ನಿಯನ್ನು ಸಂಪಾದಿಸಿಕೊಳ್ಳಲು ತಿಳಿಯಬೇಕು.
"ಭೋಜನ ಪದಾರ್ಥಗಳು ಹೊಟ್ಟೆಗಾಗಿಯೂ ಮತ್ತು ಹೊಟ್ಟೆಯು ಭೋಜನಪದಾರ್ಥಗಳಿಗಾಗಿಯೂ" ಇವೆ. ದೇವರು ಇವೆರಡನ್ನೂ ನಾಶಮಾಡುವನು. ಆದರೆ ದೇಹವು ಜಾರತ್ವಕೋಸ್ಕರ ಇರುವಂಥದಲ್ಲ. ಕರ್ತನಿಗೋಸ್ಕರ ಇರುವುದಾಗಿದೆ. ಕರ್ತನು ದೇಹಕೋಸ್ಕರ ಒದಗಿಸಿಕೊಡುತ್ತಾನೆ.
ಆತನ ಮೇಲೆ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನು ಆತನು ಶುದ್ಧನಾಗಿರುವಂತೆಯೇ ತನ್ನನ್ನು ತಾನು ಶುದ್ಧಿಮಾಡಿಕೊಳ್ಳುತ್ತಾನೆ.
Arrependimento e restauração
Bem-aventurado aquele cujo pecado é perdoado. Deus restaura os que se arrependem e cria neles um coração limpo e renovado.
ಪಾಪಪರಿಹಾರ ಮತ್ತು ನಂಬಿಕೆಯಿಂದ ಉಂಟಾಗುವ ಭಾಗ್ಯ
ಯಾರ ದ್ರೋಹವು ಪರಿಹಾರವಾಗಿದೆಯೋ,
ಯಾರ ಪಾಪವು ಕ್ಷಮಿಸಲ್ಪಟ್ಟಿದೆಯೋ ಅವನೇ ಧನ್ಯನು.
ಯೆಹೋವನು ಯಾರ ಲೆಕ್ಕಕ್ಕೆ ಅಪರಾಧವನ್ನು ಎಣಿಸುವುದಿಲ್ಲವೋ?
ಯಾರ ಹೃದಯದಲ್ಲಿ ಕಪಟವಿರುವುದಿಲ್ಲವೋ ಅವನು ಧನ್ಯನು.
ನಾನು ನನ್ನ ಪಾಪವನ್ನು ಅರಿಕೆಮಾಡದೆ ಇದ್ದಾಗ,
ದಿನವೆಲ್ಲಾ ನರಳುವುದರಿಂದ ನನ್ನ ಎಲುಬುಗಳು ಸವೆದುಹೋಗುತ್ತಿದ್ದವು.
ಹಗಲಿರುಳು ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿತ್ತು;
ನನ್ನ ಶರೀರದ ಸಾರವೆಲ್ಲಾ ಬೇಸಿಗೆಯ ನೀರಿನಂತೆ ಬತ್ತಿಹೋಯಿತು. ಸೆಲಾ
ಹೀಗಿರುವಲ್ಲಿ ಯೆಹೋವನ ಸನ್ನಿಧಿಯಲ್ಲಿ ನನ್ನ ದ್ರೋಹವನ್ನು ಒಪ್ಪಿಕೊಳ್ಳುವೆನು ಅಂದುಕೊಂಡು
ನನ್ನ ಪಾಪವನ್ನು ಮರೆಮಾಡದೆ ನಿನಗೆ ನನ್ನ ದೋಷವನ್ನು ತಿಳಿಸಿದೆನು.
ನೀನು ನನ್ನ ಪಾಪಗಳ ಅಪರಾಧವನ್ನು ಪರಿಹರಿಸಿಬಿಟ್ಟಿ. ಸೆಲಾ
ಆದುದರಿಂದ ಭಕ್ತರೆಲ್ಲರು ಅಗತ್ಯಕಾಲದಲ್ಲಿ ನಿನ್ನನ್ನು ಪ್ರಾರ್ಥಿಸಲಿ;
ಆಗ ಮಹಾಪ್ರವಾಹವು ಅಂಥವರನ್ನು ಮುಟ್ಟುವುದೇ ಇಲ್ಲ.
ನನ್ನ ಪಾಪವನ್ನು ಸಂಪೂರ್ಣವಾಗಿ ತೊಳೆದುಬಿಡು;
ನನ್ನ ದೋಷವನ್ನು ಪರಿಹರಿಸಿ, ನನ್ನನ್ನು ಶುದ್ಧಿಗೊಳಿಸು.
ನಾನು ದ್ರೋಹಿ ಎಂದು ನಾನೇ ಒಪ್ಪಿಕೊಂಡಿದ್ದೇನೆ;
ನನ್ನ ಪಾಪವು ಯಾವಾಗಲೂ ನನ್ನ ಮುಂದೆ ಇದೆ.
ನಿನಗೇ, ಕೇವಲ ನಿನಗೇ ತಪ್ಪುಮಾಡಿದ್ದೇನೆ;
ನಿನ್ನ ದೃಷ್ಟಿಗೆ ಕೆಟ್ಟದ್ದಾಗಿರುವುದನ್ನೇ ಮಾಡಿದ್ದೇನೆ.
ನಿನ್ನ ನಿರ್ಣಯ ನ್ಯಾಯವಾಗಿಯೂ, ನಿನ್ನ ತೀರ್ಪು ನಿಷ್ಕಳಂಕವಾಗಿಯೂ ಇರುತ್ತದೆ.
ಹಿಸ್ಸೋಪ್ ಗಿಡದ ಬರಲಿನಿಂದ ನೀರನ್ನು ಚಿಮಕಿಸಿಯೋ ಎಂಬಂತೆ
ನನ್ನ ಅಶುದ್ಧತ್ವವನ್ನು ತೆಗೆದುಬಿಡು, ಆಗ ಶುದ್ಧನಾಗುವೆನು;
ನನ್ನನ್ನು ತೊಳೆ, ಆಗ ಹಿಮಕ್ಕಿಂತಲೂ ಬೆಳ್ಳಗಾಗುವೆನು.
ನನ್ನಲ್ಲಿ ಸಂಭ್ರಮೋತ್ಸವದ ಧ್ವನಿ ಉಂಟಾಗುವಂತೆ ಮಾಡು;
ಆಗ ನೀನು ಜಜ್ಜಿದ ಎಲುಬುಗಳು ಆನಂದಪಡುವವು.
ನನ್ನ ದೋಷಕ್ಕೆ ವಿಮುಖನಾಗು;
ನನ್ನ ಪಾಪಗಳನ್ನೆಲ್ಲಾ ಅಳಿಸಿಬಿಡು.
ದೇವರೇ, ನನ್ನಲ್ಲಿ ಶುದ್ಧಹೃದಯವನ್ನು ನಿರ್ಮಿಸು;
ನನಗೆ ಸ್ಥಿರಚಿತ್ತವನ್ನು ಅನುಗ್ರಹಿಸಿ ನನ್ನನ್ನು ನೂತನಪಡಿಸು.
ನಿನ್ನ ಸನ್ನಿಧಿಯಿಂದ ನನ್ನನ್ನು ತಳ್ಳಬೇಡ;
ನಿನ್ನ ಪರಿಶುದ್ಧಾತ್ಮವನ್ನು ನನ್ನಿಂದ ತೆಗೆಯಬೇಡ.
ನಿನ್ನ ರಕ್ಷಣಾನಂದವನ್ನು ನಾನು ಪುನಃ ಅನುಭವಿಸುವಂತೆ ಮಾಡು;
ನನ್ನಲ್ಲಿ ಸಿದ್ಧಮನಸ್ಸನ್ನು ಹುಟ್ಟಿಸಿ ನನಗೆ ಆಧಾರನಾಗು.