Namoro e sexo
Namoro e sexo são temas que a Bíblia trata com clareza e sem tabus. Deus criou o sexo como bênção dentro do casamento e nos chama à pureza fora dele.
Pureza sexual
A vontade de Deus é a santificação. Cada um saiba controlar seu próprio corpo em santidade e honra, não na paixão do desejo.
ನೀವು ಪವಿತ್ರರಾಗಿ ಇರಬೇಕೆಂಬುದೇ ದೇವರ ಚಿತ್ತವಾಗಿದೆ. ಆದ್ದರಿಂದ ನೀವು ಕಾಮಾತಿರೇಕಕ್ಕೆ ದೂರವಾಗಿರಬೇಕು. ನಿಮ್ಮಲ್ಲಿ ಪ್ರತಿಯೊಬ್ಬನೂ ಪವಿತ್ರತೆಯಿಂದಲೂ ಘನತೆಯಿಂದಲೂ ತನ್ನ ಸ್ವಂತ ದೇಹವನ್ನು ಕಾಪಾಡಿಕೊಳ್ಳಲು ತಿಳಿಯಬೇಕು. ನೀವು ದೇವರನ್ನರಿಯದ ಯೆಹೂದ್ಯರಲ್ಲದವರಂತೆ ಕಾಮಾಭಿಲಾಷೆಗೆ ಒಳಪಡಬಾರದು.
"ಆಹಾರವು ಹೊಟ್ಟೆಗಾಗಿಯೂ, ಹೊಟ್ಟೆಯು ಆಹಾರಕ್ಕಾಗಿಯೂ ಇದೆ," ಎಂದು ನೀವು ಹೇಳುತ್ತೀರಿ. ಆದರೆ ದೇವರು ಇವೆರಡನ್ನೂ ನಾಶಮಾಡುವರು. ದೇಹವು ಲೈಂಗಿಕ ಅನೈತಿಕತೆಗಾಗಿರುವಂಥದ್ದಲ್ಲ, ಆದರೆ ಕರ್ತ ದೇವರಿಗೋಸ್ಕರವಾಗಿದೆ. ಕರ್ತದೇವರು ದೇಹಕ್ಕೋಸ್ಕರ ಇದ್ದಾರೆ.
ಕ್ರಿಸ್ತ ಯೇಸುವಿನಲ್ಲಿ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನೂ ಅವರು ಶುದ್ಧರಾಗಿರುವಂತೆಯೇ ತನ್ನನ್ನು ಶುದ್ಧಮಾಡಿಕೊಳ್ಳುತ್ತಾನೆ.
Arrependimento e restauração
Bem-aventurado aquele cujo pecado é perdoado. Deus restaura os que se arrependem e cria neles um coração limpo e renovado.
ಯಾರ ಉಲ್ಲಂಘನೆಗಳು ಕ್ಷಮಿಸಲಾಗಿವೆಯೋ,
ಯಾರ ಪಾಪಗಳು ಮುಚ್ಚಲಾಗಿವೆಯೋ
ಅವರೇ ಧನ್ಯರು.
ಯೆಹೋವ ದೇವರು ಯಾರ ಅನ್ಯಾಯವನ್ನು ಎಣಿಸುವುದಿಲ್ಲವೋ,
ಯಾರ ಆತ್ಮದಲ್ಲಿ ವಂಚನೆ ಇರುವುದಿಲ್ಲವೋ
ಆ ಮನುಷ್ಯನು ಧನ್ಯನು.
ನಾನು ನನ್ನ ಪಾಪವನ್ನು ಅರಿಕೆ ಮಾಡದೆ ಇದ್ದಾಗ,
ದಿನವೆಲ್ಲಾ ನರಳುವುದರಿಂದ
ನನ್ನ ಎಲುಬುಗಳು ಸವೆದು ಹೋದವು.
ದೇವರೇ, ರಾತ್ರಿ ಹಗಲು
ನಿಮ್ಮ ಕೈ ನನ್ನ ಮೇಲೆ ಭಾರವಾಗಿತ್ತು;
ನನ್ನ ಬಲವು ಬೇಸಿಗೆಯ ಬಿಸಿಲಿನಲ್ಲಿ
ಕುಂದಿಹೋಗುವಂತೆ ಆಯಿತು.
ನನ್ನ ಪಾಪವನ್ನು ನಿಮಗೆ ತಿಳಿಸಿ,
ನನ್ನ ಅನ್ಯಾಯವನ್ನು ಮರೆಮಾಡದೆ,
"ನನ್ನ ಉಲ್ಲಂಘನೆಗಳನ್ನು ಯೆಹೋವ ದೇವರಿಗೆ
ಅರಿಕೆ ಮಾಡುವೆನು," ಎಂದು ಹೇಳಿದೆನು;
ಆಗ, ನೀವು
ನನ್ನ ಪಾಪದ ಅಪರಾಧವನ್ನು ಪರಿಹರಿಸಿದಿರಿ.
ಆದುದರಿಂದ ಭಕ್ತರೆಲ್ಲರು ನೀವು
ಸಿಕ್ಕುವ ಕಾಲದಲ್ಲಿ ನಿಮಗೆ ಪ್ರಾರ್ಥನೆ ಮಾಡಲಿ;
ನಿಶ್ಚಯವಾಗಿ ನೀರಿನ ಮಹಾಪ್ರವಾಹಗಳು
ಅವರ ಸಮೀಪಕ್ಕೆ ಬರುವುದಿಲ್ಲ.
ನನ್ನ ಎಲ್ಲಾ ಅಪರಾಧಗಳಿಂದ ನನ್ನನ್ನು ತೊಳೆದುಬಿಡಿರಿ;
ನನ್ನ ಪಾಪದಿಂದ ನನ್ನನ್ನು ಶುದ್ಧಮಾಡಿರಿ.
ನನ್ನ ಅತಿಕ್ರಮಗಳನ್ನು ನಾನೇ ತಿಳಿದಿದ್ದೇನೆ,
ನನ್ನ ಪಾಪವು ಯಾವಾಗಲೂ ನನ್ನ ಕಣ್ಮುಂದೆಯೇ ಇದೆ.
ನಿಮಗೇ ನಿಮಗೊಬ್ಬರಿಗೆ ಮಾತ್ರ ವಿರೋಧವಾಗಿ ನಾನು ಪಾಪಮಾಡಿ,
ನಿಮ್ಮ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದ್ದನ್ನೇ ಮಾಡಿದ್ದೇನೆ.
ಹೀಗೆ ನೀವು ನ್ಯಾಯತೀರಿಸುವಾಗ ನೀತಿವಂತರಾಗಿಯೂ
ನೀವು ತೀರ್ಪು ನಿರ್ಣಯಿಸುವಾಗ ನ್ಯಾಯವಂತರಾಗಿಯೂ ಇರುವಿರಿ.
ಹಿಸ್ಸೋಪಿನಿಂದ ನನ್ನನ್ನು ಶುಚಿಮಾಡಿರಿ, ಆಗ ನಾನು ಶುದ್ಧನಾಗುವೆನು.
ನನ್ನನ್ನು ತೊಳೆಯಿರಿ, ಆಗ ಹಿಮಕ್ಕಿಂತ ಬೆಳ್ಳಗಾಗುವೆನು.
ನಾನು ಆನಂದವನ್ನೂ ಹರ್ಷವನ್ನೂ ಕೇಳುವಂತೆ ಮಾಡಿರಿ;
ನೀವು ಜಜ್ಜಿದ ಎಲುಬುಗಳು ಆನಂದಪಡಲಿ.
ನನ್ನ ಪಾಪಗಳಿಗೆ ನಿಮ್ಮ ಮುಖವನ್ನು ಮರೆಮಾಡಿಕೊಳ್ಳಿರಿ;
ನನ್ನ ಅಧರ್ಮಗಳನ್ನೆಲ್ಲಾ ಅಳಿಸಿಬಿಡಿರಿ.
ಓ ದೇವರೇ, ಶುದ್ಧ ಹೃದಯವನ್ನು ನನ್ನಲ್ಲಿ ಸೃಷ್ಟಿಮಾಡಿರಿ,
ಸ್ಥಿರವಾದ ಆತ್ಮವನ್ನು ನನ್ನಲ್ಲಿ ನವೀಕರಿಸಿರಿ.
ನಿಮ್ಮ ಸನ್ನಿಧಿಯಿಂದ ನನ್ನನ್ನು ಹೊರ ದೂಡಬೇಡಿರಿ;
ನಿಮ್ಮ ಪರಿಶುದ್ಧಾತ್ಮರನ್ನು ನನ್ನಿಂದ ತೆಗೆಯಬೇಡಿರಿ.
ನಿಮ್ಮ ರಕ್ಷಣೆಯ ಆನಂದವನ್ನು ನನಗೆ ಪುನಃ ಸ್ಥಾಪಿಸಿರಿ;
ನನಗೆ ಸಿದ್ಧ ಆತ್ಮವನ್ನು ನೀಡಿ, ನನ್ನನ್ನು ಬೆಂಬಲಿಸಿರಿ.